Subscribe to Updates
Get the latest creative news from FooBar about art, design and business.
- “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
- ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
- ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
- ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
Author: Ganesh Tumkuru
ಸರಗೂರು: “ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ, ಸಮಾನತೆ ಹಾಗೂ ಗೌರವಯುತ ಜೀವನ ದೊರಕುವಂತೆ ಮಾನವ ಹಕ್ಕುಗಳ ಮೌಲ್ಯಗಳನ್ನು ಎಲ್ಲರೂ ಪಾಲಿಸಬೇಕು” ಎಂದು ಮಾನವ ಹಕ್ಕುಗಳ ಮಿಷನ್ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಅಹಮದ್ ಖಾನ್ ಸೆರ್ ಕರೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಾನವ ಹಕ್ಕುಗಳ ಮಿಷನ್ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಹಾತ್ಮ ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಮಾನವ ಹಕ್ಕುಗಳು ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕುಗಳಾಗಿದ್ದು, ಜಾತಿ, ಧರ್ಮ, ಲಿಂಗ ಅಥವಾ ಆರ್ಥಿಕ ಸ್ಥಿತಿಯ ಆಧಾರದ ಮೇಲೆ ಯಾರ ಮೇಲೆಯೂ ಅನ್ಯಾಯ ಅಥವಾ ಶೋಷಣೆ ನಡೆಯಬಾರದು ಎಂದು ಮುಖಂಡರು ಅಭಿಪ್ರಾಯಪಟ್ಟರು. ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ ಮಾತನಾಡಿ, “ಸಮಾಜದಲ್ಲಿ ನಡೆಯುವ ಅನ್ಯಾಯ, ದೌರ್ಜನ್ಯ, ಮಹಿಳೆಯರು ಮತ್ತು ಮಕ್ಕಳ ಮೇಲಿನ…
ತಿಪಟೂರು: ತಾಲೂಕಿನ ಕಟ್ಟೇಮನೆ ಕೋಟೇನಾಯಕನಹಳ್ಳಿಯಲ್ಲಿ 58ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಭೀಮನ ಅಮಾವಾಸ್ಯೆ ಮಹೋತ್ಸವ ಆ.12 ಮತ್ತು 13 ರಂದು ನೆರವೇರಲಿದೆ. ಆ.12 ರಂದು ಬೆಳಿಗ್ಗೆ 6ಕ್ಕೆ ಅಮ್ಮನವರಿಗೆ ಅಭಿಷೇಕ, 7ಕ್ಕೆ 8 ವರ್ಷದ ಹೆಣ್ಣು ಮಗುವಿನ ಮೇಲೆ ಅಮ್ಮನವರ ಕಳಸವನ್ನು ತರುವುದು, 7.30ಕ್ಕೆ ನವಗ್ರಹ ಸ್ಥಾಪನೆ, ನಂದಾದೀಪ ಸೇವೆ, 8ಕ್ಕೆ ಶ್ರೀ ರುದ್ರಂಭಾವಸ್ವಾಮಿಯವರನೇತೃತ್ವದಲ್ಲಿ ಅಖಂಡ ಭಜನೆ, 8.30ಕ್ಕೆ ಅಮ್ಮನವರಿಗೆ ಚಿನ್ನ ಲೇಪಿತ ವಜ್ರಾಂಗಿ ಅಲಂಕಾರ, ಮಧ್ಯಾಹ್ನ 12ಕ್ಕೆ ಹೂವಿನ ಅಲಂಕಾರ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ, ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ಸಂಜೆ 6ಕ್ಕೆ ಅಮ್ಮನವರಿಗೆ ಬೆಣ್ಣೆ ಅಲಂಕಾರ, ರಾತ್ರಿ 8 ಗಂಟೆಗೆ ಆರ್ಕೆಸ್ಟ್ರಾ, 8.30ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ. ಆ.13 ರಂದು ಬೆಳಿಗ್ಗೆ 7ಕ್ಕೆ ಅಮ್ಮನವರಿಗೆ ಅಭಿಷೇಕ, 8 ಗಂಟೆಗೆ ಅಖಂಡ ಭಜನೆ ಮುಕ್ತಾಯ, 8.30ಕ್ಕೆ ಶ್ರೀ ಬನಶಂಕರಿ ಅಮ್ಮನವರಿಗೆ ವಜ್ರಾಂಗಿ ಅಲಂಕಾರ, ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ರಾತ್ರಿ 9ಕ್ಕೆ ಶ್ರೀ…
ತುಮಕೂರು: ಇಲ್ಲಿನ ಪಾಂಡುರಂಗನಗರ (ಎಮ್ಮೆಕೇರಿ) ದಲ್ಲಿರುವ ಕೋಟೆ ಶ್ರೀ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವವು ಆ.3 ರಿಂದ 6ರವರೆಗೆ ಜರುಗಲಿದೆ. ಆ.3 ರಂದು ಸಂಜೆ ಚಿಕ್ಕಮ್ಮ ಮತ್ತು ಆರತಿಯ ನಡೆ ಮುಡಿಯ ಮೂಲಕ ಚಿಕ್ಕಪೇಟೆ ಶ್ರೀ ಗ್ರಾಮದೇವತೆ ದೇವಸ್ಥಾನದ ಬಳಿ ಜಾತ್ರಾ ಮಂಟಪಕ್ಕೆ ಆಗಮಿಸಿ ಗದ್ದುಗೆಯಾಗುವುದು, ಆ.4 ರಂದು ಬೆಳಿಗ್ಗೆ 8.30ಕ್ಕೆ ಪಾಂಡುರಂಗನಗರದ ಎಮ್ಮೆ ಕೇರಿಯಲ್ಲಿರುವ ಮೂಲ ಶ್ರೀ ಗ್ರಾಮ ದೇವತೆ ಅಮ್ಮನವರ ದೇವಸ್ಥಾನದಲ್ಲಿ ಅಮ್ಮನವರಿಗೆ ಪುಣ್ಯಾರ್ಚನೆ ಮತ್ತು ದೃಷ್ಟಿ ಪೂಜೆ, ಮಧ್ಯಾಹ್ನ 12ಕ್ಕೆ ಅಗ್ನಿವಂಶ ಕ್ಷತ್ರಿಯರಾದ ಟಿ.ಜಿ.ಹನುಮಂತರಾಜು ಅವರ ಮನೆಯಿಂದ ಶ್ರೀ ದೊಡ್ಡಮ್ಮ –ಕಳಸವು ನಡೆ ಮುಡಿಯ ಮೂಲಕ ಪಾಂಡುರಂಗ ನಗರದ ಎಮ್ಮೆ ಕೇರಿ ಶ್ರೀ ಗ್ರಾಮ ದೇವತೆ ಅಮ್ಮನವರ ದೇವಸ್ಥಾನಕ್ಕೆ ಆಗಮಿಸುವುದು. ಮಧ್ಯಾಹ್ನ 1.30ಕ್ಕೆ ಮೆರವಣಿಗೆ ಕಾರ್ಯಕ್ರಮ ನಡೆಯಲಿದ್ದು, ದಿವ್ಯ ಸಾನಿಧ್ಯವನ್ನು ಹಿರೇಮಠಾಧ್ಯಕ್ಷರಾದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ವಹಿಸುವರು. ಉದ್ಘಾಟನೆಯನ್ನು ಶಾಸಕ ಕೆ.ಎನ್.ರಾಜಣ್ಣ ಅವರು ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ವಿ.ಪ. ಸದಸ್ಯರಾದ…
ತುಮಕೂರು: ನಗರದ ಹನುಮಂತಪುರದಲ್ಲಿ ಪೇಟೆ ಮಾತೆ ಕೊಲ್ಲಾಪುರದಮ್ಮ ಹಾಗೂ ಕರುಗಳಮ್ಮ ದೇವರ ಐದು ದಿನಗಳ ಜಾತ್ರಾಮಹೋತ್ಸವ ಏರ್ಪಾಡಾಗಿದೆ. ಆಗಸ್ಟ್ 3ರಂದು ಬೆಳಿಗ್ಗೆ 10.30ಕ್ಕೆ ಶ್ರೀರಾಮನಗರದ ಆದಿಸ್ಥಾನ ಮುದ್ರೆಗೋಣೇಮರದ ಪೂಜೆ, ಮಧ್ಯಾಹ್ನ 3 ಗಂಟೆಗೆ ಕೋಟೆ ಕೊಲ್ಲಾಪುರದಮ್ಮ ಹಾಗೂ ಕರುಗಳಮ್ಮ ದೇವಸ್ಥಾನದಿಂದ ದೇವರುಗಳನ್ನು ಮಂಗಳವಾದ್ಯ, ಜಾನಪದ ಕಲಾತಂಡಗಳ ಪ್ರದರ್ಶನದೊಂದಿಗೆ ಹನುಮಂತಪುರ ದೇವಸ್ಥಾನಕ್ಕೆ ಕರೆತರಲಾಗುವುದು. ನಂತರ ನಡೆಯುವ ಸಮಾರಂಭದಲ್ಲಿ ತಿಪಟೂರು ತಾಲೂಕು ಆಳುಬುರುಕ್ಷೇತ್ರದ ಸೋಮಶೇಖರ ಸ್ವಾಮೀಜಿ ಸಾನಿಧ್ಯವಹಿಸುವರು. ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿದರೆ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಎಸ್.ಆರ್.ಶ್ರೀನಿವಾಸ್, ಪ್ರಜಾಪ್ರಗತಿ ಸಂಪಾದಕ ಡಾ.ಎಸ್, ನಾಗಣ್ಣ ಅತಿಥಿಗಳಾಗಿ ಭಾಗವಹಿಸುವರು. ಆಗಸ್ಟ್ 4ರಂದು ಸಂಜೆ 5 ಗಂಟೆಗೆ ಆರತಿಅಗ್ನಿಕೊಂಡವನ್ನು ಕೇಂದ್ರ ಸಚಿವ ವಿ. ಸೋಮಣ್ಣ ಉದ್ಘಾಟಿಸುವರು. ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಸುರೇಶ್ ಗೌಡ, ಮಾಜಿ ಶಾಸಕ ಹೆಚ್.ನಿಂಗಪ್ಪ ಭಾಗವಹಿಸುವರು. ಇದೇ ದಿನ ಸಂಜೆ 6 ಗಂಟೆಗೆ ಕಂಬದರಂಗಯ್ಯ ಮತ್ತು ತಂಡದವರಿಂದ ಸಂಗೀತ ಸಂಜೆ ಏರ್ಪಾಡಾಗಿದೆ. ಆ. 4ರಂದು ಸಂಜೆ 5 ಗಂಟೆಗೆ ದೇವರುಗಳಿಗೆ ಆರತಿ…
ಪಾವಗಡ: ತಾಲೂಕಿನ ನಾಗಲಮಡಿಕೆ ಹೋಬಳಿಗೆ ಸೇರಿದ ಪಳವಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಿಂದ ಓಡಿ ಹೋಗಿದ್ದ 3 ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಶಿಕ್ಷಕರ ಕಿರುಕುಳ ಮತ್ತು ಹಲ್ಲೆಯಿಂದ ಬೇಸತ್ತ ಎಸ್.ಎಸ್.ಎಲ್.ಸಿ. ಓದುತ್ತಿದ್ದ ಈ ಮೂವರು ಮಕ್ಕಳು ಶಾಲೆಯಿಂದ ತಪ್ಪಿಸಿಕೊಂಡಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ. ವಸತಿ ನಿಲಯದಲ್ಲಿದ್ದ ಭೂಸೂರು ತಾಂಡದ ವಿರುಪಾಕ್ಷ, ಅಪ್ಪಾಜಿಹಳ್ಳಿಯ ವಿಷ್ಣುವರ್ಧನ ಹಾಗೂ ಪಾವುಗಡ ಪಟ್ಟಣದ ಹರ್ಷವರ್ಧನ ಎಂಬುವರು ಮಂಗಳವಾರ ಬೆಳಗ್ಗೆ ಉಪಹಾರ ಸೇವಿಸಿದ ಬಳಿಕ ಪ್ರಾರ್ಥನೆಗೆ ಹಾಜರಾಗದೆ ವಸತಿ ನಿಲಯದಲ್ಲೇ ಉಳಿದುಕೊಂಡಿದ್ದರು. ನಂತರ ಶಾಲೆಯಿಂದ ಹೊರಹೋಗಿ ನಾಪತ್ತೆಯಾಗಿದ್ದರು. ವಿದ್ಯಾರ್ಥಿಗಳ ಸ್ನೇಹಿತರು ನೀಡಿರುವ ಮಾಹಿತಿ ಪ್ರಕಾರ ವಸತಿ ಶಾಲೆಯ ಪ್ರಾಂಶುಪಾಲರಾದ ಲತಾ ಅವರು ಸಂಜೆ ವ್ಯಾಸಂಗದ ವೇಳೆಯಲ್ಲಿ ಎಲ್ಲಾ ಮಕ್ಕಳೂ ನೈಟ್ ಡ್ರೆಸ್ ಕಡ್ಡಾಯವಾಗಿ ಧರಿಸಬೇಕೆಂದು ಸೂಚಿಸಿದ್ದರು. ಕೆಲ ಮಕ್ಕಳ ಬಳಿ ನೈಟ್ ಡ್ರೆಸ್ ಇಲ್ಲದ ಕಾರಣ ಧರಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಕೋಪಗೊಂಡ ಪ್ರಾಂಶುಪಾಲರಾದ ಲತಾ ಅವರು ಸೋಮವಾರ ರಾತ್ರಿ ಡ್ರೈಪ್ ಪೈಪ್ ನಿಂದ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ…
ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಸುದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದಿರುವ ಹೇಮಾವತಿ ನಾಲೆ ಕಾಮಗಾರಿಯ ವಿಳಂಬ ಧೋರಣೆ ಹಾಗೂ ಅಧಿಕಾರಿಗಳ ನೆಪಮಾತ್ರದ ಭರವಸೆಗಳ ವಿರುದ್ಧ ಆಕ್ರೋಶಗೊಂಡ ರೈತರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ, ತಾಲೂಕು ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಅಹೋರಾತ್ರಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದರು. ತಾಲೂಕಿನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ನೂರಾರು ರೈತರು, ಹೇಮಾವತಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನೆಹರು ಸರ್ಕಲ್‌ನಿಂದ ಆರಂಭಗೊಂಡ ಬೃಹತ್ ರ್‍ಯಾಲಿಗೆ ದನ-ಕರುಗಳು, ಎತ್ತಿನಗಾಡಿಗಳು ಹಾಗೂ ಟ್ರ್ಯಾಕ್ಟರ್‌ಗಳೊಂದಿಗೆ ಸಾಲು ಸಾಲಾಗಿ ಹೆಜ್ಜೆ ಹಾಕಿದರು. ಪಟ್ಟಣದ ಪ್ರಮುಖ ರಸ್ತೆಗಳ ಉದ್ದಕ್ಕೂ ತಾಲೂಕು ಆಡಳಿತ, ಜನಪ್ರತಿನಿಧಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಆಕ್ರೋಶದ ಘೋಷಣೆಗಳನ್ನು ಕೂಗುತ್ತಾ ತಾಲೂಕು ಕಚೇರಿ ಮುಂಭಾಗ ಜಮಾಯಿಸಿ ಧರಣಿ ಕುಳಿತರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೇಮಾವತಿ ಇಲಾಖೆಯ ಇಂಜಿನಿಯರ್ ಪ್ರಭಾಕರ್, ಇನ್ನೂ 5 ದಿನಗಳಲ್ಲಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಿ ಕೊಡಲಾಗುವುದು ಎಂದು ಮನವಿ ಮಾಡಲು ಯತ್ನಿಸಿದರು. ಆದರೆ ಇಷ್ಟು ದಿನಗಳ ಕಾಲ ಪದೇ ಪದೇ ಸುಳ್ಳು ಆಶ್ವಾಸನೆ ನೀಡಿ…
