Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ದುಡ್ಡು ಕೊಟ್ಟು ಪೊರಕೆ ಮೊರದಲ್ಲಿ ಏಟು ತಿನ್ನಲು ಭಕ್ತರು ಮುಗಿಬಿದ್ದಿರುವಂತಹ ಅಪರೂಪದ ಘಟನೆಯೊಂದು ಜರುಗಿದೆ. ದ್ರೌಪತಮ್ಮ ಕರಗದ ಅಂಗವಾಗಿ ನಡೆಯುವ ಕೋಟೆ ಜಗಳ ಎಂಬ ವಿಶಿಷ್ಟ ಧಾರ್ಮಿಕ ಆಚರಣೆಯಲ್ಲಿ ಕಾಳಿ ವೇಷಧಾರಿಯಿಂದ ಭಕ್ತರಿಗೆ ಪೊರಕೆ ಮೊರದೇಟು ನೀಡಲಾಗಿದೆ. ಬಲಿ ನೀಡಲಾದ ಮೇಕೆಯ ಶ್ವಾಸಕೋಶವನ್ನು ಬಾಯಿಯಲ್ಲಿ ಕಚ್ಚಿಕೊಳ್ಳುವ ಕಾಳಿ ವೇಶಧಾರಿ, ಸಿಕ್ಕ ಸಿಕ್ಕವರಿಗೆ ಪೊರಕೆ, ಮೊರದಲ್ಲಿ ಹೊಡೆಯುವ ದೃಶ್ಯ ಮಾತ್ರ ರೋಮಾಂಚಕಾರಿ ಆಗಿರುತ್ತದೆ. ಕೋಟೆ ಜಗಳಕ್ಕಾಗಿ ನೂರಾರು ಮಂದಿ ಜನರು ಜಮಾಯಿಸಿದ್ದರು. ಈ ಜಗಳದಲ್ಲಿ ಕಾಳಿ ದೇವಿಯ ಆವಾಹನೆಗೆ ವ್ಯಕ್ತಿ ಒಳಗಾಗುತ್ತಾರೆ. ಕರಗದ ಗುಡಿಯಲ್ಲಿ ಗುಡಿಸಿದ ಪೊರಕೆ, ಮೊರದಲ್ಲಿ ಹೊಡೆಸಿಕೊಂಡರೇ ಒಳ್ಳೆದಾಗುತ್ತೆ, ನಕಾರಾತ್ಮಕ ಅಂಶಗಳು ನಾಶವಾಗುತ್ತದೆ ಎಂಬುದು ಭಕ್ತರ ನಂಬಿಕೆ. ಹೀಗಾಗಿ ಪೊರಕೆ ಮೊರದಲ್ಲಿ ಹೊಡೆಸಿಕೊಳ್ಳಲು ಮುಗಿಬಿದ್ದಿದ್ದರು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಗುಜರಾತ್: ರಾಜ್ ಕೋಟ್ ನಲ್ಲಿರುವ TRP ಗೇಮ್ ಜೋನ್ ನಲ್ಲಿ ಭಯಾನಕ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಹಬ್ಬಿದ್ದು, ರಕ್ಷಣಾ ಕಾರ್ಯಾಚರಣೆ ಬಹುದೊಡ್ಡ ಸವಾಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಗೇಮ್ ಜೋನ್ ನಲ್ಲಿ ಮಕ್ಕಳು ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಶನಿವಾರ ಮಧ್ಯಾಹ್ನ ರಾಜ್ ಕೋಟ್ ನ ಗೇಮ್ ಜೋನ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಹರಸಾಹಸ ಪಡಲಾಗಿದೆ. ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮಕ್ಕಳ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ ಕೋಟ್ ಪೊಲೀಸ್ ಕಮಿಷನರ್ ರಾಜು ಭಾರ್ಗವ ಅವರು ಅಗ್ನಿ ದುರಂತದ ಬಗ್ಗೆ ಮಾಹಿತಿ ನೀಡಿದ್ದಾರೆ. ಇಲ್ಲಿವರೆಗೂ 20 ಮಂದಿಯ ಶವವನ್ನು ಹೊರತೆಗೆದಿದ್ದೇವೆ. 15 ರಿಂದ 20 ಮಕ್ಕಳು ಸುರಕ್ಷಿತವಾಗಿ ಮರಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದಿದ್ದಾರೆ. ಟಿಆರ್ ಪಿ ಗೇಮಿಂಗ್…
ಕಳೆದ ಕೆಲವು ತಿಂಗಳ ಹಿಂದೆ ಗೂಗಲ್ ಮ್ಯಾಪ್ ಬಳಸಿ ಸಂಚರಿಸುತ್ತಿದ್ದ ಕಾರೊಂದು ಸಮುದ್ರಕ್ಕೆ ಬಿದ್ದ ಘಟನೆ ಮಾಸುವ ಮುನ್ನವೇ ಇಂಥದೊಂದು ಘಟನೆ ಕೇರಳದ ಕೊಟ್ಟಾಯಂನ ಕುರುಪಂತರ ಎಂಬಲ್ಲಿ ಶನಿವಾರ ಮುಂಜಾನೆ 3 ಗಂಟೆ ವೇಳೆಗೆ ನಡೆದಿದೆ. ಹೈದರಾಬಾದ್ ಮೂಲದ ನಾಲ್ವರು ಪ್ರವಾಸಿಗರಿದ್ದ ಕಾರು ರಜೆಯ ಮಜಾ ಸವಿಯಲು ಮುನ್ನಾರ್ ಗೆ ತೆರಳಿತ್ತು. ಅಲ್ಲಿಂದ ಅಲಪ್ಪುಜಗೆ ಮಾರ್ಗ ಗೊತ್ತಾಗದ ಕಾರಣ ಗೂಗಲ್ ಮ್ಯಾಪ್ ಅವಲಂಬಿಸಿದ್ದರು. ಆದರೆ ಧಾರಾಕಾರ ಮಳೆಯಿಂದ ಚಾಲಕನಿಗೆ ದಾರಿ ತಪ್ಪಿದ್ದು,ನೀರು ನಿಂತ ರಸ್ತೆ ಭಾವಿಸಿ ಕಾಲುವೆಗೆ ಸಾಗಿತ್ತು. ಮಳೆಯಿಂದಾಗಿ ಕಾಲುವೆಯನ್ನು ರಸ್ತೆ ಎಂದು ನಂಬಿದ್ದ ಚಾಲಕನಿಗೆ 150 ಮೀಟರ್ ದೂರ ಚಲಿಸಿದಾಗಲೇ ಗೊತ್ತಾಗಿದ್ದು, ಇದು ರಸ್ತೆಯಲ್ಲ ಕಾಲುವೆ ಎಂದು..! ಬಳಿಕ ಕಾರಿನ ಬೂಟ್ ಸ್ಪೇಸ್ ಮೂಲಕ ಹೊರಬಂದಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ತುಮಕೂರು: ಮೊದಲ ಬಾರಿಗೂ ಈ ಬಾರಿಗೂ ಸಿದ್ದರಾಮಯ್ಯ ಸರ್ಕಾರದಲ್ಲಿ ವ್ಯತ್ಯಾಸ ಇದೆ, ಶಿಕ್ಷಣ ಕ್ಷೇತ್ರದಲ್ಲಿ ಅಜಗಜಾಂತರ ವ್ಯತ್ಯಾಸ ಆಗಿದೆ, ಶಿಕ್ಷಣ ಕ್ಷೇತ್ರದಲ್ಲಿ ಏನು ತಿಳಿಯದವರನ್ನ ಸಚಿವರನ್ನಾಗಿ ಮಾಡಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ಮಕ್ಕಳಿಗೆ 20 Marks ಗ್ರೇಸ್ ಮಾರ್ಕ್ಸ್ ನೀಡಿದೆ. ಊರು ಕೊಳ್ಳೆ ಹೊಡೆದ ಮೇಲೆ ಬಾಗಿಲು ಹಾಕಿದ್ರು ಅನ್ನೊ ಹಾಗೇ. ಎಕ್ಸಾಂ ಆಗಿ ರಿಸಲ್ಟ್ ಬಂದ್ಮೇಲೆ ಸಿದ್ದರಾಮಯ್ಯ ಯಾವನ್ನಯ್ಯ ಗ್ರೇಸ್ ಮಾರ್ಕ್ಸ್ ಕೊಡೊಕೆ ಹೇಳಿದ್ದು ಅಂದ್ರು ಎಂದು ಟೀಕಿಸಿದರು. ಶಿಕ್ಷಣ ಭವಿಷ್ಯ ಭಾರತವನ್ನ ಕಟ್ಟಬೇಕು, NEP ಪರವಾಗಿ ಆಗಿದ್ದ ಕರ್ನಾಟಕ ಸರ್ಕಾರ ಅನುಮೋದನೆ ನೀಡಿತ್ತು. ಆದರೆ ಈಗ NEP ತರಲ್ಲ SEP ತರ್ತಿವಿ ಅಂದ್ರು. ಇದರಲ್ಲಿ ಏನು ಕೆಟ್ಟದ್ದು ಇದೆ. ಶಿಕ್ಷಣ ಸಚಿವರಿಗೆ ಕನ್ನಡ ಓದಲು ಬರಲ್ಲ,ಅವರೇ ಒಪ್ಪಿಕೊಂಡಿದ್ದಾರೆ. 1983 ರಲ್ಲಿ ಸಿದ್ದರಾಮಯ್ಯ ಗೆದ್ದಾಗ ಕನ್ನಡ…
ತುಮಕೂರು: ಕಾಂಗ್ರೆಸ್ ಪಕ್ಷಕ್ಕೆ ಆತಂಕ ಶುರುವಾಗಿದ್ದು, ಹೇಗಾದರೂ ಮಾಡಿ ಈ ಬಾರಿಯಾದ್ರೂ ನಾರಾಯಣ ಸ್ವಾಮಿರನ್ನ ಸೋಲಿಸಬೇಕೆಂದು, ನಾಲ್ವರು ನಾರಾಯಣ ಸ್ವಾಮಿಯನ್ನ ಕಣಕ್ಕೆ ಇಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ತುಮಕೂರಿನಲ್ಲಿ ನಡೆದ ಆಗ್ನೇಯ ಶಿಕ್ಷಕರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾರಾಯಣ ಸ್ವಾಮಿ ಅವರನ್ನು ಕುತಂತ್ರದಿಂದ ಸೋಲಿಸಲು ಕಾಂಗ್ರೆಸ್ ನಾಲ್ವರು ನಾರಾಯಣ ಸ್ವಾಮಿಯನ್ನು ಕಣಕ್ಕಿಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದರೆ ನೀವು(ಮತದಾರರು) ನಾರಾಯಣಸ್ವಾಮಿ ಅವರ ಕೈ ಹಿಡಿಯುವ ವಿಶ್ವಾಸ ಇದೆ. ಅಧಿಕಾರದ ಬಲದಿಂದ ನಾವು ಗೆಲ್ಲಬಹುದು ಅಂತಾ ಅವರು ತಿಳಿದಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಅವರು ಗೆಲ್ಲೋದರಿಂದ ಸದನದ ಪಾವಿತ್ರಕ್ಕೆ ಧಕ್ಕೆ ಬರವುದು ನಿಶ್ಚಿತ. ಜೆಡಿಎಸ್ ಬಿಜೆಪಿ ಇದ್ದಾಗ ಶಿಕ್ಷಣಕ್ಕೆ ಏನ್ ಮಾಡಿತ್ತು. ಕೋವಿಡ್ ಬಂದಾಗ ಬಿಜೆಪಿ ಸರ್ಕಾರ ಶಿಕ್ಷಕರಿಗೆ ಸಂಬಳವನ್ನ ಕಟ್ ಮಾಡದೇ ಯಡಿಯೂರಪ್ಪ ಕೊಟ್ಟಿದ್ದಾರೆ ಎಂದರು. ಇಡೀ ದೇಶದಲ್ಲೇ ಸಂಬಳ ಕಟ್ ಮಾಡಿದ್ರೆ ಯಡಿಯೂರಪ್ಪ ಮಾತ್ರ ಕಟ್ ಮಾಡದೆ ಸಂಬಳ…
ತುಮಕೂರು: ಕೆಸರಿನಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ಹೊಯ್ಸಳ ಗಸ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಿಸಿರುವ ಘಟನೆ ನಗರದ ದೇವರಾಯಪಟ್ಟಣ ಸಮೀಪ ನಡೆದಿದ್ದು, ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ತುಮಕೂರು ನಗರದ ದೇವರಾಯಪಟ್ಟಣ ಸಮೀಪ ಕಳೆದ ನಾಲ್ಕು ಐದು ದಿನಗಳಿಂದ ವ್ಯಾಪಕ ಮಳೆಯಾಗಿದ್ದರಿಂದ ಅಲ್ಲಿನ ಕೆರೆ ಕೋಡಿಯಲ್ಲಿ ಬಿದ್ದು ಅಪರಿಚಿತ ವ್ಯಕ್ತಿಯೊಬ್ಬ ಸಂಕಷ್ಟದಲ್ಲಿ ಸಿಲುಕಿದ್ದ. ವ್ಯಕ್ತಿಯು ಕುಡಿತದ ಮತ್ತಿನಲ್ಲಿದ್ದ ಎನ್ನಲಾಗಿದ್ದು, ಈ ವಿಚಾರ ತಿಳಿದ ತಕ್ಷಣವೇ ಹೊಯ್ಸಳ ಗಸ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ರಕ್ಷಣೆ ಮಾಡಿದೆ. ಪೊಲೀಸ್ ಸಿಬ್ಬಂದಿಗಳಾದ ಮಹೇಶ ಹಾಗೂ ಬಸವರಾಜ್ ಸ್ಥಳಕ್ಕೆ ತೆರಳಿ, ಕೆಸರಿನಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಸ್ಥಳೀಯರ ನೆರವಿನೊಂದಿಗೆ ಪತ್ತೆ ಹಚ್ಚಿ, ಬಳಿಕ ವ್ಯಕ್ತಿಯನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ವ್ಯಕ್ತಿಯ ಪ್ರಾಣ ಉಳಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ…
ಶಿವಮೊಗ್ಗ : ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ ಮತ್ತು ಕಾರ್ಗಲ್ ನಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಗರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್ , ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಐ.ಸಿ.ಟಿ.ಎಸ್.ಎಂ, ಅಡ್ವಾನ್ಸ್ ಸಿ.ಎನ್.ಸಿ ಮೆಷಿನಿಂಗ್, ಮೆಕ್ಯಾನಿಕ್ ಡೀಸೆಲ್, ಇಂಡಸ್ಟ್ರಿಯಲ್ ರೋಬೋಟಿಕ್ಸ್ ಮತ್ತು ಡಿಜಿಡಲ್ ಮ್ಯಾನುಫಾಕ್ಟರಿಂಗ್ ಹಾಗೂ 8ನೇ ತರಗತಿ ಪಾಸ್ / ಎಸ್.ಎಸ್.ಎಲ್,ಸಿ ಪಾಸ್/ಫೇಲ್ ಆದವರಿಗೆ ಡ್ರಸ್ ಮೇಕಿಂಗ್, ವೆಲ್ಡರ್ ಹುದ್ದೆಗಳಿಗೆ ಮತ್ತು ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್,ಸಿ ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ ವೃತ್ತಿಗಳಿಗೆ ತರಬೇತಿ ನೀಡಲಾಗುವುದು. ಆಸಕ್ತ ಆಭ್ಯರ್ಥಿಗಳು www.city.karnataka.gov.in ಆನ್ ಲೈನ್ ನಲ್ಲಿ ಅಥಾವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ / ಕಾರ್ಗಲ್ ಭೇಟಿ ನೀಡಿ ಆನ್ ಲೈನ್ ನಲ್ಲಿ ಜೂ.03…
ಬೆಂಗಳೂರು: ಬೆಂಗಳೂರಿನ ದೊಡ್ಡಕಲ್ಲಸಂದ್ರ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಕಾರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿ ಕಾರಿನ ಇಂಜಿನ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದು ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್ ಆಯಂಡ್ ರನ್ ಗೆ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸರಗೂರು: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ತಾಲ್ಲೂಕು ಅಧ್ಯಕ್ಷರಾಗಿ ಅಮೀರ್ ಸುಹೇಲ್ ರವರು ನೇಮಕಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ರವರ ಸೂಚನೆ ಮೇರೆಗೆ ಹಾಗೂ ಶಾಸಕ ಅನಿಲ್ ಚಿಕ್ಕಮಾದುರವರ ಶಿಫಾರಸಿನ ಮೇರೆಗೆ ಅಮೀರ್ ಸುಹೇಲ್ ರವರನ್ನು, ಎಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಸರಗೂರು ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಜಿಲ್ಲಾ ಅಧ್ಯಕ್ಷರಾದ ಮೋಸಿನ್ ಖಾನ್ ರವರು ಆದೇಶ ಹೊರಡಿಸಿ. ನಂತರ ಬ್ಲಾಕ್ ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷರು ಏಜಾಷಾ ಪಾಷಾ ಮತ್ತು ಮನುಗನಹಳ್ಳಿ ಮಾದಪ್ಪ ಆದೇಶ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಚಾಮರಾಜು, ಚೆಲುವರಾಜು, ಟೌನ್ ಅಧ್ಯಕ್ಷ ನಾಗರಾಜು,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಪಿ ರವಿ, ಚಿಕ್ಕವೀರನಾಯಕ, ಭಾಗ್ಯಲಕ್ಷ್ಮಿ, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಕಾಂಗ್ರೆಸ್…