Author: admin

ಪಾವಗಡ: “ಹೆಣ್ಣು ಮಕ್ಕಳಿಗೆ ಕಿಡಿಗೇಡಿಗಳು ತೊಂದರೆ ಕೊಟ್ಟರೆ ಅಥವಾ ಅಪಾಯದಲ್ಲಿದ್ದರೆ ಕೂಡಲೇ ನಿರ್ಭೀತಿಯಿಂದ ಸಹಾಯವಾಣಿ 112ಕ್ಕೆ ಕರೆ ಮಾಡಿ” ಎಂದು ಪಾವಗಡ ಪೊಲೀಸ್ ಠಾಣೆಯ ಪಿಎಸ್ಐ ಮನೋಹರ್ ಬಾಬು ಅವರು ತಿಳಿಸಿದ್ದಾರೆ, ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕಗಳು ಮತ್ತು ಪಾವಗಡ ಪೊಲೀಸ್ ಠಾಣೆಯಿಂದ ಆಯೋಜಿಸಲಾಗಿದ್ದ ರಸ್ತೆ ಸಂಚಾರ ಸುರಕ್ಷಿತ ನಿಯಮಗಳ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ವಿದ್ಯಾರ್ಥಿಗಳು ತಮಗೆ ಬೇರೆ ಯಾರಿಂದಾದರೂ ತೊಂದರೆ ಉಂಟಾದ ಕೂಡಲೇ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ, ಹೊಯ್ಸಳ ವಾಹನ ತಾವು ಇರುವ ಸ್ಥಳಕ್ಕೆ ಬಂದು ಪರಿಶೀಲಿಸಿ ತಮ್ಮ ಸಮಸ್ಯೆಯನ್ನು ಬಗೆಹರಿಸುತ್ತದೆ. ವಿದ್ಯಾರ್ಥಿಗಳು ಚಾಲನಾ ಪರವಾನಗಿ ಇಲ್ಲದೆ ವಾಹನವನ್ನು ಚಲಾಯಿಸಬಾರದು. ಎಲ್ಲಾ ವಿದ್ಯಾರ್ಥಿಗಳು ಸಂಚಾರಿ ನಿಯಮಗಳ ಕುರಿತು ಜ್ಞಾನವನ್ನು ಪಡೆದುಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಮಾನವೀಯತಾ ಗುಣಗಳನ್ನು ಬೆಳೆಸಿಕೊಳ್ಳಬೇಕು. ಎಲ್ಲಿಯಾದರೂ ಅಪಘಾತವಾದ ಕೂಡಲೇ ಅವರ ನೆರವಿಗೆ ಧಾವಿಸಬೇಕು. ಕೂಡಲೇ ಅವರನ್ನು ಆಸ್ಪತ್ರೆಗೆ…

Read More

ದಕ್ಷಿಣ ಬ್ರೆಜಿಲ್ ನಲ್ಲಿ ಹವಾಮಾನ ಪೀಡಿತ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಕಳೆದ ಕೆಲವು ಗಂಟೆಗಳಲ್ಲಿ ಇನ್ನೂ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 161 ಕ್ಕೆ ಏರಿದೆ ಎಂದು ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಏಪ್ರಿಲ್ 29 ರಿಂದ ದಾಖಲೆಯ ಮಳೆ ರಾಜ್ಯವನ್ನು ನಾಶಪಡಿಸಿದೆ. ಇದು 464 ನಗರಗಳಲ್ಲಿ ಮಾರಣಾಂತಿಕ ಪ್ರವಾಹ ಮತ್ತು ಭೂಕುಸಿತಕ್ಕೆ ಕಾರಣವಾಗಿದೆ ಮತ್ತು ರಾಜಧಾನಿ ಪೋರ್ಟೊ ಅಲೆಗ್ರೆ ಸೇರಿದಂತೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 2.2 ದಶಲಕ್ಷಕ್ಕೂ ಹೆಚ್ಚು ನಿವಾಸಿಗಳ ಮೇಲೆ ಪರಿಣಾಮ ಬೀರಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಪೋರ್ಟೊ ಅಲೆಗ್ರೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅನಿರ್ದಿಷ್ಟವಾಗಿ ಮುಚ್ಚಲಾಯಿತು. ಆದ್ದರಿಂದ ಫೆಡರಲ್ ಸರ್ಕಾರವು ಕ್ಯಾನೋವಾಸ್ ವಾಯುಪಡೆಯ ವಾಯುನೆಲೆಯನ್ನು ವಾಣಿಜ್ಯ ವಿಮಾನಗಳಿಗೆ ಬಳಸಲು ಅಧಿಕಾರ ನೀಡಿತು. 85 ಜನರು ಕಾಣೆಯಾಗಿರುವುದರಿಂದ ಮತ್ತು 806 ಜನರು ಗಾಯಗೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.…

Read More

ಪೊಲೀಸ್‌ ಅಧಿಕಾರಿಯೇ ಕಟ್ಟಿಕೊಂಡ ಹೆಂಡತಿಗೆ ಅನ್ಯಾಯ ಮಾಡಿದ ಘಟನೆ ತೆಲಂಗಾಣದಲ್ಲಿ ವರದಿಯಾಗಿದ್ದು, ನ್ಯಾಯ ಒದಗಿಸುವಂತೆ ಪತ್ನಿ ಠಾಣೆ ಎದುರೇ ಧರಣಿ ಮಾಡಿದ್ದಾಳೆ. ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಕೊಮುರವಳ್ಳಿ ಪೊಲೀಸ್ ಠಾಣೆಯ ಎದುರು ಸಬ್​ ಇನ್ಸ್​ ಪೆಕ್ಟರ್ ಪತ್ನಿ ಧರಣಿ ಕುಳಿತು ಪತಿಯ ವಿರುದ್ಧ ಪ್ರತಿಭಟಿಸಿದ್ದಾರೆ. ಕರೀಂ ನಗರ ನಿವಾಸಿಯಾಗಿರುವ ಎಸ್‌ಐ ನಾಗರಾಜು ವಿರುದ್ಧ ಆತನ ಪತ್ನಿ ಮಾನಸ ಠಾಣೆಗೆ ದೂರು ನೀಡಿದ್ದು, ನ್ಯಾಯ ಸಿಗುವವರೆಗೆ ಠಾಣೆ ಎದುರೇ ಧರಣಿ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೇ ಅಹೋರಾತ್ರಿ ಠಾಣೆ ಎದುರು ಧರಣಿ ನಡೆಸಿದ ಮಾನಸ ರಾಜ್ಯದ ಗಮನ ಸೆಳೆದಿದ್ದಾಳೆ. ಎರಡು ವರ್ಷಗಳಿಂದ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿಲ್ಲ ಎಂದು ಗಂಡನ ವಿರುದ್ಧ ಆರೋಪ ಮಾಡಿರುವ ಮಾನಸ, ನನ್ನಿಬ್ಬರು ಮಕ್ಕಳಿಂದಲೂ ನನ್ನನ್ನು ದೂರವಿಟ್ಟಿದ್ದಾರೆ ಎಂದಿದ್ದಾಳೆ. ಸಾಲದೆನ್ನುವಂತೆ ನಾಗರಾಜ್‌ ಬೇರೊಬ್ಬ ಮಹಿಳೆಯನ್ನೂ ಮದುವೆ ಆಗಿದ್ದಾರೆ ಎಂದು ಗಂಡನ ವಿರುದ್ಧ ಮಾನಸ ಆರೋಪ ಮಾಡಿದ್ದು, ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ನಿರ್ಲಕ್ಷಿಸಲಾಗುತ್ತಿದೆ ಎಂದು…

