Subscribe to Updates
Get the latest creative news from FooBar about art, design and business.
- “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
- ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
- ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
- ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
Author: Ganesh Tumkuru
ಕಿಕ್ಕೇರಿ: ಪಟ್ಟಣದಲ್ಲಿ ಮುಂಬರುವ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಯಿಂದ ಆಚರಿಸುವ ಉದ್ದೇಶದಿಂದ ಕಿಕ್ಕೇರಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಭರ್ಜರಿ ಪಥಸಂಚಲನ ನಡೆಸಿದರು. ಕಿಕ್ಕೇರಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಜಯರಾಮು ಅವರ ನೇತೃತ್ವದಲ್ಲಿ ಈ ಪಥಸಂಚಲನ ನಡೆಯಿತು. ಪಟ್ಟಣದ ಪ್ರಮುಖ ವೃತ್ತಗಳು ಹಾಗೂ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಜ್ಜೆಹಾಕುವ ಮೂಲಕ ಸಾರ್ವಜನಿಕರಲ್ಲಿ ಭದ್ರತೆಯ ವಿಶ್ವಾಸ ಮೂಡಿಸಿದರು. ಹಬ್ಬವನ್ನು ವಿವಿಧ ಸಮುದಾಯಗಳ ನಡುವೆ ಪರಸ್ಪರ ಸಾಮರಸ್ಯ, ಪ್ರೀತಿ ಮತ್ತು ಸಹಬಾಳ್ವೆಯಿಂದ ಸಂಭ್ರಮದಿಂದ ಆಚರಿಸುವಂತೆ ವೃತ್ತ ನಿರೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಈ ಪಥಸಂಚಲನದಲ್ಲಿ ಕಿಕ್ಕೇರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ವರದಿ: ಮಂಜು ಶ್ರವಣೂರು, ಹೊಳೆನರಸೀಪುರ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ಅರಕಲಗೂಡು: ತಾಲ್ಲೂಕಿನ ಕೊಣನೂರು ಹೋಬಳಿಯ ಕಟ್ಟೆಪುರ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡು ಜಾನುವಾರುಗಳನ್ನು ತಿಂದುಹಾಕಿರುವ ಘಟನೆ ನಡೆದಿದ್ದು, ಇದರಿಂದ ಗ್ರಾಮದಲ್ಲಿ ತೀವ್ರ ಆತಂಕ ಹಾಗೂ ಭಯದ ವಾತಾವರಣ ನಿರ್ಮಾಣವಾಗಿದೆ. ಕಟ್ಟೆಪುರ ಗ್ರಾಮದ ಕುಂಟೆ ಕಾಳೇಗೌಡರು ಹಾಗೂ ನಾಗಣ್ಣ ಅವರಿಗೆ ಸೇರಿದ ಮೇಕೆಗಳನ್ನು ಚಿರತೆ ತಿಂದುಹಾಕಿದೆ. ಜನವಸತಿ ಪ್ರದೇಶದ ಬಳಿಯೇ ಚಿರತೆ ಸಂಚರಿಸುತ್ತಿರುವುದು ಮತ್ತು ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವುದರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಈ ಕುರಿತು ಮಾಹಿತಿ ಪಡೆದ ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಚಿರತೆಯನ್ನು ಸೆರೆಹಿಡಿಯಲು ಪಂಜರವನ್ನು ಇರಿಸಿದ್ದಾರೆ. ಚಿರತೆಯನ್ನು ಸಂಪೂರ್ಣವಾಗಿ ಬಂಧಿಸುವವರೆಗೆ ಸಾರ್ವಜನಿಕರು ಹಾಗೂ ರೈತರು ಯಾರೂ ಕೂಡ ಚಮನಗುಂಡಿ ದಾಟಿ ಅರಣ್ಯದ ಕಡೆಗೆ ತೆರಳದಂತೆ ಇಲಾಖೆಯವರು ಕಟ್ಟುನಿಟ್ಟಿನ ಮನವಿ ಮಾಡಿದ್ದಾರೆ. ವರದಿ: ಮಂಜು ಶ್ರವಣೂರು, ಹೊಳನರಸೀಪುರ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ಹೊಳೆನರಸೀಪುರ: ಸ್ಥಳೀಯ ಪುರಸಭೆಯಲ್ಲಿ ಶಾಸಕರ ಅಣತಿಯಂತೆ ಕೆಲಸ ಕಾರ್ಯಗಳು ನಡೆಯುವುದು ಹಾಗೂ ಅವರೇ ಸಭೆಯ ಅಜೆಂಡಾಗಳನ್ನು ನಿರ್ಧರಿಸುವುದು ಹೊಳೆನರಸೀಪುರ ಸಾರ್ವಜನಿಕರಿಗೆ ತಿಳಿದಿರುವ ವಿಷಯವೇ ಆಗಿದೆ. ಯಾರೇ ಅಧ್ಯಕ್ಷರಾಗಿದ್ದರೂ ಶಾಸಕರು ನಿಗದಿಪಡಿಸಿದ ದಿನ ಮತ್ತು ವಿಷಯಗಳ ಮೇಲಷ್ಟೇ ಚರ್ಚೆ ನಡೆದು, ಅವರ ಇಷ್ಟದಂತೆ ತೀರ್ಮಾನಗಳು ಹೊರಬೀಳುತ್ತಿದ್ದವು. ಆದರೆ, ಪುರಸಭೆಯ ಆಡಳಿತಾವಧಿ ಮುಗಿದು ಉಪವಿಭಾಗಾಧಿಕಾರಿಗಳು ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಜೆಟ್ ಸಭೆಯನ್ನು ಹೊರತುಪಡಿಸಿ ಯಾವುದೇ ಸಾಮಾನ್ಯ ಸಭೆಗಳು ನಡೆದಿರಲಿಲ್ಲ. ಪಟ್ಟಣದ ಅಭಿವೃದ್ಧಿ ಹಾಗೂ ಹಲವು ಸಮಸ್ಯೆಗಳ ಕುರಿತು ಸಭೆ ಕರೆಯುವಂತೆ ಸಾರ್ವಜನಿಕರು ಮತ್ತು ಮುಖಂಡರು ನಿರಂತರ ಪ್ರಯತ್ನ ನಡೆಸಿದರೂ ಶಾಸಕರು ಲಭ್ಯವಿರಲಿಲ್ಲ ಎನ್ನಲಾಗಿದೆ. ಲೋಕಾಯುಕ್ತ ದೂರು ಮತ್ತು ರಸ್ತೆ ತೆರವು ನಿರ್ಣಯ: ತಾಲೂಕು ಕಚೇರಿಯ ಪೂರ್ವ ಭಾಗದ ಸಾರ್ವಜನಿಕ ರಸ್ತೆಯನ್ನು ನಿಯಮ ಮೀರಿ ಮುಚ್ಚಿರುವ ಕುರಿತು ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಶಾಸಕರ ಆಶಯದಂತೆ ಜಿಲ್ಲಾಧಿಕಾರಿಗಳ ಯಾವುದೇ ಪೂರ್ವ ಅನುಮೋದನೆ ಪಡೆಯದೇ ಈ ರಸ್ತೆಯನ್ನು ಮುಚ್ಚಲಾಗಿತ್ತು ಎಂಬ ಆರೋಪವಿದೆ. ಆದರೆ, ಲೋಕಾಯುಕ್ತದ ಸೂಚನೆಗೆ ಅಧಿಕೃತ…
