Author: Ganesh Tumkuru

ಕಾರವಾರ: ಅಡ್ವಾನ್ಸ್ಡ್ ಪೋಸ್ಟಲ್ ಟೆಕ್ನಾಲಜಿ 2.0 ವ್ಯವಸ್ಥೆಯಡಿಯಲ್ಲಿ ಕೊರಿಯರ್, ಎಕ್ಸ್‌ಪ್ರೆಸ್ ಮತ್ತು ಪಾರ್ಸೆಲ್ ಜಾಲವನ್ನು ಬಲಪಡಿಸಲು ಮತ್ತು ಸಾರ್ವಜನಿಕರಿಗೆ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಭಾರತೀಯ ಅಂಚೆ ಇಲಾಖೆಯು ಹೊಸ ಫ್ರಾಂಚೈಸಿ ಯೋಜನೆ 2.0 ಪ್ರಾರಂಭಿಸಿದೆ. ಈ ಯೋಜನೆಯು ಸ್ಥಳೀಯ ಅಂಗಡಿಕಾರರು, ಸಣ್ಣ ಉದ್ಯಮಿಗಳು, ಲಾಜಿಸ್ಟಿಕ್ ಸಂಸ್ಥೆಗಳು, ಅಗ್ರಿಗೇಟರ್‌ಗಳು ಮತ್ತು ಯುವಕರಿಗೆ ಭಾರತೀಯ ಅಂಚೆಯೊಂದಿಗೆ ಬುಕಿಂಗ್, ಪಾರ್ಸೆಲ್ ಡೆಲಿವರಿ ಮತ್ತು ಮನೆಬಾಗಿಲ ಸಂಗ್ರಹಣೆ ಸೇವೆಗಳನ್ನು ಒದಗಿಸಲು ಅತ್ಯುತ್ತಮ ಸ್ವಯಂ ಉದ್ಯೋಗದ ಹಾಗೂ ಉದ್ಯಮಶೀಲತೆಯ ಅವಕಾಶವನ್ನು ನೀಡುತ್ತದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಪರಿಶೀಲಿಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ 15 ದಿನಗಳ ಒಳಗೆ ನಿಶ್ಚಿತಾರ್ಥ ಪತ್ರ ನೀಡಲಾಗುವುದು. ಹೆಚ್ಚಿನ ವಿವರಗಳಿಗಾಗಿ, ಮಾರ್ಗದರ್ಶಿಗಳಿಗಾಗಿ ಹತ್ತಿರದ ಅಂಚೆ ಕಚೇರಿ ಹಾಗೂ ದೂ.ಸಂ: 08382221431 / 221435, ಮೊ.ಸಂ: 9686541879 ನ್ನು ಸಂಪರ್ಕಿಸಿ ಅಥವಾ www.indiapost.gov.in ವೆಬ್‌ ಸೈಟ್‌ ಗೆ ಭೇಟಿ ನೀಡಬಹುದೆಂದು ಕಾರವಾರ ವಿಭಾಗದ ಅಂಚೆ ಅಧೀಕ್ಷಕರಾದ ಹೂವಪ್ಪ…

Read More

ಬೀದರ್: ಜಿಲ್ಲೆಯ ವಿವಿಧ ಶಾಲೆಗಳ ಅಡುಗೆ ಕೋಣೆಗಳಿಂದ ಗ್ಯಾಸ್ ಸಿಲಿಂಡರ್‌ ಗಳನ್ನು ಕಳ್ಳತನ ಮಾಡುತ್ತಿದ್ದ ದೊಡ್ಡ ಜಾಲವೊಂದನ್ನು ಭಾಲ್ಕಿ ಉಪ–ವಿಭಾಗದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಭಾಲ್ಕಿ ಗ್ರಾಮೀಣ, ಮೇಹಕರ ಹಾಗೂ ಖಟಕ್ ಚಿಂಚೋಳಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 09 ಸಿಲಿಂಡರ್ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ. ದಿನಾಂಕ 02-08-2026 ರಂದು ಕಳವು ಮಾಡಿದ ಸಿಲಿಂಡರ್‌ ಗಳನ್ನು ಮಹಾರಾಷ್ಟ್ರದ ಉದ್ಗೀರ್ ಕಡೆಗೆ ಕಾರಿನಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಒಯ್ಯಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಪ್ರದೀಪ್ ಗುಂಟಿ (IPS), ಹೆಚ್ಚುವರಿ ಎಸ್ಪಿ ಚಂದ್ರಕಾಂತ ಪೂಜಾರಿ ಮತ್ತು ಭಾಲ್ಕಿ ಡಿವೈಎಸ್ಪಿ ಬಾಲಪ್ಪ ನಂದಗಾಂವಿ ಅವರ ಮಾರ್ಗದರ್ಶನದಲ್ಲಿ ಭಾಲ್ಕಿ ಗ್ರಾಮೀಣ ವೃತ್ತದ ಸಿಪಿಐ ಹಣಮರೆಡ್ಡಿ ಹಾಗೂ ಪಿಎಸ್…

Read More

ತುಮಕೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 560 ಭೂಮಾಪಕರ ಹುದ್ದೆಗಳಿಗೆ, ಅರ್ಜಿಹಾಕಲು ಆ.7 ಅಂತಿಮ ದಿನಾಂಕ ನಿಗದಿಪಡಿಸಿದೆ, ಕರ್ನಾಟಕ ವಿಶೇಷ ಮೀಸಲು ಪೊಲೀಸ್ ಕಾನ್ಸ್ ಟೇಬಲ್ 1455 ಹುದ್ದೆಗಳಿಗೆ ಆನ್‌ ಲೈನ್‌ ನಲ್ಲಿ ಅರ್ಜಿಸಲ್ಲಿಸಲು ಆ.10 ಅಂತಿಮ ದಿನಾಂಕವಾಗಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು, ಈ ಮೂರು ಹುದ್ದೆಗಳಿಗೆ ಕೃಷಿಕ್ ಸರ್ವೋದಯ ಫೌಂಡೇಷನ್ (ರಿ) ಕುವೆಂಪುನಗರ, ತುಮಕೂರು ಇವರು ಆ.6ರಂದು ಬೆಳಿಗ್ಗೆ 10:30ಗಂಟೆಗೆ ಸಂಸ್ಥೆಯ ಆವರಣದಲ್ಲಿ ಸದರಿ ಹುದ್ದೆಗಳಿಗೆ ಪೂರ್ವಭಾವಿ ಸಿದ್ಧತೆಗಾಗಿ, ಅರ್ಜಿಗಳನ್ನು ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವಯೋಮಿತಿ, ಪಠ್ಯಕ್ರಮ, ಲಿಖಿತ ಪರೀಕ್ಷೆ, ಅಂಕಗಳ ವಿಂಗಡನೆ, ನಿಗದಿಯಾಗಿರುವ, ಪರೀಕ್ಷಾ ದಿನಾಂಕ ಇತ್ಯಾದಿ ವಿವರಗಳನ್ನು ಉಚಿತ ಒರಿಯಂಟೇಶನ್ ಕಾರ್ಯಾಗಾರದಲ್ಲಿ ನೀಡಲಾಗುವುದು. ಆಸಕ್ತ ಉದ್ಯೋಗಾಂಕ್ಷಿಗಳು ಹೆಸರನ್ನು ಆ.6ರೊಳಗೆ 9449146200 ಸಂಪರ್ಕಿಸಿ ನೋಂದಾಯಿಸಿಕೊಳ್ಳಲು ಕೃಷಿಕ್ ಸರ್ವೋದಯ ಫೌಂಡೇಷನ್ (ರಿ) ತುಮಕೂರು ಶಾಖೆಯ ಕಾರ್ಯದರ್ಶಿ ಹೆಚ್.ಎಸ್. ಹನುಮೇಗೌಡರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತಿಪಟೂರು: ತಾಲೂಕಿನಾದ್ಯಂತ ಕುಡಿಯುವ ನೀರು ಮತ್ತು ಅಸಮರ್ಪಕ ವಿದ್ಯುತ್ ಸರಬರಾಜಿನಿಂದಾಗಿ ಜನ ಹಾಗೂ ಜಾನುವಾರುಗಳಿಗೆ ನೀರು-ಮೇವಿಗೆ ತೀವ್ರ ಅಭಾವ ಉಂಟಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸರ್ಕಾರಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಶ್ವತ್ ನಾರಾಯಣ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ಕೆಲಸಗಳಿಗೂ ಜನರು ಸರ್ಕಾರಿ ಕಚೇರಿಗಳಿಗೆ ಐದಾರು ಬಾರಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮ ಅಳಲನ್ನು ನಮೊಂದಿಗೆ ತೋಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ತಾಲೂಕಿನ 26 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮನೆ ಹಾಗೂ ಕಿರಾಣಿ ಅಂಗಡಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಹೊನ್ನವಳ್ಳಿ ಹೋಬಳಿಯೊಂದರಲ್ಲೇ ಕಳೆದ ಒಂದು ತಿಂಗಳ ಅವಧಿಯಲ್ಲಿ ಒಂದೇ ಮನೆಯ ಮೂವರು ಮದ್ಯವ್ಯಸನಕ್ಕೆ ಬಲಿಯಾಗಿದ್ದಾರೆ. ಅಧಿಕಾರಿಗಳು ಇದನ್ನು ತಡೆಯಲು ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ತಾಲೂಕಿನ 225 ಶಾಲೆಗಳಿಗೆ ಉಚಿತ ನೋಟ್‌ಬುಕ್ ವಿತರಣೆ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ, ಹಲವು ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಹಾಗೂ…

Read More

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ, ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ್ದರಿಂದ ಬೇಸರಗೊಂಡ ಅಭಿಮಾನಿಗಳು ಕೈಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರಗಳನ್ನು ಹಿಡಿದು ಹಿರೇಬಾಗೇವಾಡಿ ಟೋಲ್ ಬಳಿ ಧರಣಿ ಕುಳಿತರು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ತೆರವುಗೊಳಿಸಿದರು. ಬಳಿಕ ಪ್ರತಿಭಟನಾಕಾರರು ಹಿರೇಬಾಗೇವಾಡಿ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಧರಣಿ ಮುಂದುವರಿಸಿದರು. ಬೆಳಗಾವಿ ಮಾತ್ರವಲ್ಲದೆ ಬೆಂಗಳೂರಿನ ಚಾಲುಕ್ಯ ವೃತ್ತದಲ್ಲೂ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಪ್ರತಿಭಟನೆ ನಡೆಸಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು. ಕಾಂಗ್ರೆಸ್ ನಾಯಕರ ಆಗ್ರಹ: ಹಿರೇಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ. ಪಾಟೀಲ ಮಾತನಾಡಿ, “ಕಳೆದ ಮೂರು ವರ್ಷಗಳಿಂದ ಮಹಿಳಾ…

Read More

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಶಾಸಕರ ನೂತನ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಅಸಮಾಧಾನ ಸ್ಫೋಟಗೊಂಡಿದೆ. ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಕೆಲ ಹಿರಿಯ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ. ಈ ರಾಜೀನಾಮೆ ಬೆದರಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅಸಮಾಧಾನಗೊಂಡ ಶಾಸಕರಿಗೆ ಶಮನ ಮಾಡಲು ಕಠಿಣ ನಿಲುವು ತಳೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿರುವ ಪಕ್ಷದ ವರಿಷ್ಠರು, ಮಂತ್ರಿಗಿರಿ ಸಿಗದ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ನಿಗಮ ಮಂಡಳಿಯನ್ನೂ ನಿರಾಕರಿಸಿ ಯಾರಾದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ಅದನ್ನು ತಕ್ಷಣವೇ ಅಂಗೀಕರಿಸುವಂತೆ ಸಿಎಂಗೆ ಸ್ಪಷ್ಟ ನಿರ್ದೇಶನ ನೀಡಿ ಭರ್ಜರಿ ಶಾಕ್ ನೀಡಿದ್ದಾರೆ. ಈ ಬೆಳವಣಿಗೆಯ ನಡುವೆ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಈಗಾಗಲೇ ಸ್ಪೀಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು…

Read More

ಬೀದರ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ಜಿಲ್ಲಾದ್ಯಂತ ನಡೆದ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ ಅತ್ಯಂತ ಸುಸೂತ್ರವಾಗಿ ಹಾಗೂ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಲಿಖಿತ ಪರೀಕ್ಷೆಯನ್ನು ಎರಡು ವಿಭಿನ್ನ ಹಂತಗಳಲ್ಲಿ ಆಯೋಜಿಸಲಾಗಿತ್ತು. ಬೆಳಿಗ್ಗೆ 10 ಗಂಟೆಗೆ ಕಲ್ಯಾಣ ಕರ್ನಾಟಕದ ಹೊರತಾದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆದರೆ, ಸಂಜೆ 4 ಗಂಟೆಗೆ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳು ಪರೀಕ್ಷೆ ಬರೆದರು. ಜಿಲ್ಲೆಯ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ 10,627 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 9,994 ಅಭ್ಯರ್ಥಿಗಳು ಹಾಜರಾಗಿದ್ದು, 663 ಅಭ್ಯರ್ಥಿಗಳು ಗೈರುಹಾಜರಾಗಿದ್ದರು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಲಿಂಗರಾಜ ಅಪ್ಪಾ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾದ ಮುನ್ನೆಚ್ಚರಿಕೆ ಕ್ರಮಗಳು, ಅಕ್ರಮ ತಡೆ ವ್ಯವಸ್ಥೆ ಹಾಗೂ ಅಭ್ಯರ್ಥಿಗಳಿಗೆ ಕಲ್ಪಿಸಲಾದ ಮೂಲಭೂತ ಸೌಕರ್ಯಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಂದ…

Read More

ಕೂಡ್ಲಿಗಿ: ತಾಲೂಕಾಡಳಿತದ ವತಿಯಿಂದ ಆಯೋಜಿಸುವ ಸಭೆಗಳು ಹಾಗೂ ರಾಷ್ಟ್ರೀಯ ಹಬ್ಬ/ಉತ್ಸವಗಳು ಕೇವಲ ಕಾಟಾಚಾರಕ್ಕೆ ನಡೆಯಬಾರದು. ಅವು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಶಿಷ್ಟಾಚಾರದ ನಿಯಮಗಳಿಗೆ ಅನುಗುಣವಾಗಿ ನಡೆಯಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ತಾಲೂಕಾಡಳಿತವನ್ನು ಆಗ್ರಹಿಸಿದ್ದಾರೆ. ಆಗಸ್ಟ್ 1 ರಂದು ಕೂಡ್ಲಿಗಿಯ ಪ್ರವಾಸಿ ಮಂದಿರದಲ್ಲಿ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆಯಿತು. ಸಭೆ ಹಾಗೂ ಉತ್ಸವಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿನಾಕಾರಣ ಗೈರುಹಾಜರಾಗುವುದು ಅಭ್ಯಾಸವಾಗಿದೆ. ತಾಲೂಕಾಡಳಿತವೇ ಇದಕ್ಕೆ ನೇರ ಹೊಣೆಯಾಗಿದ್ದು, ಗೈರಾಗುವವರ ವಿರುದ್ಧ ಕಾನೂನುರೀತ್ಯ ಶಿಸ್ತು ಕ್ರಮ ಜರುಗಿಸಬೇಕು. ಸಭೆ ಮತ್ತು ಆಚರಣೆಗಳ ಸಂದರ್ಭದಲ್ಲಿ ಶಿಷ್ಟಾಚಾರವನ್ನು ಗಾಳಿಗೆ ತೂರಲಾಗುತ್ತಿದೆ. ವೇದಿಕೆಯಲ್ಲಿ ಜನಪ್ರತಿನಿಧಿಗಳು, ಉನ್ನತಾಧಿಕಾರಿಗಳು ಹಾಗೂ ಅರ್ಹ ಗಣ್ಯರನ್ನು ಹೊರತುಪಡಿಸಿ ಇತರರಿಗೆ ಮಣೆ ಹಾಕಬಾರದು. ವೇದಿಕೆಯ ಗಾಂಭೀರತೆ ಮತ್ತು ಘನತೆಗೆ ಧಕ್ಕೆ ಬರಬಾರದು. ಉತ್ಸವಗಳು ಮಕ್ಕಳಿಗೆ ಸಂಭ್ರಮ ತರಬೇಕು. ಸಾಂಸ್ಕೃತಿಕ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಮಕ್ಕಳಿಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು. ಧ್ವಜಾರೋಹಣ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಶಾಸನಸಭೆ ಮತ್ತು ವಿಧಾನಪರಿಷತ್ತಿನ ಪ್ರಮುಖ ಹುದ್ದೆಗಳ ಭರ್ತಿಗೆ ಎಐಸಿಸಿ (AICC) ಅಂತಿಮ ಅನುಮೋದನೆ ನೀಡಿದ್ದು, ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಅಧಿಕೃತ ಪತ್ರ ರವಾನಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ ಹೊಸ ಸಚಿವರ ಪಟ್ಟಿಯಲ್ಲಿ ಪಿ. ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ. ಎಸ್. ಬಸವಂತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ. ಝಡ್. ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ, ಮಂಕಾಳ ವೈದ್ಯ, ಡಾ. ಅಜಯ್ ಸಿಂಗ್, ಎನ್. ಚಲುವರಾಯಸ್ವಾಮಿ, ಕೆ. ಎಂ. ಶಿವಲಿಂಗೇಗೌಡ, ಹೆಚ್. ಸಿ. ಬಾಲಕೃಷ್ಣ, ಗಾಯತ್ರಿ ಶಾಂತೇಗೌಡ, ಬಸವರಾಜ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಹಾಗೂ ಲಕ್ಷ್ಮಣ ಸವದಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಶಾಸನಸಭೆ ಮತ್ತು ವಿಧಾನಪರಿಷತ್ತಿನ ಪ್ರಮುಖ ಹುದ್ದೆಗಳಿಗೆ ಸಂಬಂಧಿಸಿದಂತೆ, ವಿಧಾನಸಭೆಯ…

Read More

ಬೆಂಗಳೂರು: ರಾಜ್ಯದ ಭೂಮಿ, ನೀರು ಮತ್ತು ಭಾಷೆಗೆ ಸಂಬಂಧಿಸಿದ ಗಂಭೀರ ವಿಚಾರಗಳು ಎದುರಾದಾಗ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕರ್ನಾಟಕದ ಹಿತಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲುವುದು ನಮ್ಮ ರಾಜ್ಯದ ರಾಜಕೀಯ ಪರಂಪರೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಭೆಯ ಬಳಿಕ ‘ಎಕ್ಸ್’ (ಟ್ವಿಟರ್) ತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿದ್ದರಾಮಯ್ಯ, “ಹಿಂದೆಯೂ ವಿವಿಧ ರಾಜಕೀಯ ಪಕ್ಷಗಳ ಸರ್ಕಾರಗಳು ಇಂತಹ ಕಠಿಣ ಸನ್ನಿವೇಶಗಳನ್ನು ಎದುರಿಸಿದ್ದವು. ಆ ಎಲ್ಲಾ ಸಂದರ್ಭಗಳಲ್ಲಿಯೂ ವಿರೋಧ ಪಕ್ಷಗಳು ಸರ್ಕಾರದ ಬೆಂಬಲಕ್ಕೆ ನಿಂತಿದ್ದವು” ಎಂದು ನೆನಪಿಸಿಕೊಂಡರು. “ಇಂದಿಗೂ ಸಹ ರಾಜ್ಯದ ಹಿತರಕ್ಷಣೆಗಾಗಿ ಪ್ರತಿಪಕ್ಷಗಳು ರಚನಾತ್ಮಕ ಹಾಗೂ ಉಪಯುಕ್ತ ಸಲಹೆಗಳನ್ನು ನೀಡುವುದರ ಜೊತೆಗೆ ಸರ್ಕಾರದ ಬೆಂಬಲಕ್ಕೆ ನಿಲ್ಲಲಿವೆ ಎಂಬ ಪೂರ್ಣ ವಿಶ್ವಾಸ ನನಗಿದೆ” ಎಂದು ತಿಳಿಸಿದರು. ಮಳೆ ಅಭಾವದಿಂದ ಸಂಕಷ್ಟ ಎದುರಾದಾಗ ಕಾವೇರಿ ನೀರು ಹಂಚಿಕೆ ವಿಚಾರವಾಗಿ…

Read More