Subscribe to Updates
Get the latest creative news from FooBar about art, design and business.
- ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
- ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ
- “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
- ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
Author: Ganesh Tumkuru
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆಯ ಬೆನ್ನಲ್ಲೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಚುನಾವಣಾ ಆಯೋಗದಿಂದ ಬಿಗ್ ಶಾಕ್ ಎದುರಾಗಿದೆ. ಬೆಂಗಳೂರಿನ ಮತದಾರರ ಪಟ್ಟಿಯಿಂದ ತಮ್ಮ ಹೆಸರು ಕೈಬಿಡಲಾಗಿರುವುದನ್ನು ತಿಳಿದ ನಟ ಪ್ರಕಾಶ್ ರಾಜ್, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಚುನಾವಣಾ ಪ್ರಕ್ರಿಯೆ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ (X) ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟ, “ಸ್ನೇಹಿತರೇ, ನಿಮಗೆ ಒಂದು ಜೋಕ್ ಹೇಳಬೇಕು. ಎಸ್ ಐಆರ್ ಬಳಿಕ ಬೆಂಗಳೂರಿನಲ್ಲಿ ಮತದಾನದ ಹಕ್ಕು ಕಳೆದುಕೊಂಡಿರುವ ಲಕ್ಷಾಂತರ ಮತದಾರರಲ್ಲಿ ನಾನೂ ಒಬ್ಬನಾಗಿದ್ದೇನೆ. ಇದು ನಿಜಕ್ಕೂ ಒಳ್ಳೆಯ ಜೋಕ್, ಈಗ ಆಟ ಶುರುವಾಗಿದೆ!” ಎಂದು ವ್ಯಂಗ್ಯವಾಡಿದ್ದಾರೆ. “ನಾನು ಇದೇ ಕ್ಷೇತ್ರದಲ್ಲಿ ಹುಟ್ಟಿದ್ದೇನೆ, ಇಲ್ಲೇ ಬೆಳೆದಿದ್ದೇನೆ. ನನ್ನ ಶಾಲೆ, ಕಾಲೇಜು ಹಾಗೂ ರಂಗಭೂಮಿ ಪಯಣ ಎಲ್ಲವೂ ಇಲ್ಲೇ ನಡೆದಿದೆ. ನಿಮ್ಮ ಮಾಹಿತಿಗಾಗಿ ಹೇಳುವುದಾದರೆ, ಇದೇ ಕ್ಷೇತ್ರದಿಂದ ನಾನು ಲೋಕಸಭೆ ಅಭ್ಯರ್ಥಿಯಾಗಿಯೂ…
ಮಧುಗಿರಿ: ತಾಲ್ಲೂಕಿನಲ್ಲಿ ಮಳೆ ಕೊರತೆ ಎದುರಾಗಿರುವುದರಿಂದ ಭವಿಷ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಈ ಸಮಸ್ಯೆ ತೀವ್ರಗೊಳ್ಳುವ ಮುನ್ನವೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗೃಹ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಮಿಡಿಗೇಶಿ ಹೋಬಳಿಯ ಅವರಗಲ್ಲು ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ರೈತರ ಜಮೀನುಗಳಿಗೆ ತೆರಳಿ ವಿವಿಧ ಬೆಳೆಗಳ ಸ್ಥಿತಿಗತಿ, ಮಳೆಯ ಪ್ರಮಾಣ ಹಾಗೂ ಕೃಷಿ ಚಟುವಟಿಕೆಗಳಿಗೆ ಎದುರಾಗಿರುವ ತೊಡಕುಗಳ ಕುರಿತು ನೇರವಾಗಿ ರೈತರಿಂದಲೇ ಮಾಹಿತಿ ಪಡೆದುಕೊಂಡರು. ಬಳಿಕ ಮಧುಗಿರಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣೆ ಹಾಗೂ ಬರ ಪರಿಸ್ಥಿತಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿನ ಅಭಾವ ತಲೆದೋರದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. ಬರ ಪರಿಸ್ಥಿತಿ ಎದುರಾದರೆ ಗ್ರಾಮೀಣ ಜನರಿಗೆ ಉದ್ಯೋಗದ ಕೊರತೆ ಉಂಟಾಗದಂತೆ ಸ್ಥಳೀಯವಾಗಿ…
ಕುಮಾರ್ ಪೆರ್ನಾಜೆ, ಪುತ್ತೂರು ನಾವು ನಮ್ಮ ಮಕ್ಕಳನ್ನು ಎಷ್ಟು ಜಾಗ್ರತೆಯಿಂದ ಬೆಳೆಸುತ್ತೇವೆ ಪ್ರಕೃತಿ ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಅಲ್ಲವೇ ಭೂಮಿಗೆ ಬಿದ್ದ ಹಣ್ಣು ಭೂಮಿಗೆ ಬಿದ್ದ ಬೀಜ ಎಂದು ವ್ಯರ್ಥವಾಗುವುದಿಲ್ಲ ಎಂಬ ಮಾತು ಎಷ್ಟು ಸತ್ಯ ನಾವು ಇಂದು ಬೀಜ ಹಾಕಿ ಸಸಿ ಮಾಡಲು ನಾನಾ ವಿಧಾನಗಳನ್ನು ಅಳವಡಿಸುತ್ತೇವೆ. ಪ್ರಾರಂಭದಲ್ಲಿ ಏರುಮಡಿ ಸಾಲು ತದನಂತರ ಓಣಿ ಗಳಲ್ಲಿ ಬೀಜ ಬಿತ್ತುತ್ತಿದ್ದರೆ ಇತ್ತೀಚೆಗೆ ಪೇಪರ್ ಗ್ಲಾಸ್, ಗೆರಟೆ, ಪ್ಲಾಸ್ಟಿಕ್ ಗ್ಲಾಸ್, ತೆಂಗಿನ ಸಿಪ್ಪೆ ಒಂದೇ ಎರಡೇ ಆದರೂ ಮೊಳಕೆ ಹೊಡೆದು ಗಿಡವಾಗುವುದು ಅಷ್ಟೇ ಆದರೆ ಪ್ರಕೃತಿಯಲ್ಲಿ ಇತ್ತೀಚೆಗೆ ಮಳೆ ಸಾಧಾರಣವಾಗಿದ್ದರಿಂದ ಹತ್ತಿ ಕೋಡು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ. ನೆಟ್ಟಣಿಗೆ ಮುಡ್ನೂರು ಗ್ರಾಮದ ಪ್ರಗತಿಪರ ಕೃಷಿಕರಾದ ಕುಮಾರ್ ಪೆರ್ನಾಜೆ ತೋಟದಲ್ಲಿ ನೂರಾರು ಗಿಡಗಳು ಮೊಳಕೆ ಒಡೆದು ನೋಡುಗರ ಮನವನ್ನು ಗೆದ್ದಿದೆ. ಯಾವ ರೀತಿಯಲ್ಲಿ ಜೋಡಿಸಿದೆ ಹೊರಭಾಗ ಗಟ್ಟಿಯಾಗಿದ್ದು ಒಳಭಾಗ ಮೆತ್ತನೆಯ ಹಾಸಿಗೆ ಹಾಸಿಗೆಯಂತೆ ಬೀಜಗಳನ್ನು ಪೋಣಿಸಿ ಮೊಳಕೆ ಒಡೆದು ಗಿಡವಾಗಿ ತದನಂತರ ಮಣ್ಣಿಗೆ …
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯು ನಡೆಸಿದ ಮೂರು ದಿನಗಳ ಸುದೀರ್ಘ ಹಾಗೂ ವಿಶೇಷ ಕಾರ್ಯಾಚರಣೆಯಲ್ಲಿ ನಗರದ ಪ್ರಮುಖ 60 ತ್ರೀ–ಸ್ಟಾರ್ ಮತ್ತು ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ವ್ಯಾಪಕ ತಪಾಸಣೆ ಕೈಗೊಳ್ಳಲಾಗಿದೆ. ಈ ತಪಾಸಣೆ ವೇಳೆ ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿಗಳು, ಅವಧಿ ಮೀರಿದ ಆಹಾರ ಪದಾರ್ಥಗಳು ಹಾಗೂ ಪದೇ ಪದೇ ಬಳಸಿದ ಅಡುಗೆ ಎಣ್ಣೆ ಸೇರಿದಂತೆ ಹಲವು ಗಂಭೀರ ಸ್ವರೂಪದ ನಿಯಮ ಉಲ್ಲಂಘನೆಗಳು ಬೆಳಕಿಗೆ ಬಂದಿವೆ. ಅಷ್ಟೇ ಅಲ್ಲದೆ, ಒಂದು ವರ್ಷಕ್ಕೂ ಹೆಚ್ಚು ಕಾಲ ಅವಧಿ ಮುಗಿದಿರುವ ಮಾಂಸಾಹಾರ ಉತ್ಪನ್ನಗಳನ್ನು ಸಂಗ್ರಹಿಸಿಟ್ಟಿರುವುದು ಅಧಿಕಾರಿಗಳಿಗೆ ಕಂಡುಬಂದಿದೆ. ಕಾರ್ಯಾಚರಣೆಯ ಭಾಗವಾಗಿ ಅಧಿಕಾರಿಗಳ ತಂಡವು ವಿವಿಧ ಹೋಟೆಲ್‌ಗಳು ಹಾಗೂ ಪ್ರಸಿದ್ಧ ಆಹಾರ ಮಳಿಗೆಗಳಿಂದ ಚಿಕನ್, ಮಾಂಸ, ಮೀನು, ಬ್ರೆಡ್, ಮೇಯನೇಸ್, ಅಡುಗೆ ಎಣ್ಣೆ, ಮೊಸರು, ಬೇಳೆ ಮತ್ತು ಚಟ್ನಿ ಸೇರಿದಂತೆ ಒಟ್ಟು 77 ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿದ್ದು, ಹೆಚ್ಚಿನ ಪರಿಶೀಲನೆಗಾಗಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಿಕೊಟ್ಟಿದೆ.…
ನವದೆಹಲಿ: ಈ ಬಾರಿಯ 80ನೇ ಸ್ವಾತಂತ್ರ್ಯ ದಿನಾಚರಣೆಯು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೆಹಲಿಯ ಕೆಂಪುಕೋಟೆಯ ಬುರುಜಿನಿಂದ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಗಾಯನ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ. ಬಂಕಿಮಚಂದ್ರ ಚಟ್ಟೋಪಾಧ್ಯಾಯರು ರಚಿಸಿದ ‘ವಂದೇ ಮಾತರಂ’ ಗೀತೆಗೆ 150 ವರ್ಷಗಳು ಪೂರೈಸುತ್ತಿರುವ ಸವಿನೆನಪಿಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ‘ಯುವಶಕ್ತಿ’ ಮುಖ್ಯ ಪರಿಕಲ್ಪನೆ: ಈ ಬಾರಿಯ ಆಚರಣೆಯು ‘ಯುವಶಕ್ತಿ’ಯ ಮೇಲೆ ಕೇಂದ್ರೀಕೃತವಾಗಿದ್ದು, 2047ರ ವೇಳೆಗೆ ಭಾರತವನ್ನು ‘ವಿಕಸಿತ ಭಾರತ’ವನ್ನಾಗಿ ನಿರ್ಮಿಸುವ ಪಯಣದಲ್ಲಿ ದೇಶದ ಯುವಜನತೆಯ ಕೊಡುಗೆಯನ್ನು ಎತ್ತಿಹಿಡಿಯಲಿದೆ. ಇತ್ತೀಚೆಗಷ್ಟೇ ಸಂಸತ್ತಿನಲ್ಲಿ ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ಮಸೂದೆ’ಯನ್ನು (Prevention of Insults to National Honour (Amendment) Bill) ಅಂಗೀಕರಿಸಲಾಗಿದೆ. ಈ ಮಸೂದೆಯ ಮೂಲಕ ರಾಷ್ಟ್ರಗೀತೆಗೆ (Jana Gana Mana) ಇರುವಂತೆಯೇ…
ಔರಾದ್ (ಬೀದರ್): ಔರಾದ್ ತಾಲ್ಲೂಕಿನ ಬೆಳಕುಣಿ (ಚೌದ್ರಿ) ಯಿಂದ ಮುಂಗನಾಳ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ರಸ್ತೆ ಮಧ್ಯೆ ಬಿದ್ದಿರುವ ಭಾರೀ ಗುಂಡಿಗಳಿಂದಾಗಿ ವಾಹನ ಸವಾರರು ದಿನನಿತ್ಯ ಜೀವಭಯದಲ್ಲೇ ಸಂಚರಿಸುವ ದುಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದು, ಗುಂಡಿಗಳ ಆಳ ಎಷ್ಟು ಎಂಬುದು ಅಂದಾಜಿಸಲಾಗದೆ ಸವಾರರು ಪರದಾಡುತ್ತಿದ್ದಾರೆ. ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ಹೊಂಡಗಳಲ್ಲಿ ಜಾರಿಬಿದ್ದು ಅಪಘಾತಕ್ಕೆ ಈಡಾಗುವ ಭೀತಿ ಎದುರಾಗಿದೆ. ಈ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಾರೆ. ರಸ್ತೆ ಹದಗೆಟ್ಟಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಯಾವುದೇ ಅನಾಹುತ ಅಥವಾ ದೊಡ್ಡ ಮಟ್ಟದ ಅಪಘಾತ ಸಂಭವಿಸುವ ಮುನ್ನವೇ ಲೋಕೋಪಯೋಗಿ ಇಲಾಖೆ (PWD) ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ತಕ್ಷಣವೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಾರ್ವಜನಿಕರ ಹಾಗೂ ವಾಹನ ಸವಾರರ ಸಂಚಾರಕ್ಕೆ ಸುರಕ್ಷಿತ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಜೀವನ್…
ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ (FIR) ದಾಖಲಾಗಿದೆ. ಧಾರವಾಡದ ಕಲ್ಯಾಣನಗರ ನಿವಾಸಿ ರಾಮಾ ಕುಲಕರ್ಣಿ ಅವರು ಗೋಪಾಲ್ ಜೋಶಿ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 2022ರ ಮೇ 29ರಂದು ಧಾರವಾಡದ ಮಾಳಮಡ್ಡಿಯ ಪೂರ್ಣ ಅಪಾರ್ಟ್‌ಮೆಂಟ್ ನಲ್ಲಿರುವ ಫ್ಲ್ಯಾಟ್ ಗೆ ಭೇಟಿ ನೀಡಿ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು ಹಾಗೂ ಕಳೆದ ನಾಲ್ಕು ವರ್ಷಗಳಿಂದ ತಮಗೂ ಮತ್ತು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಿರುಕುಳ ತಾಳಲಾರದೆ ಕುಟುಂಬ ಸದಸ್ಯರ ಸಲಹೆಯಂತೆ ಪೊಲೀಸ್ ಠಾಣೆ ಮೆಟ್ಟಿಲೇರಿರುವುದಾಗಿ ಅವರು ಹೇಳಿದ್ದಾರೆ. ಇದೇ ವೇಳೆ ಗೋಪಾಲ್ ಜೋಶಿ ಅವರು ರಾಮಾ ಕುಲಕರ್ಣಿ ವಿರುದ್ಧ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು (Counter FIR) ದಾಖಲಿಸಿದ್ದಾರೆ. ರಾಮಾ ಕುಲಕರ್ಣಿ ಅವರು ತಮ್ಮ…
ಶಿವಮೊಗ್ಗ: ಜಿಲ್ಲೆಯ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಜಿ.ಕೆ. ವಿನಯ್ (15) ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಇತರ ವಿದ್ಯಾರ್ಥಿಗಳು ಚೆಸ್ ಆಡುತ್ತಿದ್ದುದನ್ನು ವಿನಯ್ ವೀಕ್ಷಿಸುತ್ತಾ ನಿಂತಿದ್ದ ವೇಳೆ ದಿಢೀರನೆ ನೆಲಕ್ಕೆ ಕುಸಿದುಬಿದ್ದಿದ್ದಾನೆ. ಇದನ್ನು ಗಮನಿಸಿದ ಶಿಕ್ಷಕರು ತಕ್ಷಣವೇ ಆತನನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (PHC) ದಾಖಲಿಸಿದ್ದಾರೆ. ಆದರೆ, ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ. ವಿದ್ಯಾರ್ಥಿ ವಿನಯ್ ಸಾವಿನ ಕುರಿತು ಪೋಷಕರು