Subscribe to Updates
Get the latest creative news from FooBar about art, design and business.
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
- ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
- ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
- ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
- ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
- ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
Author: admin
ಉತ್ತರಪ್ರದೇಶ: ಪ್ರೇಮಿಯೊಂದಿಗೆ ಜಗಳವಾಡಿದ ಮಹಿಳೆಯೊಬ್ಬರು, ನಾನು ರೈಲಿನಡಿ ಬಿದ್ದು ಸಾಯುತ್ತೇನೆ ಎಂದು ಪ್ರಿಯಕರನನ್ನು ಹೆದರಿಸಲು ಹೋಗಿ, ನಿಜವಾಗಲು ಆಕಸ್ಮಿಕವಾಗಿ ರೈಲಿನಡಿ ಸಿಲುಕಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉತ್ತರ ಪ್ರದೇಶದಲ್ಲಿನ ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ನಡೆದಿದೆ. ಗೆಳೆಯನೊಂದಿದೆ ಜಗಳವಾಡಿದ ಮಹಿಳೆಯೊಬ್ಬರು, ಸಿಟ್ಟಿನಿಂದ ರೈಲ್ವೆ ಹಳಿಗೆ ಹಾರಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸಾವನ್ನಪ್ಪಿದ ಮಹಿಳೆಯನ್ನು ಲೋಹಾ ಮಂಡಿಯ ಭಾರತಿ ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಭಾರತಿ ಎಂಬವರಿಗೆ ಪೂನಂ ಮತ್ತು ಕೃಷ್ಣ ಎಂಬ ಇಬ್ಬರು ಮಕ್ಕಳಿದ್ದು, ಕೆಲ ವರ್ಷಗಳ ಹಿಂದೆ ಆಕೆಯ ಪತಿ ಧರ್ಮೇಂದ ಮೃತಪಟ್ಟಿದ್ದರು. ಕಳೆದ ಎರಡು ವರ್ಷಗಳಿಂದ ಭಾರತಿ ತನ್ನ ಪ್ರೇಮಿ ಕಿಶೋರ್ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದರು. ಕುಡಿತದ ವಿಷಯದಲ್ಲಿ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಆಕೆ ರೈಲ್ವೆ ನಿಲ್ದಾಣದ ಬಳಿ ಬಂದು ತಾನು ಸಾಯುವುದಾಗಿ ಪ್ರಿಯಕರನನ್ನು ಹೆದರಿಸುತ್ತಾರೆ. ನಂತರ ರೈಲ್ವೆ ಹಳಿಯ ಮೇಲೆ ಜಿಗಿಯಲು ಹೋಗಿದ್ದು, ಆಕಸ್ಮಿಕವಾಗಿ ಬಿದ್ದಿದ್ದಾರೆ. ಅಷ್ಟರಲ್ಲಿ ವೇಗವಾಗಿ ಬಂದ…
ಬಾಗಲಕೋಟೆ: ಸಿಲಿಂಡರ್ ಸ್ಫೋಟದಿಂದ ಬಡಂಗ್ ಫ್ಯಾಕ್ಟರಿ ಧ್ವಂಸವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರದ ಕಂಟಿ ಬಸವೇಶ್ವರ ಹತ್ತಿರ ನಡೆದಿದೆ. ಸಿಲಿಂಡರ್ ಸ್ಫೋಟದಿಂದ ಮಧ್ಯರಾತ್ರಿ 1 ಗಂಟೆಗೆ ಗೋಕಾಕ್ ಬಡಂಗ ಫ್ಯಾಕ್ಟರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಆರಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟರು. ಗೋಕಾಕ್ ಬಡಂಗ್ ಫ್ಯಾಕ್ಟರಿ ಮಹಮ್ಮದ್ ಹುಸೇನ್ ಸಾಬ್ ಗೋಕಾಕ್ ರವರಿಗೆ ಸೇರಿದ್ದು