ಸರಗೂರು / ಎಚ್.ಡಿ. ಕೋಟೆ: ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು. ದುರ್ಬಲ ವರ್ಗದ ಜನರಿಗೆ ತ್ವರಿತ, ಉಚಿತ ಹಾಗೂ ಸುಲಭವಾಗಿ ನ್ಯಾಯ ತಲುಪಿಸಲು ಕಾನೂನು ಸೇವಾ ಪ್ರಾಧಿಕಾರ ಸದಾ ಸಿದ್ಧವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಎಚ್.ಡಿ. ಕೋಟೆಯ ಅಪರ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಧೀಶರಾದ ಸುಷ್ಮಾ ಎಂ. ತಿಳಿಸಿದರು. ಸರಗೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ (ಎಚ್.ಡಿ. ಕೋಟೆ), ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ “ಮಾನವ ಕಳ್ಳಸಾಗಾಣಿಕೆ ವಿರೋಧಿ ದಿನ” ಹಾಗೂ “ಜನರಿಗಾಗಿ – ತ್ವರಿತ, ಉಚಿತ ಮತ್ತು ಸುಲಭ ನ್ಯಾಯ” ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಇತ್ತೀಚಿನ ದಿನಗಳಲ್ಲಿ ಉದ್ಯೋಗ, ಉನ್ನತ ಶಿಕ್ಷಣ ಹಾಗೂ ಉತ್ತಮ ಜೀವನ ಶೈಲಿಯ ಸುಳ್ಳು ಆಮಿಷಗಳನ್ನು ಒಡ್ಡಿ…
ಔರಾದ್ (ಬೀದರ್): ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲೂ ಕಲುಷಿತ ನೀರು ಸರಬರಾಜು ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಕಿರಣ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿನ ಕುಡಿಯುವ ನೀರಿನ ಮೂಲಗಳನ್ನು ನಿರಂತರವಾಗಿ ಪರಿಶೀಲಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ಅಥವಾ ತೊಂದರೆಯಾಗದಂತೆ ಆದ್ಯತೆ ನೀಡಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಗ್ರಾಮಗಳ ಪರಿಸ್ಥಿತಿಯ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಆರೋಗ್ಯ ಇಲಾಖೆಯೊಂದಿಗೆ ಸೂಕ್ತ ಸಮನ್ವಯ ಸಾಧಿಸಿ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಗ್ರಾಮೀಣ ಉದ್ಯೋಗ ಯೋಜನೆಯ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, “ಗ್ರಾಮೀಣ…
ಬೀದರ್ / ಔರಾದ್: ನೆರೆಯ ರಾಜ್ಯಗಳಿಂದ ಗಡಿ ಚೆಕ್ ಪೋಸ್ಟ್ ಗಳ ಮೂಲಕ ನಡೆಯುವ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇರಿಸಬೇಕು ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವೆ ಅವರು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ. ಬುಧವಾರ ಔರಾದ್ ತಾಲೂಕಿನ ‘ಬಾರ್ಡರ್ ತಾಂಡಾ’ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸ್ಥಳದಲ್ಲಿದ್ದ ಭದ್ರತಾ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿ ಪ್ರಮುಖ ಸೂಚನೆಗಳನ್ನು ನೀಡಿದರು. ನೆರೆ ರಾಜ್ಯಗಳಿಂದ ಕಾನೂನುಬಾಹಿರ ವಸ್ತುಗಳ ರವಾನೆ ಅಥವಾ ಅಕ್ರಮ ಚಟುವಟಿಕೆಗಳು ನಡೆಯದಂತೆ ತಡೆಯಲು ಗಡಿ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಸದಾ ಜಾಗರೂಕರಾಗಿರಬೇಕು ಹಾಗೂ ವಾಹನಗಳ ತಪಾಸಣೆಯನ್ನು ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಅವರು ತಿಳಿಸಿದರು. ಈ ಭೇಟಿಯ ಸಂದರ್ಭದಲ್ಲಿ ಪಿಎಸ್‌ಐ ದಿನೇಶ ಎಂ.ಟಿ., ಶರಣಪ್ಪ ಹುಣಸೆ, ಸುಭಾಷ ಲಕ್ಕೆ, ದತ್ತು ನರೋಟೆ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲೀಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ…
ಪಾವಗಡ: ತಾಲೂಕಿನ ಪಳವಳ್ಳಿ ಗ್ರಾಮದ ಬಳಿಯಿರುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ವರ್ಗಗಳ ವಸತಿ ಶಾಲೆಯಲ್ಲಿ ಮಂಗಳವಾರ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಈ ಪ್ರಕರಣದಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಂಭೀರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಪೋಷಕರು ಹಾಗೂ ಸ್ಥಳೀಯ ಮುಖಂಡರು ಆರೋಪಿಸಿದ್ದಾರೆ. ಮಂಗಳವಾರ ಬೆಳಿಗ್ಗೆಯೇ ಮಕ್ಕಳು ಶಾಲೆಯಿಂದ ಕಾಣೆಯಾಗಿದ್ದರೂ, ಬೆಳಿಗ್ಗೆ 11 ಗಂಟೆಯವರೆಗೂ ಪೋಷಕರಿಗೆ ಯಾವುದೇ ಮಾಹಿತಿ ನೀಡದೆ ಪ್ರಾಂಶುಪಾಲರು ಉಡಾಫೆ ತೋರಿದ್ದಾರೆ. “ಮಕ್ಕಳು ಶಾಲೆಯ ಕಾಂಪೌಂಡ್ ಗೋಡೆ ಹತ್ತಿ ಹೊರಹೋಗಿದ್ದಾರೆ” ಎಂದು ಪ್ರಾಂಶುಪಾಲರು ಸಮರ್ಥಿಸಿಕೊಂಡಿದ್ದರೂ, ಶಾಲಾ ಆವರಣದಲ್ಲಿ ಗೋಡೆ ಹತ್ತಿ ಹೋಗಲು ಸಾಧ್ಯವೇ ಇಲ್ಲ, ಮಕ್ಕಳು ಮುಖ್ಯ ಗೇಟ್ ನಿಂದಲೇ ಹೊರಗೆ ಹೋಗಿದ್ದಾರೆ ಎಂದು ಪೋಷಕರು ಖಂಡಿಸಿದ್ದಾರೆ. ಮಕ್ಕಳು ವಸತಿ ನಿಲಯದಿಂದ ಹೊರಹೋಗಲು ಕಾರಣವೇನು ಎಂಬುದನ್ನು ಪರಿಶೀಲಿಸುವ ಹಾಗೂ ಮಾಹಿತಿ ಪಡೆಯುವ ಕೆಲಸಕ್ಕೆ ಯಾವುದೇ ಅಧಿಕಾರಿಗಳು ಮುಂದಾಗಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಬೇಕಿದ್ದ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿಗಳು (ಇಓ)…