Read More

ಬೆಂಗಳೂರು ಗ್ರಾಮಾಂತರ: ಶಾರ್ಟ್‌ಸರ್ಕ್ಯೂಟ್‌ ನಿಂದಾಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಇ-ಪರಿಸರ ಕಾರ್ಖಾನೆಯಲ್ಲಿ ಎಲೆಕ್ಟ್ರಾನಿಕ್ ತ್ಯಾಜ್ಯಗಳ ಸಂಸ್ಕರಣಾ ಕೆಲಸ ನಡೆಯುತ್ತಿದ್ದಾಗಲೇ ಏಕಾಏಕಿ ಬೆಂಕಿ ಹೊತ್ತಿಕಂಡು ಧಗಧಗನೇ ಉರಿದಿದೆ. ಇದರ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ 4 ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಮೇಲೆ ಬಂದ ಆಮ್ ಆದ್ಮಿ ಪಕ್ಷ ಇದೀಗ ಸ್ವತಃ ಭ್ರಷ್ಟಾಚಾರ ಆರೋಪದ ಸುಳಿಯಲ್ಲಿ ಸಿಲುಕಿದೆ. ಮದ್ಯ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಜಾರ್ಜ್‌ಶೀಟ್ ‌ನಲ್ಲಿ ‘ಆಪ್‌’ಗೆ 2014 ರಿಂದ 2022ರವರೆಗೂ ವಿದೇಶದಿಂದ ಫಂಡಿಂಗ್ ಆಗಿತ್ತು ಎಂದು ತಿಳಿಸಿದೆ. ವಾಸ್ತವದಲ್ಲಿ ಭಾರತಲ್ಲಿರುವ ರಾಜಕೀಯ ಪಕ್ಷಗಳು ವಿದೇಶಗಳಿಂದ ದೇಣಿಗೆ ಪಡೆಯುವಂತಿಲ್ಲ. ಆದರೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ, ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘಿಸಿ ಎಎಪಿ ವಿದೇಶಿ ದೇಣಿಗೆ ಪಡೆದಿದೆ. ಆಮ್ ಆದ್ಮಿ ಪಕ್ಷಕ್ಕೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಸೌದಿ ಅರೇಬಿಯಾ, ಯುಎಇ, ಕುವೈತ್, ಓಮನ್ ಸೇರಿ ಹಲವು ದೇಶಗಳಿಂದ ಒಟ್ಟು 7.8 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಆಪ್‌ ನ ಐಡಿಬಿಐ ಬ್ಯಾಂಕ್ ಖಾತೆಗೆ ಈ ವಿದೇಶಿ ಹಣ ಜಮೆಯಾಗಿದೆ. ಒಟ್ಟು 155 ಮಂದಿ 55 ಪಾಸ್‌ಪೋರ್ಟ್ ನಂಬರ್ ಬಳಸಿ 404 ಬಾರಿ 1.02 ಕೋಟಿ ರೂ. ದೇಣಿಗೆ ನೀಡಿದ್ದಾರೆ. 71 ದಾನಿಗಳು 21 ಮೊಬೈಲ್ ನಂಬರ್ ಬಳಸಿ 256…

