Subscribe to Updates
Get the latest creative news from FooBar about art, design and business.
- ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
- ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್ ಲೈನ್ ಅರ್ಜಿ ಆಹ್ವಾನ
- ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
- NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
- ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
- ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
- ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
Author: admin
ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ 1/7/2024 ರಿಂದ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಆಫ್ ಕೋ–ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿ ಆಯೋಜಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಆಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ ಹಾಗೂ ಬ್ಯಾಂಕ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ತರಬೇತಿ ಪಡೆಯಲು ಕನಿಷ್ಠ ಎಸ್ಎಸ್ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶಕ್ಕೆ ಅವಕಾಶವಿರುತ್ತದೆ. ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ರೂ. 500 ಶಿಷ್ಯವೇತನ ನೀಡಲಾಗುತ್ತದೆ ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ. 600 ಶಿಷ್ಯವೇತನ ನೀಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿಗಳನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ, ವಿನೋಬನಗರ 2ನೇ ಹಂತ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 15ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ…
ಮಡಿಕೇರಿ: ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸುವಂತೆ ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆ, ವಿತರಣೆ, ದಾಸ್ತಾನು ಮತ್ತಿತರ ವಿಷಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಗಾರು ಸಂದರ್ಭದಲ್ಲಿ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೃಷಿಕರಿಂದ ದೂರು ಕೇಳಿ ಬರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ನುಡಿದರು. ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಜಿಲ್ಲೆಗೆ ಬೇಕಿರುವ ರಸಗೊಬ್ಬರ ದಾಸ್ತಾನು ಮಾಡಿಕೊಂಡು ಕೃಷಿಕರಿಗೆ ಕಾಲಕಾಲಕ್ಕೆ ಪೂರೈಸಬೇಕು. ರಸಗೊಬ್ಬರ ದಾಸ್ತಾನು, ವಿತರಣೆ ಸಂಬಂಧ ಮಾಹಿತಿಯ ಪಟ್ಟಿಯನ್ನು ಪ್ರತೀ ನಿತ್ಯ ಪ್ರಕಟಿಸುವುದರ ಜೊತೆಗೆ ಮಾಧ್ಯಮಗಳಲ್ಲಿಯೂ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿ.ಪಂ.ಸಿಇಒ…
