Author: Ganesh Tumkuru

ಬೆಂಗಳೂರು: ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವ ಅಸಮಾಧಾನ ಹಾಗೂ ಸಚಿವರಿಗೆ ಖಾತೆ ಹಂಚಿಕೆ ವಿಳಂಬದ ಬಿಕ್ಕಟ್ಟು ಶಮನಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಪಕ್ಷದ ಹೈಕಮಾಂಡ್‌ ಮಧ್ಯಸ್ಥಿಕೆ ಕೋರಿ ನವದೆಹಲಿಗೆ ತೆರಳುವ ಸಾಧ್ಯತೆಯಿದೆ. ಆಗಸ್ಟ್‌ 13ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನವೇ ಸಂಪುಟಕ್ಕೆ ಸಂಬಂಧಿಸಿದ ಎಲ್ಲಾ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಕಾಂಗ್ರೆಸ್ ನಾಯಕತ್ವ ನಿರ್ಧರಿಸಿದೆ. ಆಗಸ್ಟ್‌ 3ರಂದು ಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಪ್ರಮಾಣವಚನ ಸ್ವೀಕರಿಸಿ ದಿನಗಳು ಕಳೆದರೂ ಖಾತೆ ಹಂಚಿಕೆ ಆಗದಿರುವುದು ಪಕ್ಷದೊಳಗೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಮುಂಬರುವ ಮುಂಗಾರು ಅಧಿವೇಶನದಲ್ಲಿ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಈ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದನ್ನು ತಪ್ಪಿಸಲು ಅಧಿವೇಶನಕ್ಕಿಂತ ಮುಂಚಿತವಾಗಿಯೇ ಈ ಗೊಂದಲ ಬಗೆಹರಿಸಲು ಯೋಜಿಸಲಾಗಿದೆ. ಪ್ರಸ್ತುತ ಹೈಕಮಾಂಡ್‌ ಮುಂದೆ ಪ್ರಮುಖ ಮೂರು ಸವಾಲುಗಳಿವೆ. ಖಾಲಿ ಇರುವ ಒಂದು ಸಚಿವ ಸ್ಥಾನವನ್ನು…

Read More

ಬೆಂಗಳೂರು: ಆಗಸ್ಟ್ 13ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಲು ತೀರ್ಮಾನಿಸಿವೆ. ಬಿಡದಿ ಟೌನ್‌ಶಿಪ್ ಯೋಜನೆ ವಿರೋಧ, ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಅಕ್ರಮಗಳು, ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆ ಆರೋಪ, ಬಿಎಂಐಸಿ ಯೋಜನೆ, ವಾಲ್ಮೀಕಿ ನಿಗಮದ ಹಗರಣ, ಬೆಂಗಳೂರಿನ ಅಸಮರ್ಪಕ ತ್ಯಾಜ್ಯ ನಿರ್ವಹಣೆ ಹಾಗೂ ರಾಜ್ಯದಲ್ಲಿ ಎದುರಾಗಿರುವ ತೀವ್ರ ಬರ ಪರಿಸ್ಥಿತಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಉಭಯ ಪಕ್ಷಗಳು ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಯೋಜನೆ ರೂಪಿಸಿವೆ. ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬೇಕಾದ ವಿಷಯಗಳು ಹಾಗೂ ಹೋರಾಟದ ರೂಪುರೇಷೆಗಳ ಕುರಿತು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದು, ಎರಡೂ ಪಕ್ಷಗಳ ನಡುವೆ ಉತ್ತಮ ಸಮನ್ವಯ ಸಾಧಿಸಲು ತಲಾ ಐವರು ನಾಯಕರನ್ನೊಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ. ವಿಧಾನಮಂಡಲದ ಒಳಗೂ ಮತ್ತು ಹೊರಗೂ ಜಂಟಿಯಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು,…