ಎನ್ನಲಾಗಿದೆ. ಸಿಲಿಂಡರ್ ಸ್ಫೋಟದ ಅಗ್ನಿ ಅವಘಡಕ್ಕೆ ಸುಮಾರು 50 ಲಕ್ಷ ಬೆಲೆಬಾಳುವ ವಸ್ತುಗಳು ಹಾನಿಗೀಡಾಗಿವೆ. ಗೋಕಾಕ್ ಬಡಂಗ ಫ್ಯಾಕ್ಟರಿಯಲ್ಲಿ ಕಾರ್ಮಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಲಿಂಡರ್ ಸ್ಫೋಟ ಅಗ್ನಿ ಅವಘಡ ಕುರಿತು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಅಗ್ನಿ ದುರಂತಕ್ಕೆ ಮತ್ತೇನು ಕಾರಣ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರು: ತೀವ್ರ ಬರಗಾಲದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಚಟುವಟಿಕೆ ಮಾಡಲು ಬಿತ್ತನೆ ಬೀಜ, ರಸಗೊಬ್ಬರ ಉಚಿತವಾಗಿ ನೀಡಬೇಕು. ಆರ್ ಟಿ ಸಿ ಗೆ ಆಧಾರ್ ಲಿಂಕ್ ಮಾಡುವುದನ್ನು ಸರಳೀಕರಣಗೊಳಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಮೈಸೂರು ತಾಲೂಕಿನ ರೈತರು ಬರಗಾಲ ಸಂಕಷ್ಟದಲ್ಲಿದ್ದು ಕೃಷಿ ಚಟುವಟಿಕೆ ನಡೆಸಲು ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದಾರೆ. ಬರ ಪರಿಹಾರದ ಹಣ ಎಲ್ಲಾ ರೈತರಿಗೂ ಸಿಗುವಂತಾದರೆ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಹೆಚ್ಚಿನ ಅನುಕೂಲವಾಗುತ್ತದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ರೈತರ ಹಿತ ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಸರ್ಕಾರ ಘೋಷಣೆ ಮಾಡಿದ ಕಬ್ಬಿನ ಹೆಚ್ಚುವರಿ ದರ ಟನ್ ಕಬ್ಬಿಗೆ 150 /- ರೂ ಬಣ್ಣಾರಿ ಸಕ್ಕರೆ ಕಾರ್ಖಾನೆ ರೈತರಿಗೆ ಇನ್ನೂ ಪಾವತಿ ಮಾಡಿಲ್ಲ. ಈ ಬಗ್ಗೆ ತಾಲೂಕಿನ ಕಬ್ಬು ಬೆಳೆಗಾರ ರೈತರಿಗೆ ಹಣ ಕೊಡಿಸುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಬೇಕು. ಇತ್ತೀಚೆಗೆ ಭಾರೀ ಮಳೆ ಗಾಳಿಯಿಂದ ತಾಲೂಕಿನ ರೈತರ ಬಾಳೆ, ಕಬ್ಬು ಮಾವು ಮತ್ತಿತರ ಬೆಳೆಗಳು…
ನಟ ರವಿಚಂದ್ರನ್ 63ನೇ ವರ್ಷದ ಹುಟ್ಟು ಹಬ್ಬವನ್ನು ತಮ್ಮ ಅಭಿಮಾನಿಗಳ ಜೊತೆಗೆ ಇಂದು ಆಚರಿಸಿಕೊಂಡರು. ರವೀಚಂದ್ರನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರಿನ ರಾಜಾಜಿನಗರದಲ್ಲಿರುವ ಅವರ ಮನೆಯ ಎದುರು ಫ್ಯಾನ್ಸ್ ನೆರೆದಿದ್ದು, ಫ್ಯಾನ್ಸ್ ಜೊತೆ ಕೇಕ್ ಕತ್ತರಿಸಿ ಅವರು ಹುಟ್ಟು ಹಬ್ಬ ಆಚರಿಸಿದರು. ಇದೇ ವೇಳೆ ಅಭಿಮಾನಿಗಳು ತಂದ ಉಡುಗೊರೆಗಳನ್ನು ಸ್ವೀಕರಿಸಿದ್ದಾರೆ. ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಪ್ರೇಮಲೋಕ 2’ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಪ್ರೇಮಲೋಕ ಸೀಕ್ವೆಲ್ ಗೆ ಟ್ರೇಲರ್ ರೆಡಿ ಇದೆ. ಗಜಿಬಿಜಿ ಆಗೋದು ಬೇಡ ಅಂತ ಇಂದು ಲಾಂಚ್ ಮಾಡಿಲ್ಲ. ಒಂದು ವಾರದಲ್ಲಿ ದೊಡ್ಡ ನ್ಯೂಸ್ ಕೊಡ್ತೀನಿ. ನಾನು ಹಾಗೂ ನನ್ನ ಇಬ್ಬರು ಮಕ್ಕಳು ಈ ಚಿತ್ರದಲ್ಲಿ ಇದ್ದೇವೆ. ಪ್ರೇಮಲೋಕ ಸಿನಿಮಾನ ಅಂದು ಒಂದು ರೂಪಾಯಿ ಕೊಟ್ಟು ನೋಡಿದ್ರು. ಈಗ 2 ಸಾವಿರ ಕೊಟ್ಟು ನೋಡುತ್ತಾರೆ ಎಂದು ರವಿಚಂದ್ರನ್ ಹೇಳಿದರು. ಇತ್ತೀಚೆಗೆ ಜನರು ಥಿಯೇಟರ್ ಗೆ ಬರುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಒಳ್ಳೆಯ…
