Subscribe to Updates
Get the latest creative news from FooBar about art, design and business.
- ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
- ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
- ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
- ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
- ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
- ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
- ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
- ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
Author: admin
ತುಮಕೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ವೇಗವಾಗಿ ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸುವುದು ಮತ್ತು ಅಪರಾಧಿಗಳನ್ನು ಪತ್ತೆಹಚ್ಚುವುದು ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದೆ ಎಂದು ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಅಬ್ದುಲ್ ಖಾದರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಿಎಆರ್ (DAR) ಮೈದಾನದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಪೊಲೀಸ್ ಧ್ವಜ ದಿನಾಚರಣೆ’ಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಪೊಲೀಸ್ ವೃತ್ತಿಯು ಹೆಚ್ಚಿನ ಒತ್ತಡದಿಂದ ಕೂಡಿರುತ್ತದೆ. ಆದಾಗ್ಯೂ, ಸಂಕಷ್ಟದಲ್ಲಿರುವವರು ಮತ್ತು ಅಶಕ್ತರು ಠಾಣೆಗೆ ಬಂದಾಗ ಅವರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. ಜನರ ನೋವಿಗೆ ಸ್ಪಂದಿಸಿ ಕೆಲಸ ಮಾಡಿಕೊಡುವುದು ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯ ಕರ್ತವ್ಯ ಎಂದು ಅವರು ಕಿವಿಮಾತು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, “ಪೊಲೀಸ್ ಧ್ವಜ ದಿನಾಚರಣೆಯು ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ಸ್ಮರಿಸುವ ವಿಶೇಷ ಸಂದರ್ಭವಾಗಿದೆ. ಧ್ವಜಗಳ ಮಾರಾಟದಿಂದ ಸಂಗ್ರಹವಾಗುವ ಹಣವನ್ನು ಸಂಪೂರ್ಣವಾಗಿ ನಿವೃತ್ತ ಪೊಲೀಸರ ಕ್ಷೇಮಾಭಿವೃದ್ಧಿ ನಿಧಿಗೆ ಬಳಸಲಾಗುತ್ತದೆ. ಕಳೆದ ವರ್ಷ ಜಿಲ್ಲೆಯಲ್ಲಿ ಧ್ವಜ ಮಾರಾಟದಿಂದ ಒಟ್ಟು…
