Subscribe to Updates
Get the latest creative news from FooBar about art, design and business.
- ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
- ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
- ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
- ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
- ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
- ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
- ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
- ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
Author: admin
ತುಮಕೂರು: ಮೇ 3ರಿಂದ 10 ರವರೆಗೆ ನಡೆಯಲಿರುವ ಅಂತರಾಷ್ಟ್ರೀಯ ಮಹಿಳಾ ಟೆನ್ನಿಸ್ ಕ್ರೀಡಾಕೂಟ ತುಮಕೂರು ಓಪನ್ ಚಾಂಪಿಯನ್ ಶಿಪ್ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಕ್ರೀಡಾಕೂಟ ಸಂಬಂಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ವಹಿಸಿರುವ ಜವಾಬ್ದಾರಿಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸುವಂತೆ ಅವರು ತಿಳಿಸಿದರು. ವಿವಿಧ ಸುಮಾರು 12 ದೇಶಗಳಿಂದ ಕ್ರೀಡಾಪಟುಗಳು ತುಮಕೂರಿಗೆ ಬರಲಿದ್ದಾರೆ ಅಲ್ಲದೆ ಅಂತರಾಷ್ಟ್ರೀಯ ಮಟ್ಟದ ತೀರ್ಪುಗಾರರು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು ಅವರಿಗೆಲ್ಲ ವಸತಿ, ಊಟ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಬೇಕು ಎಂದರು. ಈ ಕ್ರೀಡಾ ಕೂಟವು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಯೋಗದಲ್ಲಿ ನಡೆಯುತ್ತಿದ್ದು ತುಮಕೂರಿನ ನಾಲ್ಕು ಕ್ರೀಡಾ ಅಂಕಣಗಳಲ್ಲಿ ನಡೆಯಲಿದೆ. ಈ ಕ್ರೀಡಾ ಕೂಟಕ್ಕೆ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದರು. ಸುಮಾರು 100ಕ್ಕೂ ಹೆಚ್ಚು ಅಂತರಾಷ್ಟ್ರೀಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ದಾನಿಗಳೇ ನೀಡಲಿದ್ದಾರೆ. ಟೆನ್ನಿಸ್ ಅಸೋಸಿಯೇಷನ್…
