Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಇತ್ತೀಚೆಗಷ್ಟೇ ಬೆಂಗಳೂರಿನ ರಾಮೇಶ್ವರಂ ಕೆಫೆ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಬಾಂಬ್ ದಾಳಿ ನಡೆದ ನಂತರ ಸಂಚಲನ ಮೂಡಿಸಿತ್ತು. ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಇದೀಗ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಉಪಾಹಾರಕ್ಕೆ ಹೆಸರುವಾಸಿಯಾದ ಈ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಮೇಲೆ ಹೈದರಾಬಾದ್ ನ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವರ್ಷದ ಜನವರಿಯಲ್ಲಿ ಹೈದರಾಬಾದ್ ನ ಮಾಧಾಪುರ ಪ್ರದೇಶದಲ್ಲಿ ಹೋಟೆಲ್ ಪ್ರಾರಂಭಿಸಲಾಗಿತ್ತು. ಈ ಕೆಫೆಯು ಇಡ್ಲಿ ಮತ್ತು ದೋಸೆಗೆ ಹೆಸರುವಾಸಿಯಾಗಿದೆ. ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಗುರುವಾರ ರೆಸ್ಟೋರೆಂಟ್ ನಲ್ಲಿ ಕಂಡು ಬಂದ ಅವಧಿ ಮೀರಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಕಂಡು ಹಿಡಿದಿದ್ದಾರೆ. ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ 16,000 ರೂ ಮೌಲ್ಯದ 100 ಕೆ.ಜಿ. ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು, ಎಂಟು ಲೀಟರ್ ಹಾಲು ಅವಧಿ ಮೀರಿದ್ದು ಅಡುಗೆಮನೆಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಜೊತೆಗೆ ಅಸ್ಪಷ್ಟ…
ಚಿಕ್ಕೋಡಿ: ಮದುವೆಯಾಗಲು ಹೆಣ್ಣು ಸಿಗದ ಕಾರಣ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿಯ ಹುಕ್ಕೇರಿಯಲ್ಲಿ ವರದಿಯಾಗಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಾಥ ಸುರೇಶ್ ಕೇಸ್ತಿ (27) ಎಂದು ಗುರುತಿಸಲಾಗಿದೆ. ಯುವಕ ನಗರದಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಎನ್ನಲಾಗಿದ್ದು, ಅತಿಯಾದ ಸಾಲ ಹಾಗೂ ಮದುವೆಗೆ ಹೆಣ್ಣು ಸಿಗದೆ ನೊಂದಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಗ್ಯಾರೇಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಪ್ರಜ್ವಲ್ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು, ನನ್ನ ತಾಳ್ಮೆಯನ್ನು ಪರೀಕ್ಷಿಸಬೇಡ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮೊಮ್ಮಗನಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ಪತ್ರವನ್ನು ಹಂಚಿಕೊಂಡಿರುವ ಮಾಜಿ ಪ್ರಧಾನಿ ದೇವೇಗೌಡರು, ಈ ಎಚ್ಚರಿಕೆಗೆ ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಕೂಡಲೇ ಹಿಂದಿರುಗಿ ಬರಬೇಕು ಎಂದು ಹೇಳಿದ್ದಾರೆ. ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು ಎಂದಿದ್ದಾರೆ. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನಾದರೆ ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು…
ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗುವೊಂದು ಕೆಮ್ಮಿದ ಕಾರಣ ಜೀವ ಉಳಿದ ಘಟನೆ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಡೆದಿದೆ. ಬದುಕಿದ ಬಳಿಕ ಆಸ್ಪತ್ರೆಯ ಬದಲು ಮುರ್ತುಜಾ ಖಾದ್ರಿ ಪವಾಡ ಎಂದು ನಂಬಿ ಪೋಷಕರು ಮಗುವನ್ನು ದರ್ಗಾಕ್ಕೆ ಕರೆದುಕೊಂಡು ಹೋದ್ದರು, ಬಳಿಕ ಚಿಕಿತ್ಸೆ ನೀಡಲಾಗಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ ಎಂಬ ಮಗು ಎಂದು ಗುರುತಿಸಲಾಗಿದೆ. ಉಸಿರಾಟ ತೊಂದರೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಗುವನ್ನು ಕಳೆದ ನಾಲ್ಕೈದು ದಿನಗಳ ಹಿಂದೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕೋದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ವಾಪಸ್ ವಾಹನದಲ್ಲಿ ಬರುವಾಗ ಮಗುವಿಗೆ ಪ್ರಜ್ಞೆ ತಪ್ಪಿದೆ ಎನ್ನಲಾಗಿದೆ. ಪ್ರಜ್ಞೆ ತಪ್ಪಿದ ಮಗು ಮೃತಪಟ್ಟಿದೆ ಎಂದು ಭಾವಿಸಿ ಪೋಷಕರು ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದಾರೆ. ಅದರಂತೆ ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಅಂತ ಬಂದಿದ್ದು, ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗು ಕೆಮ್ಮಿದೆ. ಈ ವೇಳೆ ಮಗು ಬದುಕಿದೆ ಎಂದು…
ಮಲಯಾಳಂನಲ್ಲಿ ಇತ್ತೀಚೆಗೆ ತೆರೆಕಂಡ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರ ಭಾರೀ ಜನಮೆಚ್ಚುಗೆ ಪಡೆಯುತ್ತಿದ್ದಂತೆ ಅದಕ್ಕೆ ಕಾಫಿರೈಟ್ ಕಂಟಕ ಎದುರಾಗಿದೆ. ಈ ಚಿತ್ರದಲ್ಲಿ ತಾವು ಸಂಗೀತ ಸಂಯೋಜನೆ ಮಾಡಿದ್ದ ‘ಕಣ್ಮಣಿ’ ಹಾಡನ್ನು ಬಳಸಲಾಗಿದೆ ಎಂದು ಸಂಗೀತ ಮಾಂತ್ರಿಕ ಇಳಯರಾಜ ಕಾನೂನು ಸಮರ ಸಾರಿದ್ದಾರೆ. ತಮ್ಮ ಹಾಡು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಬಳಕೆ ಆಗಿದೆ ಎಂದು ಚಿತ್ರದ ನಿರ್ಮಾಪಕರಿಗೆ ನೋಟಿಸ್ ನೀಡಿದ್ದಾರೆ. ಕಮಲ್ ಹಾಸನ್ ನಟನೆಯ ‘ಗುಣ’ ಸಿನಿಮಾ ರಿಲೀಸ್ ಆಗಿದ್ದು 1991ರಲ್ಲಿ. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಸಿನಿಮಾದ ‘ಕಣ್ಮಣಿ ಅನ್ಬೊಡು…’ ಹಾಡು ಗಮನ ಸೆಳೆದಿತ್ತು. ಈ ಹಾಡು ‘ಮಂಜುಮ್ಮೇಲ್ ಬಾಯ್ಸ್’ನಲ್ಲಿ ಬಳಕೆ ಆಗಿದೆ. ಆದರೆ, ಇದನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ ಎಂದು ಇಳಯರಾಜ ಆರೋಪಿಸಿದ್ದಾರೆ. ‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಣ ಮಾಡಿದ್ದ ಸೌಬಿನ್ ಶಾಹಿರ್ ಅವರಿಗೆ ಇಳಯರಾಜ ಕಡೆಯಿಂದ ನೋಟಿಸ್ ಹೋಗಿದೆ. ಹಾಡನ್ನು ಅಕ್ರಮವಾಗಿ ಬಳಕೆ ಮಾಡಲಾಗಿದ್ದು, ಇಳಯರಾಜ ಅವರು ಈ ಹಾಡಿನ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದು…
ಮಹಿಳೆಯೊಬ್ಬಳು 16 ವರ್ಷದ ಹುಡುಗನ ಮೇಲೆ ಪ್ರೀತಿಯಾಗಿದ್ದು, ಹದಿಹರೆಯದವರನ್ನು ತನ್ನೊಂದಿಗೆ ವಾಸಿಸುವಂತೆ ಪೀಡಿಸಿದ್ದಾರೆ. ತನ್ನ ಬೇಡಿಕೆಯನ್ನು ಈಡೇರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. 26ರ ಯುವತಿ ತಾನು ಆತನೊಂದಿಗೆ ಇದ್ದು ಮದುವೆಯಾಗಲು ಬಯಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯುವತಿಯು ಸಾಮಾಜಿಕ ಮಾಧ್ಯಮದ ಮೂಲಕ ಹುಡುಗನೊಂದಿಗೆ ಸಂಪರ್ಕ ಮಾಡಿದ್ದಳು. ಕಡೆಗೆ ಸೀದಾ ಹುಡುಗನ ಮನೆಗೆ ಬಂದು ಅಲ್ಲಿಯೇ ಇರುವುದಾಗಿ ಹಟ ಹಿಡಿದಿದ್ದಾಳೆ ಎನ್ನಲಾಗಿದೆ. ‘ಮಹಿಳೆ ಕಳೆದ ಕೆಲವು ದಿನಗಳಿಂದ ನಮ್ಮ ಮನೆಯಲ್ಲಿಯೇ ವಾಸವಿದ್ದು, ಆಕೆಯನ್ನು ಮನೆಯಿಂದ ಹೊರ ಹೋಗುವಂತೆ ಕೇಳಿದಾಗ ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ’ ಎಂದು ಬಾಲಕನ ಕುಟುಂಬದವರು ದೂರಿದ್ದಾರೆ. ಪೊಲೀಸರು ಸಹ ‘ಸಮಸ್ಯೆಯನ್ನು ಪರಿಹರಿಸಲು ವಿಫಲವಾದಾಗ’ ಬಾಲಕನ ತಂದೆ ಸಹಾಯಕ್ಕಾಗಿ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನ್ನು ಸಂಪರ್ಕಿಸಿದ್ದಾರೆ ಎಂದು ವರದಿ ತಿಳಿಸಿದೆ. ನನ್ನ ಮಗ ಓದಿಲ್ಲ, ಎಲ್ಲಿಯೂ ಕೆಲಸ ಮಾಡುತ್ತಿಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದಾನೆ. ಈಗ ಆಕೆ ನಮ್ಮ…
ಜಿಲ್ಲೆಯ ಬರ ನಿರ್ವಹಣೆ, ಪೂರ್ವ ಮುಂಗಾರು ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ರಾಜ್ಯದಲ್ಲಿನ ಬರಪರಿಸ್ಥಿತಿ, ಪೂರ್ವ–ಮುಂಗಾರು ಮತ್ತು ಮುಂಗಾರು ಋತುಮಾನ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಸ್ವಾನ್ ಮೂಲಕ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾಗವಹಿಸಿ ಜಿಲ್ಲೆಯ ಬರಪರಿಸ್ಥಿತಿ, ಮುಂಗಾರು ಋತುಮಾನ ಪರಿಸ್ಥಿತಿ ಹಾಗೂ ಮಳೆಯಿಂದ ಉಂಟಾದ ಹಾನಿ ಬಗ್ಗೆ ಮಾಹಿತಿ ನೀಡಿದರು. ರಾಜ್ಯದಲ್ಲಿಯೇ ಅತಿ ಹೆಚ್ಚು 20 ಮೇವಿನ ಬ್ಯಾಂಕ್ ಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದು, ಬರ ಸಮರ್ಪಕ ನಿರ್ವಹಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರಲ್ಲದೆ, ಜಿಲ್ಲೆಯಲ್ಲಿ ಮೇ, 2024ರ ಮಾಹೆಯಲ್ಲಿ , ಮೇ 21 ದಿನಾಂಕ ವರೆಗೂ 94 ಮಿ.ಮೀ. ವಾಡಿಕೆ ರೀತ್ಯಾ ಮಳೆಯಾಗಬೇಕಿದ್ದು, 150.9 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ, ಜಿಲ್ಲೆಯಲ್ಲಿ ಸಾಕಷ್ಟು ಬೀಜ, ರಸಗೊಬ್ಬರ, ಕೀಟನಾಶಕಗಳ ಸಂಗ್ರಹ…