ಇತ್ತೀಚಿನ ದಿನಗಳಲ್ಲಿ ಯಾವುದೇ ಶುಭ ಸಂದರ್ಭದಲ್ಲೂ ಕೇಕ್ ಕಟ್ ಮಾಡಿಸೋದು ಕಾಮನ್ ಆಗಿ ಬಿಟ್ಟಿದೆ. ಇದಲ್ಲದೇ ಕೇಕ್ ಕತ್ತರಿಸುವ ಮೊದಲು ಕೇಕ್ ಮೇಲಿ ಇಟ್ಟಿರುವ ಕ್ಯಾಂಡಲ್ ಅನ್ನು ಹಚ್ಚುತ್ತೇವೆ. ಇವುಗಳನ್ನು ಸ್ಪಾರ್ಕ್ಲಿಂಗ್ ಕ್ಯಾಂಡಲ್ಸ್ ಎಂದು ಕರೆಯಲಾಗುತ್ತದೆ. ಈ ಕ್ಯಾಂಡಲ್ಸ್ ಆರೋಗ್ಯಕ್ಕೆ ತುಂಬಾ ಹಾನಿಕಾರಕ ಎಂಬ ಸಂದೇಶವುಳ್ಳ ವೀಡಿಯೋಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವೀಡಿಯೋವನ್ನು ‘ಅಶು ಘಾಯ್’ ಹೆಸರಿನ ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಹಂಚಿಕೊಳ್ಳಲಾಗಿದೆ. ಈ ಭಯಾನಕ ಸಂಗತಿ ತಿಳಿದ್ರೆ ಇನ್ಮುಂದೆ ನೀವು ಕೇಕ್ ಮೇಲೆ ಸ್ಪಾರ್ಕ್ಲಿಂಗ್ ಕ್ಯಾಂಡಲ್ಸ್ ಇಡುವುದೇ ಇಲ್ಲ. ಏನಿದು ವಿಷಯ ಹೇಳ್ತೀವಿ. ಸುದ್ದಿ ಪೂರ್ತಿ ಓದಿ. ವೈರಲ್ ಆಗಿರುವ ವೀಡಿಯೋದಲ್ಲಿ ಬಿಳಿ ಕಾಗದದ ಮೇಲೆ ಸ್ಪಾರ್ಕ್ಲಿಂಗ್ ಮೇಣದಬತ್ತಿಯನ್ನು ಬೆಳಗಿಸಲಾಗುತ್ತದೆ. ಈ ಕ್ಯಾಂಡಲ್ಸ್ ಕಬ್ಬಿಣ, ತಾಮ್ರ, ಸತು, ಅಲ್ಯೂಮಿನಿಯಂ ಮತ್ತು ಮೆಗ್ನೀಸಿಯಮ್ನಂತಹ ರಾಸಾಯನಿಕ ಅಂಶಗಳನ್ನು ಹೊಂದಿರುತ್ತವೆ. ಈ ಅಂಶಗಳು ಆಕ್ಸೈಡ್ ಮತ್ತು ಕಾರ್ಬೋನೇಟ್ ಗಳಾಗಿ ಪರಿವರ್ತನೆಗೊಂಡು ಕ್ಯಾಂಡಲ್ಸ್ ನಿಂದ ಸ್ಪಾರ್ಕ್ ಹೊರಬರುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕ. ಪ್ರಯೋಗದ…
ಕೋಲ್ಕತ್ತಾ: ರೆಮಲ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಗೆ ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ. ಹತ್ತಾರು ಜನರು ನಾಪತ್ತೆಯಾಗಿದ್ದಾರೆ. ಮಳೆಯಿಂದ ಮನೆಗಳು ಧ್ವಂಸಗೊಂಡು ವಿದ್ಯುತ್ ತಂತಿಗಳು ನೆಲಕ್ಕುರುಳಿವೆ. ನೂರಾರು ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದೆ. ಮಿಜೋರಾಂನಲ್ಲಿ ಅತಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ. ರೆಮಲ್ ಚಂಡಮಾರುತವು ಮಿಜೋರಾಂನ ರಾಜಧಾನಿ ಐಜ್ವಾಲ್ ನ ಮೆಲ್ತಮ್, ಹ್ಲಿಮೆನ್, ಫಾಲ್ಕಾವ್ನ್ ಮತ್ತು ಸೇಲಂ ವೆಂಗ್ ಪ್ರದೇಶಗಳಲ್ಲಿ 27 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪರಿಹಾರ ತಂಡಗಳು ಇದುವರೆಗೆ 27 ಮಂದಿಯ ಮೃತದೇಹಗಳನ್ನು ಹೊರತೆಗೆದಿದ್ದು, ನಗರದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಲಾಲ್ದುಹೋಮ ಅವರು, ಮೃತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್ಡಿಆರ್ಎಫ್) 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಸ್ಸಾಂನಲ್ಲಿ ಶಾಲಾ ಬಸ್ ಮೇಲೆ ಬಿದ್ದ ಮರ ಚಂಡಮಾರುತದ ನಂತರ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಅಸ್ಸಾಂನಲ್ಲಿ…
ವೇಗವಾಗಿ ಚಲಿಸುತ್ತಿದ್ದ ಬಸ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 28 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ಅಪಘಾತದಲ್ಲಿ ಕನಿಷ್ಠ 28 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಸುಮಾರು 22 ಜನರಿಗೆ ಗಾಯಗಳಾಗಿದ್ದು, ಅವರನ್ನು ಬಾಸಿಮಾದ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಟರ್ಬತ್ ನಿಂದ ಕ್ವೆಟ್ಟಾಗೆ ತೆರಳುತ್ತಿದ್ದ ಬಸ್, ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಿಂದ ಸುಮಾರು 700 ಕಿಲೋಮೀಟರ್ ದೂರದಲ್ಲಿರುವ ವಾಶುಕ್ ಪಟ್ಟಣದ ಸಮೀಪ ಕಂದಕಕ್ಕೆ ಬಿದ್ದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ. ಸಾವನ್ನಪ್ಪಿದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಪ್ರಯಾಣಿಕರ ಬಸ್ ನ ಟೈರ್ ಒಡೆದ ನಂತರ ಈ ಅಪಘಾತ ಸಂಭವಿಸಿದೆ ಎಂದು ರಕ್ಷಣಾ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಅಪಘಾತಕ್ಕೆ ಚಾಲಕನ ಅತಿಯಾದ ವೇಗವೇ ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖಾ ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಶ್ರೀಕಿಯನ್ನು ಅಕ್ರಮವಾಗಿ ಬಂಧಿಸಿ ಕ್ರಿಪ್ಟೊ ವ್ಯಾಲೆಟ್ ನಿಂದ ಹಣ ಕಬಳಿಸಿದ ಆರೋಪದಲ್ಲಿ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಇನ್ ಸ್ಪೆಕ್ಟರ್ ಬಂಧನವಾಗಿದೆ. ಚಂದ್ರಾಧರ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಇದೇ ಪ್ರಕರಣದಲ್ಲಿ ಇನ್ಸ್ಪೆಕ್ಟರ್ಗಳಾದ ಪ್ರಶಾಂತ್ ಬಾಬು, ಲಕ್ಷ್ಮೀಕಾಂತಯ್ಯ ಹಾಗೂ ಸೈಬರ್ ಎಕ್ಸ್ ಪರ್ಟ್ ಸಂತೋಷ್ ಎಂಬುವವನ್ನು ಈ ಹಿಂದೆ ಬಂಧಿಸಲಾಗಿದೆ. ಇನ್ನು ಆರೋಪಿಗಳನ್ನು ಅಕ್ರಮವಾಗಿ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್ ಗಳ ವರ್ಗಾವಣೆ ಮತ್ತು ಪಾಸ್ ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈಎಸ್ ಪಿ ಶ್ರೀಧರ್ ಕೆ. ಪೂಜಾರ್ ಅವರ ವಿರುದ್ಧ ಘೋಷಿತ ಆರೋಪಿ ಆದೇಶವನ್ನು ಮೇ 2ರಂದು ಹೈಕೋರ್ಟ್ ರದ್ದುಪಡಿಸಿತ್ತು. 2020ರಲ್ಲಿ ಕೆಂಪೇಗೌಡ ನಗರ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಆರೋಪಿ ಸುಜಯ್ ಎಂಬಾತನನ್ನು ಬಂಧಿಸಿದ್ದರು. ಈತ ಡಾರ್ಕ್ ನೆಟ್ ನಲ್ಲಿ ಬಿಟ್ ಕಾಯಿನ್ ಮೂಲಕ ಡ್ರಗ್ಸ್ ಖರೀದಿ ಮಾಡಿದ್ದ ಮಾಹಿತಿ ಪಡೆದು ಜಾಲಾಡಿದಾಗ ಬಿಟ್ ಕಾಯಿನ್ ರೂವಾರಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿ ಸಿಕ್ಕಿಬಿದ್ದಿದ್ದ.…
