Author: Ganesh Tumkuru

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಯಾವ ಸ್ಥಾನ ಕೊಡಬೇಕು ಎಂಬುದು ಹೈಕಮಾಂಡ್‌ ಗೆ ಬಿಟ್ಟ ವಿಚಾರವಾಗಿದ್ದು, ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎಂದು ತಿಳಿಸಿದ ಅವರು, ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಮ್ಮೆಲ್ಲರ ಬದ್ಧತೆ ಇರುತ್ತದೆ ಎಂದು ಸ್ಪಷ್ಟಪಡಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಿಡದಿ ಟೌನ್‌ ಶಿಪ್ ನಿರ್ಮಾಣದ ವಿಚಾರವಾಗಿ ಮಾತನಾಡಿ, ಇದನ್ನು ಅವರು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು ಎಂದರು. ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಒಂದಲ್ಲ, 50 ಬಿಡದಿಗಳನ್ನು ಮಾಡಬಹುದು. ಆದರೆ ಅಲ್ಲಿನ ಜನರಿಗೆ ಬೇಡ ಎಂದಾಗ ಬಲವಂತವಾಗಿ ಅದನ್ನು ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ತಿಪಟೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ್ದು, ಸೋಮವಾರ ಕಚೇರಿಗೆ ಬಂದು ಎರಡನೇ ಪಟ್ಟಿಯಲ್ಲಿ ಸೇರಿಸುವುದಾಗಿ ತಿಳಿಸಿದ್ದಾರೆ…

Read More

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಕನಿಕಲಬಂಡೆ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ರೈತರೊಬ್ಬರ ಬೋರ್ವೆಲ್ ಮೋಟಾರ್ ಆನ್ ಮಾಡುತ್ತಿದ್ದಂತೆ ನಾಡ ಬಾಂಬ್ ಸ್ಫೋಟಗೊಂಡಿರುವ ಘಟನೆ ವರದಿಯಾಗಿದೆ. ಅದೃಷ್ಟವಶಾತ್ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ರೈತ ಗಿರಿಯಪ್ಪ ತಮ್ಮ ಜಮೀನಿನಲ್ಲಿ ಬೋರ್ವೆಲ್ ಮೋಟಾರ್ ಆನ್ ಮಾಡಲು ಮುಂದಾಗಿದ್ದಾರೆ. ಸ್ಟಾರ್ಟರ್ ಆನ್ ಮಾಡಿದ ತಕ್ಷಣವೇ ತೀವ್ರ ಸ್ಫೋಟ ಸಂಭವಿಸಿದೆ. ಈ ದೊಡ್ಡ ಅಪಾಯದಿಂದ ಗಿರಿಯಪ್ಪ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡು ಪಂಪ್ ಹೌಸ್ ನ ಮೂಲೆಯಲ್ಲಿ ಪರಿಶೀಲಿಸಿದಾಗ, ಮತ್ತೊಂದು ಜೀವಂತ ನಾಡ ಬಾಂಬ್ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ 3 ತಿಂಗಳ ಹಿಂದೆ ವೆಂಕಟೇಶ್ ಎಂಬಾತ ಜಮೀನಿಗೆ ನುಗ್ಗಿ, “ಈ ಜಮೀನು ನಮಗೆ ಸೇರಿದ್ದು” ಎಂದು ಗಿರಿಯಪ್ಪ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದನು. ಈ ಕುರಿತು ಗಿರಿಯಪ್ಪ ಅವರು ಪಾವಗಡ ಪೊಲೀಸ್ ಠಾಣೆಗೆ ದೂರು ಕೂಡ ದಾಖಲಿಸಿದ್ದರು. ಇದೇ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವೆಂಕಟೇಶ್ ನೇರವಾಗಿ ಬೋರ್ವೆಲ್…

Read More

ತಿಪಟೂರು: ತೀವ್ರ ಮಳೆ ಕೊರತೆಯಿಂದ ಕಂಗಾಲಾಗಿರುವ ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ ರಾಜ್ಯ ಸರ್ಕಾರವನ್ನು ಬಲವಾಗಿ ಒತ್ತಾಯಿಸಿದ್ದಾರೆ. ನಗರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ವರ್ಷ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು ಕೃಷಿ ಚಟುವಟಿಕೆಗಳು ಸಂಪೂರ್ಣ ನೆಲಕಚ್ಚಿವೆ ಎಂದರು. ರಾಜ್ಯಾದ್ಯಂತ ಶೇ. 34ರಷ್ಟು ಮಳೆ ಕೊರತೆ ದಾಖಲಾಗಿದ್ದು 190 ತಾಲೂಕುಗಳು ತೀವ್ರ ಸಂಕಷ್ಟದಲ್ಲಿವೆ. ಮೊದಲ ಹಂತದಲ್ಲಿ ಸರ್ಕಾರ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸುವ ಪ್ರಕ್ರಿಯೆ ನಡೆಸಿದೆ. ತುಮಕೂರು ಜಿಲ್ಲೆಯ ಬಹುತೇಕ ತಾಲೂಕುಗಳನ್ನು ಈ ಪಟ್ಟಿಗೆ ಸೇರಿಸಲಾಗಿದ್ದರೂ, ಭೀಕರ ಬರ ಎದುರಿಸುತ್ತಿರುವ ತಿಪಟೂರು ತಾಲ್ಲೂಕನ್ನು ಅನ್ಯಾಯವಾಗಿ ಕೈಬಿಡಲಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಳೆಯಿಲ್ಲದೆ ಬಿತ್ತನೆ ಸಂಪೂರ್ಣ ವಿಳಂಬವಾಗಿದ್ದು ಈಗಾಗಲೇ ಬಿತ್ತಿದ್ದ ಬೆಳೆಗಳು ಒಣಗಿ ನಿಂತಿವೆ. ತೆಂಗು ಮತ್ತು ರಾಗಿ ಸೇರಿದಂತೆ ಪ್ರಮುಖ ವಾಣಿಜ್ಯ…

Read More

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ–ಜಿ ರಾಮ್‌ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ ಕಾಮಗಾರಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಮಗಾರಿ ಸ್ಥಳದಲ್ಲಿದ್ದ ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದ ಸಚಿವರು, ಸ್ವತಃ ಬುಟ್ಟಿಯಲ್ಲಿ ಮಣ್ಣು ಎತ್ತಿ ಹಾಕಿ ಕೂಲಿ ಕೆಲಸದಲ್ಲಿ ಭಾಗವಹಿಸಿದರು. ವಿಬಿ–ಜಿ ರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಹಲವು ಬದಲಾವಣೆ ಮಾಡಲಾಗಿದೆ ಎಂದರು. ದಿನಗೂಲಿಯನ್ನು ರೂ.370ರಿಂದ ರೂ.382ಕ್ಕೆ ಹೆಚ್ಚಿಸಲಾಗಿದೆ. ವಾರ್ಷಿಕ ಉದ್ಯೋಗ ದಿನಗಳನ್ನು 100ರಿಂದ 125ಕ್ಕೆ ಹಾಗೂ ಕಾಮಗಾರಿಗಳ ಸಂಖ್ಯೆಯನ್ನು 318ಕ್ಕೆ ಹೆಚ್ಚಿಸಲಾಗಿದೆ. ಗ್ರಾಮೀಣ ಕೂಲಿಕಾರ್ಮಿಕರು ಇದರ ಸೌಲಭ್ಯ ಪಡೆಯಬೇಕು ಎಂದು ತಿಳಿಸಿದರು. ಜುಲೈ 1ರಿಂದ ಜಾರಿಗೆ ಬಂದಿರುವ ವಿಬಿ–ಜಿ ರಾಮ್‌ಜಿ ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ 60:40 ಅನುಪಾತದಲ್ಲಿ ಅನುಷ್ಠಾನಗೊಳ್ಳುತ್ತಿದೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಅರ್ಹ ಕೂಲಿಕಾರ್ಮಿಕನಿಗೂ ಕೆಲಸ ನೀಡಿ, ಉದ್ಯೋಗಕ್ಕಾಗಿ ಯಾರೂ ಗುಳೆ ಹೋಗದಂತೆ ಗ್ರಾಮದಲ್ಲಿಯೇ ಕೆಲಸ…

Read More

ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂಬ ಸಮಾಧಾನಕರ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗದ ಗುರುಶಾಂತೇಶ್ವರ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ವತಿಯಿಂದ ಈ ಆರು ಮಂದಿ ಪ್ರವಾಸಕ್ಕೆ ತೆರಳಿದ್ದರು. ಬೆಂಗಳೂರಿನಿಂದ ವಿಮಾನದ ಮೂಲಕ ಉತ್ತರ ಪ್ರದೇಶದ ಗೋರಖ್‌ಪುರ ತಲುಪಿದ್ದ ಈ ತಂಡ, ಅಲ್ಲಿಂದ ಟೂರ್ ಪ್ಯಾಕೇಜ್ ಮೂಲಕ ಬಸ್‌ನಲ್ಲಿ ನೇಪಾಳಕ್ಕೆ ಪ್ರಯಾಣ ಬೆಳೆಸಿತ್ತು. ಈ ತಂಡದಲ್ಲಿ ಹೊಸನಗರದ ಇಬ್ಬರು, ಭದ್ರಾವತಿಯ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಸೇರಿ ಒಟ್ಟು 6 ಜನರಿದ್ದರು. ನೇಪಾಳದಲ್ಲಿ ಪ್ರವಾಹ ಉಂಟಾಗುವ ಮುನ್ನವೇ ಇವರು ಪ್ರಮುಖ ಸ್ಥಳಗಳನ್ನು ವೀಕ್ಷಿಸಿದ್ದರು. ತಂಡವು ನೇಪಾಳದ ಲುಂಬಿನಿ ಸೇರಿದಂತೆ ಇತರೆ ಪ್ರವಾಸಿ ತಾಣಗಳನ್ನು ಮುಗಿಸಿ ಮುಂದಿನ ಸ್ಥಳಕ್ಕೆ ಹೊರಡಬೇಕಿತ್ತು. ಆದರೆ, ಪ್ರವಾಹ ಪೀಡಿತ ಸ್ಥಳಕ್ಕೆ ತಲುಪುವ ಸುಮಾರು 5 ಕಿ.ಮೀ ದೂರದಲ್ಲೇ ಅಧಿಕಾರಿಗಳು ಇವರನ್ನು ತಡೆದು ವಾಪಸ್ ಕಳುಹಿಸಿದ್ದಾರೆ. ಈ ಕುರಿತು ಹೊಸನಗರದ ವಕೀಲ ಪ್ರಶಾಂತ್ ‘ಇಟಿವಿ…

Read More

ಬೆಂಗಳೂರು: ರಾಜ್ಯದ ವಸತಿ ರಹಿತರಿಗೆ ಹಾಗೂ ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50,000 ವಸತಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ, ಮುಂಬರುವ ಡಿಸೆಂಬರ್ 31ರ ಒಳಗಾಗಿ ಒಟ್ಟು 5 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಕಂದಾಯ ಇಲಾಖೆ ಸಜ್ಜಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಈ ಮಹತ್ವದ ಘೋಷಣೆ ಮಾಡಿದರು. ಸೆಪ್ಟೆಂಬರ್‌ 15ರೊಳಗೆ ನಿವೇಶನಕ್ಕಾಗಿ ಸೂಕ್ತ ಸರ್ಕಾರಿ ಜಮೀನುಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗುರುತಿಸುವ ಜಮೀನುಗಳಿಗೆ ರಸ್ತೆ ಹಾಗೂ ನೀರಿನ ಸೌಲಭ್ಯವಿರಬೇಕು ಮತ್ತು ಗ್ರಾಮಗಳಿಗೆ ಸಮೀಪವಿರುವ ಜಮೀನುಗಳಿಗೆ ಆದ್ಯತೆ ನೀಡಬೇಕು ಎಂದರು. ನಿವೇಶನ ಹಂಚಿಕೆಯಲ್ಲಿ ಸಮಾಜದ ದುರ್ಬಲ ವರ್ಗಗಳಿಗೆ ಹೆಚ್ಚಿನ ಮುನ್ನೆಲೆ ನೀಡಲಾಗುವುದು. ಪರಿಶಿಷ್ಟ ಜಾತಿ (SC), ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಅಂಗವಿಕಲರು, ವಿಧವೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರಿಗೆ ಆದ್ಯತೆ…

