Subscribe to Updates
Get the latest creative news from FooBar about art, design and business.
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
- ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
- ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
- ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ
- ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ
Author: Ganesh Tumkuru
ಪಾವಗಡ: ಗಣೇಶ ಚತುರ್ಥಿ ಸೇರಿದಂತೆ ಮುಂದಿನ ದಿನಗಳಲ್ಲಿ ನಡೆಯಲಿರುವ ಸಾರ್ವಜನಿಕ ಹಬ್ಬಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳಲ್ಲಿ ಡಿಜೆ ಹಾಗೂ ಅತಿಯಾದ ಶಬ್ದ ಉಂಟುಮಾಡುವ ಧ್ವನಿವರ್ಧಕಗಳ ಬಳಕೆಗೆ ಅವಕಾಶ ನೀಡುವುದಿಲ್ಲ ಎಂದು ಪಾವಗಡ ವೃತ್ತ ನಿರೀಕ್ಷಕ ಸುರೇಶ್ ಎಚ್ಚರಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬುಧವಾರ ಪಾವಗಡ ವೃತ್ತ ವ್ಯಾಪ್ತಿಯ ಡಿಜೆ ಮಾಲೀಕರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಶಬ್ದ ಮಾಲಿನ್ಯದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಉಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಹಬ್ಬ, ಜಾತ್ರೆ ಹಾಗೂ ವಿವಿಧ ಸಮಾರಂಭಗಳ ಸಂದರ್ಭದಲ್ಲಿ ನಿಯಮ ಮೀರಿ ಹೆಚ್ಚಿನ ಶಬ್ದದಲ್ಲಿ ಡಿಜೆ ಬಳಸುವುದು ಕಂಡುಬಂದರೆ ಸಂಬಂಧ ಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಸಾರ್ವಜನಿಕರ ನೆಮ್ಮದಿ, ವಿದ್ಯಾರ್ಥಿಗಳು, ವೃದ್ಧರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರ ಹಿತದೃಷ್ಟಿಯಿಂದ ಧ್ವನಿವರ್ಧಕಗಳ ಬಳಕೆಯಲ್ಲಿ ನಿಗದಿತ ನಿಯಮಗಳನ್ನು ಪಾಲಿಸುವುದು ಅಗತ್ಯ. ಕಾರ್ಯಕ್ರಮ ಆಯೋಜಕರು ಪೊಲೀಸ್ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ…
ತುಮಕೂರು: ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಅಕ್ಟೋಬರ್ 11 ರಿಂದ 21ರವರೆಗೆ 11 ದಿನಗಳ ಕಾಲ ತುಮಕೂರು ದಸರಾ ಮಹೋತ್ಸವ–2026 ಅನ್ನು ಸರ್ಕಾರದ ಕಾರ್ಯಕ್ರಮವನ್ನಾಗಿ ಆಚರಣೆ ಮಾಡಲಾಗುತ್ತಿದ್ದು, ಈ ಸಂಬಂಧ ನಾಡಹಬ್ಬದ ಆಚರಣೆಯ ವಿವಿಧ ವೇದಿಕೆ ಕಾರ್ಯಕ್ರಮ ಹಾಗೂ ಮೆರವಣಿಗೆ ಕಾರ್ಯಕ್ರಮಗಳಲ್ಲಿ ಸಾಂಸ್ಕೃತಿಕ ಪ್ರದರ್ಶನ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರದರ್ಶನ ಕಲೆಗಳಲ್ಲಿ ಉತ್ತಮ ವೇಷಭೂಷಣ ಹಾಗೂ ವಾದ್ಯ ಪರಿಕರಗಳನ್ನು ಒಳಗೊಂಡ ತಂಡಕ್ಕೆ ಆದ್ಯತೆ ನೀಡಲಾಗುವುದು. ಈ ಕುರಿತು ಅರ್ಜಿಯೊಂದಿಗೆ ತಂಡದ ಉತ್ತಮ ಛಾಯಾಚಿತ್ರ ಹಾಗೂ ವೇದಿಕೆ ಕಲಾತಂಡಗಳಲ್ಲಿ ಈ ಹಿಂದಿನ ದಿನಗಳಲ್ಲಿ ವಿವಿಧ ವೇದಿಕೆಗಳಲ್ಲಿ ನೀಡಿರುವ ಕಾರ್ಯಕ್ರಮಗಳ ಆಯು ಆಯ್ಕೆ ಛಾಯಾಚಿತ್ರಗಳನ್ನು ಲಗತ್ತಿಸಬೇಕು. ಅರ್ಜಿಯನ್ನು ಸ್ವಬರಹದಡಿ ತಂಡದ ಎಲ್ಲಾ ಸದಸ್ಯರ ಹೆಸರು / ವಿವರಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು(0816-2275204) ಕಚೇರಿಗೆ ಸೆಪ್ಟೆಂಬರ್ 19ರೊಳಾಗಾಗಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಸರ್ಕಾರಿ ಪ್ರೌಢಶಾಲೆ ಹುಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯ ಹೊಳಕಲ್ಲು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚಿಗೆ ಹುಲ್ಲೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಪೋಕ್ಸೊ ಕಾಯ್ದೆ ಮತ್ತು ವಿಶ್ವ ಪೌಷ್ಟಿಕಾಂಶ ದಿನದ ಬಗ್ಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಜರುಗಿತು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ್ ಧನಪಾಲ್ ಹವಳೇರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಿಗೆ ಪೋಕ್ಸೊ ಕಾಯ್ದೆಯ ಕಾನೂನಿನ ಬಗ್ಗೆ ಮಾಹಿತಿ ಹೊಂದುವುದು ಅವಶ್ಯ. ಜಿಲ್ಲಾ ಕಾನೂನು ಮತ್ತು ನ್ಯಾಯಾಂಗ ಸೇವೆಗಳ ಪ್ರಾಧಿಕಾರವು ಸಾರ್ವಜನಿಕ ಸಾರ್ವಜನಿಕರ ಕಾನೂನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾದ ಕಾನೂನು ಸೇವಾ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಆಶಾ ಕೆ. ಎಸ್, ಅವರು ಯಾವುದೇ ಮಗು ಗಂಡಾಗಲಿ ಹೆಣ್ಣಾಗಲಿ ತಮಗೆ ತೊಂದರೆಯಾದಾಗ ಕೂಡಲೇ…
ತುಮಕೂರು: ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಶ್ವಿಜಾ ಬಿ.ವಿ. ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾಸ್ಟೆಲ್ ಗಳಿಗೆ ಒಬ್ಬ ನೋಡೆಲ್ ವೈದ್ಯಾಧಿಕಾರಿಯನ್ನು ನೇಮಿಸಿ ಕಾಲ–ಕಾಲಕ್ಕೆ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು ಎಂದರು. ಪಾವಗಡ ಹಾಗೂ ಸಿರಾ ತಾಲೂಕಿನಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಿದ್ದು, ಆಶಾ ಕಾರ್ಯಕರ್ತೆಯರ ಮುಖಾಂತರ ಐ.ಇ.ಸಿ.ಗಳನ್ನು ಪ್ರದರ್ಶಿಸಬೇಕು ಹಾಗೂ ಆಡಿಟ್ ನಡೆಸಲು ಸೂಚಿಸಿರುವುದಲ್ಲದೆ, ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು. ಆಶಾ ಕಾರ್ಯಕರ್ತೆಯರು ಮನೆ–ಮನೆಗೆ ಹೋಗಿ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು. ಆರೋಗ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಸಮಯಕ್ಕೆ ಶಾಲಾ-ಕಾಲೇಜುಗಳಿಗೂ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಬೇಕು ಎಂದರು. ಸಮುದಾಯ ಆರೋಗ್ಯ ಅಧಿಕಾರಿಗಳು…
ತುಮಕೂರು : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಜಾತಿಗೆ ಸೇರಿದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಸಾಲ ಸೌಲಭ್ಯಕ್ಕಾಗಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಅರಿವು-ಶೈಕ್ಷಣಿಕ ನೇರ ಸಾಲ(ಹೊಸತು ಹಾಗೂ ನವೀಕರಣ), ಗಂಗಾ ಕಲ್ಯಾಣ, ಅವಲಂಬಿ ಸಾರಥಿ ಹಾಗೂ ಹೊಲಿಗೆ ಯಂತ್ರ (ZIG-ZAG) ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ / ತುಮಕೂರು ಒನ್ / ಬೆಂಗಳೂರು ಒನ್ ಸೇವಾ ಕೇಂದ್ರದಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ಹೊಂದಾಣಿಕೆಯಾಗಬೇಕು. 2024–25 ಮತ್ತು 2025–26ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಹೆಚ್ಚಿನ…
