Author: Ganesh Tumkuru

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಾಗೂ ಸ್ಥಾನಮಾನ ಸಿಗದೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಶಮನಗೊಳಿಸುವ ಪ್ರಯತ್ನಗಳು ನಡೆಯುತ್ತಿದ್ದು, ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. “ಸಚಿವ ಸ್ಥಾನ ಸಿಗಲಿಲ್ಲವೆಂಬ ಕಾರಣಕ್ಕೆ ಪಕ್ಷ ಅಥವಾ ವರಿಷ್ಠರ ವಿರುದ್ಧ ಮಾತನಾಡುವುದು ಸರಿಯಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬುಧವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ಹಾಗೂ ಸರ್ಕಾರದ ನಿರ್ಧಾರಗಳ ಕುರಿತು ಹಲವು ವಿಷಯಗಳನ್ನು ಹಂಚಿಕೊಂಡರು. ಕಾಂಗ್ರೆಸ್ ನಲ್ಲಿ ಅರ್ಹ ಮತ್ತು ಯುವ ಶಾಸಕರ ಸಂಖ್ಯೆ ಹೆಚ್ಚಾಗಿದೆ. ಆದರೆ ನಿಯಮಗಳ ಪ್ರಕಾರ ಶೇಕಡಾ 15ರಷ್ಟು ಶಾಸಕರಿಗೆ ಮಾತ್ರ ಸಚಿವರಾಗಲು ಅವಕಾಶವಿರುತ್ತದೆ. ಸಾಮಾಜಿಕ ನ್ಯಾಯ, ಅನುಭವ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಂಡು ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿದೆ. “ನಮ್ಮಿಂದ ಪಕ್ಷ ಇದೆಯೇ ಹೊರತು, ಪಕ್ಷದಿಂದ ನಾವಿಲ್ಲ” ಎಂಬ ಕೆಲ ಶಾಸಕರ ಹೇಳಿಕೆಗೆ ಟಾಂಗ್ ನೀಡಿದ ಪ್ರಿಯಾಂಕ್ ಖರ್ಗೆ, ಆರಂಭದಲ್ಲಿ ಎಲ್ಲರೂ ಪಕ್ಷದ ಚಿಹ್ನೆ ಮತ್ತು ಬೆಂಬಲಕ್ಕಾಗಿ ಕಚೇರಿಗಳಿಗೆ ಅಲೆದಾಡಿದ್ದನ್ನು ನೆನಪಿಸಿಕೊಂಡರು. “ನಾವು ಎಷ್ಟೇ…

Read More

ಮಂಡ್ಯ / ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯದ ನೀರಿನ ಮಟ್ಟ 105 ಅಡಿಗೆ ಏರಿಕೆಯಾಗಿದೆ. ಇದರಿಂದಾಗಿ ಸಕ್ಕರೆ ನಾಡು ಮಂಡ್ಯದ ರೈತರಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ. ಜಲಾಶಯಕ್ಕೆ ನಿರಂತರ ಒಳಹರಿವು ಹೆಚ್ಚಿರುವುದರಿಂದ ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗುವಂತೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಬಿತ್ತನೆಗೆ ಇದು ಸೂಕ್ತ ಸಮಯವಾಗಿದ್ದು, ನೀರು ಹರಿಸುವ ಬಗ್ಗೆ ಸರ್ಕಾರ ಶೀಘ್ರವೇ ಅಧಿಕೃತ ಘೋಷಣೆ ಮಾಡಬೇಕು. ವಿಳಂಬವಾದರೆ ಬೆಳೆ ನಷ್ಟವಾಗುವ ಆತಂಕ ರೈತರನ್ನು ಕಾಡುತ್ತಿದೆ. ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದಾಗ, ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿದ್ದ ಕಾರಣ ಯಾವುದೇ ಹೊಸ ಬೆಳೆ ಬಿತ್ತನೆ ಮಾಡಬೇಡಿ ಎಂದು ಸರ್ಕಾರ ಸೂಚನೆ ನೀಡಿತ್ತು. ಆದರೆ ಈಗ ಕೊಡಗು ಹಾಗೂ ಸುತ್ತಮುತ್ತಲ…

Read More

ಹುಬ್ಬಳ್ಳಿ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಯುವ ಪೀಳಿಗೆಯಿಂದ (ಜೆನ್ ಝೀ) ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿಯವರು ನ್ಯಾಯಯುತ ಹಾಗೂ ಪ್ರಾಮಾಣಿಕವಾಗಿ ಚುನಾವಣೆ ನಡೆಸಿದರೆ ಖಂಡಿತವಾಗಿ ಸೋಲುತ್ತಾರೆ. ಹೀಗಾಗಿಯೇ ಅವರು ನ್ಯಾಯಯುತ ಚುನಾವಣೆ ನಡೆಸಲು ಬಿಡುವುದಿಲ್ಲ ಎಂದು ಸಚಿವ ಸಂತೋಷ್ ಲಾಡ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಾರ್ವಜನಿಕರ ನೈಜ ಪ್ರಶ್ನೆಗಳಿಗೆ ಉತ್ತರಿಸದೆ, ಕೇವಲ ಧರ್ಮ ಮತ್ತು ದೇವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಮಾಡುತ್ತಿರುವುದು ಒಳ್ಳೆಯ ವಿಚಾರ. ಆದರೆ ಅಧ್ಯಯನ ನಡೆಸಿ ಅದರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿ. ಇದರಿಂದಲಾದರೂ ಕೇಂದ್ರದಿಂದ ರಾಜ್ಯದ ರೈತರಿಗೆ ಬೆಳೆ ಪರಿಹಾರ ದೊರೆಯಲಿ ಎಂದು ಲಾಡ್ ಟಾಂಗ್ ನೀಡಿದರು. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ವಿರುದ್ಧ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ನೀಡುವಷ್ಟು ಅನುದಾನ ಕರ್ನಾಟಕಕ್ಕೆ ನೀಡುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಬೆಳೆ ಪರಿಹಾರದ ಹಣ ಇನ್ನೂ ಬಂದಿಲ್ಲ. ಬೆಳೆ…

Read More

ತುರುವೇಕೆರೆ: ಪಟ್ಟಣದ ಖಾಸಗಿ ಹೋಟೆಲ್ ಮುಂಭಾಗದಲ್ಲಿ ನನ್ನ ಮತದಾನ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದರು. ಎಸ್ ಐಆರ್ ಫಾರಂ ಆನ್ ಲೈನ್ ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿ ಸಮಿತಿ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್ ಮಾತನಾಡಿ, ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ…

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಮುಂಗಾರು ಮಳೆಯಿಲ್ಲದೇ ಕರ್ನಾಟಕದ 28 ಜಿಲ್ಲೆಗಳು ಬರಪೀಡಿತ ಪ್ರದೇಶ. ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಪತ್ರಬರೆದು ಕೈಕಟ್ಟಿಕೊಂಡು ಕುಳಿತುಕೊಂಡ್ರೇ ಆಗೋದಿಲ್ಲ. ಚುನಾವಣೆ ಬಂದಾಗ ರಾಜಕೀಯ ಮಾಡೋಣ ಈಗ ತುರ್ತಾಗಿ 10 ಸಾವಿರ ಕೋಟಿ ಬರಗಾಲದ ಹಣ ಬಿಡುಗಡೆ ಮಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ ಮಾಡಿದರು. ಕೊರಟಗೆರೆ ತಾಲೂಕು ಕೋಳಾಲ ಮತ್ತು ಚನ್ನರಾಯನದುರ್ಗ ಹೋಬಳಿಯ 6 ಗ್ರಾಮಗಳ ರೈತರ ಜಮೀನುಗಳಿಗೆ ಮಂಗಳವಾರ ಭೇಟಿ ನೀಡಿ ಮುಸುಕಿನ ಜೋಳ, ರಾಗಿ ಮತ್ತು ಶೇಂಗಾ ಬೆಳೆಗಳ ಬರ ಅಧ್ಯಯನ ನಡೆಸಿದ ನಂತರ ಮಾತನಾಡಿದರು. ಕಲ್ಪತರು ಜಿಲ್ಲೆಯಲ್ಲಿ ಶೇಂಗಾ ಮತ್ತು ಮುಸುಕಿನ ಜೋಳದ ಬಿತ್ತನೆಯ ಅವಧಿ ಮುಗಿದಿದೆ. ಬಿತ್ತನೆ ಮಾಡಿರುವ ರಾಗಿ ಬೆಳೆ ಮಳೆಯಿಲ್ಲದೇ ನೆಲಕಚ್ಚಿದೆ. ಸಿರಿಧಾನ್ಯ ಬೆಳೆಗಳ ಬಿತ್ತನೆಗೆ ರೈತರ ಆಸಕ್ತಿಯೇ ಇಲ್ಲದೇ ವಿಮೆಯ ಹಣ ಕಟ್ಟೋದಿಕ್ಕೂ ಕಲ್ಪತರು ಜಿಲ್ಲೆಯ ರೈತರ ಬಳಿ ಹಣವಿಲ್ಲ. ರಾಜ್ಯ ಸರಕಾರ ತಕ್ಷಣವೇ ಬರಗಾಲ ಘೋಷಣೆ ಮಾಡಿ ರೈತರ ನೇರವಿಗೆ…

Read More

ರಾಘವೇಂದ್ರ ಅಡಿಗ ಎಚ್ಚೆನ್ ಆಗಸ್ಟ್ 7ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಚಿತ್ರ ನಿರ್ಮಾಪಕ ಅಮಿತ್ ರೈ ಅವರ ಕುಟುಂಬ ಸಮೇತ ನೋಡಬಹುದಾದ ‘ಓಹ್ ಮೈ ಡಾಗ್’ ಚಿತ್ರವು, ಬಿಡುಗಡೆಗೂ ಮುನ್ನವೇ ದೇಶಾದ್ಯಂತ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನಗಳಲ್ಲಿ ಪ್ರೇಕ್ಷಕರ ಮನ ಗೆಲ್ಲುತ್ತಿದೆ. ಭಾರತದ ವಿವಿಧ ನಗರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಂತರ, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ವಿಶೇಷ ಪ್ರದರ್ಶನದಲ್ಲೂ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೊಡ್ಡ ಮಟ್ಟದ ಪ್ರಚಾರ ತಂತ್ರಗಳೇ ಹೆಚ್ಚಾಗಿರುವ ಈ ದಿನಗಳಲ್ಲಿ, ‘ಓಹ್ ಮೈ ಡಾಗ್’ ತಂಡವು ಬಿಡುಗಡೆಗೂ ಮುನ್ನವೇ ಜನರಿಗೆ ಸಿನಿಮಾ ತೋರಿಸಿ, ಅವರಿಂದ ಬರುವ ನೈಜ ಅಭಿಪ್ರಾಯಗಳನ್ನೇ ತನ್ನ ಮುಖ್ಯ ಪ್ರಚಾರವನ್ನಾಗಿ ಮಾಡಿಕೊಂಡಿದೆ. ‘ದಿ ಲಂಚ್ ಬಾಕ್ಸ್’ ಮತ್ತು ‘ಲಾಪತಾ ಲೇಡೀಸ್’ ರೀತಿಯ ಹಿಟ್ ಸಿನಿಮಾಗಳು ಅನುಸರಿಸಿದ್ದ ಈ ತಂತ್ರದಂತೆಯೇ, ಈ ಚಿತ್ರತಂಡವೂ ಪ್ರೇಕ್ಷಕರ ಜನಾಭಿಪ್ರಾಯವನ್ನು ನೆಚ್ಚಿಕೊಂಡಿದೆ. ಇಂದೋರ್, ದೆಹಲಿ, ಪುಣೆ, ಲಕ್ನೋ, ಕೋಲ್ಕತ್ತಾ, ಪಟ್ನಾ, ಅಹಮದಾಬಾದ್, ಗುವಾಹಾಟಿ, ಜೈಪುರ ಮತ್ತು…

Read More

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆ ಎಚ್ಚರಿಕೆಯ ಸಂದೇಶ ನೀಡಿದೆ. ರಾಜ್ಯಾದ್ಯಂತ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆಯ ವೇಳೆ ಅಗತ್ಯ ದಾಖಲೆಗಳು ಹಾಗೂ ವಿವರಗಳನ್ನು ನೀಡಲು ನಿರಾಕರಿಸಿದರೆ ಅಥವಾ ಲಭ್ಯವಾಗದಿದ್ದರೆ ಫಲಾನುಭವಿಗಳು ಯೋಜನೆಯ ಲಾಭದಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 1,65,32,652 ಗೃಹ ವಿದ್ಯುತ್ ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಆಗಸ್ಟ್ 2, 2026ರವರೆಗೆ 91,50,081 ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಇನ್ನು 73,82,571 ಫಲಾನುಭವಿಗಳ ಮಾಹಿತಿ ಸಂಗ್ರಹಿಸುವುದು ಬಾಕಿಯಿದೆ. ಯಾವುದೇ ಅರ್ಹ ಗ್ರಾಹಕರು ಯೋಜನೆಯ ಸೌಲ್ಯಭದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಎಲ್ಲಾ ಎಸ್ಕಾಂ ಕಚೇರಿಗಳಲ್ಲಿ ವಿಶೇಷ ಸಮೀಕ್ಷಾ ಶಿಬಿರಗಳನ್ನು ನಡೆಸಲು ಸರ್ಕಾರದ ಅನುಮತಿ ಕೋರಲಾಗಿದೆ. ಬೆಸ್ಕಾಂ ವ್ಯಾಪ್ತಿಯ ವೈಟ್‌ಫೀಲ್ಡ್, ಮಹದೇವಪುರ ಹಾಗೂ ಸರ್ಜಾಪುರ ಸೇರಿದಂತೆ ಹಲವು ಬೃಹತ್ ಅಪಾರ್ಟ್‌ಮೆಂಟ್‌ಗಳಲ್ಲಿ ಮೀಟರ್ ರೀಡರ್‌ಗಳಿಗೆ ಪ್ರವೇಶ ನೀಡದಿರುವುದು ಮತ್ತು ನಿವಾಸಿಗಳು ವೈಯಕ್ತಿಕ ಮಾಹಿತಿ ಹಂಚಿಕೊಳ್ಳಲು ಹಿಂದೇಟು ಹಾಕುತ್ತಿರುವುದು ಸಮೀಕ್ಷೆ ಕಾರ್ಯಕ್ಕೆ…

Read More

ತುಮಕೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಕೆಎಸ್‌ ಆರ್‌ ಟಿಸಿ (KSRTC) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಸಾಮಾನ್ಯ ರೈತರ ಮಕ್ಕಳು ಮೇಲೆ ಬರುವುದು ಕಷ್ಟ ಎಂಬ ಬೇಸರ ಹೊರಹಾಕಿದ್ದಾರೆ: “ಜನ ನನಗೆ ಸಚಿವ ಸ್ಥಾನ ನೀಡಬೇಕೆಂದು ಬಯಸಿದ್ದರು. ಆದರೆ ಯಾರು ನಿರ್ಧಾರ ತೆಗೆದುಕೊಳ್ಳಬೇಕಿತ್ತೋ ಅವರು ಗಮನಿಸಲಿಲ್ಲ. ನಮಗೆ ಗಾಡ್ ಫಾದರ್ ಇಲ್ಲದ ಕಾರಣ ಸಚಿವ ಸ್ಥಾನ ತಪ್ಪಿದೆ.” “ಯಾರದಾದರೂ ತಲೆ ಹೊಡೆದು ಹಣ ಸಂಪಾದನೆ ಮಾಡಿದವರು ಮಾತ್ರ ಮೇಲಕ್ಕೆ ಬರುತ್ತಾರೆ. ಜಗಳ ಮಾಡಿ ಪಡೆಯಲು ಇದೇನು ನಮ್ಮ ಅಪ್ಪನ ಆಸ್ತಿಯಲ್ಲ. ನಮಗೆ ಯೋಗ್ಯತೆ ಇಲ್ಲ ಎಂದು ಭಾವಿಸಬೇಕಷ್ಟೇ.” ರಾಜೀನಾಮೆ ನಿರ್ಧಾರ: ಕೆಎಸ್‌ ಆರ್‌ ಟಿಸಿ ಸಂಸ್ಥೆ ನಷ್ಟದಲ್ಲಿದ್ದು, ಅಲ್ಲಿ ಸಾಧನೆ ಮಾಡಲು ಅವಕಾಶವಿಲ್ಲದ ಕಾರಣ ಬುಧವಾರ (ನಾಳೆ) ಅಧಿಕೃತವಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ…

Read More

ತುಮಕೂರು: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ಹೋರಾಟದ ಫಲವಾಗಿ ಬಡ್ತಿ ಮೀಸಲಾತಿ ಜಾರಿಯಲ್ಲಿದೆ. ಹಾಗೆಯೇ ಸಂವಿಧಾನದ ಅಡಿಯಲ್ಲಿ ಅವಕಾಶಗಳನ್ನು ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಎಸ್ಸಿ, ಎಸ್ಟಿ ನೌಕರರು ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಗ್ಗೂಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ 2026ರ ಆಗಸ್ಟ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶದಲ್ಲಿ ಎಲ್ಲಾ ನೌಕರರು ಪಾಲ್ಗೊಳ್ಳುವಂತೆ ಸಮಿತಿ ಅಧ್ಯಕ್ಷ ಡಿ. ಶಿವಶಂಕರ್ ಮನವಿ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‌ ನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ವತಿಯಿಂದ ಹಮ್ಮಿಕೊಂಡಿರುವ 6ನೇ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಇಡೀ ದೇಶದಲ್ಲಿ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ನಡೆಸಿದ ಹೋರಾಟ ಐತಿಹಾಸಿಕ. ಅದರ ಫಲವಾಗಿ ಇಡೀ ದೇಶದಲ್ಲಿ ಎಲ್ಲಿಯೂ ಇಲ್ಲದ ಬಡ್ತಿ ಮೀಸಲಾತಿ ಕರ್ನಾಟಕದಲ್ಲಿದೆ. ಇದು ಸಮನ್ವಯ…

Read More

ತುಮಕೂರು: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ 7 ಶಾಸಕರನ್ನು ಹೊಂದಿರುವ ತುಮಕೂರು ಜಿಲ್ಲೆಗೆ ಮಂತ್ರಿ ಸ್ಥಾನ ಸಿಗದಿರುವುದು ಜಿಲ್ಲಾ ಕಾಂಗ್ರೆಸ್ ನಾಯಕರು ಹಾಗೂ ಅವರ ಬೆಂಬಲಿಗರಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ,  ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್  ನೇತೃತ್ವದ ಸರ್ಕಾರದಲ್ಲಿ 2ನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಉಳಿದ ಶಾಸಕರು ಮತ್ತು ಪರಿಷತ್ ಸದಸ್ಯರಿಗೆ ಅವಕಾಶ ನೀಡದಿರುವುದು ಪಕ್ಷದೊಳಗೆ ಅಸಮಾಧಾನದ ಹೊಗೆಯಾಡುವಂತೆ ಮಾಡಿದೆ. ಟಿ.ಬಿ.ಜಯಚಂದ್ರ ರಾಜೀನಾಮೆ ಸೂಚನೆ 2ನೇ ಹಂತದ ವಿಸ್ತರಣೆಯಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಶಾಸಕ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಅವಕಾಶ ಕೈತಪ್ಪಿದೆ. ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಅವರು ಯಾವ ಮಾನದಂಡವಿಟ್ಟು ಕೃಪೆ ತೋರಿದ್ದಾರೋ ಗೊತ್ತಿಲ್ಲ. ಹಿರಿಯರು ಮತ್ತು ಪಕ್ವತೆ ಹೊಂದಿರುವ ಶಾಸಕರಿಗೆ ಅವಕಾಶ ನೀಡಬೇಕಿತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ತಮಗೆ ಅವಕಾಶ ಸಿಗದಿದ್ದಕ್ಕೆ ಸಿರಾ ಕ್ಷೇತ್ರದ ಮತದಾರರು ಹಾಗೂ ಬೆಂಬಲಿಗರು…

Read More