Read More

ವಾಷಿಂಗ್ಟನ್‌: ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಆಲ್ಫರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು. ಎಲ್ಲಾ ಐವರು ವಿದ್ಯಾರ್ಥಿಗಳೂ 18 ವರ್ಷ ವಯಸ್ಸಿನವರಾಗಿದ್ದಾರೆ. ಮೃತ ವಿದ್ಯಾರ್ಥಿಗಳು ಕಾರನ್ನು ವೇಗವಾಗಿ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ವಾಹನವು ಪಲ್ಟಿಯಾಗಿ ಬಿದ್ದಿದೆ. ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮೈಸೂರು: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಯೊಳಗೆ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಕುಮಾರಸ್ವಾಮಿ (45), ಅವರ ಪತ್ನಿ ಮಂಜುಳಾ (39) ಹಾಗೂ ಇವರ ಮಕ್ಕಳಾದ ಅರ್ಚನಾ (19) ಮತ್ತು ಸ್ವಾತಿ (17) ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಮೃತ ಕುಮಾರಸ್ವಾಮಿ ದಂಪತಿ ಮನೆಯಲ್ಲಿ ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಈ ಕಾರಣಕ್ಕಾಗಿ ಮೂರು ಸಿಲಿಂಡರ್ ಇಟ್ಟುಕೊಂಡಿದ್ದರು. ಅದರಲ್ಲಿ ಒಂದು ಸಿಲಿಂಡರ್ ಸೋರಿಕೆಯಾಗಿ ಈ ಸಾವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದರು. ನ್ಯಾಯಾಂಗ ಬಂಧನದ ಅವಧಿ ಮುಗಿದಿರುವ ಹಿನ್ನೆಲೆ ಸಿಸೋಡಿಯಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ಹಿಂದೆ ಸಿಸೋಡಿಯ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ ಮಾಡಿದ್ದ ಹಿನ್ನೆಲೆ ಕೋರ್ಟ್ ಇಂದು ನ್ಯಾಯಾಂಗ ಬಂಧನ ವಿಸ್ತರಿಸಿದೆ. 2023ರ ಫೆಬ್ರವರಿ 26 ರಿಂದ ಸಿಬಿಐ ಬಂಧಿಸಿದ ನಂತರ ಸಿಸೋಡಿಯಾ ಬಂಧನದಲ್ಲಿದ್ದಾರೆ. ಬಳಿಕ ಇ.ಡಿ ಅವರನ್ನು ಬಂಧಿಸಿತ್ತು. ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರನ್ನು ಸಹ ಬಂಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More

ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ಭಾರೀ ಗಾಳಿ ಬೀಸಿ ದೋಣಿ ಮುಗುಚಿ ಭೀಕರ ಅವಘಡ ಸಂಭವಿಸಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ ಮುಗುಚಿ 6 ಮಂದಿ ನೀರು ಪಾಲಾಗಿದ್ದಾರೆ. ನೀರುಪಾಲಾಗಿರುವವರ ಹುಡುಕಾಟಕ್ಕೆ ರಾಷ್ತ್ರೀಯ ವಿಪತ್ತು ನಿರ್ವಹಣಾ ದಳ (NDRF) ತಂಡದ ಸಿಬ್ಬಂದಿ ಆಗಮಿಸಿದ್ದಾರೆ. ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊಪ್ಪಳ: ಕೊಪ್ಪಳದಲ್ಲಿ ಅಂಗಡಿಯ ಕೆಲಸಕ್ಕೆ ಬರುತ್ತಿದ್ದ ಯುವತಿಯ ಮೇಲೆ ಅತ್ಯಾಚಾರವೆಸಗಿ ವ್ಯಕ್ತಿಯೊಬ್ಬ ಬೆದರಿಸಿರುವ ಘಟನೆ ನಡೆದಿದೆ. ವೀರೇಶ ನಾಯಕ ಅತ್ಯಾಚಾರವೆಸಗಿದ ಆರೋಪಿಯಾಗಿದ್ದಾನೆ. ವೀರೇಶ್​ ಎಂಬಾತ ಎಲೆಕ್ಟ್ರಿಕ್ ಅಂಗಡಿ ಇಟ್ಟಿದ್ದು, ಇಲ್ಲಿ ಕೆಲಸಕ್ಕೆ ಬರುತ್ತಿದ್ದ ಯುವತಿ ಮೇಲೆ ಕೆಲವು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇತ್ತೀಚಿಗೆ ಅಂಗಡಿಯ ಕೆಲಸಕ್ಕೆ ಬರುವುದಿಲ್ಲ ಎಂದು ಯುವತಿ ಹೋಗಿದ್ದಕ್ಕೆ ಆಕೆಗೆ ಹೆದರಿಸಿ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆಸಿಕೊಂಡು, ವೀಡಿಯೋ ಮಾಡಿಕೊಂಡಿದ್ದಾನೆ. ಸದ್ಯ, ಪ್ರಕರಣ ದಾಖಲಿಸಿಕೊಂಡಿರುವ ಕುಷ್ಟಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More