Read More

ಕಠ್ಮಂಡು: ನೇಪಾಳ–ಚೀನಾ ಗಡಿಯಲ್ಲಿ ಸಂಭವಿಸಿದ ಹಿಮಕುಸಿತ ಹಾಗೂ ಭಾರಿ ಪ್ರವಾಹದಿಂದಾಗಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಮತ್ತೊಂದು ಭೀಕರ ಪ್ರವಾಹದ (ಜಲಪ್ರಳಯ) ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರವು ತುರ್ತು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಆದೇಶಿಸಿದ್ದು, ಭದ್ರತಾ ಸಿಬ್ಬಂದಿ ಹಾಗೂ ಸೈನಿಕರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದೆ. ಟಿಬೆಟ್ ಭಾಗದಲ್ಲಿ ನೀರಿನ ತಡೆಗೋಡೆ (ಡೆಬ್ರಿಸ್ ಡ್ಯಾಮ್) ಒಡೆದುಹೋಗಿರುವ ಮಾಹಿತಿ ಲಭ್ಯವಾಗಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿಗೂ ಹೊಸ ಅಪಾಯ ಎದುರಾಗಿದೆ. ಇದರಿಂದಾಗಿ ತುರ್ತು ಕಾರ್ಯಾಚರಣೆ ತಂಡಗಳನ್ನು ಒಂದು ಕಿಲೋಮೀಟರ್ ಹಿಂದಕ್ಕೆ ಕರೆಸಿಕೊಳ್ಳಲಾಗಿದೆ. ನೇಪಾಳ ಮತ್ತು ಟಿಬೆಟ್‌ ನಲ್ಲಿ ಸಂಭವಿಸಿರುವ ಈ ಸುನಾಮಿಯಂತಹ ನೀರು ಮತ್ತು ಕೆಸರಿನ ಪ್ರವಾಹಕ್ಕೆ ಸಿಲುಕಿ ಈವರೆಗೆ 472ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹಿಮಾಲಯದಲ್ಲಿ ಚಾರಣಕ್ಕೆ ತೆರಳಿದ್ದವರು ಹಾಗೂ ಟಿಬೆಟ್‌ನ ಪವಿತ್ರ ಕೈಲಾಸ ಪರ್ವತಕ್ಕೆ ತೆರಳಿದ್ದ ಹಿಂದೂ ಯಾತ್ರಿಕರು ಸೇರಿದಂತೆ 1,400ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ತ್ರಿಶೂಲಿ–3ಎ ಜಲವಿದ್ಯುತ್‌ ಯೋಜನೆಯ ಸುರಂಗದಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರವು ಕಾಟಾಚಾರಕ್ಕೆ ಹಾಗೂ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ನಾಲ್ಕು ತಿಂಗಳ ಬಳಿಕ ಬರಗಾಲ ಘೋಷಣೆ ಮಾಡಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟವಿರುವ 101 ತಾಲೂಕುಗಳ ಬದಲಾಗಿ ಒಟ್ಟು 175 ತಾಲೂಕುಗಳಲ್ಲಿ ಬರ ಘೋಷಿಸಬೇಕಿತ್ತು. ಆದರೆ ಸರ್ಕಾರದ ಬಳಿ ಹಣದ ಕೊರತೆ ಇರುವುದರಿಂದ ತಾಲೂಕುಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಕಿಡಿಕಾರಿದರು. ಸರ್ಕಾರ ಕೇವಲ 89 ತಾಲೂಕುಗಳಲ್ಲಿ ತೀವ್ರ ಹಾಗೂ 12 ತಾಲೂಕುಗಳಲ್ಲಿ ಕಡಿಮೆ ಬರ ಎಂದು ಘೋಷಿಸಿದ್ದು, ಇದು ಸಾಕಾಗುವುದಿಲ್ಲ. ಕೂಡಲೇ 175 ತಾಲೂಕುಗಳನ್ನು ಬರಪೀಡಿತ ಎಂದು ಪರಿಗಣಿಸಬೇಕು ಎಂದು ಒತ್ತಾಯ ಮಾಡಿದರು. ಮುಖ್ಯಮಂತ್ರಿಗಳು ಸಾಲ ಮನ್ನಾ ಬಗ್ಗೆ ಮಾತನಾಡಿ ಎರಡು ತಿಂಗಳು ಕಳೆದಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರತಿ ರೈತನ ಕನಿಷ್ಠ 1 ಲಕ್ಷ ರೂ. ತನಕದ ಸಾಲವನ್ನು ತಕ್ಷಣ ಮನ್ನಾ…

