Author: Ganesh Tumkuru

ವರದಿ: ಹಾದನೂರು ಚಂದ್ರ ಸರಗೂರು (ಮೈಸೂರು): ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಗಳಿಗೆ ಡಾಂಬರೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಗ್ರಾಮೀಣ ಭಾಗದ ಜನರಲ್ಲಿ ಹೊಸ ಭರವಸೆ ಮೂಡಿಸಿದೆ. ರಸ್ತೆ ಅಭಿವೃದ್ಧಿಯಿಂದ ಸುಗಮ ಸಂಚಾರ ಸಾಧ್ಯವಾಗಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿಗಳು: ದಶಕಗಳಿಂದ ಮಳೆಗಾಲದಲ್ಲಿ ಕೆಸರು ಹಾಗೂ ಬೇಸಿಗೆಯಲ್ಲಿ ಧೂಳಿನ ಸಮಸ್ಯೆಯಿಂದ ಕಂಗಾಲಾಗಿದ್ದ ಗ್ರಾಮಸ್ಥರಿಗೆ ಇದೀಗ ಗುಣಮಟ್ಟದ ರಸ್ತೆ ನಿರ್ಮಾಣವಾಗುತ್ತಿರುವುದು ನೆಮ್ಮದಿ ತಂದಿದೆ. • ಬಿದರಹಳ್ಳಿ–ಎನ್. ಬೇಗೂರು ಸಂಪರ್ಕ ರಸ್ತೆ: ಡಾಂಬರೀಕರಣಗೊಳ್ಳುತ್ತಿರುವುದರಿಂದ ಹಳ್ಳಿಗಳ ನಡುವಿನ ಸಂಪರ್ಕ ವ್ಯವಸ್ಥೆ ಸುಧಾರಿಸಿದೆ. • ಭೀಮನಕೊಲ್ಲಿ ದೇವಸ್ಥಾನ ರಸ್ತೆ: ರಸ್ತೆ ಅಭಿವೃದ್ಧಿಯಿಂದ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ತೆರಳಲು ಅನುಕೂಲವಾಗಿದೆ. • ಮಾದಾಪುರ – ಕೆ. ಬೆಳತ್ತೂರು ಹಾಗೂ ಲಂಕೆ ರಸ್ತೆ: ರಸ್ತೆಗಳು ಸುಸ್ಥಿತಿಗೆ ಬಂದಿದ್ದು, ನಿತ್ಯ ಸಂಚಾರ ನಡೆಸುವ ಸಾರ್ವಜನಿಕರಿಗೆ ಮಳೆಗಾಲದಲ್ಲೂ ಸುಗಮ ಸಂಚಾರ ಸಾಧ್ಯವಾಗಲಿದೆ. • ಮುತ್ತಿಗೆಹುಂಡಿ – ಚಿಕ್ಕಬರಗಿ ರಸ್ತೆ: ಕಾಮಗಾರಿ ಪ್ರಗತಿಯಲ್ಲಿದ್ದು,…

Read More

ಬೀದರ್: ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಗ್ರಾಮೀಣ ಭಾಗದ ಜನರು ನೆರೆಯ ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಉದ್ಯೋಗ ಅರಸಿ ವಲಸೆ ಹೋಗುತ್ತಿರುವುದನ್ನು ತಡೆಯಲು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಲಸೆ ತಡೆಗಟ್ಟುವ ನಿಟ್ಟಿನಲ್ಲಿ ‘ವಿಬಿ–ಜಿ ರಾಮ್ ಜಿ’ (VB–G RAM G) ಯೋಜನೆಯಡಿ ಸ್ಥಳೀಯವಾಗಿಯೇ ಉದ್ಯೋಗ ಒದಗಿಸುವಂತೆ ಅವರು ನಿರ್ದೇಶಿಸಿದ್ದಾರೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ (ಪಿಡಿಒ) ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ಮಳೆ ಕೊರತೆಯಿಂದ ಬತ್ತಿಹೋಗಿರುವ ಕೊಳವೆ ಬಾವಿಗಳ ಜಲ ಮರುಪೂರಣ ಕಾರ್ಯ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಯೋಜನೆಯಡಿ ಕೈಗೆತ್ತಿಕೊಂಡು ಉದ್ಯೋಗ ನೀಡುವಂತೆ ತಿಳಿಸಿದರು. ಆರ್ಥಿಕ ಅನುದಾನ ಸುಲಭ ಲಭ್ಯತೆ: ಜುಲೈ 1ರಿಂದ ಜಾರಿಗೆ ಬಂದಿರುವ ವಿಬಿ–ಜಿ ರಾಮ್ ಜಿ ಯೋಜನೆಗೆ 60:40ರ ಅನುಪಾತದಲ್ಲಿ ಅನುದಾನ ಲಭ್ಯವಿದೆ. ಮೊದಲ ತ್ರೈಮಾಸಿಕಕ್ಕಾಗಿ ಕೇಂದ್ರ ಸರ್ಕಾರ ₹1,700 ಕೋಟಿ ಹಾಗೂ ರಾಜ್ಯ ಸರ್ಕಾರ…

