Subscribe to Updates
Get the latest creative news from FooBar about art, design and business.
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
- ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
- ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
Author: admin
ನವದೆಹಲಿ: ಅದಾನಿ ಮತ್ತು ಅಂಬಾನಿಯಿಂದ ಕಾಂಗ್ರೆಸ್ ಹಣ ಪಡೆದಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಈ ಬಗ್ಗೆ ಸಿಬಿಐ ಅಥವಾ ಇಡಿ ತನಿಖೆಯನ್ನು ಪ್ರಾರಂಭಿಸುವಂತೆ ಪ್ರಧಾನಿ ಮೋದಿಗೆ ಸವಾಲು ಹಾಕಿದ್ದಾರೆ. ಉದ್ಯಮಿಗಳು ಟೆಂಪೋದಲ್ಲಿ ಹಣವನ್ನು ಕಳುಹಿಸುವ ಬಗ್ಗೆ ಪ್ರಧಾನಿ ಮೋದಿಯವರ ಹೇಳಿಕೆಗಳು ಅವರ ವೈಯಕ್ತಿಕ ಅನುಭವವನ್ನು ಆಧರಿಸಿವೆಯೇ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು. “ಬಿಜೆಪಿಯ ಭ್ರಷ್ಟಾಚಾರದ ವೇಗದ ಚಾಲಕ ಮತ್ತು ಸಹಾಯಕ ಯಾರು ಎಂದು ದೇಶಕ್ಕೆ ತಿಳಿದಿದೆ” ಎಂದು ಅವರು ಹಿಂದಿಯಲ್ಲಿ ಪೋಸ್ಟ್ ಮಾಡಿ ಪ್ರಧಾನಿ ಮೋದಿಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮೊದಲ ದಿನ ಊಟ ಹಾಗೂ ನಿದ್ದೆಯಿಲ್ಲದೆ ಕಳೆದಿದ್ದಾರೆ. ಸೆಂಟ್ರಲ್ ಜೈಲಿನ ಕ್ವಾರಂಟೈನ್ ಸೆಲ್ ನಲ್ಲಿ ಒಂದು ರಾತ್ರಿ ಕಾಲ ಕಳೆದಿರುವ ರೇವಣ್ಣ, ಕಳೆದ ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್, ಸಾಂಬಾರ್ ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. ರಾತ್ರಿ ತಡವಾಗಿ ಊಟ ಮಾಡಿ ಮೌನಕ್ಕೆ ಶರಣಾಗಿದ್ದರು. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಏಕಾಂಗಿಯಾಗಿ ತಮಗೆ ಬಂದೊಗಿದ ಪರಿಸ್ಥಿತಿಯ ಬಗ್ಗೆ ಸಂಕಟ ಅನುಭಸುತ್ತಿದ್ದರು. ಸುಮಾರು ಹೊತ್ತಿನ ನಂತರ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದರು ಎಂದು ಜೈಲಿನ ಮೂಲಗಳು ತಿಳಿಸಿವೆ. ರೇವಣ್ಣ ಆರೋಗ್ಯ ಸರಿ ಇಲ್ಲದ ಕಾರಣ ರಾತ್ರಿ ಜೈಲಾಧಿ ಕಾರಿಗಳು ಅವರ ಮೇಲೆ ಹೆಚ್ಚು ನಿಗಾ ಇಟ್ಟಿದ್ದರು. ರೇವಣ್ಣ ಇದ್ದ ಕೊಠಡಿ ಬಳಿ ಓರ್ವ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ. ನಂತರ ಎದ್ದು…
ಬೆಂಗಳೂರು: 2023–24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ. 73.4 ಮಂದಿ ಉತ್ತೀರ್ಣರಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದ್ದರೆ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ. ಉಡುಪಿ ಜಿಲ್ಲೆಯಲ್ಲಿ ಶೇ 94ರ ಫಲಿತಾಂಶ ದಾಖಲಾಗಿದೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಶೇ 92.12, ಶಿವಮೊಗ್ಗ ಜಿಲ್ಲೆ ಶೇ 88.67, ಕೊಡಗು ಜಿಲ್ಲೆ ಶೇ 88.67 ರ ಫಲಿತಾಂಶ ದಾಖಲಿಸಿವೆ. ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ 77.09%, ಹಾವೇರಿ 75.85%, ತುಮಕೂರು 75.16%, ಗದಗ…
