Author: Ganesh Tumkuru

ಪಾವಗಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿ ಇದುವರೆಗೂ ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಯಡಿ 323 ಕೋಟಿ ಹಣ ತಾಲೂಕಿಗೆ ಬಿಡುಗಡೆಯಾಗಿದೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷರು, ಜಿ.ಪಂ ಮಾಜಿ ಸದಸ್ಯರಾದ ಪಾಪಣ್ಣ ತಿಳಿಸಿದರು. ಅವರು ತಾಪಂ ಆವರಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆ ದೇಶದಲ್ಲೇ ಮಾದರಿ ಯೋಜನೆಯಾಗಿದೆ. ಕರ್ನಾಟಕದಲ್ಲಿ ಈ ಯೋಜನೆ ಘೋಷಣೆಯಾದ ಬಳಿಕ ಹಲವಾರು ರಾಜ್ಯಗಳಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಬೇರೆ ಬೇರೆ ಹೆಸರಿನಲ್ಲಿ ಹಲವಾರು ರಾಜ್ಯಗಳಲ್ಲಿ ಘೋಷಣೆ ಮಾಡಲಾಗಿದೆ. ಬಡ ಮಧ್ಯಮ ವರ್ಗದ ಪಾಲಿಗೆ ಯೋಜನೆ ಶಕ್ತಿದಾಯಕವಾಗಿದೆ. ಇದರಿಂದ ಲಕ್ಷಾಂತರ ಕುಟುಂಬಗಳು ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿದೆ. ಕುಟುಂಬ ನಿರ್ವಹಣೆ, ಶಿಕ್ಷಣ, ವೃದ್ಧರ ಆರೋಗ್ಯ ಸೇರಿದಂತೆ ಹಲವಾರು ರೀತಿಯಲ್ಲಿ ಗೃಹಲಕ್ಷ್ಮಿ ಮನೆಗಳಲ್ಲಿ ಬೆಳಕು ನೀಡುವ ಯೋಜನೆಯಾಗಿದೆ ಎಂದರು. ಗೃಹಲಕ್ಷ್ಮಿ ಯೋಜನೆಯಡಿ ತಾಲೂಕಿನಲ್ಲಿ 56,405 ಫಲಾನುಭವಿಗಳಿಗೆ 320.41 ಕೋಟಿ ರೂ. ಬಿಡುಗಡೆಯಾಗಿದೆ. ಯುವ ನಿಧಿಯಡಿ ಪದವಿ ಮುಗಿಸಿದ 11,238 ವಿದ್ಯಾರ್ಥಿಗಳಿಗೆ…

