Subscribe to Updates
Get the latest creative news from FooBar about art, design and business.
- ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
- ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ: ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
- ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್ ಐಆರ್ ದಾಖಲಿಸಲು ಒತ್ತಾಯ
- ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್ ಬಾಬು ಕರೆ
- ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
- ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
- ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
- KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
Author: admin
ಗುಬ್ಬಿ, : ನಮಗೆ ಎಲ್ಲದಕ್ಕಿಂತಲೂ ಮುಖ್ಯವಾದದ್ದು ಆರೋಗ್ಯ, ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು ಎಂದು ನೆರಳು ಸೇವಾ ಟ್ರಸ್ಟ್ ನ ಅಧ್ಯಕ್ಷ ಜಗದೀಶ್ ತಿಳಿಸಿದರು. ತಾಲ್ಲೂಕಿನ ಸಿ.ಎಸ್.ಪುರ ಸಂತೆ ಮೈದಾನದಲ್ಲಿ ನೆರಳು ಸೇವಾ ಟ್ರಸ್ಟ್ ನ ಒಂದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನೆರಳು ಸೇವಾ ಟ್ರಸ್ಟ್ ಹಾಗೂ ಶ್ರೀ ದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದೊಂದಿಗೆ ನಡೆದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಮನುಷ್ಯ ಉದ್ಯೋಗ ಮತ್ತು ದುಡಿಮೆಯ ಒತ್ತಡದ ಜೀವನದಲ್ಲಿ ಆರೋಗ್ಯದ ಮೇಲಿನ ಕಾಳಜಿಯನ್ನೇ ಮರೆತುಬಿಡುತ್ತಾನೆ. ಇದರಿಂದ ಆರೋಗ್ಯ ಹದಗೆಡುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಆರೋಗ್ಯವಂತ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು. ಕಳೆದ ಒಂದು ವರ್ಷದಿಂದ ನೆರಳು ಸೇವಾ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗು, ಪುಸ್ತಕ, ಲೇಖನ ಸಾಮಗ್ರಿಗಳು. ಪರಿಸರದ ಬಗ್ಗೆ ಜಾಗೃತಿ ಸೇರಿದಂತೆ ಮುಂತಾದ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಮುಂದಿನ…
ತುಮಕೂರು: ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜನವರಿ 9ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ನ್ನು ಲಾಂಚ್ ಮಾಡಲಾಗಿದೆ. ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯ ಕೈಗೊಳ್ಳಲು ಮಹಿಳಾ ಉದ್ಯಮಿಗಳು ಮಾಹಿತಿ ನೀಡಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಮನವಿ ಮಾಡಿದ್ದಾರೆ. ತರಬೇತಿ ಪಡೆದು ಸ್ವ–ಉದ್ಯೋಗ ನಡೆಸುತ್ತಿರುವ ಮಹಿಳೆಯರು, ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದು ಉತ್ತಮ ಉತ್ಪನ್ನಗಳ ತಯಾರು ಮಾಡುತ್ತಿರುವ ಮಹಿಳಾ ಫಲಾನುಭವಿಗಳು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ಜರೂರಾಗಿ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು–572101 ಇಲ್ಲಿ ಮಹಿಳಾ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಿ ನೀಡಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೇಲೂರು: ಮಕ್ಕಳು ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಬೇಕು ಎಂದು ಸಂಹಿತ ಟಿನಿ ಕಿಡ್ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಕೆ. ಎಸ್. ಹರೀಶ್ ಹೇಳಿದರು. ಗ್ರಾಮದ ಶ್ರವಣ್ ಪಟೇಲ್ ಕಲ್ಯಾಣ ಮಂಟಪದಲ್ಲಿ ಸಂಹಿತ ಟಿನಿ ಕಿಡ್ ಶಾಲೆಯ ಜಾಂಬೂರಿ ಎರಡನೇ ವರ್ಷದ ಯುಕೆಜಿ ಪದವಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಶಾಲೆಯ ಆವರಣಕ್ಕೆ ಬಂದಾಗ ಪುಟ್ಟ ಪುಟ್ಟ ಮಕ್ಕಳು ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸುತ್ತಿದ್ದರೆ ನಾವು ಸಹ ಮಕ್ಕಳ ಜೊತೆಗೆ ಒಂದಾಗುತ್ತೇವೆ. ಪುಟ್ಟ ಮಕ್ಕಳ ಪೋಷಕರು ಸಹಕಾರದಿಂದ ಈ ಶಾಲೆಯು ಇಷ್ಟರ ಮಟ್ಟಿಗೆ ಬೆಳೆಯಲು ಸಹಕಾರಿಯಾಗಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಮಕ್ಕಳ ಆಟ ಪಾಠ ವ್ಯಾಸಂಗಕ್ಕೆ ಬೇಕಾಗುವ ಸೌಲಭ್ಯವನ್ನು ನೀಡುತ್ತೇವೆ ಎಂದರು. ಸಂಸ್ಥೆಯ ಕಾರ್ಯದರ್ಶಿ ಸಿ.ಆರ್. ಲಾವಣ್ಯ ಮಾತನಾಡುತ್ತಾ, ಈ ಸಂಸ್ಥೆಯು ಅಭಿವೃದ್ಧಿ ಹೊಂದಬೇಕಾದರೆ ಮಕ್ಕಳ ಜ್ಞಾನ, ವಿದ್ಯಾರ್ಜನೆ ಅತಿ ಮುಖ್ಯವಾಗಿದೆ. ಅದಕ್ಕೆ ನಮ್ಮ ಶಿಕ್ಷಕ ವೃಂದದವರು ಮಕ್ಕಳ ವ್ಯಾಸಂಗದ ಕಡೆ ಹೆಚ್ಚಿಗೆ ಗಮನ ಹರಿಸಿ ಅವರ ಮುಂದಿನ ವ್ಯಾಸಂಗದ…
ತುಮಕೂರು: ಮಕ್ಕಳಲ್ಲಿ ಆಹಾರದ ಮಹತ್ವ ತಿಳಿಸಲು, ಬಳಕೆಯಲ್ಲಿರುವ ವಿಭಿನ್ನ ಸಂಸ್ಕೃತಿಯ ಆಹಾರ ಪರಿಚಯಿಸಿ ಅಭಿರುಚಿ ಬೆಳೆಸಲು, ಆಹಾರ ತಯಾರಿಕೆಯಲ್ಲಿ ಆಸಕ್ತಿ ರೂಪಿಸಲು ನಗರದ ಶಿಲಾಗೇಟ್ ನ ಹಿಂದೂಸ್ತಾನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಮಕ್ಕಳ ಆಹಾರ ಮೇಳ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮಕ್ಕಳು ತಾವೇ ತಯಾರಿಸಿದ ವಿವಿಧ ರುಚಿಯ ಚಾಟ್ಸ್, ಸ್ನಾಕ್ಸ್ ಮತ್ತಿತರ ಆರೋಗ್ಯಕರ ತಿಂಡಿಗಳನ್ನು ಮೇಳದಲ್ಲಿ ಆಕರ್ಷಕವಾಗಿ ಪ್ರದರ್ಶಿಸಿ, ಮಾರಾಟ ಮಾಡಿ ಗಮನ ಸೆಳೆದರು. ತಮ್ಮ ಮಕ್ಕಳು ಸಿದ್ದಪಡಿಸಿದ ಆಹಾರವನ್ನು ಮುಗಿಬಿದ್ದು ಖರೀದಿಸಿದ ಪೋಷಕರು, ಸವಿದು ಸಂಭ್ರಮಿಸಿದರು. ಈ ವೇಳೆ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕಿ ಜಮಾನಿ ಜಾನ್ ಸುಲ್ತಾನಾ, ನಮ್ಮಲ್ಲಿನ ಆಹಾರ ಪದ್ಧತಿ, ಅಭಿರುಚಿ ವಿಭಿನ್ನವಾಗಿದೆ. ಇಂತಹ ಆಹಾರ ಸಂಸ್ಕೃತಿಯ ವಿಭಿನ್ನತೆಯಲ್ಲಿ ಏಕತೆ ಎನ್ನುವಂತೆ ಮಕ್ಕಳು ತಮ್ಮ ಅಭಿರುಚಿಯ ಆಹಾರವನ್ನು ಇತರರಿಗೂ ಪರಿಚಯಿಸಲು, ಮಕ್ಕಳಲ್ಲಿ ಆಹಾರ ತಯಾರಿಕೆ ಬಗ್ಗೆ ಆಸಕ್ತಿ ಮೂಡಿಸಲು ಈ ಮೇಳ ಸಹಕಾರಿಯಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿದರೆ ಅವರಲ್ಲಿ ಕ್ರಿಯಾಶೀಲತೆ, ಆಲೋಚನಾ ಶಕ್ತಿ…
ಚಿಕ್ಕನಾಯಕನಹಳ್ಳಿ: ಹೊಯ್ಸಳಕಟ್ಟೆ ಸಮೀಪ ಬೋರನಕಣಿವೆ ಶ್ರೀ ಸಾಯಿಧಾಮದ ಆವರಣದಲ್ಲಿ ಭಾನುವಾರ ಮಹಾ ಶಿವರಾತ್ರಿ ಅಂಗವಾಗಿ ನರ್ಮದೋದ್ಭವ ಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಮುಂಜಾನೆ 4 ಗಂಟೆಯಿಂದ 5 ಗಂಟೆಯ ಬ್ರಾಹ್ಮಿ ಲಗ್ನದಲ್ಲಿ ಶ್ರೀ ನರ್ಮದೇಶ್ವರ ಲಿಂಗ ಪ್ರತಿಷ್ಠಾಪನೆ, ನೇತ್ರೋನ್ಮೀಲನ, ಪ್ರಾಣಪ್ರತಿಷ್ಠೆ, ನಿರೀಕ್ಷನ, ಕಲಾಕರ್ಷಣೆ ಸಹಿತ ಕಲಾವ್ಯಾಸ ಹೋಮ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಸೇವಾಕಾರ್ಯಗಳು ನಡೆದವು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ, ಡಾ.ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ದಂಪತಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದರು. ನಂತರ 108 ಪುಣ್ಯನದಿಗಳ ತೀರ್ಥಗಳಿಂದ ಕಣಿವೆ ಶಂಕರನಿಗೆ ಅಭಿಷೇಕ ಪೂಜೆ ನೆರವೇರಿಸಿದರು. ಸಿದ್ದಗಂಗಾ ಮಠದ ಕಿರಿಯ ಶ್ರೀಗಳು ಶ್ರೀ ಶಿವ ಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಣಿವೆ ಶಂಕರನ ಪುಣ್ಯಾಭಿಷೇಕ ಮಂಗಳ ಕಾರ್ಯ ನಡೆಯಿತು. ಮಹಾಶಿವರಾತ್ರಿ ಆಚರಣೆ ಹಾಗೂ ಕಣಿವೆ ಶಂಕರನ ಅಭಿಷೇಕ ಕಾರ್ಯಕ್ರಮಗಳಿಗೆ ಶಿರಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ದಂಪತಿ ಚಾಲನೆ ನೀಡಿದರು. ಉಪಲೋಕಾಯುಕ್ತ…
ಸರಗೂರು: ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಸ್ವಾಮಿಗೆ ಪವಿತ್ರ ಗಂಗಾ ಜಲದಿಂದ ಅಭಿಷೇಕ ಮತ್ತು ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ವಿಶೇಷ ಪೂಜೆ ನಡೆಸಲಾಯಿತು. ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಾಗೂ ಬಂಡಿಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವ ಶ್ರೀಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಅರ್ಚಕರು ನುಸುಕಿನ ವೇಳೆಯಲ್ಲಿ ಮಾದೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಿ ಗಂದಾಭಿಷೇಕ, ಪುಷ್ಷಭಿಷೇಕ, ಮಹಾ ಮಂಗಳಾರತಿ ಸೇವೆಯನ್ನು ನೆರವೇರಿಸಿದ ಬಳಿಕ ಭಕ್ತರ ಧರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಮಹದೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಮಜ್ಜನದ ಬಾವಿ ಬಳಿ ಬಿಂದಿಗೆಗಳನ್ನು ಒಂದೆಡೆ ಇರಿಸಿ, ಜೊತೆಯಲ್ಲಿ ಎಳನೀರನ್ನು ಒಂದೆಡೆ ಇರಿಸಿ, ಮಂತ್ರ ಘೋಷ ಸಮೇತ ಪೂಜೆ ನೆರವೇರಿಸಿದರು. ನಂತರ ಮಜ್ಜನರ ಬಾವಿಗೆ ಗಂಗಾ ಪೂಜೆ ನೆರವೇರಿಸಿ, 101 ಬಿಂದಿಗೆಗೂ ಜಲ ತುಂಬಿಸಿದರು. ಬಳಿಕ ಅಲ್ಲಿಂದ ಛತ್ರಿ ಚಾಮರಗಳನ್ನು ಒಳಗೊಂಡು, ಮಂಗಳ…
ತುಮಕೂರು: ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ ಪ್ರಯುಕ್ತ ಮಠದಲ್ಲಿ ನಡೆದಿರುವ ಮೂರು ದಿನಗಳ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಷ್ಠಿತ ತಂಡಗಳು ಪಾಲ್ಗೊಂಡವು. ಸಿದ್ಧಗಂಗಾ ಜಾತ್ರೆಯ ವಿವಿಧ ಆಚರಣೆ, ಕಾರ್ಯಕ್ರಮಗಳ ಜೊತೆಗೆ ಕಬಡ್ಡಿ ಜಾತ್ರೆಯೂ ಮಠಕ್ಕೆ ಬರುವ ಸಹಸ್ರಾರು ಭಕ್ತರನ್ನು ಆಕರ್ಷಿಸಿ ಸಂಭ್ರಮ ಹೆಚ್ಚಿಸಿದೆ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರದಲ್ಲಿ ಸಿದ್ಧಗಂಗಾ ಸ್ಪೋರ್ಟ್ಸ್ ಅಸೋಸಿಯೇಷನ್ ಈ ಪಂದ್ಯಾವಳಿ ಆಯೋಜಿಸಿದೆ. ಮೊದಲ ದಿನ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಕಬಡ್ಡಿ ಜಾತ್ರೆಗೆ ಚಾಲನೆ ನೀಡಿ ಶುಭ ಕೋರಿದರು. 20 ಪುರುಷ ಹಾಗೂ 4 ಮಹಿಳಾ ತಂಡಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಸೆಣಸಾಟ ನಡೆಸಲಿವೆ. ಅಂತರಾಷ್ಟ್ರೀಯ ಗುಣಮಟ್ಟದ ಅಂಕಣದಲ್ಲಿ ನಡೆದಿರುವ ಕಬಡ್ಡಿ ಪಂದ್ಯಾವಳಿಯನ್ನು ಪ್ರತಿದಿನ ಸಾವಿರಾರು ಕ್ರೀಡಾಭಿಮಾನಿಗಳು ವೀಕ್ಷಿಸಿ ಸಂಭ್ರಮಿಸುತ್ತಿದ್ದಾರೆ. ಪಂದ್ಯಗಳ ರೋಚಕತೆಯನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರ ಅನುಕೂಲಕ್ಕಾಗಿ ವ್ಯವಸ್ಥಿತ ಗ್ಯಾಲರಿ ಸಿದ್ಧಪಡಿಸಲಾಗಿದೆ. ಎರಡನೇ ದಿನವಾದ ಶನಿವಾರ ಸಿದ್ಧಗಂಗಾ ಸ್ಪೋರ್ಟ್ಸ್ ಅಸೋಸಿಯೇಷನ್‌ನಿಂದ ಹಿರಿಯ ಕಬಡ್ಡಿ ಆಟಗಾರರಾದ ಮುನಿರಾಜು ಹಾಗೂ ನಟರಾಜು ಅವರಿಗೆ…
ಕುಣಿಗಲ್: ತಾಲ್ಲೂಕಿನ ಯಲಿಯೂರು ಗ್ರಾಮದಿಂದ ಗುರುವಾರ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಾಂಕಾ (29), ಕೊನೆಗೂ ತಮ್ಮ ಪ್ರಿಯಕರ ಡೇವಿಡ್ ಎಂಬಾತನ ಮನೆಯಲ್ಲಿ ಪತ್ತೆಯಾಗಿದ್ದಾರೆ. ಈ ಪ್ರಕರಣವು ನಾಟಕೀಯ ತಿರುವು ಪಡೆದುಕೊಂಡಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನೆಲೆ: ಯಲಿಯೂರು ಗ್ರಾಮದ ರುದ್ರೇಶ್ ಅವರ ಪತ್ನಿಯಾಗಿದ್ದ ಪ್ರಿಯಾಂಕಾ, ಕಳೆದ ಬುಧವಾರ ಸಂಬಂಧಿಕರ ಮದುವೆಗೆಂದು ಕೈಮರ ಗ್ರಾಮಕ್ಕೆ ಹೋಗಿದ್ದರು. ಗುರುವಾರ ಸಂಜೆ ಬೇಲೂರಿನಲ್ಲಿ ಬಸ್ ಹತ್ತುವಾಗ ಏಕಾಏಕಿ ನಾಪತ್ತೆಯಾಗಿದ್ದರು. ಅವರು ಸುಮಾರು 150 ರಿಂದ 200 ಗ್ರಾಂ ಚಿನ್ನದ ಒಡವೆಗಳನ್ನು ಧರಿಸಿದ್ದರಿಂದ, ಚಿನ್ನದ ಆಸೆಗಾಗಿ ಯಾರಾದರೂ ಅವರನ್ನು ಕೊಲೆ ಮಾಡಿರಬಹುದು ಎಂದು ಕುಟುಂಬದವರು ಶಂಕಿಸಿದ್ದರು. ದಿಕ್ಕು ತಪ್ಪಿಸುವ ಸಂಚು: ತಮ್ಮ ನಾಪತ್ತೆಯನ್ನು ಕೊಲೆ ಎಂದು ಬಿಂಬಿಸಲು ಪ್ರಿಯಾಂಕಾ ಮತ್ತು ಅವರ ಪ್ರಿಯಕರ ಡೇವಿಡ್ ಮಾಸ್ಟರ್ ಪ್ಲಾನ್ ಮಾಡಿದ್ದರು. ಕಲ್ಕೆರೆ ಕೆರೆ ಬಳಿ ಪ್ರಿಯಾಂಕಾ ಅವರ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚಪ್ಪಲಿ ಮತ್ತು ಬಟ್ಟೆಗಳನ್ನು ಬಿಡಿಬಿಡಿಯಾಗಿ ಎಸೆದಿದ್ದರು. ಇದನ್ನು ಕಂಡು ಪೊಲೀಸರು ಮತ್ತು…
ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ ಬಿಡುಗಡೆ ಮಾಡಿದ ಕೋಟ್ಯಂತರ ರೂಪಾಯಿ ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಗಂಭೀರ ಆರೋಪ ಮಾಡಿದ್ದಾರೆ. ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025–26ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬಂಡವಾಳ ಹೂಡಿಕೆಗಾಗಿ ವಿಶೇಷ ಸಹಾಯಧನವಾಗಿ ನೀಡಿದ್ದ 1,323.96 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರವು ಇತರ ಉದ್ದೇಶಗಳಿಗೆ ಬಳಸಿಕೊಂಡಿದೆ ಎಂದು ಆರೋಪಿಸಿದರು. ನೀರಾವರಿ ಯೋಜನೆಗಳಿಗೆ ಅನ್ಯಾಯ: ಸಣ್ಣ ನೀರಾವರಿ ಯೋಜನೆಗಳಾದ ಕೃಷ್ಣ ಭಾಗ್ಯ ಜಲ ನಿಗಮ ಮತ್ತು ಕರ್ನಾಟಕ ನೀರಾವರಿ ನಿಗಮಕ್ಕೆ ಬರಬೇಕಿದ್ದ ಹಣವನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಮುಂದಿನ ಕಂತಿನ ಹಣ ಪಡೆಯಲು ಇಲಾಖೆಯ ಮೇಲೆ ಒತ್ತಡ ಹೇರಿ ಸುಳ್ಳು ‘ಬಳಕೆ ಪ್ರಮಾಣಪತ್ರ’ಗಳನ್ನು (UCs) ಸೃಷ್ಟಿಸಲಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ತೆಲಂಗಾಣಕ್ಕೆ ವರ್ಗಾಯಿಸಿರುವುದಕ್ಕೆ ಮುಖ್ಯಮಂತ್ರಿಗಳೇ ನೇರ ಹೊಣೆ ಎಂದು ಅವರು…
ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು ಸೇರಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಶನಿವಾರ ಬೆಳಿಗ್ಗೆ ತೋಟದ ಬಾವಿಯಲ್ಲಿ ಚಿರತೆ ಬಿದ್ದಿರುವುದನ್ನು ಗಮನಿಸಿದ ಗ್ರಾಮಸ್ಥರು ತೀವ್ರ ಆತಂಕಕ್ಕೊಳಗಾಗಿದ್ದರು. ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ, ಮಧ್ಯಾಹ್ನದವರೆಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಬಾರದ ಕಾರಣ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಬಾವಿಯೊಳಗೆ ಬಿದ್ದಿದ್ದ ಚಿರತೆಯು ನೀರಿನಲ್ಲಿ ಮುಳುಗದಂತೆ ಅಲ್ಲಿದ್ದ ಕಟ್ಟಿಗೆಯ ತುಂಡೊಂದರ ಮೇಲೆ ಆಸರೆ ಪಡೆದು ಕುಳಿತಿತ್ತು. ಮಧ್ಯಾಹ್ನದ ನಂತರ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ, ಗ್ರಾಮಸ್ಥರ ಸಹಕಾರದೊಂದಿಗೆ ಬಾವಿಯೊಳಗೆ ಬಲೆಯನ್ನು ಇಳಿಸಿ ಚಿರತೆಯನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು. ರಕ್ಷಿಸಲಾದ ಚಿರತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿರತೆ ರಕ್ಷಣೆಯಾದ ಬಳಿಕ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…