Author: Ganesh Tumkuru

ಹೊಳೆನರಸೀಪುರ / ಹಳ್ಳಿಮೈಸೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ಹಳ್ಳಿಮೈಸೂರಿನ ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಅವರು, ಸಮಸ್ಯೆಗಳನ್ನು ತಕ್ಷಣವೇ ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಹಳ್ಳಿಮೈಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಅಭಾವದಿಂದ ರೋಗಿಗಳು ಪರದಾಡುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಸಂಸದರು ಆಸ್ಪತ್ರೆಗೆ ಭೇಟಿ ನೀಡಿದರು. ಅಲ್ಲಿನ ಮೂಲಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದ ನಂತರ, ಸ್ಥಳದಿಂದಲೇ ಹಾಸನ ಜಿಲ್ಲಾ ಆರೋಗ್ಯ ಅಧಿಕಾರಿ (DHO) ಡಾ. ಮನೋಹರ್ ಅವರಿಗೆ ದೂರವಾಣಿ ಕರೆ ಮಾಡಿ ಹಲವು ಸೂಚನೆಗಳನ್ನು ನೀಡಿದರು. ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ನೀಗಿಸಲು ತಕ್ಷಣವೇ ಹೆಚ್ಚುವರಿ ವೈದ್ಯರನ್ನು ನಿಯೋಜಿಸಬೇಕು.  ಹೆರಿಗೆ ವಿಭಾಗಕ್ಕೆ ಪ್ರತ್ಯೇಕ ವೈದ್ಯರನ್ನು ತಕ್ಷಣವೇ ನೇಮಕ ಮಾಡಬೇಕು. ರಾತ್ರಿ ವೇಳೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವೈದ್ಯರು…

Read More

ಹೊಳೆನರಸೀಪುರ: ಇದು ಜನ ವಾಸಿಸುವ ಬಡಾವಣೆಯೋ ಅಥವಾ ಪುಂಡ–ಪೋಕರಿಗಳ ಅಘೋಷಿತ ‘ಓಪನ್ ಬಾರ್’ ಎಂಬ ಅನುಮಾನ ಪಟ್ಟಣದ 17ನೇ ವಾರ್ಡ್‌ನ ಅನ್ವರ್ ಪಾಷ ಲೇಔಟ್ (ಕೋಡಂಗಿ ಕೊಪ್ಪಲು) ನಿವಾಸಿಗಳನ್ನು ತೀವ್ರವಾಗಿ ಕಾಡುತ್ತಿದೆ. ಒಂದೆಡೆ ಸತ್ತ ಪ್ರಾಣಿಗಳ ದುರ್ನಾತ, ಇನ್ನೊಂದೆಡೆ ಕುಡುಕರ ಅಟ್ಟಹಾಸ – ಇವೆಲ್ಲದರ ನಡುವೆ ಪುರಸಭೆ ಹಾಗೂ ಪೊಲೀಸ್ ಇಲಾಖೆ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆಯಲ್ಲೇ ಎಣ್ಣೆ ಪಾರ್ಟಿ, ಬೆದರಿದ ನಿವಾಸಿಗಳು ಸೂರ್ಯ ಮುಳುಗುತ್ತಿದ್ದಂತೆ ಈ ಬಡಾವಣೆಯ ಬೀದಿಗಳು ಹಾಗೂ ಖಾಲಿ ನಿವೇಶನಗಳು ಮದ್ಯಪ್ರಿಯರ ಸಾಮ್ರಾಜ್ಯವಾಗಿ ಬದಲಾಗುತ್ತಿವೆ. ಗುಂಪು ಗುಂಪಾಗಿ ಕುಳಿತು ಮದ್ಯಪಾನ ಮಾಡುವುದು ಮತ್ತು ಕುಡಿದ ಅಮಲಿನಲ್ಲಿ ರಸ್ತೆಯಲ್ಲೇ ಹುಚ್ಚೆದ್ದು ಕುಣಿಯುವುದು ಇಲ್ಲಿ ನಿತ್ಯದ ಕಾಯಕವಾಗಿದೆ. ಕುಡಿತದ ಮತ್ತಿನಲ್ಲಿ ನಡೆಯುವ ಗಲಾಟೆಗಳು ಹಾಗೂ ಹಾರಾಡುವ ಅಶ್ಲೀಲ ಶಬ್ದಗಳಿಂದಾಗಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸಂಜೆಯಾಗುತ್ತಿದ್ದಂತೆ ಮನೆಯಿಂದ ಹೊರಬರಲು ಬೆಚ್ಚಿಬೀಳುವಂತಹ ಭೀಕರ ವಾತಾವರಣ ನಿರ್ಮಾಣವಾಗಿದೆ. ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ! ಬಡಾವಣೆಯಲ್ಲಿ ನಡೆಯುತ್ತಿರುವ ಈ…

