Subscribe to Updates
Get the latest creative news from FooBar about art, design and business.
- “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
- ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
- ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
- ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
Author: Ganesh Tumkuru
ಹೊನ್ನವಳ್ಳಿ: ತಿಪಟೂರು ತಾಲೂಕು ಹೊನ್ನವಳ್ಳಿಯಲ್ಲಿ ಗೃಹ ಬಳಕೆ ಸಿಲಿಂಡರ್ ಗಳನ್ನು ಬಳಸುತ್ತಿದ್ದ ಕೋಳಿ ಅಂಗಡಿ, ಬೇಕರಿ, ಹೋಟೆಲ್, ಅಂಗಡಿಗಳು, ಟೀ ಸ್ಟಾಲ್ ಗಳ ಮೇಲೆ ದಾಳಿನಡೆಸಿದ ತಿಪಟೂರು ತಾಲೂಕು ಅಧಿಕಾರಿಗಳು ತಾಲೂಕಿನ ದಂಡಾಧಿಕಾರಿಗಳ ಮಾರ್ಗದರ್ಶನದಂತೆ ಮುಸ್ಸಂಜೆ ಸಮಯದಲ್ಲಿ ದಾಳಿ ನಡೆಸಲಾಗಿದೆ. ಹೋಬಳಿಯ ವ್ಯಾಪ್ತಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ 14.2 ಕೆ.ಜಿ ಗೃಹ ಉಪಯೋಗಿ ಸಿಲಿಂಡರ್ ಗಳನ್ನು ಕೋಳಿ ಅಂಗಡಿ, ಬೇಕರಿ, ಹೋಟೆಲ್ ಗಳು, ಟೀ ಸ್ಟಾಲ್ ನವರು ಉಪಯೋಗಿಸುವುದು ಕಂಡುಬಂದಿದ್ದು, ಈ ಬಗ್ಗೆ ತಾಲೂಕು ಆಡಳಿತಕ್ಕೆ ದೂರು ಬಂದ ಹಿನ್ನೆಲೆಯಲ್ಲಿ ಜು.29ರ (ಬುಧವಾರ) ವಶಕ್ಕೆ ಪಡೆದುಕೊಂಡಿರುತ್ತಾರೆ. ಸಂಬಂಧಪಟ್ಟವರ ಮೇಲೆ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್ ಮೋಹನ್ ಕುಮಾರ್ ತಿಳಿಸಿದ್ದಾರೆ. ತಾಲೂಕು ಆಡಳಿತದ ವತಿಯಿಂದ ಉತ್ತಮ ಕಾರ್ಯ ಕೈಗೊಂಡಿದ್ದರ ಬಗ್ಗೆ ಜನಗಳು ಪ್ರಶಂಸೆ ವ್ಯಕ್ತಪಡಿಸುತ್ತಿದ್ದು, ಆದರೆ ಗ್ಯಾಸ್ ಸಿಲಿಂಡರ್ ಗಳಿಗೆ ಹೆಚ್ಚಿನ ದರವನ್ನು ಪಡೆಯುತ್ತಿರುವ ಬಗ್ಗೆ ಸಹ ಸಾರ್ವಜನಿಕರು ದೂರು ನೀಡಿದ್ದರು. ಕೂಡಲೇ ಬಿಲ್ ನಲ್ಲಿ ನಮೂದಾಗುವ ದರಕ್ಕಿಂತ…
ಮಧುಗಿರಿ: ಎಷ್ಟೇ ಬರಗಾಲ ಬಂದರೂ ಮಾಜಿ ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆಯಿಂದಾಗಿ ಊಟಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮಾಜಿ ಸಚಿವ ಶಾಸಕ ಕೆ.ಎನ್. ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಅವರು ಎಂ.ಎನ್.ಕೆ ಸಮುದಾಯ ಭವನದಲ್ಲಿ ಬುಧವಾರ ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಸಂಘಟನ್ ಸೃಜನ್ ಅಭಿಯಾನದಲ್ಲಿ ಮಾತನಾಡಿದರು. ಕ್ಷೇತ್ರದಲ್ಲಿ ಎಸ್ ಐ ಆರ್ ಮತದಾರರ ಪಟ್ಟಿ ಪರಿಷ್ಕರಣೆ ಶೇ. 80 ರಷ್ಟು ಪೂರ್ಣಗೊಂಡಿದೆ. ಬೇರೆ ಕಡೆಯಿಂದ ಮದುವೆಯಾಗಿ ಬಂದಿರುವವರು 2002ರ ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು ಎಂಬ ನಿಯಮವಿದ್ದು, ಅವರ ಮಾವನ ಮತದಾರರ ಪಟ್ಟಿ ಆಧಾರದ ಮೇಲೆ ಎಸ್ ಐ ಆರ್ ಗೆ ಸೇರಿಸಬೇಕು ಎಂದು ಒತ್ತಾಯಿಸಿದ ಅವರು, ಒಂದೊಂದು ಮತವೂ ಅಮೂಲ್ಯ. ಬಾಕಿ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಿ. ಯಾರೂ ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಇನ್ನೂ ನೋಂದಣಿ ಮಾಡಿಕೊಂಡಿರುವುದಿಲ್ಲ ಅಂತಹವರ ಮನವೊಲಿಸಿ ಮತ ನಷ್ಟವಾಗದ ರೀತಿ ಕ್ರಮ ವಹಿಸಿ. ಮುಂದೆ ಪುರಸಭೆ, ಗ್ರಾ.ಪಂ, ಜಿಪಂ ಚುನಾವಣೆ ಬರಲಿದ್ದು, ಎಲ್ಲಾ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಸಾಪ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಮುಖಂಡರಾದ ಸ್ವದೇಶಿ ವಿಶ್ವನಾಥ್, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಮಂಜೇಶ್, ತಾಲೂಕು ಅಧ್ಯಕ್ಷ ಕಟವೇಲ್ ರಂಗನಾಥ್, ಜಿಲ್ಲಾ ವಾದ್ಯಗಾರರ ಸಂಘದ ಅಧ್ಯಕ್ಷ ಗಂಗಾಧರ್, ಸತ್ಯನಾರಾಯಣ್, ಬಿಸ್ಟೆಕ್ಸ್ ರಾಮರಾಜು, ಸೀತಾರಾಮಯ್ಯ ಸೇರಿದಂತೆ ಸಮುದಾಯದ ಮುಖಂಡರು ಗಳ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, 12ನೇ ಶತಮಾನದ ವಚನ ಚಳವಳಿಯ ನೇತೃತ್ವ ವಹಿಸಿದ್ದ ಹಲವು ಮಹನೀಯರು ಜಯಂತಿಗಳನ್ನು ಸರ್ಕಾರ ಆಚರಿಸುತ್ತಿದ್ದು, ಅವರಲ್ಲಿ ಬಸವಣ್ಣನವರ ಬಲಗೈ ಬಂಟನಂತಿದ್ದ ಶಿವಶರಣ ಹಡಪದ ಅಪ್ಪಣ್ಣನವರು ಒಬ್ಬರು. ಯಾರನ್ನು…
ತುಮಕೂರು/ಮಧುಗಿರಿ: ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮಹತ್ವದ ಹೆಜ್ಜೆಯಾಗಿ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯ ಸಮೀಪವಿರುವ ಮೊರಾರ್ಜಿ ವಸತಿ ಶಾಲೆಗೆ ಪ.ಪೂ ವಿಜ್ಞಾನ ವಿಭಾಗ ಮಂಜೂರಾಗಿದ್ದು, ಹತ್ತನೇ ತರಗತಿವರೆಗೆ ಮಾತ್ರ ಇದ್ದ ವಸತಿ ಶಾಲೆ ಇದೀಗ ವಿಜ್ಞಾನ ಪದವಿ ಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಿದೆ. ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ ಹಾಗೂ ಎಂಎಲ್ಸಿ ಆರ್.ರಾಜೇಂದ್ರ ಅವರ ಪ್ರಯತ್ನದಿಂದ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಸುತ್ತಮುತ್ತಲ ಗ್ರಾಮೀಣ ವಿದ್ಯಾರ್ಥಿಗಳಿಗೆ ತಮ್ಮ ನೆಲೆ ಸಮೀಪವೇ ವಿಜ್ಞಾನ ನಿಕಾಯವನ್ನು ಅಭ್ಯಾಸಿಸುವ ಮಹತ್ವದ ಅವಕಾಶ ದೊರೆತಂತಾಗಿದೆ. 2013ರಲ್ಲೂ ಶಾಸಕರಾಗಿದ್ದ ಕೆ.ಎನ್.ರಾಜಣ್ಣ ಅವರ ಪ್ರಯತ್ನದಿಂದಲೇ ಮಂಜೂರಾಗಿದ್ದ 10 ಎಕರೆ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಕೇವಲ ಪ್ರೌಢಶಾಲಾ ವಿಭಾಗ ಮಾತ್ರ ಈವರೆಗೆ ಕಾರ್ಯನಿರ್ವಹಿಸುತ್ತಿತ್ತು. ಪ್ರೌಢಶಾಲೆಗೆ ದೊಡ್ಡೇರಿ ಹೋಬಳಿ ಸೇರಿದಂತೆ ತಾಲೂಕಿನ ವಿವಿಧೆಡೆಯ ವಿದ್ಯಾರ್ಥಿಗಳು ಆಗಮಿಸಿ ಅಭ್ಯಾಸಮಾಡುವ ಅವಕಾಶ ದೊರೆತಿತ್ತು. ವಸತಿ ಶಾಲೆಗೆ ದೊರೆತ ಉತ್ತಮ ಸ್ಪಂದನೆ, ವಿದ್ಯಾರ್ಥಿಗಳು ಉತ್ತಮ ಫಲಿತಾಂಶವೂ ದಾಖಲಿಸಿದ್ದು, ಇಲ್ಲಿಯೇ ವಿಜ್ಞಾನ ಕಾಲೇಜು ಆರಂಭಿಸಿದರೆ ದೊಡ್ಡೇರಿ ಹೋಬಳಿಯಲ್ಲಿ…
ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕಳಿದ ವೃಂದದ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಸಂಬಂಧ ತುಮಕೂರು ನಗರದ 27 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಆಗಸ್ಟ್ 2ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆಯನ್ವಯ ಪರೀಕ್ಷಾ ದಿನದಂದು ಕೇಂದ್ರಗಳ ಸುತ್ತ-ಮುತ್ತ ಇರುವ ಜೆರಾಕ್ಸ್ ಮತ್ತು ಕಂಪ್ಯೂಟರ್ / ಸೈಬರ್ ಅಂಗಡಿಗಳನ್ನು ಮುಚ್ಚತಕ್ಕದ್ದು. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ ಆಪ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡುವವರ ವಿರುದ್ಧ ಸೂಕ್ತ…
ಔರಾದ್: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವರು ಹಾಗೂ ಔರಾದ್ ಶಾಸಕರಾದ ಪ್ರಭು ಚವ್ಹಾಣ ಕರೆ ನೀಡಿದರು. ಔರಾದ್ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ‘ಕನ್ನಡ ಜಂಗಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನರ ಕುಂದುಕೊರತೆಗಳು, ಶಿಕ್ಷಣ, ನೀರಾವರಿ, ಕೃಷಿ ಹಾಗೂ ಕಾರ್ಮಿಕರ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಕೆಲಸ ಮಾಧ್ಯಮಗಳಿಂದ ಆಗಬೇಕಿದ್ದು, ತಾಲೂಕಿನ ಅಭಿವೃದ್ಧಿಯಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದರು. ಅಲ್ಲದೆ, ತಾಲೂಕಿನಲ್ಲಿ ಪತ್ರಕರ್ತರ ಅನುಕೂಲಕ್ಕಾಗಿ ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ದೊರೆತರೆ, ಭವ್ಯ ಕಟ್ಟಡ ನಿರ್ಮಿಸಲು ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ದೇವರು ಮಾತನಾಡಿ, ಪತ್ರಿಕೋದ್ಯಮವು…
ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ಡಿಸಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ ಅವರು, ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಲ್ಲಿ ಮಳೆಯಿಂದ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಸಂದರ್ಭದಲ್ಲಿ ಬೆಳೆ ವಿಮೆ ನಷ್ಟ ಪರಿಹಾರವನ್ನು ಪಾವತಿಸುವ ಅವಕಾಶವಿದೆ. ಪ್ರಸ್ತುತ ಸಾಲಿನಲ್ಲಿ ಎಲ್ ನಿನೋದಿಂದ ಮಳೆ ಕೊರತೆಯಿದ್ದು, ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಹಾಗೂ ಬೆಳೆ ಸಾಲ ಪಡೆಯದ ಎಲ್ಲಾ ರೈತರು ವಿಮಾ ಕಂತು ಪಾವತಿಸಿ ಭಾಗವಹಿಸಬಹುದು. ಈ…
ತುಮಕೂರು: ಜಿಲ್ಲೆಯ ಕ್ರೈಸ್ ನ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಧುಗಿರಿ ತಾಲೂಕು ಬಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲಿಷ್, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ ವಿಷಯದ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಬಿ.ಎಡ್. ಶಿಕ್ಷಣ ಪಡೆದಿರಬೇಕು. ಗಣಕ ವಿಜ್ಞಾನ ವಿಷಯದ ಹುದ್ದೆಗೆ ಇಂಜಿನಿಯರಿಂಗ್, ಎಂ.ಸಿ.ಎ. ಅಥವಾ ಎಂ.ಎಸ್ಸಿ. ಕಂಪ್ಯೂಟರ್ ವಿಜ್ಞಾನ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಬಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಭೇಟಿ ನೀಡಿ ಜುಲೈ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಪರಿಶೀಲಿಸಿದ ನಂತರ ಅರ್ಹ ಅಭ್ಯರ್ಥಿಗಳನ್ನು ಡೆಮೋ ತರಗತಿಗೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದವರು ಜುಲೈ 31ರಂದು ನಡೆಯುವ ಡೆಮೋ ತರಗತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕ್ಯಾತ್ಸಂದ್ರ, ಮೈದಾಲ ರಸ್ತೆ, ಬಸವಪಟ್ಟಣ, ತುಮಕೂರು, ದೂ.ವಾ. ಸಂ. 0816-2278014ನ್ನು…
ಸರಗೂರು: 12ನೇ ಶತಮಾನದ ಆದ್ಯ ವಚನಕಾರ, ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ತತ್ವಾದರ್ಶಗಳು ಇಂದಿನ ಸಮಾಜಕ್ಕೂ ಪೂರಕವಾಗಿದ್ದು, ಪ್ರತಿಯೊಬ್ಬರೂ ಅವರ ವಿಚಾರಧಾರೆಗಳನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಮೋಹನಕುಮಾರಿ ಕರೆ ನೀಡಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾಗಿದ್ದ ಹಡಪದ ಅಪ್ಪಣ್ಣನವರು ತಮ್ಮ 200ಕ್ಕೂ ಹೆಚ್ಚು ವಚನಗಳ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದವರು. ಸಮಾನತೆ, ಶ್ರಮ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಸಮಾಜ ಸುಧಾರಕರಾದ ಅವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಮಾನವ ಬದುಕು ಹಸನಾಗುತ್ತದೆ ಎಂದು ತಹಶೀಲ್ದಾರ್ ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ಮುಖಂಡರು ತಾಲೂಕು ಮಟ್ಟದ ಸಭೆ-ಸಮಾರಂಭಗಳನ್ನು ನಡೆಸಲು ಸಮುದಾಯ ಭವನದ ಕೊರತೆ ಇರುವ ಬಗ್ಗೆ ತಹಸೀಲ್ದಾರ್ ಅವರ ಗಮನಕ್ಕೆ ತಂದರು.…
ಬೀದರ್ / ಔರಾದ್: ತಾಲೂಕಿನ ಸಂತಪೂರ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮಸ್ಥರ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ, ಸುಲಭವಾಗಿ ‘ಇ-ಸ್ವತ್ತು’ ವಿತರಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ‘ನನ್ನ ಸ್ವತ್ತು ನನ್ನ ಹಕ್ಕು’ ವಿಶೇಷ ಅಭಿಯಾನಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಕಿರಣ ಪಾಟೀಲ್ ಅವರು ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿಯೊಬ್ಬ ಮನೆ ಮಾಲೀಕರು ತಮ್ಮ ಆಸ್ತಿಯ ಸಂಪೂರ್ಣ ದಾಖಲೆಗಳನ್ನು ಪಂಚಾಯತಿಗೆ ಸಲ್ಲಿಸಿ, ಡಿಜಿಟಲೀಕೃತ ಇ–ಸ್ವತ್ತು ಖಾತೆಯನ್ನು ಪಡೆದುಕೊಳ್ಳಬೇಕು,” ಎಂದು ಮನವಿ ಮಾಡಿದರು. ಅಭಿಯಾನದ ಮೊದಲ ದಿನವೇ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಒಟ್ಟು 47 ಅರ್ಜಿಗಳು ಸ್ವೀಕಾರಗೊಂಡಿವೆ. ಇವುಗಳಲ್ಲಿ 9 ಇ-ಸ್ವತ್ತು ದಾಖಲೆಗಳನ್ನು ಸ್ಥಳದಲ್ಲೇ ವಿತರಿಸಲಾಗಿದ್ದು, ಉಳಿದ ಅರ್ಜಿಗಳ ಪರಿಶೀಲನೆ ಹಾಗೂ ಪ್ರಕ್ರಿಯೆ ಪ್ರಗತಿಯಲ್ಲಿದೆ. ಗ್ರಾಮಸ್ಥರು ಈ ಸುವರ್ಣಾವಕಾಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಅಧಿಕಾರಿಗಳು ಕೋರಿದ್ದಾರೆ. ಮನೆ–ಮನೆಗೆ ತೆರಳಿ ಜಾಗೃತಿ: ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಮಾತನಾಡಿ, “ಈ ಮಹತ್ವಾಕಾಂಕ್ಷಿ ಅಭಿಯಾನದ…