ಧಾರವಾಡ: ಮೇ 7 ರಂದು ಜರುಗಿದ ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಮತ ಏಣಿಕಾ ಕಾರ್ಯಕ್ಕೆ ಧಾರವಾಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಪ್ರತಿ ವಿಧಾನಸಭಾ ಮತಕ್ಷೇತ್ರಕ್ಕೆ 14 ಟೇಬಲ್ ಗಳಂತೆ ಒಟ್ಟು 112 ಟೇಬಲ್ ಗಳನ್ನು ಮತ ಏಣಿಕೆಗೆ ಸಿದ್ದಗೊಳಿಸಲಾಗಿದ್ದು, ಅಂದಾಜು 20 ಸುತ್ತುಗಳಲ್ಲಿ ಮತ ಏಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಯ ಮತ ಏಣಿಕೆ ಕಾರ್ಯದ ಸಿದ್ದತೆ ಮತ್ತು ಮತ ಏಣಿಕಾ ಕೇಂದ್ರದ ಕುರಿತು ಮಾಹಿತಿ ನೀಡಿ, ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಭಾರತ ಚುನಾವಣಾ ಆಯೋಗದ ಆದೇಶದಂತೆ ಮೊಬೈಲ್ ಹಾಗೂ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಡಿವೈಸಿಸ್ ಗಳನ್ನು ತರಲು ಅವಕಾಶವಿಲ್ಲ. ಮತ ಏಣಿಕಾ ಕೇಂದ್ರಕ್ಕೆ ಬರುವ ಅಭ್ಯರ್ಥಿಗಳು, ಮತ ಏಣಿಕಾ ಏಜಂಟರು, ಚುನಾವಣಾ ಏಜಂಟರು ಹಾಗೂ ಇತರರು ತಮ್ಮ…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆಯ ಖಾಸಗಿ ಅಂಗಡಿಯೊಂದರಲ್ಲಿ ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಹಾಲು ಪಾಕೆಟ್ ಪತ್ತೆಯಾಗಿದೆ. ವೈ.ಎನ್.ಹೊಸಕೋಟೆ ಗ್ರಾಮದ ಎಸ್.ಕೆ.ಪಿ.ಟಿ. ರಸ್ತೆಯ ಅಂಗಡಿಯೊಂದರಲ್ಲಿ ಹಲವಾರು ದಿನಗಳಿಂದ ಈ ಹಾಲು ಪಾಕೆಟ್ ಮಾರಾಟವಾಗುತ್ತಿದೆ. ಖಚಿತ ಮಾಹಿತಿ ಮೇರೆಗೆ ತಾಲ್ಲೂಕು ಸಿಡಿಪಿಓ ಸುನಿತಾ ಈ ಬಗ್ಗೆ ತಪಾಸಣೆ ಮಾಡಿದಾಗ ಅಂಗಡಿಯಲ್ಲಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಂಗಡಿ ಮಾಲೀಕರನ್ನು ವಿಚಾರಿಸಿದಾಗ ಯಾರೋ ಗುರುತು ತಿಳಿಯದ ವ್ಯಕ್ತಿಗಳು ನಮಗೆ ಕೊಟ್ಟು ಹೋಗಿದ್ದಾರೆ ಎಂದು ಹಾರಿಕೆಯ ಉತ್ತರವನ್ನು ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲಾಗುತ್ತಿದೆ. ಎಲ್ಲಾ ಅಂಗನವಾಡಿಗಳಲ್ಲಿ ಸ್ಟಾಕ್ ಚೆಕ್ ಮಾಡಲಾಗುವುದು. ಅಕ್ರಮ ಕಂಡುಬಂದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಡಿಪಿಓ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದ್ದು, ಜೂನ್ 14 ರೊಳಗೆ ಅಪ್ ಡೇಟ್ ಮಾಡಲು ಸೂಚನೆ ನೀಡಿದೆ. ಉಚಿತ ಪರಿಷ್ಕರಣೆ ಸೇವೆಯು ಆನ್ಲೈನ್ ಪೋರ್ಟಲ್ ನಲ್ಲಿ ಮಾತ್ರ ಲಭ್ಯವಿದ್ದು, ಅಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ತಿದ್ದುಪಡಿಗೆ ಮನವಿ ಸಲ್ಲಿಸಬಹುದಾಗಿದೆ. ಆಧಾರ್ ಕೇಂದ್ರಕ್ಕೆ ಹೋದರೆ 50 ರೂ. ಪಾವತಿಸುವುದು ಕಡ್ಡಾಯವಾಗಿದೆ. https://myaadhaar.uidai.gov.in/ ವೆಬ್ ಸೈಟ್ ಗೆ ಲಾಗ್ ಇನ್ ಮಾಡಿ. ವಿಳಾಸವನ್ನು ನವೀಕರಿಸಲು ಮುಂದುವರಿಯಿರಿ’ ಆಯ್ಕೆಯನ್ನು ಆರಿಸಿ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಮೂದಿಸಿ.’