“ಇಂಡಿ ತಾಲ್ಲೂಕಿನ ಬಬಲಾದ ಸಸ್ಯಕ್ಷೇತ್ರದಿಂದ ಸಾಮಾಜಿಕ ವಲಯ ಅರಣ್ಯ ಇಲಾಖೆಯಿಂದ 47 ಸಾವಿರ ಸಸಿಗಳನ್ನು ವಿತರಿಸಲಾಗುವುದು” ಎಂದು ವಲಯ ಅರಣ್ಯಾಧಿಕಾರಿ ಮಂಜುನಾಥ ಧುಳೆ ತಿಳಿಸಿದ್ದಾರೆ. ಪಟ್ಟಣದ ಸಾಮಾಜಿಕ ಅರಣ್ಯ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ಜೂನ್ 3ರಿಂದ ರೈತರಿಗೆ, ಸಂಘಸಂಸ್ಥೆಗಳಿಗೆ, ಶಾಲಾ ಕಾಲೇಜುಗಳಿಗೆ ಮತ್ತು ಸರ್ಕಾರಿ ಕಚೇರಿಗಳಿಗೆ ಸಸಿಗಳನ್ನು ವಿತರಿಸಲಾಗುವುದು. ಸಸಿಗಳು 6X9(₹3) ಮತ್ತು 8X12(₹6) ಬ್ಯಾಗ್ ಸೈಜ್ ನಲ್ಲಿವೆ ಎಂದರು. ನುಗ್ಗೆ, ಸಾಗವಾನಿ, ಮಹಾಗನಿ, ತಪಸಿ, ಹುಣಸೆ, ಸಸಿಗಳು 6X9 ಬ್ಯಾಗ್ ಸೈಜ್ ನಲ್ಲಿ ಮತ್ತು ಹುಣಸೆ, ಬದಾಮ, ಮೆಹಂದಿ, ಶ್ರೀಗಂಧ, ರಕ್ತ ಚಂದನ, ಬಾರೆ, ಪೆರು, ನಿಂಬೆ, ನುಗ್ಗೆ 8X12 ಬ್ಯಾಗ್ ಸೈಜ್ ನಲ್ಲಿ ದೊರೆಯುತ್ತವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೋಲಾರ: ಕಾಂಗ್ರೆಸ್ ನೇತೃತ್ವದ ಸರಕಾರದಿಂದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿಯೇ ಕೋಲಾರ ತಾಲೂಕಿನ ಕಾಲೇಜುಗಳಿಗೆ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಜನಪರ ಆಡಳಿತ ಹಾಗೂ ಸರ್ವರಿಗೂ ಅನುಕೂಲವಾಗುವಂತ ಯೋಜನೆಗಳು ಜಾರಿಯಾಗಲು ಮೇಲ್ಮನವಿಯಲ್ಲಿ ಬಹುಮತ ಅನಿವಾರ್ಯವಿದ್ದು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರು ಹೇಳಿದರು. ನಗರದಲ್ಲಿ ವಿವಿಧ ಶಾಲಾ ಕಾಲೇಜುಗಳಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಪರವಾಗಿ ಚುನಾವಣಾ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದರು. ದೇಶವು ಅಭಿವೃದ್ಧಿಯಾಗಲು ಶಿಕ್ಷಣ, ಆರೋಗ್ಯ ಮತ್ತು ರೈತರಿಗೆ ಮೊದಲ ಅಧ್ಯತೆ ನೀಡಬೇಕಾಗಿದೆ. ಕಾಂಗ್ರೆಸ್ ಪಕ್ಷವು ಸಾಮಾನ್ಯ ಜನರ ಅಭಿವೃದ್ಧಿಯ ದೃಷ್ಟಿಯಿಂದ ಬಹಳಷ್ಟು ಕೊಡುಗೆಗಳನ್ನು ನೀಡಿದೆ. ಸಿದ್ದರಾಮಯ್ಯನವರು ಯಾವುದೇ ಧರ್ಮ, ಜಾತಿಗೆ ಸೀಮಿತವಾಗದೆ ಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ರೂಪಿಸಿದ್ದಾರೆ. ಹೀಗಾಗಿ ಡಿ.ಟಿ. ಶ್ರೀನಿವಾಸ್ ಅವರನ್ನು ಗೆಲ್ಲಿಸಿ ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದರು. ಶಿಕ್ಷಕರ ಬೇಡಿಕೆಯಂತೆ ಒಪಿಎಸ್ ಜಾರಿ ಮಾಡಲು ಮತ್ತು 7 ನೇ ವೇತನ…