Author: admin

ಪ್ರಜ್ವಲ್ ರೇವಣ್ಣ ಅವರಂತೆಯೇ, ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವೀಡಿಯೊಗಳೂ ಹೊರಬರಬಹುದು. ನಾನು ಅವರಿಗೆ ಸೂಚನೆ‌ ಕೊಡುತ್ತಿದ್ದೇನೆ; ಈಗಲೇ ಆ ‘ಮಹಾನಾಯಕ’ನನ್ನು ತಡೆಯಿರಿ’ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬೆಂಗಳೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನನ್ನ ಖಾಸಗಿ ವೀಡಿಯೊಗಳು ಹೊರಗೆ ಬಂದಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೆ. ‘ಆ ಮಹಾನಾಯಕ ಬಹಳ ಪ್ರಭಾವಿ, ಹಣ ಇದ್ದವನು. ಏನು ಬೇಕಾದರೂ ಮಾಡಬಲ್ಲೆ ಎಂಬ ಸೊಕ್ಕು ಇದೆ. ಅವನಿಗೆ ಇತಿಶ್ರೀ ಹಾಡಬೇಕು’ ಎಂದರು. ‘ಸಿಎಂ ಅವರಿಗೆ ಮುಂದೆ ಕೈ‌ ಮುಗಿದು ಕೇಳಿಕೊಳ್ಳುತ್ತೇನೆ. ಈ ವೀಡಿಯೊ ಪ್ರಕರಣಗಳಿಗೆ ಪಕ್ಷಾತೀತವಾಗಿ ಕೊನೆಹಾಡಿ’ ಎಂದರು. ‘ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂದು ಹೇಳುತ್ತಿದ್ದಾರೆ. ಆದರೆ, ನನ್ನ ಪ್ರಕರಣದಲ್ಲಿ ನೇರ ಕೈವಾಡ ಇದೆ. ಎಲ್ಲ ಸಾಕ್ಷಿ, ದಾಖಲೆಗಳೂ ನನ್ನ ಬಳಿ ಇವೆ. ಪ್ರಜ್ವಲ್ ವಿಚಾರದಲ್ಲಿ ಪರೋಕ್ಷವಾಗಿ ಆರೋಪಿ ಎನ್ನುತ್ತಿದ್ದಾರೆ. ಆದರೆ, ನನ್ನ ವಿಚಾರದಲ್ಲಿ ನೇರ ಆರೋಪಿ’ ಎಂದು ಪ್ರಶ್ನೆಯೊಂದಕ್ಕೆ‌ ಉತ್ತರಿಸಿದರು.…

Read More

ಮುಂದಿನ 2-3 ದಿನಗಳಲ್ಲಿ ಎಲ್ಲಾ ಬರಪೀಡಿತ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಕರ್ನಾಟಕವು ಕೇಂದ್ರ ಸರ್ಕಾರದಿಂದ 3,454.22 ಕೋಟಿ ರೂಪಾಯಿಗಳನ್ನು ಪಡೆಯುವ ಮೊದಲು, 33.58 ಲಕ್ಷ ರೈತರಿಗೆ 636.45 ಕೋಟಿ ರೂಪಾಯಿ ಮೌಲ್ಯದ ಮಧ್ಯಂತರ ಪರಿಹಾರವನ್ನು ತನ್ನದೇ ಆದ ಬೊಕ್ಕಸದಿಂದ ಪಾವತಿಸಲಾಗಿದೆ ಎಂದು ಅವರು ಹೇಳಿದರು. ಇದರಲ್ಲಿ 4.43 ಲಕ್ಷ ಸಣ್ಣ ಜಮೀನು ಹೊಂದಿರುವ ರೈತರು ತಮ್ಮ ಅರ್ಹತೆಗೆ ಅನುಗುಣವಾಗಿ ಸಂಪೂರ್ಣ ಪರಿಹಾರವನ್ನು ಪಡೆದಿದ್ದಾರೆ. ಮೇ 6 ರವರೆಗೆ 27.38 ಲಕ್ಷ ರೈತರು ಎನ್‌ ಡಿಆರ್‌ಎಫ್ ಅಡಿಯಲ್ಲಿ ಒಟ್ಟು 2,425.13 ಕೋಟಿ ರೂ.ಗಳ ಪರಿಹಾರವನ್ನು ಪಡೆದಿದ್ದಾರೆ. ಇದುವರೆಗೆ 31.82 ಲಕ್ಷ ರೈತರಿಗೆ ಸಂಪೂರ್ಣ ಪರಿಹಾರ ಸಿಕ್ಕಿದೆ, ಇನ್ನುಳಿದ ಎರಡು ಲಕ್ಷ ರೈತರಿಗೆ ಒಂದೆರಡು ದಿನದಲ್ಲಿ ಬಾಕಿ ಹಣ ಸಿಗಲಿದೆ ಎಂದು ಹೇಳಿದರು. ಬರ ಪರಿಹಾರಕ್ಕಾಗಿ ಕರ್ನಾಟಕಕ್ಕೆ ಹಣಕಾಸು ನೆರವು ಬಿಡುಗಡೆ ಮಾಡುವುದು ಸಂವಿಧಾನ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಮತ್ತು ಗೃಹ ಸಚಿವಾಲಯ…