Read More

ಹಳೇಬೀಡು: ತಂದೆ-ತಾಯಿ ಹಾಗೂ ಅಕ್ಕ–ಭಾವನ ಸವಿ ನೆನಪಿಗಾಗಿ ಉದ್ಯಮಿಯೊಬ್ಬರು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ₹20 ಲಕ್ಷ ವೆಚ್ಚದಲ್ಲಿ ನೂತನ ವಾರ್ಡ್ ನಿರ್ಮಿಸಿಕೊಡುವ ಮೂಲಕ ಮಾದರಿ ಸಾಮಾಜಿಕ ಸೇವೆಗೆ ಮುಂದಾಗಿದ್ದಾರೆ. ಹಳೇಬೀಡಿನ ಉದ್ಯಮಿ ಹಾಗೂ ಹಿರಿಯ ಪತ್ರಕರ್ತ ಎಚ್.ಎನ್. ಯೋಗೀಶ್ ಅವರು ತಮ್ಮ ದಿವಂಗತ ತಾಯಿ ಚನ್ನಮ್ಮ, ತಂದೆ ನಂಜೇಗೌಡ (ಚೆನ್ನಳ್ಳಿ ಮೇಷ್ಟ್ರು) ಹಾಗೂ ಅಕ್ಕ ಸರೋಜಮ್ಮ, ಭಾವ ಮಹೇಶ್ವರಪ್ಪ ಅವರ ಸ್ಮರಣಾರ್ಥ ಈ ಕೊಡುಗೆ ನೀಡಿದ್ದಾರೆ. ಆಸ್ಪತ್ರೆ ಕಟ್ಟಡದ ಮೊದಲ ಮಹಡಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿರುವ ಈ ಹೆಚ್ಚುವರಿ ವಾರ್ಡ್‌ ಆಗಸ್ಟ್ 28ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲು ಸಿದ್ಧವಾಗಿದೆ. ನೂತನ ವಾರ್ಡ್‌ನ ವಿಶೇಷತೆಗಳು ಉತ್ತಮ ಗಾಳಿ ಮತ್ತು ಬೆಳಕಿನ ವ್ಯವಸ್ಥೆ ಹೊಂದಿರುವ ವಿಶಾಲ ಬಾಗಿಲುಗಳು, ಸ್ವಚ್ಛ ಶೌಚಾಲಯಗಳು ಹಾಗೂ ಮೊದಲನೇ ಮಹಡಿಗೆ ತೆರಳಲು ಸುಸಜ್ಜಿತ ಮೆಟ್ಟಿಲುಗಳು. ಏಕಕಾಲಕ್ಕೆ 8ರಿಂದ 10 ಒಳರೋಗಿಗಳು (In-patients) ಚಿಕಿತ್ಸೆ ಪಡೆಯಲು ಅವಕಾಶ. ಹಳೇಬೀಡು ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಗ್ರಾಮೀಣ ಭಾಗದ ಕೃಷಿಕರು ಹಾಗೂ ಸಾರ್ವಜನಿಕರಿಗೆ ಅನುಕೂಲ. “ತಂದೆ,…

Read More

ಬೆಂಗಳೂರು: ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಹೇಮಾವತಿ ಜಲಾಶಯ ಯೋಜನೆಯ ‘ನೀರಾವರಿ ಸಲಹಾ ಸಮಿತಿ ಸಭೆ’ಯು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ–319ರಲ್ಲಿ ಜರುಗಿತು. ಈ ಕುರಿತು ಸಂಸದ ಶ್ರೇಯಸ್ ಎಂ. ಪಟೇಲ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸಭೆಯಲ್ಲಿ ಹೇಮಾವತಿ ಜಲಾಶಯದ ಪ್ರಸ್ತುತ ನೀರಿನ ಲಭ್ಯತೆ, ನೀರಾವರಿ ವ್ಯವಸ್ಥೆ, ಜಲಾಶಯದ ನೀರಿನ ಸಮರ್ಪಕ ನಿರ್ವಹಣೆ ಹಾಗೂ ರೈತರಿಗೆ ಒದಗಿಸಬೇಕಾದ ಅಗತ್ಯ ನೀರಾವರಿ ಸೌಲಭ್ಯಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. ಹೇಮಾವತಿ ಜಲಾಶಯದ ನೀರನ್ನು ವೈಜ್ಞಾನಿಕವಾಗಿ ಹಾಗೂ ಸಮರ್ಪಕವಾಗಿ ನಿರ್ವಹಿಸುವ ಮೂಲಕ, ಅಚ್ಚುಕಟ್ಟು ಪ್ರದೇಶದ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ವಿಶೇಷ ಒತ್ತು ನೀಡಲಾಯಿತು. “ರೈತರ ಹಿತಕಾಯುವುದೇ ನಮ್ಮ ಪ್ರಥಮ ಆದ್ಯತೆ, ಜಲಾಶಯದ ನೀರಿನ ಸಮರ್ಪಕ ನಿರ್ವಹಣೆಯೇ ನಮ್ಮ ಸಂಕಲ್ಪ” ಎಂದು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಈ ಮಹತ್ವದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಅವರು ಸೇರಿದಂತೆ…

Read More