Read More

ಬೆಂಗಳೂರು: ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (ಸಿಇಒ) ವಿ. ಅನ್ಬು ಕುಮಾರ್ ಅವರು ಮತದಾರರ ಪಟ್ಟಿಯ ವಿಶೇಷ ಸಾಂದ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ತಮ್ಮ ಹೆಸರುಗಳನ್ನು ಗೈರುಹಾಜರಿ (Absent), ಸ್ಥಳಾಂತರ (Shifted), ನಕಲಿ (Duplicate), ಮೃತ (Dead) ಮತ್ತು ಇತರೆ (ASDDO) ವರ್ಗದಲ್ಲಿ ತಪ್ಪಾಗಿ ಗುರುತಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಮತದಾರರಿಗೆ ಆನ್‌ ಲೈನ್ ನಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದಾರೆ. ನಾಗರಿಕ ಸಮಾಜದ ಗುಂಪುಗಳ ಮನವಿ ಹಾಗೂ ಒತ್ತಾಯದ ಹಿನ್ನೆಲೆಯಲ್ಲಿ ಈ ಪಟ್ಟಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ತಪ್ಪಾಗಿ ನಮೂದಿಸಲಾಗಿದೆ ಎಂದು ಕಂಡುಕೊಳ್ಳುವ ಮತದಾರರು, ತಮ್ಮ ಭಾಗದ ಮತಗಟ್ಟೆ ಮಟ್ಟದ ಅಧಿಕಾರಿಯನ್ನು (BLO) ಸಂಪರ್ಕಿಸಿ ತಾವು ಅದೇ ವಿಳಾಸದಲ್ಲಿ ವಾಸಿಸುತ್ತಿರುವುದನ್ನು ದೃಢೀಕರಿಸಬಹುದು. ತಮ್ಮ ಇಪಿಐಸಿ (EPIC) ಸಂಖ್ಯೆಯ ಮೂಲಕ ಆನ್‌ ಲೈನ್‌ ನಲ್ಲಿ ಬಿಎಲ್‌ ಒ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಿಂದ ಮತದಾರರು ಹೊಸದಾಗಿ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲದೆ ಎಣಿಕೆ ನಮೂನೆಯನ್ನು ಪಡೆದುಕೊಳ್ಳಲು ಅವಕಾಶ ಸಿಗಲಿದೆ. ಆಯಾ ಮತದಾರರು ತಮ್ಮ ವಿವರಗಳನ್ನು…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, 2021 ರಲ್ಲಿ 36 ಕೋಟಿ ರೂಪಾಯಿಗಿಂತ ಅಧಿಕವಿದ್ದ ವಾರ್ಷಿಕ ವೆಚ್ಚವು 2025 ರಲ್ಲಿ 180 ಕೋಟಿ ರೂಪಾಯಿಗಿಂತ ಹೆಚ್ಚಾಗಿದೆ. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪವಿತ್ರ ಮಾರ್ಗರಿಟಾ ಅವರು ಲಿಖಿತ ಉತ್ತರದಲ್ಲಿ, 2021 ರಿಂದೀಚೆಗೆ ಪ್ರಧಾನಿಯವರ ವಿದೇಶಿ ಪ್ರವಾಸಗಳಿಗೆ ಒಟ್ಟಾರೆಯಾಗಿ 550 ಕೋಟಿ ರೂಪಾಯಿಗೂ ಅಧಿಕ ವೆಚ್ಚವಾಗಿದೆ ಎಂದು ತಿಳಿಸಿದ್ದಾರೆ. 2026 ನೇ ಸಾಲಿನಲ್ಲಿ ಇಲ್ಲಿಯವರೆಗೆ 74.58 ಕೋಟಿ ರೂಪಾಯಿಗಿಂತ ಹೆಚ್ಚು ವೆಚ್ಚವಾಗಿದೆ. ಇದರಲ್ಲಿ ಮೇ ತಿಂಗಳಲ್ಲಿ ನಡೆದ ನಾರ್ವೆ ಪ್ರವಾಸವು 17.46 ಕೋಟಿ ರೂಪಾಯಿಯೊಂದಿಗೆ ಗರಿಷ್ಠ ವೆಚ್ಚದ ಪ್ರವಾಸವಾಗಿದೆ. ಕೆಲವು ಅಂಕಿಅಂಶಗಳು ತಾತ್ಕಾಲಿಕವಾಗಿದ್ದು, ಜೂನ್‌ ನಲ್ಲಿ ನಡೆದ ಫ್ರಾನ್ಸ್ ಪ್ರವಾಸದ ಅಂತಿಮ ವೆಚ್ಚ ಇನ್ನೂ ನಿರ್ಧಾರವಾಗಬೇಕಿದೆ. ಈ ವೆಚ್ಚವನ್ನು ಸಮರ್ಥಿಸಿಕೊಂಡಿರುವ ಸಚಿವಾಲಯವು, ಜುಲೈ 2021 ರಿಂದ ನಡೆದ ಪ್ರವಾಸಗಳ ಸಂದರ್ಭದಲ್ಲಿ ರಕ್ಷಣೆ,…

