Subscribe to Updates
Get the latest creative news from FooBar about art, design and business.
- “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
- ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
- ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
- ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
Author: Ganesh Tumkuru
ತುಮಕೂರು: ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಬಿ ಜಿ ರಾಮ್ ಜಿ ಯೋಜನೆಯಡಿ ಸೆಪ್ಟೆಂಬರ್ 15ರವರೆಗೂ ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಲಾಗುವುದು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲೂಕಿನಾದ್ಯಂತ ಕಾರ್ಡ್ ವಿತರಿಸಲು ಸೆ.15ರವರೆಗೂ ಜಾಬ್ ಕಾರ್ಡ್ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಕುಟುಂಬಗಳು ಈ ಮೇಳದಲ್ಲಿ ಭಾಗವಹಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಜಾಬ್ ಕಾರ್ಡ್ ಹೊಂದಿಲ್ಲದ ಅರ್ಹ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ಉದ್ಯೋಗ ಚೀಟಿ ವಿತರಿಸಲಾಗುವುದು. ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ–ಕೆವೈಸಿ ಪ್ರಕ್ರಿಯೆ ಬಾಕಿಯಿರುವವರು ಈ ಮೇಳದಲ್ಲಿ ಇ–ಕೆವೈಸಿ ಪೂರ್ಣಗೊಳಿಸಿಕೊಳ್ಳಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ತುಮಕೂರು: ತುಮಕೂರು ನಗರದ ಭಾಗವಾಗಿರುವ ರೀತಿಯಲ್ಲಿ ಹೆಗ್ಗೇರೆ ಗ್ರಾಮ ಬೆಳವಣಿಗೆಯಾಗುತ್ತಿದೆ. ಹೆಚ್ಚು ಜನ ಇಲ್ಲಿ ಮನೆ ಕಟ್ಟುಕೊಂಡು ವಾಸ ಮಾಡಲು ಆರಂಭಿಸಿದ್ದಾರೆ. ಅವರಿಗೆ ಉತ್ತಮ ರಸ್ತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ, ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಗ್ಗೇರೆಯಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ಕೆ.ಆರ್.ಐ.ಡಿ.ಎಲ್. ಯೋಜನೆಯಡಿ 8 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೆಗ್ಗೇರೆ ಗ್ರಾಮದ ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಉಪ ಮುಖ್ಯಮಂತ್ರಿಗಳು, ವೇಗವಾಗಿ ಬೆಳೆಯುತ್ತಿರುವ ಹೆಗ್ಗೇರೆ ಗ್ರಾಮವನ್ನು ಮಾದರಿಯಾಗಿ ರೂಪಿಸಬೇಕು. ಉತ್ತಮ ರಸ್ತೆಗಳ ನಿರ್ಮಾಣ, ಮತ್ತಿತರ ಸೌಕರ್ಯ, ಹೇಮಾವತಿ, ಎತ್ತಿನಹೊಳೆ ಯೋಜನೆಗಳಿಂದ ಕುಡಿಯುವ ನೀರು ಕೊಡಲು ಅವಕಾಶವಿದೆ ಎಂದು ಹೇಳಿದರು. ಈ ಭಾಗದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಅನುದಾನ ಕೋರಿದ್ದೆ. ಈ ಮಧ್ಯೆ ಕೇಂದ್ರ ಸಚಿವ…