ತೀವ್ರ ಅನುಮಾನ ವ್ಯಕ್ತಪಡಿಸಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿ (ಎ-14) ಪ್ರದೋಷ್ ಸಲ್ಲಿಸಿದ್ದ ‘ಮಾಫಿ ಸಾಕ್ಷಿ’ (Approver) ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ (CCH-59) ನ್ಯಾಯಾಲಯ ಸೋಮವಾರ (ಆಗಸ್ಟ್ 10) ಪುರಸ್ಕರಿಸಿದೆ. ಪ್ರಕರಣದಲ್ಲಿ ದರ್ಶನ್ ಆಪ್ತರೇ ಅವರ ವಿರುದ್ಧ ಸಾಕ್ಷಿ ಹೇಳಲು ಮುಂದಾಗಿರುವುದು ಇಡೀ ಪ್ರಕರಣಕ್ಕೆ ದೊಡ್ಡ ತಿರುವು ನೀಡಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಮತ್ತು ಪವಿತ್ರಾ ಗೌಡಗೆ ತೀವ್ರ ಆತಂಕ ಶುರುವಾಗಿದೆ. 11 ಪುಟಗಳ ಅರ್ಜಿಯಲ್ಲಿ ಏನಿದೆ? ಪ್ರದೋಷ್ ನ್ಯಾಯಾಲಯಕ್ಕೆ ಸಲ್ಲಿಸಿರುವ 11 ಪುಟಗಳ ಕ್ಷಮಾದಾನ ಅರ್ಜಿಯಲ್ಲಿ, ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಜಯನಗರದ ಮೈದಾನದಲ್ಲಿ ನಟ ದರ್ಶನ್ ಪರಿಚಯವಾದ ದಿನದಿಂದ ಹಿಡಿದು, ಕೊಲೆ ಘಟನೆ ಹಾಗೂ ಜೈಲು ಪಾಲಾಗುವವರೆಗಿನ ಪ್ರತಿಯೊಂದು ಘಟನಾವಳಿಯನ್ನು ಎಳೆಎಳೆಯಾಗಿ ನ್ಯಾಯಾಧೀಶರ ಮುಂದೆ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ. ಪ್ರದೋಷ್ ಮಾಫಿ ಸಾಕ್ಷಿಯಾಗಲು ಈ ಹಿಂದೆ ಪ್ರಾಸಿಕ್ಯೂಷನ್…
ಬೆಂಗಳೂರು: ರಾಜ್ಯ ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಿರುವ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಪ್ರಕ್ರಿಯೆ ಕುರಿತು ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ, ಶೀಘ್ರದಲ್ಲೇ ಖಾತೆ ಹಂಚಿಕೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ದೆಹಲಿಯಿಂದ ಮುಖ್ಯಮಂತ್ರಿಗಳು ಮರಳಿದ ನಂತರ ಶೀಘ್ರದಲ್ಲೇ ನೂತನ ಸಚಿವರ ಖಾತೆಗಳ ಅಧಿಕೃತ ಪಟ್ಟಿಯನ್ನು ಘೋಷಿಸುವ ನಿರೀಕ್ಷೆಯಿದೆ. ಆಗಸ್ಟ್ 13 ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನವೇ ಈ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಿಎಂ ನಿರ್ಧರಿಸಿದ್ದಾರೆ. ಮುಂಬರುವ ಅಧಿವೇಶನದಲ್ಲಿ ವಿಷಯಗಳನ್ನು ಗ್ರಹಿಸಿ ಉತ್ತರಿಸುವುದು ಹೊಸ ಸಚಿವರಿಗೆ ಸವಾಲಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿ. ಪರಮೇಶ್ವರ್, ನೂತನ ಸಚಿವರೆಲ್ಲರೂ ಶಾಸಕರಾಗಿ ಅನುಭವ ಹೊಂದಿದ ಸಮರ್ಥರಾಗಿದ್ದಾರೆ ಎಂದು ಹೇಳಿದರು. ಆರಂಭದಲ್ಲಿ ಕೆಲ ತಾಂತ್ರಿಕ ತೊಂದರೆಗಳಿರಬಹುದು, ಆದರೆ…