Subscribe to Updates
Get the latest creative news from FooBar about art, design and business.
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
- ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
- ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
- ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ
- ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ
Author: Ganesh Tumkuru
ತುಮಕೂರು:ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತ ಜಾತಿ ಮತ್ತು ಉಪಜಾತಿಗೆ ಸೇರಿದ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫಲಪೇಕ್ಷಿಗಳು ಬಸವ ಬೆಳಕು( ಹೊಸತು / ನವೀಕರಣ), ವಿದೇಶ ವಿದ್ಯಾ ವಿಕಾಸ(ಹೊಸತು), ಜೀವ ಜಲ, ಕಾಯಕ ಕಿರಣ, ಸ್ವಾವಲಂಬಿ ಸಾರಥಿ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು 2024–25 ಮತ್ತು 2025–26ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಮತ್ತೊಮ್ಮೆ ಮರು ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆಸಕ್ತರು https://www.sevasindhu.karnataka.gov.in ಪೋರ್ಟಲ್ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ / ತುಮಕೂರು ಒನ್ ಸೇವಾ ಕೇಂದ್ರದಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಸೌಲಭ್ಯಕ್ಕಾಗಿ https://www.koushalkar.com.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kvldcl.karnataka.gov.in ಅಥವಾ ಸಹಾಯವಾಣಿ ಸಂಖ್ಯೆ 080–22865522, 9900012351 ಅಥವಾ ಜಿಲ್ಲಾ…
ತುಮಕೂರು: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪ ಜಾತಿಗಳಿಗೆ ಸೇರಿದವರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಸ್ವಯಂ ಉದ್ಯೋಗ ಸಾಲ, ಅರಿವು–ಶೈಕ್ಷಣಿಕ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ / ತುಮಕೂರು ಒನ್ / ಬೆಂಗಳೂರು ಒನ್ ಸೇವಾ ಕೇಂದ್ರದಲ್ಲಿ ಅಕ್ಟೋಬರ್ 1ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.kssd.karnataka.gov.in ಅಥವಾ http://www.kssd.karnataka.gov.in ಮೂಲಕ ಅಥವಾ ಸಹಾಯವಾಣಿ ಸಂಖ್ಯೆ 080-22374832 / 8050770004 / 8050770005 ಅಥವಾ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0816-2005008ನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ತುಮಕೂರು : ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ಒಂದು ಹಸು / ಎಮ್ಮೆ ಸಾಕಾಣಿಕೆಗೆ ಸಹಾಯಧನ ಸೌಲಭ್ಯ ನೀಡಲು ತುಮಕೂರು ಜಿಲ್ಲೆಯ ತಿಪಟೂರು ಮತ್ತು ಗುಬ್ಬಿ ತಾಲ್ಲೂಕಿನ ಗಣಿಬಾಧಿತ/ಪ್ರಭಾವಕ್ಕೊಳಗಾದ 5 ಕಿ.