Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಅಣ್ಣನಿಂದಲೇ ಸಹೋದರಿ ಮೂರು ತಿಂಗಳ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಜರುಗಿದೆ. ಅಣ್ಣ-ತಂಗಿ ಇಬ್ಬರು ಅವಳಿ ಜವಳಿಯಾಗಿದ್ದಾರೆ. ಆದ್ರೆ, ಮನೆಯಲ್ಲಿ ಪೋಷಕರು ಇಲ್ಲದ ವೇಳೆ ಅಶ್ಲೀಲ ವಿಡಿಯೋಗಳನ್ನು ವೀಕ್ಷಣ ಮಾಡಿದ್ದು, ಬಳಿಕ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ. ಮನೆಯಲ್ಲಿ ಪೋಷಕರು ಇಲ್ಲದೇ ವೇಳೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದೀಗ ಬಾಲಕಿ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಿದ್ದರಿಂದ ಒಂದು ದಿನ ಬಾಲಕಿಗೆ ಹೊಟ್ಟೆ ನೋವು ಬಂದಿದೆ. ಕೂಡಲೇ ಬಾಲಕಿ ಚಿಕಿತ್ಸೆ ಪಡೆಯಲು ಖಾಸಗಿ ಆಸ್ಪತ್ರೆಗೆ ಹೋಗಿದ್ದಾಳೆ. ಆ ವೇಳೆ ವೈದ್ಯರು ಪರೀಕ್ಷಿಸಿದಾಗ ಬಾಲಕಿ ಮೂರು ತಿಂಗಳು ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಕೂಡಲೇ ವೈದ್ಯರು, ಬಾಗಲಗುಂಟೆ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿಕ್ಕಮಗಳೂರು: ಅಪಘಾತ ಅಥವಾ ತುರ್ತು ಸಂದರ್ಭದಲ್ಲಿರುವ ವ್ಯಕ್ತಿಗಳಿಗೆ ಮೊದಲಿಗೆ ಪ್ರಥಮ ಚಿಕಿತ್ಸೆಯನ್ನು ಒದಗಿಸುವ ಮೂಲಕ ಪ್ರಾಣಾಪಾಯದಿಂದ ಕಾಪಾಡಲು ಮುಂದಾಗಬೇಕು ಎಂದು ರೆಡ್ ಕ್ರಾಸ್ ಸಂಸ್ಥೆ ಆರೋಗ್ಯ ಸಮಿತಿ ಅಧ್ಯಕ್ಷ ಡಾ.ಕೆ. ಸುಂದರಗೌಡ ಹೇಳಿದರು. ನಗರ ಹೊರವಲಯದ ಜಿಲ್ಲಾ ಕಾರಾಗೃಹದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯ ಕ್ರಮವನ್ನು ಪ್ರತ್ಯಕ್ಷಿಕೆ ಮೂಲಕ ಪ್ರದರ್ಶಿಸಿ ಅವರು ಮಾಹಿತಿ ನೀಡಿದರು. ಆಕಸ್ಮಿಕವಾಗಿ ಸಂಭವಿಸುವ ಅಪಘಾತಕ್ಕೆ ವ್ಯಕ್ತಿಗಳು ಒಳಗೊಂಡಲ್ಲಿ ಪ್ರಥಮವಾಗಿ ರಕ್ತ ಹೆಚ್ಚು ಸೋ ರಿಕೆ ಜಾಗದಲ್ಲಿ ಬಟ್ಟೆ ಅಥವಾ ಇನ್ನಿತರೆ ವಸ್ತ್ರಗಳಿಂದ ಬಿಗಿಯಾಗಿ ಕಟ್ಟುವ ಮೂಲಕ ಸೋರಿಕೆ ಕಡಿಮೆಗೊಳಿಸಬೇಕು. ತದನಂತರ ಆಸ್ಪತ್ರೆಗೆ ಕರೆದೊಯ್ದುರೆ ವ್ಯಕ್ತಿಯ ಪ್ರಾಣವನ್ನು ಕಾಪಾಡಲು ಸಾಧ್ಯ ಎಂದು ತಿಳಿಸಿದರು. ಓರ್ವ ವ್ಯಕ್ತಿ ಆಹಾರ, ನೀರಿಲ್ಲದೇ ಹಲವಾರು ದಿನಗಳು ಬದುಕಬಲ್ಲ. ಅಪಘಾತ ವೇಳೆಯಲ್ಲಿ ಹೆಚ್ಚು ರಕ್ತ ಸೋರಿಕೆಗೊಂಡಲ್ಲಿ ಪ್ರಾಣ ಉಳಿಸಲು ಅಸಾಧ್ಯ. ಮಾನವ ಶರೀರದಲ್ಲಿ ಕೇವಲ ೫…
ಕಾರು ಅಪಘಾತಗೊಂಡು ತೀವ್ರ ಸ್ವರೂಪದ ಗಾಯಗಳಾಗಿದ್ದರೂ ಹುಡುಗಿಯರು ರಸ್ತೆಯಿಂದ ಏಳದೆ ಅಲ್ಲೇ ಕೂತು ಸೆಲ್ಫಿಗೆ ಪೋಸ್ ಕೊಟ್ಟಿರುವ ವಿಚಿತ್ರ ಘಟನೆ ಮೆಕ್ಸಿಕೋದಲ್ಲಿ ವರದಿಯಾಗಿದೆ. ಮೆಕ್ಸಿಕನ್ ನಗರದ ಕ್ಯುರ್ನಾವಾಕಾದ ರಸ್ತೆಯಲ್ಲಿ ಐವರು ಯುವತಿಯರು ಕಾರಿನಲ್ಲಿ ಹೋಗುತ್ತಿರಬೇಕಾದರೆ ಲೋಮಾಸ್ ಡೆಲ್ ಮಿರಾಡೋರ್ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿತ್ತು. ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಇಬ್ಬರು ಯುವತಿಯರು ಕಾರಿನಿಂದ ಹೊರಬಿದ್ದು ತೀವ್ರತರದ ಗಾಯಗಳಾಗಿದೆ. ಮಾರ್ಗದಲ್ಲೇ ಇಬ್ಬರು ಯುವತಿಯರು ಬಿದ್ದಿದ್ದು, ಇತರೆ ಮೂವರು ಕಾರಿನಲ್ಲಿ ಸಿಲುಕಿಕೊಂಡಿದ್ದರು. ಆದರೆ ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವತಿಯರು ಗಾಯಗೊಂಡಿದ್ದರೂ ಅಪಘಾತವಾದ ಕಾರಿನ ಮುಂದೆ ಕುಳಿತು ಸೆಲ್ಫಿಗಾಗಿ ಪೋಸ್ ಕೊಟ್ಟಿರುವುದು ಟೀಕೆಗೆ ಗುರಿಯಾಗಿದೆ. ಆಂಬ್ಯುಲೆನ್ಸ್ ಬರುವವರೆಗೆ ಇಬ್ಬರು ಸೆಲ್ಫಿಗೆ ಪೋಸ್ ನೀಡುತ್ತಲೇ ಅಲ್ಲೇ ಕುಳಿತಿದ್ದಾರೆ. ಇದಕ್ಕೆ ಕಾರಣ ಕಾರಿನಲ್ಲಿದ್ದವರು ಮದ್ಯದ ಅಮಲಿನಲ್ಲಿದ್ದರು ಎಂದು ಶಂಕಿಸಲಾಗಿದೆ. ಸದ್ಯ ಮೆಕ್ಸಿಕನ್ ಅಧಿಕಾರಿಗಳು ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಯಲ್ಲಿ ಪಾಲ್ಗೊಂಡವರ ವಿವರ ಪೊಲೀಸರ ಬಳಿಯಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರಿನಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು ಎಂದು ಸಿಸಿಬಿಯವರು ದಾಳಿ ಮಾಡಿದ್ದಾರೆ. ಯಾರ್ ಯಾರು ಬಂದಿದ್ದರು ಎಂದು ಪೊಲೀಸರು ಮಾಹಿತಿ ತೆಗೆದುಕೊಂಡಿದ್ದಾರೆ. ದಾಳಿ ವೇಳೆ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಪತ್ತೆ ಆಗಿದೆ. ಕಾನೂನು ಪ್ರಕಾರ ಕ್ರಮ ಆಗಲಿದೆ. ಡ್ರಗ್ಸ್ ಫ್ರೀ ರಾಜ್ಯ ಮಾಡಬೇಕು ಎಂದು ಇದ್ದೇವೆ. ಸಾವಿರಾರು ಕೋಟಿ ಡ್ರಗ್ಸ್ ದಂಧೆ ಹಿಡಿದಿದ್ದೇವೆ. ಡ್ರಗ್ಸ್ ಪೂರೈಕೆ, ಸಾಗಣೆ ಹತ್ತಿಕ್ಕುವ ಕೆಲಸ ಆಗುತ್ತಿದೆ. ಗಾಂಜಾ ಎಲ್ಲಿಂದ ಬರುತ್ತೆ ಎಂದು ಮಾಹಿತಿ ಮೇಲೆ ಹಿಡಿಯುತ್ತೇವೆ. ಪೆಡ್ಲರ್ಸ್ ಯಾರಿದ್ದಾರೆ ಅವರನ್ನು ಹಿಡಿಯವುದು ಬಹಳ ಮುಖ್ಯ. ಸ್ಟೂಡೆಂಟ್ಸ್ ಎಂದು ಹೇಳಿಕೊಂಡು ಇಲ್ಲಿ ಬಂದು ಕೃತ್ಯ ಮಾಡುತ್ತಾರೆ. ಅವರ ಮೇಲೆ ನಿಗಾ ಇಟ್ಟಿದ್ದೇವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಬುದ್ಧ ಪೂರ್ಣಿಮೆ ದಿನದ ಹಿನ್ನೆಲೆ ಎರಡು ನಗರಗಳ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಮಾಂಸದಂಗಡಿಗಳನ್ನು ಮೇ 23ರಂದು ಮುಚ್ಚುವಂತೆ ಆದೇಶಿಸಲಾಗಿದೆ. ಕುರಿ, ಮೇಕೆ, ಕೋಳಿ, ಹಂದಿ ಮಾಂಸ ಮತ್ತು ಮೀನು ವ್ಯಾಪಾರವನ್ನು ಮೈಸೂರು ನಗರದಲ್ಲಿ ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಜೊತೆಗೆ ಕಸಾಯಿಖಾನೆಯಲ್ಲಿ ಪ್ರಾಣಿವಧೆಗೂ ನಿಷೇಧ ವಿಧಿಸಿ ಬಿಬಿಎಂಪಿಯ ಪಶುಪಾಲನೆ ಇಲಾಖೆಯ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ. ಮೇ 23ರಂದು ಬುದ್ಧ ಪೂರ್ಣಿಮೆ ದಿನ ಬೆಂಗಳೂರು ಹಾಗೂ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧಿಸಿ ಆದೇಶವಿತ್ತಿದೆ. ಈ ದಿನ ಯಾವುದೇ ಕಾರಣಕ್ಕೂ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಮೈಸೂರು ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆಯು ಆದೇಶವಿತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಂಗಳೂರು: “ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ” ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ” ಎಂದರು. “ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರಂಟ್ ಜಾರಿಯಾದ ನಂತರ ಪಾಸ್ ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ” ಎಂದು ಹೇಳಿದರು. ಉಪಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೋ ಕುರಿತು ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತನಾಡುತ್ತಿದ್ದಾರೆ. ಕಾನೂನಿಮ ಚೌಕಟ್ಟಿನಲ್ಲಿ ಎಸ್ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು…
ಪಾವಗಡ: ಪಾವಗಡ ತಾಲೂಕಿನ ಹೊಸಕೋಟೆ ಹೋಬಳಿಯ ಇಂದ್ರಬೆಟ್ಟ ಗ್ರಾಮದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 133ನೇ ಜಯಂತೋತ್ಸವ ಮತ್ತು ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಗ್ರಾಮದ ಮಹಿಳೆಯರು ಪೂರ್ಣ ಕುಂಭದೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಮೂಲಕ ವೇದಿಕೆಯನ್ನು ಸೇರಿದ್ದಾರೆ. ನೂತನ ಸಮುದಾಯ ಭವನವನ್ನು ಬೆಂಗಳೂರು ಮಹಾರಾಣಿ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಡಾ. ಗೋವಿಂದಪ್ಪ ಪಾವಗಡ ಅವರು ಉದ್ಘಾಟಿಸಿದ್ದಾರೆ. ಕಾರ್ಯಕ್ರಮದ ಪ್ರಧಾನ ಭಾಷಣವನ್ನು ಹೈಕೋರ್ಟ್ ವಕೀಲರು ಹಾಗೂ ಹೋರಾಟಗಾರರಾದ ಪ್ರೊಫೆಸರ್ ಹರಿರಾಮ್ ಅವರು ನೆರವೇರಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಸದಸ್ಯೆ ಪಾರ್ವತಮ್ಮ ರವಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯದರ್ಶಿಗಳಾದ ಐಎ ನಾರಾಯಣಪ್ಪ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರೇಮಜ್ಯೋತಿ, ಹಿರಿಯ ಹೋರಾಟಗಾರರಾದ ಡಾ. ಸುಬ್ಬರಾಜು, ಎಚ್.ಕೆಂಚರಾಯ, ಕುಮಾರ್ ಇಂದ್ರಬೆಟ್ಟ, ಗ್ರಾಮದ ಯುವಕರು ಸೇರಿದಂತೆ ಹಲವರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ…
ತಿಪಟೂರು: ಟಿವಿಎಸ್ ಮತ್ತು ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ದ್ವಿಚಕ್ರ ವಾಹನ ಟಿವಿಎಸ್ ನಲ್ಲಿ ಸಂಚಾರ ಮಾಡುತ್ತಿದ್ದ ಹೊನ್ನವಳ್ಳಿಯ ಗ್ರಾಮದ ಲೋಕೇಶ್(44) ಎಂಬುವರು ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ದುರ್ದೈವಿಯಾಗಿದ್ದಾರೆ. ಮೃತ ವ್ಯಕ್ತಿಯು ಹೊನವಳ್ಳಿ ಗ್ರಾಮದ ನೇಕಾರ ಕೆಲಸವನ್ನು ಮಾಡುತ್ತಿದ್ದರು ಎನ್ನಲಾಗಿದೆ. ಎರಡು ವಾಹನಗಳು ಮುಖಾಮುಖಿಯಾಗಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಲೋಕೇಶ್ ನನ್ನು, ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆ ತಿಪಟೂರಿಗೆ ದಾಖಲು ಮಾಡಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ತೆರಳುವಾಗ ಮಾರ್ಗ ಮಧ್ಯೆ ಲೋಕೇಶ್ ಸಾವನ್ನಪ್ಪಿದ್ದಾರೆ. ಓಮಿನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿಯು ಹೊನ್ನವಳ್ಳಿ ಬಾರ್ ಮಾಲಿಕ ಹನುಮಂತಪುರದ ಪ್ರೇಮಕುಮಾರ ಎಂದು ತಿಳಿದಿದೆ. ಈ ಪ್ರಕರಣವು ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತಿಪಟೂರು: “ತಿಪಟೂರು ಶಿಕ್ಷಕರು ಅಧಿಕಾರಕ್ಕೆ ಬಂದರೆ ಮಾತ್ರ ಶಿಕ್ಷಕರ ಅಭಿವೃದ್ಧಿ ಸಾಧ್ಯವಾಗುತ್ತದೆ. ಆದ್ದರಿಂದ ಈ ಬಾರಿ ನಡೆಯುವ ಆಗ್ನೇಯ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾನು ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು. ಇದೇ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ವೈಎ ನಾರಾಯಣಸ್ವಾಮಿ ವಿರುದ್ಧ ಹರಿಹಾಯ್ದವರು, ಅವರು ಮೂರು ಬಾರಿ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಗೆಲುವು ಸಾಧಿಸಿದ ನಾರಾಯಣಸ್ವಾಮಿ ಶಿಕ್ಷಕರ ನಂಬಿಕೆಗೆ ಅರ್ಹರಾದವರಲ್ಲ. ನಾರಾಯಣಸ್ವಾಮಿಗೆ ಶಿಕ್ಷಕರು ಮತ ಹಾಕಿ ಮೋಸ ಹೋಗಿದ್ದಾರೆ ಎಂದು ಲೋಕೇಶ್ ತಾಳಿಕಟ್ಟೆ ತಿಳಿಸಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊಲ್ಕತ್ತಾ: ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿದ ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ನಡೆಗೆ ಕೊಲ್ಕತ್ತಾ ಹೈಕೋರ್ಟ್ ತೀವ್ರ ಅಸಮಧಾನ ವ್ಯಕ್ತಪಡಿಸಿದೆ. ಮುಂದಿನ ಆದೇಶವರೆಗೂ ಟಿಎಂಸಿ ಸರ್ಕಾರದ ವಿರುದ್ಧ ಯಾವುದೇ ಅವಹೇಳನಕಾರಿ ಜಾಹೀರಾತು ಪ್ರಕಟಿಸದಂತೆ ಬಿಜೆಪಿಗೆ ಕೋರ್ಟ್ ನಿರ್ಬಂಧ ಹೇರಿದೆ. ಮತದಾನದ ಹಿಂದಿನ ದಿನ ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಅವಹೇನಕಾರಿ ಜಾಹೀರಾತು ಪ್ರಕಟಿಸಿತ್ತು. ಆದರೂ ಬಿಜೆಪಿ ವಿರುದ್ಧ ಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧ ಟಿಎಂಸಿ, ಹೈಕೋರ್ಟ್ ಮೊರೆ ಹೋಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಬ್ಯಸಾಚಿ ಭಟ್ಟಚಾರ್ಯ ನೇತೃತ್ವದ ಏಕಸದಸ್ಯ ಪೀಠವು ಟಿಎಂಸಿ ಸಲ್ಲಿಸಿದ ದೂರುಗಳನ್ನು ಪರಿಹರಿಸಲು ಆಯೋಗ ತೀವ್ರವಾಗಿ ವಿಫಲವಾಗಿದೆ ಎಂದು ದೂರಿತು. ಟಿಎಂಸಿಯ ದೂರುಗಳನ್ನು ಪರಿಹರಿಸಲು ಚುನಾವಣಾ ಆಯೋಗ ಸಂಪೂರ್ಣವಾಗಿ ವಿಫಲವಾಗಿದೆ. ಚುನಾವಣೆಗಳು ಮುಗಿದ ನಂತರದ ದೂರುಗಳ ಪರಿಹಾರ ಕೋರಿ ನ್ಯಾಯಲಯಕ್ಕೆ ಬರುತ್ತಿವೆ ಎಂದು ಆಶ್ವರ್ಯ ವ್ಯಕ್ತಪಡಿಸಿದರು. ಚುನಾವಣೆ ಮತ್ತು ಮತದಾನದ ಹಿಂದಿನ ದಿನ ಬಿಜೆಪಿಯ ಜಾಹೀರಾತುಗಳು ಮಾದರಿ…