Author: Ganesh Tumkuru

ಕುಮಾರ್ ಪೆರ್ನಾಜೆ, ಪುತ್ತೂರು ಹೂವಿನ ಮಾಟಕ್ಕೆ ಮರುಳಾಗದವರು ಯಾರು..? ವಿಧ ವಿಧದ ಬಣ್ಣವ ಬಳಿದವರಾರು, ಅದರ ಅಲಂಕಾರಕ್ಕೆ ಕುಸುಮವಾ ಬಳಸಿದವರಾರು ಹೂವಿನ ಗಿಡವನ್ನು ಬೆಳೆಸದೆ ಇರುವವರಾರು ಪ್ರಕೃತಿಯ ಮಡಿಲಲ್ಲಿ ಬೆಳೆದವರೇ ಪುನೀತರು…! ಪ್ರಕೃತಿಯ ಒಡನಾಟವೇ ಮನುಕುಲದ ಕೊನೆಯ ರಕ್ಷಾ ಕವಚ ಹೂವಿನ ಲೋಕದ ಅದ್ಭುತ ವೈಭವ. ಹೂವು.    ಹೊರಳುವವು    ಸೂರ್ಯನ ಕಡೆಗೆ ನಮ್ಮ ದಾರಿ ಬರಿ ಚಂದ್ರನ ವರೆಗೆ ಹಾಡಿದ್ದೇ ನೋ..! ಗೆಲ್ಲಬೇಕು ಅನ್ನೋ ಛಲ ನಮ್ಮೊಳಗಿದ್ದರೆ ಸೋಲು ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ . ಏನು ಆರೈಕೆ ಇಲ್ಲದೆ ರಸ್ತೆ ಬದಿ ಕೊಚ್ಛೆಗಳಲ್ಲಿ ತೋಟಗಳಲ್ಲಿ  ಕಳೆಯಾಗಿ ತಿದ್ದದೆ ತೀಡದೆ ಅಂದ ಕಾಣದು ಗೊಂಬೆ ಹಾಗೆ ಬಿತ್ತದೇ ಕೆತ್ತದೇ ಬೆಳೆಯ ಬೆಳೆಯೋದು ಭೂಮಿ ಎಂಬಂತೆ ನಿನ್ನ ಅಳುಕಿದರೆ ರೂಪುಗೊಳ್ಳಲು ಬದುಕು, ಈ ಹೂವಿನ ಹೆಸರು ಏನು ನಮ್ಮ ಕಡೆ ತೇರು ಅಂತ ಕರೀತಾರೆ ನಿಮ್ಮ ಕಡೆ ಏನೆಂದು ಕರೆಯುತ್ತೀರ….? ದಾರಿ ಬದಿಯಲ್ಲಿ ಸಾಮಾನ್ಯವಾಗಿ ಕಾಣ ಸಿಗುತ್ತದೆ ತೇರು ಕಾಣಿಸಿದ ಹಾಗೆ ಕಾಣುತ್ತೆ…

Read More

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಎಂ.ಪಿ.ಪಿ ತೆಕ್ನಾಲಜಿ ಹಾಗೂ ಹೋಮ್ ಅಸೋಸಿಯೇಟ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆಯೋಜಿಸಿರುವ ನೇರ ಸಂದರ್ಶನ (Walk-in Interview). ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದನ್ನು ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾ (Resume)ದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗ ವಿವರಗಳು ಹುದ್ದೆಗಳ ಹೆಸರು: ಆಪರೇಟರ್, ಹೆಲ್ಪರ್, ಫೀಲ್ಡ್ ಎಕ್ಸಿಕ್ಯುಟಿವ್ ಹಾಗೂ ಕಲೆಕ್ಷನ್ ಎಕ್ಸಿಕ್ಯುಟಿವ್. ಶೈಕ್ಷಣಿಕ ಅರ್ಹತೆ: SSLC, PUC, ITI, ಡಿಪ್ಲೊಮಾ ಮತ್ತು ಯಾವುದೇ ಪದವಿ (Degree) ಪಾಸಾದ ನಿರುದ್ಯೋಗಿ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನದ ದಿನಾಂಕ ಹಾಗೂ ಸಮಯ: ಆಗಸ್ಟ್ 11, ಬೆಳಿಗ್ಗೆ 10:00 ಗಂಟೆಗೆ. ಸಂದರ್ಶನ ನಡೆಯುವ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟೆಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು – 572102. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0816-2278488 ಅಥವಾ ಮೊಬೈಲ್ ಸಂಖ್ಯೆ 8792669410…