ಮೀ. ವ್ಯಾಪ್ತಿಯ ಗ್ರಾಮಗಳ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಸಾಮಾನ್ಯ ವರ್ಗದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗಣಿ ಬಾಧಿತ/ಪ್ರಭಾವಕ್ಕೊಳಗಾದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಗ್ರಾಮಕ್ಕೆ ಒಳಪಟ್ಟ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಸದಸ್ಯತ್ವ ಹೊಂದಿರುವ ಆಸಕ್ತ ಫಲಾನುಭವಿಗಳು ಆಯಾ ತಾಲ್ಲೂಕಿನ ಸಂಬಂಧಪಟ್ಟ ಗಣಿಬಾಧಿತ ಪ್ರದೇಶದ ವ್ಯಾಪ್ತಿಗೆ ಬರುವ ಪಶುವೈದ್ಯ ಸಂಸ್ಥೆಯವರನ್ನು ಸಂಪರ್ಕಿಸಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 3ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಸ್ಥಳೀಯ ಪಶುವೈದ್ಯಾಧಿಕಾರಿಗಳು ಅಥವಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ)ಗಳಿಂದ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ ಪರಿಹಾರದ ಹಣವನ್ನು ಪಡೆಯಬಹುದಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ತಾಲ್ಲೂಕಿನ ಸಾಸಲು ಗ್ರಾಮದ ಬಳಿಯಲ್ಲಿ ಪಟ್ಟದೇವರಕೆರೆ ಭಾಗದ ನಾಲಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಾಗದ ರೈತರ ಸಹಕಾರದಿಂದ ಇಂದು ಪಟ್ಟದೇವರ ಕೆರೆಗೆ ಹೇಮಾವತಿ ನೀರು ಹರಿಸುವ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ, ಈ ಕಾಮಗಾರಿಯಲ್ಲಿ ಭೂಮಿಯನ್ನು ಕಳೆದು ಕೊಂಡಿರುವಂತಹ ರೈತರು ತಮ್ಮ ದಾಖಲೆಗಳನ್ನು ಸರಿಯಾಗಿ ನೀಡಿದರೆ ಅವರಿಗೆ ಪರಿಹಾರದ ಹಣ ಕೊಡಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು. ರೈತರು ಅತಂಕ ಪಡುವ ಅಗತ್ಯವಿಲ್ಲ ಸಾಧ್ಯವಾದಷ್ಟು ಈ ಕಾಮಗಾರಿಯು ಆದರೆ ಈ ಭಾಗದಿಂದ ಹಾಲ್ಕುರಿಕೆ ಕೆರೆ, ಕುಪ್ಪೂರುಚಿಕ್ಕೆರೆ, ಮಂಚಸಂದ್ರ ಕೆರೆ, ತಮ್ಮಡಿಹಳ್ಳಿಕೆರೆ, ದಾಸಿಹಳ್ಳಿ ಕೆರೆ, ಕುಪ್ಪೂರು ಕೆರೆಗಳಿಗೆ ಹರಿಯಲಿದೆ ಆದ್ದರಿಂದ ರೈತರ ಸಹಕಾರ ಮುಖ್ಯವಾಗಿದೆ ಎಲ್ಲರೂ ಸಹಕಾರ ನೀಡಿದರೆ ಈ ಕಾಮಗಾರಿಯನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರ ಕುಡಿಯುವ ನೀರಿನ…
ಬೆಂಗಳೂರು: ರಾಷ್ಟ್ರೀಯ ಅಹಿಂದ ಸಂಘಟನೆಯ ವತಿಯಿಂದ ಕರ್ನಾಟಕ ರಾಜ್ಯ ಅಹಿಂದ ಬಂಧುಗಳ ಪದಗ್ರಹಣ ಕಾರ್ಯಕ್ರಮವನ್ನು ದಿನಾಂಕ 12.09.2026ರ ಶನಿವಾರ ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಕುಮಾರ ಕೃಪ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಬಂಧುಗಳು, ಹಿಂದುಳಿದ ವರ್ಗಗಳ ಬಂಧುಗಳು, ದಲಿತ ಸಮೂಹ ಹಾಗೂ ಎಸ್.ಸಿ, ಎಸ್.ಟಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಂಧುಗಳು, ಹಾಗೆಯೇ ರಾಜ್ಯ ಸಮಿತಿ, ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿಯ ಎಲ್ಲಾ ಘಟಕಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ರಾಜ್ಯದ ಎಲ್ಲಾ ಅಹಿಂದ ಬಂಧುಗಳು ಸಕಾಲದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಈ ಮಹತ್ವದ ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿ ರಾಷ್ಟ್ರೀಯ ಅಹಿಂದ ಸಂಘಟನೆಯ ಹಾಸನ ಜಿಲ್ಲಾ ಸಂಚಾಲಕರು ಹಾಗೂ ಸಂಗೊಳ್ಳಿ ರಾಯಣ್ಣ ಕುರಿ ಮತ್ತು ಉಣ್ಣೆ ಉತ್ಪಾದಕರ ಸಂಘದ ಸದಸ್ಯರಾದ ಮಂಜು ಶ್ರವಣೂರು (ಮಂಜು ನಾಯಕ್.ಎಸ್.ಸಿ) ಹಾಗೂ ರಾಜ್ಯ ಉಪಾಧ್ಯಕ್ಷರಾದ ದೊಡ್ಡಳ್ಳಿ ಲೋಕೇಶ್ ರವರು ಪತ್ರಿಕಾ ಪ್ರಕಟಣೆ ಮೂಲಕ ಸಮಸ್ತ ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ನಮ್ಮತುಮಕೂರಿನ…
ತುಮಕೂರು : ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರನ್ನು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಬೇಕು ಎಂದು ಆಹಿಂದ ಒಕ್ಕೂಟದ ಜಿಲ್ಲಾಧ್ಯಕ್ಷ ಧನಯಾ ಕುಮಾರ್ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜಣ್ಣ ಅವರು ಜಿಲ್ಲೆಯ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತ ವರ್ಗದವರ ಪರವಾಗಿ ಹಲವು ರೀತಿಯ ಸಹಾಯ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಹಿಂದೆ ಯಾವುದೇ ಕಾರಣವಿಲ್ಲದೆ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿರುವುದು ತುಮಕೂರು ಜಿಲ್ಲೆಗೆ ಮಾಡಿದ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದವರು ಪ್ರತಿಭಟನೆ ನಡೆಸಿದ್ದರೂ ಇದುವರೆಗೂ ಸೂಕ್ತ ನ್ಯಾಯ ದೊರೆತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಮಧುಗಿರಿಯಲ್ಲಿ ಇತ್ತೀಚೆಗೆ ‘ಅಕ್ಷರ ಅಮೃತ’ ಯೋಜನೆಯಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿದಿನ ಸುಮಾರು 1,500 ಮಕ್ಕಳಿಗೆ ಉಚಿತ…
ತಿಪಟೂರು : ತೀವ್ರ ಬಿಸಿಲಿನ ತಾಪಕ್ಕೆ ಬ್ಯಾಟರಿ ಸ್ಫೋಟಗೊಂಡ ಪರಿಣಾಮ, ಬ್ಯಾಟರಿಗಳನ್ನು ಸಾಗಿಸುತ್ತಿದ್ದ ಮಹೇಂದ್ರ ಕಂಪನಿಯ ಸರಕು ಸಾಗಣೆ ವಾಹನ ಹಾಗೂ ದ್ವಿಚಕ್ರ ವಾಹನವೊಂದು ಹೊತ್ತಿ ಉರಿದ ಘಟನೆ ತಾಲ್ಲೂಕಿನ ಹುಳಿಯಾರು ರಸ್ತೆಯ ಗೆದ್ದಲಹಳ್ಳಿ ಗೊಲ್ಲರಹಟ್ಟಿ ಗೇಟ್ ಬಳಿ ನಡೆದಿದೆ. ಬ್ಯಾಟರಿಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿ ಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬ್ಯಾಟರಿಗಳು ಸ್ಫೋಟಗೊಂಡಿವೆ. ಪರಿಣಾಮ ವಾಹನಕ್ಕೆ ಬೆಂಕಿ ವ್ಯಾಪಿಸಿ, ಸಮೀಪದಲ್ಲಿದ್ದ ದ್ವಿಚಕ್ರ ವಾಹನವೂ ಬೆಂಕಿ ಗಾಹುತಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ನಿಖರ ಕಾರಣ ಹಾಗೂ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಕೊರಟಗೆರೆ : ರಾಜ್ಯ ಸರ್ಕಾರದ ಆದೇಶದಂತೆ ಪಡಿತರ ಪಡೆಯಲು ಇ–ಕೆವೈಸಿ ಕಡ್ಡಾಯವಾಗಿದ್ದು, ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಇ–ಕೆವೈಸಿ ಮಾಡಲು ಸಮಸ್ಯೆ ಆಗುತ್ತಿದ್ದು ಅದನ್ನ ಸರಿಪಡಿಸಿ ಎಂದು ನ್ಯಾಯಬೆಲೆ ಅಂಗಡಿ ಮಾಲೀಕರಿಂದ ಗ್ರೇಟ್–2 ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೊರಟಗೆರೆ ತಾಲೂಕಿನಲ್ಲಿ ಒಟ್ಟು 82 ನ್ಯಾಯಬೆಲೆ ಅಂಗಡಿಗಳಿದ್ದು, ಪ್ರತಿ ದಿನ ನೂರಾರು ಪಡಿತರದಾರರು ಪಡಿತರ ಪಡೆಯಲು ಆಗಮಿಸುತ್ತಾರೆ. ಆದರೆ ಪಡಿತರ ವಿತರಣೆಗೆ ಮುನ್ನ ರಾಜ್ಯ ಸರ್ಕಾರದ ಆದೇಶದಂತೆ ಈ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಸರ್ವರ್ ಸಮಸ್ಯೆಯಿಂದಾಗಿ ಅಂಗಡಿಗಳ ಮುಂದೆ ಜನರು ಕೆಲಸ ಕಾರ್ಯ ಬಿಟ್ಟು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಡಿತರ ಅಂಗಡಿಯ ಮಾಲೀಕ ರಮೇಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ರೈತರು ಕೂಲಿ ಕಾರ್ಮಿಕರು ತಮ್ಮ ಕೆಲಗಳನ್ನ ಬಿಟ್ಟು ಇ–ಕೆವೈಸಿ ಮಾಡಿಸಲು ಆಗಮಿಸುತ್ತಾರೆ. ಆದರೆ ಸರ್ವರ್ ಸಮಸ್ಯೆಯಿಂದಾಗಿ ತುಂಬಾ ನಿಧಾನವಾಗಿ ಕೆಲಸ ಮಾಡುತ್ತಿದೆ. ಒಂದು ಕಾರ್ಡ್ನಲ್ಲಿರುವ ನಾಲ್ಕು ಜನ ಸದಸ್ಯರ ಇ–ಕೆವೈಸಿ ಮಾಡಲು ಕೆಲವೊಮ್ಮೆ ಒಂದು ಗಂಟೆಗೂ ಹೆಚ್ಚು ಸಮಯ…
ಸಿರಾ : ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕೊರತೆಗಳು ಜಿಲ್ಲಾಧಿಕಾರಿಯವರ ಗಮನಕ್ಕೆ ಬಂದಿದ್ದು. ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಸಮಸ್ಯೆಯ ಮೂಲವನ್ನು ಪರಿಶೀಲಿಸಿದಾಗ, ಗ್ರಾಮವು ಇನ್ನೂ ಕಂದಾಯ ಗ್ರಾಮವಾಗಿ ಘೋಷಣೆಯಾಗದಿರುವುದೇ ಅಭಿವೃದ್ಧಿ ಕಾರ್ಯಗಳು ಹಾಗೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಲು ಪ್ರಮುಖ ಕಾರಣವೆಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳ ರಚನೆಗೆ ವಿಶೇಷ ಆಂದೋಲನ ಕೈಗೊಳ್ಳಲಾಗಿದೆ. ಈ ಅಭಿಯಾನದಡಿ ಇದುವರೆಗೆ 22,000ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ ಅವರಿಗೆ ಕಾನೂನುಬದ್ಧ ಹಕ್ಕು ಮತ್ತು ಭದ್ರತೆ ಕಲ್ಪಿಸಲಾಗಿದೆ. ಅದರಂತೆ ಮುಂದುವರೆದು ಅಲೆಮಾರಿ ಕುಟುಂಬಗಳಿಗೆ ಹಾಗೂ ಹಕ್ಕಿ-ಪಿಕ್ಕಿ ಕಾಲೋನಿಯ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗಿತ್ತು. ಪ್ರಸ್ತುತ ನಾಲ್ಕನೇ ಹಂತವಾಗಿ ಖಾಸಗಿ ಒಡೆತನದ ಜಮೀನುಗಳಲ್ಲಿ ನಿರ್ಮಿತ ಕೊಳಗೇರಿಗಳಲ್ಲಿ ವಾಸಿಸುತ್ತಿರುವ 2,617 ಕುಟುಂಬಗಳಿಗೆ ಕರ್ನಾಟಕ ಭೂ ಸುಧಾರಣಾ…
ಕೊರಟಗೆರೆ : ದೇವರ ಅಸ್ತಿತ್ವ ಮತ್ತು ಶಕ್ತಿಯನ್ನು ಅರಿಯಬೇಕಾದರೆ ಆಧ್ಯಾತ್ಮಿಕ ಸಾಧನೆಯ ಮೂಲಕ ದೇವರನ್ನು ಅನುಭವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಎಂದು ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪಟ್ಟಣದ ಜಗಜ್ಯೋತಿ ಬಸವೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ನಡೆದ ಕಡೆಯ ಶ್ರಾವಣ ವಿಶೇಷ ಪ್ರವಚನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ದೇವರನ್ನು ಕಣ್ಣಿಂದ ನೋಡಲು ಸಾಧ್ಯವಾಗದಿದ್ದರೂ, ಆಧ್ಯಾತ್ಮಿಕ ಸಾಧನೆಯ ಮೂಲಕ ಅವರ ಅಸ್ತಿತ್ವವನ್ನು ಅನುಭವಿಸಲು ಸಾಧ್ಯ. ಧರ್ಮ ಮತ್ತು ಆಚರಣೆಗಳ ವಿಚಾರದಲ್ಲಿ ಪ್ರಶ್ನಿಸುವ ಮನೋಭಾವ ಇರಬೇಕು. ಆದರೆ ನಂಬಿಕೆಯ ಹೆಸರಿನಲ್ಲಿ ಮೂಢನಂಬಿಕೆಗೆ ಅವಕಾಶ ನೀಡಬಾರದು ಎಂದು ತಿಳಿಸಿದರು. ಇಂದಿನ ಒತ್ತಡದ ಬದುಕಿನಲ್ಲಿ ಆಧ್ಯಾತ್ಮಿಕತೆ ಅತ್ಯವಶ್ಯಕವಾಗಿದೆ. ಜೀವನದ ಕೊನೆಯ ಹಂತದಲ್ಲಿ ಆಧ್ಯಾತ್ಮಿಕ ಸಾಧನೆ ಆರಂಭಿಸುವ ಬದಲು, ದೇಹದಲ್ಲಿ ಶಕ್ತಿ ಮತ್ತು ಮನಸ್ಸಿನಲ್ಲಿ ಚೈತನ್ಯ ಇರುವಾಗಲೇ ಆತ್ಮಶುದ್ಧಿ ಮತ್ತು ಆಧ್ಯಾತ್ಮಿಕ ಚಿಂತನೆಗೆ ಮುಂದಾಗಬೇಕು. ಬದುಕಿನಲ್ಲಿ ನಿಜವಾದ ನೆಮ್ಮದಿ ಮತ್ತು ಆನಂದ ಪಡೆಯಲು ಆಧ್ಯಾತ್ಮಿಕತೆ ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ…