Subscribe to Updates
Get the latest creative news from FooBar about art, design and business.
- ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
- ತುರುವೇಕೆರೆ: ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
- ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
- ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ತೀರ್ಮಾನ
- ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
- ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
- ಸರಗೂರು: SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
- ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
Author: admin
ವಿಜಯಪುರ: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿರುವ ಪತಿಯ ಹತ್ಯೆಗೆ ಪತ್ನಿಯೇ ಯತ್ನಿಸಿರುವ ಆರೋಪ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ನಗರದಲ್ಲಿ ಕೇಳಿ ಬಂದಿದೆ. ಜೊತೆ ಸೇರಿದ ಸುನಂದಾ, ಪತಿ ಬೀರಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಸಿದ್ದಪ್ಪ ಕ್ಯಾತಕೇರಿ ಎಂಬಾತನ ಜೊತೆ ಸುನಂದಾ ಅಕ್ರಮ ಸಂಬಂಧ ಹೊಂದಿದ್ದಾಗಿ ಬೀರಪ್ಪ ಆರೋಪಿಸಿದ್ದಾರೆ. ಕಳೆದ ಸೆಪ್ಟೆಂಬರ್ 1ರಂದು ರಾತ್ರಿ ಸಿದ್ದಪ್ಪ ಮನೆಗೆ ನುಗ್ಗಿದ್ದು ತನ್ನ ಕತ್ತು ಹಿಸುಕಿ, ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ದೂರಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊಪ್ಪಳ: ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕೋಳಿಗಳಿಗೆ ನಿಗೂಢ ರೋಗ ಹಬ್ಬಿದ್ದು, ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ಥಳೀಯ ಕೋಳಿ ಸಾಕಣೆ ಕೇಂದ್ರಗಳಲ್ಲಿ ಈ ಕಾಯಿಲೆಯು ವೇಗವಾಗಿ ಹರಡುತ್ತಿದೆ ಎನ್ನಲಾಗಿದೆ. ಕೋಳಿಗಳ ಸಾವು ಅನೇಕರ ಜೀವನೋಪಾಯಕ್ಕೆ ಬೆದರಿಕೆ ಹಾಕುತ್ತಿದೆ ಎಂದು ಹೇಳಿದ್ದಾರೆ. ಕೆಲವು ಕೋಳಿ ಮಾಲೀಕರು ಸತ್ತ ಕೋಳಿಗಳನ್ನು ಹೂಳುತ್ತಿಲ್ಲ, ಬದಲಿಗೆ ಅವುಗಳನ್ನು ಬಯಲಿನಲ್ಲಿ ಎಸೆಯುತ್ತಿದ್ದಾರೆ. ಹೀಗಾಗಿ ಈ ಸಾಕಣೆ ಕೇಂದ್ರಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರು ಈಗ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಸಾವಿಗೆ ನಿಖರವಾದ ಕಾರಣವನ್ನು ಗುರುತಿಸಲು ಶೀಘ್ರದಲ್ಲೇ ತಜ್ಞರನ್ನು ಕರೆಯುವುದಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ. ಕೋಳಿ ಸಾಕಣೆ ಕೇಂದ್ರಗಳಿಗೆ ಭೇಟಿ ನೀಡಿ, ರಕ್ತದ ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆಗೆ ಕಳುಹಿಸುವುದಾಗಿ ತಜ್ಞರು ತಿಳಿಸಿದ್ದಾರೆ. ಬಿ ಹೊಸಳ್ಳಿಯ ನಿವಾಸಿಗಳು ತಮ್ಮ ಗ್ರಾಮದಲ್ಲಿ ಸುಮಾರು ಆರು ತಿಂಗಳ ಹಿಂದೆ ಸುಮಾರು 10,000 ಕೋಳಿಗಳು ಸಾವನ್ನಪ್ಪಿದ್ದು, H5N1 ಇರುವುದು ದೃಢಪಟ್ಟಿದೆ ಎಂದು ಹೇಳಿದರು. ಸತ್ತ,…
ದಾವಣಗೆರೆ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಉಪಟಳಕ್ಕೆ ಸಾರ್ವಜನಿಕರು ಕಂಗಾಲಾಗಿದ್ದಾರೆ. ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ಐವರ ಮೇಲೆ ಬೀದಿನಾಯಿಗಳು ಮಾರಣಾಂತಿಕವಾಗಿ ದಾಳಿ ನಡೆದಿದೆ. ಮಾವಿನಕೋಟೆಯಲ್ಲಿ ಓರ್ವ ವೃದ್ಧ, ಮೂವರು ಮಕ್ಕಳು ಹಾಗೂ ಸಾಸ್ವೆಹಳ್ಳಿಯ ಓರ್ವ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿವೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳ ಸಂಖ್ಯೆ ಮೀತಿಮೀರುತ್ತಿದೆ. ಗ್ರಾಮ ಪಂಚಾಯತ್ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಸದಸ್ಯರ ವಿರುದ್ಧ ಗ್ರಾಮಸ್ಥರೊಬ್ಬರು ಆಕ್ರೋಶ ವ್ಯಕ್ತಪಡಿಸಿದರು. ತ್ವರಿತ ಕ್ರಮಕ್ಕೆ ಮುಂದಾಗದಿದ್ದರೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ಪಟ್ಟಣ ಬಸ್ ನಿಲ್ದಾಣದ ಮುಂಭಾಗದಲ್ಲಿ ಸಂಯುಕ್ತ ಕರ್ನಾಟಕ ರೈತ ಹಸಿರು ಸೇನೆಯ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾನುವಾರ, ರೈತರ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಖಂಡಿಸಿ ರೈತ ಸಂಘದ ಅಧ್ಯಕ್ಷ ಚನ್ನಾಯಕ ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಂಯುಕ್ತ ಕರ್ನಾಟಕ ಹಸಿರು ಸೇನೆ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ನಂದೀಶ್ವರ ಸ್ವಾಮಿ ಮಾತನಾಡಿ, ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ “ಎಲ್ಲಿದೆ ಆತ್ಮಹತ್ಯೆ, ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗುತ್ತಾ. ಅದೆಲ್ಲಾ ಸುಳ್ಳು