ಕೊರಟಗೆರೆ: ಯೋಧನೋರ್ವ ತನ್ನ ಮನೆಗೆ ತೆರಳಲು ದಾರಿ ಕೇಳಿದ್ದಕ್ಕೆ ಸಿಟ್ಟಿಗೆದ್ದ 5 ಜನ ಪುಡಿರೌಡಿಗಳ ತಂಡವೊಂದು ಬಿಯರ್ ಬಾಟಲಿನಿಂದ ಯೋಧನಿಗೆ ಹೊಡೆದು ಕೊಲೆಗೆ ಯತ್ನಿಸಿರುವ ಘಟನೆ ಮೇ 21ರ ಮಂಗಳವಾರ ತಡರಾತ್ರಿ ಬೈರೇನಹಳ್ಳಿಯ ಎನ್ ಟಿ ಆರ್ ಕಂಪರ್ಟ್ ಮತ್ತು ರೆಸ್ಟೋರೆಂಟ್ ನಲ್ಲಿ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾ.ಪಂ. ವ್ಯಾಪ್ತಿಯ ಬೈರೇನಹಳ್ಳಿಯ ಎನ್ ಟಿಆರ್ ಕಂಪರ್ಟ್ ಮತ್ತು ಬಾರ್ ರೆಸ್ಟೋರೆಂಟ್ ನಲ್ಲಿ ಘಟನೆ ನಡೆದಿದೆ. ರಾಯವಾರದ ಯೋಧ ಗೋವಿಂದರಾಜು(30) ತಲೆ ಮತ್ತು ಕೈಕಾಲುಗಳಿಗೆ ತೀವ್ರ ತರದ ಗಾಯಗಳಾಗಿ ಕೊರಟಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಜಮ್ಮು ಕಾಶ್ಮಿರದ ಭಾರತೀಯ ಭೂ ಸೇನೆ ಸಿಪಾಯಿಯಾಗಿ ಜಮ್ಮುಕಾಶ್ಮಿರದ ರಜೌರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಯವಾರದ ಯೋಧ ಗೋವಿಂದರಾಜು ರಜೆಯ ಪ್ರಯುಕ್ತ ತನ್ನ ಸ್ವಗ್ರಾಮಕ್ಕೆ ಆಗಮಿಸಿದ್ದಾನೆ. ಮದ್ಯಪಾನ ಮಾಡುವ ಹವ್ಯಾಸ ಇರುವ ಯೋಧ ಬೈರೇನಹಳ್ಳಿ ತೆರಳಿ ಮದ್ಯಪಾನ ಮಾಡಿ ಮನೆಗೆ ಹಿಂದಿರುಗುವ ವೇಳೆ ಯುವಕರ ಗುಂಪು ಹಲ್ಲೆ ನಡೆಸಿದೆ. ಅಣ್ಣ ದಾರಿ ಬಿಡಿ…
ಬಂಗಾಳಕೊಲ್ಲಿಯಲ್ಲಿ ತೀವ್ರವಾದ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸಲಹೆಯನ್ನು ನೀಡಿದೆ. ಒಡಿಶಾ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗದ ಕರಾವಳಿಯುದ್ದಕ್ಕೂ, ಭಾರೀ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ. ಒಡಿಶಾ ಅಲ್ಲದೆ, ಚಂಡಮಾರುತವು ಮೇ 23 ಮತ್ತು ಮೇ 27 ರ ನಡುವೆ ಮಹಾರಾಷ್ಟ್ರ ಮತ್ತು ಗುಜರಾತ್ನ ಮೇಲೂ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಮೇ 28ರ ಸುಮಾರಿಗೆ ಗುಜರಾತ್ ಮತ್ತು ಮುಂಬೈನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಚಿಕ್ಕೋಡಿ: ಮದುವೆಗೆ ವಿಳಂಬ ಆಗಿದ್ದರಿಂದ ಮನನೊಂದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಶಾಂತಿನಾಥ ಸುರೇಶ ಕೇಸ್ತಿ(27) ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ಹುಕ್ಕೇರಿ ಪಟ್ಟಣದಲ್ಲಿ ಸ್ವಂತ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಶಾಂತಿನಾಥ ಸುರೇಶ್ ಕೇಸ್ತಿ, ಸಾಲದ ಸುಳಿಗೆ ಸಿಲುಕಿದ್ದ. ಜತೆಗೆ ಮದುವೆಗೆ ಹೆಣ್ಣು ಸಿಗದ ಕಾರಣಕ್ಕೆ ಸುರೇಶ್ ಮನನೊಂದಿದ್ದ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಗ್ಯಾರೇಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296