Read More

ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕ ಸರ್ಕಾರ ಮುಂದಾಗಿದ್ದು, ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಆರಂಭಿಸಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಕಡಿತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (KSDMA) ಮುನ್ನೆಚ್ಚರಿಕಾ ಕ್ರಮವಾಗಿ ರಕ್ಷಣಾ ಕಾರ್ಯಾಚರಣೆಗೆ ಸಜ್ಜಾಗಿದೆ. ನೇಪಾಳ ಅಥವಾ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ (TAR) ಸಿಲುಕಿಕೊಂಡಿರುವ ಕನ್ನಡಿಗರು ಹಾಗೂ ಅವರ ಕುಟುಂಬಸ್ಥರ ವಿವರಗಳನ್ನು ಕಲೆಹಾಕಲಾಗುತ್ತಿದೆ. ನಿಮ್ಮ ಸಂಬಂಧಿಕರು, ಸ್ನೇಹಿತರು ಅಥವಾ ಪರಿಚಿತರು ಈ ಭಾಗದಲ್ಲಿ ಸಿಲುಕಿಕೊಂಡಿದ್ದರೆ, ಅವರ ವಿವರಗಳನ್ನು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಒದಗಿಸುವಂತೆ ಸಾರ್ವಜನಿಕರಲ್ಲಿ ಸರ್ಕಾರ ಮನವಿ ಮಾಡಿದೆ. ಈ ಮಾಹಿತಿಯನ್ನು ನೀಡಲು ಸರ್ಕಾರ ಗೂಗಲ್‌ ಫಾರ್ಮ್ (Google Form) ಲಿಂಕ್ ಅನ್ನು ಸಹ ಹಂಚಿಕೊಂಡಿದೆ. ಸಹಾಯವಾಣಿ ಮತ್ತು…