ಎಂದು ರೈತರ ಬಗ್ಗೆ ತುಚ್ಚವಾಗಿ ಮಾತನಾಡಿದ್ದೀರಿ, ರೈತರಿಗೆ ದಿಧಿಕ್ಕಾರ ಕೂಗೋದು ಬಿಟ್ಟು ಬೇರೇನೋ ಮಾಡೋಕ್ಕಾಗಲ್ಲ ಎಂದು ರೈತರ ಅಸಹಾಯಕರು ಅನ್ನುವ ರೀತಿಯಲ್ಲಿ ಹೀಯಾಳಿಸಿ ಮಾತನಾಡಿದ್ದೀರಿ ಅಂತ ಡಿಸಿಎಂ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಡೀ ದೇಶಕ್ಕೆ ಅನ್ನ ನೀಡುವ ರೈತ ಜೀವನವಿಡೀ ತಾನು ಬದುಕುವುದು.ದುಡಿಯುವುದು ಎಲ್ಲವೂ ಇನ್ನೊಬ್ಬರಿಗಾಗಿಯೇ ಹೊರತು ತನ್ನ ಸ್ವಂತಕ್ಕಾಗಿ…
ಸರಗೂರು: ಶಿವರಾತ್ರಿ ರಾಜೇಂದ್ರ ಶ್ರೀಗಳು ನಾಡಿನಾದ್ಯಂತ ನೂರಾರು ಶಿಕ್ಷಣ, ಆರೋಗ್ಯ ಸಂಸ್ಥೆಗಳನ್ನು ಸ್ಥಾಪಿಸಿ, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಅಭಾವಿಲಿಂ ಮಹಾಸಭಾ ಕೇಂದ್ರ ಸಮಿತಿ ನಿರ್ದೇಶಕ ಯು.ಎಸ್.ಬಸವರಾಜು ತಿಳಿಸಿದರು. ಪಟ್ಟಣ ಬಿಡಗಲು ಗ್ರಾಮದ ಪಡುವಲು ವೀರಕ್ತ ಮಠದಲ್ಲಿ ಭಾನುವಾರದಂದು ಪೌರ್ಣಮಿ ಪೂಜೆ ಕಾರ್ಯಕ್ರಮ ಹಾಗೂ ಶ್ರೀ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 110 ನೇ ಜಯಂತಿ ಅಂಗವಾಗಿ ಸಂಸ್ಥಾಪಕರ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಸಮಾರಂಭ ಕಾರ್ಯಕ್ರಮವನ್ನು ಜಿಲ್ಲಾ ಶರಣು ಸಾಹಿತ್ಯ ಪರಿಷತ್ ಮೈಸೂರು ಹಾಗೂ ಪಡುವಲು ಶ್ರೀ ವಿರಕ್ತಮಠ ಹಾಗೂ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಡತನ ಹಾಗೂ ಅಸಮಾನತೆ ನಿರ್ಮೂಲನೆಗೆ ಶ್ರೀಗಳು ಶ್ರಮಿಸಿದ್ದರು. ಅದನ್ನು ಮುಂದುವರಿಸುತ್ತಿರುವ ಸುತ್ತೂರು ಮಠವು ಧರ್ಮ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಕ್ಷೇತ್ರದ ಸಂರಕ್ಷಣೆಗೂ ಶ್ರಮಿಸುತ್ತಿದೆ’ ಎಂದು ಶ್ಲಾಘಿಸಿದರು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಸುತ್ತೂರು ಶ್ರೀಮಠ ದೇಶದ ಉನ್ನತಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ರಾಜೇಂದ್ರ ಶ್ರೀಗಳು…
ಬೀದರ್: ವ್ಯಕ್ತಿಯೊಬ್ಬನಿಗೆ ಕೆಲವರು ಬೆದರಿಕೆಯೊಡ್ಡಿ, ಯಾತನೆ ನೀಡುತ್ತಿರುವ ಸಂಬಂಧ ನೊಂದ ವ್ಯಕ್ತಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ಬಗ್ಗೆ ಹುಮನಾಬಾದ ಪೊಲೀಸರು ಕಾನೂನು ರೀತಿಯ ಕ್ರಮಕೈಗೊಂಡಿದ್ದಾರೆ. ವ್ಯಕ್ತಿಯು ತನಗೆ ಕೆಲವರು ಬೆದರಿಕೆಯೊಡ್ಡಿ ಯಾತನೆ ನೀಡುತ್ತಿದ್ದಾರೆ ಎಂದು ಅಳವತ್ತುಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ವಿಡಿಯೋ ಹರಿಯಬಿಟ್ಟಿದ್ದ. ಈ ಸಂಬಂಧ ವ್ಯಕ್ತಿಗೆ ಯಾತನೆ ನೀಡುತ್ತಿದ್ದವರ ವಿರುದ್ಧ ಹುಮನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮವನ್ನು ಜರುಗಿಸಲಾಗಿದೆ. ಸಾಮಾಜಿಕ ಜಾಲತಾಣದ ಅಧಿಕಾರಿ, ಸಿಬ್ಬಂದಿಯ ಚುರುಕತನದಿಂದ ಮತ್ತು ಹುಮನಾಬಾದ ಪೊಲೀಸರು ನೊಂದವರಿಗೆ ತಕ್ಷಣ ಸ್ಪಂದಿಸಿ ಯಾತನೆ ನೀಡಿದವರ ವಿರುದ್ದ ಕೈಕೊಂಡ ಕ್ರಮದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಧಾರವಾಡ: ವೋಟಿಂಗ್ ಮಶಿನ್ ಗೊಂದಲ ಭಾರತ ದೇಶದಲ್ಲೇ ನಡೆಯುತ್ತಿದೆ. ಬಿಹಾರದ ಮೂರು ಲಕ್ಷ ಮನೆಗಳಿಗೆ ಜೀರೋ ನಂಬರ್ ಕೊಡಲಾಗಿದೆ. ಓಡಿಸ್ಸಾದಲ್ಲಿ ಕೂಡ ಎರಡೂವರೆ ಲಕ್ಷ ಮತಗಳು ಹೆಚ್ಚಾಗಿವೆ ಎಂಬ ಮಾಹಿತಿ ಇದೆ. ಚುನಾವಣೆ ವೇಳೆ ಆರೂವರೆ ಗಂಟೆವರೆಗೆ ವೋಟಿಂಗ್ ಮಾಡಿಸಲಾಗುತ್ತದೆ. ಬಿಹಾರದ ಒಂದೇ ಮನೆಯಲ್ಲಿ 950 ಮತಗಳನ್ನು ಜಾಸ್ತಿ ಮಾಡಿದ್ದಾರೆ. ಆದ್ದರಿಂದ ಮತ್ತೆ ಬ್ಯಾಲೆಟ್ ಸಿಸ್ಟಮ್ ಗೆ ಹೋಗುವುದು ಒಳ್ಳೆಯದು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ(ಎಸ್ ಐಆರ್) ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ರೊಹಿಂಗ್ಯಾಗಳು ಇದ್ದಾರೇನೋ ಎಂದು ತಿಳಿದುಕೊಂಡಿದ್ದಾರೆ. ಯಾವಾಗ ಚುನಾವಣೆ ಬರುತ್ತದೆಯೋ ಆಗ ಬಾಂಗ್ಲಾ ಮತ್ತು ಪಾಕಿಸ್ತಾನಕ್ಕೆ ಇವರು ಬೈಯುತ್ತಾರೆ. ಬಾಂಗ್ಲಾದೇಶದ ಮತ್ತು ರೋಹಿಂಗ್ಯಾಗಳು 2004 ರಿಂದ 2024ರ ವರೆಗೆ 72 ಸಾವಿರ ಜನರನ್ನು ಗುರುತಿಸಿ ಹೊರ ಕಳುಹಿಸಲಾಗಿದೆ. ಬಿಜೆಪಿಯವರು ಕಳೆದ…
ಸರಗೂರು: ಇಂದಿನ ಯುವ ಪೀಳಿಗೆಗೆ ನಾರಾಯಣ ಗುರುಗಳ ಮಾರ್ಗದರ್ಶನ ಅತ್ಯಗತ್ಯ. ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಯಶಸ್ವಿ ಆಗಬೇಕು’ ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್. ನಾಗರಾಜು ಸಲಹೆ ನೀಡಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಭಾನುವಾರದಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ನಾರಾಯಣ ಗುರುಗಳ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ರಕ್ತ ಕ್ರಾಂತಿ ಇಲ್ಲದೆ, ತಮ್ಮ ವಿಚಾರಗಳ ಮೂಲಕವೇ ಸಮಾಜ ಪರಿವರ್ತನೆಗೆ ಕಾರಣರಾದವರು ಬ್ರಹ್ಮಶ್ರೀ ನಾರಾಯಣ ಗುರುಗಳು, ಶತಮಾನದ ಹಿಂದೆ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಜನರಿಗೆ ನ್ಯಾಯ ಒದಗಿಸಿಕೊಟ್ಟವರು ನಾರಾಯಣ ಗುರುಗಳು. ಅವರ ವಿಚಾರಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವ ಕೆಲಸವಾಗಬೇಕು ಎಂದರು. ಪ್ರಾಸ್ತಾವಿಕ ನುಡಿ ವರ್ತಕರ ಮಂಡಳಿ ಮಾಜಿ ಅಧ್ಯಕ್ಷ ಎಸ್.ಎಂ.ಶ್ರೀನಿವಾಸ ಮಾತನಾಡಿ ‘ಶೋಷಿತ ವರ್ಗದವರಿಗೆ ಶಕ್ತಿ ತುಂಬಿದ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು, ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಜೀವನದುದ್ದಕ್ಕೂ ಪಾಲಿಸೋಣ…
ತುಮಕೂರು: ಕೊಪ್ಪಳ, ಬಾದಾಮಿ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಮಂಜೂರು ಮಾಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಆದರೆ ತುಮಕೂರಿನಲ್ಲಿ ಕಾಂಗ್ರೆಸ್ ಭವನ ಜಾಗ ವಿವಾದ ಮುಂದುವರಿದಿದೆ. ನಿಯಮ ಗಾಳಿಗೆ ತೂರಿ 2 ಎಕರೆ ಜಮೀನು ಮಂಜೂರು ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಇಡಿ ಅಧಿಕಾರಿಗಳಿಗೆ ಸಾಮಾಜಿಕ ಹೋರಾಟಗಾರ ಬಸವರಾಜು ದೂರು ನೀಡಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ ಇರುವ ಮರುಳೂರು ದಿಣ್ಣೆಯಲ್ಲಿರುವ 87/1 ಮತ್ತು 87/2 ಸರ್ವೆನಂ ಎರಡು ಎಕರೆ ವಿವಾದಿತ ಜಾಗ ಕಾಂಗ್ರೆಸ್ ಭವನ ಟ್ರಸ್ಟ್ ಗೆ ವಿವಾದಿತ ಜಮೀನು ಪರಭಾರೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಸಚಿವರಾದ ಜಿ.ಪರಮೇಶ್ವರ್, ಭೈರತಿ ಸುರೇಶ್, ಸಬ್ ರಿಜಿಸ್ಟ್ರಾರ್ ನಂಜೇಶ್, ಪಾಲಿಕೆ ಕಮಿಷನರ್ ಅಶ್ವಿಜಾ ವಿರುದ್ಧ ಸಾಮಾಜಿಕ ಹೋರಾಟಗಾರ ಬಸವರಾಜು ದೂರು ನೀಡಿದ್ದಾರೆ. 25 ಕೋಟಿ ರೂ ಮೌಲ್ಯದ 2 ಎಕರೆ ಜಮೀನು 17 ಲಕ್ಷ ರೂ.ಗೆ ಪರಭಾರೆ ಮಾಡಲಾಗಿದೆ. ಆ…
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಸಾಕ್ಷಿ ದೂರುದಾರ ಸಿ.ಎನ್.ಚಿನ್ನಯ್ಯ ಅಲಿಯಾಸ್ ಚೆನ್ನನ ಎಸ್ ಐಟಿ ಕಸ್ಟಡಿ ನಿನ್ನೆಗೆ ಅಂತ್ಯವಾಗಿದ್ದು, ಈ ಹಿನ್ನೆಲೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. ಭದ್ರತೆ ದೃಷ್ಟಿಯಿಂದ ಶಿವಮೊಗ್ಗ ಸೆಂಟ್ರಲ್ ಜೈಲಿಗೆ ಚಿನ್ನಯ್ಯನನ್ನು ಎಸ್ ಐಟಿ (SIT) ಪೊಲೀಸರು ಸ್ಥಳಾಂತರಿಸಿದ್ದಾರೆ. ಅತ್ತ ನ್ಯಾಯಾಂಗ ಬಂಧನಕ್ಕೊಳಗಾಗುತ್ತಿದ್ದಂತೆ ಇತ್ತ ಉಚಿತ ಕಾನೂನು ಸೇವೆಗಳ ಪ್ರಾಧಿಕಾರ ನೇಮಿಸಿದ್ದ ಚಿನ್ನಯ್ಯ ಪರ ವಕೀಲರಿಂದ ಜಾಮೀನು ಕೋರಿ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC