Subscribe to Updates
Get the latest creative news from FooBar about art, design and business.
- ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
- ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ
- “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
- ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್‌ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
Author: Ganesh Tumkuru
ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ ಹಳೆಯ ಬಾಕಿ ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಉದ್ಯೋಗದಾತರ ಕೇಂದ್ರಿತ ಎರಡು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಲ್ಲಿ ಮೊದಲನೆಯದಾದ ‘ಉದ್ಯೋಗಿಗಳ ನೋಂದಣಿ ಅಭಿಯಾನ (EEC) 2026’ ಜುಲೈ 1 ರಿಂದ ಅಕ್ಟೋಬರ್ 31 ರವರೆಗೆ ಜಾರಿಯಲ್ಲಿದ್ದು, 2009 ರ ಏಪ್ರಿಲ್ 1 ರಿಂದ 2026 ರ ಮಾರ್ಚ್ 31 ರವರೆಗೆ ಇಪಿಎಫ್ ವ್ಯಾಪ್ತಿಯಿಂದ ಹೊರಗುಳಿದಿದ್ದ ಅರ್ಹ ಉದ್ಯೋಗಿಗಳನ್ನು ನೋಂದಾಯಿಸಲು ಒಂದು ವಿಶೇಷ ಅವಕಾಶ ಒದಗಿಸುತ್ತದೆ. ಈ ಅಭಿಯಾನದಡಿ ಉದ್ಯೋಗಿಯ ವೇತನದಿಂದ ಅವರ ಪಾಲಿನ ಕೊಡುಗೆಯನ್ನು ಕಡಿತಗೊಳಿಸದೇ ಇದ್ದರೆ, ಅಂತಹ ಉದ್ಯೋಗಿಯ ಪಾಲಿನ ವಂತಿಗೆಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುತ್ತದೆ. ಉದ್ಯೋಗದಾತರು ಕೇವಲ ತಮ್ಮ ಪಾಲಿನ ವಂತಿಗೆಯನ್ನು ಅನ್ವಯವಾಗುವ ಬಡ್ಡಿ, ಆಡಳಿತಾತ್ಮಕ ಶುಲ್ಕ ಮತ್ತು ನೂರು ರೂಪಾಯಿಗಳ ನಿಗದಿತ ದಂಡದೊಂದಿಗೆ ಪಾವತಿಸಿದರೆ ಸಾಕಾಗುತ್ತದೆ. ಮತ್ತೊಂದೆಡೆ, ಜೂನ್ 29 ರಿಂದ ಆರು ತಿಂಗಳ ಅವಧಿಗೆ…
ಕನ್ನಡ ಚಿತ್ರರಂಗದ ಮೊದಲ ಬಿಗ್ ಬಜೆಟ್ ಹಾಗೂ ಪ್ಯಾನ್ ಇಂಡಿಯಾ ಸಿನಿಮಾ ಎಂದೇ ಪ್ರಸಿದ್ಧಿ ಪಡೆದ ‘ಶಾಂತಿ ಕ್ರಾಂತಿ’ ಚಿತ್ರವನ್ನು ಮತ್ತೆ ಚಿತ್ರಮಂದಿರಗಳಲ್ಲಿ ನೋಡಬೇಕು ಎಂಬುದು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಅಭಿಮಾನಿಗಳ ಆಸೆಯಾಗಿದೆ. ಇದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ‘ಶಾಂತಿ ಕ್ರಾಂತಿ ರಿ-ರಿಲೀಸ್’ ಕ್ಯಾಂಪೇನ್ ಕೂಡ ಜೋರಾಗಿ ನಡೆಯುತ್ತಿದೆ. ಆದರೆ, ಈ ಕುರಿತು ರವಿಚಂದ್ರನ್ ಅವರ ಸಹೋದರ ಬಾಲಾಜಿ ಅವರು ಸ್ಪಷ್ಟನೆ ನೀಡಿದ್ದು, ಹರಡುತ್ತಿರುವ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಬಾಲಾಜಿ ಅವರ ಪ್ರಕಾರ, ಸದ್ಯಕ್ಕೆ ‘ಶಾಂತಿ ಕ್ರಾಂತಿ’ ಸಿನಿಮಾದ ಮೂಲ ನೆಗೆಟಿವ್ (Negative) ಲಭ್ಯವಿಲ್ಲ. ಹಳೆಯ ನೆಗೆಟಿವ್ ಮೆಲ್ಟ್ (ಕರಗಿ) ಆಗಿರುವ ಕಾರಣದಿಂದಾಗಿ, ಉತ್ತಮ ಕ್ವಾಲಿಟಿಯ ಬೇರೆ ಮೂಲಗಳನ್ನು (Source) ಹುಡುಕಲಾಗುತ್ತಿದೆ. ಥಿಯೇಟರ್ ಗಳಲ್ಲಿ ಪ್ರದರ್ಶಿಸಲು ಸೂಕ್ತವಾದ ಕ್ವಾಲಿಟಿ ಪ್ರಿಂಟ್ ಸಿಕ್ಕ ನಂತರವಷ್ಟೇ ಕೆಲಸ ಆರಂಭಿಸಲಾಗುವುದು. ಸೂಕ್ತ ಮೂಲ ಸಿಕ್ಕರೂ ಸಹ, ಆಧುನಿಕ ತಂತ್ರಜ್ಞಾನ ಬಳಸಿ ಥಿಯೇಟರ್ ಗೆ ತರಲು ಕನಿಷ್ಠ 8 ತಿಂಗಳಿಂದ 1 ವರ್ಷ ಸಮಯ ಬೇಕಾಗುತ್ತದೆ. ಅಂದಿನ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ಬಳಿಯ ಅತ್ತಿಸರದಲ್ಲಿ ಕಡಜ ಹುಳ ಕಡಿದು 8 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ. ಮೃತ ಬಾಲಕನನ್ನು ನಿಶ್ಚಿತ್ (8 ವರ್ಷ) ಎಂದು ಗುರುತಿಸಲಾಗಿದೆ. ಈತ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆಯ ಹಿಂಭಾಗದಲ್ಲಿದ್ದ ಬಾಳೆ ಗಿಡದಲ್ಲಿ ಕಡಜದ ಹುಳುವಿನ ಗೂಡಿತ್ತು. ಬಾಲಕ ನಿಶ್ಚಿತ್ ಹಾಗೂ ಆತನ ತಂದೆ ವೆಂಕಟೇಶ್ ಅವರ ಮೇಲೆ ಕಡಜ ಹುಳುಗಳು ಏಕಾಏಕಿ ದಾಳಿ ನಡೆಸಿದ್ದವು. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ತಂದೆ–ಮಗನನ್ನು ತಕ್ಷಣವೇ ಹೆಗ್ಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ನಿಶ್ಚಿತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಪ್ರಸ್ತುತ ತಂದೆ ವೆಂಕಟೇಶ್ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಸರಗೂರು: ಪಟ್ಟಣದ 9ನೇ ವಾರ್ಡಿನ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಕ್ಕಿದ್ದು, ಶಾಸಕ ಅನಿಲ್ ಚಿಕ್ಕಮಾದು ಅವರ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ₹35 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಗಿದೆ. ಕಾಮಗಾರಿ ಆರಂಭಗೊಂಡ ಬೆನ್ನಲ್ಲೇ ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ರಸ್ತೆ ನಿರ್ಮಾಣಕ್ಕೆ ಬಳಸಲಾಗುತ್ತಿರುವ ಸಿಮೆಂಟ್, ಜಲ್ಲಿ ಸೇರಿದಂತೆ ಸಾಮಗ್ರಿಗಳ ಗುಣಮಟ್ಟ, ಕಾಮಗಾರಿಯ ತಾಂತ್ರಿಕ ವಿಧಾನ ಹಾಗೂ ರಸ್ತೆಯ ಅಳತೆಯನ್ನು ಹತ್ತಿರದಿಂದ ವೀಕ್ಷಿಸಿದ ಅವರು, ನಿಯಮಗಳ ಪ್ರಕಾರವೇ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ವೇಳೆ ಮಾತನಾಡಿದ ಪಪಂ ಸದಸ್ಯ ಶ್ರೀನಿವಾಸ, “9ನೇ ವಾರ್ಡಿನಲ್ಲಿ ರಸ್ತೆ ತೀವ್ರವಾಗಿ ಹದಗೆಟ್ಟಿದ್ದರಿಂದ ಸಾರ್ವಜನಿಕರು ಹಾಗೂ ಸವಾರರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದರು. ಅದರಲ್ಲೂ ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಂತು ಸಂಚಾರ ಕಷ್ಟಕರವಾಗುತ್ತಿತ್ತು. ಇದೀಗ ನೂತನ ಸಿಸಿ ರಸ್ತೆ ನಿರ್ಮಾಣದಿಂದ ವಾರ್ಡಿನ ನಿವಾಸಿಗಳ…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಪೊಲೀಸರ ಕಾರ್ಯಾಚರಣೆ ಹಾಗೂ ಇಲಾಖಾ ತನಿಖೆಯಲ್ಲಿ ಹಲವು ಆಘಾತಕಾರಿ ಮತ್ತು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಪ್ರಜ್ವಲ್ ರೇವಣ್ಣ ಜೈಲಿನ ಬ್ಯಾರಕ್ ನಲ್ಲಿ ನಿಷೇಧಿತ ಮೊಬೈಲ್ ಹಾಗೂ ಇತರ ವಸ್ತುಗಳನ್ನು ಬಳಸುತ್ತಿರುವುದು ದೃಢಪಟ್ಟಿದ್ದು, ತನಿಖೆ ತೀವ್ರಗೊಂಡಿದೆ. ತಂದೆ-ತಾಯಿಯ ನಂಬರ್ಗೆ ಕೋಡ್ ನೇಮ್: ಸಿಕ್ಕಿಬಿದ್ದ ಆಂಡ್ರಾಯ್ಡ್ ಮೊಬೈಲ್ನಲ್ಲಿ ಪ್ರಜ್ವಲ್ ರೇವಣ್ಣ ತಮ್ಮ ತಂದೆ ಹೆಚ್.ಡಿ. ರೇವಣ್ಣ ಅವರ ಮೊಬೈಲ್ ಸಂಖ್ಯೆಯನ್ನು ‘ಶಿವ’ ಹಾಗೂ ತಾಯಿ ಭವಾನಿ ರೇವಣ್ಣ ಅವರ ಸಂಖ್ಯೆಯನ್ನು ‘ಪಾರ್ವತಿ’ ಎಂದು ಗೌಪ್ಯವಾಗಿ ಸೇವ್ ಮಾಡಿಕೊಂಡಿರುವುದು ಪತ್ತೆಯಾಗಿದೆ. ಪ್ರಜ್ವಲ್ ಬಳಿಯಿದ್ದ ನೋಟ್ಬುಕ್ನಲ್ಲಿ 40ಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಗಳು, ಆಪ್ತರು ಹಾಗೂ ಅಪರಿಚಿತರ ಫೋನ್ ನಂಬರ್ಗಳನ್ನು ಬರೆದಿಟ್ಟುಕೊಂಡಿರುವುದು ಪತ್ತೆಯಾಗಿದೆ. ಸಿಸಿಬಿ ದಾಳಿ ವೇಳೆ ಹಾಸಿಗೆ ಕೆಳಗೆ ಮೊಬೈಲ್ ಸಿಕ್ಕ ತಕ್ಷಣ, ಪ್ರಜ್ವಲ್ ಅದನ್ನು ‘ನನ್ನದೇ ಮೊಬೈಲ್’…
ಮಹಿಳಾ ಪಿಎಸ್ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
ಬೆಂಗಳೂರು: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಸವಿತಾ ಅವರ ಮೇಲೆ ತಮ್ಮ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಆರತಿ ಉಕ್ಕಡ ದೇವಸ್ಥಾನದಲ್ಲಿ ಭೀಮನ ಅಮಾವಾಸ್ಯೆಯಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಾ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಘಟನೆ ಸಂಬಂಧ ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಸುರೇಶ್ ಗೌಡ, ಭೀಮನ ಅಮಾವಾಸ್ಯೆಯ ದಿನ ತಮ್ಮ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದಳು, ಆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಸಬ್ ಇನ್ ಸ್ಪೆಕ್ಟರ್ ಅವಳನ್ನು ಒಳಗೆ ಬಿಡಲಿಲ್ಲ ಹಾಗೂ ವಿಐಪಿ ಸಾಲಿನಲ್ಲಿ ನಿಂತಿದ್ದಾಗ ಬೇರೆಯವರನ್ನು ಒಳಗಡೆ ಬಿಟ್ಟಿದ್ದರು. ಕ್ರಿಯೆಗೆ ಪ್ರತಿಕ್ರಿಯೆ ಸಹಜವಾಗಿ ಇರುತ್ತದೆ, ಮಾತಿಗೆ ಮಾತು ಬೆಳೆದು ಈ ಅಹಿತಕರ ಘಟನೆ ನಡೆದಿರಬಹುದು ಎಂದ ಅವರು…
ಮಂಡ್ಯ: ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಮೇಲೆ ಶಾಸಕರ ಪುತ್ರಿಯೊಬ್ಬರು ಹಲ್ಲೆ ನಡೆಸಿ, ಕಪಾಳಮೋಕ್ಷ ಮಾಡಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಗ್ರಾಮದಲ್ಲಿ ನಡೆದಿದೆ. ವರದಿಗಳ ಪ್ರಕಾರ, ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದ್ದು, ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ (ಆ.12) ಭೀಮನ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಆರತಿ ಉಕ್ಕಡದ ಪ್ರಸಿದ್ಧ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿದ್ದರು. ಈ ವೇಳೆ ದೇವಸ್ಥಾನಕ್ಕೆ ಆಗಮಿಸಿದ್ದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ, ಪ್ರಭಾವ ಬಳಸಿ ವಿಐಪಿ ಸಾಲಿನಲ್ಲಿ ಪ್ರವೇಶ ಪಡೆದು ನೇರವಾಗಿ ಗರ್ಭಗುಡಿಯೊಳಗೆ ಹೋಗಲು ಯತ್ನಿಸಿದ್ದಾರೆ. ಭದ್ರತಾ ಕರ್ತವ್ಯದಲ್ಲಿದ್ದ ಕ್ಯಾತನಹಳ್ಳಿ ಪೊಲೀಸ್ ಠಾಣೆಯ ಪಿಎಸ್ ಐ ಸವಿತಾ, “ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಈಗ ಯಾರನ್ನೂ ಗರ್ಭಗುಡಿಯೊಳಗೆ ಬಿಡಲು ಸಾಧ್ಯವಿಲ್ಲ”…
ಕೊರಟಗೆರೆ: ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಕಟ್ಟಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಜೆಡಿಎಸ್ ಸರ್ಕಾರ ತರುವುದು ನಮ್ಮ ಮೂಲ ಉದ್ದೇಶ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ಹೇಳಿದರು. ಕೊರಟಗೆರೆಯ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಜೆಡಿಎಸ್ ಮುಖಂಡರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ನಾನು ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದಿದ್ದೆ. ಆದರೆ ಅಲ್ಲಿನ ಉಸಿರುಗಟ್ಟಿಸುವ ವಾತಾವರಣದಿಂದ ಬೇಸತ್ತು, ನನ್ನ ಮಾತೃಪಕ್ಷವಾದ ಜೆಡಿಎಸ್‌ಗೆ ಮರಳಿದ್ದೇನೆ. ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದೇನೆ. ಹಿಂದೆ 15 ವರ್ಷ ಮಾಜಿ ಸಚಿವ ಸಿ. ಚಿನ್ನಿಗಪ್ಪ ಅವರ ಜೊತೆ ಜೆಡಿಎಸ್‌ನಲ್ಲಿ ಕೆಲಸ ಮಾಡಿದಾಗ ಸಿಕ್ಕ ಸಂತೋಷ ಕಾಂಗ್ರೆಸ್‌ನಲ್ಲಿದ್ದಾಗ ಇರಲಿಲ್ಲ.” — ಪಿ.ಎನ್. ಕೃಷ್ಣಮೂರ್ತಿ, ಮಾಜಿ ಜಿ.ಪಂ. ಸದಸ್ಯ ಕೊರಟಗೆರೆ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಗೆ ಮೀಸಲಾತಿ ಇದ್ದರೆ…
ತಿಪಟೂರು: ಇಲ್ಲಿನ ಜಿಲ್ಲಾ ಶಾಖಾ ಗ್ರಂಥಾಲಯದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ‘ಗ್ರಂಥಪಾಲಕರ ದಿನಾಚರಣೆ’ ಹಾಗೂ ಶಾಲಾ ಮಕ್ಕಳಿಗೆ ಗ್ರಂಥಾಲಯ ಅರಿವು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಾಹಿತಿ ಹಾಗೂ ಮುಖ್ಯ ಶಿಕ್ಷಕ ಎಂ. ಸೋಮಶೇಖರ್ ಅವರು, ಗ್ರಂಥಾಲಯದ ಮಹತ್ವ ಮತ್ತು ಪುಸ್ತಕ ಓದಿನಿಂದ ಲಭಿಸುವ ಜ್ಞಾನದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಓದುಗರಿಗೆ ವಿವರವಾಗಿ ತಿಳಿಸಿಕೊಟ್ಟರು. ಸಮಾಜ ಸೇವಕರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಟಿ. ಸಿ. ಗೋವಿಂದರಾಜ್ ಅವರು ಮಕ್ಕಳಿಗೆ ಉಪಯುಕ್ತ ಹಿತವಚನಗಳನ್ನು ಬೋಧಿಸಿದರು. ಇದೇ ಸಂದರ್ಭದಲ್ಲಿ, ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಸಾಹಿತಿ ಹಾಗೂ ಶಿಕ್ಷಣ ಇಲಾಖೆಯ ಹಳೇಪಾಳ್ಯ ಸಿಆರ್ ಪಿ ಎಚ್. ಕೆ. ದಿವಾಕರ್ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ನಳಂದ ಶಾಲೆಯ ಶಿಕ್ಷಕಿ ಭವಾನಿ ಅವರು ಗ್ರಂಥಾಲಯದಲ್ಲಿ ಲಭ್ಯವಿರುವ ವಿವಿಧ ಮಾದರಿಯ ಪುಸ್ತಕಗಳು…
ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಆಗಸ್ಟ್ 14ರಂದು ಬೆಳಿಗ್ಗೆ 11 ಗಂಟೆಗೆ 5 ರಿಂದ 16 ವರ್ಷ ವಯೋಮಾನದ ಮಕ್ಕಳಿಗೆ ಚಿತ್ರಕಲೆ ಹಾಗೂ 5 ರಿಂದ 12 ವರ್ಷದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳ ಪೋಷಕರು ಆಗಸ್ಟ್ 13ರೊಳಗಾಗಿ ಜಿಲ್ಲಾ ಬಾಲಭವನ ಕಚೇರಿ, ಮಹಾತ್ಮ ಗಾಂಧಿ ರಸ್ತೆ, ತುಮಕೂರು ಇಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಚಿತ್ರಕಲೆ ಸ್ಪರ್ಧೆಗೆ 150 ಮಕ್ಕಳು ಮತ್ತು ವೇಷಭೂಷಣ ಸ್ಪರ್ಧೆಗೆ 50 ಮಕ್ಕಳು ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಸರ್ಕಾರಿ ಶಾಲೆ / ಸೌಲಭ್ಯ ವಂಚಿತ / ಗ್ರಾಮೀಣ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI