Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಐದು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿ ವೈಫಲ್ಯ ಕಂಡ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಆದರೆ, ಬರೋಡಾ ಆಲ್ ರೌಂಡರ್ ಮುಂದಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾಗೆ ವಿಶ್ವಕಪ್ ಗೆದ್ದುಕೊಡಬಲ್ಲ ವಿಶೇಷ ಆಟವನ್ನು ಆಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ವಿಶ್ವಾಸ ಹೊರಹಾಕಿದ್ದಾರೆ. ಐಪಿಎಲ್ 2024 ಟೂರ್ನಿಯಲ್ಲಿ ಕೇವಲ ಕ್ಯಾಪ್ಟನ್ಸಿಯಲ್ಲಿ ಮಾತ್ರವಲ್ಲ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿಯೂ ಹಾರ್ದಿಕ್ ಪಾಂಡ್ಯ ನೀರಸ ಪ್ರದರ್ಶನ ನೀಡಿದ್ದಾರೆ. ಕಳಪೆ ಪ್ರದರ್ಶನದ ಹೊರತಾಗಿಯೂ ಟೀಮ್ ಇಂಡಿಯಾ ಸೆಲೆಕ್ಟರ್ಸ್ ಭಾರತದ ಟಿ20 ವಿಶ್ವಕಪ್ ತಂಡ ರಚಿಸುವಾಗ 15 ಆಟಗಾರರ ಬಳಗದಲ್ಲಿ ಹಾರ್ದಿಕ್ ಗೆ ಸ್ಥಾನ ನೀಡಿದ್ದಾರಲ್ಲದೆ ವೈಸ್ ಕ್ಯಾಪ್ಟನ್ ಪಟ್ಟವನ್ನೂ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ಈ ಬಾರಿ ಅಂಕಪಟ್ಟಿಯ ಕೊನೇ ಸ್ಥಾನದಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿತು. ಹಾರ್ದಿಕ್ ಪಾಂಡ್ಯ ಆಡಿದ…
ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಎಂದು ಕಾಲೇಜಿನ ಪ್ರೇಮಾಂಕುರದ ಕಹಾನಿಯನ್ನು ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ. ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ ಎಂದು ಹೇಳಿದ ಅವರು ಈ ಮೂಲಕ ವಿದ್ಯಾರ್ಥಿ ಜೀವನದಲ್ಲಿನ ಪ್ರೇಮಾಂಕುರವನ್ನು ಹಂಚಿಕೊಂಡಿದ್ದಾರೆ. ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ. ಅವರ ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು ಎಂದು ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿದರು. ಇದರೊಂದಿಗೆ ಪರೋಕ್ಷವಾಗಿ ಕಾಲೇಜು ದಿನಗಳಲ್ಲಿ ಓರ್ವ ಹುಡುಗಿಯನ್ನು ಇಷ್ಟಪಟ್ಟಿರುವುದನ್ನು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ, ರಾಯಬಾಗ ಮತ್ತು ಹುಕ್ಕೇರಿ ತಾಲೂಕಿನಲ್ಲಿ ಸಿಡಿಲಬ್ಬರದ ಮಳೆ ಸುರಿದಿದೆ. ರಾಯಬಾಗ ಪಟ್ಟಣದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಸಿಡಿಲು ಬಡಿದಿದೆ. ಇದರಿಂದ ಒಬ್ಬ ಮಹಿಳೆ ಮೃತಪಟ್ಟಿದ್ದು ನಾಲ್ವರ ಸ್ಥಿತಿ ಗಂಭೀರವಾಗಿದೆ. ಇನ್ನು, ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲೂ ಕುರಿಮೇಯಿಸಲು ಹೋಗಿದ್ದವರಿಗೆ ಸಿಡಿಲು ಹೊಡೆದಿದೆ. ಈ ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ರೆ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. 12 ಕುರಿಗಳು ಕೂಡ ಸಾವನ್ನಪ್ಪಿವೆ ಎನ್ನಲಾಗಿದೆ. ಕಾಡಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಆಲೆಮನೆ ಧ್ವಂಸವಾಗಿದೆ. ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಮರ ಬಿದ್ದು ಆಕಳು ಸಾವನ್ನಪ್ಪಿದೆ. ಬಾಗಲಕೋಟೆಯಲ್ಲೂ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಅಲ್ಲೋಲ ಕಲ್ಲೋಲವೇ ಉಂಟಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಮಳೆಯಿಂದ ನಗರದಲ್ಲಿ ಡೆಂಗ್ಯೂ/ಡೆಂಘಿ ಪ್ರಕರಣಗಳಲ್ಲಿ ವಿಪರೀತ ಏರಿಕೆ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ರಾಜಧಾನಿಯಲ್ಲಿ ಶೇ 40 ರಷ್ಟು ಡೆಂಘಿ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ಇದರ ಜೊತೆಗೆ ಇತರ ಜ್ವರದ ಪ್ರಕರಣಗಳು ಕೂಡಾ ಹೆಚ್ಚಾಗಿದ್ದು, ಆರೋಗ್ಯ ಇಲಾಖೆಯ ಚಿಂತೆಗೆ ಕಾರಣವಾಗಿದೆ. ಈ ವರ್ಷ ಜನರು ಅತಿಯಾಗಿ ಎಳೆನೀರು ಸೇವಿಸಿ ಚಿಪ್ಪುಗಳನ್ನು ಎಲ್ಲೆಂದರಲ್ಲಿ ಎಸೆದಿದ್ದಾರೆ. ಇದರಲ್ಲಿ ನೀರು ನಿಂತು ಅತಿಯಾಗಿ ಸೊಳ್ಳೆಗಳ ಉತ್ಪತಿಯಾಗುತ್ತಿದೆ. ಇದು ಈಗ ಆರೋಗ್ಯ ಇಲಾಖೆಯ ತಲೆ ಬಿಸಿಗೆ ಕಾರಣವಾಗಿದೆ. ಎಲ್ಲೆಂದರಲ್ಲಿ ಬಿಸಾಡಿರುವ ಎಳೆನೀರು ಚಿಪ್ಪುಗಳಲ್ಲಿ ಅತಿಯಾಗಿ ಸೊಳ್ಳೆಗಳ ಉತ್ಪತಿಯಾಗಿದೆ. ಇದರಿಂದಲೇ ಡೆಂಘಿ ಸೇರಿದ್ದಂತೆ ನಾನಾ ಖಾಯಿಲೆಗಳು ಏರಿಕೆಯಾಗುತ್ತಿವೆ ಎಂಬುದು ಆರೋಗ್ಯ ಇಲಾಖೆಯ ಅಭಿಪ್ರಾಯ. ಎಳೆನೀರು ಕುಡಿದು ಬಿಸಾಡಿರುವ ಚಿಪ್ಪುಗಳನ್ನು ವಿಲೇವಾರಿ ಮಾಡುವುದೇ ಆರೋಗ್ಯ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಡೆಂಘಿ ಜೊತೆಗೆ ವೈರಲ್ ಜ್ವರ ಕೂಡಾ ಹೆಚ್ಚೆಚ್ಚು ಕಂಡುಬರುತ್ತಿದೆ. ಇನ್ನು ರಾಜ್ಯದಲ್ಲಿ ಡೆಂಘಿ ಹೆಚ್ಚಳ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ…
ಬೆಂಗಳೂರು ಟರ್ಫ್ ಕ್ಲಬ್(ರೇಸ್ ಕೋರ್ಸ್)ನಲ್ಲಿ ಕುದುರೆ ಪಂದ್ಯಾವಳಿಗಳ ಆಯೋಜನೆಗೆ ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು ಮುಂದಿನ 10 ದಿನಗಳಲ್ಲಿ ಕಾನೂನು ಬದ್ಧವಾಗಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಕುದುರೆ ಪಂದ್ಯಗಳ ಆಯೋಜನೆಗೆ ಪರವಾನಿಗೆ ನೀಡದ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರು ಟರ್ಫ್‌ಕ್ಲಬ್ ಲಿಮಿಟೆಡ್, ಕರ್ನಾಟಕ ರೇಸ್ ಹಾರ್ಸ್ ಓನರ್ಸ್ ಅಸೋಸಿಯೇಷನ್ ಮತ್ತು ಕರ್ನಾಟಕ ಟ್ರೈನರ್ಸ್ ಆಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ಪೀಠ ಸೂಚನೆ ನೀಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಕುದುರೆ ಪಂದ್ಯಾವಳಿಗಳ ಆಯೋಜನೆಗೆ ಪರವಾನಿಗೆ ಕುರಿತಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸುಮಾರು 2 ತಾಸು ಚರ್ಚೆಯಾಗಿದೆ. ಈ ಕುರಿತ ಇತರೆ ಪಾಲುದಾರರೊಂದಿಗೆ ಚರ್ಚೆಗಳು ನಡೆಸಬೇಕಾಗಿದ್ದು, ಅಕ್ರಮಗಳ ತಡೆಗಾಗಿ ಕಾನೂನು ಬದ್ಧವಾಗಿ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಬೇಕಾಗಿದೆ. ಕುದುರೆ ಪಂದ್ಯಾವಳಿಗಳಲ್ಲಿ ಕೆಲ ಆಕ್ಷೇಪಾರ್ಹ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಬಂಧ ಸರ್ಕಾರದ ಗಮನಕ್ಕೆ ಬಂದಿದ್ದರಿಂದ ಪರವಾನಿಗೆ…