Read More

ತುಮಕೂರು: ಹಿರೇಹಳ್ಳಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ./ಪಿಯುಸಿ ಉತ್ತೀರ್ಣ/ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಟೂಲ್ ರೂಮ್ ಮೆಷಿನಿಸ್ಟ್ ಕೋರ್ಸಿನ ಪ್ರವೇಶಾತಿ ಪ್ರಾರಂಭವಾಗಿದ್ದು, ಬಾಕಿ ಉಳಿದಿರುವ ಸೀಟುಗಳಿಗೆ ಆಗಸ್ಟ್ 3ರವರೆಗೆ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿದೆ. ಡಿಪ್ಲೋಮಾ/ಐಟಿಐ/ಬಿಇ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವರ ಕೌಶಲ್ಯ ಜ್ಞಾನಾರ್ಜನೆಗಾಗಿ 1 ರಿಂದ 6 ತಿಂಗಳವರೆಗೆ ಅಲ್ಪಾವಧಿ ಕೋರ್ಸ್ಗಳು ಲಭ್ಯವಿದ್ದು, ಅಕಾಡೆಮಿಕ್ ಇಂಟರ್ನ್ಶಿಪ್ ಕೂಡ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿ ಕಾಲೇಜು, ಮೊ. ಸಂ. 9844527236 ನ್ನು ಸಂಪರ್ಕಿಸಬೇಕೆಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ರಾಜಕಾರಣದಷ್ಟೇ ಇತ್ತೀಚೆಗೆ ದೇಶದ ಶಿಕ್ಷಣ ವ್ಯವಸ್ಥೆಯೂ ಕಲುಷಿತಗೊಳ್ಳುತ್ತಿದ್ದು, ಗುಣಾತ್ಮಕ ಶಿಕ್ಷಣ ನೀಡುವುದು ಪ್ರಸ್ತುತ ದಿನಗಳಲ್ಲಿ ದೊಡ್ಡ ಸವಾಲಾಗಿದೆ ಎಂದು ಮಾಜಿ ವಿಧಾನ ಪರಿಷತ್ತು ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಕಳವಳ ವ್ಯಕ್ತಪಡಿಸಿದರು. ನಗರದ ಸೆಂಟ್ರಲ್ ಲೈಬ್ರರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗೆಳೆಯರ ಗೆಳೆಯ ಕೆಸಿಬಿ ಕೃತಿ ಲೋಕಾರ್ಪಣೆ ಹಾಗೂ ಡಾ. ಕೆ.ಸಿ. ಬಸವರಾಜ್ ಅವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡಿವಿಜಿ ಅವರ ಮಂಕುತಿಮ್ಮನ ಕಗ್ಗದಂತೆ ದೀನದುರ್ಬಲರ ಪಾಲಿಗೆ ಬೆಲ್ಲ-ಸಕ್ಕರೆಯಾಗಿ, ಸಮಾಜಕ್ಕೆ ಬೆಳಕಾಗಿದ್ದಾರೆ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಯಿಂದ ನಿವೃತ್ತರಾದ ಮಾತ್ರಕ್ಕೆ ಮನೆಯಲ್ಲಿ ಕೂರದೆ, ಕೆಸಿಬಿ ಅವರು ತಮ್ಮಲ್ಲಿರುವ ಜ್ಞಾನ, ವಿದ್ವತ್ತು ಹಾಗೂ ಅನುಭವವನ್ನು ಸಮಾಜದ ಏಳಿಗೆಗಾಗಿ ಹಾಗೂ ಯುವಜನರ ಹಿತಕ್ಕಾಗಿ ಧಾರೆ ಎರೆಯಬೇಕು. ಅಧಿಕಾರದ ಹಿಂದೆ ಹೋಗದೆ ಸಮಾಜಮುಖಿ ಚಿಂತನೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಡಾ. ವೈ. ಎ. ನಾರಾಯಣಸ್ವಾಮಿ ತಿಳಿಸಿದರು. ಹಿರಿಯ ಸಾಹಿತಿ ಹಾಗೂ ಚಿಂತಕ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರು ಮಾತನಾಡಿ, ಶಿಕ್ಷಣ ಕ್ಷೇತ್ರವು ದಿನೇ ದಿನೇ ವ್ಯಾಪಾರೀಕರಣಗೊಳ್ಳುತ್ತಿದ್ದು,…

Read More

ತುಮಕೂರು(Namma Tumakuru) : ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಶಿಫಾರಸ್ಸಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ. ನಮ್ಮ ನೀರನ್ನು ಉಳಿಸಿಕೊಳ್ಳಲು, ಕಾವೇರಿ ಸಮಿತಿ ಶಿಫಾರಸು ವಿರೋಧಿಸಿ ರಾಜ್ಯ ಸಂಘಟನೆಗಳು ರೂಪಿಸುವ ಹೋರಾಟವನ್ನು ಬೆಂಬಲಿಸಿ ಹೋರಾಟ ನಡೆಸಲು ಒಕ್ಕೂಟದ ಮುಖಂಡರು ತೀರ್ಮಾನ ಮಾಡಿದರು. ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಪ್ರಮುಖರು ಶುಕ್ರವಾರ ಸಭೆ ಸೇರಿ ಕಾವೇರಿ ನೀರು ಹೋರಾಟ ಕುರಿತು ಚರ್ಚಿಸಿದರು. ಕನ್ನಡ ಸೇನೆ ಜಿಲ್ಲಾಧ್ಯಕ್ಷ ಡಾ.ಧನಿಯಾಕುಮಾರ್ ಮಾತನಾಡಿ ಮಳೆ ಬೀಳದೆ ನಮ್ಮಲ್ಲಿ ಕುಡಿಯುವ ನೀರಿಗೂ ಕಹಾಕಾರ ಉಂಟಾಗಿರುವಾಗ, ಜಲಾಶಯಗಳು ಬತ್ತಿ ಹೋಗಿರುವಾಗ ತಮಿಳುನಾಡಿಗೆ ಪ್ರತಿದಿನ 3500 ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಶಿಫಾರಸು ಅಮಾನವೀಯ. ಸರ್ಕಾರ ಈ ಶಿಫಾರಸ್ಸನ್ನು ತಿರಸ್ಕರಿಸಿ ನಾಡಿನ ಜನರ ರಕ್ಷಣೆಗೆ ಬದ್ಧತೆ ತೋರಬೇಕು ಎಂದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ…