Read More

ಸರಗೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಚಿಕ್ಕದೇವಮ್ಮನ ಸನ್ನಿಧಿ ಹಾಲುಗಡ ಸಮೀಪದ ಗಣೇಶನ ಗುಡಿ ವೃತ್ತದಲ್ಲಿ ನೂತನವಾಗಿ ಆರಂಭಿಸಲಾಗಿರುವ ‘ಎಂಕೆಪಿ ಬಾರ್’ ಅನ್ನು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ನಾಯಕ ಸಮಾಜ, ಇಟ್ನ ಗ್ರಾಮಸ್ಥರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ತಾಲೂಕು ಆಡಳಿತದ ವಿರುದ್ಧ ತಹಶೀಲ್ದಾರ್ ಕಚೇರಿ ಮುಂಭಾಗ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ಪಟ್ಟಣದ ವರ್ತಕರು ತಮ್ಮ ಅಂಗಡಿ–ಮುಗ್ಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಸಾಥ್ ನೀಡಿದರು. ಸಂತೆಮಾಸ್ತಮ್ಮ ದೇವಸ್ಥಾನದ ಮುಂಭಾಗದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಅಲ್ಲಿಂದ ಒಂದನೇ ಮುಖ್ಯ ರಸ್ತೆಯ ಮೂಲಕ ಮೆರವಣಿಗೆ ನಡೆಸಿ ಬಸ್ ನಿಲ್ದಾಣದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ತಾಲೂಕು ಆಡಳಿತ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ವಿವಿಧ ಘೋಷಣೆಗಳನ್ನು ಕೂಗಿದ ನಂತರ ತಹಸೀಲ್ದಾರ್ ಕಚೇರಿ ಮುಂಭಾಗ ಧರಣಿ ಕುಳಿತರು. ‘ಸೇವ್ ಕಬಿನಿ’ ಸಂಘಟನೆಯ ಸದಸ್ಯ ಹಾಗೂ ವಕೀಲ ರವಿಕುಮಾರ್ ಮಾತನಾಡಿ, “ಚಿಕ್ಕದೇವಮ್ಮನ ಹಾಲುಗಡ…

Read More

ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಗೌರವಾನ್ವಿತ ‘ಕನ್ನಡ ಜಂಗಮ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರು ಭಾಜನರಾಗಿದ್ದಾರೆ. ನಾಡೋಜ ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರು ಅವರ ಅಮೃತ ಮಹೋತ್ಸವದ ಸ್ಮರಣಾರ್ಥವಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜೂನ್ 29ರಂದು ಔರಾದ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ದೇಶಮುಖ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲೀಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2 ಕೋಟಿ ರೂಪಾಯಿಯಂತೆ ಒಟ್ಟು 800 ಕೋಟಿ ರೂಪಾಯಿ ಲಂಚ ಪಡೆಯಲಾಗಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್‌. ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಹೊರಬರಲು ಪ್ರಕರಣವನ್ನು ಸಿಬಿಐ (CBI) ತನಿಖೆಗೆ ಒಪ್ಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಕಾಲೇಜುಗಳಲ್ಲಿ ಸಾಧಾರಣ ವಿದ್ಯಾರ್ಥಿಗಳಾಗಿದ್ದವರು ಹಣ ನೀಡಿದ್ದರಿಂದ KPSC ಪರೀಕ್ಷೆಯಲ್ಲಿ 400 ಅಂಕ ಪಡೆದಿದ್ದಾರೆ. ಅದೇ ಪ್ರತಿಭಾವಂತ/ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ (350 ರವರೆಗೆ) ನೀಡಲಾಗಿದೆ. ಪಶುವೈದ್ಯಾಧಿಕಾರಿ ಹುದ್ದೆಗೆ 1 ರಿಂದ 2 ಕೋಟಿ ರೂ. ವಸೂಲಿ ಮಾಡಿರುವ ಬಗ್ಗೆ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಇದರಲ್ಲಿ ಐಎಎಸ್‌ (IAS) ಅಧಿಕಾರಿಯೊಬ್ಬರ ಹೆಸರು ಪ್ರಸ್ತಾಪವಾಗಿದ್ದು, ಸರ್ಕಾರದ ಸಚಿವರಿಗೂ ಹಣ ತಲುಪಿದೆಯೇ ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ. “ಲಂಚ ಪಡೆದವರೇ ತನಿಖೆ…