ಬೆಂಗಳೂರು: ನಗರದ ಪ್ರತಿಷ್ಠಿತ ಮೂರು ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದ್ದು, ತಕ್ಷಣಕ್ಕೆ ಎಚ್ಚೆತ್ತುಕೊಂಡ ಪೊಲೀಸರು ಸ್ಥಳಗಳಲ್ಲಿ ತಪಾಸಣೆ ನಡೆಸಿದ ಬಳಿಕ ‘ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ’ ಎಂದು ತಿಳಿಸಿರುವುದು ವರದಿಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರತಿಷ್ಠಿತ ಒಟೆರಾ ಹೋಟೆಲ್ ಸೇರಿದಂತೆ ನಗರದ ಮೂರು ಹೋಟೆಲ್‍ಗಳಿಗೆ ಬಾಂಬ್ ಬೆದರಿಕೆ ಇಮೇಲ್‍ಗಳು ಬಂದಿದೆ. ಮೇ 23ರ ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಇ–ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ. ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸರಿಗೆ ಸಿಬ್ಬಂದಿ ಮಾಹಿತಿ ರವಾನಿಸಿದ್ದು, ತಕ್ಷಣಕ್ಕೆ ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‍ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದರು. ಬಳಿಕ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದಿದ್ದು, ಯಾವುದೇ ಸ್ಪೋಟಕ, ಬಾಂಬ್ ನಂತಹ ವಸ್ತುಗಳು ಪತ್ತೆಯಾಗಿಲ್ಲದ ಹಿನ್ನೆಲೆ ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದ್ದಾರೆ. ಈ ಸಂಬಂಧ ಆಗ್ನೇಯ ವಿಭಾಗದ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ…
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮಕ್ಕೆ ಸೇರಿದ ಗೋಮಾಳ ಜಮೀನು ಅನಧಿಕೃತವಾಗಿ ಒತ್ತುವರಿ ಮಾಡಲಾಗಿದ್ದನ್ನು ತೆರವು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ದೊಡ್ದಬಳ್ಳಾಪುರ ನಿವಾಸಿ ರಾಮು ನೇರಳಗಟ್ಟ ಮತ್ತು ಎಚ್.ಕಾಂತರಾಜು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಆರ್ ಕೃಷ್ಣ ಕುಮಾರ್ ಹಾಗೂ ಡಿ. ರಾಮಚಂದ್ರ ಹುದ್ದಾರ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು, ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೇ ನಂ 57, 58 ಮತ್ತು 60ರ ಸರ್ಕಾರಿ ಗೋಮಾಳ ಜಮೀನಿನನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಜಾಗದ ಸುತ್ತಲೂ ಸಿಮೆಂಟ್ ಕಾಂಪೌಂಡ್ ಗಳನ್ನು ನಿರ್ಮಾಣ ಮಾಡಲಾಗಿದ್ದು, ಕೂಲಿ ಕಾರ್ಮಿಕರು ಬಿಟ್ಟು ಕೆಲಸ ಮಾಡಿಸುತ್ತಿದ್ದಾರೆ.ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ಸೇರಬೇಕಾದ 30 ರಿಂದ 40 ರ ಎಕರೆಯನ್ನು ಭೂಗಳ್ಳರಿಂದ…
