Subscribe to Updates
Get the latest creative news from FooBar about art, design and business.
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
- ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
- ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
- ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ
- ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ
Author: Ganesh Tumkuru
ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ವ್ಯಾಪ್ತಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರು ಪ್ರತಿ 5 ವರ್ಷಗಳಿಗೊಮ್ಮೆ ಕಡ್ಡಾಯವಾಗಿ ಇ–ಕೆವೈಸಿ ಮಾಡಿಸಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇ–ಕೆವೈಸಿ ಪ್ರಕ್ರಿಯೆಯನ್ನು ಈಗಾಗಲೇ ಸೆಪ್ಟೆಂಬರ್ 1 ರಿಂದ ಮರು ಪ್ರಾರಂಭಿಸಲಾಗಿದ್ದು, ತಾಲೂಕಿನ 1,14,457 ಸದಸ್ಯರ ಇ-ಕೆವೈಸಿ ಆಗಬೇಕಿರುವುದರಿಂದ ಇ-ಕೆವೈಸಿ ಮಾಡಿಸದೆ ಇರುವ ಸದಸ್ಯರು ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇ–ಕೆವೈಸಿ ಮಾಡಿಸತಕ್ಕದ್ದು. ತಪ್ಪಿದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ. ಪಡಿತರ ಚೀಟಿಗಳಲ್ಲಿ ಮೃತ ಸದಸ್ಯರ ಹೆಸರನ್ನು ಡಿಲೀಟ್ ಮಾಡಿಸದೆ ಇದ್ದಲ್ಲಿ ತುರ್ತಾಗಿ ತಾಲೂಕು ಕಚೇರಿಗೆ ಮರಣ ಪ್ರಮಾಣ ಪತ್ರದೊಂದಿಗೆ ಮಾಹಿತಿ ನೀಡಿ ಮೃತ ಸದಸ್ಯರ ಹೆಸರುಗಳನ್ನು ವಜಾಗೊಳಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಇ-ಕೆವೈಸಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ತುಮಕೂರು: ಗಣಪತಿ ಹಬ್ಬವನ್ನು ಹಬ್ಬವಾಗಿ ಆಚರಿಸಲು ಪೊಲೀಸ್ ಇಲಾಖೆಯಿಂದ ಯಾವುದೇ ತೊಂದರೆಯಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ನಡೆದು ಕೊಂಡರೆ ಕಾನೂನಿನ ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಅಶೋಕ್ ಕೆ.ವಿ. ಎಚ್ಚರಿಕೆ ನೀಡಿದರು. ನಗರದ ಕುಂಚಿಟಿಗ ಸಮುದಾಯಭವನದಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರೆಯಿದ್ದ ತುಮಕೂರು ತಾಲೂಕು ಗಣಪತಿ ಪ್ರತಿಷ್ಠಾಪನಾ ಸಮಿತಿಗಳ ಪದಾಧಿಕಾರಿಗಳ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿಜೆ ಮಾಡಿಫೈಡ್ ವೆಹಿಕಲ್ ಗಳಲ್ಲಿ ಬರುವ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ. ಒಂದು ಗಣಪತಿಗೆ ಎರಡು ಸ್ಪೀಕರ್ ಬಳಸಲು ಅವಕಾಶವಿದೆ. ಮನೆಯ ಒಳಗೆ ಪೂಜಿಸುವ ಗಣಪತಿಗಳನ್ನು ಹೊರತು ಪಡಿಸಿ, ಬಯಲಿನಲ್ಲಿ ಪೂಜಿಸುವ ಎಲ್ಲಾ ಗಣಪತಿಗಳಿಗೂ ಅನುಮತಿ ಕಡಾಯ ಎಂದು ಸ್ಪಷ್ಟಪಡಿಸಿದರು. ಡಿಜೆ ಬಳಸಲು ಸುಪ್ರೀಂಕೋರ್ಟ್ ಕೆಲವು ನಿಬಂಧ ವಿಧಿಸಿದೆ. ಸಾರ್ವಜನಿಕ ಸ್ಥಳ, ಸ್ಕೂಲು, ಕಾಲೇಜು, ಆಸ್ಪತ್ರೆಗಳು ಹಾಗೂ ವ್ಯಾಪಾರಿ ಸ್ಥಳಗಳ ಮುಂದೆ ಜನರಿಗೆ ತೊಂದರೆಯಾಗದಂತೆ ಮೆರವಣಿಗೆ ಶಾಂತ ರೀತಿಯಿಂದ ನಡೆಯಬೇಕು. ಮುಂಚೆಯೇ ಪೊಲೀಸ್ ಇಲಾಖೆಗೆ ತಿಳಿಸಿದರೆ, ಉತ್ಸ…
ಔರಾದ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮುಸ್ತಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಣ್ಣ-ಬಣ್ಣ ಹಚ್ಚಿ ಹಲವು ವರ್ಷಗಳು ಕಳೆದಿದ್ದು, ಶಾಲಾ ಕಟ್ಟಡವು ಕಳೆಗುಂದಿದೆ. ಕೂಡಲೇ ಶಾಲಾ ಕಟ್ಟಡಕ್ಕೆ ಬಣ್ಣ ಬಳಸಿ ಸುಂದರಗೊಳಿಸುವಂತೆ ಒತ್ತಾಯಿಸಿ ಇಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಮನವಿ ಪತ್ರ ಸಲ್ಲಿಸಲಾಯಿತು. ಈ ಮನವಿ ಸಲ್ಲಿಕೆ ಕಾರ್ಯದ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಲಖನ್ ಲಾಧೇಕರ್, ಸಮಾಜ ಸೇವಕರಾದ ಶರಣಬಸಪ್ಪ ಕಾರಮುಂಗೆ, ಸುನಿಲ್ ಪಾಂಡ್ರೆ, ಭರತ್ ರೂಪನರ, ಮಹಾದೇವ್ ಉಪ್ಪಾರ್, ಹಣಮಂತ ಕಿವುಂಡೆ ಸೇರಿದಂತೆ ಮುಂತಾದ ಪ್ರಮುಖರು ಉಪಸ್ಥಿತರಿದ್ದರು. ಶಾಲೆಯ ಹದಗೆಟ್ಟ ವಾತಾವರಣವು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಶಾಲೆಯ ಜೀರ್ಣೋದ್ಧಾರಕ್ಕೆ ಮುಂದಾಗಬೇಕು ಎಂದು ಗ್ರಾಮಸ್ಥರು ಹಾಗೂ ಮುಖಂಡರು ಆಗ್ರಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದರೂ, ಸಾರಿಗೆ ಸಂಪರ್ಕದ ಕೊರತೆಯಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಅರಸಾಪುರ, ಬೈರೇನಹಳ್ಳಿ, ಅಕ್ಕಿರಾಂಪುರ, ಸೊಂಪುರ ಸೇರಿದಂತೆ ಹತ್ತಾರು ಹಳ್ಳಿಗಳಿಂದ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಹೊಳವನಹಳ್ಳಿಗೆ ಶಾಲಾ-ಕಾಲೇಜಿಗೆ ಬರುತ್ತಾರೆ. ಆದರೆ ಗೌರಿಬಿದನೂರು ಮತ್ತು ತುಮಕೂರು ಕಡೆಯಿಂದ ಬರುವ ಬಸ್ ಗಳು ಹೊಳವನಹಳ್ಳಿಗೆ ಬಾರದೆ ಗೌರಗಾನಹಳ್ಳಿ ಕ್ರಾಸ್ ನಲ್ಲಿಯೇ ಹಾದು ಹೋಗುತ್ತಿವೆ. ಇದರಿಂದ ವಿದ್ಯಾರ್ಥಿಗಳು ಗೌರಗಾನಹಳ್ಳಿ ಕ್ರಾಸ್ ನಿಂದ ಹೊಳವನಹಳ್ಳಿವರೆಗೆ ಸುಮಾರು 5 ಕಿ.ಮೀ ಹಾಗೂ ಸೋಂಪುರ ಗ್ರಾಮದಿಂದ 3 ಕಿ.ಮೀ ದೂರ ನಡೆದುಕೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಬೆಳಗ್ಗೆ ಶಾಲಾ–ಕಾಲೇಜು ಸಮಯದಲ್ಲಿ ಮತ್ತು ಸಂಜೆ ತಿರುಗಿ ಹೋಗುವ ಸಮಯದಲ್ಲಿ ಹೊಳವನಹಳ್ಳಿ ಮಾರ್ಗವಾಗಿ ಬಂದು ವಾಪಸ್ ಹೋಗುವ ವ್ಯವಸ್ಥೆ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ…