Read More

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನೇರಳೂರು ಗ್ರಾಮದಲ್ಲಿ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ. ರೈತ ನಾಗೇಶ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಕೇವಲ ನಾಲ್ಕೈದು ದಿನಗಳ ಪ್ರಾಯದ ನಾಲ್ಕು ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಗದ್ದೆಯಲ್ಲಿ ಮರಿಗಳನ್ನು ಕಂಡ ತಕ್ಷಣ ಎಚ್ಚೆತ್ತ ಸ್ಥಳೀಯರು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಮರಿಗಳ ಸುರಕ್ಷತೆ ಹಾಗೂ ತಾಯಿ ಚಿರತೆಯ ಚಲನವಲನದ ಬಗ್ಗೆ ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಅಲ್ಲದೆ, ತಾಯಿ ಚಿರತೆಯನ್ನು ಸೆರೆಹಿಡಿಯಲು ಬೋನ್ ಅಳವಡಿಸಲು ಇಲಾಖೆ ಮುಂದಾಗಿದೆ ಎಂದು ವರದಿಯಾಗಿದೆ. ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡುಬಂದ ಹಿನ್ನೆಲೆಯಲ್ಲಿ, ತಾಯಿ ಚಿರತೆ ಯಾವಾಗ ಬೇಕಾದರೂ ದಾಳಿ ಮಾಡಬಹುದು ಎಂಬ ಭೀತಿಯಲ್ಲಿ ಗ್ರಾಮಸ್ಥರು ದಿನ ದೂಡುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು: ಶಾಲೆಗಳಲ್ಲಿ ಪರಿಸರ ಸಂರಕ್ಷಣೆ, ಜೀವವೈವಿಧ್ಯ ಹಾಗೂ ಮಕ್ಕಳಲ್ಲಿ ಪರಿಸರ ಕಾಳಜಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ತುಮಕೂರು ವಿಜ್ಞಾನ ಕೇಂದ್ರದಿಂದ ನೀಡಲಾಗುವ 2026–27ನೇ ಸಾಲಿನ ಪರಿಸರ ಪ್ರಶಸ್ತಿಗೆ ಪ್ರಸ್ತಾವನೆ ಸಲ್ಲಿಸುವ ದಿನಾಂಕವನ್ನು ಮುಂದೂಡಲಾಗಿದೆ. ಶಾಲೆಗಳಲ್ಲಿ ಉತ್ತಮ ಪರಿಸರ ನಿರ್ವಹಣೆ, ಮಕ್ಕಳಲ್ಲಿ ಪರಿಸರ ಕಾಳಜಿ, ಜೀವವೈವಿಧ್ಯದ ಅರಿವು ಹಾಗೂ ಪರಿಸರ ಸ್ನೇಹಿ ಹವ್ಯಾಸಗಳನ್ನು ಬೆಳೆಸುವ ಕಾರ್ಯಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಶಾಲೆಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಒಂದು ಶಾಲೆಗೆ ಡಾ. ಟಿ.ಆರ್.ಅನಂತರಾಮು ಪರಿಸರ ಪ್ರಶಸ್ತಿ ಹಾಗೂ ತುಮಕೂರು ಉತ್ತರ ಶೈಕ್ಷಣಿಕ ಜಿಲ್ಲೆಯ ಒಂದು ಶಾಲೆಗೆ ಡಾ. ಟಿ.ಎನ್. ಚಂದ್ರಕಾಂತ್ ಅವರ ಅಜ್ಜಿ ನಾಗಮ್ಮನವರ ಸ್ಮರಣಾರ್ಥ ಪರಿಸರ ಪ್ರಶಸ್ತಿ ನೀಡಲಾಗುತ್ತದೆ. ಅಲ್ಲದೆ, ಕೊರಟಗೆರೆ ಮತ್ತು ಪಾವಗಡ ತಾಲ್ಲೂಕಿನ ಶಾಲೆಗಳಿಗೆ ಡಿ.ಸಿ. ಅರಸಪ್ಪ ಅವರು ಕೊರಟಗೆರೆ ತಾಲ್ಲೂಕಿನ ದುಡ್ಡನಹಳ್ಳಿ ಗ್ರಾಮದ ದಿವಂಗತ ಡಿ.ಸಿ. ಚಿಕ್ಕಣ್ಣ ಮತ್ತು ದಿವಂಗತ ಅರಸಮ್ಮ ಅವರ ಹೆಸರಿನಲ್ಲಿ ಪರಿಸರ ಪ್ರಶಸ್ತಿಗಳನ್ನು ನೀಡಲಿದ್ದಾರೆ.…

Read More

ಹೊಳೆನರಸೀಪುರ: ಪವಿತ್ರ ಈದ್ ಮಿಲಾದ್ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿದ ಹಾಸನ ಸಂಸದ ಶ್ರೇಯಸ್ ಪಟೇಲ್ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು. ಪ್ರವಾದಿ ಹಜರತ್ ಮುಹಮ್ಮದ್ ಪೈಗಂಬರ್ ಅವರ ಜೀವನ ಸಂದೇಶಗಳಾದ ಶಾಂತಿ, ಪ್ರೀತಿ, ಸಹೋದರತ್ವ, ಕರುಣೆ ಮತ್ತು ಮಾನವೀಯತೆ ನಮ್ಮೆಲ್ಲರ ಬದುಕಿಗೆ ಸದಾ ದಾರಿದೀಪವಾಗಲಿ. ಈದ್ ಮಿಲಾದ್ ಹಬ್ಬವು ಸಮಾಜದಲ್ಲಿ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಸಹಬಾಳ್ವೆಯ ಮನೋಭಾವವನ್ನು ಮತ್ತಷ್ಟು ಗಟ್ಟಿಗೊಳಿಸಲಿ. ನಮ್ಮ ನಾಡಿನಲ್ಲಿ ಶಾಂತಿ, ನೆಮ್ಮದಿ ಹಾಗೂ ಏಕತೆ ಸದಾ ನೆಲೆಸಲಿ ಎಂದು ಸಂಸದರು ಹಾರೈಸಿದರು. ಈ ಸಂದರ್ಭದಲ್ಲಿ ಹೊಳೆನರಸೀಪುರ ತಾಲ್ಲೂಕಿನ ಎಲ್ಲಾ ಮುಸ್ಲಿಂ ಬಾಂಧವರು ಹೆಚ್ಚಿನ ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು. ವರದಿ: ಮಂಜುಶ್ರವಣೂರು, ಹೊಳೆನರಸೀಪುರ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

Read More

ತುಮಕೂರು: ಪಾವಗಡ ತಾಲ್ಲೂಕು ಕೃಷಿ ಇಲಾಖೆ ವತಿಯಿಂದ ಕೃಷಿ ಪಂಡಿತ, ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ) ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತ ಮತ್ತು ರೈತ ಮಹಿಳೆಯರು ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ)ಗೆ k-kisan portal®Üw RSK login ಅಥವಾ citizen login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ನಾಗರಿಕ ಸೇವಾ ಕೇಂದ್ರದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ರೈತರ FID(FRUITS ID) ಸಂಖ್ಯೆಯನ್ನು ಬಳಸಿಕೊಂಡು ಆನ್‌ ಲೈನ್ ಮೂಲಕ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದು ಸಲ್ಲಿಸಬಹುದಾಗಿದೆ ಎಂದು ಪಾವಗಡ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

Read More

ಹಾಸನ:  ಹಾಸನ ಜಿಲ್ಲೆಯ ರೈತರ ಪ್ರಮುಖ ಜೀವನಾಧಾರವಾಗಿರುವ ಮುಸುಕಿನ ಜೋಳದ ಬೆಳೆಗೆ ಬಿಳಿಸುಳಿ (Downy Mildew) ರೋಗ ತೀವ್ರವಾಗಿ ವ್ಯಾಪಿಸಿದ್ದು, ಜಿಲ್ಲಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಹಾಕಿದ ಬಂಡವಾಳವೂ ಕೈಸೇರದೆ ಸಾವಿರಾರು ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣವೇ ಪರಿಹಾರ ಒದಗಿಸುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಚಿವ ಶಿವಲಿಂಗೇಗೌಡ ಮನವಿ ಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಮುಸುಕಿನ ಜೋಳವೇ ಬಹುತೇಕ ಸಣ್ಣ ಮತ್ತು ಅತಿ ಸಣ್ಣ ರೈತರ ಪ್ರಮುಖ ಆದಾಯದ ಮೂಲವಾಗಿದೆ. ಆದರೆ, ಕಳೆದ ಕೆಲವು ದಿನಗಳಿಂದ ಬಿಳಿಸುಳಿ ರೋಗದ ತೀವ್ರ ಬಾಧೆಯಿಂದಾಗಿ ಸಾಲು ಸಾಲು ಜೋಳದ ಪೈರುಗಳು ಒಣಗಿ ನಾಶವಾಗುತ್ತಿವೆ. ಕ್ರಿಮಿನಾಶಕ ಸಿಂಪಡಿಸಿದರೂ ರೋಗ ನಿಯಂತ್ರಣಕ್ಕೆ ಬಾರದೆ ಬೆಳೆ ಸಂಪೂರ್ಣ ಕೈಕೊಟ್ಟಿದೆ. ಇದರಿಂದಾಗಿ ಬಿತ್ತನೆ, ಗೊಬ್ಬರ ಹಾಗೂ ಕೂಲಿಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿ ಹೂಡಿಕೆ ಮಾಡಿದ್ದ ರೈತರು ಈಗ ದಾರಿ ಕಾಣದೆ ಕಂಗಾಲಾಗಿದ್ದಾರೆ,  ರೋಗಬಾಧೆ ಹಾಗೂ ಬೆಳೆ ನಷ್ಟದಿಂದ ತೀವ್ರ ಸಂಕಷ್ಟದಲ್ಲಿರುವ ಹಾಸನ ಜಿಲ್ಲೆಯ…

Read More

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ವಿಬಿ-ಜಿ ರಾಮ್ ಜಿ’ (VB–G RAM G) ಯೋಜನೆಯಡಿ ಆಯೋಜಿಸಲಾಗಿದ್ದ ವಿಶೇಷ ಜಾಬ್ ಕಾರ್ಡ್ ಮೇಳಕ್ಕೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಗ್ರಾಮೀಣ ಪ್ರದೇಶದ ಅರ್ಹ ಕೂಲಿಕಾರ್ಮಿಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಮತ್ತು ಹೊಸದಾಗಿ ಜಾಬ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವುದು ಇದರ ಉದ್ದೇಶವಾಗಿದೆ. ಈಗಾಗಲೇ ಇರುವ ಜಾಬ್ ಕಾರ್ಡ್ಗಳ ಪರಿಶೀಲನೆ ಹಾಗೂ ಹೊಸದಾಗಿ ಉದ್ಯೋಗದ ಬೇಡಿಕೆ ಸಲ್ಲಿಸುವ ಕುರಿತು ಗ್ರಾಮಸ್ಥರಿಗೆ ಸಮಗ್ರ ಮಾಹಿತಿ ನೀಡಲಾಯಿತು. ವಿಬಿ–ಜಿ ರಾಮ್ ಜಿ ಯೋಜನೆಯಡಿ ಒಟ್ಟು 318 ವಿವಿಧ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದ್ದು, ಕೂಲಿಕಾರ್ಮಿಕರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಯಿತು. ಯೋಜನೆಯಡಿ ದಿನಗೂಲಿಯನ್ನು ರೂ. 370 ರಿಂದ ರೂ. 382 ಕ್ಕೆ ಏರಿಕೆ ಮಾಡಲಾಗಿದೆ. ವಾರ್ಷಿಕ ಮಾನವ ದಿನಗಳ ಮಿತಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ.  ಒಂದು…

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಆರಂಭಗೊಂಡಿದ್ದು, ಈ ಬಾರಿಯ ದಸರಾ ಉತ್ಸವದಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆಯಾದ ಕಂಬಳವನ್ನು ಆಯೋಜಿಸಲಾಗುತ್ತದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಅಧಿಕೃತವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಆಯಾ ಭಾಗದ ಸಂಸ್ಕೃತಿ ಮತ್ತು ಕ್ರೀಡೆಗಳನ್ನು ಪ್ರದರ್ಶಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಮುಖ್ಯಮಂತ್ರಿಗಳ ನಿರ್ಣಯದಂತೆ ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ಕ್ರೀಡೆ ಜರುಗಲಿದೆ ಎಂದು ಅವರು ಪುನರುಚ್ಚರಿಸಿದರು. ಇದೇ ವೇಳೆ, ಈ ಬಾರಿಯ ದಸರಾ ಮಹೋತ್ಸವದ ಮೊದಲ ಪ್ರಮುಖ ಘಟ್ಟವಾದ ‘ಗಜಪಯಣ’ಕ್ಕೆ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ಹಾಗೂ ಇತರ ಗಣ್ಯರು ವೀರನಹೊಸಹಳ್ಳಿಯಲ್ಲಿ ತುಲಾ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಸಿರು ನಿಶಾನೆ ತೋರಿದರು. ಮೊದಲ ತಂಡದಲ್ಲಿ ಒಟ್ಟು 9 ಆನೆಗಳು ಮೈಸೂರಿನತ್ತ ಪಯಣ ಬೆಳೆಸಿದವು. ಇದೇ…

Read More