Author: admin

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವ ಸಂಘರ್ಷ ಮುಂದುವರೆದಿದ್ದು, ಭಾನುವಾರ ಕಾಡಾನೆ ದಾಳಿಗೆ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿಕಲ್ ದುರ್ಗಾ ಸಮೀಪದ ಕೆಸುವಿನಕಲ್ ಕಾಫಿ ಎಸ್ಟೇಟ್ ನಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಆನಂದ ಪೂಜಾರಿ(55) ಕಾಡಾನೆ ದಾಳಿಯಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಎಂದಿನಂತೆ ಭಾನುವಾರ ಬೆಳಗ್ಗೆಯೂ ಕಾಫಿ ಎಸ್ಟೇಟ್ ನಲ್ಲಿ ಕೂಲಿ ಕೆಲಸಕ್ಕೆ ತೆರಳಿದ ವೇಳೆ ಒಂಟಿ ಸಲಗ ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಆನೆ ತುಳಿತಕ್ಕೆ ಆನಂದ ಪೂಜಾರಿ ಬಲಿಯಾಗಿದ್ದಾರೆ. ನೂರ್ ಅಹಮದ್ ಎನ್ನುವವರಿಗೆ ಸೇರಿದ ಕೆಸುವಿನಕಲ್ ಎಸ್ಟೇಟ್ ನಲ್ಲಿ ಆನಂದ ಪೂಜಾರಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಎಂದಿನಂತೆ ಭಾನುವಾರ ಬೆಳಗ್ಗೆಯೂ ಆನಂದ ಪೂಜಾರಿ ಎಸ್ಟೇಟ್ ಗೆ ಕೆಲಸಕ್ಕೆ ಎಂದು ತೆರಳುತ್ತಿರುವಾಗ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಆನಂದ ಪೂಜಾರಿ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ ಅದು ಸಾಧ್ಯವಾಗಲೇ ಇಲ್ಲ. ಕಾಡಾನೆ ದಾಳಿಯಿಂದ ಮೃತಪಟ್ಟ ಆನಂದ ಪೂಜಾರಿ ಅವರ ಪತ್ನಿ…

Read More

ಮೋದಿ ಮಾಡಿರುವ 10 ಸಾಧನೆ ಹೇಳಿದ್ರೆ ಅಂದೇ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ನಾನು ಪ್ರಮಾಣ ವಚನ ಸ್ವೀಕರಿದ ತಕ್ಷಣ ಐದು ಗ್ಯಾರಂಟಿ ಜಾರಿಗೆ ಆದೇಶ ಮಾಡಿದ್ದೆವು. ನಾಲ್ಕು ಸಲ ಗೆದ್ದ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ ಸಾಧ‌ನೆ ಎನು?, ಇವರನ್ನ ಸಚಿವ ಸ್ಥಾನದಲ್ಲಿ ಇರಲು ಅಸಮರ್ಥ ಎಂದು ತೆಗೆದು ಹಾಕಲಾಯಿತು. ಇದು ಬಿಜೆಪಿಯ ಸುಳ್ಳು, ಕಾಂಗ್ರೆಸ್​ ನ ಸತ್ಯದ ನಡುವಿನ ಚುನಾವಣೆ. ಈ ಸಲ ಸೋಲುವುದು ಖಚಿತವಾಗಿ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಪತ್ನಿ ಗಾಯತ್ರಿ ಸಿದ್ದೇಶ್ವರಗೆ ಟಿಕೆಟ್ ಕೊಡಿಸಿದ್ದಾರೆ ಎಂದರು. ಬಿಜೆಪಿ ಎಂಪಿಗಳು ಕೊಲೆ ಬಸವ ಇದ್ದಂತೆ. ರಾಜ್ಯದಲ್ಲಿ ಭೀಕರ ಬರವಿದ್ದರೂ ಬಿಜೆಪಿ ಸಂಸದರು ಪರಿಹಾರ ಕೇಳಲಿಲ್ಲ. ರಾಜ್ಯಕ್ಕೆ 14,690 ಕೋಟಿ ರೂಪಾಯಿ ಕೇಂದ್ರ ಅನುದಾನ ನೀಡಲಿಲ್ಲ, ಭದ್ರಾ ‌ಮೇಲ್ಡಂಡ 5,300 ಕೋಟಿ ಹಣ ನೀಡಲೇ ಇಲ್ಲ. ಬರಗಾಲ ಹಿನ್ನೆಲೆ 18 ಸಾವಿರ ಕೋಟಿ ಪರಿಹಾರ ಕೊಟ್ಟಿಲ್ಲ. ಎಂಪಿಗಳು…

Read More

ಹಿಮಾಚಲ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ 9ನೇ ತರಗತಿಯ ವಿದ್ಯಾರ್ಥಿನಿಗೆ ಅಶ್ಲೀಲ ವೀಡಿಯೋ ತೋರಿಸಿ ಆಕೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಜುಂಗಾ ಎಂಬಲ್ಲಿ ಈ ಕೃತ್ಯ ನಡೆದಿದೆ. ಸರ್ಕಾರಿ ಪ್ರೌಢಶಾಲೆಯ ಡ್ರಾಯಿಂಗ್ ಶಿಕ್ಷಕ, ಮೇ 2 ರಂದು ಶಾಲೆಯಲ್ಲಿ ಬಲವಂತವಾಗಿ ವಿದ್ಯಾರ್ಥಿನಿಗೆ ಅಶ್ಲೀಲ ವೀಡಿಯೋ ತೋರಿಸಿದ್ದಾನೆ. ಅಲ್ಲದೇ ಅನುಚಿತವಾಗಿ ವಿದ್ಯಾರ್ಥಿನಿಯನ್ನು ಸ್ಪರ್ಶಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಮಾನಭಂಗಕ್ಕೆ ಯತ್ನ ಮತ್ತು ಲೈಂಗಿಕ ಅಪರಾಧಗಳಿಂದ, ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್ 10 ಮತ್ತು 12ರ ಅಡಿಯಲ್ಲಿ ಲೈಂಗಿಕ ಕಿರುಕುಳ ಮತ್ತು ಹಲ್ಲೆಯ ಯತ್ನದ ಪ್ರಕರಣ ದಾಖಲಾಗಿದೆ. ಆರೋಪಿಯ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಜಾಹೀರಾತು ನೀಡಿದ್ದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಅಮಿತ್ ಮಾಳವಿಯಾ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದು, ಈ ಮೂಲಕ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್​ ದೂರು ನೀಡಿದ್ದು, ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಬಿಜೆಪಿಯ ಮೂವರು ನಾಯಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ವೀಡಿಯೋವೊಂದನ್ನು ಬಿಜೆಪಿ ಕರ್ನಾಟಕದ X ಪೇಜ್ ನಲ್ಲಿ ಪೋಸ್ಟ್ ​ವೊಂದನ್ನು ಮಾಡಲಾಗಿದ್ದು, ಅದರಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಸ್ಲಿಂ ಎಂಬಂತೆ ಬಿಂಬಿಸಿ ಮೊಟ್ಟೆಯಲ್ಲಿ ಬರುವ ಮರಿಗಳನ್ನು ಬೇರೆ ಬೇರೆ ಸಮದಾಯಗಳಿಗೆ ಹೋಲಿಕೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾನೂನು ಘಟಕ ಆರೋಪಿಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿಯ ಕಾನೂನು ಘಟಕದ ರಮೇಶ್ ಬಾಬು ದೂರಿನಲ್ಲಿ ಮನವಿ ಮಾಡಿದ್ದಾರೆ. ಜೆಪಿ…

Read More

ಕಾಸರಗೋಡು: ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಬೃಹತ್ ಅಲೆಗಳು ಸಮುದ್ರದ ದಡಕ್ಕೆ ಅಪ್ಪಳಿಸುವ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಕಾಸರಗೋಡು ಜಿಲ್ಲೆಯ ತೃಕನ್ನಾಡು ಬೀಚ್ ಈ ದೃಶ್ಯ ಕಂಡುಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪಳ್ಳಿಕೆರೆ, ರೆಡ್ ಮೂನ್ ಬೀಚ್ ನಲ್ಲಿ ಪ್ರವಾಸಿಗೆ ನಿರ್ಬಂಧ ಹೇರಲಾಗಿದೆ. ಮೀನುಗಾರಿಕಾ ದೋಣಿಗಳು ಸಮುದ್ರಕ್ಕೆ ಇಳಿಯದೆ ದಡದಲ್ಲೇ ಲಂಗರು ಹಾಕಿದ್ದು, ಕೋಸ್ಟಲ್ ಕಾವಲು ಪಡೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಪ್ರತೀ ವರ್ಷದ ಜೂನ್ ತಿಂಗಳಲ್ಲಿ ಈ ದೃಶ್ಯ ಕಂಡುಬರುವುದು ಸಾಮಾನ್ಯವಾಗಿತ್ತು. ಆದರೆ ಈ ವರ್ಷ ಮೇ ತಿಂಗಳಲ್ಲೆ ಆರಂಭವಾಗಿದ್ದು, ಪ್ರವಾಸಿಗರು ಮತ್ತು ಮೀನುಗಾರರಲ್ಲಿ ಆತಂಕ ಮೂಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ವಿಜಯಪುರ: ದಿನೇ ದಿನೇ ಬೇಸಿಗೆಯ ಬಿಸಿ ತಾಪಮಾನ ಹೆಚ್ಚುತ್ತಿದೆ. ಇದೀಗ ಸೆಕೆ ತಡೆಯಲಾಗದೇ ಕೆರೆಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಖಣಾಪುರ ಗ್ರಾಮದಲ್ಲಿ ನಡೆದಿದೆ. ರಾಜು ಕಾತ್ರಾಳ(35) ಕೆರೆಯಲ್ಲಿ ಮುಳುಗಿ ಸಾವಿಗೀಡಾದ ಯುವಕನಾಗಿದ್ದಾನೆ. ಜಿಲ್ಲೆಯಾದ್ಯಂತ ವಿಪರೀತ ಬಿಸಿಲಿನಿಂದ ಕೂಡಿದ್ದು, ಇದರಿಂದ ಬಳಲಿದ್ದ ರಾಜು ಕುತ್ರಾಳ ಕೆರೆಯಲ್ಲಿ ಈಜಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಮುದ್ದೇಬಿಹಾಳ: ತಾಲ್ಲೂಕಿನ ಢವಳಗಿ ಹಳ್ಳದ ಸಮೀಪದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ. ಮಸಬಿನಾಳದ ದೊಡ್ಡಯ್ಯ ರಾಚಯ್ಯ ಪುರಾಣಿಕಮಠ(37), ತಾಳಿಕೋಟಿ ತಾಲ್ಲೂಕಿನ ಜಲಪೂರದ ಪುಷ್ಪಾವತಿ ಶಿವಪುತ್ರಯ್ಯ ಹಿರೇಮಠ (55) ಮೃತ ದುರ್ದೈವಿಗಳಾಗಿದ್ದಾರೆ. ಮದುವೆಗೆ ಹೋಗಿ ವಾಪಸ್ ಊರಿಗೆ ತೆರಳುವ ಸಂದರ್ಭದಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಸ್ಥಳಕ್ಕೆ ಪಿಎಸ್ ‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಬೆಳಗಾವಿ: ಈ ಬಾರಿಯ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದಾರೆ. ಅಂಬೇಡ್ಕರ್ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಮಸಮಾಜ ನೀಡುತ್ತದೆ. ಇದಕ್ಕೆ ವಿರುದ್ದವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು. ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು. ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಎಂದರು, ಲೋಕಸಭಾ ಚುನಾವಣೆ ತನಕ ಮಾತ್ರ ನೀಡಿ, ನಂತರ ನಿಲ್ಲಿಸುತ್ತಾರೆ…

Read More

ಭೂಪಾಲ್‌: ಮಧ್ಯಪ್ರದೇಶದಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಫಿಯಾಗೆ ಪೊಲೀಸ್‌‍ಪೇದೆಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಮರಳು ಮಾಫಿಯಾಗೆ ಬಲಿಯಾಗಿರುವ ವ್ಯಕ್ತಿಯನ್ನು ಶೆಹ್ಡೋಲ್‌ ನ ಸಹಾಯಕ ಸಬ್‌ ಇನ್ಸ್ ಪೆಕ್ಟರ್‌ ಮಹೇಂದ್ರ ಬಗ್ರಿ ಎಂದು ಗುರುತಿಸಲಾಗಿದೆ. ಬಗ್ರಿ ಅವರು ಇಬ್ಬರು ಕಾನ್‌ ಸ್ಟೆಬಲ್ ಗಳಾದ ಪ್ರಸಾದ್‌ ಕಾನೋಜಿ ಮತ್ತು ಸಂಜಯ್‌ ದುಬೆ ಅವರೊಂದಿಗೆ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ಸ್ಥಳಕ್ಕೆ ಹೋಗಿದ್ದರು. ಮಧ್ಯಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಅನ್ನು ತಡೆಯಲು ಬಂದ ಪೊಲೀಸ್‌‍ ಪೇದೆ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವೇಗವಾಗಿ ಬಂದ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಬಗ್ರಿ ಮೇಲೆ ಹರಿಸಲಾಯಿತು ಹೀಗಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅವರ ಜತೆಯಲ್ಲಿದ್ದ ಕಾನೋಜಿ ಮತ್ತು ದುಬೆ ಅವರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಮತ್ತು ಟ್ರಕ್‌ ಮಾಲೀಕನ ಮಗನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಟ್ರ್ಯಾಕ್ಟರ್‌ ಮಾಲೀಕರು ಪರಾರಿಯಾಗಿದ್ದಾರೆ. ಟ್ರಾಕ್ಟರ್‌ ಚಾಲಕನನ್ನು ಬಂಧಿಸಿ…

Read More

ಕೋಟಾದಲ್ಲಿ ಎರಡು ದಿನಗಳ ಹಿಂದೆ ರೀಲ್ ಮಾಡುವಾಗ ಕಂಟ್ರಿಮೇಡ್ ಪಿಸ್ತೂಲ್‌ ನಿಂದ ಗುಂಡು ಹಾರಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದ. ಸ್ನೇಹಿತನನ್ನು ಮಾರಣಾಂತಿಕವಾಗಿ ಶೂಟ್ ಮಾಡಿದ ಬಾಲಾಪರಾಧಿ ಸೇರಿದಂತೆ ಆರೋಪಿಯ ಸಹಚರರಾದ ಅಜಯ್ ಸಾಲ್ವಿ ಮತ್ತು ದೀಪಕ್ ಪ್ರಜಾಪತಿ ಅಲಿಯಾಸ್ ‘ಲಡ್ಡು ಶೂಟರ್’ ನನ್ನೂ ಬಂಧಿಸಲಾಗಿದೆ. ಕೋಟಾ ಎಸ್ಪಿ ಅಮೃತಾ ದುಹಾನ್ ಮಾತನಾಡಿ ಮೇ 1 ರಂದು ಸಮುದಾಯ ಕೇಂದ್ರದ ಮುಂಭಾಗದ ಟೀ ಸ್ಟಾಲ್‌ ನಲ್ಲಿ ತನ್ನ ಮಗನನ್ನು ಅಜಯ್ ಸಾಲ್ವಿ, ದೀಪಕ್ ಪ್ರಜಾಪತಿ ಮತ್ತು ಇತರರು ಗುಂಡು ಹಾರಿಸಿ ಸಾಯಿಸಿದ್ದಾರೆಂದು ದೂರುದಾರರು ಆರೋಪಿಸಿರುವುದಾಗಿ ತಿಳಿಸಿದರು. ಸುಳಿವಿನ ಮೇರೆಗೆ ಬಾಲಾಪರಾಧಿ ಸೇರಿದಂತೆ ಆತನ ಸಹಚರರನ್ನು ಬಂಧಿಸಿದ್ದು, ಕಂಟ್ರಿಮೇಡ್ ಪಿಸ್ತೂಲ್ ಮತ್ತು ಅಪರಾಧಕ್ಕೆ ಬಳಸಿದ ಖಾಲಿ ಕಾರ್ಟ್ರಿಡ್ಜ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More