Subscribe to Updates
Get the latest creative news from FooBar about art, design and business.
- ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
- ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ
- “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
- ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
Author: Ganesh Tumkuru
ತುಮಕೂರು: ಜಿಲ್ಲೆಯ ನಿವಾಸಿಗಳ ದಶಕಗಳ ಕನಸಾದ ‘ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ’ ನನಸಾಗುವ ಹೊಸ್ತಿಲಿಗೆ ಬಂದು ತಲುಪಿದೆ. ಯೋಜನೆಯ ಸುದೀರ್ಘ ಯೋಜನಾ ವರದಿ (DPR) ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮುಂದಿನ ಹಂತದ ಪ್ರಕ್ರಿಯೆಗಳಿಗಾಗಿ ರಾಜ್ಯ ಸರ್ಕಾರವು ಡಿಪಿಆರ್ ಸಹಿತ ಕೇಂದ್ರ ಸರ್ಕಾರಕ್ಕೆ ಅಧಿಕೃತ ಪತ್ರ ಬರೆದಿದೆ. ಪ್ರಸ್ತಾವಿತ ತುಮಕೂರು ಮೆಟ್ರೋ ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿಯ ಮಧ್ಯಭಾಗ (Median) ಹಾಗೂ ಮೇಲ್ಭಾಗದಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಹೆದ್ದಾರಿಯ ಮೇಲ್ಭಾಗದಲ್ಲಿ ಮೆಟ್ರೋ ಪಿಲ್ಲರ್‌ಗಳನ್ನು ನಿರ್ಮಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅನುಮತಿ ಅಗತ್ಯವಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪತ್ರ ಬರೆದಿದೆ. ಈ ಯೋಜನೆಯು ಕೇಂದ್ರ ಸರ್ಕಾರದ ನೇರ ಹಣಕಾಸಿನ ನೆರವನ್ನು ಅವಲಂಬಿಸದೇ ಸಂಪೂರ್ಣವಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (Public-Private Partnership) ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಯೋಜನೆಗೆ ಹೂಡಿಕೆ ಮಾಡುವ ಕಂಪನಿಗಳಿಗೆ ನೆಲಮಂಗಲ, ದಾಬಸ್‌ಪೇಟೆ ಹಾಗೂ ತುಮಕೂರು ಭಾಗಗಳ ಮೆಟ್ರೋ ನಿಲ್ದಾಣಗಳು ಮತ್ತು ಹೆದ್ದಾರಿ ಪಕ್ಕದಲ್ಲಿ ವಾಣಿಜ್ಯ (Commercial) ಚಟುವಟಿಕೆಗಳನ್ನು ನಡೆಸಲು ಜಮೀನು ಒದಗಿಸಲು ನಿರ್ಧರಿಸಲಾಗಿದೆ.…
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಭೀಕರ ಅವಘಡವೊಂದು ಸಂಭವಿಸಿದ್ದು, ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿದು ಬಿದ್ದು ನಾಲ್ವರು ಮಕ್ಕಳು ಹಾಗೂ ಅಂಗನವಾಡಿ ಕಾರ್ಯಕರ್ತೆ ಗಾಯಗೊಂಡಿದ್ದಾರೆ. ಮಕ್ಕಳು ಅಂಗನವಾಡಿ ಕೇಂದ್ರದ ಒಳಗೆ ಕುಳಿತು ಎಂದಿನಂತೆ ಚಟುವಟಿಕೆಗಳಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಛಾವಣಿಯ ಪ್ಲಾಸ್ಟರ್ ಕಳಚಿ ಬಿದ್ದಿದೆ. ಘಟನೆಯಲ್ಲಿ ಶಾನ್ವಿ, ರಿತಿಕಾ, ಜೀವಿಕಾ ಮತ್ತು ದಿಯಾ ಎಂಬ ಮಕ್ಕಳು ಹಾಗೂ ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಗಾಯಗೊಂಡಿದ್ದಾರೆ. ಓರ್ವ ಮಗುವನ್ನು ಒಳರೋಗಿ ವಿಭಾಗಕ್ಕೆ (IPD) ದಾಖಲಿಸಲಾಗಿದ್ದು, ಗಾಯಾಳುಗಳನ್ನೆಲ್ಲಾ ತಕ್ಷಣವೇ ಚಿಕಿತ್ಸೆಗಾಗಿ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಅಂಗನವಾಡಿ ಕಟ್ಟಡವು ಸುಮಾರು 25 ವರ್ಷಗಳಷ್ಟು ಹಳೆಯದಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಹಳೆಯ ಕಟ್ಟಡಗಳ ಸುರಕ್ಷತೆಯ ಬಗ್ಗೆ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ವಿಷಯ ತಿಳಿಯುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು (CDPO) ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಈ…
ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಆರ್ ಎಸ್ ಎಸ್ ನ ಪಾತ್ರವೇನು ಎಂದು ಪ್ರಶ್ನಿಸಿದ್ದಾರೆ. ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಪ್ರಾಣಾರ್ಪಣೆ ಮಾಡಿದ ತಮ್ಮ ಸದಸ್ಯರ ಹೆಸರುಗಳನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ ಅವರು, “ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ 500 ಕಾಂಗ್ರೆಸ್ ಸದಸ್ಯರ ಪಟ್ಟಿಯನ್ನು ನಾನು ನೀಡಬಲ್ಲೆ. ಆರ್‌ಎಸ್‌ಎಸ್ ಅಂತಹ ಕನಿಷ್ಠ 50 ಹೆಸರುಗಳ ಪಟ್ಟಿಯನ್ನಾದರೂ ನೀಡಲಿ” ಎಂದು ಆಗ್ರಹಿಸಿದರು. ಆರ್ ಎಸ್ ಎಸ್ ನೋಂದಾಯಿತ ಸಂಘಟನೆಯಲ್ಲದಿರುವುದರಿಂದ ಅದನ್ನು ಸುಲಭವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಖರ್ಗೆ ಪ್ರತಿಪಾದಿಸಿದರು. “ಅವರನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಬಿ.ಎಲ್. ಸಂತೋಷ್ ಮತ್ತು ಮೋಹನ್ ಭಾಗವತ್ ಹೇಳಿರುವುದು ಸತ್ಯ. ಏಕೆಂದರೆ ಆ ಸಂಘಟನೆ ನೋಂದಣಿಯೇ ಆಗಿಲ್ಲ. ನಿಷೇಧಿಸಬೇಕಾದರೆ ಮೊದಲು ಸಂಘಟನೆ ನೋಂದಣಿಯಾಗಿರಬೇಕಲ್ಲವೇ?” ಎಂದು ಅವರು ಹೇಳಿದರು. ಸಾಮಾಜಿಕ ಜಾಲತಾಣ ‘ಎಕ್ಸ್’ (X) ಮೂಲಕ ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ಸವಾಲೆಸೆದ ಪ್ರಿಯಾಂಕ್…
ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್ ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್‌ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಮೂವರ ಶೂಟೌಟ್ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಸಾವನ್ನಪ್ಪಿದ ಮೂವರನ್ನು ‘ಹವ್ಯಾಸಿ ಬೇಟೆಗಾರರು’ ಎಂದು ಅರಣ್ಯ ಇಲಾಖೆ ಹೇಳುತ್ತಿದ್ದರೆ, ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರು ಈ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಅರಣ್ಯ ಸಿಬ್ಬಂದಿ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ಮೃತ ಆಂಥೋನಿಯ ಪತ್ನಿ ಲೌರ್ಡೆ ಮೇರಿ ಮಾತನಾಡಿ, “ನನ್ನ ಪತಿ ತಮ್ಮ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಕಾಡುಪ್ರಾಣಿಗಳಿಂದ ಕಾಪಾಡಲು ಅಲ್ಲಿಯೇ ಮಲಗಿದ್ದರು. ಅವರನ್ನು ಕೃಷಿ ಭೂಮಿಯಿಂದ ಬಲವಂತವಾಗಿ ಕರೆದೊಯ್ದು ಗುಂಡು ಹಾರಿಸಲಾಗಿದೆ. ಅವರು ತಪ್ಪು ಮಾಡಿದ್ದರೂ ಕೊಲ್ಲಲು ಅಧಿಕಾರ ಕೊಟ್ಟವರು ಯಾರು?” ಎಂದು ಪ್ರಶ್ನಿಸಿದ್ದಾರೆ. ಘಟನಾ ಸ್ಥಳದಿಂದ ತಪ್ಪಿಸಿಕೊಂಡಿರುವ ಮಹಿಮಾ ದಾಸ್ ನೀಡಿರುವ ಮಾಹಿತಿಯಂತೆ, ಅವರು ಬೇಟೆಗೆ ಹೋಗಿರಲಿಲ್ಲ; ಕಾಣೆಯಾಗಿದ್ದ ತಮ್ಮ ದನಗಳನ್ನು ಹುಡುಕಿಕೊಂಡು ಅರಣ್ಯ ಪ್ರದೇಶದತ್ತ ತೆರಳಿದ್ದರು. ಆದರೆ ಅರಣ್ಯ ಸಿಬ್ಬಂದಿ ಅವರನ್ನು ಗುರಿಯಾಗಿಸಿಕೊಂಡು…
ತುಮಕೂರು: ಬೃಹತ್ ಕೈಗಾರಿಕಾ ಪ್ರದೇಶ, ರೈಲ್ವೆ, ಹೆದ್ದಾರಿ ಸಂಪರ್ಕ ಜಾಲ ಹೊಂದಿರುವ ತುಮಕೂರು ಜಿಲ್ಲೆಯಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕೆಂದು ಶೀಘ್ರ ಮುಖ್ಯಮಂತ್ರಿಗಳನ್ನು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಭೇಟಿಯಾಗಿ ಮನವಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಅವರು ಸ್ವಾತಂತ್ರ್ಯ ದಿನಾಚರಣೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 18 ಜಿಲ್ಲೆಗಳ ಪ್ರವೇಶದ್ವಾರವಾಗಿ ಮಧ್ಯಕರ್ನಾಟಕ, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ಸಂಪರ್ಕ ಕೊಂಡಿಯಾಗಿರುವ ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಕೇಂದ್ರ ಸಚಿವ ವಿ.ಸೋಮಣ್ಣ ಅವರು ಈ ಸಂಬಂಧ ವಿಮಾನಯಾನ ಸಚಿವರಿಗೆ ಪತ್ರ ಬರೆದಿದ್ದು, ಸಿಎಂ ಭೇಟಿಯಾಗಿ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸುವಂತೆ ಕೋರಲಾಗುವುದು ಎಂದರು. ತುಮಕೂರಿನವರೆಗೆ ಮೆಟ್ರೋ ಸಂಬಂಧ ಡಿಪಿಆರ್ ಸಂಪೂರ್ಣವಾಗಿದ್ದು, ಪಿಪಿಪಿ ಮಾಡೆಲ್‌ನಲ್ಲಿ ಅನುಷ್ಠಾನಗೊಳಿಸಲಾಗುವುದು. ಹೆದ್ದಾರಿ ಮೀಡಿಯೇಷನ್ ಮೇಲೆ ಮೆಟ್ರೋ ಹಳೆಯ ಪಿಲ್ಲರ್ ಹಳಿ ಬರಬೇಕಿರುವುದರಿಂದ ಕೇಂದ್ರದ ಹೆದ್ದಾರಿ ಪ್ರಾಧಿಕಾರ ದ ಅನುಮತಿ ಅಗತ್ಯ. 20 ಸಾವಿರ ಕೋಟಿಗೂ ಅಧಿಕ ಹಣ ಮೆಟ್ರೋಗೆ ವೆಚ್ಚರಾಗಿದ್ದು, ಬಂಡವಾಳ ಹೂಡುವ ಸಂಸ್ಥೆಗಳಿಗೆ…
ತಿಪಟೂರು: ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸರ್ಕಾರಿ ಕಾರ್ಯಕ್ರಮ ಎಂದು ಪರಿಗಣಿಸದೆ, ನಮ್ಮೆಲ್ಲರ ಹಬ್ಬವೆಂದು ಭಾವಿಸಿ ಆಚರಿಸಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಶಿಕುಮಾರ್.ಎಚ್.ಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಲೇಜು ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಸ್ವಾತಂತ್ರ್ಯ ಎಂಬುದು ಕೇವಲ ಮಂತ್ರ, ತಂತ್ರ, ಕುತಂತ್ರದಿಂದ ದೊರೆತದ್ದಲ್ಲ; ಅದು ಹಲವಾರು ಮಹನೀಯರ ತ್ಯಾಗ ಮತ್ತು ಹೋರಾಟದ ಫಲ. ಅವರ ಬಲಿದಾನ ಸಾರ್ಥಕವಾಗಬೇಕೆಂದರೆ, ಪ್ರತಿಯೊಬ್ಬರೂ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಲೆಪ್ಟಿನೆಂಟ್ ಡಾ. ವಿರುಪಾಕ್ಷ.ಜೆ.ಡಿ ಅವರ ನೇತೃತ್ವದಲ್ಲಿ ಎನ್ಸಿಸಿ (NCC) ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ತದನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ದೇಶಪ್ರೇಮ, ರಾಷ್ಟ್ರದ ಏಕತೆ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಬದುಕುವ ಕುರಿತು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು…
ಔರಾದ: ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನಗಳ ಕುರಿತು ವಿದ್ಯಾರ್ಥಿಗಳು ಭಾಷಣ ಮಾಡಿದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಮೂಡಿಬಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಗ್ರಾಮಸ್ಥರ ಹಾಗೂ ಸಾರ್ವಜನಿಕರ ಗಮನ ಸೆಳೆದವು. ಶಾಲೆಯ ಮುಖ್ಯಶಿಕ್ಷಕ ಗುರಯ್ಯ ಸ್ವಾಮಿ ಮಾತನಾಡಿ, “ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ಪ್ರತಿಯೊಬ್ಬರೂ ಸದಾ ಸ್ಮರಿಸಬೇಕು. ದೇಶದ ಏಕತೆ, ಶಾಂತಿ ಹಾಗೂ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕರೂ ತಮ್ಮದೇ ಆದ ಕೊಡುಗೆ ನೀಡಬೇಕು” ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಓಂಕಾರ್ ಮಾತನಾಡಿ, “ಮಹನೀಯರ ತ್ಯಾಗವನ್ನು ಸ್ಮರಿಸುವ ಮೂಲಕ ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ದೇಶಭಕ್ತಿ ಹಾಗೂ ಉತ್ತಮ ನಾಗರಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ” ಎಂದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಬಾಲಾಜಿ, ಲಕ್ಷ್ಮಣ್, ಗ್ರಾಮಸ್ಥರಾದ ಸಂದೀಪ್ ಪಾಟೀಲ್, ಮಲ್ಲಯ್ಯ…
ತುಮಕೂರು: ತುಮಕೂರಿನ ಶ್ರೀ ಸಿದ್ಧಗಂಗಾ ಮಠ ಹಾಗೂ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರದ್ಧೆ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ಮಠದ ಆವರಣದಲ್ಲಿ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಡಾ. ಜಿ. ಪರಮೇಶ್ವರ್, “ಸ್ವಾತಂತ್ರ್ಯ ಬಂದ ಆರಂಭದ ದಿನಗಳಲ್ಲಿ ದೇಶದಲ್ಲಿ ಆಹಾರಕ್ಕೂ ಅಭಾವವಿದ್ದ ಪರಿಸ್ಥಿತಿ ಇತ್ತು. ಆದರೆ ಇಂದು ಶಿಕ್ಷಣ ಕ್ರಾಂತಿ ಹಾಗೂ ಕಠಿಣ ಶ್ರಮದ ಫಲವಾಗಿ ಭಾರತವು