ಶಿರಾ: ಬಿಸಿಲಿನ ಬೇಗೆಯಲ್ಲೂ ಕೂಡ ಹಾಲು ಉತ್ಪಾದನೆಯಲ್ಲಿ ರಾಜ್ಯದಲ್ಲಿ ತುಮಕೂರು ಜಿಲ್ಲೆ ಹೆಚ್ಚು ಹಾಲು ಉತ್ಪಾದನೆ ಮಾಡಿದ ಕೀರ್ತಿ ಪಡೆದರೆ, ಪ್ರತಿದಿನ 82 ಸಾವಿರ ಲೀಟರ್ ಹಾಲು ಉತ್ಪಾದನೆ ಮಾಡುವ ಮೂಲಕ ಶಿರಾದಲ್ಲಿ ಕ್ಷೀರ ಕ್ರಾಂತಿಯೇ ಆರಂಭವಾಗಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಹೇಳಿದರು. ಶಿರಾ ನಗರದ ನಂದಿನಿ ಕ್ಷೀರ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ 250 ಜನ ಡೈರಿ ಕಾರ್ಯದರ್ಶಿ ಹಾಗೂ ಹಾಲು ಪರೀಕ್ಷಕರಿಗೆ ತಲಾ ಎರಡು ಜೊತೆ ಬಟ್ಟೆ ಹಾಗೂ ಕಾರ್ಯದರ್ಶಿಗಳಿಗೆ ಬ್ಯಾಗ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಕೃಷಿ ನೆಲಕಚ್ಚಿದಂತಹ ಸ್ಥಿತಿಯಲ್ಲಿ ರೈತರಿಗೆ ಹೈನುಗಾರಿಕೆ ಆರ್ಥಿಕವಾಗಿ ಸದೃಢರನ್ನಾಗಿ ಮಾಡಿದೆ, ಪ್ರಾಮಾಣಿಕತೆ, ಶ್ರಮ ನಿಮ್ಮದಾದರೆ ಹೈನುಗಾರಿಕೆ ಮತ್ತಷ್ಟು ಲಾಭದಾಯಕವಾಗಲಿದೆ ಈ ನಿಟ್ಟಿನಲ್ಲಿ ಎಲ್ಲಾ ಹಾಲು ಉತ್ಪಾದಕರು, ಉತ್ಪಾದನೆ ಹೆಚ್ಚಳ ಮಾಡಿಕೊಳ್ಳುವತ್ತ ಹೆಚ್ಚು ಗಮನಹರಿಸಬೇಕು. ಜೊತೆಗೆ ಹಾಲು ಉತ್ಪಾದನೆ ಹೆಚ್ಚಳ ಗೊಳಿಸಲು ರೈತರಿಗೆ ಸಲಹೆ ಮತ್ತು ಆಸಕ್ತಿ ಮೂಡುವಂತೆ ಮಾಡಬೇಕು. ಪ್ರತಿದಿನ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆ…
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ (ಹಿಂದಿ) ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸೂಚಿಸಿ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ರಾಜ್ಯಪಾಲರ ನಡೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ. “ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದ ತೆರಿಗೆ ದುಡ್ಡಿನಲ್ಲಿ ನಿಮಗೆ ಐಶಾರಾಮಿ ಸೌಲಭ್ಯ ನೀಡಿದ್ದೇವೆ. ತಿಂದ ಮನೆಗೆ ಕನ್ನ ಹಾಕುವುದು ಸರಿಯಲ್ಲ. ನಿಮ್ಮ ಅಧಿಕಪ್ರಸಂಗ ಮುಂದುವರಿದರೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ಹೇಳಬೇಕಾಗುತ್ತದೆ” ಎಂದು ಖಾರವಾಗಿ ನುಡಿದಿದ್ದಾರೆ. ಸರ್ಕಾರ ಬಹುಮತದೊಂದಿಗೆ ಆಡಳಿತ ನಡೆಸುತ್ತಿರುವಾಗ, ದೈನಂದಿನ ನಿರ್ಧಾರಗಳಲ್ಲಿ ಮೂಗು ತೂರಿಸಲು ರಾಜ್ಯಪಾಲರಿಗೆ ಯಾವುದೇ ಸಾಂವಿಧಾನಿಕ ಹಕ್ಕಿಲ್ಲ. ನೀವು ಜನರಿಂದ ಆಯ್ಕೆಯಾದ ಪ್ರತಿನಿಧಿಯಲ್ಲ ಎಂಬುದನ್ನು ನೆನಪಿಡಿ ಎಂದು ಅವರು ಹೇಳಿದ್ದಾರೆ. ರಾಜ್ಯಪಾಲರು ಹಿಂದಿ ಸಾಮ್ರಾಜ್ಯಶಾಹಿ ಲಾಬಿಯ ಪರವಾಗಿ…