Read More

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಹಿಂಸಾಚಾರ, ಕೊಲೆ, ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡವೆ ಗಲಾಟೆ ಸಾಮಾನ್ಯ ಎಂಬಂತಾಗಿದೆ. ಇದಕ್ಕೆ ನಿದರ್ಶನ ಎಂಬಂತೆ, ಮೂರನೇ ಹಂತದ ಮತದಾನದ ವೇಳೆಯೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದಿದೆ. ಮುರ್ಷಿದಾಬಾದ್ ನಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್‌ ಘೋಷ್‌ ಮತ ಚಲಾಯಿಸಲು ಹೋದಾಗ ಈ ಗಲಾಟೆ ನಡೆದಿದೆ. ಮುರ್ಷಿದಾಬಾದ್‌ ನಲ್ಲಿ ಧನಂಜಯ್‌ ಘೋಷ್‌ ಮತದಾನ ಮಾಡಲು ಹೋದಾಗ ಅವರನ್ನು ಬೂತ್‌ ಏಜೆಂಟ್‌ ಒಬ್ಬರು ತಡೆದಿದ್ದಾರೆ. ಇದೇ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದು ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಗೆ ಕಾರಣವಾಗಿದೆ. “ನಾನೊಬ್ಬ‌ ಬಿಜೆಪಿ ಅಭ್ಯರ್ಥಿ. ನನಗೇ ಚುನಾವಣೆ ಏಜೆಂಟ್‌ ಒಬ್ಬ ಬಂದು ಬೆದರಿಕೆ ಹಾಕುತ್ತಾನೆ ಎಂದರೆ, ಸಾಮಾನ್ಯ ಜನರ ಗತಿ ಏನು? ಆತನ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗುವುದು” ಎಂದು ಧನಂಜಯ್‌ ಘೋಷ್‌ ತಿಳಿಸಿದ್ದಾರೆ. ಮುರ್ಷಿದಾಬಾದ್‌ ಲೋಕಸಭೆ ಕ್ಷೇತ್ರದ ರಾಬಿನಗರದಲ್ಲೂ ಗಲಾಟೆ ನಡೆದಿದೆ. ಕಾಂಗ್ರೆಸ್‌-ಎಡಪಕ್ಷದ ಜಂಟಿ ಅಭ್ಯರ್ಥೀ…

Read More

ನವವಧು ವರರು ಸಾವಿರಾರು ಕನಸು ಹೊತ್ತು ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರೆ. ವಿಶೇಷ ಅಂದ್ರೆ ಇಲ್ಲಿ ವರನಿಗೆ ಮಾತ್ರ ಮದುವೆಯ ಸಂಭ್ರಮ. ಹೊಸ ಬಾಳ್ವೆ ನಡೆಸುವ ಕನಸು. ಆದ್ರೆ ವಧುವಿನ ಕನಸು ಬೇರೆಯದೆ ಆಗಿತ್ತು. ಹೌದು, ಈ ವಿಚಿತ್ರ ಪ್ರೇಮ ಘಟನೆ ಬಗ್ಗೆ ನೀವು ತಿಳಿಯಲೇ ಬೇಕು. ಇಲ್ಲಿ ನವವಧು ಮದುವೆಯಾದ ಹಲವು ದಿನದವರೆಗೂ ತನ್ನ ಗಂಡನೊಂದಿಗೆ ಮೊದಲ ರಾತ್ರಿ ಕಳೆಯಲು ನಿರಾಕರಿಸಿದ್ದಳು. ನವವಧು ದಿನದಿಂದ ದಿನಕ್ಕೆ ವರನಿಂದ ದೂರವಿದ್ದು ಆರೋಗ್ಯ ಸಮಸ್ಯೆ ಕಾರಣ ನೀಡುತ್ತಿದ್ದಳು. ಆದರೆ ವಧುವಿನ ನವರಂಗಿ ಆಟ ಕೆಲವು ದಿನಗಳವರೆಗೆ ವರನಿಗೆ ಗೊತ್ತಾಗಿರಲಿಲ್ಲ. ಕೊನೆಗೂ ಸತ್ಯ ಬಯಲಾದಾಗ ವರನಿಗೆ ತಾನು ಮೋಸ ಹೋದ ಅರಿವಾಗಿದೆ. ತಾನು ಮದುವೆಯಾದ ವಧು ತನಗೆ ತಿಳಿಯದಂತೆ ಬೇರೊಬ್ಬ ಪುರುಷನ ಸಂಪರ್ಕದಲ್ಲಿದ್ದಳು. ತಂನ್ನೊಂದಿಗೆ ಸುಳ್ಳಿನ ಕಂತೆ ಕಟ್ಟುತ್ತಾ ಅತ್ತ ತನ್ನ ಪ್ರಿಯಕರನ ಬಳಿ ನಿನಗಷ್ಟೇ ದೇಹ ನೀಡುವುದಾಗಿ ಮಾತು ಕೊಟ್ಟಿದ್ದಳು. ಅಷ್ಟು ಮಾತ್ರವಲ್ಲದೆ ಮದುವೆಯಾದ ಹತ್ತನೇ ದಿನ ಆಕೆ ಪ್ರೇಮಿಯೊಂದಿಗೆ ಪರಾರಿಯಾಗಿದ್ದಳು. ಇನ್ನೇನು ಈ…

Read More

ಮತದಾನ ಮಾಡಲು ಬಂದ ಯುವಕ ವಿಚಿತ್ರವಾಗಿ ವರ್ತಿಸಿದ್ದು, ಕೆಲಕಾಲ ಮತಗಟ್ಟೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ ಘಟನೆ ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ನಡೆದಿದ್ದು, ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಅಲ್ಲಿದ್ದ ಸಿಬ್ಬಂದಿ ನೀರು ಹಾಕಿ ಬೆಂಕಿ ಹರಿಸಿದ್ದಾರೆ. ಮರಾಠಾ ಆಕರ್ಷಣ ವಿಚಾರಕ್ಕೆ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ಇನ್ನೂ ಈ ಮತಗಟ್ಟೆಯಲ್ಲಿ ಸುಮಾರು 1300 ಮತದಾರರಿರುವ ಕೇಂದ್ರವಾಗಿದೆ. ಸದ್ಯ ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿನ್ನ, ಬೆಳ್ಳಿಯತ್ತ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಈ ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿಯುತ್ತಿದೆ.  ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್​ ಗೆ 30 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಒಂದು ರೂ ಹೆಚ್ಚಾಗಿದೆ. ಹಲವು ದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ ನ 22 ಕ್ಯಾರಟ್ ಚಿನ್ನದ ಬೆಲೆ 66,350 ರೂಪಾಯಿ ಇದೆ. 24 ಕ್ಯಾರಟ್​ ನ ಅಪರಂಜಿ ಚಿನ್ನದ ಬೆಲೆ 72,380 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರೂಪಾಯಿ ಇದೆ.  ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ ​ಗೆ 8,400 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 8ಕ್ಕೆ): 22 ಕ್ಯಾರಟ್​ ನ 10 ಗ್ರಾಂ ಚಿನ್ನದ ಬೆಲೆ: 66,350 ರೂ 24 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ…