ಬೀದರ್: ಜಿಲ್ಲೆಯ ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಮಾರಪಳ್ಳಿ ಗ್ರಾಮದಲ್ಲಿ ಸೋಯಾಬಿನ್ ಮತ್ತು ತೊಗರಿ ಬೆಳೆಯುವ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನಾಗಮಾರಪಳ್ಳಿ ಗ್ರಾಮದ ಬಸವರಾಜ ತಂದೆ ರಾಚೆಪ್ಪಾ ದದ್ದಾಪೂರೆ ಎಂದು ಗುರುತಿಸಲಾಗಿದೆ. ನಾಗಮಾರಪಳ್ಳಿ ಗ್ರಾಮದ ಸರ್ವೆ ನಂ. 21/2 ರ ಹೊಲದ ಕಟ್ಟೆಯ ಮೇಲೆ ಗಾಂಜಾ ಗಿಡಗಳನ್ನು ಬೆಳೆಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಚಿಂತಾಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ಚಂದ್ರಶೇಖರ ನಿರ್ಣೆ ಹಾಗೂ ಸಿಬ್ಬಂದಿ ಪಂಚರ ಸಮಕ್ಷಮ ಸೆಪ್ಟೆಂಬರ್ 08, 2026 ರಂದು ಮಧ್ಯಾಹ್ನ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಒಟ್ಟು 3 ಗಾಂಜಾ ಗಿಡಗಳು (ತೂಕ: 4 ಕೆಜಿ 700 ಗ್ರಾಂ) ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ: 2,35,000/- ರೂ. ಆಗಿದೆ. ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 57/2026, ಕಲಂ 20(ಎ)(1) ಎನ್ ಡಿಪಿಎಸ್ ಕಾಯ್ದೆಯಡಿ (NDPS Act) ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ…
ಔರಾದ್: ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಹಾಗೂ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಭಂಡಾರಕುಮಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಜಾಬ್ ಕಾರ್ಡ್ ಮೇಳವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯ ವಿವಿಧ ಸೌಲಭ್ಯಗಳ ಕುರಿತು ಗ್ರಾಮಸ್ಥರಿಗೆ ಸಮಗ್ರ ಮಾಹಿತಿ ನೀಡಲಾಯಿತು. ಗ್ರಾಮೀಣ ಕುಟುಂಬಗಳಿಗೆ ಈ ಹಿಂದೆ ಇದ್ದ ಉದ್ಯೋಗಾವಕಾಶವನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ಅರ್ಹ ಕುಟುಂಬಗಳು ಇದರ ಗರಿಷ್ಠ ಪ್ರಯೋಜನ ಪಡೆದುಕೊಳ್ಳಬಹುದು. ಕಷ್ಟಪಟ್ಟು ಕೆಲಸ ಮಾಡುವ ಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡುವ ಉದ್ದೇಶದಿಂದ ದಿನದ ಕೂಲಿ ಮೊತ್ತವನ್ನು ರೂ. 370 ರಿಂದ ರೂ. 382 ಕ್ಕೆ ಹೆಚ್ಚಿಸಲಾಗಿದೆ. ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳು ಕೆಲಸದ ಅಗತ್ಯವಿದ್ದಾಗ ನೇರವಾಗಿ ಗ್ರಾಮ ಪಂಚಾಯಿತಿಗೆ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಬೇಕು. ಇದುವರೆಗೆ ಜಾಬ್ ಕಾರ್ಡ್ ಇಲ್ಲದ ಅರ್ಹ ಕುಟುಂಬಗಳು ಕೂಡಲೇ ಹೊಸ ಜಾಬ್ ಕಾರ್ಡ್‌ಗಾಗಿ ಅರ್ಜಿ…
ಬೆಂಗಳೂರು: ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಎಐಸಿಸಿ (AICC) ಮಹತ್ವದ ಹೆಜ್ಜೆ ಇರಿಸಿದೆ. ‘ಸಂಘಟನಾ ಸೃಜನ ಅಭಿಯಾನ’ದ ಭಾಗವಾಗಿ ರಾಜ್ಯದ 35 ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕಾತಿಗಾಗಿ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಕಾಂಗ್ರೆಸ್ ಹೈಕಮಾಂಡ್ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಬಾಗಲಕೋಟೆ: ದಯಾನಂದ ಎಸ್. ಪಾಟೀಲ್ ಬೆಂಗಳೂರು ಉತ್ತರ: ಅಬ್ದುಲ್ ವಾಜಿದ್ ಬೆಂಗಳೂರು ದಕ್ಷಿಣ: ಒ. ಮಂಜುನಾಥ್ ಬೆಂಗಳೂರು ಪೂರ್ವ: ಡಿ.