ಬೆಂಗಳೂರು: ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ಪ್ರಮುಖ ಉದ್ಯಮಿ ಗೌತಮ್ ಅದಾನಿ (Gautam Adani) ಅವರು ಸದಾಶಿವನಗರದಲ್ಲಿರುವ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯ ಹಾಗೂ ಉದ್ಯಮ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಗೆ ಭೇಟಿ ನೀಡಿದ್ದ ಗೌತಮ್ ಅದಾನಿ, ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ತೆರಳುವ ಮಾರ್ಗಮಧ್ಯೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದರು. ಈ ವೇಳೆ ರಾಜ್ಯದಲ್ಲಿನ ಉದ್ಯಮ ಅವಕಾಶಗಳ ಜೊತೆಗೆ, ಬೆಂಗಳೂರಿನ ಬಹುನಿರೀಕ್ಷಿತ ಸುರಂಗ ರಸ್ತೆ ಯೋಜನೆ (Bengaluru Tunnel Road) ಟೆಂಡರ್‌ಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಒಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೌತಮ್ ಅದಾನಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧವನ್ನು ತೀವ್ರವಾಗಿ ಟೀಕಿಸುತ್ತಿದ್ದರೆ, ಇನ್ನೊಂದೆಡೆ ಕರ್ನಾಟಕದ ಕಾಂಗ್ರೆಸ್ ಮುಖ್ಯಮಂತ್ರಿ ಡಿ.ಕೆ.…
ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಸಿಸಿಟಿ (ಕಾಂಟೂರ್ ಟ್ರೆಂಚ್) ಕೆಲಸ ನಿರ್ವಹಿಸುತ್ತಿರುವ ಅಕುಶಲ ಕೂಲಿ ಕಾರ್ಮಿಕರಿಗಾಗಿ ಭಾನುವಾರ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಕಾಮಗಾರಿ ಸ್ಥಳದಲ್ಲೇ ನಡೆದ ಈ ಶಿಬಿರದಲ್ಲಿ ಪುರುಷರು ಮತ್ತು ಮಹಿಳೆಯರು ಸೇರಿದಂತೆ ಒಟ್ಟು 330 ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆ ಹಾಗೂ ಔಷಧಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಹಾಗೂ ಗ್ರಾಮೀಣ ಉದ್ಯೋಗ ಯೋಜನೆಯ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಅವರು, ಕಠಿಣ ದೈಹಿಕ ಶ್ರಮ ವಹಿಸಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಕಾಮಗಾರಿ ಸ್ಥಳದಲ್ಲೇ ಈ ತಪಾಸಣೆ ಹಮ್ಮಿಕೊಳ್ಳಲಾಗಿದೆ ಎಂದರು. ತಾಲೂಕು ಆರೋಗ್ಯಾಧಿಕಾರಿ ಅನೀಲಕುಮಾರ ಎಕಲೂರೆ ಮಾತನಾಡಿ, ಕೂಲಿ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಇದರಿಂದ ಅಧಿಕ ರಕ್ತದೊತ್ತಡ ಹಾಗೂ…
ಸರಗೂರು: ಪಟ್ಟಣದ 11ನೇ ವಾರ್ಡಿನ ಬಿಡಗಲು ಗ್ರಾಮದ ಗೇಟ್‌ನಿಂದ ಬಸವೇಶ್ವರ ದೇವಸ್ಥಾನದವರೆಗೆ ₹30 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಸಿಸಿ ರಸ್ತೆ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ, ನಿರ್ಮಿಸಲಾದ ರಸ್ತೆಯ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಶಾಸಕ ಅನಿಲ್ ಚಿಕ್ಕಮಾದು ಅವರ ಅನುದಾನದಲ್ಲಿ ಕಾಮಗಾರಿಯನ್ನು ಅತ್ಯುತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸಲಾಗಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವುದಕ್ಕೆ ಮುಖಂಡರು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಶಾಸಕ ಅನಿಲ್ ಚಿಕ್ಕಮಾದು ಅವರು ಸರಗೂರು ಹಾಗೂ ಎಚ್.ಡಿ.ಕೋಟೆ ತಾಲೂಕುಗಳನ್ನು ತಮ್ಮ ಎರಡು ಕಣ್ಣುಗಳಂತೆ ಪರಿಗಣಿಸಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಅನುದಾನ ಒದಗಿಸುವುದರ ಜತೆಗೆ ಕಾಡಂಚಿನ ಭಾಗದಲ್ಲಿರುವ ಗ್ರಾಮಗಳ ಪ್ರಗತಿಗೂ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿಕೊಂಡು ಹಂತ ಹಂತವಾಗಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಅಲ್ಲದೆ, ರೈತರು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ…
ತುಮಕೂರು: ನಗರಕ್ಕೆ ನೀರು ಪೂರೈಸುವ ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮಾವತಿ ನದಿ ನೀರು ಎರಡು ದಿನಗಳ ಹಿಂದಿನಿಂದ ಹರಿಯಲಾರಂಭಿಸಿದ್ದು ಶನಿವಾರ ಸಂಜೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಪರಿಶೀಲಿಸಿದರು. ಆ.18 ರಿಂದ ಬುಗುಡನಹಳ್ಳಿ ಜಲ ಸಂಗ್ರಹಾಗಾರಕ್ಕೆ ನೀರು ಹರಿಯುತ್ತಿದ್ದು, ಜಲ ಸಂಗ್ರಹಾಗಾರದಲ್ಲಿ 150 ಎಂಸಿಎಫ್ ಟಿ ಮಾತ್ರ ನೀರು ಉಳಿದು ಡೆಡ್‌ಸ್ಟೋರೇಜ್ ತಲುಪಿತ್ತು. ಸದ್ಯ 72 ಎಂಸಿಎಫ್ ಟಿ ನೀರು ಹರಿದು ಹಾಲಿ ಸಂಗ್ರಹಾಗಾರದಲ್ಲಿ ನೀರಿನ ಮಟ್ಟ 222 ಎಂಸಿಎಫ್ ಟಿಗೆ ಏರಿಕೆಯಾಗಿದೆ. ಸಂಗ್ರಹಾಗಾರ ಪೂರ್ಣ ತುಂಬಲು 360 ಎಂಸಿಎಫ್ ಟಿ ನೀರು ಅವಶ್ಯಕತೆಯಿದ್ದು, ನಿರಂತರವಾಗಿ ನೀರು ಹರಿದರೆ ಇನ್ನೆರಡು ಮೂರು ದಿನಗಳಲ್ಲಿ ಸಂಗ್ರಹಾಗಾರ ತುಂಬಲಿದೆ ಪಾಲಿಕೆ ಆಯುಕ್ತೆ ಶುಭ ಹಾಗೂ ಇಇ ಸಂದೀಪ್ ಸಚಿವರಿಗೆ ಮಾಹಿತಿ ನೀಡಿದರು. ಈ ಬಾರಿ ಬರಗಾಲದ ಪರಿಸ್ಥಿತಿ ಇರುವುದರಿಂದ ಬುಗುಡನಹಳ್ಳಿ ಕೆರೆಗೆ ಹರಿದುಬರುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಕೃಷಿ ಚಟುವಟಿಕೆಗಳಿಗೆ ಬಳಸಬಾರದೆಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಮನವಿ ಮಾಡಿದರು. ತುಮಕೂರು…
ತುಮಕೂರು: ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿದೆ. ಹಾಗಾಗಿ ಹೈನುಗಾರರ ನೆರವಿಗೆ ತುಮಕೂರು ಹಾಲು ಒಕ್ಕೂಟ ಹಲವಾರು ಕ್ರಮಗಳನ್ನು ಪಶುಪಾಲನೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಕೈಗೊಂಡಿದೆ ಎಂದು ತುಮುಲ್ ನ ನಿರ್ದೇಶಕ ಸಂಜೀವಗೌಡ ತಿಳಿಸಿದ್ದಾರೆ. ನಗರದ ಕಾಲ್ ಟ್ಯಾಕ್ಸ್ ಸರ್ಕಲ್ ನಲ್ಲಿರುವ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ತುಮಕೂರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದ ಅವರು, ಪಶು ಇಲಾಖೆ ಮತ್ತು ಡೈರಿ ಒತ್ತಾಸೆಯ ಫಲವಾಗಿ ತುಮುಲ್‌ಗೆ ಬರುತ್ತಿದ್ದ ಹಾಲಿನ ಸಂಗ್ರಹ ಪ್ರಮಾಣದಲ್ಲಿ ಗಣನೀಯ ಹೆಚ್ಚಳವಾಗಿದೆ. ತುಮಕೂರು ತಾಲೂಕು ಒಂದರಲ್ಲಿಯೇ 1 ಲಕ್ಷ ಲೀಟರ್ ಬರುತ್ತಿದ್ದ ಹಾಲು, ಪ್ರಸ್ತುತ 1.42 ಲಕ್ಷ ಲೀಟರ್‌ಗೆ ಹೆಚ್ಚಳವಾಗಿದೆ. ಬಡ್ಜಿನ ಅಂಶದ ಆಧಾರದಲ್ಲಿ ರೈತರು ಒಂದು ಲೀಟರ್‌ಗೆ ಗರಿಷ್ಠ 50 ರೂ ಪಡೆಯುತ್ತಿದ್ದಾರೆ. ಇದು ಗ್ರಾಮೀಣ ಭಾಗದಲ್ಲಿ ಆರ್ಥಿಕ ಸಬಲೀಕರಣಕ್ಕೆ ಸಹಾಯವಾಗಿದೆ ಎಂದರು.…
ಮಧುಗಿರಿ: ಸೆ.2 ರಂದು ಪದವಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿಬ್ಬಂದಿಗೆ ತಿಳಿಸಿದರು. ಅವರು ಶನಿವಾರ ಕಾಲೇಜಿಗೆ ಭೇಟಿ ನೀಡಿ, ಶೀಘ್ರದಲ್ಲೇ ಪ್ರಾರಂಭಗೊಳ್ಳಲಿರುವ ಶಾಸಕ ಕೆ.ಎನ್. ರಾಜಣ್ಣ ಅವರ ಕನಸಿನ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮೀಣ ಭಾಗದಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಚಿತ ಬಿಸಿ ಊಟ ತಯಾರಿಸುವ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು. ಅಡುಗೆ ತಯಾರಿಕಾ ಕೊಠಡಿ, ಸುರಕ್ಷಿತ ಅನಿಲ ಘಟಕದ ವ್ಯವಸ್ಥೆ, ಭೋಜನ ಶಾಲೆ, ದಸ್ತಾನು ಮಳಿಗೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶುಚಿತ್ವ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಅವರು ಪರಿಶೀಲಿಸಿದರು. ಕಾಲೇಜಿನಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಊಟದ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಊಟದಲ್ಲಿ ಉತ್ತಮ ಗುಣಮಟ್ಟದ ಆಹಾರ ಮತ್ತು ಶುಚಿತ್ವಕ್ಕೆ ಹೆಚ್ಚು ಒತ್ತು ನೀಡುವಂತೆ ಗುಣಮಟ್ಟ ಹಾಗೂ ಶುಚ್ಚತೆಗೆ ಆದ್ಯತೆ ನೀಡಬೇಕು. ಈ…
ತಿಪಟೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಶ್ರೀ ನಾರಾಯಣ ದಾಸ್ ಅವರಿಗೆ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ. (ಡಾಕ್ಟರೇಟ್) ಪದವಿ ಲಭಿಸಿದೆ. ಪ್ರೊಫೆಸರ್ ಕೆ. ನಾಗೇಂದ್ರ ಬಾಬು ಅವರ ಮಾರ್ಗದರ್ಶನದಲ್ಲಿ “ಮಾರ್ಕೆಟಿಂಗ್ ಸ್ಟ್ರಾಟೆಜೀಸ್ ಆಫ್ ಆಯುರ್ವೇದಿಕ್ ಪ್ರಾಡಕ್ಟ್ಸ್ — ಎ ಸ್ಟಡಿ” (Marketing Strategies of Ayurvedic Products — A Study) ಎಂಬ ವಿಷಯದ ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಈ ಉನ್ನತ ಗೌರವ ದೊರೆತಿದೆ. ನಾರಾಯಣ ದಾಸ್ ಅವರ ಈ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ವಿವಿಧ ವಿಭಾಗಗಳ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ಆತ್ಮೀಯವಾಗಿ ಅಭಿನಂದಿಸಿದ್ದಾರೆ. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಖಂಡಿಕೇರಿ ಗ್ರಾಮದ ಹೊಲವೊಂದರಲ್ಲಿ ಯಾವುದೇ ಸರ್ಕಾರಿ ಅನುಮತಿ ಇಲ್ಲದೆ ಕಾನೂನುಬಾಹಿರವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಔರಾದ್–ಬಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ (ಐಪಿಎಸ್) ಅವರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಚಂದ್ರಕಾಂತ ಪೂಜಾರಿ ಹಾಗೂ ಭಾಲ್ಕಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಲ್ಲಪ್ಪ ನಂದಗಾಂವಿ ಅವರ ಮುಂದಾಳತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಔರಾದ್–ಬಿ ವೃತ್ತದ ಸಿಪಿಐ ರಘುವೀರಸಿಂಗ್ ಠಾಕೂರ್ ಅವರ ನೇತೃತ್ವದಲ್ಲಿ ಪಿಎಸ್ ಐ ವಸೀಮ್ ಪಟೇಲ್ ಹಾಗೂ ಪೊಲೀಸ್ ಸಿಬ್ಬಂದಿ ಖಂಡಿಕೇರಿ ಗ್ರಾಮದ ಹೊಲಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ 100 ಹಸಿ ಗಾಂಜಾ ಗಿಡಗಳು ಪತ್ತೆಯಾಗಿವೆ. ನಂತರ ಪತ್ರಾಂಕಿತ ಅಧಿಕಾರಿಯಾಗಿರುವ ಔರಾದ್ ತಹಶೀಲ್ದಾರ್ ಅವರ ಸಮಕ್ಷಮದಲ್ಲಿ ಗಾಂಜಾ ಗಿಡಗಳನ್ನು ಕಿತ್ತು ವಶಕ್ಕೆ ಪಡೆಯಲಾಗಿದ್ದು, ಅವುಗಳ ಒಟ್ಟು ತೂಕ 60 ಕೆ.ಜಿ. 430 ಗ್ರಾಂ ಎಂದು ಅಂದಾಜಿಸಲಾಗಿದೆ. ವಶಪಡಿಸಿಕೊಂಡ…