ಬೆಂಗಳೂರು: ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ಮಾಡ್ಯೂಲ್ (ED) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ಭ್ರಷ್ಟಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಬೆಂಗಳೂರು, ಬೆಳಗಾವಿ ಮತ್ತು ಮಹಾರಾಷ್ಟ್ರ ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿ ತನಿಖೆ ಮುಂದುವರಿಸಿದೆ. ವರದಿಗಳ ಪ್ರಕಾರ, ಸಚಿವರಾಗಿದ್ದ ವೇಳೆ ಪ್ರಭಾವ ಬಳಸಿ 18 ಅನಧಿಕೃತ ಬಾರ್ ಲೈಸೆನ್ಸ್ ಗಳನ್ನು ನೀಡಲು ಸಹಾಯ ಮಾಡಿದ್ದರೆಂಬ ಗಂಭೀರ ಆರೋಪವಿದೆ. ವಿದೇಶದಲ್ಲಿ ಹಣ ಹೂಡಿಕೆ ಮಾಡಲು ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪವಿದ್ದು, ಈ ಹಿಂದೆ ಸುಮಾರು 3 ಕೋಟಿ ರೂ.ಗಳಷ್ಟು ಅಕ್ರಮ ವಿದೇಶಿ ಹಣ ಪತ್ತೆಯಾಗಿತ್ತು. ಬಾರ್ ಗಳಿಂದ ಅಕ್ರಮ ಹಣ ವರ್ಗಾವಣೆ (Hawala transaction) ನಡೆದಿರುವ ಶಂಕೆಯ…
ತುಮಕೂರು: ಎತ್ತಿನಹೊಳೆ ಯೋಜನೆಯ ಮೂಲಕ ಅಕ್ಟೋಬರ್ 2026ರ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ನೀರು ಹರಿಸುವ ಉದ್ದೇಶದಿಂದ ಕೈಗೊಳ್ಳಲಾಗಿದ್ದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಜಿ ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಎತ್ತಿನಹೊಳೆ ಯೋಜನೆಯಡಿ ತುಮಕೂರು ಜಿಲ್ಲೆಗೆ ನೀರು ಹರಿಸಲು ಕೈಗೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಕಾಮಗಾರಿಗಳ ಅನುಷ್ಠಾನದ ಹಂತ, ಪೂರ್ಣಗೊಳ್ಳಬೇಕಿರುವ ಕಾಮಗಾರಿಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಗತ್ಯ ಕ್ರಮಗಳ ಕುರಿತು ಡಿಸಿಎಂ ವಿವರವಾಗಿ ಪರಿಶೀಲನೆ ನಡೆಸಿದರು. ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ, ಕಾಮಗಾರಿಗಳ ಅನುಷ್ಠಾನ ಹಾಗೂ ವಿವಿಧ ಇಲಾಖೆಗಳ ಸಹಕಾರದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಕಾಮಗಾರಿಗಳ ಪ್ರಗತಿಗೆ ಅಡ್ಡಿಯಾಗಿರುವ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ತ್ವರಿತವಾಗಿ ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಅಕ್ಟೋಬರ್ 2026ರ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸುವ…
ತುಮಕೂರು : ನಾಡಹಬ್ಬ ತುಮಕೂರು ದಸರಾ ಉತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸುವ ಮೂಲಕ ಜಿಲ್ಲೆಯ ಕಲೆ, ಸಂಸ್ಕೃತಿ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ರಾಜ್ಯ ಮಟ್ಟದಲ್ಲಿ ಗುರುತಿನ ವೇದಿಕೆ ಕಲ್ಪಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಸರಾ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ದಸರಾವನ್ನು ವಿಶೇಷ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು. ಉತ್ಸವದಲ್ಲಿ ಹೊಸತನ ಪರಿಚಯಿಸುವುದರ ಜೊತೆಗೆ ಯುವ ಕಲಾವಿದರು, ನೃತ್ಯ ತಂಡಗಳು ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದರು. ದಸರಾ ಸಂದರ್ಭದಲ್ಲಿ ತುಮಕೂರು ನಗರದ ಅಮಾನಿಕೆರೆಯನ್ನು ಆಕರ್ಷಕವಾಗಿ ಅಲಂಕರಿಸಿ, ವಿದ್ಯುತ್ ದೀಪಾಲಂಕಾರ ಸೇರಿದಂತೆ ವಿವಿಧ ಅಲಂಕಾರಗಳಿಂದ ಕಂಗೊಳಿಸುವಂತೆ ಮಾಡಬೇಕು. ಅಮಾನಿಕೆರೆಯನ್ನು ದಸರಾ ಉತ್ಸವದ ಪ್ರಮುಖ ಆಕರ್ಷಣೆಯನ್ನಾಗಿ ರೂಪಿಸಿ ಸಾರ್ವಜನಿಕರನ್ನು ಸೆಳೆಯಬೇಕು ಎಂದು ಸೂಚಿಸಿದರು. ನಗರದ ಪ್ರಮುಖ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿಯೂ ವಿದ್ಯುತ್…
ಪಾವಗಡ : ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಹಾಗೂ ನಿಡಗಲ್ಲು ದುರ್ಗದ ಅಭಿಮಾನಿಗಳ ವತಿಯಿಂದ 10ನೇ ವರ್ಷದ ನಿಡಗಲ್ಲು ಉತ್ಸವ–2026 ಅನ್ನು ನಿಡಗಲ್ಲು ದುರ್ಗದ ರಾಮತೀರ್ಥದ ಬಳಿ ಅದ್ದೂರಿಯಾಗಿ ಆಚರಿಸಲಾಯಿತು. ಡೋಲು ಬಾರಿಸುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ಸರ್ಕಾರವೇ ಪ್ರತಿವರ್ಷ ನಿಡಗಲ್ಲು ಉತ್ಸವವನ್ನು ಆಚರಿಸಬೇಕು. ಐತಿಹಾಸಿಕ ನಿಡಗಲ್ಲು ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಮಾತನಾಡಿ, ತಮ್ಮ ಶಾಸಕಾವಧಿಯಲ್ಲಿ ನಿಡಗಲ್ಲು ದುರ್ಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗಿತ್ತು. ಮುಂದಿನ ದಿನಗಳಲ್ಲಿ ವಾಲ್ಮೀಕಿ ಆಶ್ರಮದ ಅಭಿವೃದ್ಧಿಗೆ ಸಂಸದರ ನಿಧಿಯಿಂದಲೂ ಸಹಕಾರ ಕೊಡಿಸುವುದಾಗಿ ಭರವಸೆ ನೀಡಿದರು. ತುಮಕೂರು ನಗರಸಭೆ ಮಾಜಿ ಮಹಾಪೌರ ಹಾಗೂ ವಾಲ್ಮೀಕಿ ಬ್ಯಾಂಕ್ ಅಧ್ಯಕ್ಷ ಬಿ.ಜಿ. ಕೃಷ್ಣಪ್ಪ ಮಾತನಾಡಿ, ವಾಲ್ಮೀಕಿ ಆಶ್ರಮದ ಭವನದ ಮುಂದುವರಿದ ಕಾಮಗಾರಿಗೆ ವೈಯಕ್ತಿಕವಾಗಿ ಹಾಗೂ ಬ್ಯಾಂಕ್ ವತಿಯಿಂದ…