Read More

ಹರಿದ್ವಾರ್: ಲಕ್ಸರ್ ತೆಹಸಿಲ್‌ ನ ಇಸ್ಮಾಯಿಲ್‌ ಪುರ ಗ್ರಾಮದ ಪಕ್ಕದ ಹೊಲದಲ್ಲಿ ಬರೋಬ್ಬರಿ 13 ಅಡಿ ಉದ್ದದ ಪತ್ತೆಯಾಗಿದೆ. ಈ ಹೆಬ್ಬಾವನ್ನು ನೋಡಿದ ಗ್ರಾಮಸ್ಥರು ಏಕಾಏಕಿ ಬೆಚ್ಚಿಬಿದ್ದಿದ್ದಾರೆ. ಹೆಬ್ಬಾವನ್ನು ನೋಡಿದ ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಸಿಬ್ಬಂದಿ ಬರೋಬ್ಬರಿ 13 ಅಡಿ ಉದ್ದದ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಇನ್ನು, ಈ ಹೆಬ್ಬಾವಿನ ತೂಕ ಸುಮಾರು 1.25 ಕ್ವಿಂಟಾಲ್ ಆಗಿದ್ದು, ಅರಣ್ಯ ಸಿಬ್ಬಂದಿ ಹೆಬ್ಬಾವನ್ನು ರಕ್ಷಿಸಲು ಸಾಕಷ್ಟು ಸಮಯ ತೆಗೆದುಕೊಂಡಿದ್ದಾರಂತೆ. ಬಳಿಕ ಗ್ರಾಮಸ್ಥರ ಸಹಾಯದಿಂದ ಅರಣ್ಯ ಸಿಬ್ಬಂದಿ ಹೆಬ್ಬಾವನ್ನು ಯಶಸ್ವಿಯಾಗಿ ರಕ್ಷಿಸಿ ಮೀಸಲು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದಿದ್ದಾರಂತೆ. ಇನ್ನು, ದಿನದಿಂದ ದಿನಕ್ಕೆ ಬಿರು ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಕಾಡು ಪ್ರಾಣಿಗಳು ನೀರು ಅರಸಿ ಮನುಷ್ಯರು ವಾಸಿಸುವ ಪ್ರದೇಶಗಳಿಗೆ ಬರುತ್ತಿವೆ. ಹೀಗಾಗಿ ಜನರು ಭಯ ಪಡುವಂತ ಸ್ಥಿತಿ ನಿರ್ಮಾಣಗೊಂಡಿದೆ. ಸದ್ಯ ಹೆಬ್ಬಾವನ್ನು ರಕ್ಷಣೆ ಮಾಡುತ್ತಿರೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ…

