Subscribe to Updates
Get the latest creative news from FooBar about art, design and business.
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
- ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
- ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
- ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
- ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
- ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
Author: admin
ನನ್ನ ಮಕ್ಕಳು ಮತ್ತು ಸಂಸಾರವನ್ನು ಇತರೇ ಸರಕಾರಿ ನೌಕರರಂತೆ ಚೆನ್ನಾಗಿ ನೋಡಿಕೊಳ್ಳಬೇಕು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು, ಒಳ್ಳೆಯ ಜೀವನ ನಡೆಸಬೇಕು, ಉತ್ತಮ ವೇತನ ಪಡೆಯಬೇಕು ಎಂಬ ನನ್ನ ಎಲ್ಲಾ ಕನಸುಗಳು ಈಗಿನ ಜಿಲ್ಲಾಧಿಕಾರಿ ಬಂದ ಮೇಲೆ ನನಸಾಗಿದೆ ಎನ್ನುವ ಕಾರವಾರ ನಗರಸಭೆಯ ಪೌರಕಾರ್ಮಿಕ ನಾರಾಯಣ್ ಸೇರಿದಂತೆ ಕಾರವಾರ ನಗರಸಭೆಗೆ ಹೊಸದಾಗಿ ನೇಮಕಗೊಂಡ ಎಲ್ಲಾ ಪೌರಕಾರ್ಮಿಕರು ಜಿಲ್ಲಾಧಿಕಾರಿಗಳಿಗೆ ತಮ್ಮ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಸರಕಾರಿ ನೌಕರರಿಗೆ ನೇಮಕಗೊಂಡವರಿಗೆ ಪ್ರತಿ ತಿಂಗಳು ಸಂಬಳ ಬರುತ್ತದೆ ಎನ್ನುವುದೇನೋ ಸರಿ, ಆದರೆ ವಿವಿಧ ಆಡಳಿತಾತ್ಮಕ ಕಾರಣಗಳಿಂದ ಸೇವೆಗೆ ಸೇರಿದ ಮೊದಲನೇ ತಿಂಗಳ ಸಂಬಳ ಪಡೆಯಲು ಹಲವು ತಿಂಗಳು ಕಾಯಬೇಕಾಗುವುದು ಅಷ್ಟೇ ಸತ್ಯ. ಆದರೆ ಕಾರವಾರ ನಗರಸಭೆಗೆ ಹೊಸದಾಗಿ ನೇಮಕಗೊಂಡ ಪೌರಕಾರ್ಮಿಕರಿಗೆ ನೇಮಕವಾದ ಒಂದೇ ತಿಂಗಳಿಗೆ ಮೊದಲ ತಿಂಗಳ ವೇತನ ದೊರೆಯುವಂತೆ ಮಾಡಿದ ಜಿಲ್ಲಾಧಿಕಾರಿಗಳಿಗೆ, ಮೊದಲ ವೇತನ ಪಡೆದ ಎಲ್ಲಾ ಪೌರಕಾರ್ಮಿಕರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸಿಹಿತಿಂಡಿ ವಿತರಿಸಿ ಅವರಿಗೆ ಧನ್ಯವಾದ ತಿಳಿಸಿದರು. ಖಾಯಂ ನೌಕರರಾಗುವ ಮೊದಲು ತಾತ್ಕಾಲಿಕ,…
ಫಾರೆನ್ಸಿಕ್ -ಡಿಎನ್ ಎ ಪರೀಕ್ಷೆಗಳ ಮಹತ್ವ ಕುರಿತ ವಿಚಾರ ಸಂಕಿರಣ ಉಡುಪಿ: ಅಪರಾಧ ಕೃತ್ಯಗಳಲ್ಲಿ ಫಾರೆನ್ಸಿಕ್ ಸೈನ್ಸ್(ವಿಧಿ ವಿಜ್ಞಾನ) ನ್ಯಾಯ ಒದಗಿಸಿ ಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಡಿಎನ್‌ಎ, ಬೆರಳಚ್ಚು ಸೇರಿದಂತೆ ಹಲವು ಸಾಕ್ಷಗಳಿಂದ ಅಪರಾಧ ಪ್ರಕರಣವನ್ನು ಬೇಧಿಸಿ ಅಪರಾಧಿ ಗಳಿಗೆ ಶಿಕ್ಷೆ ಕೊಡಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಸಾಕಷ್ಟು ನೆರವಾಗುತ್ತದೆ ಎಂದು ಮಣಿಪಾಲ ಕೆಎಂಸಿಯ ಫಾರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕೋಲಜಿ ವಿಭಾಗದ ಪ್ರಾಧ್ಯಾಪಕ ಡಾ.