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳ ವೇಳೆ ಪ್ರೇಕ್ಷಕರ ಮೊಬೈಲ್ ಕದಿಯುತ್ತಿದ್ದ ದೊಡ್ಡ ಜಾಲವೊಂದನ್ನು ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಒಟ್ಟು 13 ಮಂದಿಯನ್ನು ಬಂಧಿಸಲಾಗಿದ್ದು, ಅವರಲ್ಲಿ 9 ಮಂದಿ ಅಪ್ರಾಪ್ತರಿರುವುದು ಬೆಳಕಿಗೆ ಬಂದಿದೆ. ಮಾರ್ಚ್ 28 ರಂದು ನಡೆದ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಗಳ ಮೊಬೈಲ್ ಕಳ್ಳತನವಾಗಿರುವ ಬಗ್ಗೆ ದೂರುಗಳು ದಾಖಲಾಗಿದ್ದವು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಜಾರ್ಖಂಡ್ ಮೂಲದ ಗ್ಯಾಂಗ್ ಒಂದನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 75 ಹೈಎಂಡ್ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾರ್ಖಂಡ್‌ನಿಂದ ಬಂದಿದ್ದ ಸೋಹನ್ ಕುಮಾರ್, ಸಂಜೀತ್ ಕುಮಾರ್, ಇಶಾಲ್ ಕುಮಾರ್ ಮತ್ತು ಶುಭಮನ್ ಕುಮಾರ್ ಎಂಬುವವರು ಈ ಗ್ಯಾಂಗ್‌ನ ಸೂತ್ರಧಾರರು. ಇವರು 9 ಮಂದಿ ಅಪ್ರಾಪ್ತರನ್ನು ಬಳಸಿಕೊಂಡು ಜನದಟ್ಟಣೆಯಿರುವ ಕಡೆಗಳಲ್ಲಿ ಮೊಬೈಲ್ ಕಳ್ಳತನ ಮಾಡಿಸುತ್ತಿದ್ದರು. ಕೇವಲ ಬೆಂಗಳೂರು ಮಾತ್ರವಲ್ಲದೆ ಚೆನ್ನೈ, ಮುಂಬೈ ಮತ್ತು ಕೋಲ್ಕತ್ತಾದಂತಹ ನಗರಗಳಲ್ಲೂ ಈ ಗ್ಯಾಂಗ್ ಕೈಚಳಕ ತೋರಿರುವುದು ವಿಚಾರಣೆಯಿಂದ ತಿಳಿದುಬಂದಿದೆ. ಕಳೆದ ಪಂದ್ಯದ ಅನುಭವದ…
ರಾಮನಗರ: ರಾಜ್ಯದಲ್ಲಿ ಎದುರಾಗಿರುವ ಗ್ಯಾಸ್ ಅಭಾವವನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು ಪ್ರತಿಭಟನೆ ನಡೆಸಿದರು. ರಾಮನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ವಾಟಾಳ್ ನಾಗರಾಜ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ತಮಟೆ ಬಾರಿಸುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ಯಾಸ್ ಸಮಸ್ಯೆ ನೀಗಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ಆಡಳಿತ ಮತ್ತು ವಿರೋಧ ಪಕ್ಷಗಳು ಕೇವಲ ಉಪಚುನಾವಣೆಯಲ್ಲಿ ಮಗ್ನವಾಗಿವೆ ಎಂದು ವಾಟಾಳ್ ಕಿಡಿಕಾರಿದರು. ಗ್ಯಾಸ್ ಸಿಗದೆ ಆಟೋ ಚಾಲಕರು ಮತ್ತು ಹೋಟೆಲ್ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಂಕ್‌ಗಳ ಮುಂದೆ ಗಂಟೆಗಟ್ಟಲೆ ಕಾದರೂ ಗ್ಯಾಸ್ ಸಿಗುತ್ತಿಲ್ಲ. ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಆಟೋ ಚಾಲಕರೊಂದಿಗೆ ಸೇರಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಒಂದು ಕಡೆ ಯುದ್ಧದ ವಾತಾವರಣ ಮತ್ತು ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದರೆ, ಮತ್ತೊಂದೆಡೆ ಐಪಿಎಲ್ ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿದೆ. ಕಾರ್ಪೊರೇಟ್ ಸಂಸ್ಥೆಗಳಿಗಾಗಿ ಸರ್ಕಾರ ಇಂತಹ ಕ್ರೀಡೆಗಳಿಗೆ…
ತುಮಕೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ತುಮಕೂರು ನಗರದ ಹೊಸಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ಮಂಗಳಮ್ಮ ಅವರು ಚಿಕ್ಕಮಗಳೂರಿನಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ವರದಿಗಳ ಪ್ರಕಾರ, ಪಿಎಸ್ ಐ ಮಂಗಳಮ್ಮ ಅವರು ತಮ್ಮ ಮಗಳ ಜೊತೆ ಯುಪಿಎಸ್ ಸಿ (UPSC) ತರಬೇತಿ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಮಗಳ ಶಿಕ್ಷಣ ಅಥವಾ ತರಬೇತಿಯ ವಿಷಯದಲ್ಲಿ ಉಂಟಾದ ಈ ಕೌಟುಂಬಿಕ ಕಲಹದಿಂದ ಮನನೊಂದಿದ್ದ ಅವರು, ಯಾರಿಗೂ ತಿಳಿಸದೆಯೇ ಮನೆಯಿಂದ ಹೊರಬಂದಿದ್ದರು. ತಾಯಿ ಕಾಣೆಯಾದ ಬಗ್ಗೆ ಆತಂಕಗೊಂಡ ಪುತ್ರಿ ಕುಸುಮಾ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು, ಮೊಬೈಲ್ ಲೊಕೇಶನ್ ಮತ್ತು ಇತರ ತಾಂತ್ರಿಕ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ್ದರು. ಅಂತಿಮವಾಗಿ ಮಂಗಳಮ್ಮ ಅವರು ಚಿಕ್ಕಮಗಳೂರಿನಲ್ಲಿ ಇರುವುದು ಪತ್ತೆಯಾಗಿದ್ದು, ಪೊಲೀಸರು ಅವರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಮಂಗಳಮ್ಮ ಅವರು ಸುರಕ್ಷಿತವಾಗಿದ್ದು, ಅವರನ್ನು ತುಮಕೂರಿಗೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಮತ್ತು ಕುಟುಂಬಸ್ಥರು ಈ ಬೆಳವಣಿಗೆಯಿಂದ ನಿಟ್ಟುಸಿರು…
ರಾಘವೇಂದ್ರ ಅಡಿಗ ಎಚ್ಚೆನ್. ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ, ಕ್ಯಾನ್ಸರ್ ಪೀಡಿತರನ್ನು ಶುಶ್ರೂಷೆ ಮಾಡುವ ವೈದ್ಯರು ಹಾಗೂ ನರ್ಸ್ ಗಳಿಗೆ ಈ ಪುಸ್ತಕ ಒಂದು ಮಹಾನ್ ಗ್ರಂಥ ಆಗಿದೆ. ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯರು ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ. ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಡೆದ ಡಾ. ಆತ್ಮ ಪ್ರಸನ್ನ ಸಂಪಾದಿತ ಕೃತಿ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಭಾರತದಲ್ಲಿ ಇಂದಿಗೂ ಪ್ಯಾಲಿಟಿವ್ ಕೇರ್ ಒಂದು ಸರಿಯಾದ ರೀತಿಯಲ್ಲಿ ವಿನ್ಯಾಸ ಆಗಿಲ್ಲ. ಇಂತಹ ಸಂದರ್ಭದಲ್ಲಿ ಈ ಅಪರೂಪದ ಕೃತಿ ಬಿಡುಗಡೆ ಆಗುತ್ತಿರುವುದು ನನಗೆ ಬಹಳ ಸಂತೋಷ ತಂದಿದೆ ಎಂದು ಹೇಳಿದರು. ಕೆಲವು ಬಗೆಯ ಕ್ಯಾನ್ಸರ್ ಗಳು ಸಂಪೂರ್ಣ ವಾಸಿ ಆಗುವುದಿಲ್ಲ. ಆಗ ಅಂತಹವರ ಬದುಕುವ ಗುಣಮಟ್ಟವನ್ನು ನಾವು ಹೆಚ್ಚಿಸಬೇಕು. ಈ ಪುಸ್ತಕದಲ್ಲಿ ನೂರೊಂದು ಅಧ್ಯಾಯ ಇದೆ ಇದರಿಂದ ಕ್ಯಾನ್ಸರ್ ಚಿಕಿತ್ಸೆ ನೀಡುವ ವೈದ್ಯರು ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುವ…
ಚಿಕ್ಕನಾಯಕನಹಳ್ಳಿ: ಹುಳಿಯಾರು ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಈ ಬಾರಿ ಅಚ್ಚರಿಯ ಬದಲಾವಣೆ ಕಂಡು ಬಂದಿದ್ದು ಶಾಸಕ ಸಿ.ಬಿ. ಸುರೇಶ್ ಬಾಬು, ಅಧ್ಯಕ್ಷೆ ಪ್ರೀತಿ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಕೇವಲ 60 ರಿಂದ 70 ನಿಮಿಷಗಳಲ್ಲಿ ಮುಕ್ತಾಯಗೊಂಡು ಹೊಸ ದಾಖಲೆ ಬರೆದಿದೆ. ಅಜೆಂಡಾದಲ್ಲಿದ್ದ 60 ವಿಷಯಗಳಿಗೂ ಯಾವುದೇ ಪ್ರತಿರೋಧವಿಲ್ಲದೆ ಸರ್ವಾನುಮತದ ಅಂಗೀಕಾರ ದೊರೆತಿದ್ದು ವಿಶೇಷವಾಗಿತ್ತು. ಗಂಭೀರ ಚರ್ಚೆ ಬಯಸುವ ಸುಮಾರು 30ಕ್ಕೂ ಹೆಚ್ಚು ವಿಷಯಗಳು ಇದ್ದರೂ, ಈ ಬಾರಿ ಎಲ್ಲವೂ ಸುಗಮವಾಗಿ ಪಾಸ್ ಆಗಿರುವುದು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ. ಸಭೆಯ ಮತ್ತೊಂದು ವಿಶೇಷವೆಂದರೆ ಮುಖ್ಯಾಧಿಕಾರಿ ಮಂಜುನಾಥ್ ಪಂಚಾಯಿತಿ ವತಿಯಿಂದ ಅಧ್ಯಕ್ಷರಿಗೆ ಕಾರು ಖರೀದಿಸುವ ಪ್ರಸ್ತಾವನೆಯನ್ನು ಅವರು ನಯವಾಗಿ ತಿರಸ್ಕರಿಸಿದರು. ಅಧ್ಯಕ್ಷರಿಗೆ ಕಾರಿನ ಅಗತ್ಯವಿದೆ ಎಂಬ ಸದಸ್ಯರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, ಅಧ್ಯಕ್ಷರಿಗಾಗಿ ಕಾರು ಖರೀದಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸುವ ಮೂಲಕ ಸಾರ್ವಜನಿಕರ ಲಕ್ಷಾಂತರ ರೂಪಾಯಿ ಹಣ ಪೋಲಾಗುವುದನ್ನು ತಪ್ಪಿಸಿ ಗಮನ ಸೆಳೆದರು. ಪಟ್ಟಣಕ್ಕೆ ಸಿಸಿ ಕ್ಯಾಮೆರಾ…
ಚಿಕ್ಕನಾಯಕನಹಳ್ಳಿ: ಹುಳಿಯಾರಿನ ದೇವರಾಜ ಅರಸು ಮುತ್ತಿನ ಸಹಕಾರ ಸಂಘದಲ್ಲಿ ಪಿಗ್ಮಿ ಹಣ ಕಳೆದುಕೊಂಡ ಸಂತ್ರಸ್ತರು ಶಾಸಕ ಸಿ.ಬಿ. ಸುರೇಶ್ ಬಾಬು ಅವರನ್ನು ಭೇಟಿ ಮಾಡಿ ತಮ್ಮ ಅಳಲನ್ನು ತೋಡಿಕೊಂಡರು. ಮನವಿ ಸಲ್ಲಿಸುವ ವೇಳೆ ತೀವ್ರ ಹತಾಶೆಗೊಂಡ ಕೆಲವು ಸಂತ್ರಸ್ತರು, ಹಣ ಸಿಗದಿದ್ದರೆ ನಮಗೆ ಸಾವೊಂದೇ ದಾರಿ’ ಎಂದು ತಾವು ತಂದಿದ್ದ ವಿಷದ ಬಾಟಲಿಗಳನ್ನು ತೆಗೆದು ಕುಡಿಯಲು ಯತ್ನಿಸಿದರು. ಈ ಸಂದರ್ಭದಲ್ಲಿ ಶಾಸಕರು ಮತ್ತು ಅಲ್ಲಿದ್ದವರು ಸಂತ್ರಸ್ತರ ಕೈಯಲ್ಲಿದ್ದ ವಿಷದ ಬಾಟಲಿಯನ್ನು ಕಿತ್ತುಕೊಂಡರು. ಸಂಘದ ಪಿಗ್ಮಿ ಸಂಗ್ರಹಗಾರರಾಗಿದ್ದ ದಿವಾಕರ್ ಇತ್ತೀಚೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಸಂತ್ರಸ್ತರ ಆತಂಕವನ್ನು ಹಿಮ್ಮಡಿಗೊಳಿಸಿದೆ. ಜೊತೆಗೆ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಕಚೇರಿಗೆ ಬೀಗ ಜಡಿದು ತಲೆಮರೆಸಿಕೊಂಡಿದ್ದು, ಬಡವರ ಹಣಕ್ಕೆ ಯಾವುದೇ ಭರವಸೆ ಸಿಗದಂತಾಗಿದೆ. ಹಾಗಾಗಿ ಸಹಕಾರ ಸಂಘದ ಮೇಲಧಿಕಾರಿಗಳಿಗೆ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡುವಂತೆ ಪಿಗ್ಮಿ ಸಂತ್ರಸ್ತರು ಅಂಗಲಾಚಿದರು. ಆಗ ಶಾಸಕ ಸಿ.ಬಿ. ಸುರೇಶ್ ಬಾಬು, ಸ್ಥಳದಲ್ಲೇ ಸಹಕಾರ ಸಂಘಗಳ ಉಪನಿಬಂಧಕರಿಗೆ ದೂರವಾಣಿ ಕರೆ ಮಾಡಿ ಬಡವರು…
ತುಮಕೂರು: ಏಪ್ರಿಲ್ 1ರಿಂದ ಆರಂಭವಾಗಿರುವ ಸ್ವಯಂ ಗಣತಿಯಲ್ಲಿ ಸರ್ವಜನಿಕರು ಭಾಗವಹಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದ್ದಾರೆ. ತುಮಕೂರು ನಗರದ ವಿವಿಧ ಬಡಾವಣೆಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಮೊಬೈಲ್ ಮೂಲಕ ನಾಗರಿಕರು ಸ್ವಯಂ ಗಣತಿ ಮಾಡುವುದು ಹೇಗೆ ಎಂಬುದನ್ನು ಖುದ್ದು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ಹತ್ತು ವರ್ಷಗಳಿಗೊಮ್ಮೆ ಭಾರತ ಸರ್ಕಾರ ಜನಗಣತಿ ಮಾಡುತ್ತದೆ. ಅಂತೆಯೇ ಇದೀಗ 2027 ರ ಜನಗಣತಿ ಏಪ್ರಿಲ್ 1ರಿಂದ ಆರಂಭವಾಗಿದ್ದು ಏಪ್ರಿಲ್ 15 ರವರೆಗೆ ಸ್ವಯಂ ಗಣತಿ ನಂತರ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಮಾಡಲಿದ್ದಾರೆ ಎಂದರು. ದೇಶದ ಅಭಿವೃದ್ಧಿ ದೃಷ್ಟಿಯಿಂದ ಗಣತಿ ಕಾರ್ಯದ ಪ್ರಮುಖ ಪಾತ್ರವಿದೆ ಎಂದ ಅವರು, ಜನಸಂಖ್ಯೆ ಮಾಹಿತಿ ಪಡೆದು ಅದಕ್ಕನುಗುಣವಾಗಿ ಜನರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನುಸಾರ ನೀತಿಗಳನ್ನು ರೂಪಿಸಲು ಗಣತಿ ಅಂಕಿಸಂಖ್ಯೆಗಳು ಮುಖ್ಯವಾಗಿವೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ಜನರು ಜನಗಣತಿಯಲ್ಲಿ ಪಾಲ್ಗೊಳ್ಳಬೇಕಿದೆ ಎಂದರು. ಪ್ರಸ್ತುತ ಏಪ್ರಿಲ್…