Read More

ಬೀದರ್ (ಔರಾದ್):  ಗ್ರಾಮೀಣ ಭಾಗದ ಜನರಿಗೆ ಸ್ವಗ್ರಾಮಗಳಲ್ಲೇ ಉದ್ಯೋಗ ಕಲ್ಪಿಸುವುದರ ಜೊತೆಗೆ ಜಲ ಹಾಗೂ ಮಣ್ಣಿನ ಸಂರಕ್ಷಣೆಗೆ ಪೂರಕವಾದ ಶಾಶ್ವತ ಆಸ್ತಿಗಳನ್ನು ನಿರ್ಮಿಸಲು ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ. ಗಿರೀಶ್ ದಿಲೀಪ್ ಬದೋಲೆ ಸೂಚಿಸಿದರು. ತಾಲೂಕಿನ ಧೂಪತಮಹಾಗಾಂವ ಗ್ರಾಮದಲ್ಲಿ ವಿಕಸಿತ ಭಾರತ–ಜಿ ರಾಮ್ ಜಿ (VB-G RAM G) ಯೋಜನೆಯಡಿ ನಡೆಯುತ್ತಿರುವ ಕಾಂಟೂರ್ ಟ್ರೆಂಚ್ (CCT) ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. ವಲಸೆ ತಡೆಯಲು ಗ್ರಾಮಗಳಲ್ಲೇ ಉದ್ಯೋಗ ಸೃಷ್ಟಿ “ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರು ಕೆಲಸ ಹುಡುಕಿಕೊಂಡು ಬೇರೆ ನಗರಗಳಿಗೆ ವಲಸೆ ಹೋಗುವ ಅಗತ್ಯವಿಲ್ಲ. ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿಯೊಬ್ಬರಿಗೂ ಅವರ ಊರುಗಳಲ್ಲೇ ಸಾಕಷ್ಟು ಕೆಲಸದ ಅವಕಾಶಗಳನ್ನು ಒದಗಿಸಲಾಗುತ್ತಿದೆ. ಪ್ರತಿಯೊಬ್ಬ ಅರ್ಹ ಫಲಾನುಭವಿಯೂ ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಸಿಇಒ ಕರೆ ನೀಡಿದರು. ಯೋಜನೆಯ ಹೊಸ ಮಾರ್ಗಸೂಚಿ ಮತ್ತು ಸೌಲಭ್ಯಗಳ…