Read More

ಹಾವೇರಿ: ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಸಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ಕೊಲೆ ಬೆದರಿಕೆಯೊಡ್ಡಿದ ಗಂಭೀರ ಆರೋಪದಡಿ ದಂಪತಿ ವಿರುದ್ಧ ಹಾವೇರಿ ಸಿಇಎನ್ (CEN) ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಖ್ಯ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಹಾವೇರಿಯ ಬಸವೇಶ್ವರ ನಗರದ ನಿವಾಸಿ ಸಚಿನ್ ದಾನಪ್ಪನವರ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಸುಪ್ರಿಯಾ ಸಚಿನ್ ದಾನಪ್ಪನವರ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಜುಲೈ 12ರ ರಾತ್ರಿ ಸಚಿನ್ ಸಂತ್ರಸ್ತೆ ಮಹಿಳೆಗೆ ಕರೆ ಮಾಡಿ, ತನ್ನ ಲೈಂಗಿಕ ಬೇಡಿಕೆಯನ್ನು ಪೂರೈಸದಿದ್ದರೆ ಆಕೆಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಶ್ಲೀಲ ಫೋಟೋ ರವಾನೆ: ದೂರುದಾರಳ ಪತಿಗೆ ಫೋನ್ ಪೇ (PhonePe) ಮೂಲಕ ಅಶ್ಲೀಲ ಫೋಟೋ ಕಳುಹಿಸಿ ವಿಕೃತಿ ಮೆರೆದಿದ್ದ ಎಂಬ ಆರೋಪವೂ ಕೇಳಿಬಂದಿದೆ. ಮಹಿಳೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಲ್ಲದೆ, ಆಕೆಯ ಕುಟುಂಬದ ಮೇಲೆ ಕೊಲೆ ಬೆದರಿಕೆ…

Read More

ಬೆಂಗಳೂರು: ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದಕ್ಕೆ ಸಂಬಂಧಿಸಿದಂತೆ, ಅವರನ್ನು ಇನ್ನೂ ಐದು ವರ್ಷಗಳ ಕಾಲ ಚುನಾವಣಾ ಕಣದಲ್ಲಿ ಉಳಿಯುವಂತೆ ಮನವೊಲಿಸಲು ಪಕ್ಷದ ನಾಯಕರು ಪ್ರಯತ್ನಿಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರು “ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಹೇಳಿದ್ದಾರೆಯೇ ಹೊರತು, ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಹೇಳಿಲ್ಲ. ಈ ಅವಧಿ ಮುಗಿಯುವ ಹೊತ್ತಿಗೆ ತಮಗೆ 82 ವರ್ಷ ವಯಸ್ಸಾಗುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ, ಪಕ್ಷಕ್ಕಾಗಿ ದುಡಿಯುವುದನ್ನು ಮತ್ತು ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವುದನ್ನು ಮುಂದುವರಿಸುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆದರೆ, ಅವರನ್ನು ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ನಾವೆಲ್ಲರೂ ಮನವೊಲಿಸುತ್ತೇವೆ ಎಂದು ಶಿವಲಿಂಗೇಗೌಡ ಮಾಧ್ಯಮಗಳಿಗೆ ತಿಳಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೋರಿದರೆ ಸಿದ್ದರಾಮಯ್ಯ ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. — ಅಶೋಕ್ ಪಟ್ಟಣ್, ಶಾಸಕರು ಸಿದ್ದರಾಮಯ್ಯ ಅವರು ಇನ್ನು…

Read More

ಸರಗೂರು:  ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆಯ ವಿವಿಧ ಜಿಲ್ಲಾ ಹಾಗೂ ರಾಜ್ಯ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ನೇಮಕಾತಿಯನ್ನು ಪ್ರಕಟಿಸಲಾಗಿದ್ದು, ಸಂಘಟನೆಯ ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರಾಜ್ಯಾಧ್ಯಕ್ಷ ಸುರೇಶ್ ಕುಮಾರಬೀಡು ಹಾಗೂ ಕಾರ್ಯಾಧ್ಯಕ್ಷ ದ್ಯಾವಪ್ಪ ನಾಯಕ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಮಹತ್ವದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ರಾಜ್ಯ ಉಪಾಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡ ಹಿನ್ನೆಲೆಯಲ್ಲಿ ಮಾತನಾಡಿದ ಎಂ. ದಾಸಪ್ಪ ಆಗತ್ತೂರು, “ನನ್ನ ಮೇಲೆ ಭರವಸೆಯಿಟ್ಟು ಈ ಪ್ರಮುಖ ಜವಾಬ್ದಾರಿಯನ್ನು ಹಸ್ತಾಂತರಿಸಿದ ರಾಜ್ಯಾಧ್ಯಕ್ಷ ಸುರೇಶ್ ಕುಮಾರಬೀಡು, ಕಾರ್ಯಾಧ್ಯಕ್ಷ ದ್ಯಾವಪ್ಪ ನಾಯಕ ಹಾಗೂ ರಾಜ್ಯ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು” ಎಂದು ತಿಳಿಸಿದರು. ಮುಂದುವರಿದು ಮಾತನಾಡಿದ ಅವರು, ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸಮಾಜದ ಸರ್ವಾಂಗೀಣ ಹಿತರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು: ನಗರದ ಹಾಸ್ಟೆಲ್, ಮೈದಾನ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ನೀಟ್ ಹಗರಹಣ ವಿರುದ್ಧ ಸುದೀರ್ಘಕಾಲ ನಡೆದ, ವಿದ್ಯಾರ್ಥಿ ಹೋರಾಟದ ಐತಿಹಾಸಿಕ ವಿಜಯವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಜನರು ನಡೆಸಿದ ಬೃಹತ್ ಹೋರಾಟದ ಫಲವಾಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿ ಹಾಗೂ ಹೊಣೆಗಾರಿಕೆಯನ್ನು ಆಗ್ರಹಿಸಿದ್ದರು! ಈ ಐತಿಹಾಸಿಕ ವಿಜಯವನ್ನು ದೇಶದಾದ್ಯಂತ ವಿದ್ಯಾರ್ಥಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ, ಸಚಿವರ ರಾಜೀನಾಮೆಯ ಮಾರನೇ ದಿನವೇ ಕೇಂದ್ರ ಸರ್ಕಾರವು ಸುಧಾರಣೆಯ ಹೆಸರಿನಲ್ಲಿ ಮತ್ತೊಂದು ಹೊಸ ತಂತ್ರವನ್ನು ಹೆಣೆದಿದೆ. ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ ತರಲು ಕೇಂದ್ರ ಸರ್ಕಾರವು ಟಾಸ್ಕ್ ಫೋರ್ಸ್ ಒಂದನ್ನು ರಚಿಸಿದ್ದು, ದಕ್ಷಿಣ ಭಾರತದ ಕಾರ್ಪೊರೇಟ್ ದೈತ್ಯ ನಂದನ್ ನೀಲಖೇಣಿ ಅವರನ್ನು ಇದರ ಅಧ್ಯಕ್ಷರನ್ನಾಗಿ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರವು ವಿದ್ಯಾರ್ಥಿ ಸಮುದಾಯಕ್ಕೆ ಮತ್ತೆ…

Read More

ಔರಾದ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟವನ್ನು ತಕ್ಷಣವೇ ಬಂದ್ ಮಾಡಬೇಕು ಮತ್ತು ಇದರಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಭೀಮ ಆರ್ಮಿ ಭಾರತ ಏಕತಾ ಮಿಷನ್ ತಾಲೂಕು ಅಧ್ಯಕ್ಷ ಗೌತಮ್ ಪಿ. ಮೇತ್ರೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ರಾಮೀಣ ಭಾಗಗಳಲ್ಲಿ ಅಕ್ರಮ ಸಾರಾಯಿ ಹಾವಳಿ ಮಿತಿಮೀರಿದ್ದು, ಸಾರ್ವಜನಿಕ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಅಕ್ರಮ ಮದ್ಯದ ಹಾವಳಿಯಿಂದಾಗಿ ಹದಿಹರೆಯದ ಯುವಕರು ಮದ್ಯವ್ಯಸನಕ್ಕೆ ತಳ್ಳಲ್ಪಡುತ್ತಿದ್ದು, ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ.  ಸಾಮಾಜಿಕ ಹಾಗೂ ಆರ್ಥಿಕ ಸಂಕಷ್ಟ: ಅಕ್ರಮ ಮದ್ಯ ಮಾರಾಟದಿಂದ ಗ್ರಾಮಗಳಲ್ಲಿ ಶಾಂತಿ-ಸುವ್ಯವಸ್ಥೆ ಹದಗೆಡುತ್ತಿದೆ. ಬಡ ಕುಟುಂಬಗಳು ಸಾಲದ ಸುಳಿಗೆ ಸಿಲುಕಿ ಆರ್ಥಿಕವಾಗಿ ನಲುಗುತ್ತಿದ್ದು, ಕೆಲ ಕುಟುಂಬಗಳು ಜೀವನೋಪಾಯಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. “ಮಕ್ಕಳನ್ನು ಕಳೆದುಕೊಂಡ ಪೋಷಕರ ನೋವನ್ನು ಕೇಳುವವರೇ ಇಲ್ಲದಂತಾಗಿದೆ. ಅಕ್ರಮ ಮದ್ಯ ಮಾರಾಟಗಾರರ…

Read More