ಡಾಕ್ಯುಮೆಂಟ್ ಅಪ್ಡೇಟ್’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ; ನಿವಾಸಿಯ ಪ್ರಸ್ತುತ ವಿವರಗಳನ್ನು ಪ್ರದರ್ಶಿಸಲಾಗುತ್ತದೆ. ವಿವರಗಳನ್ನು ಪರಿಶೀಲಿಸಿ ಮತ್ತು ಮುಂದಿನ ಹೈಪರ್ ಲಿಂಕ್ ಕ್ಲಿಕ್ ಮಾಡಿ.ಈಗ ಡ್ರಾಪ್ಡೌನ್ ಪಟ್ಟಿಯಿಂದ ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯನ್ನು ಆಯ್ಕೆ ಮಾಡಿ.ನಿಮ್ಮ ವಿಳಾಸಕ್ಕೆ ಸಂಬಂಧಿಸಿದ ಪುರಾವೆಗಳನ್ನು ಅಪ್ಲೋಡ್ ಮಾಡಿ ಈಗ ‘ಸಲ್ಲಿಸಿ’ ಬಟನ್ ಕ್ಲಿಕ್ ಮಾಡಿ ಮತ್ತು ನಿರ್ದಿಷ್ಟ…
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ರಾಯಸಂದ್ರದಲ್ಲಿ ಲೈನ್ ಮ್ಯಾನ್ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರಾಯಚೂರು ಮೂಲದ ನಾಗರಾಜು ಬಡಿಗೇರ್ (28) ಮೃತ ಬೆಸ್ಕಾಂ ಸಿಬ್ಬಂದಿಯಾಗಿದ್ದಾರೆ. ಬೆಂಗಳೂರಿನ ವೀರಸಂದ್ರ ಸಬ್ ಡಿವಿಷನ್ ನಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಬೆಸ್ಕಾಂ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದ ನಾಗರಾಜು ಮಧ್ಯಾಹ್ನ ರಾಯಸಂದ್ರ ಬಳಿ ವಿದ್ಯುತ್ ಲೈನ್ ಸರಿಪಡಿಸುವ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಕಂಬದ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಬೆಸ್ಕಾಂ ಸಿಬ್ಬಂದಿಯನ್ನು ಕೂಡಲೇ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಆಸ್ಪತ್ರೆಗೆ ಬರುವ ವೇಳೆಗೆ ನಾಗರಾಜು ಬಡಿಗೇರ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಂಡೀಗಢ: ಪಂಜಾಬ್ ನಲ್ಲಿ ಸಿರ್ಹಿಂದ್ ನ ಮಾಧೋಪುರ ಬಳಿ ಭಾನುವಾರ ಬೆಳಗ್ಗೆ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಹಿಂದಿನಿಂದ ಮತ್ತೊಂದು ರೈಲು ಡಿಕ್ಕಿ ಹೊಡೆದು, ಇಬ್ಬರು ಲೋಕೋ ಪೈಲಟ್ ಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಪೈಲಟ್ ಗಳನ್ನು ಫತೇಘರ್ ಸಾಹಿಬ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಗಾಯಗೊಂಡಿರುವ ಲೋಕೋ ಪೈಲಟ್ ಗಳನ್ನು ವಿಕಾಸ್ ಕುಮಾರ್ ಮತ್ತು ಹಿಮಾಂಶು ಕುಮಾರ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿಕ್ಕಬಳ್ಳಾಪುರ: ತಾಲೂಕಿನ ಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್ ನಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಮುಂಬೈ ಮೂಲದ ಆಲಿಯಾ ಪಾಟೀಲ್(17) ಹಾಗೂ ಜೋಯ ಪಾಟೀಲ್(14) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ಮುಂಬೈ ಮೂಲದ ಬಾಲಕಿಯರು ಗೌರಿಬಿದನೂರು ನಗರದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇನ್ನೆರಡು ದಿನಗಳ ನಂತರ ಮುಂಬೈಗೆ ವಾಪಸ್ ಆಗಲಿದ್ದರು. ದಂಡಿಗಾನಹಳ್ಳಿ ಜಲಾಶಯವನ್ನು ಕಣ್ತುಂಬಿಕೊಳ್ಳಬೇಕು ಎಂದು ಜಲಾಶಯಕ್ಕೆ ಹೋದವರು ಜಲಾಶಯದ ಬಳಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಇಬ್ಬರ ಮೃತದೇಹವನ್ನು ನೀರಿನಿಂದ ಮೇಲೆ ತಂದಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. HSRP ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ 12ರವರೆಗೆ ಇರಲಿದೆ. * https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ. * ನಿಮ್ಮವಾಹನ ತಯಾರಕರನ್ನು ಆಯ್ಕೆಮಾಡಿ. * ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ. * HSRP ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ. * ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು. * ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ. * ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು. * ನಿಮ್ಮವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಮುಟ್ಟಿನ ಸಮಯದಲ್ಲಿ, ಮಹಿಳೆಯು ಅಸ್ವಸ್ಥತೆ, ಭಾರೀ ರಕ್ತಸ್ರಾವ, ಉಬ್ಬುವುದು, ಹಾರ್ಮೋನ್ ಬದಲಾವಣೆಗಳಿಂದಾಗಿ ಏಕಾಗ್ರತೆಗೆ ತೊಂದರೆ ಮತ್ತು ಇತರ ಸಮಸ್ಯೆಗಳನ್ನು ಎದುರಿಸಬಹುದು, ಅದು ಅವಳ ಕೆಲಸದ ಮೇಲೆ ಕೇಂದ್ರೀಕರಿಸಲು ಕಷ್ಟಕರವಾಗಬಹುದು. ಮುಟ್ಟಿನ ರಜೆ ಎಂದರೆ ನೌಕರನು ತನ್ನ ಮುಟ್ಟಿನ ಕಾರಣದಿಂದ ಕೆಲಸ ಮಾಡಲು ಸಾಧ್ಯವಾಗದಿದ್ದರೆ ತನ್ನ ಕೆಲಸದಿಂದ ಪಾವತಿಸಿದ ಅಥವಾ ಪಾವತಿಸದ ರಜೆಯನ್ನು ತೆಗೆದುಕೊಳ್ಳಲು ಆಯ್ಕೆ ಮಾಡುವ ಸಮಯ. ಮುಟ್ಟಿನ ನೋವು ಅಥವಾ ಅಸ್ವಸ್ಥತೆಯನ್ನು ಅನುಭವಿಸುತ್ತಿರುವಾಗ ಕೆಲಸಗಾರರು ಅಥವಾ ವಿದ್ಯಾರ್ಥಿಗಳು ಸಮಯವನ್ನು ತೆಗೆದುಕೊಳ್ಳಲು ಅನುಮತಿಸುವ ನೀತಿಗಳನ್ನು ಮುಟ್ಟಿನ ರಜೆ ಅಥವಾ ಅವಧಿ ರಜೆ ಎಂದು ಉಲ್ಲೇಖಿಸಲಾಗುತ್ತದೆ. ಮುಟ್ಟಿನ ರಜೆಯನ್ನು ಬೆಂಬಲಿಸುವವರು ಮತ್ತು ಬೆಂಬಲಿಸದವರ ನಡುವೆ ನಿರಂತರ ಚರ್ಚೆ ನಡೆಯುತ್ತಿದೆ. ಮುಟ್ಟಿನ ರಜೆಯ ಪ್ರಸ್ತಾಪ ಇಂದು ನಿನ್ನೆಯದಲ್ಲ. ಇತಿಹಾಸದ ಪುಟಗಳನ್ನು ತಿರುವಿದರೆ ಮೊದಲನೇ ಮಹಾಯುದ್ಧದ ಸಂದರ್ಭದಲ್ಲೇ ರಷ್ಯಾದಲ್ಲಿ ಕೂಲಿ ಕಾರ್ಮಿಕ ಮಹಿಳೆಯರಿಗೆ ಮುಟ್ಟಿನ ದಿನ ಕೆಲಸಕ್ಕೆ ವಿನಾಯ್ತಿ ನೀಡಲಾಗುತ್ತಿತ್ತು. ಅಂತೆಯೇ 2ನೇ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್ ಕೂಡಾ ಇದನ್ನೇ ಅನುಸರಿಸಿತ್ತು. ಇತಿಹಾಸವನ್ನು ಅವಲೋಕಿಸಿದರೆ ಮುಟ್ಟಿನ ರಜೆಯ ಕಲ್ಪನೆ…