Read More

ಸರಗೂರು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವೈದ್ಯಾಧಿಕಾರಿ ಡಾ. ರವಿಕುಮಾರ್, “ಪ್ರತಿವರ್ಷ ಆಗಸ್ಟ್ 1ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಗುತ್ತದೆ. 2026ರ ವಿಶ್ವ ಸ್ತನ್ಯಪಾನ ಸಪ್ತಾಹದ ಧ್ಯೇಯವಾಕ್ಯ ‘ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ: ಪರಿಣಾಮಕಾರಿ ವಿಧಾನಗಳನ್ನು ಸದೃಢಗೊಳಿಸೋಣ’ ಎಂಬುದಾಗಿದೆ. ಈ ಸಪ್ತಾಹವು ಶಿಶುಗಳ ಪೋಷಣೆ, ರೋಗನಿರೋಧಕ ಶಕ್ತಿ ಹಾಗೂ ಆರೋಗ್ಯಕರ ಬೆಳವಣಿಗೆಯಲ್ಲಿ ತಾಯಿಯ ಎದೆಹಾಲಿನ ಪ್ರಾಮುಖ್ಯತೆಯನ್ನು ಸಾರುತ್ತದೆ” ಎಂದು ತಿಳಿಸಿದರು. ಮಗು ಜನಿಸಿದ ಮೊದಲ ಒಂದು ಗಂಟೆಯೊಳಗೆ ಕಡ್ಡಾಯವಾಗಿ ಎದೆಹಾಲುಣಿಸಬೇಕು. ಮೊದಲ ಆರು ತಿಂಗಳವರೆಗೆ ನೀರು ಸೇರಿದಂತೆ ಯಾವುದೇ ಬಾಹ್ಯ ಆಹಾರ ನೀಡದೆ ಕೇವಲ ತಾಯಿಯ ಎದೆಹಾಲನ್ನೇ ನೀಡಬೇಕು. ಆರು ತಿಂಗಳ ನಂತರ ಪೂರಕ ಆಹಾರದೊಂದಿಗೆ ಕನಿಷ್ಠ ಎರಡು ವರ್ಷ ಅಥವಾ ಅದಕ್ಕೂ ಹೆಚ್ಚು ಕಾಲ ಎದೆಹಾಲುಣಿಸುವುದು ಮಗುವಿನ ಅತ್ಯುತ್ತಮ ಬೆಳವಣಿಗೆಗೆ ಸಹಕಾರಿ ಎಂದು ಅವರು ವಿವರಿಸಿದರು. ಮಕ್ಕಳ ತಜ್ಞೆ ಡಾ. ಜಯಮಾಲಾ ಮಾತನಾಡಿ,…

Read More

ಸರಗೂರು: ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ತಾಲೂಕು ಘಟಕಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 8ರಂದು ಸರಗೂರು ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಸಮಾಜದ ಮುಖಂಡರು ಹಾಗೂ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ತಾಲೂಕು ಮಾದರ ಮಹಾಸಭಾದ ಅಧ್ಯಕ್ಷ ಪರಶಿವಮೂರ್ತಿ ಮನವಿ ಮಾಡಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಶಿವಮೂರ್ತಿ, ಈ ಕಾರ್ಯಕ್ರಮವು ಚಿತ್ರದುರ್ಗ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಹಾಗೂ ಹೆಚ್.ಡಿ. ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮಾಸ್ತಮ್ಮ ದೇವಸ್ಥಾನದಿಂದ ವೇದಿಕೆ ಕಾರ್ಯಕ್ರಮದವರೆಗೆ ನಡೆಯಲಿರುವ…

Read More

ಸರಗೂರು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವುದನ್ನು ಖಂಡಿಸಿ ಸರಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಅಧಿಕರ್ನಾಟಕ ಮಹಾಸಭಾ ವತಿಯಿಂದ ಸಭೆ ನಡೆಸಿ ವಿವಿಧ ಸಂಘಟನೆಗಳ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಭೆಯಲ್ಲಿ ಮಾತನಾಡಿದ ಅಧಿಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ, ರಾಜ್ಯದ ಹಿಂದುಳಿದ ಹಾಗೂ ದಲಿತ ಸಮುದಾಯದ ಪ್ರಬಲ ನಾಯಕರಾದ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದು ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ. ಸರ್ಕಾರ ಕೂಡಲೇ ಈ ನಿರ್ಧಾರವನ್ನು ಮರುಪರಿಶೀಲಿಸಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ದಸಂಸ ಜಿಲ್ಲಾ ಸಂಚಾಲಕ ಎಸ್.ಡಿ. ಸಣ್ಣಸ್ವಾಮಿ ಮಾತನಾಡಿ, ಮಹದೇವಪ್ಪ ಅವರು ಸಮಾಜದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ ಹಿರಿಯ ನಾಯಕರಾಗಿದ್ದು, ಅವರನ್ನು ಕಡೆಗಣಿಸಿರುವುದು ಬೇಸರದ ಸಂಗತಿ. ಈ ನಿರ್ಧಾರದಿಂದ ಸಮುದಾಯದ ಜನರಲ್ಲಿ ತೀವ್ರ ಅಸಮಾಧಾನ ಉಂಟಾಗಿದೆ ಎಂದರು. ಮುಖಂಡ ಮುಳ್ಳೂರು ಪುಟ್ಟಸ್ವಾಮಿ ಮಾತನಾಡಿ, ಸಚಿವ ಸಂಪುಟದಲ್ಲಿ ಇನ್ನೂ ಒಂದು…

