Author: admin

ಕೊರಟಗೆರೆ: ತಾಲೂಕಿನ ಸಿ ಎನ್ ದುರ್ಗಾ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ತಾಯಿಯ ಜಲಧಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರೆವೇರಿತು. ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಿದ್ದು, ಭಕ್ತರ ಕಣ್ಣು ಮನ ಸೆಳೆಯುವಂತಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ ನಡೆಯಿತು. ಸಾಹಿತಿಗಳಾದ ಡಾ. ನರಸಿಂಹ ಮೂರ್ತಿ ಮಾತನಾಡಿ, “ಸುಮಾರು 250 ವರ್ಷಗಳ ಇತಿಹಾಸವುಳ್ಳ ದೇವಗಾನಿಕೆ ಶ್ರೀ ಬೇವಿನಮ್ಮ ತಾಯಿ ಏಳು ಜನ ಅಕ್ಕತಂಗಿಯರಲ್ಲಿ ತಾಯಿಯು ಒಬ್ಬಳು. ಈ ತಾಯಿಯ ಜಾತ್ರೆ-ಜಲಧಿ ವಿಶೇಷವಾಗಿ ಆಚರಣೆ ಮಾಡುತ್ತಾ ನಮ್ಮ ಪೂರ್ವಿಕರು ಬಂದಿದ್ದಾರೆ. ಹಾಗೆ ನಾವು ಕೂಡ ಈ ಆಚರಣೆಯನ್ನು ಮುಂದುವರಿಸುತ್ತಾ ಬಂದಿದ್ದೇವೆ. ಈ ದೇವಿಯ ಜಾತ್ರೆಯನ್ನು ಐದು ವರ್ಷಕ್ಕೊಮ್ಮೆ ಮಾಡುತ್ತಿದ್ದು, ಜಲದಿಯನ್ನು ವರ್ಷಕ್ಕೊಮ್ಮೆ ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ” ಎಂದರು. ಜಟ್ಟಿ ಅಗ್ರಹಾರ ಅಂದರೆ ಜಟ್ಟಿ ಮನೆತನದವರಿಗೆ ರಾಜರು ಮಹಾರಾಜರು ಉಡುಗೊರೆಯಾಗಿ ನೀಡಿದಂತಹ ಇತಿಹಾಸವುಳ್ಳ ಗ್ರಾಮವಾಗಿದ್ದು, ಇಲ್ಲಿ ನೆಲೆಸಿರುವ ಗ್ರಾಮ ಶಕ್ತಿ ಬೇವಿನಳಮ್ಮ ತಾಯಿಯು ಗ್ರಾಮಕ್ಕೆ…

Read More

ಘಜಿಯಾಬಾದ್: ತಮ್ಮ 14 ವರ್ಷದ ಸಹೋದರಿಯ ಮೇಲೆ 1 ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರವೆಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಇಬ್ಬರು ಸಹೋದರರನ್ನು ಬಂಧಿಸಲಾಗಿದೆ. ಇದೀಗ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ. ಇಬ್ಬರು ಸಹೋದರರ ವಿರುದ್ಧ ಅವರ ತಾಯಿ ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಅವರನ್ನು ಬಂಧಿಸಲಾಗಿದೆ ಎಂದು ಘಜಿಯಾಬಾದ್ ಪೊಲೀಸರು ತಿಳಿಸಿದ್ದಾರೆ. 8ನೇ ತರಗತಿಯ ವಿದ್ಯಾರ್ಥಿನಿ ಹೊಟ್ಟೆ ನೋವು ಎಂದು ಮನೆಯಲ್ಲಿ ಹೇಳಿದ್ದಳು. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿ ಎಂದು ಬೆಳಕಿಗೆ ಬಂದಿದೆ. ಮನೆಯಲ್ಲಿ ಅಮ್ಮ ಇಲ್ಲದಿದ್ದಾಗ ಯುವಕರಿಬ್ಬರೂ ಶಾಲೆಗೆ ಹೋಗುತ್ತಿದ್ದ ತಂಗಿಯ ಮೇಲೆ ಅತ್ಯಾಚಾರ ಎಸಗುತ್ತಿದ್ದರು. ಅಲ್ಲದೆ, ಈ ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 376ಡಿ (ಸಾಮೂಹಿಕ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ…