Read More

ಸರಗೂರು: ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ಮಧ್ಯರಾತ್ರಿ ಕಾಡು ಪ್ರಾಣಿಯೊಂದು ಕುರಿಗಳ ಕೊಟ್ಟಿಗೆಗೆ ನುಗ್ಗಿ ರಕ್ತಪಾತ ಹರಿಸಿದ ಪರಿಣಾಮ 6 ಕುರಿಗಳು ಸ್ಥಳದಲ್ಲೇ ಮೃತಪಟ್ಟು, 12 ಕುರಿಗಳು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ತೀವ್ರ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ನಿವಾಸಿ ಚಲುವಮ್ಮ ಎಂಬುವರಿಗೆ ಸೇರಿದ 20 ಕುರಿಗಳನ್ನು ಎಂದಿನಂತೆ ಗುರುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಲಾಗಿತ್ತು. ಮಧ್ಯರಾತ್ರಿಯ ವೇಳೆ ಕಾಡಿನಿಂದ ಬಂದಿರುವ ಶಂಕಿತ ಚಿರತೆ ಅಥವಾ ಮತ್ತಾವುದೋ ಕಾಡು ಪ್ರಾಣಿ ಏಕಾಏಕಿ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಹೆದರಿದ ಕುರಿಗಳು ಚದುರಿ ಓಡಾಡಿದ್ದು, ಶುಕ್ರವಾರ ಬೆಳಿಗ್ಗೆ ಕುಟುಂಬದವರು ನೋಡಿದಾಗ ಕೊಟ್ಟಿಗೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುರಿಗಳ ದೃಶ್ಯ ಕಂಡು ಆಘಾತಕ್ಕೊಳಗಾಗಿದ್ದಾರೆ. ಸ್ಥಳದಲ್ಲೇ 6 ಕುರಿ ಸಾವು: ದಾಳಿಯ ತೀವ್ರತೆಗೆ 6 ಕುರಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, 12 ಕುರಿಗಳ ಕುತ್ತಿಗೆ, ಹೊಟ್ಟೆ ಹಾಗೂ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ವಿಷಯ ತಿಳಿದ ಪಶು…

Read More

ಸರಗೂರು:  ಪಟ್ಟಣದಲ್ಲಿ ಮೂರನೇ ಆಷಾಢ ಶುಕ್ರವಾರದ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮದ ಅಂಗವಾಗಿ ವಾಹನ ಚಾಲಕರ ಸಂಘದ ವತಿಯಿಂದ ತಾಯಿ ಚಾಮುಂಡೇಶ್ವರಿ ಹಾಗೂ ಶ್ರೀ ಚಿಕ್ಕದೇವಮ್ಮ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ವಿಶೇಷ ಪೂಜಾ ಕೈಂಕರ್ಯಗಳನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ದೇವಿಯ ಕೃಪೆಯಿಂದ ಎಲ್ಲ ವಾಹನ ಚಾಲಕರು ಸುರಕ್ಷಿತವಾಗಿ ಕರ್ತವ್ಯ ನಿರ್ವಹಿಸುವಂತಾಗಲಿ, ಅಪಘಾತಗಳು ನಿಯಂತ್ರಣಕ್ಕೆ ಬರಲಿ ಹಾಗೂ ಸರ್ವರ ಕುಟುಂಬಗಳಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಾಹನ ಚಾಲಕರ ಸಂಘದ ಅಧ್ಯಕ್ಷ ಬಿರ್ವಾಳ್ ಚಿಕ್ಕಣ್ಣ, “ವಾಹನ ಚಾಲಕರು ಸಮಾಜ ಸೇವೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದ್ದು, ಪ್ರತಿನಿತ್ಯ ಸಾವಿರಾರು ಜನರನ್ನು ಸುರಕ್ಷಿತವಾಗಿ ಗಮ್ಯಸ್ಥಾನಕ್ಕೆ ತಲುಪಿಸುವ ಗುರುತರ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಚಾಲಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು. ಸಂಘದ ಸದಸ್ಯರು ಪರಸ್ಪರ ಸಹಕಾರ ಮತ್ತು ಐಕ್ಯತೆಯಿಂದ ಶ್ರಮಿಸಿದರೆ ಸಂಘ ಇನ್ನಷ್ಟು ಬಲಿಷ್ಠವಾಗಲಿದೆ” ಎಂದು ತಿಳಿಸಿದರು. ಉಚಿತ…

