Subscribe to Updates
Get the latest creative news from FooBar about art, design and business.
- ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
- ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
- ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
- ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
- ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
- ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
- ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
- ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ
Author: Ganesh Tumkuru
ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾದ ಕೋಟೆ ತಿಮ್ಮಣ್ಣ ಅವರು ಪಟ್ಟಣದ ನಾಗರಿಕರಿಗೆ ಪ್ರಕಟಿಸಿದ್ದಾರೆ. ಪಟ್ಟಣದ ಗ್ರಾಮ ದೇವತಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕೋಟೆ ತಿಮ್ಮಣ್ಣ ಅವರ ನೇತೃತ್ವದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ಲೆಕ್ಕಪತ್ರವನ್ನು ಮಂಡಿಸಿ, ಸಾರ್ವಜನಿಕರ ಮಾಹಿತಿಗಾಗಿ ಬಹಿರಂಗಪಡಿಸಲಾಯಿತು. 2026ನೇ ಸಾಲಿನಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ದೇಣಿಗೆ ರೂಪದಲ್ಲಿ ನೀಡಿರುವ ಹಣ ಮತ್ತು ದೇವಾಲಯದ ಹುಂಡಿಯಿಂದ ಒಟ್ಟು 7,30,932 ರೂಪಾಯಿ ಸಂಗ್ರಹವಾಗಿತ್ತು. ಈ ಪೈಕಿ ಜಾತ್ರಾ ಮಹೋತ್ಸವದ ಒಟ್ಟು ವೆಚ್ಚಕ್ಕಾಗಿ 6,12,000 ರೂಪಾಯಿಗಳನ್ನು ಖರ್ಚು ಮಾಡಲಾಗಿದ್ದು, ಉಳಿದಂತೆ 1,18,932 ರೂಪಾಯಿಗಳಷ್ಟು ಹಣ ಉಳಿತಾಯವಾಗಿದೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು. ಜಾತ್ರಾ ಮಹೋತ್ಸವವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಹಾಗೂ ಅದ್ದೂರಿಯಾಗಿ ನೆರವೇರಿಸಲಾಗಿದ್ದು, ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಯಾವುದೇ ರೀತಿಯ ಲೋಪ ಅಥವಾ ತೊಂದರೆಯಾಗದಂತೆ ನಿರ್ವಹಿಸಲಾಗಿದೆ. ಆಗಮಿಸಿದ ಭಕ್ತರಿಗೆ…
ಬೀದರ್: ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆಯ ತೀವ್ರ ಕೊರತೆ ಎದುರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ತಕ್ಷಣವೇ ಗಂಭೀರವಾಗಿ ಪರಿಗಣಿಸಿ ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ನೆರವಿಗೆ ಧಾವಿಸಬೇಕು ಎಂದು ಭಾಲ್ಕಿ ತಾಲೂಕು ವಕೀಲರ ಸಂಘ ಒತ್ತಾಯಿಸಿದೆ. ತಾಲೂಕು ವಕೀಲರ ಸಂಘದ ಅಧ್ಯಕ್ಷ ಮಹೇಶ ರಾಚೋಟೆ ಅವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ವಕೀಲರು, ತಹಸೀಲ್ದಾರ್ ಕಚೇರಿಗೆ ತೆರಳಿ ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಿದರು. “ಸಮಾಜದ ಕಷ್ಟಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ. ಮಳೆಯಿಲ್ಲದೆ ಬೆಳೆ ಕಳೆದುಕೊಂಡ ಅನ್ನದಾತ ದಿಕ್ಕು ತೋಚದಂತಾಗಿದ್ದಾನೆ. ರೈತರ ಕಣ್ಣೀರು ಒರೆಸದಿದ್ದರೆ ಸಮಾಜಕ್ಕೆ ಉಳಿಗಾಲವಿಲ್ಲ. ಸರ್ಕಾರ ವಿಳಂಬ ಮಾಡದೆ ಭಾಲ್ಕಿ ತಾಲೂಕು ಸೇರಿದಂತೆ ಸಂಪೂರ್ಣ ಜಿಲ್ಲೆಯನ್ನು ಬರಗಾಲ ಎಂದು ಘೋಷಿಸಬೇಕು. ರೈತರ ಹಕ್ಕಿಗಾಗಿ ಬೀದಿಗಿಳಿದು ಹೋರಾಡಲು ವಕೀಲರ ಸಂಘ ಸದಾ ಸಿದ್ಧವಿದೆ.” — ಮಹೇಶ ರಾಚೋಟೆ, ಅಧ್ಯಕ್ಷರು, ಭಾಲ್ಕಿ…
ಔರಾದ್ (ಬೀದರ್): ಸರ್ಕಾರಿ ಶಾಲೆಯಲ್ಲಿ ಓದುವ ಬಡ ಕುಟುಂಬದ ಮಕ್ಕಳಿಗೆ ನೆರವಾಗುವುದು ಅತ್ಯಂತ ಶ್ಲಾಘನೀಯ ಕಾರ್ಯ. ಬಡವರಿಗೆ ಸಹಾಯ ಮಾಡುವುದು ಎಂದರೆ ದೇವರಿಗೆ ಸಾಲ ಕೊಟ್ಟಂತೆ ಎಂದು ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಇಮ್ಯಾನುವೆಲ್ (ಬಂಟಿ) ದರ್ಬಾರೆ ಹೇಳಿದರು. ಪಟ್ಟಣದ ಹರಿಜನವಾಡದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿನಿ ಕುಮಾರಿ ಛಾಯಾ ಅಶೋಕ ತಾರೆ ಅವರು ತಮ್ಮ ಬೌದ್ಧವಾಸಿ ತಂದೆ-ತಾಯಿ ತೇಜಮ್ಮ ತಾರೆ ಹಾಗೂ ಅಶೋಕ ತಾರೆ ಅವರ ಪುಣ್ಯನುಮೋದನೆ ಅಂಗವಾಗಿ ಶಾಲಾ ಮಕ್ಕಳಿಗೆ ನೋಟ್‌ಬುಕ್ ಸೇರಿದಂತೆ ವಿವಿಧ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. ಕಳೆದ ಐದು ವರ್ಷಗಳಿಂದ ವಿದ್ಯಾರ್ಥಿಗಳ ಇಡೀ ವರ್ಷದ ವಿದ್ಯಾಭ್ಯಾಸಕ್ಕೆ ಬೇಕಾಗುವ ನೋಟ್‌ಬುಕ್, ಡಿಕ್ಷನರಿ, ಅಂಕಲಿಪಿ, ಪೆನ್ಸಿಲ್, ಸ್ಕೇಲ್, ಶಾರ್ಪ್‌ನರ್ ಸೇರಿದಂತೆ ವಿವಿಧ ಕಲಿಕಾ ಸಾಮಗ್ರಿಗಳನ್ನು ವಿತರಿಸುತ್ತಾ ಬರಲಾಗುತ್ತಿದೆ. ಮಕ್ಕಳಲ್ಲಿ ಶಿಸ್ತು ಬೆಳೆಯಬೇಕು, ಜೀವನದಲ್ಲಿ ಉನ್ನತ ಮಟ್ಟಕ್ಕೆ ತಲುಪಲು ಶಿಸ್ತು ಅತ್ಯಂತ ಮುಖ್ಯ ಎಂದು ಉಡುಪಿಯ ನಕ್ಸಲ್ ನಿಗ್ರಹ ದಳದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಅನಿಲ್ ತಾರೆ…
ತುಮಕೂರು: ನೀಟ್ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಲು ದೇಶಾದ್ಯಂತ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ನಡೆದ ಐತಿಹಾಸಿಕ ಹೋರಾಟಕ್ಕೆ ದೊರೆತ ಜಯದ ಹಿನ್ನೆಲೆಯಲ್ಲಿ, ತುಮಕೂರು ವಿಶ್ವವಿದ್ಯಾನಿಲಯದ ಮುಖ್ಯ ದ್ವಾರದ ಎದುರು ಬೃಹತ್ ವಿಜಯೋತ್ಸವವನ್ನು ಆಚರಿಸಲಾಯಿತು. ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಸಭೆಯನ್ನು ಉದ್ದೇಶಿಸಿ ಮಾತನಾಡಿದ AIMSS ಜಿಲ್ಲಾ ಕಾರ್ಯದರ್ಶಿ ರತ್ನಮ್ಮ, “ಈ ಹೋರಾಟವು ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರು, ಮಹಿಳೆಯರು ಹಾಗೂ ಶಿಕ್ಷಣಪ್ರೇಮಿಗಳ ಒಗ್ಗಟ್ಟಿನ ಹೋರಾಟಕ್ಕೆ ಸಿಕ್ಕ ಐತಿಹಾಸಿಕ ಜಯವಾಗಿದೆ. ಅನ್ಯಾಯದ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸಂಘಟಿತವಾಗಿ ಹೋರಾಡಿದಾಗ ಮಾತ್ರ ಅಧಿಕಾರಿಗಳು ಹಾಗೂ ಸರ್ಕಾರ ಜನರ ಧ್ವನಿಯನ್ನು ಆಲಿಸಲು ಸಾಧ್ಯ ಎಂಬುದನ್ನು ಈ ಹೋರಾಟ ಮತ್ತೊಮ್ಮೆ ಸಾಬೀತುಪಡಿಸಿದೆ. ಇಂತಹ ಪ್ರಜಾಸತ್ತಾತ್ಮಕ ಹೋರಾಟಗಳು ಮುಂದೆಯೂ ಮುಂದುವರೆಯಬೇಕು” ಎಂದರು. ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ AIDSO ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ,…
ಪಾವಗಡ: ರಾಜ್ಯ ಸರ್ಕಾರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲರ ಮಾಶಾಸನ ನೀಡಲು ಹಣವಿಲ್ಲದ ಸ್ಥಿತಿಗೆ ತಲುಪಿದ್ದು, ಸಂಪೂರ್ಣ ದಿವಾಳಿ ಹಂತದಲ್ಲಿದೆ ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಕಟುವಾಗಿ ಆರೋಪಿಸಿದ್ದಾರೆ. ಸೋಮವಾರ ಪಾವಗಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡಲಾಗುವ ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ಅಂಗವಿಕಲರ ಮಾಶಾಸನ ಸೇರಿದಂತೆ ವಿವಿಧ ಸಹಾಯಧನಗಳನ್ನು ಕಳೆದ ಆರು ತಿಂಗಳಿಂದ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 60 ಸಾವಿರ ಫಲಾನುಭವಿಗಳು ಸಂಕಷ್ಟದಲ್ಲಿ ಪಾವಗಡ ತಾಲೂಕ ಒಂದರಲ್ಲೇ ಸುಮಾರು 6೦,೦೦೦ ಫಲಾನುಭವಿಗಳು ಪ್ರತಿ ತಿಂಗಳು ಸರ್ಕಾರದಿಂದ ಬರುವ ಮಾಶಾಸನವನ್ನು ನೆಚ್ಚಿಕೊಂಡಿದ್ದಾರೆ. ಆದರೆ ಕಳೆದ ಆರು ತಿಂಗಳಿನಿಂದ ಅವರ ಖಾತೆಗೆ ಒಂದೇ ಒಂದು ರೂಪಾಯಿಯೂ ಜಮೆಯಾಗಿಲ್ಲ. ಇದರಿಂದ ಬಡವರು, ವೃದ್ಧರು ಹಾಗೂ ವಿಕಲಚೇತನರು ದೈನಂದಿನ ಜೀವನ ನಿರ್ವಹಣೆಗೆ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ ಎಂದು…
ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ ಹಂತದಲ್ಲಿ ಉತ್ತಮ ಸ್ನೇಹ, ಶಿಸ್ತು ಹಾಗೂ ಪರಿಶ್ರಮವನ್ನು ಮೈಗೂಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು ಎಂದು ಮಧುಗಿರಿ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಹೇಳಿದರು. ತಾಲೂಕಿನ ಲಿಂಗದಹಳ್ಳಿಯ ದಿ ನ್ಯೂ ಎಂಪ್ರೆಸ್ ಪಬ್ಲಿಕ್ ಪಿಯು ಕಾಲೇಜಿನಲ್ಲಿ ತುಮಕೂರು ಜಿಲ್ಲಾ ಅಬಕಾರಿ ಇಲಾಖೆ ಹಾಗೂ ಪಾವಗಡ ವಲಯದ ವತಿಯಿಂದ ಮಂಗಳವಾರ ಆಯೋಜಿಸಿದ್ದ “ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು” ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸದಾ ಉತ್ತಮ ಸಹವಾಸವನ್ನು ಬೆಳೆಸಿಕೊಂಡು ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಕ್ಷಣಿಕ ಸುಖಕ್ಕಾಗಿ ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗಬಾರದು. ಶಿಸ್ತು, ಜೀವನ ಮೌಲ್ಯ ಹಾಗೂ ಸ್ಪಷ್ಟ ಗುರಿಯುಳ್ಳ ಜೀವನ ನಡೆಸಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.…
ಸರಗೂರು: ಹೆಚ್ಚುತ್ತಿರುವ ಜನಸಂಖ್ಯೆಯಿಂದ ಉಂಟಾಗುವ ಸವಾಲುಗಳು, ಕುಟುಂಬ ಯೋಜನೆಯ ಮಹತ್ವ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ತಾಲ್ಲೂಕಿನ ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಜಾಗೃತಿ ಜಾಥಾವನ್ನು ಮಂಗಳವಾರ ಅರ್ಥಪೂರ್ಣವಾಗಿ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಮತ್ತು ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್, ಪ್ರತಿ ವರ್ಷ ಜುಲೈ 11ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತಿದ್ದು, 1987ರ ಜುಲೈ 11ರಂದು ವಿಶ್ವದ ಜನಸಂಖ್ಯೆ 5 ಬಿಲಿಯನ್ ತಲುಪಿದ ಹಿನ್ನೆಲೆಯಲ್ಲಿ ಈ ದಿನಕ್ಕೆ ವಿಶೇಷ ಮಹತ್ವ ಲಭಿಸಿತು ಎಂದು ತಿಳಿಸಿದರು. ನಂತರ 1989ರಲ್ಲಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (UNDP) ಈ ದಿನವನ್ನು ಅಧಿಕೃತವಾಗಿ ಜಾರಿಗೆ ತಂದಿತು. ಈ ಬಾರಿಯ ಕಾರ್ಯಕ್ರಮವು “ಯುವಜನರ ಆಸೆ ಮತ್ತು ಆಕಾಂಕ್ಷೆಗಳನ್ನು ಸಾಕಾರಗೊಳಿಸುವುದು” ಎಂಬ ಪ್ರಮುಖ ಘೋಷವಾಕ್ಯವನ್ನು ಹೊಂದಿದ್ದು, ಅತಿಯಾದ ಜನಸಂಖ್ಯೆಯಿಂದ ಉಂಟಾಗುವ ಬಡತನ, ನಿರುದ್ಯೋಗ ಮತ್ತು ಪರಿಸರ ನಾಶದಂತಹ ಗಂಭೀರ ಸವಾಲುಗಳ ಕುರಿತು ಜಾಗೃತಿ…
ಸರಗೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮೀನಾರಾಯಣ ನಾಗವಾರ ಸ್ಥಾಪಿತ ಬಣ) ವತಿಯಿಂದ ತಾಲೂಕಿನ ನುಗು ಜಲಾಶಯದ ಪ್ರವಾಸಿ ಮಂದಿರದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಘಟನೆಯ ಬಲವರ್ಧನೆ, ಖಾಲಿ ಇದ್ದ ತಾಲೂಕು ಪದಾಧಿಕಾರಿಗಳ ಆಯ್ಕೆ ಹಾಗೂ ತಾಲೂಕಿನ ವಿವಿಧ ಪ್ರಮುಖ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿ, ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ ಮಾಡಲಾಯಿತು. ಮೈಸೂರು ವಿಭಾಗದ ವಿಭಾಗೀಯ ಸಂಚಾಲಕರಾದ ರಾಜಶೇಖರ್ ಕೋಟೆ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಜರುಗಿತು. ಸಭೆಯಲ್ಲಿ ತಾಲೂಕು ಹಾಗೂ ಪಟ್ಟಣ ಮಟ್ಟದ ಸಂಘಟನಾ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ತಾಲೂಕು ಘಟಕ: ತಾಲೂಕು ಸಂಚಾಲಕರು: ಗೋಪಾಲಕೃಷ್ಣ ಬಿಡುಗಲು ತಾಲೂಕು ಆಂತರಿಕ ಶಿಸ್ತು ಮತ್ತು ತರಬೇತಿ ಸಂಚಾಲಕರು: ಸೋಮೇಶ್ ನೇರಳೆ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿಭಾಗದ ಸಂಚಾಲಕರು: ಮಲ್ಲಿಕಾರ್ಜುನ ಉಯ್ಯಂಬಳ್ಳಿ ತಾಲೂಕು ಸಾಂಸ್ಕೃತಿಕ ಸಂಘಟನಾ ಸಂಚಾಲಕರು: ಚೆನ್ನಯ್ಯ ಕಾಳೇಗೌಡನ ಹುಂಡಿ ಖಜಾಂಚಿ: ಶಾಂತಿಪುರ ಗೋಪಾಲ್ ಪಟ್ಟಣ ಪಂಚಾಯಿತಿ ಶಾಖೆ (ಟೌನ್…
ಸರಗೂರು: ಮಕ್ಕಳ ಕಲಿಕೆಗೆ ನೆರವಾಗುವ ಹಾಗೂ ಗ್ರಾಮೀಣ ಭಾಗದ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಅಗತ್ಯ ಶಿಕ್ಷಣ ಸಾಮಗ್ರಿಗಳನ್ನು ವಿತರಿಸುವ ಮೂಲಕ ಶಿಕ್ಷಣದ ಮೇಲಿನ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ ಎಂದು ಸಮಾಜ ಸೇವಕ ಯಶವಂತಪುರ ಶಿವಲಿಂಗಯ್ಯ ತಿಳಿಸಿದರು. ತಾಲ್ಲೂಕಿನ ಹಾದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ವತಿಯಿಂದ ನೋಟ್‌ಬುಕ್‌ಗಳು, ಅಗತ್ಯ ಕಲಿಕಾ ಸಾಮಗ್ರಿಗಳು ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ವಿವಿಧ ವಿನ್ಯಾಸದ ಸಮವಸ್ತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಯಶವಂತಪುರ ಶಿವಲಿಂಗಯ್ಯ, “ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೊದಲ ಆದ್ಯತೆ ದೊರಕಬೇಕು ಎಂಬ ಧ್ಯೇಯದೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ನಂಜನಗೂಡು ತಾಲ್ಲೂಕಿನ ಡೋರನಕಟ್ಟೆ ಕಾಲೋನಿ, ವೆಂಕಟಗಿರಿ ಕಾಲೋನಿ ಹಾಗೂ ಚಿಲಕಹಳ್ಳಿ ಕಾಲೋನಿಯ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದ್ದು, ಮಹಿಳೆಯರಿಗೂ ಹೊಸ ಸೀರೆಗಳನ್ನು ವಿತರಿಸಲಾಗಿದೆ” ಎಂದು ಮಾಹಿತಿ ನೀಡಿದರು. ಗುಣಮಟ್ಟದ ಶಿಕ್ಷಣದಿಂದ ಖಾಸಗಿ ಶಾಲಾ ವ್ಯಾಮೋಹಕ್ಕೆ ಬ್ರೇಕ್: ಕಾರ್ಯಕ್ರಮದಲ್ಲಿ ಅತಿಥಿಯಾಗಿ…
ಔರಾದ್ (ಬೀದರ್): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಔರಾದ್ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಔರಾದ್ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರಿಗೆ ಸಂಘದ ಪದಾಧಿಕಾರಿಗಳು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಆಗಸ್ಟ್ 29ರಂದು (2026) ಬೆಳಿಗ್ಗೆ 11:00 ಗಂಟೆಗೆ ನಡೆಯಲಿರುವ ಈ ವಿಶೇಷ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕರನ್ನು ಭೇಟಿ ಮಾಡಿದ ನಿಯೋಗವು ಆಹ್ವಾನ ಪತ್ರಿಕೆ ನೀಡಿ, ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಿದೆ. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಶಿವಾನಂದ ಮೊಕ್ತೆದಾರ್, ಪ್ರಧಾನ ಕಾರ್ಯದರ್ಶಿ ಅನೀಲಕುಮಾರ ದೇಶಮುಖ, ಮುಖಂಡರಾದ ಮಲ್ಲಪ್ಪ ಗೌಡ, ಚನ್ನಬಸವ ಮೊಕ್ತೆದಾರ್, ರತಿಕಾಂತ ಸೇರಿದಂತೆ ಸಂಘದ ಪ್ರಮುಖ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲೀಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…