Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಖ್ಯಾತ ಕಪಿಲ್ ಶರ್ಮಾ ಟಿವಿ ಶೋ ನಲ್ಲಿ ಅವಕಾಶ ಕೊಡಿಸುತ್ತೇನೆ ಎಂದು ನಂಬಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬಯಿಯಲ್ಲಿ ವರದಿಯಾಗಿದೆ. ಕೆಲ ದಿನಗಳ ಹಿಂದೆ 26 ವರ್ಷದ ಯುವತಿಗೆ ಆನ್ ಲೈನ್‌ನಲ್ಲಿ ಆನಂದ್ ಎನ್ನುವವನ ಪರಿಚಯವಾಗಿದೆ. ಟಿವಿ ಉದ್ಯಮದ ಪ್ರಮುಖ ವ್ಯಕ್ತಿಗಳೊಂದಿಗೆ ತನಗೆ ಸಂಪರ್ಕವಿದೆ ಮತ್ತು ಕಪಿಲ್ ಶರ್ಮಾ ಶೋನಲ್ಲಿ ಕೆಲಸ ಕೊಡಿಸುವುದಾಗಿ ಆನಂದ್ ಯುವತಿಯನ್ನು ನಂಬಿಸಿದ್ದ ಎನ್ನಲಾಗಿದೆ. ಇದನ್ನೇ ನಂಬಿದ್ದ ಯುವತಿ ಅಡಿಷನ್ ನೀಡಲು ಬನ್ನಿ ಎಂದು ಹೇಳಿದ್ದ ಆನಂದ್ ಹೇಳಿದ್ದ ವಿಳಾಸಕ್ಕೆ ಹೋಗಿದ್ದಾರೆ. ಅಡಿಷನ್ ಉತ್ತಮವಾದರೆ ಮುಂದೆ ಕಾಸ್ಟಿಂಗ್ ಡೈರೆಕ್ಟರ್ ಬಳಿ ಕರೆದುಕೊಂಡು ಹೋಗುತ್ತೇನೆ ಎಂದಿದ್ದಾನೆ. ಅಡಿಷನ್ ಗೆಂದು ಯುವತಿ ಪಾಲ್ಘರ್ ಜಿಲ್ಲೆಯ ನಲಸೋಪಾರಾ ಪ್ರದೇಶದಲ್ಲಿರುವ ಆನಂದ್ ಮನೆಗೆ ಹೋಗಿದ್ದಾಳೆ. ಇದೇ ವೇಳೆ ಅಡಿಷನ್ ನೆಪದಲ್ಲಿ ಆನಂದ್ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದಾದ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆಕೆ ವಿರೋಧಿಸಿದಾಗ ದೈಹಿಕವಾಗಿ ಹಲ್ಲೆ ನಡೆಸಿ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ…
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕ್ಯಾಪಿಟಲ್ ಗ್ರೋ ಲರ್ನ್ ಟ್ರೇಡಿಂಗ್ ಕಂಪನಿಯ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು, ವಂಚನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ದಂಪತಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕಲಬುರಗಿ ತಾಲೂಕಿನ ಕುರಿಕೋಟಾ ಗ್ರಾಮದ ಶಿಕ್ಷಕ ವೀರೇಶ ಭೀಮಾಶಂಕರ ಭಾಗೋಡಿ (24) ಎಂಬುವವರು ನೀಡಿದ ದೂರಿನ ಮೇರೆಗೆ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಗಾಂಧಿ ನಗರದ ಬಿ.ಎಲ್.ಕಾಂಪ್ಲೆಕ್ಸ್ ನಲ್ಲಿ ಒಂದು ಆಫೀಸ್ ಮಾಡಿಕೊಂಡು 1 ಲಕ್ಷ ಕೊಟ್ರೆ ಒಂದು ವರ್ಷದಲ್ಲಿ 2 ಲಕ್ಷ ಕೊಡುತ್ತೇವೆ ಎಂದು ಹೇಳಿದ್ದರು. ಇದನ್ನು ನಂಬಿ ಹಂತ ಹಂತವಾಗಿ ವೀರೇಶ ಭೀಮಾಶಂಕರ ಭಾಗೋಡಿ 5.5 ಲಕ್ಷ ರೂ. ನೀಡಿದ್ದರು. ಇವರಂತೆ ಮಹ್ಮದ್ ಇಬ್ರಾಹಿಂ, ಗುಂಡಪ್ಪ ವಾರದ,…
ಚಿಂತಾಮಣಿ: ತಾಲ್ಲೂಕಿನ ಚಿಲಕಲನೇರ್ಪು ಹೋಬಳಿಯ ಏನಿಗದಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚನಹಳ್ಳಿ ಗ್ರಾಮದ ಬಳಿ ಭಾನುವಾರ ಜಿಂಕೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿರತೆ ದಾಳಿ ಶಂಕೆ ಹಿನ್ನೆಲೆ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಮೇ 15ರಂದು ಇದೇ ರೀತಿ ಜಿಂಕೆಯೊಂದು ಮೃತಪಟ್ಟಿತ್ತು. ಗ್ರಾಮಸ್ಥರು ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತಪಡಿಸಿದ್ದರು. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಬೋನ್ ಇಟ್ಟಿದ್ದರು. ಗ್ರಾಮದ ರೈತ ಹರೀಶ್ ಎಂಬುವವರ ಜಮೀನಿನಲ್ಲಿ ಜಿಂಕೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. ಕಳೆದ 10 ದಿನಗಳಲ್ಲಿ ಎರಡು ಜಿಂಕೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಮೇ 15 ರಂದು ಮೃತಪಟ್ಟ ಜಿಂಕೆಯನ್ನು ಕಂಡಾಗ, ಚಿರತೆ ದಾಳಿ ನಡೆಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿ ಅರಣ್ಯ ಇಲಾಖೆಗೆ ದೂರು ನೀಡಿದ್ದೆವು. ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿ ಒಂದು ಬೋನ್ ಇಟ್ಟಿದ್ದರು. ಆದರೂ ಬೋನ್ ನಲ್ಲಿ ಯಾವುದೇ ಪ್ರಾಣಿಯನ್ನು ಹಾಕಿರಲಿಲ್ಲ ಎಂದು ಹೇಳಿದರು. ಜನರ ಭಯ…
ಪಾವಗಡ: ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಪಾವಗಡ ಶಾಸಕರಾದ ಹೆಚ್.ವಿ.ವೆಂಕಟೇಶ್ ರವರ ಅಧ್ಯಕ್ಷತೆಯಲ್ಲಿ ಇಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಮತ್ತು ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್ ರವರ ಪರವಾಗಿ ಮತ ಯಾಚನೆ ಕಾರ್ಯಕ್ರಮವನ್ನು ಪಟ್ಟಣದ ನವನಿಧಿ” ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಸಕರಾದ ಹೆಚ್.ವಿ.ವೆಂಕಟೇಶ್ ರವರು ಸಭೆಯನ್ನುದೇಶಿಸಿ ಮಾತನಾಡಿದರು. CWC ಸದಸ್ಯರಾದ ರಘುವೀರರೆಡ್ಡಿ, ಮಾಜಿ ಸಚಿವರಾದ ವೆಂಕಟರಮಣಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಿ.ಟಿ. ಶ್ರೀನಿವಾಸ್ ರವರ ಪರವಾಗಿ ಶಿಕ್ಷಕರ ಬಳಿ ಮತ ಯಾಚಿಸಿದರು. ಈ ವೇಳೆ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಗ್ರಾಮಾಂತರ ಅಧ್ಯಕ್ಷರಾದ ರಾಮಾಂಜಿನಪ್ಪ, ಶಂಕರ್ ರೆಡ್ಡಿ, ಮೈಲಪ್ಪ, ಸಣ್ಣರಾಮರೆಡ್ಡಿ, ವಕೀಲ ವೆಂಕಟರಾಮರೆಡ್ಡಿ,ಕೆಪಿಸಿಸಿ ಕಾರ್ಯದರ್ಶಿ ಇಬ್ರಾಹಿಂ, ಯಾದವ ಮುಖಂಡರಾದ ನರಸಿಂಹಪ್ಪ, ಪುರಸಭಾ ಸದಸ್ಯ ಗೊರ್ತಿನಾಗರಾಜು ಸೇರಿದಂತೆ ಇನ್ನೂ ಅನೇಕ ಗಣ್ಯರು, ಶಿಕ್ಷಕ ಮತದಾರರು ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ತಾಯಂದಿರ ಎದೆಹಾಲು ಸಂಗ್ರಹಣೆ ಹಾಗೂ ಮಾರಾಟ ಚಟುವಟಿಕೆಗಳನ್ನು ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ & ಪ್ರಮಾಣ ಕಾಯ್ದೆ 2006ರ ಅಡಿಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮಹಿಳೆಯ ಹಾಲು & ಅದರಿಂದ ತಯಾರಿಸಲಾಗುವ ಉತ್ಪನ್ನಗಳ ವಾಣಿಜ್ಯಕರಣಗೊಳಿಸುವುದು ಇತ್ಯಾದಿ ಸಂಬಂಧಿತ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಹೇಳಿದೆ. ತಾಯಿಯ ಎದೆಹಾಲನ್ನು ಮಾರಾಟ ಮಾಡಿದರೆ, ಶಿಶುಗಳ ಆರೋಗ್ಯ ಮತ್ತು ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ. ಆದ್ದರಿಂದ, ತಾಯಂದಿರ ಎದೆಹಾಲು ಸಂಗ್ರಹಿಸುವ ಹಾಗೂ ಮಾರಾಟ ಇತ್ಯಾದಿ ಸಂಬಂಧಿತ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ವರದಿ ಮಾಡಿದೆ. ಕೆಲ ಖಾಸಗಿ ಸಂಸ್ಥೆಗಳು ಗ್ರಾಮಾಂತರ ಪ್ರದೇಶಗಳಲ್ಲಿ ತಾಯಂದಿರಿಗೆ ಹಣ ನೀಡಿ ಎದೆಹಾಲು ಸಂಗ್ರಹಿಸಿ, ನಂತರ ಅದನ್ನು ಪೌಡರ್ ರೂಪದಲ್ಲಿ ದೇಶದಾದ್ಯಂತ ಮಾರಾಟ ಮಾಡುತ್ತಿವೆ. ತಾಯಂದಿರ ಎದೆಹಾಲನ್ನು ನವಜಾತ ಶಿಶುಗಳಿಗೆ ಉಣಿಸಲು ಮಾತ್ರವೇ ಬಳಸಬಹುದು. ಯಾವುದೇ ಕಾರಣಕ್ಕೂ ವಾಣಿಜ್ಯ ಉದ್ದೇಶಕ್ಕೆ ಬಳಸಬಾರದುಎಂದು ಭಾರತೀಯ ಆಹಾರ ಸುರಕ್ಷತೆ & ಪ್ರಮಾಣ ಪ್ರಾಧಿಕಾರ ಹೊರಡಿಸಿದ…
ಮೈಸೂರು: ಮುಂಗಾರು ಮಳೆ ಸುರಿದಾಗ ಮೊದಲು ಭರ್ತಿಯಾಗುವ ಜಲಾಶಯ ಎಂಬ ಖ್ಯಾತಿಗೆ ಪಾತ್ರವಾಗಿರುವ ಜಿಲ್ಲೆಯ ಹೆಚ್.ಡಿ. ಕೋಟೆಯಲ್ಲಿರುವ ಕಬಿನಿ ಜಲಾಶಯ ಈ ಬಾರಿಯ ಬಿಸಿಲ ಧಗೆಗೆ ಬತ್ತಿಹೋಗುವ ಸ್ಥಿತಿಗೆ ತಲುಪಿತ್ತು. ಆದರೀಗ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ ಬತ್ತಿದ ಜಲಾಶಯಕ್ಕೆ ಜೀವ ಕಳೆ ತಂದಿದೆ. ಬೇಸಿಗೆಯಲ್ಲಿ ಜಲಾಶಯದ ನೀರಿನ ಮಟ್ಟ ತೀರಾ ಇಳಿಕೆಯಾದ ಕಾರಣ ಹಿನ್ನೀರಿನಲ್ಲಿ ಮುಳುಗಿ ಹೋಗಿದ್ದ ಪಳೆಯುಳಿಕೆಗಳು ಹೊರ ಕಾಣಿಸಿದ್ದವು. ಇದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಕಳೆದ ಎರಡು ವಾರಗಳಿಂದ ಪೂರ್ವ ಮುಂಗಾರು ಆಶಾದಾಯಕವಾಗಿರುವ ಹಿನ್ನಲೆಯಲ್ಲಿ ಕೇರಳ ಮತ್ತು ಹೆಚ್.ಡಿ.ಕೋಟೆ ತಾಲೂಕು ವ್ಯಾಪ್ತಿಯಲ್ಲಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಮುಂಗಾರು ಆರಂಭಕ್ಕೂ ಮುನ್ನವೇ ದಿನದಿಂದ ದಿನಕ್ಕೆ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿರುವುದು ಜಲಾಶಯವನ್ನು ಅವಲಂಬಿಸಿರುವ ಜನರಲ್ಲಿ ಹರ್ಷವನ್ನುಂಟು ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಬಳಿ ವಾಟರ್ ಟ್ಯಾಂಕರ್, ಗೂಡ್ಸ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೂಡ್ಸ್ ವಾಹನ ಚಾಲಕ ಮುರುಗನ್ (40) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಬೆಳ್ಳಂದೂರು ಬಸ್ ನಿಲ್ದಾಣದ ಬಳಿ ಈ ದುರಂತ ಸಂಭವಿಸಿದ್ದು, ಅಪಘಾತದ ಬಳಿಕ ವಾಟರ್ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಿರ್ಜಾಪುರ: ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ‘ಕೋಮುವಾದ’ ಮತ್ತು ‘ಜಾತಿವಾದ’ದಿಂದ ಕೂಡಿದ್ದು, ಮೈತ್ರಿಕೂಟದ ನಾಯಕರು ಮುಸ್ಲಿಮರಿಗೆ ಮೀಸಲಾತಿ ಒದಗಿಸಲು ಸಂವಿಧಾನವನ್ನು ತಿದ್ದುಪಡಿ ಮಾಡಲು ನಿರ್ಧರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ಮಿರ್ಜಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಅನುಪ್ರಿಯಾ ಪರ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ‘ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ವೋಟ್ ಬ್ಯಾಂಕ್ ಗೆ ಮೀಸಲಾಗಿದ್ದರೆ, ನಾವು ಹಿಂದುಳಿದ ವರ್ಗಗಳು ಮತ್ತು ಬಡವರ ಹಕ್ಕುಗಳಿಗೆ ಸಮರ್ಪಿತರಾಗಿದ್ದೇವೆ’ ಎಂದು ಮೋದಿ ತಿಳಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ನಾಯಕರು ಕೋಮುವಾದಿ, ಜಾತಿವಾದಿ ಹಾಗೂ ಪರಿವಾರವಾದಿಗಳಾಗಿದ್ದಾರೆ. ಅವರು ಅಧಿಕಾರದಲ್ಲಿದ್ದಾಗಲೆಲ್ಲ ಕುಟುಂಬ ರಾಜಕಾರಣದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದು ದೇಶದ ಜನರಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. ಸಮಾಜವಾದಿ ಪಕ್ಷವು ಯಾದವ ಸಮುದಾಯವನ್ನು ನಿರ್ಲಕ್ಷಿಸುವ ಮೂಲಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕುಟುಂಬದ ಸದಸ್ಯರಿಗೆ ಮಾತ್ರ ಟಿಕೆಟ್ ನೀಡಿದೆ ಎಂದು ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಕಾರವಾರ: ಬಸ್ ಗೆ ಸ್ಕೂಟರ್ ಡಿಕ್ಕಿಯಾಗಿದ್ದು, ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡದ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹಳದೀಪುರ ಗ್ರಾಮದ ಬಳಿ ನಡದಿದೆ. ಸವಾರ ಶಂಕರ ಹೆಗಡೆ (50) ಮೃತ ದುರ್ದೈವಿಯಾಗಿದ್ದಾರೆ. ಕೆಎಸ್ ಆರ್ ಟಿಸಿ ಬಸ್ ಭಟ್ಕಳ ಭಾಗದಿಂದ ಕುಮಟಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಶಂಕರ ಅವರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದ ಮಾಹಲಿಂಗಪುರ-ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಲಾರಿ- ಕಾರು ಹಾಗೂ ಎರಡು ಬೈಕುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತ ತೀವ್ರತೆಗೆ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296