ಕೆ. ಮೋಹನ್ ಬಾಬು ಬೆಂಗಳೂರು ಪಶ್ಚಿಮ: ಹನುಮಂತರಾಯಪ್ಪ ಬೆಂಗಳೂರು ಕೇಂದ್ರ: ಜೆ. ಶರವಣನ್ ಬೆಂಗಳೂರು ಗ್ರಾಮಾಂತರ: ಸಿ. ಪ್ರಸನ್ನ ಕುಮಾರ್ ಚಿಕ್ಕೋಡಿ: ಲಕ್ಷ್ಮಣರಾವ್ ಚಿಂಗಳೆ ಬೆಳಗಾವಿ ನಗರ: ಸಲಾಉದ್ದೀನ್ ಸಿ. ಸಲೀಂ ಬಿ. ಖತೀಬ್ (ರಾಜಾಸಲೀಂ) ಬೆಳಗಾವಿ ಗ್ರಾಮಾಂತರ: ಬಸವರಾಜ್ ಶೆಗಾವಿ ಬಳ್ಳಾರಿ ನಗರ: ಅಲ್ಲುಮ್ ಪ್ರಶಾಂತ್ ಬಳ್ಳಾರಿ ಗ್ರಾಮಾಂತರ: ಕೆ. ಮಲ್ಲಿಕಾರ್ಜುನ್ ಬೀದರ್: ಅಬ್ದುಲ್ ಮನ್ನಾನ್ ಸೇಠ್ ಚಾಮರಾಜನಗರ: ಜೆ. ಯೋಗೇಶ್ ಚಿಕ್ಕಮಗಳೂರು:…
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಇದು ಅಭಿವೃದ್ಧಿಯೋ ಅಥವಾ ಅವ್ಯವಸ್ಥೆಯ ಪರಮಾವಧಿಯೋ ? ಕೊರಟಗೆರೆ ಜನರಿಗೆ ವೈಟ್ ಟಾಪಿಂಗ್ ರಸ್ತೆ ಕನಸು ತೋರಿಸಿದ ಲೋಕೋಪಯೋಗಿ ಇಲಾಖೆ, ಕೊನೆಗೆ ಫುಟ್‌ಪಾತ್ ಇಲ್ಲದೆ ಅರ್ಧಂಬರ್ಧ ರಸ್ತೆ ಮಾಡಿ ಕೈ ತೊಳೆದುಕೊಂಡಿದೆ. ಕಾಮಗಾರಿ ಆರಂಭ–ಮುಕ್ತಾಯದಲ್ಲಿ ಬೇಜವಾಬ್ದಾರಿ : ಜನವರಿ 27–2021 ರಲ್ಲಿ ಶುರುವಾದ ಕಾಮಗಾರಿಗೆ 11 ತಿಂಗಳು ಡೆಡ್ ಲೈನ್ ಇತ್ತು. ಕೋವಿಡ್ ನೆಪದಲ್ಲಿ 6 ತಿಂಗಳು ಎಕ್ಸ್ ಟೆನ್ಶನ್ ತೆಗೆದುಕೊಂಡರೂ ಕೆಲಸ ಮಾತ್ರ ಮುಗಿಯಲಿಲ್ಲ. 2022ಕ್ಕೆ ಮುಗಿಯಬೇಕಿದ್ದ ರಸ್ತೆ 2026ಕ್ಕೂ ಅರ್ಧಕ್ಕೆ ನಿಂತಿದೆ. ಹಣ ಇದೆ, ಕೆಲಸ ಇಲ್ಲ: ಒಟ್ಟು 9.99 ಕೋಟಿ ಅನುದಾನದಲ್ಲಿ ಕೇವಲ 5.34 ಕೋಟಿ ಮಾತ್ರ ಖರ್ಚು ಮಾಡಿ, 3.56 ಕೋಟಿ ಹಣವನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. ಹಣ ಇದ್ದರೂ ಕೆಲಸ ಮಾಡದಿರುವುದು ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ. 1900 ಮೀಟರ್ ಗೆ ಸೀಮಿತವಾದ ‘ಅಭಿವೃದ್ಧಿ’: ಬೆಸ್ಕಾಂ ಕಚೇರಿಯಿಂದ ತಾಲ್ಲೂಕು ಕಚೇರಿವರೆಗೆ ಕೇವಲ 1900 ಮೀಟರ್ ರಸ್ತೆ ಮಾತ್ರ ವೈಟ್…
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್ ಆರ್ ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 14 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಹೊಳೆನರಸೀಪುರಕ್ಕೆ ತೆರಳುತ್ತಿದ್ದ ಹೊಳೆನರಸೀಪುರ ಘಟಕದ ಕೆಎಸ್ ಆರ್ ಟಿಸಿ ಬಸ್‌ನಲ್ಲಿ (ಕೆಎ-13 ಎಫ್-2340) ಒಟ್ಟು 24 ಮಂದಿ ಪ್ರಯಾಣಿಕರಿದ್ದರು. ವರಾಹಸಂದ್ರ ಬಳಿ ಮಾರ್ಗಮಧ್ಯೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಬಸ್ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಯಾವುದೇ ಅನಾಹುತವಿಲ್ಲದೆ ಪಾರಾಗಿದ್ದಾನೆ. ಅಪಘಾತದಲ್ಲಿ ಗಾಯಗೊಂಡ 14 ಪ್ರಯಾಣಿಕರನ್ನು ತಕ್ಷಣವೇ ಬಿ.ಜಿ. ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯ ವೈದ್ಯರು ಸೂಕ್ತ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಿದ್ದು, ಸದ್ಯ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ಳೂರು ಆರಕ್ಷಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ವರದಿ: ಮಂಜುಶ್ರವಣೂರು,…