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್(ವಿದ್ಯುತ್), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು. ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ,…
ಜೈಸಲ್ಮೇರ್/ ಜೋಧಪುರ/ ಜೈಪುರ: ರಾಜಸ್ಥಾನದಲ್ಲಿ ಕಳೆದ 10 ದಿನಗಳಿಂದ ತೀವ್ರ ಬಿಸಿಗಾಳಿಯ ಹೊಡೆತಕ್ಕೆ ಜನ ಕಂಗಾಲಾಗಿದ್ದಾರೆ. ಗರಿಷ್ಠ ತಾಪಮಾನ 49 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಬಲೋತ್ರಾ ಹಾಗೂ ಜಾಲೋರ್ ಜಿಲ್ಲೆಗಳಲ್ಲಿ ತಲಾ ನಾಲ್ಕು ಮಂದಿ ಹಾಗೂ ಜೈಸಲ್ಮೇರ್ನಲ್ಲಿ ಒಬ್ಬರು ಸೇರಿದಂತೆ ಒಂಬತ್ತು ಮಂದಿಯ ಜೀವವನ್ನು ಬಲಿಪಡೆದಿದೆ. ಕಳೆದ ವರ್ಷ ಬಲೋತ್ರದಿಂದ ಪ್ರತ್ಯೇಕಗೊಂಡ ಬರ್ಮೆರ್ನಲ್ಲಿ 48.8 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ. ಜಾಲೋರ್ನಲ್ಲಿ ಗರಿಷ್ಠ ಉಷ್ಣಾಂಶ 47.4 ಡಿಗ್ರಿ ಸೆಲ್ಷಿಯಸ್ ಇದೆ. ಪಶ್ಚಿಮ ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ತಾಪಮಾನ 49 ಡಿಗ್ರಿ ಸೆಲ್ಸಿಯಸ್ ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ಜನ ಪಶ್ಚಿಮ ಪ್ರಕ್ಷುಬ್ಧತೆಯಿಂದ ನಿರಾಳವಾಗುವ ಸೂಚನೆ ಇಲ್ಲ” ಎಂದು ಜೈಪುರ ಹವಾಮಾನ ಇಲಾಖೆ ನಿರ್ದೇಶಕ ರಾಧೇಶ್ಯಾಮ್ ಶರ್ಮಾ ಹೇಳಿದ್ದಾರೆ. ಜಾಲೋರ್ನ ಸಫದಾ ಗ್ರಾಮದಲ್ಲಿ ಬಿಸಿಗಾಳಿಯ ಹೊಡೆತಕ್ಕೆ ಕಮಲಾದೇವಿ (42) ಎಂಬುವವರು ಜೀವ ಕಳೆದುಕೊಂಡಿದ್ದಾರೆ. ಅಹೋರ್ ಉಪವಲಯದ ಸಂಗದಿ ಗ್ರಾಮದಲ್ಲಿ ಪೊಪಟ್ಲಾಲ್ (30) ಉಷ್ಣಗಾಳಿಯ ಹೊಡೆತಕ್ಕೆ ಅಸು ನೀಗಿದ್ದರೆ,…
ನ್ಯೂಯಾರ್ಕ್ ನಗರದಲ್ಲಿ ನಡೆದ ಬೈಕ್ ಅಪಘಾತವೊಂದರಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ದ ಸ್ಟೇಟ್ ಯುನಿವರ್ಸಿಟಿ ಆಫ್ ನ್ಯೂಯಾರ್ಕ್ ನಲ್ಲಿ ಅಧ್ಯಯನ ಮಾಡುತ್ತಿದ್ದ ಆಂಧ್ರ ಪ್ರದೇಶದ ಶ್ರೀ ಬೆಲೆಮ್ ಅಚ್ಯುತ್ ಬುಧವಾರ ಸಂಜೆ ನಡೆದ ದುರಂತದಲ್ಲಿ ಅಸು ನೀಗಿರುವುದಾಗಿ ಪೊಲೀಸರು ಹೇಳಿದ್ದಾರೆ. “ನಿನ್ನೆ ಸಂಜೆ ನಡೆದ ಬೈಕ್ ದುರಂತದಲ್ಲಿ ಎಸ್ ಯು ಎನ್ ವೈ ವಿದ್ಯಾರ್ಥಿ ಶ್ರೀ ಬೆಲೆಮ್ ಅಚ್ಯುತ ಮೃತಪಟ್ಟಿದ್ದಾರೆ ಎಂದು ತಿಳಿದು ಅತೀವ ದುಃಖವಾಗಿದೆ” ಎಂದು ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಎಕ್ಸ್ ಪೋಸ್ಟ್ ನಲ್ಲಿ ಕಂಬನಿ ಮಿಡಿದಿದ್ದಾರೆ. ಸಂತ್ರಸ್ತ ಕುಟಂಬ ಹಾಗೂ ಸ್ಥಳೀಯ ಏಜೆನ್ಸಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ಪಾರ್ಥಿವ ಶರೀರವನ್ನು ಭಾರತಕ್ಕೆ ವಾಪಾಸು ಕಳುಹಿಸುವುದು ಸೇರಿದಂತೆ ಕುಟುಂಬಕ್ಕೆ ಎಲ್ಲ ಅಗತ್ಯ ನೆರವು ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…