ಸ್ವಾವಲಂಬನೆ ಸಾಧಿಸಿ, ಜಗತ್ತಿನ ಬಲಿಷ್ಠ ರಾಷ್ಟ್ರಗಳ ಸಾಲಿನಲ್ಲಿ ನಿಂತಿದೆ. ಆಹಾರ ಉತ್ಪಾದನೆ, ತಂತ್ರಜ್ಞಾನ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿರುವ ಭಾರತ, ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕೆಂಬ ನಮ್ಮ ಪೂರ್ವಜರ ಕನಸು ಇಂದು ನನಸಾಗಿದೆ” ಎಂದರು. ದೇಶದಲ್ಲಿ 35 ವರ್ಷ ವಯೋಮಿತಿಯೊಳಗಿನ ಯುವಜನತೆ ಹೆಚ್ಚಾಗಿದ್ದಾರೆ. ಜಾತಿ, ಧರ್ಮ, ಬಣ್ಣ ಹಾಗೂ ಭಾಷೆಯ ಯಾವುದೇ ತಾರತಮ್ಯವಿಲ್ಲದೆ…
ತುಮಕೂರು: ಜಿಲ್ಲಾ ಪೊಲೀಸ್ ಕಛೇರಿಯ ಮುಂಭಾಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ ಮತ್ತು ಗೌರವಗಳೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಆರೋಹಣ ಮಾಡುವ ಮೂಲಕ ಸ್ವಾತಂತ್ರ್ಯ ದಿನೋತ್ಸವದ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ಧ್ವಜಾರೋಹಣದ ನಂತರ ಸಮಾವೇಶಗೊಂಡಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಡಿಎಆರ್ (DAR) ಪೊಲೀಸ್ ಅಧಿಕಾರಿಗಳು, ನಗರ ಪೊಲೀಸ್ ಘಟಕದ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಲಿಪಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ಲೇಖಕರು: ವಿ.ಎಂ.ಎಸ್.ಗೋಪಿ, ಬೆಂಗಳೂರು ಆಗಸ್ಟ್ 15 ಬಂತೆಂದರೆ ಸಾಕು, ಇಡೀ ದೇಶದಲ್ಲೇ ಹಬ್ಬದ ವಾತಾವರಣ. ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್ ಮತ್ತು ಮಳಿಗೆಗಳು ಶೃಂಗಾರಗೊಂಡು, ರಿಯಾಯಿತಿ ಹಾಗೂ ಆಕರ್ಷಕ ಆಫರ್ ಗಳ ಬ್ಯಾನರ್ ಗಳಿಂದ ಕಂಗೊಳಿಸುತ್ತಿದ್ದರೆ, ಇನ್ನೊಂದೆಡೆ ವರಮಹಾಲಕ್ಷ್ಮಿ ಹಬ್ಬ ಮತ್ತು ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತವು ತನ್ನ ಸ್ವಾತಂತ್ರ್ಯದ ಹಾದಿಯಲ್ಲಿ 79 ವಸಂತಗಳನ್ನು ಪೂರೈಸಿ 80ನೇ ಸ್ವಾತಂತ್ರ್ಯೋತ್ಸವಕ್ಕೆ ಕಾಲಿಡುತ್ತಿರುವ ಈ ಸಂದರ್ಭವು ಪ್ರತಿಯೊಬ್ಬ ಭಾರತೀಯನಿಗೂ ಅತ್ಯಂತ ಹೆಮ್ಮೆಯ ಕ್ಷಣ. ಜಾತಿ, ಮತ, ಧರ್ಮ, ಭಾಷೆ, ಬಡವ–ಶ್ರೀಮಂತ ಎಂಬ ಯಾವುದೇ ಭೇದಭಾವವಿಲ್ಲದೆ ನಾವೆಲ್ಲರೂ ‘ಭಾರತೀಯರು’ ಎಂಬ ಒಗ್ಗಟ್ಟಿನಿಂದ ಆಚರಿಸುವ ದಿನವಿದು. ದೇಶದ ಮೂಲೆಮೂಲೆಯಲ್ಲೂ ದೇಶಭಕ್ತಿಯ ಗೀತೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭಾಷಣಗಳು ನಮ್ಮ ವೈವಿಧ್ಯಮಯ ಪರಂಪರೆಯನ್ನು ಎತ್ತಿಹಿಡಿಯುತ್ತವೆ. ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ಮಹಾನ್ ಹೋರಾಟಗಾರರ ತ್ಯಾಗದ ಫಲವಾಗಿ ಇಂದು ನಾವು ಸ್ವತಂತ್ರ ಭಾರತದಲ್ಲಿದ್ದೇವೆ. ಸ್ವಾತಂತ್ರ್ಯಾನಂತರದ ದಶಕಗಳಲ್ಲಿ ದೇಶವು ಅಪಾರ ಪ್ರಗತಿಯನ್ನು ಸಾಧಿಸಿದೆ: ಗ್ರಾಮೀಣ ಮಟ್ಟದಿಂದ ಹಿಡಿದು ಜಾಗತಿಕ ಮಟ್ಟದವರೆಗೆ…