Read More

ಬೀದರ್:  ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮದ ನಿವಾಸಿ, ಜೈ ಕಿಸಾನ್ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಹಾಗೂ ಬಿ.ಎಲ್.ಓ (BLO) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಸಂಗಪ್ಪಾ ಪಿಟ್ರೆ (59) ಅವರು ನಿಧನರಾಗಿದ್ದಾರೆ. ಮೃತರು ತಾಯಿ, ಓರ್ವ ಮಗಳು, ಓರ್ವ ಮಗ ಹಾಗೂ ಅಪಾರ ಬಂಧು-ಬಳಗ, ಶಿಷ್ಯವೃಂದವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಶನಿವಾರ ಮಧ್ಯಾಹ್ನ 11:00 ಗಂಟೆಗೆ ಅವರ ಸ್ವಗ್ರಾಮವಾದ ಬೆಳಕುಣಿ (ಚೌದ್ರಿ) ಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ಸಹ ಶಿಕ್ಷಕರಾಗಿ ಅಕ್ಷರ ದಾಸೋಹ ನೀಡುತ್ತಾ, ವಿದ್ಯಾರ್ಥಿಗಳಿಗೆ ಸನ್ಮಾರ್ಗ ತೋರಿದ್ದ ಮಲ್ಲಿಕಾರ್ಜುನ ಪಿಟ್ರೆ ಅವರ ಅಗಲಿಕೆಗೆ ಗ್ರಾಮಸ್ಥರು, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಬಿ.ಎಲ್.ಓ ಆಗಿಯೂ ಸಾರ್ವಜನಿಕ ಸೇವೆ ಸಲ್ಲಿಸಿದ್ದ ಅವರ ನಿಧನಕ್ಕೆ ಸ್ಥಳೀಯ ಪ್ರಮುಖರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದು, ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಕುಟುಂಬಸ್ಥರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು…

Read More

ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಸಿ. ವಿಜಯ್ ಜೋಸೆಫ್ ಅವರ ಭೇಟಿಯನ್ನು ಮುಂದೂಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಕಾವೇರಿ ನೀರು ಹಂಚಿಕೆ ಪ್ರಾಧಿಕಾರವು (CWMA) ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ನಿರ್ದೇಶನದಿಂದಾಗಿ ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ ಹಾಗೂ ಪ್ರತಿಭಟನೆಗಳು ಹೆಚ್ಚಾಗಿವೆ. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅಭಿನಯದ ಇತ್ತೀಚಿನ ‘ಜನನಾಯಕನ್’ ಚಿತ್ರದ ಪೋಸ್ಟರ್ಗಳನ್ನು ಹರಿದುಹಾಕಿ, ಕೆಲವು ಕಡೆ ಪ್ರದರ್ಶನವನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ. “ಪರಿಸ್ಥಿತಿ ಸಂಪೂರ್ಣ ಶಾಂತವಾದ ಬಳಿಕ, ಉತ್ತಮ ವಾತಾವರಣದಲ್ಲಿ ಸ್ನೇಹಪೂರ್ವಕವಾಗಿ ಸಭೆ ನಡೆಸೋಣ. ಹಾಗಾಗಿ ತಾತ್ಕಾಲಿಕವಾಗಿ ತಮ್ಮ ಭೇಟಿಯನ್ನು ಮುಂದೂಡಬೇಕೆಂದು ತಮಿಳುನಾಡು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ”.  “ಕರ್ನಾಟಕವು ಎಂದಿಗೂ ಎಲ್ಲ ರಾಜ್ಯಗಳ ಜನರನ್ನು ಗೌರವದಿಂದ ಬರಮಾಡಿಕೊಂಡಿದೆ. ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸುವುದು ನಮ್ಮ ಸಂಸ್ಕೃತಿ, ಯಾರ ಭಾವನೆಗೂ ಧಕ್ಕೆ ಆಗಬಾರದು” ಎಂದು…

Read More

ಬೀದರ್: ಜಿಲ್ಲೆಯ ಐತಿಹಾಸಿಕ ಬಸವಕಲ್ಯಾಣ ನಗರದಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳ ಹದೆಗೆಟ್ಟ ಸ್ಥಿತಿ ಮತ್ತೊಮ್ಮೆ ಬಹಿರಂಗಗೊಂಡಿದೆ. ನಗರದ ಮುಖ್ಯರಸ್ತೆಗಳೆಲ್ಲವೂ ಸಂಪೂರ್ಣವಾಗಿ ಗುಂಡಿಮಯವಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ. ಮಳೆಯಾಘಾತಕ್ಕೆ ಬಸವಕಲ್ಯಾಣದ ಮುಖ್ಯರಸ್ತೆಗಳಲ್ಲಿ ದೊಡ್ಡ ಅಳತೆಯ ಗುಂಡಿಗಳು ಸೃಷ್ಟಿಯಾಗಿದ್ದು, ಅಪಾರ ಪ್ರಮಾಣದ ಮಳೆನೀರು ನಿಂತು ರಸ್ತೆಗಳು ಅಕ್ಷರಶಃ ಕೆರೆಯಂತಾಗಿ ಮಾರ್ಪಟ್ಟಿವೆ. ರಸ್ತೆಯಲ್ಲಿನ ಹೊಂಡಗಳಲ್ಲಿ ಮಳೆನೀರು ತುಂಬಿ ನಿಂತಿರುವುದನ್ನು ಕಂಡ ಸ್ಥಳೀಯ ಮಕ್ಕಳು, ಅಲ್ಲಿಯೇ ಇಳಿದು ಈಜಾಡಿ ಆಟವಾಡುತ್ತಿರುವ ದೃಶ್ಯಗಳು ಕಂಡುಬಂದವು. ಪ್ರಮುಖ ರಸ್ತೆಗಳಲ್ಲಿ ಈ ರೀತಿ ಹೊಂಡ–ಗುಂಡಿಗಳು ನಿರ್ಮಾಣವಾಗಿ ಸರೋವರದಂತಾಗಿದ್ದರೂ, ಸಂಬಂಧಪಟ್ಟ ಆಡಳಿತ ಯಂತ್ರಂಗ ಹಾಗೂ ನಗರಸಭೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡು ರಸ್ತೆಗಳನ್ನು ದುರಸ್ತಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ವರದಿ: ಅರವಿಂದ ಮಲ್ಲೀಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಸರಗೂರು: ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರವಾದ ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ಅತ್ಯಂತ ಭಕ್ತಿಭಾವದಿಂದ ನೆರವೇರಿದವು. ಬೆಳಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಆಗಮಿಸಿ ತಾಯಿ ಚಿಕ್ಕದೇವಮ್ಮನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ತಾಯಿಗೆ ಅಭಿಷೇಕ, ವಿಶೇಷ ಅಲಂಕಾರ, ಅರ್ಚನೆ ಹಾಗೂ ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ನಂತರ ತಾಯಿ ಚಿಕ್ಕದೇವಮ್ಮನ ಉತ್ಸವ ಮೂರ್ತಿಯನ್ನು ದೇವಸ್ಥಾನದ ಸುತ್ತ ಭಕ್ತಿಭಾವದಿಂದ ಮೆರವಣಿಗೆ ನಡೆಸಲಾಯಿತು. ಈ ವೇಳೆ ಭಕ್ತರು ಜಯಘೋಷ ಮೊಳಗಿಸಿ ದೇವಿಯ ಕೃಪೆಗೆ ಪಾತ್ರರಾದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿ. ಮಟಕರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಶೇಖರ ಅವರು ತಮ್ಮ ಕುಟುಂಬ ಸಮೇತ ಹಾಗೂ ಸ್ನೇಹಿತರೊಂದಿಗೆ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ಭಕ್ತರು ಪ್ರಸಾದ ಸ್ವೀಕರಿಸಿ ಧನ್ಯತಾಭಾವ ಮೆರಿದರು.…

Read More