ವಿನೋದ್ ನಾಯಕ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಮೇ 28ರಂದು ಮಂಗಳವಾರ ಹಮ್ಮಿಕೊಳ್ಳಲಾದ ‘ಅಪರಾಧ ಕೃತ್ಯಗಳಲ್ಲಿ ಫಾರೆನ್ಸಿಕ್ ಹಾಗೂ ಡಿಎನ್‌ಎ ಪರೀಕ್ಷೆಗಳ ಮಹತ್ವ’ ಕುರಿತು ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು. ಪ್ರತಿಯೊಂದು ಅಪರಾಧ ಪ್ರಕರಣಗಳಲ್ಲಿಯೂ ಪ್ರತಿಯೊಬ್ಬ ಅಪರಾಧಿ ಸ್ಥಳದಲ್ಲಿ ಒಂದಲ್ಲ ಒಂದು ಸುಳಿವು ಬಿಟ್ಟು ಹೋಗಿರುತ್ತಾನೆ. ಅದನ್ನು ಸರಿಯಾಗಿ ಕಂಡು ಹುಡುಕಬೇಕಾಗುತ್ತದೆ. ನಮ್ಮಲ್ಲಿ ಫಾರೆನ್ಸಿಕ್ ತಜ್ಞ ಸಂಖ್ಯೆ…
ಹಾಸನ: ನಾನು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ನನ್ನನ್ನು ಬೆಂಬಲಿಸಿ ಮೊದಲ ಪ್ರಾಶಸ್ತ್ಯ ಮತ ಕೊಡಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಗೆಲುವಿಗಿಂತ ಸೋಲೇ ಜಾಸ್ತಿಯಾಗಿದೆ. ರಾಜಿ ಮಾಡಿಕೊಂಡಿದ್ದರೆ ಏನು ಬೇಕಾದರೂ ಆಗಬಹುದಿತ್ತು. ನನ್ನನ್ನು ಕ್ಯಾಬಿನೆಟ್ ಗೆ ತೆಗೆದುಕೊಳ್ಳಲು ದೇವರಾಜ್ ಅರಸು ಸಾಕಷ್ಟು ಪ್ರಯತ್ನ ಮಾಡಿದ್ದರು ಎಂದರು. ವಿಧಾನ ಪರಿಷತ್ ಒಂದು ಗೌರವದ ಸ್ಥಾನವಾಗಿ ಕಾಣಬೇಕು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಿದ್ದೇನೆ. ಶಿಕ್ಷಕರ ಬೇಡಿಕೆಗಳು ಸಾಕಷ್ಟು ಇದೆ. ಶಿಕ್ಷಕರ ಪರವಾಗಿ ಪರಿಷತ್‌ನಲ್ಲಿ ಹೋರಾಟ ಮಾಡಲು ನಾನು ಸಿದ್ಧನಿದ್ದೇನೆ. ಹೀಗಾಗಿ ನನ್ನನ್ನು ಬೆಂಬಲಿಸಿ ಮೊದಲ ಪ್ರಾಶಸ್ತ್ಯ ಮತ ಕೊಡಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಮಾತು ಮುಂದುವರಿಸಿದ ಅವರು, ರಾಜ್ಯದಲ್ಲಿ ಯಾವ ಮಹಿಳೆಯರಿಗೆ ಅನ್ಯಾಯ ಆಗಿದೆ, ಯಾರು ನೋವಿನಲ್ಲಿ ಇದಾರೆ. ನೊಂದ ಮಹಿಳೆಯರಿಗೆ ಸೂಕ್ತ ಪರಿಹಾರ ಸಿಗಬೇಕಾಗಿದೆ. ಶೋಷಣೆಗೆ ಒಳಗಾದ ಮಹಿಳೆಯರ ಪರವಾಗಿ ನಾನು ಹೋರಾಟ…
ಬೆಂಗಳೂರು: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಆತ್ಮಹತ್ಯೆ ಪ್ರಕರಣವು ಇದೀಗ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದ್ದು, ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ ನಡೆದಿರುವ 87 ಕೋಟಿ ರೂಪಾಯಿ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರವಿಲ್ಲ ಎಂದು ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ. ಈ ಬಗ್ಗೆ ಸ್ವತಃ ಸಚಿವರೇ ಹಗರಣ ನಡೆದಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ತಾವೇ ಒಪ್ಪಿಕೊಂಡಂತೆ ಹಾಗಾದರೆ ಈ ಹಗರಣ ನಡೆದಿರುವುದು ಸತ್ಯ. ಆದರೆ, ಈ ಅವ್ಯವಹಾರದಲ್ಲಿ ತಮ್ಮ ಪಾತ್ರ ಇದೆಯೂ ಇಲ್ಲವೋ ಎಂದು ನಿರ್ಧಾರ ಮಾಡಬೇಕಾಗಿರೋದು ನ್ಯಾಯಾಲಯ. ತಮಗೆ ತಾವೇ ಕ್ಲೀನ್ ಚೀಟ್ ಕೊಟ್ಟುಕೊಳ್ಳಲು ಇದು ತಮ್ಮ ಮನೆಯ ಆಸ್ತಿಯಲ್ಲ. ಪರಿಶಿಷ್ಟ ಪಂಗಡಗಳ ಜನರ ಕಲ್ಯಾಣಕ್ಕೆ ಸೇರಬೇಕಾದ ಹಣ. ಸಿಎಂ ಸಿದ್ದರಾಮಯ್ಯ ಅವರೇ, ಮೃತ ಅಧಿಕಾರಿ ಡೆತ್ ನೋಟ್ ನಲ್ಲಿ ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡು 24 ಗಂಟೆ ಕಳೆದರೂ ಇನ್ನೂ ಸಚಿವರ ರಾಜೀನಾಮೆ ಪಡೆದುಕೊಂಡಿಲ್ಲ ಎಂದು…
ಬೆಂಗಳೂರು: ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದೆ. ಟಿಕೆಟ್ ಗಾಗಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ಹೋಗುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲಿಯೂ ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಎಲ್ಲರೂ ಬ್ಲಾಕ್, ಜಿಲ್ಲಾ, ರಾಜ್ಯಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲ ಕಾರ್ಯಕರ್ತರಿಗೆ ಗೌರವ ನೀಡಬೇಕಿದೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ ಅವರೇ ಎಲ್ಲಾ ತೀರ್ಮಾನ ಮಾಡಬಾರದು ಎನ್ನುವ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಂಗಳೂರು: ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 29ರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಹಾಸನ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್. ನಗರ ಸಂತ್ರಸ್ಥ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪ ಕೇಳಿ ಬಂದಿದ್ದರಿಂದ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ನಾಳೆಗೆ ವಿಚಾರಣೆ ಮುಂದೂಡಿದೆ. ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿ ಎಸ್ ಪಿಪಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಧೀಶರು ನೋಟೀಸ್ ನೀಡಿದ್ದರು. ಭವಾನಿ ರೇವಣ್ಣ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ಮತ್ತೊಂದೆಡೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಕೊಪ್ಪಳ: ತಾಲೂಕಿನ ಹೊಸಲಿಂಗಾಪುರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರಾಜೇಶ್ವರಿ (50), ವಸಂತಾ (28), ಸಾಯಿಧರ್ಮತೇಜ್ (5) ಮೃತ ದುರ್ದೈವಿಗಳಾಗಿದ್ದಾರೆ. ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ವ್ಯಕ್ತಿ ಜೊತೆ ವಸಂತಾರ ಮದುವೆ ಆಗಿತ್ತು. ಆದರೆ ವಸಂತಾ ಕಳೆದ ಎರಡು ವರ್ಷದ ಹಿಂದೆ ಪತಿಯಿಂದ ದೂರವಾಗಿ, ಬಳಿಕ ಹೊಸಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ತಾಯಿ ಮತ್ತು ಮಗನ ಜೊತೆ ಇದ್ದರು. ವಸಂತಾ ಹೊಸಲಿಂಗಾಪುರ ಬಳಿ ಇರುವ ಬೊಂಬೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅನ್ಯ ಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದರು. ನಂತರ ಆರು ತಿಂಗಳ ಹಿಂದೆ ಕುಟುಂಬಸ್ಥರಿಂದ ಸ್ವಲ್ಪ ಅಂತರ ಕಾಯ್ದುಕೊಂಡಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ರಾಜೇಶ್ವರಿ ಅವರಿಗೆ ಇನ್ನೊಬ್ಬ ಮಗಳು ಕರೆ ಮಾಡಿದ್ದರು. ಆದರೆ ರಾಜೇಶ್ವರಿ ಕರೆ ಸ್ವೀಕರಿಸಲಿಲ್ಲ. ಹೀಗಾಗಿ ಇಂದು ಮುಂಜಾನೆ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮುನಿರಾಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ, ಅಪ್ರಾಪ್ತ ಮಗಳ ಪರವಾಗಿ ದೂರು ನೀಡಿದ್ದ ದೂರುದಾರ ಮಹಿಳೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ. ದೂರುದಾರ ಮಹಿಳೆಯು ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅಲ್ಲದೆ, ಅವರು ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಯಡಿಯೂರಪ್ಪ ವಿರುದ್ಧ ಇತ್ತೀಚೆಗೆ ಅಪ್ರಾಪ್ತ ಬಾಲಕಿಯ ತಾಯಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದರು. “ನನ್ನ ಮಗಳ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್ ಐಟಿ ಗೆ ವಹಿಸುವಂತೆ ಆಗ್ರಹಿಸಿ, ಫೆಬ್ರವರಿ 2 ರಂದು ಯಡಿಯೂರಪ್ಪ ಅವರ ಬಳಿ ನಾನು ಮತ್ತು ಮಗಳು ತೆರಳಿದ್ದ ವೇಳೆ, ಲೈಂಗಿಕ ದೌರ್ಜನ್ಯದ ಘಟನೆ…
ಇತ್ತೀಚಿಗೆ ನಟಿಯರ ಭಾವಚಿತ್ರಗಳನ್ನು ಬಳಸಿ ಕೃತಕ ಬುದ್ಧಿಮತ್ತೆ ಮುಖಾಂತರ ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಇದೀಗ ಬೆಂಗಳೂರಿನ ಪ್ರತಿಷ್ಠಿತ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯ ಭಾವಚಿತ್ರಗಳನ್ನು ಕೃತಕ ಬುದ್ಧಿಮತ್ತೆ ಮುಖಾಂತರ ಅಶ್ಲೀಲವಾಗಿ ಎಡಿಟ್ ಮಾಡಿ ಹರಿಬಿಡಲಾಗಿದೆ. ದುಷ್ಕರ್ಮಿಗಳು ಇತ್ತೀಚಿಗೆ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರ ಭಾವಚಿತ್ರವನ್ನು, ಡೀಪ್ ಫೇಕ್ ಮೂಲಕ ಅಶ್ಲೀಲವಾಗಿ ವಿಡಿಯೋ ಎಡಿಟ್ ಮಾಡಿದ್ದರು. ಈ ಪ್ರಕರಣ ನಂತರ ಇದೇ ರೀತಿ ನಟಿ ಕತ್ರಿನಾ ಕೈಫ್ ಅವರ ಭಾವಚಿತ್ರ ಉಪಯೋಗಿಸಿ ಅಶ್ಲೀಲವಾಗಿ ಎಡಿಟ್ ಮಾಡಲಾಗಿತ್ತು. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇನ್ಸ್ಟಾಗ್ರಾಮ್ ನಲ್ಲಿ ಗ್ರೂಪ್ ರಚಿಸಿಕೊಂಡಿದ್ದಾರೆ. ಬಳಿಕ ಈ ಗ್ರೂಪ್ ನಲ್ಲಿ ಅನಾಮದೆಯ ವ್ಯಕ್ತಿ ವಿದ್ಯಾರ್ಥಿನಿಯರ ಮಾರ್ಫಿಂಗ್ ಭಾವಚಿತ್ರಗಳನ್ನು ಶೇರ್ ಮಾಡಿದ್ದಾನೆ. ಈ ವಿಚಾರ ತಿಳಿದು ವಿದ್ಯಾರ್ಥಿನಿಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಪೋಷಕರು ಈಗಾಗಲೇ ಸೈಬರ್ ಸೆಲ್ ಗೆ ದೂರು ನೀಡಿದ್ದಾರೆ. ಮೇ 24 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಮದ್ಯ ಸರ್ವ್ ಮಾಡಲು ಬಾರ್ ಸಿಬ್ಬಂದಿ ನಿರಾಕರಿಸಿದರೆಂಬ ಕೋಪಕ್ಕೆ ವ್ಯಕ್ತಿಯೊಬ್ಬ ಅಲ್ಲೇ ಇದ್ದ ಡಿಜೆಯನ್ನು ಗುಂಡಿಕ್ಕಿ ಹತ್ಯೆಮಾಡಿದ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ. ಆರೋಪಿ ಹಾಗೂ ಆತನ ನಾಲ್ವರು ಸ್ನೇಹಿತರು ಮಧ್ಯರಾತ್ರಿ ಸುಮಾರು 1 ಗಂಟೆಗೆ ಬಾರ್ ಗೆ ಬಂದಿದ್ದರು. ಆ ಸಮಯದಲ್ಲಿ ಬಾರ್ ಮುಚ್ಚಲಾಗಿತ್ತು. ಆದರೂ ಅಲ್ಲಿದ್ದ ಸಿಬ್ಬಂದಿಗೆ ಮದ್ಯ ಸರ್ವ್ ಮಾಡುವಂತೆ ತಾಕೀತು ಮಾಡಿದ್ದಾರೆ. ಇದಕ್ಕೆ ಸಿಬ್ಬಂದಿ ನಿರಾಕರಿಸಿದ್ದು, ಆಗ ಜಗಳ ಶುರುವಾಗಿದೆ. ಬಾರ್ ಸಿಬ್ಬಂದಿ ಮತ್ತು ಯುವಕರ ನಡುವೆ ಮಾರಾಮಾರಿಯೇ ನಡೆದಿತ್ತು. ಈ ನಡುವೆ ಕೋಪದಲ್ಲಿ ತನ್ನ ಕಾರ್ ನಲ್ಲಿದ್ದ ರೈಫಲ್ ತೆಗೆದುಕೊಂಡು ಬಂತ ಅಪರಿಚಿತ ಒಬ್ಬ ಡಿಜೆ ಜಾಕಿ ಎದೆಗೆ ಗುಂಡಿಕ್ಕಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಡಿಜೆಯನ್ನು ರಾಜೇಂದ್ರ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಅಲ್ಲೇ ಕೊನೆಯುಸಿರೆಳೆದಿದ್ದಾನೆ. ಸಿಸಿಟಿವಿ ದೃಶ್ಯ ಎಲ್ಲೆಡೆ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…