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ‘ಓಂಬುಡ್ಸ್‌ಮನ್’ (Ombudsman) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ವಿವರಗಳು: ಹುದ್ದೆಯ ಹೆಸರು: ಓಂಬುಡ್ಸ್‌ಮನ್ (Ombudsman) ವೇತನ: ಮಾಸಿಕ ಕನಿಷ್ಠ 10,000 ರೂ. ನಿಂದ ಗರಿಷ್ಠ 45,000 ರೂ. ವರೆಗೆ (ಅನುಭವ ಮತ್ತು ಮಾನದಂಡಗಳ ಆಧಾರದ ಮೇಲೆ). ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 1 ಮಾರ್ಚ್ 2026 ಕ್ಕೆ ಅನ್ವಯವಾಗುವಂತೆ 66 ವರ್ಷಗಳ ಒಳಗೆ ಇರಬೇಕು. ಅರ್ಜಿ ಸಲ್ಲಿಕೆ ವಿಧಾನ: ಈ ಹುದ್ದೆಗಳಿಗೆ ಆಫ್‌ಲೈನ್ (Offline) ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು (ಶೈಕ್ಷಣಿಕ ಪ್ರಮಾಣಪತ್ರ, ವಯಸ್ಸಿನ ಪುರಾವೆ, ಅನುಭವದ…
ಮಧುಗಿರಿ : ಕೈ ಒಳಗಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ. ಹೆತ್ತವರು ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ಎಷ್ಟೇ ಸಂಪತ್ತಿದ್ದರೂ ಪ್ರಯೋಜನಕ್ಕೆ ಬಾರದು ಎಂದು ಹಿರಿಯ ಸಾಹಿತಿ ಮಲನ ಮೂರ್ತಿ ತಿಳಿಸಿದರು. ಪಟ್ಟಣದ ಪಶ್ಚಿಮ ಬಡಾವಣೆಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಚಲ ಕಲ್ಚರಲ್ ಫೌಂಡೇಶನ್ ವತಿಯಿಂದ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಕ್ಕಳ ಪುಸ್ತಕ ದಿನಾಚರಣೆಯನ್ನು ಜಿ.ಪಿ.ರಾಜರತ್ನಂ ರ “ಒಂದು ಎರಡು ಬಾಳೆ ಎಲೆ ಹರಡು, ಮೂರು ನಾಕು ಅನ್ನ ಹಾಕು..” ಎಂಬ ಶಿಶುಗೀತೆ ಹಾಡಿ ಕಾರ್ಯಕ್ರಮ ಉದ್ಘಾಟಿಸಿ ದುರ್ಗಸಿಂಹನ ಪಂಚತಂತ್ರ, ಜನಪದ ಕತೆಗಳ ಮೂಲಕ ಮಕ್ಕಳ ಸಾಹಿತ್ಯ ಮೊದಲುಗೊಂಡು ಅಕ್ಷರದ ಮೂಲಕ ಮನೋವಿಕಾಸ ವಾಗುತ್ತದೆ ಎಂದರು. ಅಚಲ ಕಲ್ಚರಲ್ ಫೌಂಡೇಶನ್ ಅಧ್ಯಕ್ಷ ಪ್ರೊ. ಡಿ.ಎಸ್.ಮುನೀಂದ್ರ ಕುಮಾರ್ ಮಾತನಾಡಿ, ಪುಸ್ತಕದಿಂದ ಮಾತ್ರ ವಿದ್ಯಾರ್ಥಿಯ ವ್ಯಕ್ತಿತ್ವ ರೂಪುಗೊಳ್ಳುತ್ತದೆಯೇ ಹೊರತು ಮೊಬೈಲ್ ಗಳಿಂದಲ್ಲ ಎಂದರು. ನಾ. ಡಿಸೋಜ, ಟಿ.ಎಸ್.ನಾಗರಾಜ ಶೆಟ್ಟಿ, ಶಿವಲಿಂಗಪ್ಪ ಹಂದಿಹಾಳ್, ಬಿಳಿಗೆರೆ ಕೃಷ್ಣಮೂರ್ತಿ ಸೇರಿದಂತೆ ಹಲವರು ಮಕ್ಕಳ ಸಾಹಿತ್ಯ ಕೃಷಿ ನಡೆಸಿದ್ದಾರೆ ಎಂದರು. ಕಾರ್ಯಕ್ರಮದ…
ಬೆಂಗಳೂರು: ಶಾಲಾ–ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಹಾಗೂ ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ‘ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ಡಿಜಿಟಲ್ ಬಳಕೆ’ ಕುರಿತಾದ ಹೊಸ ಕರಡು ನೀತಿಯನ್ನು (Draft Policy) ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದು, ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಈ ಕರಡು ನೀತಿಯನ್ನು ಪ್ರಕಟಿಸಿದ್ದಾರೆ. ಸಾರ್ವಜನಿಕರು, ಪೋಷಕರು ಮತ್ತು ಶಿಕ್ಷಣ ತಜ್ಞರು ಮುಂದಿನ 15 ದಿನಗಳ ಒಳಗಾಗಿ ತಮ್ಮ ಸಲಹೆ ಹಾಗೂ ಸೂಚನೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು dd6mhkar@gmail.com ಅಥವಾ ddehospital–hfws@karnataka.gov.in ಗೆ ಇ-ಮೇಲ್ ಮಾಡಬಹುದಾಗಿದೆ. ಅತಿಯಾದ ಡಿಜಿಟಲ್ ಬಳಕೆಯಿಂದಾಗಿ ಪ್ರತಿ ನಾಲ್ಕು ಮಕ್ಕಳಲ್ಲಿ ಒಬ್ಬರು ಆತಂಕ, ನಿದ್ರಾಹೀನತೆ, ಏಕಾಗ್ರತೆ ಕೊರತೆ ಮತ್ತು ಸಾಮಾಜಿಕವಾಗಿ ಒಂಟಿಯಾಗುವಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯ ಬಗ್ಗೆ ಅರಿವು ಮೂಡಿಸುವುದು. ಶಾಲಾ ಪಠ್ಯದಲ್ಲಿ ಡಿಜಿಟಲ್ ಕ್ಷೇಮ (Digital…
ತುಮಕೂರು: ಭಾರತ ಸರ್ಕಾರದ ಜನಗಣತಿ–2027 ಕಾರ್ಯದ ಅಂಗವಾಗಿ ತುಮಕೂರು ಜಿಲ್ಲೆಯಲ್ಲಿ ಏಪ್ರಿಲ್ 15 ರವರೆಗೆ ಸ್ವಯಂ ಗಣನೆ (Self Enumeration) ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಕುಟುಂಬಗಳು ತಮಗೆ ಸಂಬಂಧಿಸಿದ ಜನಗಣತಿ ಮಾಹಿತಿಯನ್ನು ಸ್ವಯಂವಾಗಿ ಆನ್‌ಲೈನ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ವಯಂ ಗಣನೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದರಿಂದ ಜನಗಣತಿ ಕಾರ್ಯವು ವೇಗವಾಗಿ, ಸುಲಭವಾಗಿ ಮತ್ತು ನಿಖರತೆಯಿಂದ ಪೂರ್ಣಗೊಳ್ಳಲು ಸಹಕಾರಿ ಆಗುತ್ತದೆ ಎಂದು ತಿಳಿಸಿದ್ದಾರೆ. ಸ್ವಯಂ ಗಣನೆ ಮಾಡುವ ವಿಧಾನ: ಭಾರತ ಸರ್ಕಾರದ ಅಧಿಕೃತ ಪೋರ್ಟಲ್/ಮೊಬೈಲ್ ಆಪ್ ಮೂಲಕ ಆನ್‌ಲೈನ್‌ನಲ್ಲಿ ಪ್ರಶ್ನಾವಳಿಯನ್ನು ಭರ್ತಿ ಮಾಡಬಹುದು. ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒಂದು ಕೋಡ್ ರಚನೆಯಾಗುತ್ತದೆ. ನಂತರ ಗಣತಿ ಸಿಬ್ಬಂದಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ, ಈ ಕೋಡ್ ಅನ್ನು ಸ್ಕ್ಯಾನ್ ಮಾಡಿ ಮಾಹಿತಿಯನ್ನು ಪರಿಶೀಲಿಸಲಾಗುತ್ತದೆ. ಸ್ವಯಂ ಗಣನೆ ಮಾಡದ ಕುಟುಂಬಗಳಿಗೆ ನಂತರ ಜನಗಣತಿ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುವರು. ಜಿಲ್ಲೆಯ ಎಲ್ಲಾ…
ವಿಜಯಪುರ: ದಾವಣಗೆರೆ–ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಚಿವ ಎಂ.ಬಿ.ಪಾಟೀಲ್ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಸಚಿವ ಎಂ.ಬಿ.ಪಾಟೀಲ್ ನೀಡಿದ್ದ ‘ಸ್ವಾಭಿಮಾನವಿದ್ದರೆ ಬಿಜೆಪಿಯನ್ನು ಸೋಲಿಸಿ’ ಎಂಬ ಸವಾಲಿಗೆ ವಿಜಯಪುರದಲ್ಲಿ ಇಂದು ತಿರುಗೇಟು ನೀಡಿದ ಯತ್ನಾಳ್, “ನಾನು ಯಾರ ಮುಂದೆಯೂ ಹೋಗಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಬೇಡುವುದಿಲ್ಲ. ಇಂದು ಹನುಮ ಜಯಂತಿಯ ಪವಿತ್ರ ದಿನ. ಈ ಆಂಜನೇಯನ ಸಾಕ್ಷಿಯಾಗಿ ಹೇಳುತ್ತೇನೆ, ಒಂದು ದಿನ ಇದೇ ಬಿಜೆಪಿ ನಾಯಕರು ಅಪ್ಪ-ಮಕ್ಕಳನ್ನು (ಯಡಿಯೂರಪ್ಪ ಕುಟುಂಬ) ಕೈಬಿಟ್ಟು ನನ್ನನ್ನು ಹುಡುಕಿಕೊಂಡು ಬರುತ್ತಾರೆ,” ಎಂದು ಭವಿಷ್ಯ ನುಡಿದರು. ನಾನು ಮುಖ್ಯಮಂತ್ರಿಯಾದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾದರಿಯಲ್ಲೇ ಕಠಿಣ ಆಡಳಿತ ನೀಡುತ್ತೇನೆ. ನನ್ನ ಮೊದಲ ಸಂಪುಟ ಸಭೆಯಲ್ಲೇ ಮುಸ್ಲಿಂ ಸಮುದಾಯವನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ, ಅವರ ಬದಲು ಅಲ್ಪಸಂಖ್ಯಾತರಾದ ಮರಾಠರು, ಬ್ರಾಹ್ಮಣರು ಮತ್ತು ಕ್ಷತ್ರಿಯರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುತ್ತೇನೆ ಎಂದರು. ಎಂ.ಬಿ. ಪಾಟೀಲ್ ವಿರುದ್ಧ ವ್ಯಂಗ್ಯ: ಸಚಿವ…
ಗಂಗಾವತಿ: ಕಳ್ಳರ ರೀತಿಯಲ್ಲಿ ತಡರಾತ್ರಿ ಸಮಯದಲ್ಲಿ ಮನೆಯ ಗೋಡೆ–ಕಂಪೌಂಡ್ ಹಾರಿ ಬಂದು ಮನೆಯ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ವಿಕೃತನೊಬ್ಬ ಲಾಕ್ ಆಗಿದ್ದಾನೆ. ಇಲ್ಲಿನ ಬನ್ನಿಗಿಡದ ಕ್ಯಾಂಪಿನ ಪ್ರತಿಷ್ಠಿತರ ಮನೆಗಳಿಗೆ ರಾತ್ರಿ ವೇಳೆ ಕಳ್ಳರಂತೆ ಬಂದು ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಮಹಿಳೆಯರ ಒಳ ಉಡುಪುಗಳನ್ನು ಕದ್ದುಕೊಂಡು ಹೋಗಿ ಜನರ ಕೈಗೆ ಸಿಗದೇ ಚಳ್ಳೆಹಣ್ಣು ತಿನ್ನಿಸುತ್ತಿದ್ದ ವಿಕೃತ ಮನಸ್ಸಿನ ವ್ಯಕ್ತಿ ಈಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ಎಪಿಎಂಸಿಯ ಹಮಾಲರ ಕಾಲೋನಿಯ ದಾದಾಸಾಬ್ ಯಮನೂರಸಾಬ ಎಂದು ಗುರುತಿಸಲಾಗಿದೆ. 22 ವರ್ಷದ ಈ ಯುವಕ, ಮನೆಗಳಿಗೆ ನುಗ್ಗಿ ಬಟ್ಟೆ ಕಳ್ಳತನ ಮಾಡುತ್ತಿರುವ ಕೃತ್ಯ ಮನೆಗಳಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಆರೋಪಿಯ ಶೋಧ ಕಾರ್ಯದಲ್ಲಿ ತೊಡಗಿದ್ದರು. ಸೋಮವಾರ ತಡರಾತ್ರಿ ಮತ್ತೆ ಗಣ್ಯ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಈ ಯುವಕನನ್ನು ಮನೆಯವರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ…
ಕುಣಿಗಲ್: ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರ ಜಯಂತಿಗಳನ್ನು ಒಟ್ಟಿಗೆ ಆಚರಿಸುವ ಸಂಬಂಧ ಬಲ ಹಾಗೂ ಎಡಗೈ ಸಮುದಾಯಗಳ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು ಒಮ್ಮತಕ್ಕೆ ಬಾರದ ಕಾರಣ ಈ ಬಾರಿ ಇಬ್ಬರು ಮಹಾನ್ ನಾಯಕರ ಜಯಂತಿ ಕಾರ್ಯಕ್ರಮವನ್ನು ಪ್ರತ್ಯೇಕವಾಗಿ ಆಚರಣೆ ಮಾಡಲು ತೀರ್ಮಾನ ಕೈಗೊಂಡ ಪ್ರಸಂಗ ಜಯಂತಿ ಪೂರ್ವಭಾವಿ ಸಭೆಯಲ್ಲಿ ಬುಧವಾರ ನಡೆಯಿತು. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರ ಜಯಂತಿ ಆಚರಣೆ ಸಂಬಂಧ ತಹಶೀಲ್ದಾರ್ ಕರಿಯಪ್ಪನಾಯ್ಕ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧ ತಹಶೀಲ್ದಾರ್ ನ್ಯಾಯಾಲಯದ ಸಭಾಂಗಣದಲ್ಲಿ ಸಭೆ ನಡೆಯಿತು. ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಿವಲಿಂಗಯ್ಯ ಮಾತನಾಡಿ, ಪ್ರತಿ ವರ್ಷ ಏ.5ರಂದು ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಸರಳವಾಗಿ ಆಚರಿಸಿ, ಬಳಿಕ ಏ.14ರಂದು ನಡೆಯುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ವೇಳೆ ಇಬ್ಬರು ಮಹಾನ್ ನಾಯಕರ ಜಯಂತಿಯನ್ನು ಒಟ್ಟಿಗೆ ಅದ್ದೂರಿಯಾಗಿ ಬಹಳ ವರ್ಷಗಳಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.…
ತುಮಕೂರು: ಸಿದ್ದಗಂಗಾ ಮಠದಲ್ಲಿ ಪದ್ಮಭೂಷಣ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 119ನೇ ಜಯಂತೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮ ಇಂದು ನೆರವೇರಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ದ್ರೌಪದಿ ಮುರ್ಮು , ಕನ್ನಡದಲ್ಲೇ ಭಾಷಣ ಆರಂಭಿಸಿ “ಸಹೋದರ ಸಹೋದರಿಯರೇ, ತಮಗೆಲ್ಲರಿಗೂ ನನ್ನ ಸ್ವಪ್ರೇಮ ನಮಸ್ಕಾರಗಳು. ಓಂ ನಮಃ ಶಿವಾಯ! ಶ್ರೀ ಶಿವಕುಮಾರ್ ಸ್ವಾಮೀಜಿಯವರ ಜಯಂತಿಯಂದು ಇಲ್ಲಿರುವುದು ನನಗೆ ಬಹಳ ಸಂತೋಷ ತಂದಿದೆ. ಅವರು ನಮ್ಮ ಸಮಾಜ ಮತ್ತು ರಾಷ್ಟ್ರಕ್ಕೆ ಆತ್ಮದ ಸ್ವರೂಪವನ್ನು ನೀಡಿದವರು. ಸಿದ್ದಗಂಗಾ ಮಠದಲ್ಲಿ ಅನ್ನಗಂಗೆ, ಕರುಣಾಗಂಗೆ ಮತ್ತು ಶಿಕ್ಷಣಗಂಗೆ ನಿರಂತರವಾಗಿ ಹರಿಯುತ್ತಿದೆ. ವಂಚಿತರಿಗೆ ಶಿಕ್ಷಣ ನೀಡುವುದು ದೇಶದ ಭವಿಷ್ಯವನ್ನು ನಿರ್ಮಿಸುವುದಕ್ಕೆ ಸಮಾನ. ಬಸವಣ್ಣನವರ ‘ಕಾಯಕವೇ ಕೈಲಾಸ’ ತತ್ವ ಮತ್ತು ಭಗವದ್ಗೀತೆಯ ನಿಷ್ಕಾಮ ಕರ್ಮಯೋಗದಂತೆ ಸ್ವಾಮೀಜಿಯವರು ಬದುಕಿದ್ದಾರೆ. ಕರ್ನಾಟಕದ ಜನರು ರಾಷ್ಟ್ರ ನಿರ್ಮಾಣದಲ್ಲಿ ಯಾವಾಗಲೂ ಮುಂಚೂಣಿಯಲ್ಲಿದ್ದಾರೆ” ಎಂದು ತಿಳಿಸಿದರು. ರಾಜ್ಯ ಸರ್ಕಾರದ ಪರವಾಗಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, “ಗೌರವಾನ್ವಿತ ರಾಷ್ಟ್ರಪತಿಗಳೇ, ಈ ತುಮಕೂರು ಜಿಲ್ಲೆ ಸಂಸ್ಕೃತಿ ಮತ್ತು ಆಧ್ಯಾತ್ಮದ ಸಂಗಮವಾಗಿದೆ.…
ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ಬಿಜೆಪಿ ಮಾಡುತ್ತಿರುವ ‘ಆರ್ಥಿಕ ಸಂಕಷ್ಟ’ದ ಆರೋಪಗಳನ್ನು ತಳ್ಳಿಹಾಕಿದರು. ದೇಶದ ಜಿಡಿಪಿ ದರ ಶೇ 7.14 ರಷ್ಟಿದ್ದರೆ, ಕರ್ನಾಟಕದ ಜಿಡಿಪಿ ದರ ಶೇ 8.1 ರಷ್ಟಿದೆ. ದೇಶದ ಆರ್ಥಿಕ ಸ್ಥಿತಿಗಿಂತ ರಾಜ್ಯದ ಸ್ಥಿತಿ ಉತ್ತಮವಾಗಿದೆ ಎಂದು ಸಿಎಂ ಅಂಕಿಅಂಶಗಳ ಸಹಿತ ವಿವರಿಸಿದರು. ಬಿಜೆಪಿ ನಾಯಕ ಆರ್. ಅಶೋಕ ಅವರ ‘ಸಾಲದ ರಾಮಯ್ಯ’ ಎಂಬ ಟೀಕೆಗೆ ಉತ್ತರಿಸಿದ ಸಿದ್ದರಾಮಯ್ಯ, “ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಸಾಲ ₹53 ಲಕ್ಷ ಕೋಟಿ ಇತ್ತು, ಈಗ ಅದು ₹218 ಲಕ್ಷ ಕೋಟಿಗೆ ಏರಿಕೆಯಾಗಿದೆ. 12 ವರ್ಷಗಳಲ್ಲಿ ಮೋದಿ ಅವರು ₹165 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಹಾಗಾದರೆ ಅವರನ್ನು ಏನೆಂದು ಕರೆಯಬೇಕು?” ಎಂದು ಪ್ರಶ್ನಿಸಿದರು. ಕಾಂಗ್ರೆಸ್…