Subscribe to Updates
Get the latest creative news from FooBar about art, design and business.
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
- ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
- ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
- ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
- ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
- ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
Author: admin
ಉಡುಪಿ: ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪತ್ರಕರ್ತರಿಗೆ ಮೇ 21 ರಂದು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾದ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಪೋಕ್ಸೊ ಕಾಯಿದೆ 2012ರಲ್ಲಿ ಜಾರಿಗೆ ಬಂದಿದ್ದು, 18ವರ್ಷದ ಕೆಳಗಿನ ನೊಂದ ಮಕ್ಕಳಿಗೆ ಇದರಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಿಶೇಷ ಪೋಲಿಸರು ಅದರಲ್ಲೂ ಮಹಿಳೆಯರು ಇವರನ್ನು ವಿಚಾರಣೆ ಮಾಡಬೇಕು ಮತ್ತು ಮಹಿಳಾ ವೈದ್ಯಾಧಿಕಾರಿಗಳೇ ವೈದ್ಯಕೀಯ ಪರೀಕ್ಷೆ ನಡೆಸ ಬೇಕು.…
ದೇಶದ 17 ಸ್ಥಳಗಳಲ್ಲಿ ತಾಪಮಾನ 48 ಡಿಗ್ರಿ ಸೆಲ್ಸಿಯಸ್ ದಾಟಿದೆ. ಉತ್ತರ-ಪಶ್ಚಿಮ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ನಿರಂತರ ಶಾಖದಿಂದ ಜನ ತತ್ತರಿಸಿ ಹೋಗಿದ್ದಾರೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಅವರು ಪಶ್ಚಿಮದ ಅಡಚಣೆ ಮತ್ತು ಅರೇಬಿಯನ್ ಸಮುದ್ರದಿಂದ ತೇವಾಂಶದಿಂದ ಬರುತ್ತಿರುವ ಕಾರಣ, ಮೂರು ದಿನಗಳ ನಂತರ ಸುಡುವ ಶಾಖದಿಂದ ಸ್ವಲ್ಪ ಪರಿಹಾರವನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ. ಪಶ್ಚಿಮ ಘಟ್ಟದ ಅವಾಂತರ ಹಾಗೂ ಅರಬ್ಬಿ ಸಮುದ್ರದಿಂದ ತೇವಾಂಶ ಬರುತ್ತಿರುವುದರಿಂದ ದೇಶದ ವಾಯುವ್ಯ ಮತ್ತು ಮಧ್ಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದ್ದು, ಪಶ್ಚಿಮ ಹಿಮಾಲಯ ಭಾಗದಲ್ಲಿ ಮಳೆಯಾಗುವ ಸಂಭವವಿದ್ದು, ಬಿಸಿಲಿನ ತಾಪದಿಂದ ಜನತೆಗೆ ನೆಮ್ಮದಿ ದೊರೆಯಲಿದೆ ಎಂದರು. ರಾಷ್ಟ್ರ ರಾಜಧಾನಿಯಲ್ಲಿ ಬಿಸಿಲಿನ ಬೇಗೆ ಮುಂದುವರಿದಿದ್ದು, ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ 48 ಡಿಗ್ರಿ ಸೆಲ್ಸಿಯಸ್ ದಾಟಿದೆ. ದೆಹಲಿಗೆ ಸೋಮವಾರ ‘ರೆಡ್ ಅಲರ್ಟ್’ ನೀಡಲಾಗಿದ್ದು, ಮುಂದಿನ ಮೂರು ದಿನಗಳ ಕಾಲ ಅದು ಹಾಗೆಯೇ ಇರುತ್ತದೆ ಎಂದು ಹವಾಮಾನ…
ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬೆನ್ನಲ್ಲೇ ಪಕ್ಷಗಳ ನಾಯಕರು ತಮ್ಮ ಹೇಳಿಕೆಗಳ ಮೂಲಕ ಸುದ್ದಿಯಾಗುತ್ತಿದ್ದಾರೆ. ಅಂತೆಯೇ ಇದೀಗ ಡಿ.ಕೆ. ಶಿವಕುಮಾರ್ ಅವರು EVM ಕುರಿತು ಅಚ್ಚರಿ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಭಾರತ್ ಜೋಡೋ ಭವನದಲ್ಲಿ ನಡೆದ ನೆಹರು ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ ಅವರು ಇವಿಎಂ ಯಂತ್ರಗಳು ಏನು ಆಗದೇ ಹೋದರೆ ಸರಿ. ಯಾಕೆಂದರೆ ಜನ ನಮ್ಮ ಪರವಾಗಿದ್ದಾರೆ. ಹೀಗಾಗಿ ಒಳ್ಳೆಯ ಶುಭ ಸೂಚನೆ ಬರುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಆದರೆ, ಡಿ.ಕೆ. ಶಿವಕುಮಾರ್ ಅವರ ಈ ಹೇಳಿಕೆ ಸೋಲಿನ ಭಯವೇ? ಅಥವಾ ಗೆಲುವಿನ ಭರವಸೆಯೇ? ಎಂಬುದು ಹಲವರ ಪ್ರಶ್ನೆಯಾಗಿದೆ. ಯಾಕೆಂದರೆ, ಇತ್ತೀಚೆಗೆ ಚುನಾವಣೆ ಸಮೀಕ್ಷೆ ಕಾಂಗ್ರೆಸ್ ನಾಯಕರ ಕೈ ಸೇರಿದೆ. ಅದರಲ್ಲಿ ಕಾಂಗ್ರೆಸ್ ಗೆಲ್ಲುವ ಸ್ಥಾನಗಳ ಮಾಹಿತಿ ಇದೆ. ಹೀಗಾಗಿ ಗೆಲ್ಲುವ ಸ್ಥಾನಗಳು ವಿರಳವಿದ್ದು, ಇತ್ತ ತಾವು ಮಾತ್ರ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಾ ಬಂದಿರುವುದು ಫಲಿತಾಂಶ ಬಂದಾಗ ಇರುಸು ಮುರುಸು…
ತುಮಕೂರು: ಕುಟುಂಬ ಕಲಹದ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿಯು ಭೀಕರವಾಗಿ ಕೊಲೆಯಾಗಿರೋ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಪುಷ್ಪ(32) ಕೊಲೆಯಾದ ದುರ್ದೈವಿಯಾಗಿದ್ದಾರೆ. ಕತ್ತು ಹಾಗೂ ದೇಹದ ಅಂಗಾಂಗಗಳನ್ನ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್, ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ ಳನ್ನು ಮದುವೆಯಾಗಿದ್ದನು. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದನು. ಮರದ ಸಾಮಿಲ್ ವೊಂದರಲ್ಲಿ ಹೆಲ್ಪರ್ ಆಗಿ ಶಿವರಾಮ್ ಕೆಲಸ ಮಾಡ್ತಿದ್ದ ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗ್ತಿದೆ. ಇದೇ ಗಲಾಟೆಯಲ್ಲಿ ನಿನ್ನೆ ರಾತ್ರಿ ಪತ್ನಿಯನ್ನ ಪತಿ ಶಿವರಾಮ್ ಭೀಕರವಾಗಿ ಕೊಲೆ ಮಾಡಿದ್ದಾರೆ. ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ…
ಕೊರಟಗೆರೆ: ಪಟ್ಟಣದ ದೊಡ್ಡಪೇಟೆ ಬಡಾವಣೆಯ ಪತ್ರಕರ್ತ ದೇವರಾಜ್ ಸಹೋದರಿ ಶಶಿಕಲಾ ಎನ್ನುವವರ ಮನೆಯೊಂದರಲ್ಲಿ ಕಳ್ಳತನವಾಗಿದ್ದು, ಇಂದು ಬೆಳಗಿನ ಜಾವ ಪತ್ರಕರ್ತನ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಖತರ್ನಾಕ್ ಕಳ್ಳರು ಕಳ್ಳತನ ಮಾಡಿದ್ದಾರೆ. ಬೆಳಗಿನ ಜಾವ 3:00 ಸುಮಾರಿಗೆ ಮನೆಯ ಬೀಗ ಹೊಡೆದು, 30 ಗ್ರಾಂ ಬಂಗಾರ ಹಾಗೂ 25,000 ನಗದು ದೋಚಿ ಇಬ್ಬರು ಕಳ್ಳರು ಪರಾರಿಯಾಗಿದ್ದಾರೆ. ಪಕ್ಕದ ಬಾಡಿಗೆ ಮನೆಯವರು ಓಡಾಟದ ಶಬ್ದ ಕೇಳಿ ಹೊರ ಬಂದಾಗ ಕಳ್ಳರು ಓಡಿ ಹೋಗಿದ್ದಾರೆ ಎನ್ನಲಾಗಿದೆ. ಬಾಡಿಗೆ ಮನೆಯವರು ತಕ್ಷಣ ಮನೆಯ ಓನರ್ ಗೆ ಕರೆ ಮಾಡಿ ತಿಳಿಸಿದ್ದಾರೆ. ಮಕ್ಕಳ ಶಾಲೆ ಪ್ರಾರಂಭಕ್ಕೆ ಸ್ಕೂಲ್ ಫೀಸ್ ಗೆ ಎಂದು ಇಟ್ಟಿದ್ದ ಹಣ ಕಳ್ಳತನ ಮಾಡಿದ್ದಾರೆ ಎಂದು ಮನೆ ಒಡತಿ ಶಶಿಕಲಾ ತಿಳಿಸಿದ್ದಾರೆ. ಇನ್ನು ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳು ಬೆರಳಚ್ಚು ತಜ್ಞರು, ಡಾಗ್ ಸ್ವಾಡ್ ಭೇಟಿ ನೀಡಿ ಮನೆಯ ಸುತ್ತಮುತ್ತ ಪರಿಶೀಲನೆ ನಡೆಸಿ, ಮನೆಯವರ ಬಳಿ ಅಧಿಕಾರಿಗಳು…
ಸಾರ್ವಜನಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ತೆಲಂಗಾಣದ ಆಹಾರ ಸುರಕ್ಷತಾ ಆಯುಕ್ತರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಆಹಾರ ಸುರಕ್ಷತಾ ಆಯುಕ್ತರು 24 ಮೇ 2024 ರಿಂದ ಗುಟ್ಕಾ ಮತ್ತು ಪಾನ್ಮಸಾಲ ಉತ್ಪಾದನೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರುವ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ನಿಷೇಧವು ಒಂದು ವರ್ಷದವರೆಗೆ ಜಾರಿಯಲ್ಲಿರುತ್ತದೆ. ಗುಟ್ಕಾ ಮತ್ತು ಪಾನ್ ಮಸಾಲಾ ತಂಬಾಕು ಮತ್ತು ನಿಕೋಟಿನ್ ಅನ್ನು ಹೊಂದಿರುತ್ತದೆ. ಇದು ದೇಹಕ್ಕೆ ಅತ್ಯಂತ ಹಾನಿಕಾರಕವಾಗಿದೆ. ಈ ಉತ್ಪನ್ನಗಳು ಬಾಯಿ, ಗಂಟಲು, ಶ್ವಾಸಕೋಶಗಳು, ಹೃದಯ ಮತ್ತು ದೇಹದ ಇತರ ಭಾಗಗಳ ಕ್ಯಾನ್ಸರ್ ಗೆ ಕಾರಣವಾಗಬಹುದು. ಈ ಉತ್ಪನ್ನಗಳು ಯುವಕರು ಮತ್ತು ಮಕ್ಕಳಿಗೆ ವಿಶೇಷವಾಗಿ ಅಪಾಯಕಾರಿ. ಏಕೆಂದರೆ ಅವರು ಬೇಗನೆ ವ್ಯಸನಕಾರಿಯಾಗುತ್ತಾರೆ. ತೆಲಂಗಾಣ ರಾಜ್ಯದಲ್ಲಿ ಗುಟ್ಖಾ ಮತ್ತು ಪಾನ್ ಮಸಾಲಾ ಉತ್ಪಾದನೆ, ಸಂಗ್ರಹಣೆ, ಮಾರಾಟ, ವಿತರಣೆ ಅಥವಾ ಸಾಗಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದವರು ಕಠಿಣ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಈ ನಿಷೇಧವು ತಂಬಾಕಿನಿಂದ ಉಂಟಾಗುವ ಸಾವುಗಳು ಮತ್ತು…
ಪ್ರಸಕ್ತ ಸಾಲಿನ ಐಪಿಎಲ್ ಫೈನಲ್ ಮುಗಿದ ಬಳಿಕವೂ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಗ್ಗೆ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ನೀಡಿದ ಹೇಳಿಕೆ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಕೊಹ್ಲಿ ಅವರ ಅದ್ಭುತ ಪ್ರದರ್ಶನದ ನಡುವೆಯೂ ಸ್ಟಾರ್ ಬ್ಯಾಟರ್ ನ ನಿರಂತರತೆ ತಂಡಕ್ಕೆ ಹೊರೆಯಾಗಿದೆ ಎಂದು ರಾಯುಡು ಹೇಳಿದ್ದಾರೆ. ಟೂರ್ನಿಯಲ್ಲಿ ಗರಿಷ್ಠ ರನ್ ಗಳಿಸಿದ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರೂ ಕೊಹ್ಲಿ ಬಗ್ಗೆ ನೀಡಿರುವ ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೆವಿನ್ ಪೀಟರ್ ಸನ್ ಮತ್ತು ಮಯಾಂತಿ ಲ್ಯಾಂಜರ್ ಜತೆಗೆ ಸ್ಟಾರ್ ಸ್ಪೋರ್ಟ್ಸ್ ನಲ್ಲಿ ವಿಶ್ಲೇಷಣೆಯ ವೇಳೆ ಮಾತನಾಡಿದ ರಾಯುಡು, ಕೊಹ್ಲಿಯವರ ಉತ್ಕೃಷ್ಟತೆ ಆರ್ ಸಿಬಿಯಂಥ ತಂಡದ ಮೇಲೆ ಬೀರಬಹುದಾದ ಪರಿಣಾಮದ ಬಗ್ಗೆ ಚರ್ಚಿಸಿದರು. “ಅತ್ಯುನ್ನತ ಗುಣಮಟ್ಟದ ಮಾನದಂಡ ಹುಟ್ಟುಹಾಕಿದ ಸ್ಟಾರ್ ಕ್ರಿಕೆಟಿಗ ದಂತಕಥೆ ಎನಿಸಿದ ವಿರಾಟ್ ಕೊಹ್ಲಿಯಂಥ ಆಟಗಾರರು ನಿಮ್ಮಲ್ಲಿದ್ದಾರೆ. ಅಂಥ ತಂಡದಲ್ಲಿ ಯುವಕರು ಇರುವುದು, ಅಂಥ ಗುಣಮಟ್ಟವನ್ನು ಸಾಧಿಸುವುದು ಕಷ್ಟಸಾಧ್ಯ. ಏಕೆಂದರೆ ಅವರು…
ಮುಂಬೈ: ಸರ್ಕಾರಿ ಸ್ವಾಮ್ಯದ ಭಾರತೀಯ ಜೀವವಿಮಾ ನಿಗಮ, ಆರೋಗ್ಯ ವಿಮಾ ಕ್ಷೇತ್ರ ವಲಯ ಪ್ರವೇಶಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಈ ಕ್ಷೇತ್ರದ ಇತರ ಕಂಪನಿಗಳನ್ನು ಸ್ವಾಧೀನಪಡಿಸಿಕೊಳ್ಳುವ ಅವಕಾಶಗಳನ್ನು ಪರಿಶೀಲಿಸುತ್ತಿದೆ. ಈ ವಲಯದಲ್ಲಿ ಸಂಯುಕ್ತ ವಿಮಾ ಕಂಪನಿಗಳಿಗೆ ಅವಕಾಶ ನೀಡುವ ಪ್ರಸ್ತಾವದ ನಡುವೆಯೇ ಎಲ್ ಐಸಿ ಈ ಮಹತ್ವದ ಹೆಜ್ಜೆ ಇಟ್ಟಿದೆ. “ಹೊಸ ಸರ್ಕಾರ ಆರೋಗ್ಯ ವಿಮಾ ಕ್ಷೇತ್ರದಲ್ಲಿ ಸಂಯೋಜಿತ ಲೈಸನ್ಸ್ ನೀಡುವ ಸಾಧ್ಯತೆ ಇದ್ದು, ಆಂತರಿಕವಾಗಿ ಈ ಸಂಬಂಧ ಮೂಲಭೂತ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ” ಎಂದು ಉನ್ನತ ಮೂಲಗಳು ಹೇಳಿವೆ. “ಸಾಮಾನ್ಯ ವಿಮೆಯಲ್ಲಿ ನಾವು ನೈಪುಣ್ಯದ ಕೊರತೆ ಹೊಂದಿದ್ದು, ಆರೋಗ್ಯವಿಮೆಯಲ್ಲಿ ಆಸಕ್ತಿ ಹೊಂದಿದ್ದೇವೆ. ಅಜೈವಿಕ ಪ್ರಗತಿ ಅವಕಾಶಗಳನ್ನು ಕೂಡಾ ನಾವು ಪರಿಶೀಲಿಸುತ್ತಿದ್ದೇವೆ” ಎಂದು ಎಲ್ ಐಸಿ ಅಧ್ಯಕ್ಷ ಸಿದ್ಧಾರ್ಥ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ. ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮತ್ತು ವಿಮಾ ಕಂಪನಿಗಳ ಬದ್ಧತಾ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಯೋಜಿತ ಲೈಸನ್ಸ್ ನೀಡಲು 2024ರ ಫೆಬ್ರವರಿಯಲ್ಲಿ ಸಂಸದೀಯ ಸಮಿತಿ ಶಿಫಾರಸ್ಸು ಮಾಡಿತ್ತು.…
ಮಳೆ ನೀರು ಇಂಗಿಸುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಳೆ ನೀರು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವವರ ವಿರುದ್ದ ದಂಡ ಅಭಿಯಾನ ನಡೆಸಲಾಗುತ್ತಿದೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಇಲ್ಲಿನ ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಳೆನೀರು ಕೊಯ್ಲು ಪದ್ದತಿಯ ಅಳವಡಿಕೆಯ ಮೂಲಕ ನೀರನ್ನು ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಆದರೆ, ಹಲವಾರು ಕಡೆಗಳಲ್ಲಿ ಈ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವ ಮೂಲಕ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಲಾಗುತ್ತಿದೆ ಎಂದರು. ನಗರದಲ್ಲಿ ಬೀಳುವ ಮಳೆಯನ್ನು ಸಮರ್ಪಕವಾಗಿ ಬಳಕೆ ಮಾಡುವುದರಿಂದ ನಗರದ ಅಂತರ್ಜಲ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸಬಹುದಾಗಿದೆ. ಕೆಲವಡೆ ಮಳೆ ನೀರು ಕೊಯ್ಲು ಪದ್ದತಿಯ ಮೂಲಕ ಸಂಗ್ರಹಿಸಲಾದ ನೀರನ್ನು ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ. ಇದರಿಂದ ಮಳೆ ನೀರು ಒಳಚರಂಡಿಗೆ ಸೇರ್ಪಡೆಗೊಂಡು ಪೋಲಾಗುವುದಲ್ಲದೇ, ಒಳಚರಂಡಿ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ ಎಂದು ಅವರು ತಿಳಿಸಿದರು. ಮಳೆ ನೀರು ಪೋಲಾಗುವುದನ್ನು ತಡೆಗಟ್ಟುವುದು ಹಾಗೂ…
ನವದೆಹಲಿ: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದೆ. ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ. ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ಪರಿಶೀಲಿಸಲಾಗುತ್ತಿದೆ. ಇಂದು ಮುಂಜಾನೆ 5.35 ಕ್ಕೆ ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. QRT ಸ್ಥಳಕ್ಕೆ ತಲುಪಿತು. ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296