Read More

ಬೋರ್‌ವೇಲ್‌ ಕೇಬಲ್‌ಗಳನ್ನು ಕದಿಯೋದಕ್ಕೆ ತಿಂಗಳ ಸಂಬಳಕ್ಕೆ ಕಳ್ಳನನ್ನು ನೇಮಿಸಿಕೊಂಡಿರುವ ವಿಚಿತ್ರ ಪ್ರಕರಣವೊಂದು ತುಮಕೂರಿನಲ್ಲಿ ನಡೆದಿದೆ. ವೆಂಕಟೇಶ್‌ ಎಂಬಾತ ಕಳ್ಳತನಕ್ಕಾಗಿಯೇ ಓರ್ವನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಎನ್ನಲಾಗಿದೆ. ವೆಂಕಟೇಶ್‌ ಕಳ್ಳತನ ಮಾಡುವ ರಾಘವೇಂದ್ರನಿಗೆ ತಿಂಗಳ ಲೆಕ್ಕದಲ್ಲಿ ಸಂಬಳ ಕೊಡುತ್ತಿದ್ದ. ರಾಘವೇಂದ್ರ ತಿಂಗಳಿಗೆ 20 ಸಾವಿರ ರೂ. ಸಂಬಳ ಪಡೆಯುತ್ತಿದ್ದಾಗಿ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಈ ಖದೀಮರು ಗ್ರಾಮೀಣ ಭಾಗದಲ್ಲಿರುವ ಬೋರ್‌ ವೆಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ವಡ್ಡಗೆರೆ ಎಂಬಲ್ಲಿ ಇತ್ತೀಚೆಗೆ ಖತರ್ನಾಕ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಚಲನವಲನ ಗಮನಿಸಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಆ ಕೇಬಲ್ ಗಳನ್ನು ಖರೀದಿಸುತ್ತಿದ್ದಾತನೂ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅಥಣಿ: ವಾರ ಕಳೇದರೂ ಚರಂಡಿ ಸ್ವಚ್ಛಗೊಳಿಸದ ಗ್ರಾಂ ಪಂಚಾಯ್ತಿ ಆಡಳಿತದ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.  ಅಸ್ವಚ್ಛತೆಯಿಂದ ರೋಗರುಜಿನಗಳು ಹರಡುವ ಭೀತಿಯಲ್ಲಿ ಜನರು ಕಾಲ ಕಳೆಯುವಂತಾಗಿದೆ. ಚರಂಡಿ ತುಂಬೆಲ್ಲ ಹುಳಗಳು ತುಂಬಿದ್ರು ಸಂಬಂಧಪಟ್ಟವರು ಮಾತ್ರ ನಮಗೂ ಅದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಸ್ವಚ್ಛತೆಯ ಆಗರವಾದ ಅಥಣಿ ತಾಲೂಕಿನ ಸಂಬರಗಿ ಗ್ರಾಮ ಪಂಚಾಯಿತಿ ಹಲವು ರೋಗಗಳಿಗೆ ಎಡೆಮಾಡಿ ಕೊಟ್ಟಂತೆ ತೋರುತ್ತಿದ್ದು, ಹಲವುಬಾರಿ ಮನವಿ ಮಾಡಿದರು ಕ್ಯಾರೆ ಎನ್ನದ ಪಿಡಿಓ ಸಾಹೇಬ್ರು ಗಾಢ ನಿದ್ದೇಗೆ ಜಾರಿದಂತಿದೆ. ಒಟ್ಟಾರೆ ಸುದ್ದಿಯಿಂದ ಎಚ್ಚೆತ್ತಾದರೂ ಗ್ರಾಮದಲ್ಲಿ ಚರಂಡಿ ಸ್ವಚ್ಛತೆಗೆ ಗ್ರಾಮ ಪಂಚಾಯ್ತಿ ಆಡಳಿತ ಮುಂದಾಗುತ್ತಾ ಕಾದುನೋಡಬೇಕಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತನ್ನ ದಢೂತಿ ದೇಹದಿಂದಲೇ ದೇಶಾದ್ಯಂತ ಖ್ಯಾತಿ ಗಳಿಸಿರುವ, ಡಬ್ಲ್ಯೂಡಬ್ಲ್ಯೂಇನಲ್ಲಿ ಭಾರತವನ್ನು ಪ್ರತಿನಿಧಿಸಿದ ಕುಸ್ತಿಪಟು ದಿ ಗ್ರೇಟ್‌ ಖಲಿ ವಿಶ್ವದಲ್ಲೇ ಅತಿ ಕುಬ್ಜ ಮಹಿಳೆ ಎನಿಸಿರುವ ಜ್ಯೋತಿ ಆಮ್ಗ ಯನ್ನು ಒಂದೇ ಕೈಯಲ್ಲಿ ಎತ್ತಿ ಆಡಿಸಿದ ವೀಡಿಯೊ ಈಗ ಭಾರೀ ವೈರಲ್‌ ಆಗಿದೆ. ಮಹಾರಾಷ್ಟ್ರದವರಾದ ಜ್ಯೋತಿ ಆಮ್ಗೆ(30) ಅವರು ಕೇವಲ 2.3 ಅಡಿ ಎತ್ತರವಾಗಿದ್ದು, ಜಗತ್ತಿನಲ್ಲೇ ಅತಿ ಕುಬ್ಜ ಮಹಿಳೆ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಇವರು ಗಿನ್ನಿಸ್‌ ದಾಖಲೆಗೂ ಭಾಜನರಾಗಿದ್ದಾರೆ. ಜ್ಯೋತಿ ಆಮ್ಗೆ ಹಾಗೂ ದಿ ಗ್ರೇಟ್‌ ಖಲಿ ಅವರು ಇತ್ತೀಚೆಗೆ ಭೇಟಿಯಾಗಿದ್ದು, ಗ್ರೇಟ್‌ ಖಲಿ ಅವರು ತಮಾಷೆಗಾಗಿ ಅವರನ್ನು ಒಂದೇ ಕೈಯಲ್ಲಿ ಎತ್ತಿ ಆಡಿಸಿದ್ದಾರೆ. ಆದರೆ, ತಮಾಷೆಗಾಗಿ ಒಂದೇ ಕೈಯಲ್ಲಿ ಮಗುವಿನಂತೆ ಎತ್ತಿ ಆಡಿಸಿದ ವೀಡಿಯೊ ವೈರಲ್‌ ಆದ ಬೆನ್ನಲ್ಲೇ ಗ್ರೇಟ್‌ ಖಲಿ ವಿರುದ್ಧ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಾನು ನಿಮ್ಮನ್ನು ನಾಗ್ಪುರಕ್ಕೆ ಕಳುಹಿಸಿಬಿಡುತ್ತೇನೆ” ಎಂದು ತಮಾಷೆ ಮಾಡಿದ್ದಾರೆ. ಇದರಿಂದ ಜ್ಯೋತಿ ಆಮ್ಗೆ ಅವರು ನಾಚಿ ನೀರಾಗಿದ್ದಾರೆ. ಆದರೆ ಹಲವರು ಬ್ಯಾಡ್…

Read More

ತುಮಕೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯೊಬ್ಬರನ್ನು ಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ಅಂಚೆಪಾಳ್ಯದ ಮಂಜುನಾಥ್ ಎಂಬವರ ಬೈಕ್ ತಡೆದ ದುಷ್ಕರ್ಮಿಗಳು, ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರು ಗೋವಿಂದ ಅಲಿಯಾಸ್ ಶೂಟೌಟ್ ಗೋವಿಂದ, ಅಕ್ಷಯ್, ನಾಗೇಶ್ ಎಂದು ಹೇಳಲಾಗಿದೆ. ಅಂಚೆಪಾಳ್ಯ ಬಳಿ ಬೈಕ್ ಅಡ್ಡಗಟ್ಟಿ ಹೊಡೆದು ಹತ್ಯೆಗೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಗೋವಿಂದನ ಬಗ್ಗೆ ಮಾತನಾಡುತ್ತೀಯಾ ಎಂದು ಪ್ರಶ್ನಿಸಿ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಹಲ್ಲೆಯಿಂದಾಗಿ ಮಂಜುನಾಥ್ ಗೆ ಗಂಭೀರ ಗಾಯವಾಗಿದೆ. ಆತನನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ವಿಜಯನಗರ: ಜೀವಂತವಾಗಿರುವ ತಾಯಿ-ಮಗನನ್ನು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿ, ಇಬ್ಬರನ್ನೂ ಪಡಿತರ ಚೀಟಿ ಹೆಸರಿನಿಂದ ಆಹಾರ ಇಲಾಖೆಯು ಡಿಲೀಟ್ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಆಹಾರ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ. ಅಂಜೀನಮ್ಮ ಮತ್ತು ಅವರ ಪುತ್ರ ಅಜಯ್ ಎಂಬವರು ಬದುಕಿದ್ದಾರೆ. ಹೀಗಿರುವಾಗಲೇ 2019ರಲ್ಲೇ ಸಾವನ್ನಪ್ಪಿದ್ದಾರೆ ಎಂದು ಬಿಪಿಎಲ್‌ ಕಾರ್ಡ್‌ನಿಂದ ಹೆಸರು ಡಿಲೀಟ್‌ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಕಳೆದ ಐದು ವರ್ಷದಿಂದ ಪಡಿತರದಿಂದ ಬಡ ಕುಟುಂಬವೊಂದು ವಂಚಿತವಾಗಿದೆ ಎಂಬ ಆರೋಪ ಕೇಳಿಬಂದಿದೆ. ಆಹಾರ ಇಲಾಖೆಯ ಎಡವಟ್ಟಿನಿಂದ ತಾಯಿ ಮಗ ಸರ್ಕಾರಿ ಸೌಲಭ್ಯಗಳಿಂದಲೂ ವಂಚಿತರಾಗಿದ್ದಾರೆ ಎನ್ನಲಾಗಿದೆ. ಇತ್ತ ನ್ಯಾಯಕ್ಕಾಗಿ ಅಂಜಿನಮ್ಮ ಕುಟುಂಬ ನಿತ್ಯ ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗೆ ಅಲೆಯುತ್ತಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಪರಿಶೀಲಿಸದೇ ಅಂಜೀನಮ್ಮ ಹೆಸರು ತೆಗೆದಿರುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ತುಮಕೂರು ಜಿಲ್ಲೆಯ ಶಿರಾದಲ್ಲಿ ಸುರಿದ ಧಾರಾಕಾರ ಮಳೆಗೆ ಆಕಳು ಬಲಿಯಾದ ಘಟನೆ ನಡೆದಿದೆ. ಚರಂಡಿ, ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿದ್ದು, ಮಳೆಯ ರಭಸಕ್ಕೆ ಕರು ಚರಂಡಿಗೆ ಸಿಲುಕಿದ್ದು, ಚರಂಡಿ ನೀರಿನಲ್ಲಿ ಸಿಲುಕಿದ ಕರುವನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಕೊನೆಗೂ ಚರಂಡಿ ನೀರಿನಲ್ಲಿ ಮುಳುಗಿ ಕರು ಸಾವನ್ನಪ್ಪಿದೆ. ತುಮಕೂರು ‌ಜಿಲ್ಲೆಯ ಶಿರಾ ನಗರದ 18ನೇ ವಾರ್ಡ್ ನ ಬೇಗಂ ಮೋಹಲ್ಲಾ ಬಳಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ: ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ಭಾರೀ ಮಳೆಯ ಪರಿಣಾಮದಿಂದಾಗಿ ರೈತರು ಬೆವರು ಹರಿಸಿ ಬೆಳೆಸಿದ್ದ ಅಡಿಕೆ ಗಿಡಗಳು ನೆಲಕ್ಕುರುಳಿವೆ. ಫಸಲಿಗೆ ಬಂದಿದ್ದ ಅಡಿಕೆ ಗಿಡಗಳು ಮಳೆಯ ರಭಸಕ್ಕೆ ಮುರಿದು ಬಿದ್ದಿವೆ. ಅರಸೀಕೆರೆಯ ರೈತ ಪ್ರಕಾಶ್ ಎಂಬುವವರ ಸರ್ವೆ ನಂಬರ್ 127/ 2  ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ. 10-12 ವರ್ಷದಿಂದ ಬೆಳೆದು ಫಸಲಿಗೆ ಬಂದಿದ್ದ ಅಡಿಕೆ ಗಿಡಗಳು ಉರುಳಿ ಬಿದ್ದ ಪರಿಣಾಮ ಅಂದಾಜು 2 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಹೀಗೆ ಇದೇ ಗ್ರಾಮದ ಹಲವು ರೈತರು ಬೆಳೆಸಿದ್ದ ಅಡಿಕೆ ಮರಗಳ ಸ್ಥಿತಿಯು ಹೀಗೆಯೆ ಆಗಿದೆ. ಮಳೆ ಬಂದರು ರೈತರೇ ನಷ್ಟಕ್ಕೊಳಗಾಗುತ್ತಾರೆ. ಮಳೆ ಬರದಿದ್ದರೂ ರೈತರೆ ನಷ್ಟ ಅನುಭವಿಸುತ್ತಾರೆ. ರೈತರ ಗೋಳು ಮಾತ್ರ ಸರ್ಕಾರದ ಕಿವಿಗೆ ಕೇಳಿಸುವುದಿಲ್ಲ. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ನಗರದ ಹೊರವಲಯದ ಅಂತರಸಹಳ್ಳಿ ಕ್ಯೆಗಾರಿಕಾ ವಸಾಹತು ಕಾರ್ಖಾನೆಯೊಂದರಿಂದ ಕಲುಷಿತ ನೀರನ್ನು ರಾಜ ಕಾಲುವೆಗೆ ಹೊರಬೀಡುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಸೋಮವಾರ ಮಧ್ಯಾಹ್ನ ನಗರದ ಹೊರವಲಯದ ಅಂತರಸಹಳ್ಳಿ ಕ್ಯೆಗಾರಿಕಾ ವಸಾಹತು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೈಗಾರಿಕೆಗಳು ಮಾಲಿನಯುಕ್ತ ತ್ಯಾಜ್ಯಗಳನ್ನು ಕಾಲುವೆಗಳಿಗೆ ಬಿಡಬಾರದು, ಈ ಬಗ್ಗೆ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಸದರಿ ಪ್ರದೇಶವನ್ನು ಸಮಗ್ರವಾಗಿ ಪರಿಶೀಲಿಸಿ, ತ್ವರಿತ ವರದಿ ಸಲ್ಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಅಂತರಸಹಳ್ಳಿ ಕೈಗಾರಿಕಾ ವಸಾಹತು ಪ್ರದೇಶದ ವ್ಯಾಪ್ತಿಯು ರಾಜ್ಯ ಸಣ್ಣ ಕ್ಯೆಗಾರಿಕಾ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಸೇರಿರುವುದರಿಂದ, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದ ಸಹಾಯಕ ವ್ಯವಸ್ಥಾಪಕರಿಗೆ ಸ್ಥಳದಲೇ ದೂರವಾಣಿ ಮುಖೇನ ಮಾತನಾಡಿ, ಅಂತರಸಹಳ್ಳಿ ಕೈಗಾರಿಕಾ ಪ್ರದೇಶದ ಕಾಲುವೆಗಳಲ್ಲಿ ಇರುವಂತಹ ತ್ಯಾಜ್ಯಗಳ ಪರಿಶೀಲನೆ ಮತ್ತು ವಿಲೇವಾರಿಗೆ ಶೀಘ್ರ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಡಿ.ಕೆ.ಲಿಂಗರಾಜು, ಕೆಐಎಡಿಬಿ ಅಧಿಕಾರಿಗಳು ಸೇರಿದ್ದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.…

Read More