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಚಿರತೆಗಳ ಹಾವಳಿ ಹೆಚ್ಚುತ್ತಿದೆ. ಆಹಾರ ಅರಸಿ ಚಿರತೆಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕನಾಯಕನಹಳ್ಳಿ ತಾಲೂಕಿನ ತರಬೇನಹಳ್ಳಿಯ ತೋಟವೊಂದರಲ್ಲಿ ಏಕಕಾಲಕ್ಕೆ ಮೂರು ಚಿರತೆಗಳು ಪ್ರತ್ಯಕ್ಷವಾಗಿದ್ದು, ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನೆನ್ನೆ ಸಂಜೆ ಸುಮಾರು 7 ಗಂಟೆ ಸಂದರ್ಭದಲ್ಲಿ ಚಿರತೆಗಳು ಕಾಣಿಸಿಕೊಂಡಿವೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಉತ್ತರ ಪ್ರದೇಶ: ಪಾನಮತ್ತ ಮಹಿಳೆಯೊಬ್ಬರು ನಡುರಸ್ತೆಯಲ್ಲೇ ಜಗಳ ಮಾಡಿಕೊಂಡು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ಕಾನ್ಪುರದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ನಡುರಸ್ತೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಯನ್ನು, ಮಹಿಳೆಯನ್ನು ನಿಯಂತ್ರಿಸಲು ಪೊಲೀಸರು ಹೈರಾಣಾದರು. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪೊಲೀಸರು ಮಹಿಳೆಯನ್ನು ಸಮಾಧಾನ ಪಡಿಸಲು ಪ್ರಯತ್ನ ಮಾಡಿದರೂ ಸಹ, ಮಹಿಳೆ ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ಆರಂಭಿಸಿದ್ದರು. ಪುರುಷ ಪೊಲೀಸ್ ಅಧಿಕಾರಿಗಳ ಮುಂದೆ ಮಹಿಳೆ ತನ್ನ ಬಟ್ಟೆಗಳನ್ನು ತೆಗೆದು ಪೊಲೀಸ್ ಸಿಬ್ಬಂದಿಯನ್ನು ಬೆದರಿಸಲು ಪ್ರಯತ್ನಿಸಿದಳು. ಇದರಿಂದ ಹಿಂಜರಿದ ಪೊಲೀಸರು ಮಹಿಳಾ ಕಾನ್ ಸ್ಟೇಬಲ್ ಗಳನ್ನು ಕರೆಸಿದರು. ಬಳಿಕ ಮಹಿಳೆಗೆ ನೀರು ಕೊಟ್ಟು ಆಕೆಯನ್ನು ಪೊಲೀಸ್ ಸ್ಟೇಷನ್ ಗೆ ಕರೆದೊಯ್ದು ಸಂಬಂಧಿಕರಿಗೆ ಮಾಹಿತಿ ನೀಡಿ ಕಳುಹಿಸಿಕೊಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಭಾರತೀಯ ವಿದ್ಯಾರ್ಥಿಯೊಬ್ಬ ಮೇ 2ರಿಂದ ಚಿಕಾಗೋದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಆತನೊಂದಿಗೆ ಸಂಪರ್ಕವನ್ನು ಪತ್ತೆಹಚ್ಚಲು / ಮರುಸ್ಥಾಪಿಸಲು ಪೊಲೀಸರು ಮತ್ತು ಭಾರತೀಯ ವಲಸಿಗರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಚಿಕಾಗೋದಲ್ಲಿನ ಭಾರತೀಯ ಕಾನ್ಸುಲೇಟ್ ಜನರಲ್ ಹೇಳಿದೆ. ಭಾರತೀಯ ವಿದ್ಯಾರ್ಥಿ ರೂಪೇಶ್ ಚಂದ್ರ ಚಿಂತಾಕಿಂಡಿ ಮೇ 2 ರಿಂದ ಸಂಪರ್ಕದಲ್ಲಿಲ್ಲ ಎಂದು ತಿಳಿದು ಕಾನ್ಸುಲೇಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ರೂಪೇಶ್ ಅವರೊಂದಿಗೆ ಸಂಪರ್ಕವನ್ನು ಪತ್ತೆಹಚ್ಚಲು / ಮರುಸ್ಥಾಪಿಸಲು ಕಾನ್ಸುಲೇಟ್ ಪೊಲೀಸರು ಮತ್ತು ಭಾರತೀಯ ವಲಸಿಗರೊಂದಿಗೆ ಸಂಪರ್ಕದಲ್ಲಿದೆ” ಎಂದು ಚಿಕಾಗೋದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ. ರೂಪೇಶ್ ಚಿಂತಾಕಿಂಡಿ ಪತ್ತೆಯಾದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಚಿಕಾಗೋ ಪೊಲೀಸರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಎನ್ ಶೆರಿಡನ್ ರಸ್ತೆಯ 4300 ಬ್ಲಾಕ್ನಿಂದ ಅವರು ಕಾಣೆಯಾಗಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.…
ಮುಂಬೈ: ಮಹಾರಾಷ್ಟ್ರದ 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ ಸೇವಿಸಿ ತೀವ್ರ ಆಸ್ವಸ್ಥಗೊಂಡ ಸಾವನ್ನಪ್ಪಿದ ಘಟನೆ ನಡೆದಿದೆ. ಇದಲ್ಲದೇ ಆತನೊಂದಿಗೆ ಶವರ್ಮಾ ತಿಂದಿದ್ದ ಐವರು ತೀವ್ರ ಅಸ್ವಸ್ಥರಾಗಿದ್ದಾರೆ. ಪ್ರಥಮೇಶ್ ಭೋಕ್ಸೆ(19) ಮೃತ ಯುವಕನಾಗಿದ್ದಾನೆ. ಹಾಳಾದ ಕೋಳಿ ಬಳಸಿದ್ದಕ್ಕಾಗಿ ಚಿಕನ್ ಷವರ್ಮಾ ಅಂಗಡಿ ನಡೆಸುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಡಿಸಿಪಿ ರಜಪೂತ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲೆಯ ತಿಪಟೂರು ತಾಲ್ಲೂಕಿನ ಅರಳಗುಪ್ಪೆಯಲ್ಲಿ ಸಾಲಬಾಧೆಯಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಭಾಗ್ಯಮ್ಮ(50) ಮೃತರಾಗಿದ್ದಾರೆ. ಭಾಗ್ಯಮ್ಮ ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ 5 ಲಕ್ಷ ಸಾಲ ಪಡೆದಿದ್ದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತೀವ್ರ ಬರಗಾಲ ಹಿನ್ನೆಲೆಯಲ್ಲಿ ಹಣ ಕಟ್ಟಲು ಸಾಧ್ಯವಾಗದೇ ಅವರು ಆತ್ಮಹತ್ಯೆ ದಾರಿ ತುಳಿದಿದ್ದಾರೆ. ಈ ಕುರಿತು ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹಾವೇರಿ: ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಶುರುವಾದ ಜಗಳ ಸಹೋದರನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ನಾಗರಾಜ ಕೋಟಿಗಾಳರ(36) ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಆಸ್ತಿ ಮಾರಾಟದ ವಿಚಾರಕ್ಕೆ ಅಣ್ಣ ತಮ್ಮಂದಿರ ನಡುವೆ ಜಗಳವಾಗಿತ್ತು. ಈ ಘಟನೆಯಿಂದ ನಾಗರಾಜ ಬೇಸತ್ತಿದ್ದು, ಸಾಲ ತೀರಿಸಲಾಗದೆ ಸಾಲದ ಸುಳಿಗೆ ಸಿಲುಕಿದ್ದ ನಾಗರಾಜ ನೇಣು ಹಾಕಿಕೊಂಡಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ರಾಣೆಬೇನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆಯುವಂತೆ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ? ಎಂದು ಪ್ರಶ್ನಿಸಿದ್ದಾರೆ. ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು? ಎಂದು ಕೇಳಿದ್ದಾರೆ. ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ…