Author: admin

ನವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ.ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಕೆ.ಕವಿತಾ ಅವರನ್ನು ಮಂಗಳವಾರ ಕೋರ್ಟ್​ ಎದುರು ಹಾಜರುಪಡಿಸಲಾಯಿತು. ಸಿಬಿಐ, , ಜಾರಿ ನಿರ್ದೇಶನಾಲಯವು ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ಅವಧಿಯನ್ನು ಆದೇಶ ಹೊರಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಕೊರಟಗೆರೆ ತಾಲೂಕಿನ ಅರಸಪುರ ಹಾಗೂ ಬಿಡಿ ಪುರ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಬಿಳೇ ಕಲ್ಲಹಳ್ಳಿ, ಭಕ್ತರಹಳ್ಳಿ, ಕಾಶಪುರ ಗ್ರಾಮಗಳಲ್ಲಿ ನಾಲಕ್ಕು ಹೆಚ್ಚು ಕೋಳಿ ಫಾರಂಗಳ ನ್ನುಅನಧಿಕೃತವಾಗಿ ನಡೆಸುತಿದ್ದು, ಕೋಳಿ ಫಾರಂನಿಂದ ಬರುವ ನೈರ್ಮಲ್ಯದ ಕೊರತೆಯಿಂದ ಗ್ರಾಮಸ್ಥರು ನೆಮ್ಮದಿಯ ಜೀವನ ನಡೆಸಲು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಜನರು ಕುಡಿಯೋ ನೀರಿನಲ್ಲೂ ತಿನ್ನುವ ಅನ್ನದಲ್ಲೂ ನೊಣಗಳು ಹಾರಡುತ್ತಿದೆ. ಡೈರಿಗೆ ತೆಗೆದುಕೊಂಡು ಹೋಗುವ ಹಾಲಿನ ಮೇಲು ಇಂಡು ಇಂಡು ನೊಣಗಳು ತುಂಬಿ ತುಳುಕುತ್ತಿದೆ. ಹಿರಿಯರು, ಮಕ್ಕಳನ್ನು ಮನೆಯಲ್ಲಿ ಮಲಗಲು ಕಷ್ಟಪಡುವ ಪರಿಸ್ಥಿತಿ ಉಂಟಾಗಿದೆ. ಬಿಳೇ ಕಲ್ಲಹಳ್ಳಿ ಗ್ರಾಮದ ಸಮೀಪವಿರುವ ನಲ್ಲಪ್ಪ ಕೋಳಿ ಫಾರಂ ನ್ನು ಅನಧಿಕೃತವಾಗಿ ನಡೆಸುತ್ತಿದ್ದಾರೆ. ಈ ಕೋಳಿ ಫಾರಂನಲ್ಲಿ ಸರಿಯಾದ ರೀತಿಯ ನೈರ್ಮಲ್ಯದ ವ್ಯವಸ್ಥೆಗಳಿಲ್ಲದೆ ನಡೆಯುತ್ತಿವೆ.ಇಲ್ಲಿ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿಲ್ಲ. ಕೋಳಿ ಫಾರಂ ನಡೆಸಲು ಮಾಲೀಕ ನಲ್ಲಪ್ಪ ಅಗ್ನಿಶಾಮಕ ದಳದ ಪರ್ಮಿಷನ್, ಸ್ಥಳೀಯ ಗ್ರಾಮ ಪಂಚಾಯಿತಿ ಪರ್ಮಿಷನ್, ಪಶು ಇಲಾಖೆಯ ಪರ್ಮಿಷನ್ ಹಾಗೂ ಹೈನುಗಾರಿಕೆಗೆ ಬೇಕಾದ ಯಾವ ರೀತಿಯ ಅನುಮತಿಯನ್ನು…

Read More

ಚಿಕ್ಕಬಳ್ಳಾಪುರ: ಕಲ್ಲು ಕೂಚ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ ಕಂಬಗಳಡಿ ಸಿಲುಕಿಕೊಂಡು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಚಿಕ್ಕಬಳ್ಳಾಪುರ-ಗೌರಿಬಿದನೂರು ಮಾರ್ಗದ ಕಣಿವೆ ಬಳಿ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೋಲಾರದ ಮಾಲೂರಿನ ಚಿಕ್ಕತಿರುಪತಿಯಿಂದ ಮಂಚೇನಹಳ್ಳಿಗೆ ಬರುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ‌ ಪಲ್ಟಿಯಾಗಿದೆ. ಕ್ಯಾಂಟರ್ ‌ನ ಹಿಂಬದಿಯಲ್ಲಿ ಸಾಗಿಸಲಾಗುತ್ತಿದ್ದ ಕಲ್ಲಿನ ಕಂಬಗಳ ಮೇಲೆ ಕುಳಿತಿದ್ದ ಕೂಲಿ ಕಾರ್ಮಿಕರು, ಈ ಕಲ್ಲುಗಳಡಿ ಸಿಲುಕಿಕೊಂಡು ದಾರುಣವಾಗಿ ಸಾವಿಗೀಡಾದರು. 108 ಸಿಬ್ಬಂದಿ ಮುಷ್ಕರದ ಹಿನ್ನೆಲೆಯಲ್ಲಿ ಕರೆ ಕಳುಹಿಸಿದರೂ ಆಂಬ್ಯುಲೆನ್ಸ್ ಸಮಯಕ್ಕೆ ಸರಿಯಾಗಿ ಬರಲಿಲ್ಲ. ಆಂಬ್ಯುಲೆನ್ಸ್ ಬಂದಿದ್ದರೆ ಜೀವಗಳನ್ನು ಉಳಿಸಬಹುದಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ‌ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಸಿದ್ಧರಬೆಟ್ಟದ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದ 18ನೇ ವರ್ಷದ ವಾರ್ಷಿಕೋತ್ಸವದ ಸಮಾರಂಭವು ಜೂನ್ 9 ರಂದು ಸಿದ್ದರಬೆಟ್ಟದಲ್ಲಿ ನಡೆಯಲಿದೆ. ಜೂನ್ 9 ರಂದು ನಡೆಯಲಿರುವ ಈ ವಾರ್ಷಿಕೋತ್ಸವವು ಭಕ್ತಾದಿಗಳ ಸಹಕಾರದಿಂದ ಕಳೆದ 17 ವರ್ಷಗಳಿಂದ ಬಹಳ ಚೆನ್ನಾಗಿ ನಡೆದುಕೊಂಡು ಬರುತ್ತಿದೆ. ಶ್ರೀ ಮಠದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶ್ರೀ ಮಠದಲ್ಲಿ ವಿದ್ಯಾಬ್ಯಾಸ ಮಾಡಿದ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಭಕ್ತರ ಮನಸ್ಸಿಗೂ ಶ್ರೀಮಠಕ್ಕು ಬಹಳ ಅವಿನಾಭಾವ ಸಂಬಂಧ ಇದೆ. ಸುಧಾ ಮೂರ್ತಿ ಅವರ ಸಲಹೆ ಮೇರೆಗೆ 18 ವರ್ಷಗಳ ಹಿಂದೆ ಈ ಸಾಮೂಹಿಕ ವಿವಾಹವನ್ನು ಪ್ರಾರಂಭ ಮಾಡಿದ್ದೇವೆ. ಅಲ್ಲಿನಿಂದ ಇಲ್ಲಿಯವರೆಗೂ ಶ್ರೀ ಮಠದಲ್ಲಿ ಸುಮಾರು 800ಕ್ಕೂ ಹೆಚ್ಚು ಸಾಮೂಹಿಕ ವಿವಾಹಗಳು ನಡೆದಿವೆ. ಇದರಿಂದ ಬಡವರಿಗೆ ಬಹಳ ಅನುಕೂಲ ಆಗಿದೆ. ಹಾಗೆಯೇ ಉನ್ನತ ಮಟ್ಟದ ವ್ಯಾಸಂಗ ಮಾಡುತ್ತಿರುವರಿಗೆ ವಿಷೇಶ ಪ್ರಶಸ್ತಿ ಶ್ರೀ ಮಠವು ಪ್ರತಿ ವರ್ಷ ನೀಡುತ್ತಾ ಬಂದಿದ್ದು, ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ…