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ನವ ಕರ್ನಾಟಕ ಸಂಘಟನೆ, ತುಮಕೂರು ಇವರ ಸಹಭಾಗಿತ್ವದಲ್ಲಿ ನಡೆದ ಶಿಬಿರದಲ್ಲಿ ನೂರಾರು ಕಟ್ಟಡ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಕಾರ್ಮಿಕರು ದಿನವಿಡೀ ದುಡಿಮೆಯಲ್ಲಿ ತೊಡಗಿರುವುದರಿಂದ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು. ಆರೋಗ್ಯ ಸಮಸ್ಯೆಗಳು, ದೈಹಿಕ ಆಯಾಸ ಹಾಗೂ ಕೆಲಸದ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ವೈದ್ಯರು ಕಾರ್ಮಿಕರಿಗೆ ಸಲಹೆ ನೀಡಿದರು. ಆರೋಗ್ಯ ಕಾಳಜಿ ಅಗತ್ಯ: ಬ್ಲಾಸೆಮ್ ಹಾಸ್ಪಿಟಲ್ ನ ಡಾ.ಪರೀಕ್ಷಿತ್ ಮಾತನಾಡಿ, ಕಟ್ಟಡ ಕಾರ್ಮಿಕರು ಪ್ರತಿನಿತ್ಯ ಕಷ್ಟಪಟ್ಟು ದುಡಿಯುತ್ತಿದ್ದು, ತಮ್ಮ ಆರೋಗ್ಯದ ಬಗ್ಗೆ ಸಮಯ ನೀಡುವುದು ಬಹಳ ಮುಖ್ಯ. ರಾತ್ರಿ 9…
ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರಿಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತ ಪಡಿಸಿಕೊಳ್ಳುವಂತೆ ವಿನಂತಿಸಲಾಗಿದ್ದು, ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ 12 ಜನ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,559 ಮತದಾರರ ಪತ್ತೆಗಾಗಿ ಸಹಾಯಕ ಮತದಾರರ ನೋದಣಾಧಿಕಾರಿಗನ್ನ ನೇಮಿಸಿದ್ದು, ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ನೋಟಿಸ್ ನೀಡುವಿಕೆ ಹಾಗೂ ವಿಲೇವಾರಿ ಪ್ರಕ್ರಿಯೆ: 24-08-2026 ರಿಂದ 22-10.-2026 ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕೈ ಬಿಟ್ಟಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ನಿಗದಿತ ಅವಧಿಯೊಳಗೆ ಭರ್ತಿ ಮಾಡಿದ ಎನ್ಯೂಮರೇಷನ್ ನಮೂನೆಯನ್ನು ಸಲ್ಲಿಸಲು ಸಾಧ್ಯವಾಗದ ಮತದಾರರು. ಆ. 24. 2026 ರಿಂದ ಸೆ. 23. 2026 ರವರೆಗೆ ಹಕ್ಕು/ ಆಕ್ಷೇಪಣೆಗಳ…
