Subscribe to Updates
Get the latest creative news from FooBar about art, design and business.
- “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
- ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್‌ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
- ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
- ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
Author: Ganesh Tumkuru
ಸರಗೂರು: ಮೈಸೂರಿಗೆ ಆಗಮಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರನ್ನು ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಸೋಮವಾರ ಭೇಟಿ ಮಾಡಿದರು. ಸರಗೂರು ಹಾಗೂ ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ಶಿಫಾರಸು ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ, ಶಾಸಕ ಅನಿಲ್ ಚಿಕ್ಕಮಾದು ಅವರು ಹಿಂದುಳಿದ ತಾಲೂಕುಗಳಾದ ಸರಗೂರು ಹಾಗೂ ಹೆಚ್.ಡಿ.ಕೋಟೆ ಭಾಗಗಳಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಗೆಲುವು ಸಾಧಿಸಿರುವ ಅವರಿಗೆ ಸಚಿವ ಸ್ಥಾನ ನೀಡಿದರೆ ಈ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಹೇಳಿದರು. ಅಲ್ಲದೆ, ಅನಿಲ್ ಚಿಕ್ಕಮಾದು ಅವರು ಹಿಂದುಳಿದ ಪ್ರದೇಶದ ಯುವಕರಿಗೆ, ರೈತರಿಗೆ…
ತುಮಕೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಮುಂದುವರೆಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ನಾನು ಕೇಳುತ್ತಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಉತ್ತರ ಕೊಡದೆ ಕೇವಲ ಏಕ್ ವೇದಿಕೆಯಲ್ಲಿ ಮಾತನಾಡಿ ಜಾರಿಕೊಳ್ಳುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು; ಗೃಹ ಸಚಿವರು ಕ್ಯಾಮೆರಾ ಮುಂದೆ ಮಾತನಾಡದೆ ಏಕ್ ವೇದಿಕೆಯಲ್ಲಿ ಮಾತನಾಡಿದ್ದಾರೆ. ಬೆಟ್ಟ ಅಗೆದು ಇಲಿ ಹಿಡಿದಂತೆ ಹಿಂದೆ ಬ್ಲಾಟ್‌ಡೇರ್, ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ? ಪ್ರಿಯಾಂಕ್ ಖರ್ಗೆ ನನ್ನನ್ನು ಆರ್ ಎಸ್ ಎಸ್ ಬಿಜೆಪಿಯವರನ್ನು ಆಟ ಆಡಿಸಿದಂತೆ ಅಲ್ಲ, ನನ್ನ ಹತ್ತಿರ ಆಟ ಆಡೋಕೆ ಆಗಲ್ಲ. ಮಿಸ್ಟರ್ ಪ್ರಿಯಾಂಕ್ ಖರ್ಗೆ ನಾನು ಕದ್ದು ಹೋಗುವವನಲ್ಲ, ಪಲಾಯನ ಮಾಡಲ್ಲ ಎಂದು ಗುಡುಗಿದರು. ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಗಂಭೀರ ಆರೋಪ ಮಾಡಿದ ಕುಮಾರಸ್ವಾಮಿ ಅವರು; ರಿಸಾರ್ಟ್‌ನಲ್ಲಿ ಕುಳಿತು ಓಎಂಆರ್ ಶೀಟ್ ತಿದ್ದಿದ ಆ ಅಧಿಕಾರಿಯನ್ನು ಯಾಕೆ ದೆಹಲಿಯಿಂದ ದೇವನಹಳ್ಳಿ ರಿಸಾರ್ಟ್‌ಗೆ ಕರೆದುಕೊಂಡು…
ಹಾಸನ: ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ನಿಡುವಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪೆ ಗ್ರಾಮದಲ್ಲಿ ತೀವ್ರವಾದ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಜನಸಾಮಾನ್ಯರು ನೀರಿಗಾಗಿ ಎತ್ತಿನ ಗಾಡಿಯನ್ನು ಅವಲಂಬಿಸಬೇಕಾದ ಶೋಚನೀಯ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಹಲವು ವಾರಗಳಿಂದ ಕುಡಿಯುವ ನೀರು ಸಿಗದೆ ಗ್ರಾಮಸ್ಥರು ಹಾಗೂ ಜಾನುವಾರುಗಳು ಕಂಗಾಲಾಗಿದ್ದಾರೆ. ಸಾರ್ವಜನಿಕರು ನಿಯಮಿತವಾಗಿ ತೆರಿಗೆ ಪಾವತಿಸುತ್ತಿದ್ದರೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕುಡಿಯುವ ನೀರು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದ್ದರೂ, ಅದನ್ನು ಒದಗಿಸದಿರುವುದು ಕರ್ತವ್ಯ ಲೋಪವಾಗಿದೆ. ಈ ಬಗ್ಗೆ ಸಾರ್ವಜನಿಕರು ಪಂಚಾಯತ್ ಕಚೇರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪಿಡಿಒ (PDO) ಮತ್ತು ಸಿಬ್ಬಂದಿ ಕಣ್ಣು ಮುಚ್ಚಿ ಕುಳಿತಿದ್ದು, ಜನರ ದೂರುಗಳಿಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಟ್ಯಂತರ ರೂಪಾಯಿ ವೆಚ್ಚದ ಜಲಜೀವನ್ ಮಿಷನ್ ಯೋಜನೆ ಇದ್ದರೂ ಹಳ್ಳಿಗಳಿಗೆ ಸಮರ್ಪಕ ನೀರು ಹರಿಯುತ್ತಿಲ್ಲ. ಕಲುಷಿತ ನೀರು ಸರಬರಾಜು ಮತ್ತು ನೀರಿನ ತೀವ್ರ ಅಭಾವದಿಂದಾಗಿ ಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಅಪಾಯ ಎದುರಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು…
ಹಾಸನ: ಗ್ರಾಮ ಪಂಚಾಯತ್ ಚುನಾವಣೆಯ ಮೀಸಲು ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಮತ್ತೊಮ್ಮೆ ತೀವ್ರವಾಗಿ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಯವರ ದಬ್ಬಾಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುವುದರ ಜೊತೆಗೆ ಸರ್ಕಾರದ ಆಡಳಿತ ಯಂತ್ರದ ವಿರುದ್ಧವೂ ವಾಗ್ದಾಳಿ ನಡೆಸಿದರು. ಗ್ರಾಮ ಪಂಚಾಯತ್ ಚುನಾವಣೆಗೆ ಮೀಸಲು ನಿಗದಿ ಮಾಡುವಾಗ ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಗೆ ಯಾಕೆ ಪತ್ರ ಬರೆದರು? ಅವರಿಂದ ವರದಿ ಪಡೆದ ಬಳಿಕ ಮೀಸಲು ನಿಗದಿ ಬದಲಾವಣೆ ಮಾಡಿದ್ದು ಯಾಕೆ? ಬದಲಾವಣೆ ಮಾಡುವಾಗ ನಿರ್ದಿಷ್ಟ ಕಾರಣ ನೀಡಬೇಕಲ್ಲವೇ ಎಂದು ಹೆಚ್.ಡಿ. ರೇವಣ್ಣ ಪ್ರಶ್ನಿಸಿದರು. ಜಿಲ್ಲೆಯಲ್ಲಿ ಆರು ತಿಂಗಳುಗಳ ಕಾಲ ಅಪರ ಜಿಲ್ಲಾಧಿಕಾರಿ (ADC) ಇರಲಿಲ್ಲ. ಬಂದವರೂ ಕೂಡ ಕೇವಲ ಎರಡೇ ದಿನ ಅಥವಾ ಒಂದು ವಾರಕ್ಕೆ ರಜೆ ಹಾಕಿ ಹೋದರು. ಸಕಲೇಶಪುರ ಎಸಿ ಕೂಡ ಒಂದು ತಿಂಗಳು ಇರಲಿಲ್ಲ. ಹಲವು ಕಡೆಗಳಲ್ಲಿ ಒಂದೇ ಅಧಿಕಾರಿಗೆ ಎರಡು-ಮೂರು ಕಡೆಗಳಲ್ಲಿ ಚಾರ್ಜ್ ನೀಡಲಾಗಿದ್ದು, ಇದರಿಂದ…
ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಗಸ್ತು ತಂಡದ ಸಮಯೋಚಿತ ಕಾರ್ಯದಿಂದಾಗಿ ಹಠಾತ್ ಹೃದಯಾಘಾತದಿಂದ (Cardiac Arrest) ಬಳಲುತ್ತಿದ್ದ 34 ವರ್ಷದ ವ್ಯಕ್ತಿಯೊಬ್ಬರ ಜೀವ ಉಳಿದಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯ ಅಗ್ನಿಶಾಮಕ ಠಾಣೆ ಬಳಿ ಈ ಘಟನೆ ಸಂಭವಿಸಿದೆ. 