Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಹೊಸದಿಲ್ಲಿ: ಆರು ರಾಜ್ಯ ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 58 ಕ್ಷೇತ್ರಗಳಲ್ಲಿಮುಂಜಾನೆ 7 ಗಂಟೆಗೆ ಮತದಾನ ಆರಂಭವಾಗಿದೆ. ದೆಹಲಿಯ ಏಳು, ಉತ್ತರ ಪ್ರದೇಶದ 14, ಹರ್ಯಾಣದ ಎಲ್ಲ 10, ಬಿಹಾರ ಹಾಗೂ ಪಶ್ಚಿಮ ಬಂಗಾಳದ ತಲಾ 8, ಒಡಿಶಾದ 6, ಜಾರ್ಖಂಡ್ ನ 4 ಹಾಗೂ ಜಮ್ಮು ಮತ್ತು ಕಾಶ್ಮೀರದ ಒಂದು ಸ್ಥಾನದಲ್ಲಿ ಮತದಾನ ಈ ಹಂತದಲ್ಲಿ ನಡೆಯುತ್ತಿದೆ. ಜಮ್ಮು ಕಾಶ್ಮೀರದ ಅನಂತ್ನಾಗ್ ಕ್ಷೇತ್ರದ ಮತದಾನ ಮೇ 7ರಂದು ನಿಗದಿಯಾಗಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಮುಂದೂಡಲ್ಪಟ್ಟಿತ್ತು. ಬಿಜೆಪಿಯ ಧರ್ಮೇಂದ್ರ ಪ್ರಧಾನ್, ಮನೋಜ್ ತಿವಾರಿ, ಮೇನಕಾ ಗಾಂಧಿ, ಅಭಿಜಿತ್ ಗಂಗೋಪಾಧ್ಯಾಯ, ಮನೋಹರಲಾಲ್ ಖಟ್ಟರ್, ನವೀನ್ ಜಿಂದಾಲ್ ಹಾಗೂ ರಾವ್ ಇಂದ್ರಜೀತ್ ಸಿಂಗ್, ಕಾಂಗ್ರೆಸ್ ನ ಕನ್ನಯ್ಯ ಕುಮಾರ್, ಪಿಡಿಪಿಯ ಮೆಹಬೂಬಾ ಮುಫ್ತಿ ಕಣದಲ್ಲಿರುವ ಪ್ರಮುಖರು. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಒಟ್ಟು 889 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಒಡಿಶಾದ 42 ವಿಧಾನಸಭಾ ಕ್ಷೇತ್ರಗಳಿಗೂ ಇಂದು ಮತದಾನ…
ಮಧ್ಯಮ ಸರದಿಯ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅರ್ಧಶತಕದ(50 ರನ್, 34 ಎಸೆತ, 4 ಸಿಕ್ಸರ್)ಕೊಡುಗೆ, ಶಹಬಾಝ್ ಅಹ್ಮದ್ ಆಲ್ ರೌಂಡ್ ಆಟದ(18 ರನ್,3-23) ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಶುಕ್ರವಾರ ನಡೆದ ಐಪಿಎಲ್ ಟೂರ್ನಿಯ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 36 ರನ್ ಅಂತರದಿಂದ ಮಣಿಸಿದೆ. ಈ ಗೆಲುವಿನ ಮೂಲಕ ಮೇ 26ರಂದು ಚೆನ್ನೈನಲ್ಲಿ ನಡೆಯುವ ಐಪಿಎಲ್ ಫೈನಲ್ ಗೆ ಲಗ್ಗೆ ಇಟ್ಟಿರುವ ಸನ್ ರೈಸರ್ಸ್ ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಟಾಸ್ ಜಯಿಸಿದ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಇಳಿಸಿದರು. ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 175 ರನ್ ಗಳಿಸಿತು.ಗೆಲ್ಲಲು 176 ಗುರಿ ಬೆನ್ನಟ್ಟಿದ ರಾಜಸ್ಥಾನ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ ಕೇವಲ 139 ರನ್ ಗಳಿಸಿ ಸೋಲೊಪ್ಪಿಕೊಂಡಿತು. ರಾಜಸ್ಥಾನದ ಪರ ಧ್ರುವ್ ಜುರೆಲ್(ಔಟಾಗದೆ 56,…
ಹಾವೇರಿ: ಪಡಿತರ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸಂದರ್ಭ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಟೋಲ್ ಹತ್ತಿರ ಆಹಾರ ನಿರೀಕ್ಷಕರು ಮತ್ತು ಪೊಲೀಸರು ಶುಕ್ರವಾರ ದಾಳಿ ನಡೆಸಿ, 238 ಕ್ವಿಂಟಾಲ್ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ 12:30ರ ವೇಳೆಯಲ್ಲಿ ಹುಬ್ಬಳ್ಳಿಯಿಂದ ರಾಷ್ಟ್ರೀಯ ಹೆದ್ದಾರಿ –48ರ ಮೂಲಕ ಬೆಂಗಳೂರು ಕಡೆ ಅಕ್ಕಿಯನ್ನು ಸಾಗಿಸುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 8.11 ರೂ. ಲಕ್ಷ ಮೌಲ್ಯದ 478 ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ. ಡಿ.ಸಿ.ಆರ್.ಬಿಯ ಪಿಎಸ್ ಐ ಕೃಷ್ಣಪ್ಪ ತೋಪಿನ ಮತ್ತು ಸಿಬ್ಬಂದಿಗಳಾದ ಜಿ.ಬಿ.ಕಾಳೆ, ಪ್ರಕಾಶ ದೇವಗಿರಿ, ಬೀರಪ್ಪ ಲಮಾಣಿ ಹಾಗೂ ಶಿಗ್ಗಾವಿ ಆಹಾರ ನಿರೀಕ್ಷಕರನ್ನು ಒಳಗೊಂಡ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಲಾರಿ ಚಾಲಕನನ್ನು ಬಂಧಿಸಿದೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಸಾಗಣೆ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೋಲಾರ: ‘ಮೇಲ್ಮನೆ ಸದಸ್ಯರಾಗಲು ಕೆ.ಆರ್.ರಮೇಶ್ ಕುಮಾರ್ ಅತ್ಯಂತ ಸೂಕ್ತ ವ್ಯಕ್ತಿ. ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಲು ನಮ್ಮ ಬೆಂಬಲವಿದೆ, ಉತ್ತಮ ಆಯ್ಕೆ ಕೂಡ. ನಾವೆಲ್ಲರೂ ಅವರನ್ನು ಸಮರ್ಥಿಸಿಕೊಳ್ಳುತ್ತೇವೆ’ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪರಿಷತ್ ಸದಸ್ಯ ಸ್ಥಾನವನ್ನು ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಕೇಳಿದರೂ ನಮ್ಮ ಒಪ್ಪಿಗೆ ಇದೆ. ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ’ ಎಂದರು. ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದಿಂದ ಬಂದಿದ್ದ ಕಾಂಗ್ರೆಸ್ ನಿಯೋಗ ಕೂಡ ರಮೇಶ್ ಕುಮಾರ್ ಅವರನ್ನು ಎಂಎಲ್‌ಸಿ ಮಾಡಬೇಕೆಂದು ಸಚಿವರಿಗೆ ಹಕ್ಕೊತ್ತಾಯ ಮಂಡಿಸಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಿ, ಜಿಲ್ಲೆಯನ್ನು ಬಾಲ ಕಾರ್ಮಿಕ ಪದ್ದತಿ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ, ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿಮೆ/ಕೈಗಾರಿಕೆಗಳಲ್ಲಿ ಹಾಗೂ ಅಪಾಯಕಾರಿ ಅಲ್ಲದ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಲ್ಲಿ ಅಂತಹ ಮಕ್ಕಳನ್ನು ಅಲ್ಲಿಂದ ಮುಕ್ತಗೊಳಿಸಿ, ಅವರಿಗೆ ವಿದ್ಯಾಭ್ಯಾಸ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಕಾರ್ಮಿಕ ಇಲಾಖೆ, ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳು ಇನ್ನಷ್ಟು ಸಂಘಟಿತವಾಗಿ, ಪರಿಣಾಮಕಾರಿಯಗಿ ಕಾರ್ಯನಿರ್ವಹಿಸಬೇಕು ಎಂದರು. ಬಾಲ ಕಾರ್ಮಿಕ ಪದ್ದತಿಯ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮತ್ತು ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವವರಿಗ ನೀಡುವ ಶಿಕ್ಷೆಯ…
ಕೊರಟಗೆರೆಯಲ್ಲಿ ಇಂದು ಮಧ್ಯಾಹ್ನ ಭಾರೀ ಗಾಳಿ ಮಳೆ ಅವಾಂತರ ಸೃಷ್ಟಿ ಮಾಡಿದ್ದು, ವೇಗವಾಗಿ ಬೀಸಿದ ಗಾಳಿ ಮಳೆಗೆ ಮರ, ನಾಲ್ಕು ವಿದ್ಯುತ್ ಕಂಬಗಳು, ಒಂದು ತೆಂಗಿನ ಮರ ಧರೆಗುರುಳಿದೆ. ಕೊರಟಗೆರೆ ಪಟ್ಟಣದ ಹುಲಿಕುಂಟೆ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕೂದಲೆಳೆಯಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ಪಟ್ಟಣದ ಹಲವು ಭಾಗದಲ್ಲಿ ಕೆಲ ಘಟನೆಗಳು ನಡೆದಿವೆ. ಭೀಕರ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಘಟನೆಯಿಂದಾಗಿ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಸಾರ್ವಜನಿಕರು ಪರದಾಡಿದರು. ಬಳಿಕ ಬೆಸ್ಕಾಂ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಸೇರಿ ಮರ ವಿದ್ಯುತ್ ಕಂಬ ವಿದ್ಯುತ್ ತಂತಿ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ತಾಲೂಕಿನಲ್ಲಿ ಅಬ್ಬರದ ಗಾಳಿಯ ಜೊತೆಗೆ ಭೀಕರ ಮಳೆಯ ಆರ್ಭಟ ಜೋರಾಗಿದ್ದು, ಸ್ಥಳಕ್ಕೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.. ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ…
ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಸೋಷಿಯಲ್ ಮೀಡಿಯಾಗಳ ಬಳಕೆ ಮಕ್ಕಳ ಮಾನಸಿಕ ಆರೋಗ್ಯಕ್ಕೆ ಹಾನಿಕಾರವಾಗಿದೆ. ಹೀಗಾಗಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಖಾತೆಗಳ ನೋಂದಣಿಯನ್ನು ನಿಷೇಧಿಸಬೇಕು ಎಂದು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ. ಮಕ್ಕಳು ಆನ್ ಲೈನ್ ಬಳಕೆಯಿಂದ ಸಾಮಾಜಿಕ ಒತ್ತಡಗಳಿಗೆ ಒಳಗಾಗುತ್ತಾರೆ. ಇದರಿಂದ ಮಕ್ಕಳನ್ನು ನಿಯಂತ್ರಿಸಿದರೆ ಬೆಳೆವಣಿಗೆಗೆ ಹೆಚ್ಚುವರಿ ಸಮಯವನ್ನು ನೀಡಿದಂತಾಗುತ್ತದೆ. ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತೆರೆಯಲು ಕನಿಷ್ಠ ವಯಸ್ಸನ್ನು 13 ರಿಂದ 16ಕ್ಕೆ ಹೆಚ್ಚಿಸುಬೇಕೆಂಬ ತಿಳಿಸಿದ್ದಾರೆ. ನಮ್ಮ ಕಿರಿಯ ಆಸ್ಟ್ರೇಲಿಯನ್ನರು ಕ್ರೀಡೆಗೆ ಹೆಚ್ಚು ಸಮಯವನ್ನು ಮೀಸಲಿಡಬೇಕು. ಸಾಮಾನ್ಯ ರೀತಿಯಲ್ಲಿ ಪರಸ್ಪರ ಮಾತು, ಚರ್ಚೆಯಲ್ಲಿ ತೊಡಬೇಕು ಹಾಗೂ ಆನ್‌ಲೈನ್‌ನಲ್ಲಿ ಕಡಿಮೆ ಸಮಯವನ್ನು ಕಳೆಯಬೇಕು. ಇದಕ್ಕಾಗಿ ಉತ್ತಮ ಮಾರ್ಗವೆಂದರೆ ಸಾಮಾಜಿಕ ಮಾಧ್ಯಮಗಳ ನಿರ್ಬಂಧ ಎಂದು ಎಫ್ ಎಂ ರೇಡಿಯೊಗೆ ತಿಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಕೆಟ್ಟ ಸಂದೇಶಗಳು, ಹೇಳಿಕೆಗಳು ವಯಸ್ಕರಿಗೆ ಹಾನಿ ಮಾಡುತ್ತದೆ. ಇದು ಮಕ್ಕಳ ಮೇಲೆ ಇನ್ನೂ ಕೆಟ್ಟ ಪರಿಣಾಮ ಬೀರುತ್ತದೆ. ಇದು ವಿನಾಶಕಾರಿಯಾಗಬಹುದು ಎಂದು ಹೇಳಿದ್ದಾರೆ. ನಾನು…
ಕೋಲ್ಕತ್ತಾ: 2010 ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಎಲ್ಲಾ ಇತರ ಹಿಂದುಳಿದ ವರ್ಗಗಳ ಪ್ರಮಾಣಪತ್ರಗಳನ್ನು ಕೋಲ್ಕತ್ತಾ ಹೈಕೋರ್ಟ್ ವಜಾಗೊಳಿಸಿದೆ. ಒಬಿಸಿ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್ ಮಂಥ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗವು, 1993 ರ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆಯ ಆಧಾರದ ಮೇಲೆ OBC ಗಳ ಹೊಸ ಪಟ್ಟಿಯನ್ನು ತಯಾರಿಸಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ. ಹೈಕೋರ್ಟ್ ಪೀಠವು 2010 ರ ನಂತರ ಸಿದ್ಧಪಡಿಸಲಾದ ಒಬಿಸಿ ಪಟ್ಟಿಯನ್ನು ‘ಅಕ್ರಮ’ ಎಂದು ಹೇಳಿದೆ. ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳು (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ) (ಸೇವೆಗಳು ಮತ್ತು ಹುದ್ದೆಗಳಲ್ಲಿ ಖಾಲಿ ಹುದ್ದೆಗಳ ಮೀಸಲಾತಿ) ಕಾಯಿದೆ-2012 ಸೆಕ್ಷನ್ 2H, 5, 6 ಮತ್ತು ಸೆಕ್ಷನ್ 16 ಮತ್ತು ಶೆಡ್ಯೂಲ್ I ಮತ್ತು III ಅನ್ನು…
ಚಂಡೀಗಢ: ಇಬ್ಬರು ಮುಖ್ಯಮಂತ್ರಿಗಳ ಬಂಧನವಾಗಿದೆ. ಆದರೆ ಬುಡಕಟ್ಟು ಸಮುದಾಯದ ಸಿಎಂ ಮಾತ್ರ ಇನ್ನೂ ಜೈಲಿನಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಬಂಧನಗಳ ನಡುವೆ ಹೋಲಿಕೆ ಮಾಡಿದ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಹರಿಯಾಣದ ಪಂಚಕುಲದಲ್ಲಿ ‘ಸಂವಿಧಾನ್ ಸಮ್ಮಾನ್ ಸಮ್ಮೇಳನ’ ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕರನ್ನು ಸಮಾನವಾಗಿ ಕಾಣಬೇಕು ಎಂದು ನಮ್ಮ ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹಾಗಾದರೆ ನನ್ನ ಸರಳ ಪ್ರಶ್ನೆ, 90% ರಷ್ಟು ಜನರ ಭಾಗವಹಿಸುವಿಕೆ ಏನು? ಮಾಧ್ಯಮ ಅಥವಾ ಅಧಿಕಾರಶಾಹಿ ಯಾವುದೇ ಆಗಿರಲಿ. ಅಲ್ಲಿ 90% ರಷ್ಟು ಜನರು ಭಾಗವಹಿಸುವಿಕೆ ಇಲ್ಲ. ಅವರು ಅಸ್ತಿತ್ವದಲ್ಲಿಯೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಲಾಯಿತು. ಬುಡಕಟ್ಟು ಸಿಎಂ ಹೇಮಂತ್ ಸೋರೆನ್ ಇನ್ನೂ ಜೈಲಿನಲ್ಲಿದ್ದಾರೆ. ಅವರು ಮೊದಲು ಅರೆಸ್ಟ್ ಆದರು. ಇನ್ನೂ ಕಂಬಿಗಳ ಹಿಂದೆ ಇದ್ದಾರೆ. ರಾಷ್ಟ್ರೀಯ ಮಾಧ್ಯಮಗಳು ಅವರನ್ನು…
ಹರಿಯಾಣದಲ್ಲಿ ನಿರುದ್ಯೋಗ ಸೃಷ್ಟಿಗೆ ಬಿಜೆಪಿಯೇ ಕಾರಣ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ. ಹರಿಯಾಣದಲ್ಲಿ ನಿರುದ್ಯೋಗ, ಭ್ರಷ್ಟಾಚಾರ ಮತ್ತು ಹಣದುಬ್ಬರಕ್ಕೆ ಬಿಜೆಪಿ ಸರ್ಕಾರವೇ ಕಾರಣ, ಹರಿಯಾಣದಲ್ಲಿ ಕಾಂಗ್ರೆಸ್ ನ ದೊಡ್ಡ ಅಲೆ ಇದೆ. ಇಡೀ ದೇಶದಲ್ಲಿ ಹರಿಯಾಣದಲ್ಲಿ ಅತಿ ಹೆಚ್ಚು ನಿರುದ್ಯೋಗವಿದೆ. ಅದಕ್ಕೆ ಇಲ್ಲಿನ ಯುವಕರು ಬೆಲೆ ತೆರುತ್ತಿದ್ದಾರೆ. ಇದಕ್ಕೆ ತಿರುಗೇಟು ನೀಡಲೇಬೇಕಾದ ಅನಿವಾರ್ಯತೆ ಇದೆ ಅದಕ್ಕೆ ಈ ಚುನಾವಣೆ ದೊಡ್ಡ ಅಸ್ತ್ರವಾಗಲಿದೆ ಎಂದರು. ಬಿಜೆಪಿಯ ಅತಿರೇಕದ ಹಣದುಬ್ಬರ, ಭ್ರಷ್ಟಾಚಾರ ಮತ್ತು ಅಸ್ಥಿರತೆಯಿಂದ ಜನರು ಬೇಸರಗೊಂಡಿದ್ದಾರೆ. ಇಲ್ಲಿನ ಜನರು ದೊಡ್ಡ ಬದಲಾವಣೆಯನ್ನು ತರಲಿದ್ದಾರೆ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಹರಿಯಾಣ ರಾಜ್ಯದ ಎಲ್ಲಾ ಸ್ಥಾನಗಳನ್ನು ಕಾಂಗ್ರೆಸ್ ಭಾರೀ ಅಂತರದಿಂದ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹರಿಯಾಣದಲ್ಲಿ ಮೇ 25ಕ್ಕೆ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಮಾರಿ ಸೆಲ್ಜಾಗೆ ಬೆಂಬಲವನ್ನು ಪಡೆಯಲು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ರೋಡ್‌ಶೋ ನಡೆಸಿದರು. ಅವರು…