Read More

ಸರಗೂರು: ಮಾಜಿ ಸಮಾಜ ಕಲ್ಯಾಣ ಸಚಿವ ಎಸ್.ಸಿ. ಮಹದೇವಪ್ಪ ಅವರನ್ನು ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವ ಕ್ರಮವನ್ನು ಖಂಡಿಸಿ ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷ ಪಿ. ಚಿನ್ನಣ್ಣ ಹಳಿಯೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಹಾಗೂ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಶೋಷಿತ ಮತ್ತು ದುರ್ಬಲ ವರ್ಗಗಳ ಪರವಾಗಿ ನಿರಂತರ ಸೇವೆ ಸಲ್ಲಿಸಿರುವ ಹಿರಿಯ ನಾಯಕರನ್ನು ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ಸರಿಯಾದ ನಿರ್ಧಾರವಲ್ಲ ಎಂದು ಹೇಳಿದರು. ಬಲಗೈ ಸಮುದಾಯದ ಪ್ರಮುಖ ನಾಯಕರನ್ನು ಕಡೆಗಣಿಸಿರುವುದು ತೀವ್ರ ಖಂಡನೀಯ. ರಾಜ್ಯ ಸರ್ಕಾರ ತಕ್ಷಣವೇ ಈ ನಿರ್ಧಾರವನ್ನು ಮರುಪರಿಶೀಲಿಸಿ, ಎಸ್.ಸಿ. ಮಹದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು. ತಪ್ಪಿದ್ದಲ್ಲಿ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಮಾತನಾಡಿದ ಮತ್ತೊಬ್ಬ ಮುಖಂಡರು, ಪ್ರಸ್ತುತ ರಾಜ್ಯ ಸಚಿವ…

Read More

ಕೊರಟಗೆರೆ: ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸಲು ಹೋದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೇವಲ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕೊರಟಗೆರೆ ತಾಲೂಕಿನ ತೋವಿನಕೆರೆ ಸಮೀಪದ ಕುರಂಕೋಟೆ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ. ಮೃತರನ್ನು ಕುರಂಕೋಟೆ ಗ್ರಾಮದ ಮಂಜುನಾಥ್ ಅವರ ಪತ್ನಿ ಚೈತ್ರಾ (20) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರ ಅತ್ತಿಗೆ ಶೈಲಮ್ಮ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುರಂಕೋಟೆ ಕ್ರಾಸ್‌ನಲ್ಲಿರುವ ಶಾರದ ವಿದ್ಯಾ ಮಂದಿರ ಶಾಲೆಗೆ ಅತ್ತಿಗೆಯ ಮಗುವನ್ನು ಕರೆತರಲು ಚೈತ್ರಾ ಮತ್ತು ಶೈಲಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಕೂಲಿಂಗ್ ಶೀಟ್ ಸಾಗಿಸುತ್ತಿದ್ದ ಲಾಂಗ್ ಚಾರ್ಸಿ ಲಾರಿಯೊಂದು ರಸ್ತೆಯಲ್ಲಿದ್ದ ದೊಡ್ಡ ಗುಂಡಿಯನ್ನು ತಪ್ಪಿಸಲು ಏಕಾಏಕಿ ವಾಹನವನ್ನು ತಿರುಗಿಸಿದೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ನೇರವಾಗಿ ಬೈಕ್‌ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಚೈತ್ರಾ ಸ್ಥಳದಲ್ಲೇ ಅಂತಿಮ ಉಸಿರೆಳೆದಿದ್ದಾರೆ. ನಾಲ್ಕು ತಿಂಗಳ…

Read More

ಸರಗೂರು: ಸಾಮಾಜಿಕ ಸೇವೆ ಹಾಗೂ ವೃತ್ತಿಪರ ಸಾಧನೆಗಳ ಮೂಲಕ ಜಿಲ್ಲೆಗೆ ಕೀರ್ತಿ ತಂದಿರುವ ಜಂಗಲ್ ಲಾಡ್ಜ್ ಬಂಡೀಪುರದ ಮ್ಯಾನೇಜರ್ ಪ್ರಸನ್ನ ಕುಮಾರ್ ಅವರನ್ನು ಸರಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ‘ಪಟ್ಟಣದ ಸ್ನೇಹಿತರು’ ಬಳಗದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಹಾಗೂ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿರುವ ಹಿನ್ನೆಲೆಯಲ್ಲಿ ಈ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ನೆರವೇರಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ನಾಯಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಶ್ರೀನಿವಾಸ ಅವರು, “ಪ್ರಸನ್ನ ಕುಮಾರ್ ಅವರು ತಮ್ಮ ನಿರಂತರ ಸೇವಾ ಮನೋಭಾವ, ಸಮಾಜಮುಖಿ ಕಾರ್ಯಗಳು ಹಾಗೂ ಸಾಧನೆಗಳ ಮೂಲಕ ಇಡೀ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಅವರಿಗೆ ಲಭಿಸಿರುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಹಾಗೂ ಗೌರವ ಡಾಕ್ಟರೇಟ್ ಗೌರವವು ನಮ್ಮೆಲ್ಲರಿಗೂ ಅತ್ಯಂತ ಸಂತಸ ತಂದಿದೆ” ಎಂದರು. ಮುಂದುವರಿದು ಮಾತನಾಡಿದ ಅವರು, “ಪ್ರಸನ್ನ ಕುಮಾರ್ ಅವರು ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನಿರಂತರವಾಗಿ ನೆರವು ನೀಡುತ್ತಾ ಬಂದಿದ್ದು, ಅವರ…

Read More

ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್ ಜಿ’ ಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಔರಾದ್ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಕಿರಣ ಪಾಟೀಲ್ ಹೇಳಿದರು. ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರು ಮಾತನಾಡಿದರು. ಯೋಜನೆಯ ಪ್ರಮುಖ ಸೌಲಭ್ಯಗಳು: ದಿನಗೂಲಿ ಹೆಚ್ಚಳ: ಯೋಜನೆಯಡಿ ದಿನಗೂಲಿ ಮೊತ್ತವನ್ನು ರೂ. 370 ರಿಂದ ರೂ. 382ಕ್ಕೆ ಏರಿಸಲಾಗಿದೆ. ಉದ್ಯೋಗ ದಿನಗಳ ವಿಸ್ತರಣೆ: ವಾರ್ಷಿಕ ಉದ್ಯೋಗಾವಕಾಶವನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ವಾರ್ಷಿಕ ಆದಾಯ: ಗ್ರಾಮೀಣ್ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬವೂ ವರ್ಷಕ್ಕೆ ರೂ. 47,750 ರವರೆಗೆ ಆದಾಯ ಗಳಿಸಲು ಅವಕಾಶ ಕಲ್ಪಿಸಲಾಗಿದೆ. 318 ವಿವಿಧ ಕಾಮಗಾರಿಗಳಿಗೆ ಅವಕಾಶ: ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ…

Read More