Author: admin

‘ದಾದಾಸಾಹೇಬ್ ಫಾಲ್ಕೆ ಇಂಟರ್‌ ನ್ಯಾಷನಲ್ ಫಿಲಂ ಫೆಸ್ಟಿವಲ್‌ ಅವಾರ್ಡ್ಸ್‌’ನಲ್ಲಿ ನಟಿ ನಯನತಾರಾಗೆ ‘ಬೆಸ್ಟ್ ವರ್ಸಟೈಲ್ ನಟಿ’ ಪ್ರಶಸ್ತಿ ನೀಡಲಾಗಿದೆ. ವಿಭಿನ್ನ ಪಾತ್ರಗಳ ಮೂಲಕ ಚಿತ್ರರಂಗಗಳಲ್ಲಿ ಖ್ಯಾತಿ ಗಳಿಸಿರುವ ನಟಿ ಇದೀಗ ‘ಅತ್ಯುತ್ತಮ ಬಹುಮಖ ಪ್ರತಿಭೆಯುಳ್ಳ ನಟಿ’ ಪ್ರಶಸ್ತಿ ಗಳಿಸಿದ್ದಾರೆ. ಇದೇ ವೇಳೆ ‘ಅನಿಮಲ್’ ಚಿತ್ರಕ್ಕಾಗಿ ಸಂದೀಪ್ ರೆಡ್ಡಿ ವಂಗಾ ಅವರು ಬೆಸ್ಟ್ ಡೈರೆಕ್ಟರ್’ ಪ್ರಶಸ್ತಿ ಪಡೆದಿದ್ದಾರೆ. 2022ರಲ್ಲಿ ನಟಿ ನಯನತಾರಾ, ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸದ್ಯ ಅವಳಿ ಮಕ್ಕಳಿಗೆ ತಾಯಿಯಾಗಿದ್ದಾರೆ. ಸಿನಿಮಾದ ಜೊತೆಗೆ ಸಂಸಾರವನ್ನು ಚಂದವಾಗಿ ನಡೆಸಿಕೊಂಡು ಹೋಗುತ್ತಿರುವ ನಟಿ ಇದೀಗ ‘ಬೆಸ್ಟ್ ವರ್ಸಟೈಲ್ ನಟಿ’ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ಪಟ್ಟವನ್ನು ಅಲಂಕರಿಸಿರುವ ನಯನತಾರಾ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅಂದ ಹಾಗೆ ನಯನತಾರಾ ಸಿನಿಮಾವೊಂದಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ತಮ್ಮ ಸ್ವಂತ ಇನ್‌ ಸ್ಟಾಗ್ರಾಂ ಅಕೌಂಟ್ ಮಾಡಿಕೊಂಡಿರುವ ನಟಿ ನಯನತಾರಾ, ಈ ಮೊದಲು ತಮ್ಮ…

Read More

ಬೆಂಗಳೂರು: ರಾಚೇನಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮವಾಗಿದೆ. ಸಾವಿರಾರು ಮೀನುಗಳು ಸತ್ತು ತೇಲುತ್ತಿವೆ. ಸತ್ತ ಮೀನುಗಳ ವಾಸನೆಯಿಂದಾಗಿ ವಾಯುವಿಹಾರಿಗಳು ಬೆಳಗ್ಗೆ-ಸಂಜೆ ವಾಕ್​ ಮಾಡಲು ಈ ಕೆರೆಗೆ ಬರುತ್ತಿಲ್ಲ. ರಣಹದ್ದುಗಳು ಮತ್ತು ನಾಯಿಗಳು ಸತ್ತ ಮೀನುಗಳನ್ನು ತಿನ್ನಲು ಬರುತ್ತಿವೆ. ಸತ್ತ ಮೀನುಗಳನ್ನು ಅರ್ಧಂಬರ್ಧ ತಿಂದು ಕೆರೆ ಅಕ್ಕಪಕ್ಕದ ಮನೆಗಳ ಬಳಿ ಬಿಟ್ಟು ಹೋಗುತ್ತಿವೆಯಂತೆ. ಅಕ್ಕಪಕ್ಕದ ಮನೆಗಳಿಂದ ನೇರವಾಗಿ ನೀರನ್ನು ಬಿಡಲಾಗ್ತಿದೆ. ಇದರಿಂದ ಕೆರೆಯಲ್ಲಿರುವ ಮೀನುಗಳು ಸಾವನ್ನಪ್ಪುತ್ತಿವೆ ಎಂದು ಕೆಲವರು ತಿಳಿಸಿದ್ದಾರೆ. ಇದರಿಂದ ವಾಸನೆ ತಾಳಲಾಗದೆ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಥಣಿಸಂದ್ರ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ. ರಾಚೇನಹಳ್ಳಿ ಕೆರೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿರುವ 148 ಎಕರೆ ವಿಸ್ತೀರ್ಣ ಹೊಂದಿದೆ. ಕೆರೆಯಲ್ಲಿ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಪ್ರತಿನಿತ್ಯ ವಾಕ್ ಮಾಡಲು ಬರ್ತಿವಿ. ಆದರೆ ಸತ್ತಿರುವ ಮೀನುಗಳಿಂದ ತುಂಬಾ ಕೆಟ್ಟ ವಾಸನೆ ಬರ್ತಿದೆ. ದಯವಿಟ್ಟು ಬಿಬಿಎಂಪಿ ಅಧಿಕಾರಿಗಳು ಕೆರೆಯನ್ನು ಕ್ಲೀನ್ ಮಾಡಿಸಬೇಕು ಎಂದು ನಿವಾಸಿಗಳು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿರುವ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಹೆಚ್.ಡಿ. ರೇವಣ್ಣರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ನಗರದಲ್ಲಿಂದು ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. ಅಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ರಾಜಕೀಯ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಶಾಸಕ ಹೆಚ್.ಡಿ. ರೇವಣ್ಣ ಮತ್ತು ಈತನ ಮಗ ಸಂಸದ ಪ್ರಜ್ವಲ್ ರೇವಣ್ಣ ಇವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಲ್ಲದೆ, ಮಹಿಳೆಯರ ಬೆತ್ತಲೆ ವೀಡಿಯೋ ಚಿತ್ರೀಕರಿಸಿರುವ ಪ್ರಕರಣ ಹಾಗೂ ಮಹಿಳೆಯೋರ್ವರನ್ನು ಅಪಹರಿಸಿ ಬಚ್ಚಿಟ್ಟ ಪ್ರಕರಣ ಇಡೀ ರಾಜ್ಯ ತಲೆ ತಗ್ಗಿಸುವಂತಾಗಿದೆ ಎಂದು ಆರೋಪಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಚುನಾವಣೆ ಪೂರ್ವದಲ್ಲಿ ಸಂಸದ ಪ್ರಜ್ವಲ್ ರೇವಣ್ಣನ ಕಾಮದ ಕರ್ಮಕಾಂಡ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಾಗ, ರಾಜ್ಯ ಗುಪ್ತಚರ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸರ್ಕಾರದ ಗಮನಕ್ಕೆ ತರಬೇಕಾದ ಆದ್ಯ ಕರ್ತವ್ಯವಾಗಿತ್ತು. ಆದರೆ ಹಾಸನದ ಮಹಾಪ್ರಭುಗಳ ಮುಲಾಜಿಗೆ ಹೆದರಿ ಅಲ್ಲಿನ…

Read More

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತೆಯರನ್ನು ರಕ್ಷಣೆಗೆ ಮುಂದಾಗಿರುವ ವಿಶೇಷ ತನಿಖಾ ತಂಡ (ಎಸ್ ‌ಐಟಿ) ಸಂತ್ರಸ್ತ ಮಹಿಳೆಯರಿಗೆ ಕಾನೂನಿನ ನೆರವು, ರಕ್ಷಣೆ ಅಥವಾ ಇನ್ನಿತರೆ ಸಹಾಯ ಬೇಕಿದ್ದಲ್ಲಿ ಸಹಾಯವಾಣಿಯನ್ನು ಆರಂಭಿಸಿದೆ. ಹೌದು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಇಡೀ ದೇಶದವನ್ನೇ ಬೆಚ್ಚಿ ಬೀಳಿಸಿದೆ. ಸುಮಾರು 2,900ಕ್ಕೂ ಅಧಿಕ ಅಶ್ಲೀಲ ವೀಡಿಯೋಗಳ ಪೆನ್‌ ಡ್ರೈವ್ ಹಂಚಿಕೆಯಾಗಿದೆ. ಇದರಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುವ ಸಾಧ್ಯತೆಯಿದೆ. ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ವೀಡಿಯೋ ವೈರಲ್ ಆಗುತ್ತಿದ್ದಂತೆ, ಈಕೆ ಪೊಲೀಸರಿಗೆ ದೂರು ಕೊಟ್ಟು ತನ್ನ ಬಂಧನಕ್ಕೆ ಕಾರಣವಾಗಬಹುದು ಎಂದು ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್ ಮಾಡಿಸಲಾಗಿತ್ತು. ಆದರೆ, ಅತ್ಯಾಚಾರ ಸಂತ್ರಸ್ತೆಯ ಮಗ ನೀಡಿದ ದೂರಿನ ಅನ್ವಯ ಎಸ್‌ಐಟಿ ಪೊಲೀಸರು ಮಹಿಳೆಯನ್ನು ಹುಡುಕಿ ರಕ್ಷಣೆ ಮಾಡಿದ್ದಾರೆ. ಈಗ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಅತ್ಯಾಚಾರಕ್ಕೆ ಒಳಗಾದ ಮಹಿಳೆಯರಿಗೆ ರಕ್ಷಣೆ ನೀಡುವುದಕ್ಕೆ ಎಸ್‌ಐಟಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯರಿಗಾಗಿ…

Read More

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎನ್.ಆರ್. ಪುರ ತಾಲೂಕಿನ ಕರಗುಂದ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಕಳಸ ತಾಲೂಕು ಹೊರನಾಡು ಮೂಲದ ಇಬ್ಬರು ಯುವಕರು ಮೃತಪಟ್ಟಿರುತ್ತಾರೆ. ಹೊರನಾಡು ಸಮೀಪದ ಮುಂಡುಗದ ಮನೆ ಗ್ರಾಮದ ಸುನಿಲ್ ಹಾಗೂ ಹಾಸನ ಮೂಲದ ಉಮೇಶ್ ಮೃತಪಟ್ಟ ಯುವಕರು. ಇವರಿಬ್ಬರು ಹೊರನಾಡಿನ ವಸತಿಗೃಹ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸೋಮವಾರ ಮುಂಜಾನೆ ತನ್ನ ಬೈಕ್ ಸರ್ವಿಸ್ ಗೆಂದು ಸುನಿಲ್ ಉಮೇಶ್ ನೊಂದಿಗೆ ಶಿವಮೊಗ್ಗಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಬಾಳೆಹೊನ್ನೂರು ಎನ್.ಆರ್. ಪುರ ರಸ್ತೆಯಲ್ಲಿ ಕರಗುಂದ ಗ್ರಾಮದ ಸಮೀಪ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಇಬ್ಬರು ಯುವಕರು ತೀವ್ರ ಪೆಟ್ಟಿನಿಂದ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಈ ಇಬ್ಬರು ಯುವಕರು ತಲೆಗೆ ಹೆಲ್ಮಟ್ ಧರಿಸಲಿಲ್ಲ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕಳೆದ ಐದು ಕಾಲ ಪತ್ರಿಕೆಯನ್ನು ಪ್ರಕಟಿಸಿರುವ ಸ್ಥಳೀಯ ಸ್ಯಾಂಕಿ ರಸ್ತೆಯ ಐಕಾನಿಕ್ “ಕಾವೇರಿ “ ಚಿತ್ರಮಂದಿರ ಈ ನೆನಪು ಮಾತ್ರ. 1974ರ ಜನವರಿ 11ರಂದು ರಾಜ್‌ ಕುಮಾರ್ ಅಭಿನಯದ ಶ್ರೇಷ್ಠ ಕನ್ನಡ ಚಲನಚಿತ್ರ ‘ಬಂಗಾರದ ಪಂಜರ’ ಪ್ರದರ್ಶನದೊಂದಿಗೆ ಬಾಗಿಲು ತೆರೆದ ಈ ಚಿತ್ರಮಂದಿರ ಇತ್ತೀಚೆಗೆ ತನ್ನ ಸುವರ್ಣ ಮಹೋತ್ಸವದ ಮೈಲಿಗಲ್ಲು ಆಚರಿಸಿತ್ತು. ಅದರ ಸುದೀರ್ಘ ಇತಿಹಾಸ ಮತ್ತು ಅಚ್ಚುಮೆಚ್ಚಿನ ನೆನಪುಗಳು, ಕಾವೇರಿ ಸಿನಿಮಾ ಆನ್‌ ಲೈನ್ ಸ್ಟ್ರೀಮಿಂಗ್ ಮತ್ತು ದೊಡ್ಡ ಥಿಯೇಟರ್‌ ಗಳಂತಹ ಮನರಂಜನೆಯಲ್ಲಿ ಬದಲಾವಣೆಗಳನ್ನು ಹೊಂದಲು ಸಾಧ್ಯವಾಗಲಿಲ್ಲ. ಕಡಿಮೆ ಜನರು ಮತ್ತು ಕಡಿಮೆ ಹಣ ಗಳಿಸುವುದರಿಂದ ಅದನ್ನು ಶಾಶ್ವತವಾಗಿ ಮುಚ್ಚಬೇಕು. ಭವ್ಯತೆ ಮತ್ತು ಸೌಕರ್ಯಗಳಿಗೆ ಹೆಸರುವಾಸಿಯಾಗಿರುವ ಕಾವೇರಿ ಚಿತ್ರಮಂದಿರ, ನಗರದ ಅತಿದೊಡ್ಡ ಆಸನ ಸಾಮರ್ಥ್ಯಗಳಲ್ಲಿ ನೆಲೆಗೊಂಡಿದೆ. ಮೆಜೆಸ್ಟಿಕ್ ‌ನಲ್ಲಿರುವ ಕಪಾಲಿ ಚಿತ್ರಮಂದಿರದ ನಂತರ ಎರಡನೆಯದು ಇದಾಗಿದೆ. ಅದರ 1300 ಆಸನಗಳು ಮತ್ತು ವಿಶಿಷ್ಟವಾದ ಮಿನಿ-ಬಾಲ್ಕನಿಯೊಂದಿಗೆ, ಇದು ಪೋಷಕರಿಗೆ ಸ್ಮರಣೀಯ ಸಿನಿಮಾ ಅನುಭವವನ್ನು ಒದಗಿಸಿದೆ. ವಿಶಾಲವಾದ ಪಾರ್ಕಿಂಗ್ ಸೌಲಭ್ಯವು ಅದರ ಆಕರ್ಷಣೆಯನ್ನು…

Read More

ಕೊರಟಗೆರೆ: ಹಲವು ಫೈನಾನ್ಸ್ ಗಳಲ್ಲಿ ಸುಮಾರು 12 ಲಕ್ಷಕ್ಕೂ ಅಧಿಕ ಸಾಲ ಪಡೆದು, ಸಾಲ ತೀರಿಸಲು ಆಗದೇ ರೈತರೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ಕೊರಟಗೆರೆ ತಾಲೂಕಿನ ಸಿ ಎನ್ ದುರ್ಗಾ ಹೋಬಳಿಯ ಕಬುಗೆರೆ ಗೊಲ್ಲರಹಟ್ಟಿ ಗ್ರಾಮದ ರಾಜಣ್ಣ(38) ವರ್ಷ ನೇಣಿಗೆ ಶರಣಾಗಿರುವ ರೈತರಾಗಿದ್ದಾರೆ. ಜಮೀನಿನ ಬೋರ್ವೆಲ್ ಗಳಲ್ಲಿ ನೀರು ಸಿಗತ್ತೆ ಎಂಬ ನಂಬಿಕೆಯಿಂದ ರೈತ ರಾಜಣ್ಣ, ತನ್ನ ಮನೆಯ ಮೇಲೆ ಸಾಲ ಮಾಡಿ ಜಮೀನಿನಲ್ಲಿ 5ಕ್ಕೂ ಹೆಚ್ಚು ಬೋರ್ ವೆಲ್ ಕೊರೆಸಿದ್ದರು.  ಅಷ್ಟೇ ಅಲ್ಲದೆ ತನ್ನ ಸ್ನೇಹಿತರ ಬಳಿಯೂ ಕೈ ಸಾಲ ಪಡೆದಿದ್ದರು. ಆದರೆ ಜಮೀನಿನ ಬೋರ್ವೆಲ್ ಗಳಲ್ಲಿ ನೀರು ಸಿಗಲಿಲ್ಲ. ಪಡೆದ ಸಾಲ ತಿರಿಸಲಾಗದೇ ಮನನೊಂದ ರೈತ ರಾಜಣ್ಣ, ತಡರಾತ್ರಿ ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷದಿಂದ ಮಳೆ ಇಲ್ಲದೆ, ಬೆಳೆಗಳೆಲ್ಲವೂ ಸಂಪೂರ್ಣ ನಾಶವಾಗಿ, ಮಾಡಿರುವ ಸಾಲ ತೀರಿಸಲಾಗದೆ ರೈತರು ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚು ನಡೆಯುತ್ತಿವೆ. ಮೈಕ್ರೋ ಫೈನಾನ್ಸ್ ಸೇರಿದಂತೆ…

Read More

ತಾಯಿಯೊಬ್ಬರು ಅವಳಿ ಮಕ್ಕಳಿಗೆ ಜನನ ನೀಡಿರುವ ಬಗ್ಗೆ ಕೇಳಿರುತ್ತೇವೆ. ಅಪರೂಪವೆಂಬಂತೆ ಗರ್ಭಿಣಿಯೊಬ್ಬರು ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಮಕ್ಕಳಿಗೆ ಏಕಕಾಲದಲ್ಲಿ ಜನ್ಮ ನೀಡಿರುವ ಘಟನೆ ನಡೆದಿದೆ. 20 ವರ್ಷದ ಗರ್ಭಿಣಿಯೊಬ್ಬರು ಬರೋಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿದ ಅಪರೂಪದಲ್ಲಿ ಅಪರೂಪದ ಘಟನೆ ಬಿಹಾರದಲ್ಲಿ ನಡೆದಿದೆ. ಇಲ್ಲಿನ ಕಿಶನ್‌ ಗಂಜ್ ಜಿಲ್ಲೆಯಲ್ಲಿ ಇಂತಹ ಅಚ್ಚರಿಯ ಪ್ರಕರಣವೊಂದು ನಡೆದಿದ್ದು, ಈ ವಿಷಯ ಇದೀಗ ಇಡೀ ಪ್ರದೇಶದಲ್ಲಿ ಬಿಸಿಬಿಸಿ ಸುದ್ದಿಯಾಗಿ ಚರ್ಚೆಗೆ ಗ್ರಾಸವಾಗಿದೆ. ಗರ್ಭಿಣಿ ಜನ್ಮ ನೀಡಿದ ಎಲ್ಲಾ ಐದು ಮಕ್ಕಳು ಹೆಣ್ಣು ಶಿಶುಗಳಾಗಿದ್ದು, 1 ಕೆಜಿಗಿಂತ ಕಡಿಮೆ ತೂಕವಿದೆ. ಸದ್ಯ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂತಹ ಅಪರೂಪದ ಘಟನೆಯಲ್ಲಿ ಐವರು ಹೆಣ್ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿಗೆ ಹೆರಿಗೆ ಮಾಡಿಸಿಕೊಟ್ಟ ವೈದ್ಯೆ ಡಾ. ಫರ್ಜಾನಾ ಮಾತನಾಡಿ, ಈ ಪ್ರಕರಣ ಸವಾಲಿನದ್ದಾಗಿದ್ದು, ಇಂತಹ ಪ್ರಕರಣಗಳು ತೀರಾ ವಿರಳ. ಅಚ್ಚರಿಯ ವಿಷಯ ಎಂದರೆ ಎಲ್ಲಾ ಮಕ್ಕಳು ಸಾಮಾನ್ಯ ಹೆರಿಗೆಯ ಮೂಲಕ ಜನಿಸಿದರು ಎಂದು…

Read More

ದೇಶಾದ್ಯಂತ ಸದ್ಯ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ವಿಶೇಷ ತನಿಖಾ ತಂಡ ಲುಕ್ ‌ಔಟ್ ನೋಟಿಸ್ ಹೊರಡಿಸಿದೆ ಮತ್ತು ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೊಟೀಸ್ ನೀಡುವ ಸಾಧ್ಯತೆಗಳಿವೆ. ಕ್ರಿಮಿನಲ್ ಪ್ರಕರಣಗಳಲ್ಲಿ ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಜಾರಿಗೊಳಿಸಲಾಗುವ ವಿಶೇಷವಾದ ನೋಟಿಸ್ ಇದಾಗಿದೆ. ಇದನ್ನು ಲುಕ್ ಔಟ್ ಸರ್ಕ್ಯೂಲರ್ ಎಂದೂ ಕರೆಯಲಾಗುತ್ತದೆ. ಸಾಮಾನ್ಯವಾಗಿ ಇದನ್ನು ವಿದೇಶಾಂಗ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಬ್ಯೂರೋ ಆಫ್ ಇಮಿಗ್ರೇಷನ್ ಜಾರಿಗೊಳಿಸುತ್ತದೆ. ಯಾವುದೇ ರಾಜ್ಯಗಳಲ್ಲಿ ಸಂಭವಿಸಿದ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ, ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆ ಹಚ್ಚಲು, ಆಯಾ ರಾಜ್ಯ ಸರ್ಕಾರಗಳ ಅಧೀನ ಕಾರ್ಯದರ್ಶಿ ಹಾಗೂ ಅದಕ್ಕೆ ತತ್ಸಮಾನ ಹುದ್ದೆಗಳಲ್ಲಿರುವ ಅಧಿಕಾರಿಗಳು ಹಾಗೂ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳು ಮನವಿ ಸಲ್ಲಿಸಿದರೆ ಮಾತ್ರ ಇಂಥ ನೋಟಿಸ್ ಜಾರಿಗೊಳಿಸುತ್ತದೆ. ಇದಲ್ಲದೆ, ರಾಜ್ಯ ಸರ್ಕಾರಗಳು ರಚನೆ ಮಾಡುವ ವಿಶೇಷ ತನಿಖಾ ತಂಡಗಳಿಗೂ ಇಂಥ ಲುಕ್ ಔಟ್ ನೋಟಿಸ್ ಜಾರಿಗೊಳಿಸಲು…

Read More

ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ, ಕ್ರಿಕೆಟ್ ಚೆಂಡು ಮರ್ಮಾಂಗಕ್ಕೆ ಬಡಿದು 11 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಪುಣೆಯಲ್ಲಿ ನಡೆದಿದೆ. ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ್ದು, ಬ್ಯಾಟರ್ ಬಾಲನ್ನು ನೇರವಾಗಿ ತನ್ನತ್ತ ಹೊಡೆದಾಗ ಶೌರ್ಯ ಎಂಬ ಬಾಲಕ ಬೌಲಿಂಗ್ ಮಾಡುತ್ತಿದ್ದ. ವೇಗವಾಗಿ ಬಂದ ಚೆಂಡು ಶೌರ್ಯನ ಮರ್ಮಾಂಗಕ್ಕೆ ಬಡಿದಿದ್ದರಿಂದ, ಆತ ಮೈದಾನದಲ್ಲೇ ಕುಸಿದು ಬಿದ್ದಿರುವುದು ವೀಡಿಯೋದಲ್ಲಿ ದಾಖಲಾಗಿದೆ. ನಂತರ ಬಾಲಕನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ಸಂಬಂಧ ಆಕಸ್ಮಿಕ ಸಾವು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More