34 ವರ್ಷದ ರವಿ ಎಂಬುವವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅವರಿಗೆ ಹಠಾತ್ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಅವರು ಬೈಕನ್ನು ರಸ್ತೆ ಪಕ್ಕ ನಿಲ್ಲಿಸಿ ಕೆಳಗೆ ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಆ ಮಾರ್ಗವಾಗಿ ಹೊಯ್ಸಳ-88 ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು, ರವಿ ಕುಸಿದು ಬೀಳುತ್ತಿರುವುದನ್ನು ಗಮನಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಹಾಯಕ ಸಬ್–ಇನ್ಸ್‌ಪೆಕ್ಟರ್ (ASI) ಸಚ್ಚಿದಾನಂದಮೂರ್ತಿ ಮತ್ತು ಹೆಡ್ ಕಾನ್’ಸ್ಟೆಬಲ್ ಬಸವರಾಜು ಅವರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಸಮಯ ಪ್ರಜ್ಞೆ ಮೆರೆದು ರವಿಗೆ ಸಿಪಿಆರ್ (CPR) ಚಿಕಿತ್ಸೆ ನೀಡಿದ್ದಾರೆ. ಪೊಲೀಸರ ಈ ಸಕಾಲಿಕ ಹಾಗೂ ತ್ವರಿತ ನೆರವಿನಿಂದ ರವಿ ಅವರ…
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ (ಅಪರಾಧ ತನಿಖಾ ದಳ) ತನಿಖೆಯನ್ನು ತೀವ್ರಗೊಳಿಸಿದ್ದು, ಹಿರಿಯ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗವಾರ್ ಅವರನ್ನು ವಶಕ್ಕೆ ಪಡೆದಿದೆ. ಸುದೀರ್ಘ ವಿಚಾರಣೆ ಮತ್ತು ವಶಕ್ಕೆ ಪಡೆದಿರುವುದು: ಕೆಪಿಎಸ್ ಸಿಯ ಮಾಜಿ ಪರೀಕ್ಷಾ ನಿಯಂತ್ರಕರಾಗಿ (Controller of Examinations) ಸೇವೆ ಸಲ್ಲಿಸಿದ್ದ 2016ರ ಬ್ಯಾಚ್ ನ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ಎರಡು ದಿನಗಳ ಕಾಲ ಸತತವಾಗಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಅವರ ಹೇಳಿಕೆಗಳಲ್ಲಿ ವ್ಯತ್ಯಾಸಗಳಿರುವುದು ಮತ್ತು ತನಿಖೆಗೆ ಸರಿಯಾಗಿ ಸಹಕರಿಸದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಜನವರಿ 2026ರಲ್ಲಿ ನಡೆದ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು, ಒಎಂಆರ್ (OMR) ಶೀಟ್ ಗಳ ತಿದ್ದುವಿಕೆ, ಅಂಕಗಳ ಗೋಲ್ ಮಾಲ್ ಹಾಗೂ ಹಣದ ವಹಿವಾಟು ನಡೆದಿರುವ ಗಂಭೀರ ಆರೋಪಗಳಿವೆ. ಇ.ಡಿ. (ಜಾರಿ ನಿರ್ದೇಶನಾಲಯ) ದಾಳಿ:…
ಬೀದರ್: ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಡಾ. ಗಿರೀಶ ದಿಲೀಪ ಬದೋಲೆ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಶುಕ್ರವಾರ ಆದೇಶ ಹೊರಡಿಸಿದೆ. ಗಿರೀಶ ಬದೋಲೆ ಅವರು 2023ರ ಡಿಸೆಂಬರ್ ನಲ್ಲಿ ಬೀದರ್ ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕಗೊಂಡಿದ್ದರು. ಅವರ ತೆರವಾದ ಜಾಗಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿತ್ತೆ ಮಾಧವ ವಿಠಲರಾವ್ ಅವರನ್ನು ಬೀದರ್ ಜಿಲ್ಲಾ ಪಂಚಾಯತ್‌ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ವರದಿ: ಅರವಿಂದ ಮಲ್ಲೀಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ಹೊಳೆನರಸೀಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಮಹಿಳೆಯರು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ್ ಕರೆ ನೀಡಿದ್ದಾರೆ. ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿಯ ನಗರನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಮಹಿಳೆಯರು ಆರ್ಥಿಕವಾಗಿ ಸದೃಢರಾದಾಗ ಮಾತ್ರ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಸಮಿತಿ ಸದಸ್ಯ ಹೆಚ್.ಆರ್. ಪ್ರಸನ್ನಕುಮಾರ್ ಮಾತನಾಡಿ, ನುಡಿದಂತೆ ನಡೆದ ಸರ್ಕಾರ ಯಾವುದಾದರೂ ಇದ್ದರೆ ಅದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವಾಗಿದ್ದು, ಯೋಜನೆಗಳನ್ನು ಸಾಕಾರಗೊಳಿಸುವಲ್ಲಿ ಸರ್ಕಾರ ಸದಾ ಬದ್ಧವಾಗಿದೆ ಎಂದರು. ಅಲ್ಲದೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ಬರುವ ಹಣವನ್ನು ಕೇವಲ ದೈನಂದಿನ…
ಯಾದಗಿರಿ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ ವಿವಿಧ ದರ್ಜೆಯ 24 ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿರುವ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 24 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ 9 ಪ್ರೊಸೆಸ್ ಸರ್ವರ್, 5 ಪ್ಯೂನ್, 5 ಟೈಪಿಸ್ಟ್ ಹಾಗೂ 4 ಟೈಪಿಸ್ಟ್–ಕಾಪಿಸ್ಟ್ ಹುದ್ದೆಗಳು ಸೇರಿವೆ. ಟೈಪಿಸ್ಟ್ ಹಾಗೂ ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 31,775 ರಿಂದ 67,600 ರೂ. ವರೆಗೆ ವೇತನ ಸಿಗಲಿದೆ. ಜವಾನ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 27,000 ರಿಂದ 46,675 ರೂ. ವರೆಗೆ ವೇತನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ 12ನೇ ತರಗತಿ ಉತ್ತೀರ್ಣರಾಗಿರಬೇಕು. ಸೆಪ್ಟೆಂಬರ್ 30, 2026 ರಂತೆ…
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಆಕ್ಷನ್ ದೃಶ್ಯಗಳು ಸದ್ಯ ಭಾರೀ ಸಂಚಲನ ಸೃಷ್ಟಿಸುತ್ತಿವೆ. ಅತ್ಯಂತ ಅದ್ಧೂರಿ ಹಾಗೂ ವಿಭಿನ್ನ ಆಕ್ಷನ್ ದೃಶ್ಯಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ಹಾಲಿವುಡ್ ನ ಖ್ಯಾತ ಆಕ್ಷನ್ ಕೊರಿಯೋಗ್ರಾಫರ್ ಜೆಜೆ ಪೆರ್ರಿ (JJ Perry) ಆಕ್ಷನ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ KVN ಪ್ರೊಡಕ್ಷನ್ಸ್ ಬಿಡುಗಡೆ ಮಾಡಿರುವ ಮೇಕಿಂಗ್ ವಿಡಿಯೋವೊಂದರಲ್ಲಿ ಜೆಜೆ ಪೆರ್ರಿ ಅವರು ನಟ ಯಶ್ ಹಾಗೂ ನಿರ್ದೇಶಕಿ ಗೀತೂ ಮೋಹನ್ ದಾಸ್ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸಿನಿಮಾದ ಆಕ್ಷನ್ ಸೀಕ್ವೆನ್ಸ್‌ಗಳ ಬಗ್ಗೆ ಮಾತನಾಡಿರುವ ಜೆಜೆ ಪೆರ್ರಿ, ಸಾಮಾನ್ಯವಾಗಿ ಕೆಲವು ನಿರ್ದೇಶಕರು ಆಕ್ಷನ್ ದೃಶ್ಯಗಳ ವಿಚಾರದಲ್ಲಿ ಹೆಚ್ಚು ತಲೆಹಾಕುವುದಿಲ್ಲ. ಆದರೆ ಗೀತೂ ಮೋಹನ್ ದಾಸ್ ಹಾಗಿರಲಿಲ್ಲ. ಅವರು ಪ್ರತಿಯೊಂದು ವಿಷಯದಲ್ಲೂ ನಮ್ಮೊಂದಿಗೆ ಸಮಾಲೋಚನೆ ನಡೆಸುತ್ತಿದ್ದರು. ನಮಗೆ ಪೂರ್ಣ ಸ್ವಾತಂತ್ರ್ಯ ನೀಡುವುದರ ಜೊತೆಗೆ, ಆಕ್ಷನ್ ದೃಶ್ಯಗಳು ಹೇಗಿರಬೇಕು ಎಂಬುದರ ಸ್ಪಷ್ಟ ದಿಕ್ಕನ್ನು ತೋರಿಸಿದರು. ಯಶ್ ಮತ್ತು ಗೀತೂ ಒಟ್ಟಾಗಿ ಒಂದು ಅತ್ಯುತ್ತಮ…