Read More

ಕಾಸರಗೋಡು: ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕುಂಜತ್ತೂರು ಬಳಿ ಆ್ಯಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತರನ್ನು ಶ್ರೀನಾಥ, ಶರತ್ ಮೆನನ್ ಎಂದು ಗುರುತಿಸಲಾಗಿದೆ. ಮೃತರು ಕೇರಳದ ತ್ರಿಶೂರು ಜಿಲ್ಲೆ ಗುರುವಾಯೂರು ನಿವಾಸಿಗಳು ಎಂದು ತಿಳಿದುಬಂದಿದೆ. ಕಾಸರಗೋಡಿನಿಂದ ಮಂಗಳೂರಿಗೆ ಆ್ಯಂಬುಲೆನ್ಸ್​ನಲ್ಲಿ ರೋಗಿ ಕರೆದೊಯ್ಯಲಾಗುತ್ತಿತ್ತು. ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮಂಡ್ಯ: ಬಿರುಗಾಳಿ ಸಹಿತ ಸುರಿದ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಡ್ಯದಲ್ಲಿನಡೆದಿದೆ. ಮಂಡ್ಯ ನಗರದ ಆಸ್ಪತ್ರೆಯೊಂದರ ಬಳಿ ಈ ಘಟನೆ ಜರುಗಿದೆ. ಮಂಡ್ಯ ತಾಲೂಕಿನ ಜಿ. ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ. ಕಾರ್ತಿಕ್ ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯ ಆರೋಗ್ಯ ವಿಚಾರಿಸಿ ವಾಪಾಸ್ಸಾಗುತ್ತಿದ್ದ ವೇಳೆ ಬಿರುಗಾಳಿ ಸಹಿತ ಮಳೆ ಬಂದ ಹಿನ್ನೆಲೆ ಬೈಕ್ ನಿಲ್ಲಿಸಿ ಸ್ನೇಹಿತನ ಕಾರು ಹತ್ತಿ ಕುಳಿತಿದ್ದ. ಈ ವೇಳೆ ಮರದ ಕೆಳಗೆ ಕಾರು ನಿಲ್ಲಿಸಿದ್ದರಿಂದ ಬಿರುಗಾಳಿಗೆ ಕಾರಿನ ಮೇಲೆಯೇ ಮರ ಬಿದ್ದಿದೆ. ಇದರಿಂದ ಸ್ಥಳದಲ್ಲೇ ಕಾರ್ತಿಕ್ ಸಾವನ್ನಪ್ಪಿದ್ದು, ಕಾರಿನ ಹೊರಗಡೆ ನಿಂತಿದ್ದ ಸ್ನೇಹಿತ ಪ್ರಾಣಾಪಾಯಾದಿಂದ ಪಾರಾಗಿದ್ದಾನೆ. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಬೆಂಗಳೂರು: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಬಂಧಿಯಾಗಿರುವ ಉಮಾಳಿಂದ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ನಗದು ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ಅಕ್ಕ ಏ.24 ರಂದು ಊರಿಗೆ ತೆರಳಿದ್ದರು. ಊರಿಗೆ ತೆರಳುವ ಮುನ್ನ ಸಂಬಂಧಿಯೊಬ್ಬರ ಮನೆಗೆ ಮನೆಯ ಕೀ ಕೊಟ್ಟು ತೆರಳಿದ್ದರು. ರಾತ್ರಿ ವೇಳೆ ಅವರು ಕಾವಲಿಗೆ ಎಂದು ಮನೆಗೆ ತೆರಳಿದ್ದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿತ್ತು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಭಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಅವರು ಕೊಟ್ಟಿರಲಿಲ್ಲ ಎನ್ನಲಾಗಿದೆ.…

Read More

ಕಾಡಾನೆ ಹಾವಳಿ ಮಾನವ ಸಂಘರ್ಷಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜೊತೆಗೆ ರಾಜ್ಯ ಸರಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಆಗ್ರಹಿಸಿದರು. ತಾಲೂಕಿನ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿನಕಲ್ ದುರ್ಗದ ಕೆಸವಿನಹಕಲು ಎಸ್ಟೇಟ್‌ ನಲ್ಲಿ ಆನಂದ ಪೂಜಾರಿ ಎಂಬ ಕಾರ್ಮಿಕನನ್ನು ಆನೆ ತುಳಿದು ಸಾಯಿಸಿದೆ. ಮೂಡಿಗೆರೆ ಕ್ಷೇತ್ರವೊಂದರಲ್ಲೇ ವರ್ಷದಲ್ಲಿ ೪-೫ ಮಂದಿ ಕಾಡಾನೆಗೆ ಬಲಿಯಾಗಿದ್ದಾರೆ. ಕಳೆದ ವರ್ಷ ಹೆಡದಾಳು ಗ್ರಾಮದ ಮೀನಾ ಕಾಡಾನೆಗೆ ಸಿಲುಕಿ ಮೃತಪಟ್ಟಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿದ್ದರು. ಪ್ರತಿಭಟನೆ ಕಾವು ಜೋರಾದಾಗ ಮುಖ್ಯಮಂತ್ರಿಗಳು ನನಗೆ ದೂರವಾಣಿ ಕರೆಮಾಡಿ ಪ್ರತಿಭಟನೆ ಬಿಟ್ಟು ಮುಂದಿನ ಸಂಸ್ಕಾರ ನಡೆಸಿ, ಆನೆ ಹಾವಳಿ ತಡೆಗೆ ಒಂದು ವಾರದಲ್ಲಿ ಅರಣ್ಯ ಸಚಿವರನ್ನು ಕಳುಹಿಸಿ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಈವರೆಗೆ ಯಾವೊಬ್ಬ ಜನಪ್ರತಿನಿಧಿ, ಅಧಿಕಾರಿ ಆನೆ ಹಾವಳಿ ತಡೆ ಬಗ್ಗೆ ಮಾತಾಡಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಬೇಜವಾಬ್ದಾರಿ ಸಚಿವರಾಗಿದ್ದಾರೆ. ಮೂಡಿಗೆರೆ ಶಾಸಕಿ ನಯನಾ…

Read More

ಬೆಂಗಳೂರು: ಹಾಸನ ವಿಡಿಯೋ ಪೆನ್ ​ಡ್ರೈವ್​ ಸೂತ್ರಧಾರಿ ಡಿ.ಕೆ. ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ. ಹೀಗಾಗಿ ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಲಾಗಿದೆ, ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ. ನನಗೂ, ಪೆನ್‌ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ ಎಂದು ಸ್ಪಷ್ಟನೆ ನೀಡಿದ್ದಾರೆ. ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ. ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ದೇವರಾಜೇಗೌಡ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್,…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಜಸ್ಟ್ ಅರ್ಧಗಂಟೆ ಸುರಿದ ಮಳೆ ಬೆಂಗಳೂರನ್ನೇ ಅಲ್ಲಾಡಿಸಿದೆ. ಒಂದು ಕಡೆ ಅಂಡರ್‌ ಪಾಸ್ ‌ಗಳು ಜಲಾವೃತಗೊಂಡರೆ, ಮತ್ತೊಂದೆಡೆ 25ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ವಾಹನ ಸವಾರರು ಪರದಾಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅರ್ಧಗಂಟೆ ಬಂದ ಮಳೆಗೆ ನಗರದಲ್ಲಿ 25ಕ್ಕೂ ಹೆಚ್ಚು ಭಾಗದಲ್ಲಿ ಮರಗಳು ಧರೆಗೆ ಉರುಳಿವೆ ಎಂದು ತಿಳಿದುಬಂದಿದೆ. ದೂರು ಬಂದ ನಗರಗಳಲ್ಲಿ ಮರಗಳನ್ನು ಬಿಬಿಎಂಪಿ ಸಿಬ್ಬಂದಿಗಳು ತೆರೆವುಗೊಳಿಸಿದ್ದಾರೆ ಎಂದು ಬಿಬಿಎಂಪಿ ಕಂಟ್ರೋಲ್ ರೂಮ್ ಇಂದ ಮಾಹಿತಿ ನೀಡಲಾಗಿದೆ. ನಗರದ ಜಯನಗರ, ಬಸವನಗುಡಿ, ಮಲ್ಲೆಶ್ವರಂ, ಕೋರಮಂಗಲ, ಬಿಟಿಎಂ ಲೇಔಟ್, ಯಶವಂತರಪುರ ಸೇರದಿಂತೆ ಹಲವೆಡೆ ಮರಗಳು ಧರೆಗೆ ಉರುಳಿವೆ. ಆನೇಕಲ್‌ ತಾಲೂಕಿನ ಬನಹಳ್ಳಿಯಲ್ಲಿ 10 ಕ್ಕೂ ಹೆಚ್ಚು ಮನೆಗಳ ಶೀಟ್ ‌ಗಳು ಹಾರಿ ಹೋಗಿದ್ದು, ಸಿಮೆಂಟ್‌ ಬ್ರಿಕ್ಸ್‌ ಗಳು ಕೂಡಾ ನೆಲಕ್ಕುರುಳಿವೆ. ಆನೇಕಲ್‌ ಭಾಗದಲ್ಲೂ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆ ಆಗಿದೆ. ಸೂರ್ಯಸಿಟಿಯಲ್ಲಿ ಆಸ್ಪತ್ರೆಯ ಶೀಟ್‌ ಗಳೇ ಹಾರಿ ಹೋಗಿವೆ. ಪಾರ್ಕಿಂಗ್‌ ನಲ್ಲಿದ್ದ ಕಾರುಗಳು…

Read More