ತುಮಕೂರು/ಗುಬ್ಬಿ: ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ ನಿವೇಶನಗಳನ್ನು ಸಿದ್ಧಪಡಿಸಿ, ಒಟ್ಟು 15 ಲಕ್ಷ ಬಡ ಕುಟುಂಬಗಳಿಗೆ ಉಚಿತ ನಿವೇಶನ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಗುಬ್ಬಿ ವೀರಣ್ಣ ರಂಗ ಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಆಯೋಜಿಸಿದ್ದ ‘ಪ್ರಜಾ ಸೇವಾ ಅಭಿಯಾನ’ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ತಾಲ್ಲೂಕಿನಲ್ಲಿ ಐದಾರು ಸಾವಿರ ನಿವೇಶನಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಪ್ರಜಾ ಸೇವಾ ಅಭಿಯಾನವನ್ನು ಜಾರಿಗೆ ತರಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲೇ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಅಭಿಯಾನವನ್ನು ಮೂರು ಹಂತಗಳಲ್ಲಿ ನಡೆಸಲಾಗುತ್ತಿದೆ. ಪ್ರತಿ ಮೊದಲ ಹಾಗೂ ಮೂರನೇ ಶನಿವಾರ ತಾವೇ ಒಂದೊಂದು ತಾಲ್ಲೂಕಿಗೆ ಭೇಟಿ ನೀಡಿ ಅಭಿಯಾನ ನಡೆಸಲಿದ್ದು, ಉಳಿದ ವಾರಗಳಲ್ಲಿ ಸ್ಥಳೀಯ…
ಕೊರಟಗೆರೆ: ಆಧ್ಯಾತ್ಮಿಕತೆ, ವೈಚಾರಿಕತೆ, ಸಾಮಾಜಿಕ ಹೊಣೆಗಾರಿಕೆ ಹಾಗೂ ಕುಟುಂಬ ಮೌಲ್ಯಗಳು ಗ್ರಾಮೀಣ ಭಾಗದಲ್ಲಿ ಇನ್ನೂ ಜೀವಂತವಾಗಿ ಉಳಿದಿವೆ. ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ತಿಳಿಸಿದರು. ತಾಲೂಕಿನ ಬೊಮ್ಮಲದೇವಿಪುರ ಗ್ರಾಪಂ ವ್ಯಾಪ್ತಿಯ ಚುಂಚನಹಳ್ಳಿಯ ದೊಡ್ಡಮನೆ ಕುಟುಂಬದ ವತಿಯಿಂದ ಆಯೋಜಿಸಲಾಗಿದ್ದ ಗುರುವಂದನಾ ಹಾಗೂ ಕುಟುಂಬದ ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದ ದಿವ್ಯ ಸಾನಿದ್ಯವಹಿಸಿ ಮಾತನಾಡಿದರು. ಆಧ್ಯಾತ್ಮಿಕತೆ ಎಂದರೆ ಕೇವಲ ಬಾಹ್ಯ ಆಚರಣೆಗಳಲ್ಲ ಅದು ಮನಸ್ಸನ್ನು ಪರಿಶುದ್ಧಗೊಳಿಸುವ ಮತ್ತು ಆತ್ಮಾವಲೋಕನ ಮಾಡಿಕೊಳ್ಳುವ ಪ್ರಕ್ರಿಯೆ. ಧರ್ಮ ಮತ್ತು ಆಧ್ಯಾತ್ಮಿಕತೆಯ ಜೊತೆಗೆ ಪ್ರತಿಯೊಬ್ಬರೂ ವೈಚಾರಿಕ ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ವಿಚಾರಶಕ್ತಿ ಮತ್ತು ವಿವೇಕದಿಂದ ಆಲೋಚಿಸಿದಾಗ ಮಾತ್ರ ನಿಜವಾದ ಜ್ಞಾನ ಲಭಿಸಲು ಸಾಧ್ಯ ಎಂದು ಪ್ರತಿಪಾದಿಸಿದರು. ಮೂಢನಂಬಿಕೆಗಳು ಮಾನವನ ಸರ್ವತೋಮುಖ ಪ್ರಗತಿಗೆ ಬಹುದೊಡ್ಡ ಅಡ್ಡಿಯಾಗಿವೆ. ಸತ್ಯ ಮತ್ತು ವೈಚಾರಿಕ ದೃಷ್ಟಿಕೋನವನ್ನು ಒಪ್ಪಿಕೊಳ್ಳುವುದು ಇಂದಿನ ಕಾಲಘಟ್ಟದ ತುರ್ತು ಅಗತ್ಯ. ಮೂಢನಂಬಿಕೆಗಳನ್ನು ಸಂಪೂರ್ಣವಾಗಿ ತೊರೆದು, ಸದ್ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಆರೋಗ್ಯಕರ…