Subscribe to Updates
Get the latest creative news from FooBar about art, design and business.
- NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
- ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
- ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
- ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
- ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
- ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
Author: admin
ಲಕ್ನೋ: ಪತಿ ಮತ್ತು ಮಾವ ಸೇರಿ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಥಳಿಸಿದ್ದಲ್ಲದೇ ಆಕೆಯ ಬಾಯಿಗೆ ಕೀಟನಾಶಕವನ್ನು ಸುರಿದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಹಾಪುರ ಜಿಲ್ಲೆಯಲ್ಲಿ ನಡೆದಿದೆ. ಪತಿ ಮತ್ತು ಮಾವ ಮಹಿಳೆಗೆ ಥಳಿಸಿದ್ದಲ್ಲದೆ, ಆಕೆಯನ್ನು ಕೊಲ್ಲುವ ಉದ್ದೇಶದಿಂದ ಬೆಳೆಗೆ ಬಳಸುವ ಕೀಟನಾಶಕವನ್ನು ಆಕೆಯ ಬಾಯಿಗೆ ಸುರಿದಿದ್ದಾರೆ. ಈ ವೇಳೆ ಸಹೋದರ ವಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಆತನಿಗೂ ಥಳಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆ ವಿವರ: ಹಾಪುರ್ ಜಿಲ್ಲೆಯ ಗರ್ಮುಕ್ತೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಗದ್‌ಪುರ ಗ್ರಾಮದ ನಿವಾಸಿ ಶೀಲಾ ಅವರು ಗಜ್ರೌಲಾ ಪೊಲೀಸ್ ಠಾಣಾ ವ್ಯಾಪ್ತಿಯ ಫಿರೋಜ್‌ಪುರ ಗ್ರಾಮದ ಸುರೇಂದ್ರ ಎಂಬಾತನನ್ನು ವಿವಾಹವಾಗಿದ್ದರು. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಪೋಷಕರಿಗೆ ಶೀಲಾಳ ಮೇಲೆ ನಡೆದ ಹಲ್ಲೆಯ ಬಗ್ಗೆ ಮಾಹಿತಿ ಲಭಿಸಿದೆ. ವಿಚಾರ ಗೊತ್ತಾಗುತ್ತಿದ್ದಂತೆಯೇ ಶೀಲಾಳ ಸಹೋದರ ಜಯಪ್ರಕಾಶ್ ತನ್ನ ಸ್ನೇಹಿತನ ಜೊತೆ ನೇರವಾಗಿ ಆಕೆಯ ಮನೆಗೆ ಬಂದರು. ಈ ವೇಳೆ ಸಹೋದರನ ಮುಂದೆಯೇ ಪತಿ…
ರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಹಾಕಿ ಹಿಂಪಡೆದಿದ್ದು ಯಾಕೆ ಎಂದು ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, “ತುಷ್ಟೀಕರಣದ ನೀತಿಯಿಂದ ಸುಮೋಟೊ ಕೇಸ್ ಹಿಂಪಡೆದಿದ್ದು, ಇದರ ವಿರುದ್ಧ ಹೇಳಿಕೆ ನೀಡಿದವರ ಮೇಲೆ ಕೇಸ್ ದಾಖಲಾಗಿದೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಕೆಲಸ ಮಾಡುತ್ತಾ ಇದೆ. ಸುಮೋಟೋ ಕೇಸ್ ಹಾಕಿದ್ದು ಯಾಕೆ?, ಬಳಿಕ ಹಿಂಪಡೆದಿದ್ದು ಯಾಕೆ?, ಇದನ್ನು ಬಿಜೆಪಿ ಖಂಡಿಸುತ್ತದೆ. ಸಿದ್ದರಾಮಣ್ಣನ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಕೂಡಲೇ ಶರಣ್ ಪಂಪ್ ವೆಲ್ ವಿರುದ್ಧ ದಾಖಲಿಸಿದ ಕೇಸ್ ಹಿಂಪಡೆಯಬೇಕು” ಎಂದು ಸಂಸದ ನಳಿನ್ ಕುಮಾರ್ ಕಟೀಲು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರೈತರು ತಮ್ಮ ದಿನನಿತ್ಯದ ಆರ್ಥಿಕತೆಯ ಹಿತದೃಷ್ಟಿಯಿಂದ ತರಕಾರಿ, ಸೊಪ್ಪು ಬೆಳೆಯುತ್ತಿದ್ದಾರೆ. ಬಿರು ಬೇಸಿಗೆಯಿಂದ ತರಕಾರಿ, ಸೊಪ್ಪು ಬೆಳೆ ಬಾರದೆ ತರಕಾರಿ ಬೆಲೆ ಗಗನ ಮುಟ್ಟಿದೆ. ಜತೆಗೆ ಕೊತ್ತಂಬರಿ ಸೊಪ್ಪಿನ ಇಳುವರಿಯೂ ಇಲ್ಲದೆ, ಬೆಲೆ ಕೈಗೆಟುಕದಾಗಿದೆ. ಕೊತ್ತಂಬರಿ ಸೊಪ್ಪು ಹೆಚ್ಚು ಪೌಷ್ಟಿಕಾಂಶದ ಸಾರವನ್ನು ಹೊಂದಿದೆ. ಜತೆಗೆ ವಿಶಿಷ್ಟವಾದ ತಾಜಾತನ ಪರಿಮಳ ಹೊಂದಿದೆ. ಮಾಂಸದೂಟ ತಯಾರಿಕೆಯಲ್ಲಿ ಸಲಾಡ್ ಗಳು, ಪಾನೀಯಗಳಿಗೆ ಬಳಸಲಾಗುತ್ತದೆ. ಜತೆಗೆ ಆಯುರ್ವೇದ, ವೈದ್ಯಕೀಯ ಕ್ಷೇತ್ರಗಳಲ್ಲಿ ಬಳಸಲಾಗುತ್ತದೆ. ವಿಟಮಿನ್ ಎ, ಕೆ ಮತ್ತು ಸಿ ಹಾಗೂ ಖನಿಜಗಳನ್ನು ಹೊಂದಿದೆ. ರೈತರು ತಮ್ಮ ದಿನನಿತ್ಯದ ಆರ್ಥಿಕತೆಯ ಹಿತದೃಷ್ಟಿಯಿಂದ ತರಕಾರಿ, ಸೊಪ್ಪು ಬೆಳೆಯುತ್ತಿದ್ದಾರೆ. ಬಿರು ಬೇಸಿಗೆಯಿಂದ ತರಕಾರಿ, ಸೊಪ್ಪು ಬೆಳೆ ಬಾರದೆ ತರಕಾರಿ ಬೆಲೆ ಗಗನ ಮುಟ್ಟಿದೆ. ಜತೆಗೆ ಕೊತ್ತಂಬರಿ ಸೊಪ್ಪಿನ ಇಳುವರಿಯೂ ಇಲ್ಲದೆ, ಬೆಲೆ ಕೈಗೆಟುಕದಾಗಿದೆ. ಒಂದು ಕಟ್ಟು ಸೊಪ್ಪಿಗೆ (ಸುಮಾರು ಒಂದು ಕೆ.ಜಿ.) 350ರಿಂದ 375 ರೂ. ದುಬಾರಿ ಬೆಲೆ ನೀಡಿ ಖರೀದಿಸುವಂತಾಗಿದೆ. ಆಹಾರದ ರುಚಿ ಹೆಚ್ಚಿಸಲು ಮತ್ತು ಪರಿಮಳ ಸೇರಿಸಲು ಕೊತ್ತಂಬರಿ…
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದ್ದು, ಒಂದೇ ದಿನ 32 ಮರಗಳು ಧರೆಗುರುಳಿದ ಘಟನೆ ಜರುಗಿದೆ. ನಿತ್ಯ ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿದ್ದಾರೆ. ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್ ನ ಹೆಲ್ಪ್ ಲೈನ್ ಗೆ ದೂರು ಬಂದಿವೆ. ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ. ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್ ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರೀ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್ ಕೆಳಗೆ ಆಶ್ರಯ ಪಡೆದಿದ್ದರು. ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ…
ರಾಗಿಯಲ್ಲಿರುವ ಆರೋಗ್ಯದ ಉಪಯೋಗಗಳು ಹಲವಾರು . ಇದರ ಬಗ್ಗೆ ತಿಳಿಯದವರಿಲ್ಲ ಎಂದೇ ಹೇಳಬಹುದು. ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸುವುದು, ದೇಹದ ತೂಕ ಕಡಿಮೆ ಮಾಡಲು , ಹೃದಯದ ಆರೋಗ್ಯವನ್ನು ವೃದ್ದಿಸುವುದು ಸೇರಿದಂತೆ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ರಾಗಿಯು ನೀಡುತ್ತದೆ. ರಾಗಿಯನ್ನು ಮೊಳಕೆ ಕಟ್ಟಿ ಸೇವಿಸುವುದರಿಂದ ಅದು ಮತ್ತಷ್ಟು ಆರೋಗ್ಯಕ್ಕೆ ಪ್ರಯೋಜನವನ್ನುಂಟು ಮಾಡುತ್ತದೆ. ಮೂಳೆ ಮತ್ತು ಮೆದುಳಿನ ಬೆಳವಣಿಗೆಯಲ್ಲಿಯೂ ರಾಗಿಯು ಪಾತ್ರವಹಿಸುವುದಲ್ಲದೆ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಯಾರೇ ಆಗಲಿ ರಾಗಿಯನ್ನು ತಮ್ಮ ಡಯೆಟ್ ನಲ್ಲಿ ಸೇರಿಸಿಕೊಂಡಿದ್ದಾರೆ ಎಂದಾದಲ್ಲಿ ಅವರು ಉತ್ತಮ ಪೋಷಕಾಂಶಗಳನ್ನು ಪಡೆಯುತ್ತಿದ್ದಾರೆ ಎಂದು ಅರ್ಥ. ರಾಗಿಯು ಸಾಕಷ್ಟು ಪೌಷ್ಟಿಕಾಂ ಶತೆಯನ್ನು ಹೊಂದಿದ್ದು, ಫಿಟ್ನೆಸ್ ಪ್ರಿಯರಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಗಳಿಸಿದೆ. ಇದರಲ್ಲಿ ಫೈಬರ್, ಕ್ಯಾಲ್ಸಿಯಂ, ಕಾರ್ಬೋಹೈಡ್ರೇಟ್‌ಗಳು ಮತ್ತು ವಿಟಮಿನ್‌ಗಳಂತಹ ಅಗತ್ಯ ಪೋಷಕಾಂಶಗಳು ಹೇರಳವಾಗಿ ತುಂಬಿರುವುದರಿಂದ ಹಲವಾರು ಆರೋಗ್ಯಕಾರಿ ಪ್ರಯೋಜನಗಳನ್ನು ನೀಡುತ್ತದೆ. ಅದರಲ್ಲೂ ಬೇಸಿಗೆಯಲ್ಲಂತೂ ರಾಗಿ ಸೇವನೆಯು ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಿಸುತ್ತದೆ. ಇದರ ತಂಪಾಗಿಸುವ ಗುಣವು ಬೇಸಿಗೆಯ ತಾಪದಿಂದ ದೇಹವನ್ನು ತಂಪಾಗಿಸುತ್ತದೆ.…
ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತಿಪಟೂರು ತಾಲೂಕು ಬಿದರೆಗುಡಿ ವಲಯದ ವಿನಾಯಕ ನಗರ “ಸಂಗಮ “ಜ್ಞಾನ ವಿಕಾಸ ಕೇಂದ್ರದ ಮೂಲಕ, ಈ ಸ್ವ ಉದ್ಯೋಗ ಪ್ರೇರಣಾ ಶಿಬಿರದಲ್ಲಿ 10 ದಿನಗಳ ಕಾಲ ಸಾರಿ ಕುಚ್ ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ವೀಣಾ ಶಿವಪ್ರಕಾಶ್, “ಪ್ರತಿಯೊಬ್ಬ ಮಹಿಳೆಯರು ಸ್ವಾವಲಂಬನಿಯಾಗಿ ವಿಶೇಷ ಕೌಶಲ್ಯದಿಂದ ನಿಮಗೆ ಆಸಕ್ತಿ ಇರುವ ವಿಷಯವನ್ನು ಆಯ್ಕೆ ಮಾಡಿ, ಉತ್ತಮ ತರಬೇತಿ ಪಡೆಯಿರಿ. ಶಂಕರ ತರಬೇತಿ ಸೆಂಟರ್ ನಲ್ಲಿ ಕಂಪ್ಯೂಟರ್, ಟೈಲರಿಂಗ್, ಬ್ಯಾಗ್, ಬ್ಯುಟಿಷಿಯನ್ ತರಬೇತಿ ನಡೆಯುತ್ತಿರುತ್ತದೆ. ತಾವು ಭಾಗವಹಿಸಬಹುದು ಎಂದರು. ಈ ಸಂದರ್ಭದಲ್ಲಿ ಆರ್ಥಿಕ ಸಾಕ್ಷಾರತ ಕೇಂದ್ರದ ಆಪ್ತ ಸಮಾಲೋಚಕರು ರೇಖಾ ಮೇಡಂ ರವರು “10 ದಿನ ಸಮಯಕ್ಕೆ ಸರಿಯಾಗಿ ಬಂದು ತರಬೇತಿ ಪಡೆಯಿರಿ. ಮುಂದಿನ ದಿನಗಳಲ್ಲಿ ಬೇರೆ ಬೇರೆ ತರಬೇತಿ ಇರುವಲ್ಲಿ ತಮಗೆ ಅವಕಾಶ ನೀಡೋಣ. ಜೊತೆಗೆ ಅತ್ತ್ಯುತ್ತಮವಾಗಿ ತರಬೇತಿ ಪಡೆದು ಕುಚ್ ಕಟ್ಟಿದ ಸದಸ್ಯರನ್ನು ಗುರುತಿಸಿ ಬಹುಮಾನ ನೀಡಲಾಗುವುದು”…
ಹೊಸ ದಿಲ್ಲಿ: ಇಂಡಿಯಾ ಮೈತ್ರಿಕೂಟ ಕನಿಷ್ಠವೆಂದರೂ 295 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ನಿವಾಸದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯ ನಂತರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಖರ್ಗೆ ಮಾತನಾಡುತ್ತಿದ್ದರು. ಕೊನೆಯ ಹಂತದ ಮತದಾನದ ನಂತರ ಚುನಾವಣೆಯ ಕುರಿತು ಪರಾಮರ್ಶೆ ನಡೆಸಲು ಹಾಗೂ ಭವಿಷ್ಯದಲ್ಲಿನ ಕಾರ್ಯತಂತ್ರದ ಕುರಿತು ಚರ್ಚಿಸಲು, ಇಂಡಿಯಾ ಮೈತ್ರಿಕೂಟದ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ತಾವು ಮತದಾನೋತ್ತರ ಸಮೀಕ್ಷೆಯ ಚರ್ಚೆಗಳಲ್ಲಿ ಭಾಗವಹಿಸುವುದಾಗಿ ಇಂಡಿಯಾ ಮೈತ್ರಿಕೂಟದ ನಾಯಕರು ಪ್ರಕಟಿಸಿದ್ದಾರೆ. ಇದಕ್ಕೂ ಮುನ್ನ, ತಾನು ಮತದಾನೋತ್ತರ ಸಮೀಕ್ಷೆಯ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ ಘೋಷಿಸಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕಳೆದ ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಮತ್ತೆ ಜೋರು ಮಳೆ ಆಗಿದೆ. ನೆತ್ತಿ ಸುಡುತ್ತಿದ್ದ ಬಿಸಿಲಿಗೆ ಮಳೆ ಸುರಿದು ತಂಪೆರೆದಿದೆ ವೀಕೆಂಡ್ ಮೂಡ್ ನಲ್ಲಿದ್ದ ಸಿಟಿ ಮಂದಿಗೆ ಮೇಘರಾಜ ಶಾಕ್ ಕೊಟ್ಟಿದ್ದಾನೆ. ಸದ್ದಿಲ್ಲದೆ ಎಂಟ್ರಿ ಕೊಟ್ಟ ವರುಣ ಅಬ್ಬರಿಸಿ, ಅವಾಂತರಕ್ಕೆ ಕಾರಣವಾಗಿದ್ದಾನೆ. ಮಳೆ ಕಂಡು ಹಲವರು ಖುಷ್ ಆದ್ರೆ ಇನ್ನೂ ಕೆಲವರು ಸುಸ್ತಾಗಿದ್ದಾರೆ. ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತವರಣದಲ್ಲಿದ್ದ ಸಿಲಿಕಾನ್ ಸಿಟಿಯಲ್ಲಿ ಸಂಜೆಯಾಗುತ್ತಿದ್ದಂತೆ ಮಳೆರಾಯ ಅಬ್ಬರಿಸಿದ್ದಾನೆ. ವರುಣನ ಆರ್ಭಟಕ್ಕೆ ಎಲೆಕ್ಟ್ರಾನಿಕ್ ಸಿಟಿಯ ಹಲವೆಡೆ ರಸ್ತೆಗಳು ಅಕ್ಷರಶಃ ಕೆರೆಯಂತಾಗಿದೆ. ಇತ್ತ ಕನಕನಗರ ಹಾಗೂ ಯಲಚೇನಹಳ್ಳಿಯಲ್ಲೂ ಭಾರೀ ಮಳೆಯಾಗಿದ್ದು, ಮಳೆ ನೀರು ಅಕ್ಷರಶಃ ನದಿಯಂತೆ ಉಕ್ಕಿ ಹರಿದಿದೆ. ಮಳೆ ನೀರೆಲ್ಲಾ ಮನೆಗಳಿಗೆ ನುಗ್ಗಿದ್ದು, ಇಲ್ಲಿನ ಜನ ಬೀದಿಗಳಿದು ಆಕ್ರೋಶ ಹೊರಹಾಕಿದ್ದಾರೆ. 15 ವರ್ಷಗಳಿಂದ ಇದೇ ಸಮಸ್ಯೆ, 2/3 ಅಡಿ ಮೋರಿಗೆ 10 ಅಡಿ ಮೋರಿಯಷ್ಟ್ ನೀರು ಬರುತ್ತೆ. ಬೇರೆ ಏರಿಯಾ ನೀರೆಲ್ಲಾ ಇಲ್ಲಿಗೆ ಬರುತ್ತೆ ಅಂತ ಕಿಡಿಕಾರಿದ್ದಾರೆ. ಕೋಣನಕುಂಟೆ ಕ್ರಾಸ್…
ಗೋರಖಪುರ್: ಬಿಜೆಪಿಯ ಗೋರಖಪುರ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ರವಿ ಕಿಶನ್ ಇಂದು ಗೋರಖಪುರದ ಮತಗಟ್ಟೆಯೊಂದರಲ್ಲಿ ಮತ ಚಲಾಯಿಸಿದ ನಂತರ ವಿಚಿತ್ರ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಗೋರಖಪುರದ ಜನತೆಗೆ ವಿಪರೀತ ತಾಪಮಾನದಿಂದ ಮುಕ್ತಿ ನೀಡಿದ ಹವಾಮಾನದಲ್ಲಿನ ಬದಲಾವಣೆಯು ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಅಥವಾ ಧ್ಯಾನ ಕಾರಣ ಎಂದು ಅವರು ಹೇಳಿಕೊಂಡಿದ್ದಾರೆ. ಮತ ಚಲಾಯಿಸಿದ ನಂತರ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿದ ಅವರು ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಅದೇ ಸಮಯ ಪ್ರಧಾನಿಯ ಸಾಧನೆ ಅಥವಾ ಧ್ಯಾನದಿಂದ ಸೂರ್ಯ ಕೂಡ ತನ್ನ ತೀವ್ರತೆಯನ್ನು ಕಡಿಮೆ ಮಾಡಿದ್ದಾನೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕರ್ನಾಟಕದ ಹೈಕೋರ್ಟ್‍ನ ನೂತನ ನ್ಯಾಯಮೂರ್ತಿಗಳಾಗಿ ನ್ಯಾ. ವಲ್ಲೂರಿ ಕಾಮೇಶ್ವರ ರಾವ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಶನಿವಾರ ಇಲ್ಲಿನ ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಸೇರಿದಂತೆ ನ್ಯಾಯಮೂರ್ತಿಗಳು, ವಕೀಲರು, ಗಣ್ಯರುಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296