Read More

ಸರಗೂರು: ಪರಿಶಿಷ್ಟ ಜಾತಿಗಳಲ್ಲಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯಗಳಿಗೆ ನ್ಯಾಯಯುತ ಅವಕಾಶ ಕಲ್ಪಿಸಲು ಒಳಮೀಸಲಾತಿ ಅತ್ಯಗತ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಮಾದರ ಮಹಾಸಭೆಯ ರಾಜ್ಯಾಧ್ಯಕ್ಷ ಕೆ.ಎಚ್. ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ. ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದ ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ಮಾದರ ಮಹಾಸಭೆಯ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ’ದಲ್ಲಿ ಗಣ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಒಳಮೀಸಲಾತಿ ವಿಚಾರದಲ್ಲಿ ಎಲ್ಲ ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ, ಕಾನೂನುಬದ್ಧವಾಗಿ ಹಾಗೂ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರೊಂದಿಗೆ ಸಮಾಲೋಚಿಸಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಸಾಮಾಜಿಕ ನ್ಯಾಯದ ಬದ್ಧತೆ ಹಾಗೂ ದಲಿತ-ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದೆ. 2026ರ ಏಪ್ರಿಲ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಒಳಮೀಸಲಾತಿ ಸೇರಿದಂತೆ…

Read More

ಮಧುಗಿರಿ (ನಮ್ಮತುಮಕೂರು): ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕೆಂಬುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಬೆಂಗಳೂರಿನ ಎಂ.ಎಸ್.ಎ. (MSA) ಟ್ರಸ್ಟ್‌ ನ ಅಧ್ಯಕ್ಷರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಯಾದ ಶಿವರಾಮ ಶೆಟ್ಟಿ ತಿಳಿಸಿದರು. ತಾಲ್ಲೂಕಿನ ನೇರಳೇಕೆರೆ ಗ್ರಾಮದ ಶ್ರೀರಂಗನಾಥ ಗ್ರಾಮಾಂತರ ಪ್ರೌಢಶಾಲೆಯ (ಸಿದ್ಧಗಂಗಾ ಮಠ) ಸಮುದಾಯ ಭವನದಲ್ಲಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಶಾಲಾ ಬ್ಯಾಗ್, ನೋಟ್‌ಬುಕ್ ಹಾಗೂ ಅಗತ್ಯ ಶೈಕ್ಷಣಿಕ ಸಲಕರಣೆಗಳನ್ನು ವಿತರಿಸಿ ಅವರು ಮಾತನಾಡಿದರು. ಕಳೆದ ಕೆಲವು ದಶಕಗಳಿಂದ ಟ್ರಸ್ಟ್ ಈ ಸೇವಾ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. “ಸರ್ಕಾರಿ ಶಾಲೆಯ ಮಕ್ಕಳು ಯಾವುದೇ ಕಾರಣಕ್ಕೂ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಗಿಂತ ಕಡಿಮೆಯಿರಬಾರದು ಎಂಬ ಉದ್ದೇಶದಿಂದ ಅಗತ್ಯ ಸೌಲಭ್ಯಗಳನ್ನು ಪೂರೈಸುತ್ತಿದ್ದೇವೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ತಮ್ಮ ಕನಸನ್ನು ನನಸು ಮಾಡಿಕೊಳ್ಳಬೇಕು. ಮುಂದೆ ಉನ್ನತ ಹುದ್ದೆಗೇರಿದಾಗ ತಾವು ಓದಿದ ಶಾಲೆ ಹಾಗೂ ಹುಟ್ಟಿದೂರನ್ನು ಮರೆಯದೆ,…

Read More

ಹುಳಿಯಾರು: ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಭಾರತದ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಕನ್ಯಾಕುಮಾರಿಯಿಂದ ಕಾಶಿ ಶ್ರೀರಂಗದವರೆಗೆ ಪಾದಯಾತ್ರೆ ಕೈಗೊಂಡಿರುವ ಆಂಧ್ರಪ್ರದೇಶದ ಹಿರಿಯ ವಕೀಲರು ಹಾಗೂ ಕಾಂಗ್ರೆಸ್ ನಾಯಕ ಕಾಟೂರಿ ವೆಂಕಟೇಶ್ವರಲುಗೆ ಹುಳಿಯಾರಿನಲ್ಲಿ ಭವ್ಯ ಸ್ವಾಗತ ದೊರೆಯಿತು. ಗುರುವಾರ ತುರುವೇಕೆರೆಯಿಂದ ಬಂದ ಪಾದಯಾತ್ರೆಯು ಸಂಜೆ ಹುಳಿಯಾರಿನ ರಾಮ್ ಗೋಪಾಲ್ ಸರ್ಕಲ್ ತಲುಪಿತು. ಈ ವೇಳೆ ಸ್ವಾಗತಿಸಿ ಮಾತನಾಡಿದ ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಜಾಗೃತಿ ಮೂಡಿಸಬೇಕೆಂದು ಕನ್ಯಾಕುಮಾರಿಯಿಂದ ಕಾಶಿ ಶ್ರೀರಂಗದವರೆಗೆ ಪಾದಯಾತ್ರೆ ಹೊರಟಿದ್ದಾರೆ, ಇವರಿಗೆ ಶುಭವಾಗಲಿ ಎಂದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಟಿ.ಚಿಕ್ಕಣ್ಣ, ಪ.ಪಂ. ಸದಸ್ಯ ಜುಬೇರ್, ಸೈಯದ್ ನೂರ್, ಬಡಗಿ ರಾಮಣ್ಣ, ಯೋಗೀಶ್, ಹರೀಶ್, ಪಟೇಲ್ ರಾಜಣ್ಣ ಹಾಗೂ ಕಾರ್ಯಕರ್ತರು ಇದ್ದರು. NDA ಸರ್ಕಾರ ಲಕ್ಷಾಂತರ ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳು ಆತ್ಮಹತ್ಯೆ ಸಹ ಮಾಡಿಕೊಂಡಿದ್ದಾರೆ. ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುವುದು ಒಳ್ಳೆಯದಲ್ಲ. ಮತ್ತೆ…

Read More

ತಿಪಟೂರು: ಕರ್ನಾಟಕ ಯೋಗ ವೆಲ್ನೆಸ್ ಟ್ರಸ್ಟ್ ವತಿಯಿಂದ ಆಗಸ್ಟ್ 9ರ ಭಾನುವಾರ ನಗರದ ಎಸ್.ಎನ್.ಎಸ್. ಕನ್ವೆನ್ಷನ್ ಹಾಲ್ನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷೆ ಜಿ. ಎ. ರೇಖಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕ ಕೆ. ಷಡಕ್ಷರಿ ಯೋಗ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಕೆರೆಗೋಡಿರಂಗಾಪುರದ ಶ್ರೀ ಗುರು ಪರದೇಶಿ ಕೇಂದ್ರ ಮಹಾಸ್ವಾಮೀಜಿ ಹಾಗೂ ನೊಣವಿನಕೆರೆ ಕಾಡು ಸಿದ್ಧೇಶ್ವರ ಮಠದ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಖ್ಯಾತ ವೈದ್ಯ ಡಾ. ಜಿ. ಎಸ್. ಶ್ರೀಧರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ. 1,000ಕ್ಕೂ ಹೆಚ್ಚು ಯೋಗಪಟುಗಳು ಭಾಗಿ: ಈ ಚಾಂಪಿಯನ್ಷಿಪ್ನಲ್ಲಿ ರಾಜ್ಯದ ವಿವಿಧ ಭಾಗಗಳಿಂದ 1,000ಕ್ಕೂ ಹೆಚ್ಚು ಯೋಗಪಟುಗಳು ಭಾಗವಹಿಸುವ ನಿರೀಕ್ಷೆಯಿದೆ. ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಒಟ್ಟು 18 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕರೆಯ ನಂತರ ದೇಶಾದ್ಯಂತ ಯೋಗಕ್ಕೆ ಹೆಚ್ಚಿನ…

Read More

ತುಮಕೂರು: ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿ ಆರೋಗ್ಯ ಇಲಾಖೆಯಿಂದ ಆಗಸ್ಟ್ 10 ರಂದು ಜಿಲ್ಲೆಯ 1 ರಿಂದ 19 ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಆಲ್ಬೆಂಡಜೋಲ್ ಜಂತುಹುಳು ನಿವಾರಕ ಮಾತ್ರೆಗಳನ್ನು ನೀಡಲಾಗುವುದು ಎಂದು ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾರತದಲ್ಲಿ ಸುಮಾರು 1 ರಿಂದ 19 ವರ್ಷ ವಯಸ್ಸಿನ 2 ಕೋಟಿ ಮಕ್ಕಳು ಮಣ್ಣಿನಿಂದ ಹರಡುವ ಜಂತುಹುಳು ಬಾಧೆಯಿಂದ ಅಪಾಯಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದರಿಂದ ರಕ್ತಹೀನತೆ, ಪೌಷ್ಟಿಕಾಂಶ ಕೊರತೆ, ನಿಶಕ್ತಿ, ತೂಕ ಕಡಿಮೆಯಾಗುವುದು ಮುಂತಾದ ಪರಿಣಾಮಗಳಾಗುತ್ತವೆ. ಈ ನಿಟ್ಟಿನಲ್ಲಿ ಜಿಲ್ಲೆಯ 6,25,334 ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

Read More

ತುಮಕೂರು: ಬಾಲ್ಯ  ವ್ಯವಸ್ಥೆಯಲ್ಲಿ ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿಯನ್ನು ಹಾಕುತ್ತದೆ. ಪ್ರಾಥಮಿಕ ಹಂತದಲ್ಲಿ ಕಲಿತ ಕಲಿಕೆ ಅತ್ಯಂತ ಅಮೂಲ್ಯವಾದ ಕಲಿಕೆಯಾಗಿದೆ. ಪಾಠ ಪ್ರವಚನಗಳು ಅರ್ಥವಾಗದಿದ್ದರೆ ನೀವು ನಿಮ್ಮ ಶಿಕ್ಷಕರ ಬಳಿ ಕೇಳಿ ಅಥವಾ ಪ್ರಶ್ನೆ ಮಾಡಿ ನಿಮಗೆ ಬೇಕಾದ ಜ್ಞಾನವನ್ನು ಪಡೆದುಕೊಳ್ಳಬೇಕು. ಪ್ರಶ್ನೆ ಮಾಡುವುದು ತಪ್ಪಲ್ಲ ಎಂದು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಸಿದ್ಧಗಂಗಾಮಠದ ಪೀಠಾಧ್ಯಕ್ಷರು ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ನುಡಿದರು. ನಗರದ ಶ್ರೀ ಸಿದ್ಧಲಿಂಗೇಶ್ವರ ಸನಿವಾಸ ಹಿರಿಯ ಪ್ರಾಥಮಿಕ ಶಾಲೆ ಶ್ರೀ ಸಿದ್ಧಗಂಗಾಮಠದಲ್ಲಿ ನಡೆದ ಮಂಜುನಾಥಗೌಡ ಶಿಕ್ಷಕರು ರಚಿಸಿದ ಪುಸ್ತಕ ಎಫ್.ಎಲ್.ಎನ್. ಓದು ಮತ್ತು ಬರಹ ಎನ್ನುವ ಪುಸ್ತಕ ಶ್ರೀ ಸಿದ್ಧಲಿಂಗ ಮಹಾ ಸ್ವಾಮಿಗಳು ಹಾಗೂ ಗಣ್ಯರು ಪುಸ್ತಕ ಲೋಕಾರ್ಪಣೆಯನ್ನು ಮಾಡಿ ಮಾತನಾಡಿದರು. ಶಿಕ್ಷಕರು ತಂದೆ ತಾಯಿ ಇದ್ದಂತೆ ಅವರ ಪಾಠಗಳನ್ನು ನೀವು ಶ್ರದ್ಧೆಯಿಂದ ಕಲಿತಬೇಕು. ಶಿಕ್ಷಕರು ಯಾವ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದೆ ಉಳಿದಿದ್ದಾರೆ ಅವರಿಗೆ ಪ್ರೋತ್ಸಾಹ ಮಾಡಿ ಅವರ ಕಲಿಯುತ್ತಾರೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ…

Read More