Author: admin

ರಾಮನಗರ: ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮನಹಳ್ಳಿ ಟೋಲ್ ಬಳಿ KSRTC ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಇಂದು ಬೆ.8:30ಕ್ಕೆ ಕನಕಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಸು ಕಗ್ಗಲೀಪುರ ವ್ಯಾಪ್ತಿಯ ಸೋಮನಹಳ್ಳಿ ಟೋಲ್​ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ಪಲ್ಟಿ ಪರಿಣಾಮ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳಿಗೆ ಕಗ್ಗಲೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ವೈಟ್​ ಫೀಲ್ಡ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪಿಜಿ ಮೇಲಿಂದ ಬಿದ್ದು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗುಲ್ಬರ್ಗ ಮೂಲದ 28 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಗುಲ್ಬರ್ಗದಿಂದ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ ಯುವಕ ಬೆಂಗಳೂರಿನ ಅಂಬೇಡ್ಕರ್​ ನಗರದಲ್ಲಿ ಪಿಜಿಯಲ್ಲಿ ತಂಗಿಕೊಂಡು, ಕೆಲಸಕ್ಕಾಗಿ ಎಲ್ಲಾ ಕಡೆ ಪ್ರಯತ್ನಿಸಿದ್ದ. ಆದರೇ, ಯಾವುದೇ ಪ್ರಯೋಜನ ಸಿಕ್ಕಿರಲಿಲ್ಲ. ಇದರಿಂದ ಬೇಸತ್ತ ಯುವಕ ತಾನು ತಂಗಿದ್ದ ಪಿಜಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವೈಟ್​ ಫೀಲ್ಡ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯ ಶಿರಾ ಪಟ್ಟಣದ ವಾಸವಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ ಎಂಬ ವಿದ್ಯಾರ್ಥಿನಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿ ಹರ್ಷಿತ 625 ಅಂಕಗಳಿಗೆ 624 ಅಂಕಗಳನ್ನು ಪಡೆದಿದ್ದು, ಇವರು ಮಂಜುಳಾ ಮತ್ತು ಮಂಜುನಾಥ್ ದಂಪತಿಯ ಪುತ್ರಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ:ಕ್ಯಾಬಿನ್‌ ಸಿಬ್ಬಂದಿ ಏಕಾಏಕಿ ‘ಸಾಮೂಹಿಕ ಅನಾರೋಗ್ಯ ರಜೆ’ ಹಾಕಿ ಕೆಲಸಕ್ಕೆ ಗೈರಾದ ಹಿನ್ನೆಲೆ 90ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಿಗೆ ಕಾರಣಕರ್ತರು ಎನ್ನಲಾದ ಸುಮಾರು 25 ಕ್ಯಾಬಿನ್‌ ಸಿಬ್ಬಂದಿಗಳನ್ನು ಏರ್‌ ಇಂಡಿಯಾ ಸಂಸ್ಥೆ ವಜಾಗೊಳಿಸಿದೆ ಎಂದು ಏರ್‌ ಲೈನ್‌ ಮೂಲಗಳು ತಿಳಿಸಿವೆ. ಕ್ಯಾಬಿನ್‌ ಸಿಬ್ಬಂದಿಯ ಲಭ್ಯತೆಯಿಲ್ಲದ ಕಾರಣ ಏರ್‌ ಇಂಡಿಯಾ ಸಂಸ್ಥೆ ಕನಿಷ್ಠ 60 ವಿಮಾನ ಯಾನಗಳನ್ನು ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ ಮತ್ತು ಕ್ಯಾಬಿನ್‌ ಸಿಬ್ಬಂದಿಯ ಒಂದು ವಿಭಾಗದಿಂದ ಸಾಮೂಹಿಕ ರಜೆಗಳು ಪ್ರಯಾಣಿಕರಿಗೆ ಅಪಾರ ಅನಾನುಕೂಲತೆಯನ್ನು ಉಂಟುಮಾಡಿದೆ. ಟಾಟಾ ಗ್ರೂಪ್‌ ಒಡೆತನದ ವಿಮಾನಯಾನ ಸಂಸ್ಥೆಯು ಉಳಿದ ಕ್ಯಾಬಿನ್‌ ಸಿಬ್ಬಂದಿಗಳಿಗೆ ಇಂದು ಸಂಜೆ 4 ಗಂಟೆಯೊಳಗೆ ಮತ್ತೆ ಕರ್ತವ್ಯಕ್ಕೆ ಹಾಜರಾಗಬೇಕು ಇಲ್ಲದಿದ್ದರೆ ನಿಮನ್ನು ವಜಾಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಶಿವಮೊಗ್ಗ: ಈ ಚುನಾವಣೆಯಲ್ಲಿ ಸಂಸದ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಂದ ಷಡ್ಯಂತ್ರ ನಡೆದಿದೆ. ವಾಮಾಚಾರ, ಸಭೆ ನಡೆಸಲು ಬಿಡದೆ ಇರುವ ಕೆಲಸ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವೀಡಿಯೋ ಮಾಡಿದ್ದಾರೆ. ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಹೋರಾಟ ಮಾಡುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಡಿಸಿ, ಎಸ್ಪಿಗೆ ನಾನು ದೂರು ನೀಡಿದ್ದೇನೆ. ಈ ಸುಳ್ಳು ಸುದ್ದಿಯಿಂದ ನನಗೆ ಅನೇಕ ವೋಟ್ ಅನ್ಯಾಯ ಆಗಿದೆ. ನನಗೆ ಮತ ನೀಡಲು ಬಂದವರಿಗೆ ಗೊಂದಲವಾಗಿದೆ. ಸುಳ್ಳು ಸುದ್ದಿಯಿಂದ ನನಗೆ ಮತದಾನ ಕಡಿಮೆಯಾಗಿದೆ. ಇದು ರಾಘವೇಂದ್ರ ಅವರ ಕುತಂತ್ರ, ಷಡ್ಯಂತ್ರ. ತಕ್ಷಣ ಸಂಸದ ರಾಘವೇಂದ್ರ ಅವರನ್ನು ಬಂಧಿಸಬೇಕು. ಒಂದು ವಾರ ಗಡುವು ನೀಡುತ್ತೇನೆ. 15 ನೇ ತಾರೀಖಿನೊಳಗೆ ಕ್ರಮ ಕೈಗೊಳ್ಳದೆ ಹೋದರೆ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು, ರಾಘವೇಂದ್ರ…

Read More

ಡೆಹ್ರಾಡೂನ್: ಉತ್ತರಾಖಂಡದ ಕಾಡ್ಗಿಚ್ಚಿಗೆ ಐವರು ಪ್ರಾಣ ಕಳೆದುಕೊಂಡಿದ್ದು, 1,300 ಹೆಕ್ಟೇರ್ ಪ್ರದೇಶಕ್ಕೆ ಹಾನಿಯಾಗಿದೆ ಎಂದು ಅರಣ್ಯ ಪಡೆ ಮುಖ್ಯಸ್ಥ ಧನಂಜಯ್ ಮೋಹನ್ ತಿಳಿಸಿದ್ದಾರೆ. ಬೆಂಕಿ ನಿಯಂತ್ರಣದಲ್ಲಿದೆ ಎಂದು ಅವರು ದೃಢಪಡಿಸಿದರು. ಸದ್ಯ ಕಾಡ್ಗಿಚ್ಚಿನ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ಇರುವ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ತಲುಪುತ್ತಿದ್ದಾರೆ. ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಈವರೆಗೆ 388 ಪ್ರಕರಣಗಳು ದಾಖಲಾಗಿದ್ದು, 60 ಪ್ರಕರಣಗಳನ್ನು ಹೆಸರಿಸಲಾಗಿದೆ. 5 ಜನರು ಪ್ರಾಣ ಕಳೆದುಕೊಂಡಿದ್ದಾರೆ, ಅವರಲ್ಲಿ 4 ಜನರು ನೇಪಾಳ ಮೂಲದವರು ಮತ್ತು ಅಲ್ಮೋರಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನೊಬ್ಬರು ಪೌರಿಯಲ್ಲಿ ಪ್ರಾಣ ಕಳೆದುಕೊಂಡ ವೃದ್ಧ ಮಹಿಳೆ” ಎಂದು ಧನಂಜಯ್ ಮೋಹನ್ ತಿಳಿಸಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಕಾಡ್ಗಿಚ್ಚು ತಡೆಗಟ್ಟಲು ತೆಗೆದುಕೊಳ್ಳುತ್ತಿರುವ ಕ್ರಮಗಳು ಮತ್ತು ಮುಂಬರುವ ಮಳೆಗಾಲಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಸಂಚಾರಿ ಪೊಲೀಸರು ಬೈಕ್‌ ಸ್ಟಂಟ್ ಮಾಡುವವರ ಮೇಲೆ ಕಣ್ಣಿಡಲು ಹೊಸ ಪ್ರಯೋಗ ಮಾಡುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 121 ದಿನದಲ್ಲಿ 191 ಬೈಕ್‌ ವ್ಹೀಲಿಂಗ್ ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 27 ಅಪ್ರಾಪ್ತರು ಸೇರಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಶೀಘ್ರವೇ ಆನ್‌ ಲೈನ್ ಮೂಲಕವೇ ಕಾರ್ಯಾಚರಣೆ ಮಾಡಲಿದ್ದಾರೆ. ಈ ಅಭಿಯಾನದ ಭಾಗವಾಗಿ ಜನರು ತಮ್ಮ ರಸ್ತೆಯಲ್ಲಿ ಬೈಕ್‌ ವ್ಹೀಲಿಂಗ್ ಮಾಡುವ, ಬೈಕ್ ಸ್ಟಂಟ್ ಮಾಡುವವರ ಕುರಿತು ದೂರು ನೀಡಬಹುದು. ಪೊಲೀಸರು ಇಂತಹ ಅಪಾಯಕಾರಿ ಸ್ಟಂಟ್ ಮಾಡುವವರನ್ನು ಪತ್ತೆ ಹಚ್ಚಿ ಕೇಸು ದಾಖಲು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಬೈಕ್‌ ವ್ಹೀಲಿಂಗ್, ಸ್ಟಂಟ್ ಮಾಡುವವರು ಅವುಗಳ ಚಿತ್ರ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ ಲೋಡ್ ಮಾಡುತ್ತಾರೆ. ಆದ್ದರಿಂದ ಸಂಚಾರಿ ಪೊಲೀಸರ ತಂಡ ವಿಶೇಷವಾಗಿ ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  …

Read More

ನೆಲಮಂಗಲ: ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ಎಸ್ ​ಎಸ್ ​ಎಲ್ ​ಸಿ ಪರೀಕ್ಷೆ ಫಲಿತಾಂಶದಲ್ಲಿ ಫೇಲ್ ಆಗುವ ಭಯದಿಂದ ವಿಧ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್​ ಗೌಡ(16) ನಾಪತ್ತೆಯಾಗಿರುವ ವಿಧ್ಯಾರ್ಥಿಯಾಗಿದ್ದಾನೆ. ಈ ವಿಧ್ಯಾರ್ಥಿಯು ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದು, ಮಗನ ಫೋಟೋ ಹಿಡಿದು ಪೋಷಕರು ಹುಡುಕಾಟ ನಡೆಸುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಇಂದು 2023-24ನೇ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದ್ದು, ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಎಸ್ಎಸ್ಎಲ್ ಸಿ ಫಲಿತಾಂಶ ಟಾಪರ್ ಅಂಕಿತಾ ಕೊನ್ನೂರು ಪಿಯುಸಿಯಲ್ಲಿ ವಿಜ್ಞಾನ ವಿಭಾಗ ತೆಗೆದುಕೊಂಡು, ಭವಿಷ್ಯದಲ್ಲಿ ಐಎಎಸ್ ಮಾಡುವ ಕನಸು ಹೊಂದಿದ್ದಾರಂತೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರವಾಗಿ ಜೆಡಿಎಸ್ ಡಿ.ಕೆ.ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡುತ್ತಿದೆ. ಈ ನಡುವೆ ಶಾಸಕ ಎಸ್.ಆರ್. ಶ್ರೀನಿವಾಸ್ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಯಾವ ಆ್ಯಂಗಲ್ ನಲ್ಲಿ ಹೇಳ್ತಾರೆ. ಜನತಾದಳದ ಮೇಲೆ ಬಂದಿರುವ ಆಪಾದನೆಯಿಂದ ಪಾರಾಗಲು ಈ ರೀತಿ ಡ್ರಾಮ ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿದರು. ದೇವರಾಜೇಗೌಡರು ಆರು ತಿಂಗಳ ಹಿಂದೆಯೇ ಕುಮಾರಸ್ವಾಮಿ ಹಾಗೂ ದೇವೇಗೌಡರನ್ನ ಭೇಟಿ ಮಾಡಿದ್ದಾರೆ. ಇನ್ನು ಅಮಿತ್ ಷಾ ಗೆ ಸೇರಿ ಎಲ್ಲರಿಗೂ ಕಳಿಸಿರುವುದಾಗಿ ಅವರೇ ಹೇಳಿದ್ದಾರೆ. ಅದೇ ಮನುಷ್ಯ ಈಗ ಡಿ.ಕೆ. ಶಿವಕುಮಾರ್ ಹೆಸರು ಹೇಳ್ತಿದ್ದಾರೆ ಎಂದರು. ಕೇಸ್ ನ ಡೈವರ್ಟ್ ಮಾಡೋಕೆ ಇವರು ಮಾಡುತ್ತಿರುವ ನಾಟಕ ಇದಾಗಿದ್ದು, ಕುಮಾರಸ್ವಾಮಿ ಸೃಷ್ಟಿ ಮಾಡಿರುವ ಬಯಲು ನಾಟಕ ಎಂದರು. ಕುಮಾರಸ್ವಾಮಿಗೆ ಏನಾದರೂ ಮಾನ ಮರ್ಯಾದೆ ಇದ್ದರೇ, ಅವರ ಮಗ ಮಾಡಿರುವ ಕೃತ್ಯ ಖಂಡಿಸಿ ಪಕ್ಷದಿಂದ ಅಮಾನತು…

Read More