Subscribe to Updates
Get the latest creative news from FooBar about art, design and business.
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
- ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
- ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
Author: admin
ಎಪ್ರಿಲ್ 13ರಂದು ಹಾರ್ಮುಜ್ ಜಲಸಂಧಿಯ ಬಳಿ ಇರಾನ್ ವಶಕ್ಕೆ ಪಡೆದಿದ್ದ, ಪೋರ್ಚುಗೀಸ್ ಧ್ವಜ ಹೊಂದಿದ್ದ ಹಡಗಿನಲ್ಲಿದ್ದ 25 ಸಿಬ್ಬಂದಿಗಳಲ್ಲಿ 7 ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿದ್ದು, ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ಪೋರ್ಚುಗಲ್ ನ ವಿದೇಶಾಂಗ ಇಲಾಖೆ ತಿಳಿಸಿದೆ. ಬಿಡುಗಡೆಗೊಂಡವರಲ್ಲಿ ಐವರು ಭಾರತೀಯರು, ಓರ್ವ ಫಿಲಿಪ್ಪೀನ್ಸ್ ಹಾಗೂ ಓರ್ವ ಎಸ್ಟೋನಿಯಾ ಪ್ರಜೆಗಳು ಸೇರಿದ್ದಾರೆ. ಪೋರ್ಚುಗೀಸ್ ಧ್ವಜ ಹೊಂದಿರುವ ಎಂಎಸ್ ಸಿ ಏರೀಸ್ ಹಡಗನ್ನು ಎಪ್ರಿಲ್ 13ರಂದು ಇರಾನ್ ನ ರೆವೊಲ್ಯುಷನರಿ ಗಾಡ್ರ್ಸ್ ವಶಕ್ಕೆ ಪಡೆದಿತ್ತು. ಕಂಟೈನರ್ ಹಡಗು ಇಸ್ರೇಲ್ ಜತೆ ಸಂಪರ್ಕ ಹೊಂದಿತ್ತು ಎಂದು ಇರಾನ್ ವಿದೇಶಾಂಗ ಇಲಾಖೆ ತಿಳಿಸಿತ್ತು. ಇರಾನ್ ನ ಕ್ರಮವನ್ನು ಸ್ವಾಗತಿಸಿರುವ ಪೋರ್ಚುಗಲ್, ಉಳಿದ 17 ಸಿಬ್ಬಂದಿಗಳನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿದೆ. ಹಡಗಿನ ಎಲ್ಲಾ ಸಿಬ್ಬಂದಿಗಳನ್ನೂ ಮಾನವೀಯ ನೆಲೆಯಲ್ಲಿ ಬಿಡುಗಡೆಗೊಳಿಸಲಾಗುವುದು. ಆದರೆ ಜಫ್ತಿ ಮಾಡಿರುವ ಹಡಗನ್ನು ಬಿಡುಗಡೆಗೊಳಿಸುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವರು ಕಳೆದ ವಾರ ಹೇಳಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಕೊಡಗು: ಎಸ್ ಎಸ್ ಎಲ್ ಸಿ ಪಾಸ್ ಆದ ವಿದ್ಯಾರ್ಥಿಯ ರುಂಡ ಕತ್ತರಿಸಿದ ಪ್ರಕರಣ ಕೇಳಿ ಇಡೀ ಕೊಡಗೇ ಬೆಚ್ಚಿಬಿದ್ದಿತ್ತು. 16 ವರ್ಷದ ಬಾಲಕಿಯನ್ನು 34 ವರ್ಷದ ಕೊಲೆಗಾರ ಕೊಂದಿದ್ದನು. ಅಪ್ರಾಪ್ತೆಯನ್ನು ಹಗಲು ನಿಶ್ಚಿತಾರ್ಥ ಮಾಡಿಕೊಂಡು ಸಂಜೆ ವೇಳೆ ಆಕೆಗೆ ಕತ್ತಿಯಿಂದ ಕಡಿದು ರುಂಡ-ಮುಂಡ ಬೇರ್ಪಡಿಸಿದ್ದನು. ಬಳಿಕ ಕಾಡಿನತ್ತ ತಲೆ ಹಿಡಿದುಕೊಂಡು ಪರಾರಿಯಾಗಿದ್ದನು. ಆದರೀಗ ಪರಾರಿಯಾದ ಕೊಲೆಗಾರ ಸಿಕ್ಕಿದ್ದಾನೆ. ಮೀನಾ ಮತ್ತು ಪ್ರಕಾಶ ಇಬ್ಬರು ಲವ್ ಮಾಡುತ್ತಿದ್ದರು. ಕೊನೆಗೆ ಪ್ರಕಾಶ ಒತ್ತಾಯದ ಮೇರೆಗೆ ಆಕೆಯನ್ನ ವಿವಾಹ ಮಾಡಿ ಕೊಡುವುದಾಗಿ ಹುಡುಗಿ ಮನೆಯವರು ಒಪ್ಪಿದ್ದರು. ಅದರಂತೆಯೇ ಗುರುವಾರದಂದು ಅಪ್ರಾಪ್ತ ಬಾಲಕಿಯನ್ನು ಪ್ರಕಾಶ ನಿಶ್ಚಿತಾರ್ಥ ಮಾಡಿಕೊಂಡು ತನ್ನ ಮನೆ ಸೇರಿದ್ದನು. ಆದರೆ ಸಂಜೆ ವೇಳೆಗೆ ಕತ್ತಿ ಹಿಡಿದುಕೊಂಡು ಏಕಾಏಕಿ ಹುಡುಗಿ ಮನೆಗೆ ಬಂದವನು ಆಕೆಯ ತಂದೆ-ತಾಯಿಗೆ ಹಲ್ಲೆ ಮಾಡಿ, ಹುಡುಗಿಯನ್ನು ಎಳೆದೊಯ್ದು ಆಕೆಯ ರುಂಡವನ್ನೇ ಕತ್ತರಿಸಿಬಿಟ್ಟಿದ್ದನು. ನಂತರ ರುಂಡವನ್ನು ಕಾಡಿನಲ್ಲಿ ಬಿಸಾಕಿ ತನ್ನ ಮನೆ ಸೇರಿ ಕೋವಿ ಹಿಡಿದುಕೊಂಡು ಕಾಡಿಗೆ ಪರಾರಿಯಾಗಿದ್ದನು. ಪೊಲೀಸರು ಆರೋಪಿಗಾಗಿ…
ಕೆಲವು ಘಟನೆ, ಸನ್ನಿವೇಶಗಳನ್ನು ನೋಡಿದಾಗ ನಮ್ಮ ದೇಶದಲ್ಲಿ ಬಡವರಿಗೆ, ಸಿರಿವಂತರಿಗೆ, ನಾಯಕರಿಗೆ ಒಂದು ಕಾನೂನು ಅನಿಸುತ್ತದೆ. ಕಾನೂನು ಇರುವುದೇ ಬಡವರು, ಸಾಮನ್ಯ ವರ್ಗದವರು ಪಾಲಿಸಲು ಅನಿಸುತ್ತದೆ. ಹಣವಂತರು ಹೇಗಾದರು ಇರಬಹುದು. ಕೆಲವೊಮ್ಮೆ ಜನ ಸಾಮಾನ್ಯರಿಗೆ ಸಿಗದ ವಿಶೇಷ ಸವಲತ್ತುಗಳು ಅವರಿಗೆ ಸಿಕ್ಕಿಬಿಡುತ್ತವೆ. ಅದು ಕಾನೂನು ಬಾಹಿರ ಆದರೂ ಕೂಡಾ! ಅಂಥದ್ದೇ ಒಂದು ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದ್ದು, ಬಿಜೆಪಿ ನಾಯಕನೊಬ್ಬನ ತನ್ನ ಅಪ್ರಾಪ್ತ ಮಗನಿಂದ ಮತದಾನ ಮಾಡಿಸಿದ್ದಾನೆ. ಇಷ್ಟೇ ಅಲ್ಲದೆ ಇದನ್ನು ವಿಡಿಯೋ ಮಾಡಿಕೊಂಡು, ಪೋಸ್ಟ್ ಕೂಡ ಮಾಡಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ನ ಬೆರಾಸಿಯಾ ಮತಗಟ್ಟೆಯಲ್ಲಿ ಬಿಜೆಪಿ ನಾಯಕನ ಅಪ್ರಾಪ್ತ ಮಗ ಮತ ಚಲಾಯಿಸುತ್ತಿರುವ ವಿಡಿಯೋ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. 14 ಸೆಕೆಂಡುಗಳ ಈ ವಿಡಿಯೋವನ್ನು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ಮಾಧ್ಯಮ ಸಲಹೆಗಾರ ಮೆಹರ್ ಅವರ ಫೇಸ್ಬುಕ್ ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಅಂದಹಾಗೆ ವೈರಲ್ ಆದ ವಿಡಿಯೋದಲ್ಲಿ ಬಿಜೆಪಿ…
ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 625 ಅಂಕಗಳಿಗೆ 600ಕ್ಕೂ ಹೆಚ್ಚು ಅಂಕ ಪಡೆದು 98 ಪರ್ಸೆಂಟ್ ತೆಗೆದಿದ್ದಾರೆ. ತಮ್ಮ ಮಕ್ಕಳ ಫಲಿತಾಂಶವನ್ನು ಕಂಡು ಪೋಷಕರಲ್ಲಿ ಸಂಭ್ರಮ ಮನೆ ಮಾಡಿದೆ. ಕೊರಟಗೆರೆ ಪಟ್ಟಣದ ಚಾಣಕ್ಯ ಶಾಲೆಯಲ್ಲಿ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದು ಕೊರಟಗೆರೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಭವಿಷ್ಯದಲ್ಲಿ ಏನು ಕನಸು ಕಂಡಿದ್ದರು ಅಂತಹ ವಿದ್ಯಾಭ್ಯಾಸವನ್ನು ಕಷ್ಟಪಟ್ಟಾದರೂ ಕೊಡಿಸುತ್ತೇವೆ ಎಂದಿದ್ದಾರೆ ಪೋಷಕರು. ಮಕ್ಕಳಿಗೆ ಫೋನ್ ಗಳನ್ನು ಕೊಡುವುದನ್ನು ನಿಲ್ಲಿಸಬೇಕು. ಅವರು ಶಾಲೆಯಲ್ಲಿ ಏನು ಮಾಡುತ್ತಿದ್ದಾರೆ ಮನೆಗೆ ಬಂದಾಗ ಓದುತ್ತಾರೋ ಇಲ್ಲವೋ ಎಂದು ಗಮನಿಸಬೇಕು. ಮಕ್ಕಳ ಭವಿಷ್ಯದ ಕಡೆ ಗಮನ ಕೊಡಬೇಕು ಎಂದು ಪೋಷಕರು ತಿಳಿಸಿದ್ದಾರೆ. ಪೋಷಕರು ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ತುಂಬಾ ಕಷ್ಟಪಟ್ಟು ಓದಿದ್ದೇವೆ. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದಿದ್ದಾರೆ ವಿದ್ಯಾರ್ಥಿಗಳು. ಕಾರ್ಯನಿರತ ಪತ್ರಕರ್ತ ಸಂಘದ ತಾಲ್ಲೂಕು ಅಧ್ಯಕ್ಷರಾದ ಪುರುಷೋತ್ತಮರವರ ಮಗ ಪ್ರೀಯತೋಷ್ ತಾಲ್ಲೂಕಿಗೆ ಮೊದಲ ಸ್ಥಾನ ಪಡೆದಿದ್ದಾರೆ. ಸಣ್ಣ ಹೋಟೆಲ್ ಉದ್ಯಮಿ ವೆಂಕಟೇಶ್ ಮಗಳು…
ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈರಪ್ಪ ಕುರಿ(55) ಮೃತ ವ್ಯಕ್ತಿಯಾಗಿದ್ದಾರೆ. ವಿಂಡ್ ಪವರ್ ಕಂಪನಿ ನಿರ್ಲಕ್ಷ್ಯದಿಂದಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ ಅಂತ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಮೇಕೆಗಳನ್ನು ಮೇಯಿಸಲು ಹೋದಾಗ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನೆಲಮಂಗಲ: ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ಬಿರುಗಾಳಿ ರಭಸಕ್ಕೆ ಕಬ್ಬಿಣದ ಗೇಟ್ ಮುರಿದು ಬಿದ್ದು ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಯಲ್ಲಮ್ಮ (7) ಮೃತ ಬಾಲಕಿಯಾಗಿದ್ದಾರೆ. ನಿನ್ನೆ ಸಂಜೆ ಮನೆಯ ಅಂಗಳದಲ್ಲಿದ್ದ ಗೇಟ್ ಮೇಲೆ ಹತ್ತಿ ಬಾಲಕಿ ಯಲ್ಲಮ್ಮ ಆಟವಾಡುತ್ತಿದ್ದಳು. ಈ ವೇಳೆ ದಿಢೀರನೆ ಗೇಟ್ ಮುರಿದಿದ್ದು, ಬಾಲಕಿ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಸಂಬಂಧ ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊಡಗು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಓಂಕಾರಾಪ್ಪ ಕೊಲೆ ಆರೋಪಿಯಾಗಿದ್ದರೆ, ಮೀನಾ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್ ಮಾಡಲಾಗಿತ್ತು. ಬಾಲ್ಯವಿವಾಹದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ.…
ತುಮಕೂರು: ಹೇಮಾವತಿ ನದಿ ನೀರನ್ನು ಹೇಮಾವತಿ ಲಿಂಕ್ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಮೂಲಕ, ಮಾಗಡಿ ತಾಲೂಕಿಗೆ ನಡೆಯುತ್ತಿರುವ ಕಾಮಗಾರಿ ಅಲ್ಲಿನ ಇಂಜಿನಿಯರಿಗೆ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ದೂರವಾಣಿ ಮೂಲಕ ಸೂಚನೆ ನೀಡಿದ ಘಟನೆ ನಡೆದಿದೆ. ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ತಕ್ಷಣ ನಿಲ್ಲಿಸುವಂತೆ ಅಲ್ಲಿದ್ದ ಇಂಜಿನಿಯರಿಗೆ ಅವಾಜ್ ಹಾಕಿದರು. ಅಲ್ಲದೆ ತಮ್ಮ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ಸವಾಲು ಹಾಕಿದರು. ಇದೆಲ್ಲವೂ ನಡೆದದ್ದು ಕೆನಾಲ್ ಕಾಮಗಾರಿ ಕುರಿತು ವಿರೋಧ ವ್ಯಕ್ತಪಡಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ. ಅಲ್ಲದೆ ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿ ಎಸ್ ಪು ರ ಗ್ರಾಮದ ಬಳಿ ಕೆಲಸ ಮಾಡದಂತೆ ಹೇಮಾವತಿ ಜಲಾನಯನ ಅಭಿವೃದ್ಧಿ ಇಲಾಖೆ ಇಂಜಿನಿಯರಿಗೆ ಸೂಚನೆ ನೀಡಿದರು. ಇಲಾಖೆಯ ಎಂಡಿಗೆ ನೆನ್ನೆ ದೂರವಾಣಿ ಮೂಲಕ ಕೆಲಸ ನಿಲ್ಲಿಸುವಂತೆ ಸೂಚನೆ ನೀಡಿದ್ದೇನೆ ಎಂದು ಇಂಜಿನಿಯರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು. ಮರ್ಯಾದೆಯಿಂದ ಹೇಳುತ್ತಿದ್ದೇನೆ ತಕ್ಷಣ ಕೆಲಸ ನಿಲ್ಲಿಸು ಇಲ್ಲದಿದ್ದರೆ ನಾನೇ ಬಂದು ಕೆಲಸ ನಿಲ್ಲಿಸುತ್ತೇನೆ ಎಂದು…
ಮೈಸೂರು: ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ, ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್ಯಾಂಕ್ ಪಡೆಯಬೇಕು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ಆಶಿಸಿದರು. ಅವರು ಇಂದು ಮೈಸೂರಿನಲ್ಲಿ ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ…
ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ನಡುವೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮದನ್ ಬಿ. ಲೋಕುರ್, ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶ ಎ.ಪಿ. ಶಾಹ್ ಹಾಗೂ ಹಿರಿಯ ಪತ್ರಕರ್ತ ಎನ್. ರಾಮ್ ಅವರು ಹಾಲಿ ಲೋಕಸಭೆ ಚುನಾವಣೆ ಕುರಿತು ಬಹಿರಂಗ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದಾರೆ. ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಈ ಮೂವರು, ‘‘ದೇಶದಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಭಾರತದ ನಾಗರಿಕರಾಗಿ ನಾವು ನಿಮಗೆ ಈ ಪತ್ರ ಬರೆಯುತ್ತಿದ್ದೇವೆ. ನಾವು ನಂಬುವ ಪಕ್ಷಪಾತ ರಹಿತ ಹಾಗೂ ಪ್ರತಿಯೊಬ್ಬ ನಾಗರಿಕನ ಹಿತದೃಷ್ಟಿಯ ಪ್ರಸ್ತಾವದೊಂದಿಗೆ ನಾವು ನಿಮ್ಮನ್ನು ಸಂಪರ್ಕಿಸಿದ್ದೇವೆ’’ ಎಂದಿದ್ದಾರೆ. ನಾವು ಎರಡೂ ಕಡೆಯಿಂದ ಆರೋಪಗಳು ಹಾಗೂ ಸವಾಲುಗಳನ್ನು ಮಾತ್ರ ಕೇಳಿದ್ದೇವೆ. ಯಾವುದೇ ಅರ್ಥಪೂರ್ಣ ಪ್ರತಿಕ್ರಿಯೆಯನ್ನು ಕೇಳಿಲ್ಲ. ನಮಗೆ ತಿಳಿದಿರುವಂತೆ ಇಂದಿನ ಡಿಜಿಟಲ್ ಜಗತ್ತು ತಪ್ಪು ಮಾಹಿತಿ, ತಪ್ಪು ನಿರೂಪಣೆಯ ಪ್ರವೃತ್ತಿಯನ್ನು ಒಳಗೊಂಡಿದೆ. ಈ…