Read More

ಇತ್ತೀಚೆಗೆ ಮೊಬೈಲ್ ಫೋನ್ ಪ್ರಾಣಕ್ಕಿಂತಲೂ ಹೆಚ್ಚಿನ ಬೆಲೆ ಇದೆ ಅನ್ನುವ ರೀತಿ, ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಿಖಿತಾ(18) ನೇಣಿಗೆ ಶರಣಾದ ವಿದ್ಯಾರ್ಥಿಯಾಗಿದ್ದಾರೆ. ಸುಧಾ ಮತ್ತು ನಾರಾಯಣ ದಂಪತಿಯ ಪುತ್ರಿಯಾದ ಮೃತ ಲಿಖಿತಾ, ಪ್ಯಾರಾಮೆಡಿಕಲ್‌ ವ್ಯಾಸಂಗ ಮಾಡುತ್ತಿದ್ದರು. ಹೆತ್ತವರನ್ನ ಸಾಕುವ ಕನಸು ಕಂಡಿದ್ದ ಸುಧಾ ಹಾಗೂ ನಾರಾಯಣ ಅವರ ಮುದ್ದಿನ ಮಗಳು ಲಿಖಿತಾ ಒಳ್ಳೆಯ ವಿದ್ಯಾಬ್ಯಾಸ ಮಾಡುತ್ತಿದ್ದಳು. ಓದಿನಲ್ಲಿಯೂ ಮುಂದೆ ಇದ್ದ ಲಿಖಿತಾ, ಇತ್ತೀಚಿಗೆ ಫೋನಿನ ಗೀಳು ಹತ್ತಿಸಿಕೊಂಡಿದ್ದಳಂತೆ. ಯಾವಾಗಲೂ ಫೋನಿನಲ್ಲಿ ಮಾತನಾಡಿತ್ತಿದ್ದ ಆಕೆ, ಚಾಟಿಂಗ್, ಸ್ನ್ಯಾಪ್, ಇನ್ಸ್ಟಾ, ಫೇಸ್‌ಬುಕ್ ಎಂದು ಫೋನ್‌‌ನಲ್ಲಿ ಬ್ಯುಸಿ ಇರುತ್ತಿದ್ದಳು. ಇದನ್ನ ಗಮನಿಸಿದ್ದ ಲಿಖಿತಾ ತಂದೆ ನಾರಯಣ್ ಬೆಳಿಗ್ಗೆ ಬೈದು ಬುದ್ದಿ ಹೇಳಿದ್ದಾರೆ. ಈ ಹಿನ್ನಲೆ ಯುವತಿ ರೂಂ ಸೇರಿದ್ದರು. ಬಳಿಕ ಎರಡು ಗಂಟೆ ನಂತರ ರೂಂ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ಯಾನ್​…

Read More

ತುಮಕೂರು: ಜಿಲ್ಲೆಯ ವಿವಿಧಡೆ ಇಂದು ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಯಿಂದ ರೈತಾಪಿ ವರ್ಗ ಸಂತಸ ಗೊಂಡಿದೆ. ಆಲಿಕಲ್ಲು ಸಹಿತ  ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಅನೇಕ ದಿನಗಳಿಂದ ಮಳೆಗಾಗಿ ಕಾಯುತ್ತಿದ್ದ ಜನರು ಸುರಿದ ಮಳೆಯಿಂದ ಸಂತಸಗೊಂಡರು. ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು ಭಾಗದಲ್ಲಿ ಹಾಗೂ ಕುಣಿಗಲ್ ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಬರ ಪರಿಸ್ಥಿತಿಯಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮುಂದಿನ 2 ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿ, ಖಾಸಗಿ ಲೇವಾದೇವಿಗಾರರು ಹಾಗೂ ಸಾಲದಾತರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ರಾತ್ರಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತಾಗಿ ವಿಡಿಯೋ ಕಾರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಮಳೆ ಬಾರದೆ ಈಗಾಗಲೇ ರೈತರು ಸಂಕಷ್ಟದಲ್ಲಿದ್ದಾರೆ. ಸಂಕಷ್ಟದಿಂದ ಹೊರಬರಲು ಮಾಡಿರುವ ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಬೆಳೆಯಿಲ್ಲದೆ ಕಂಗೆಟ್ಟಿರುವ ಇಂತಹ ಪರಿಸ್ಥಿತಿಯಲ್ಲಿ ಸಾಲ ಮರುಪಾವತಿ ಮಾಡಬೇಕೆಂದು ಯಾವುದೇ ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಕಿರುಕುಳ ನೀಡಬಾರದು. ಸಾಲ ವಸೂಲಿಗಾಗಿ ರೈತರಿಗೆ ತೊಂದರೆ ಕೊಡುವುದು ಕಂಡು ಬಂದರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು. 1,32,332ರ ರೈತರಿಗೆ ಬರ ಪರಿಹಾರ:…

Read More