ಹೊಳೆನರಸೀಪುರ: ತಾಲ್ಲೂಕಿನ ತಾತನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ವೈದ್ಯಾಧಿಕಾರಿಗಳಿಲ್ಲದೆ ರೋಗಿಗಳು ದಿನನಿತ್ಯ ಪರದಾಡುವಂತಾಗಿದ್ದು, ಗ್ರಾಮೀಣ ಭಾಗದ ಆರೋಗ್ಯ ಸೇವೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸುಮಾರು 24 ಹಳ್ಳಿಗಳು ಈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಡುತ್ತವೆ. ಸುತ್ತಮುತ್ತಲಿನ ಸಾವಿರಾರು ಗ್ರಾಮಸ್ಥರಿಗೆ ಇದೇ ಪ್ರಮುಖ ಆಸ್ಪತ್ರೆಯಾಗಿದ್ದರೂ, ಇಲ್ಲಿ ಕಾಯಂ ವೈದ್ಯರಿಲ್ಲದೆ ಚಿಕಿತ್ಸೆಗಾಗಿ ಬರುವ ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಬರಿಗೈಯಲ್ಲಿ ವಾಪಸ್ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಿದ್ದರೂ, ವೈದ್ಯರ ಅನುಪಸ್ಥಿತಿಯಿಂದಾಗಿ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ವೈದ್ಯರು ಹಿಂಜರಿಯುತ್ತಿದ್ದು, ಗುತ್ತಿಗೆ ಆಧಾರದ ಮೇಲೆ ಬರುವ ವೈದ್ಯರು ಕೆಲವೇ ದಿನಗಳಲ್ಲಿ ಬೇರೆಡೆ ತೆರಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಇತರೆ ಸಿಬ್ಬಂದಿಯೂ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಗ್ರಾಮಸ್ಥರ ದೂರಿಗೆ ಸ್ಪಂದಿಸಿರುವ ತಾಲ್ಲೂಕು ಆರೋಗ್ಯಾಧಿಕಾರಿ (THO) ಡಾ. ರಾಜೇಶ್ ಅವರು, “ಗುರುವಾರದೊಳಗೆ ಆಸ್ಪತ್ರೆಗೆ ಪರ್ಯಾಯ ವೈದ್ಯರನ್ನು…
ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ (ಟೈಟಲ್) ಹಾಗೂ ಧ್ವನಿಸುರುಳಿಯನ್ನು ಕರ್ಕಿ ಶ್ರೀ ಜ್ಞಾನೇಶ್ವರೀ ಪೀಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರು ಲೋಕಾರ್ಪಣೆಗೊಳಿಸಿ ಆಶೀರ್ವದಿಸಿದರು. ಸಾಗರ ನಗರದ ದೈವಜ್ಞ ಬ್ರಾಹ್ಮಣ ಸಭಾಭವನದಲ್ಲಿ ವೈಭವದಿಂದ ಜರುಗುತ್ತಿರುವ ಶ್ರೀಗಳವರ 41ನೇ ಚಾತುರ್ಮಾಸ್ಯ ವ್ರತಾಚರಣೆಯ ಧಾರ್ಮಿಕ ಮಹೋತ್ಸವದ ಶುಭ ಸಂದರ್ಭದಲ್ಲಿ ಈ ಕಾರ್ಯಕ್ರಮ ನಡೆಯಿತು. ಸಮಾಜದ ಕಲೆ–ಸಂಸ್ಕೃತಿ ಬಿಂಬಿಸುವ ಸಿನಿಮಾ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರು ಚಿತ್ರತಂಡದ ಪ್ರಯತ್ನವನ್ನು ಶ್ಲಾಘಿಸಿ, “ದೈವಜ್ಞ ಬ್ರಾಹ್ಮಣ ಸಮಾಜವು ಕಲೆ, ಕರಕುಶಲತೆ ಮತ್ತು ಧಾರ್ಮಿಕ ಪರಂಪರೆಯಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದೆ. ಇಂತಹ ಶ್ರೀಮಂತ ಇತಿಹಾಸ ಹಾಗೂ ಸಾಂಸ್ಕೃತಿಕ ಬೇರುಗಳನ್ನು ಇಂದಿನ ಯುವ ಪೀಳಿಗೆಗೆ ಸಿನಿಮಾದಂತಹ ದೃಶ್ಯ ಮಾಧ್ಯಮದ ಮೂಲಕ ಪರಿಚಯಿಸುತ್ತಿರುವುದು ಶ್ಲಾಘನೀಯ ಕಾರ್ಯ” ಎಂದು ಶುಭ ಹಾರೈಸಿದರು. ಚಿತ್ರದ ನಾಯಕ ನಟ ಹಾಗೂ ನಿರ್ದೇಶಕರಾದ ಅಜಯಕುಮಾರ್…
ಕುಣಿಗಲ್: ತಾಲೂಕಿನ ಮಾರ್ಕೋನಹಳ್ಳಿ, ಮಂಗಳ ಅಚ್ಚುಕಟ್ಟು ಪ್ರದೇಶದ ರಾಗಿ ಬೆಳೆಗೆ ನೀರು ಹರಿಸಬೇಕೆ ಅಥವಾ ಸಾಲು ಕೆರೆಗಳನ್ನು ತುಂಬಿಸಬೇಕೆ ಎಂಬುದರ ಬಗ್ಗೆ ಜಲಾಶಯದ ಒಳ ಹರಿವು ಹಾಗೂ ಮಳೆ ಪ್ರಮಾಣ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಡಾ. ಎಚ್.ಡಿ. ರಂಗನಾಥ್ ತಿಳಿಸಿದರು. ಅವರು ಭಾನುವಾರ ಮಾರ್ಕೋನಹಳ್ಳಿ ಪ್ರವಾಸಿ ಮಂದಿರ ಬಳಿ ಉಪವಿಭಾಗಾಧಿಕಾರಿ ನಾಹೀದಾ ಜಮ್ ಜಮ್ ಅವರ ಅಧ್ಯಕ್ಷತೆಯಲ್ಲಿ, ಶಾಸಕರ ನೇತೃತ್ವದಲ್ಲಿ ಮಾರ್ಕೋನಹಳ್ಳಿ ಹಾಗೂ ಮಂಗಳ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೂರಾರು ರೈತರೊಂದಿಗೆ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರ ಸಲಹೆ ಪಡೆದು ಮಾತನಾಡಿದರು. ಮಾರ್ಕೋನಹಳ್ಳಿ ಜಲಾಶಯವು 2.4 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಹಾಲಿ 1555 ಎಂಸಿಎಫ್‌ಟಿ ನೀರು ಲಭ್ಯ ಇದೆ. ಇನ್ನೂ 846 ಎಂಸಿಎಫ್‌ಟಿ ನೀರು ಜಲಾಶಯಕ್ಕೆ ತುಂಬಿಸಬೇಕಾಗಿದೆ. ಮಂಗಳ ಜಲಾಶಯ 530 ಎಂಸಿಎಫ್‌ಟಿ ನೀರಿನ ಸಾಮರ್ಥ್ಯ ಹೊಂದಿದೆ. ಜಲಾಶಯದಲ್ಲಿ 197 ಎಂಸಿಎಫ್‌ಟಿ ನೀರು ಇದ್ದು, ಜಲಾಶಯ ತುಂಬಲು 333 ಎಂಸಿಎಫ್‌ಟಿ ನೀರು ಅವಶ್ಯಕತೆ…
ತುಮಕೂರು: ಸಹಕಾರಿ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯವಾಗಿದ್ದು, ಆಡಳಿತ ಪಾರದರ್ಶಕವಾಗಿದ್ದಲ್ಲಿ ಆರ್ಥಿಕ ವಹಿವಾಟು ಸುಗಮವಾಗಿ ಸಹಕಾರಿಯು ಸುಸ್ಥಿರವಾಗಿ ಪ್ರಗತಿಪಥದಲ್ಲಿ ನಡೆಯಲು ಸಾಧ್ಯ ಎಂದು ಶ್ರೀ ದೇವಿ ವಿದ್ಯಾ ಸಂಸ್ಥೆ ಅಧ್ಯಕ್ಷರಾದ ಡಾ. ಎಂ.ಆರ್ ಹುಲಿನಾಯ್ಕರ್ ಸಲಹೆ ನೀಡಿದರು. ಅವರು ಭಾನುವಾರ ನಗರದ ಶಿರಾ ಗೇಟ್ ನ ಕಾಳಿದಾಸ ಪದವಿ ಪೂರ್ವ ಕಾಲೇಜಿನ ಶ್ರೀ ಸಿರಿಯಪ್ಪ ಒಡೆಯರ್ ಸಭಾಂಗಣದಲ್ಲಿ ನಡೆದ ಶ್ರೀ ಕವಿರತ್ನ ಕಾಳಿದಾಸ ಪತ್ತಿನ ಸಹಕಾರ ಸಂಘದ 11 ನೇ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಈ ಸಂಘವು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದ್ದು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿವಿಧ ಸಂಘ ಸಂಸ್ಥೆಗಳ ಮೂಲಕ ಆರ್ಥಿಕ ಭದ್ರತೆ ಹೊಂದಿ ಒಬ್ಬರಿಗೊಬ್ಬರು ಪೂರಕವಾಗಿ ಸಹಾಯಕ ಸಹಕಾರ ನೀಡುವಂತಾಗ ಬೇಕೆಂದರು. ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ರೇವಣ್ಣ ಸಿದ್ದೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಬಂಧುಶೇಖರ್ ಒಡೆಯರು ಮಾತನಾಡಿ ಶೇರುದಾರರು, ಠೇವಣಿದಾರರು ಮತ್ತು ಸಾಲಗಾರರ ಸಕಾಲಿಕ ಮರುಪಾವತಿಯಿಂದ ಕವಿರತ್ನ…
ತುಮಕೂರು: ಸಾಹಿತಿ ಡಾ.ಸುಚೇತನಾ ಸ್ವರೂಪ ಅವರು ರಚಿಸುವ ಕಾದಂಬರಿ ಕಾಡುದೇವರಬೆಟ್ಟ ವಿವಿಧ ಆಯಾಮ, ಪಾತ್ರಗಳ ಮೂಲಕ ಬದುಕಿನ ತಾತ್ವಿಕ ಶೋಧವನ್ನು ಅನಾವರಣಗೊಳಿಸುತ್ತದೆ ಎಂದು ಸಂಸ್ಕೃತಿ ಚಿಂತಕ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದರು. ಅವರು ಲೇಖಕಿಯರ ಸಂಘ ತುಮಕೂರು ಜಿಲ್ಲಾ ಶಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಹಿಳಾ ಅಧ್ಯಯನ ಕೇಂದ್ರ, ಸಾಮಾಜಿಕ ನ್ಯಾಯಪರ ವಿದ್ಯಾರ್ಥಿ ಒಕ್ಕೂಟ ತುಮಕೂರು ವಿವಿ ಇವರ ಸಹಯೋಗದಲ್ಲಿ ಸುಚೇತನಾಸ್ವರೂಪ ಅವರ ಕಾಡುದೇವರಬೆಟ್ಟ ಐದು ಸಂಪುಟಗಳ ಲೋಕಾರ್ಪಣೆ ಕಾದಂಬರಿ ಬಿಡುಗಡೆಗೊಳಿಸಿ ಮಾತನಾಡಿದರು. ಯಾವುದೇ ಕಾದಂಬರಿ ಬೃಹತ್ ಆಗಿರುವುದು ಮುಖ್ಯವಲ್ಲ. ಅದರಲ್ಲಿನ ಮೌಲ್ಯತೆಯೇ ಅಂತಿಮ. ಕಾಡುದೇವರಬೆಟ್ಟ ಕಾದಂಬರಿ ವಿವಿಧ ಪಾತ್ರಗಳ ಮೂಲಕ ಅತೀ ಸಂವಾದಿಯಾಗಿದೆ. ದ್ವೇಷ ಅಸಹನೆಯೇ ಯುದ್ಧ ಸಂಘರ್ಷಕ್ಕೆ ನಾಂದಿ ಎಂಬುದನ್ನು ಕಾದಂಬರಿ ಆರಂಭದಲ್ಲೇ ಹೇಳಲಾಗಿದ್ದು, ಸಾಮರಸ್ಯದ ಸಂದೇಶವನ್ನು ಮಾತಿನ ಮಂಟಪದ ಮೂಲಕ ಅನುಭವ ಮಂಟಪದೆಡೆಗೆ ಕೊಂಡೊಯ್ಯುವ ವಿಶೇಷ ಕಾದಂಬರಿ ಸಂಪುಟವೆನಿಸಿದೆ ಎಂದರು. ಕಾದಂಬರಿಯಲ್ಲಿ ಬರುವ ವಿವಿಧ ಜನವರ್ಗವನ್ನು ಪ್ರತಿನಿಧಿಸುವ ಪಾತ್ರಗಳು ಸೈದ್ಧಾಂತಿಕ ಸಂಘರ್ಷ, ಸಮಯ ಸಾಧಕತನ, ರಾಜಕೀಯ…