Author: Ganesh Tumkuru

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL) ಪಡಿತರ ಚೀಟಿ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯದ ಮಿತಿಯನ್ನು ಪ್ರಸ್ತುತ ಇರುವ ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಹಂಚಿಕೊಂಡರು. ಆದಾಯ ಮಿತಿ ಹೆಚ್ಚಳ: ಆಡಳಿತಾತ್ಮಕ ಸುಧಾರಣಾ ಆಯೋಗದ ಶಿಫಾರಸಿನಂತೆ ಬಿಪಿಎಲ್ ಕಾರ್ಡ್‌ಗೆ ಅರ್ಹತೆ ಪಡೆಯುವ ವಾರ್ಷಿಕ ಆದಾಯದ ಮಿತಿಯನ್ನು ₹3 ಲಕ್ಷಕ್ಕೆ ಹೆಚ್ಚಿಸುವ ಪ್ರಕ್ರಿಯೆ ನಡೆಯುತ್ತಿದೆ. ಯಾವ ಕಾರ್ಡ್‌ಗಳೂ ರದ್ದಾಗಲ್ಲ: ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಪಡಿತರ ಚೀಟಿಗಳ ಪರಿಶೀಲನೆ ನಡೆಯುತ್ತಿದ್ದು, ಅರ್ಹರ ಕಾರ್ಡ್ ರದ್ದುಪಡಿಸುವುದಿಲ್ಲ. ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ಎಪಿಎಲ್ (APL) ವರ್ಗಕ್ಕೆ ಬದಲಾಯಿಸಲಾಗುತ್ತಿದೆ ಎಂದರು. ರಾಜ್ಯದ ಸುಮಾರು 4.42 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ 10…

Read More

ಬೆಂಗಳೂರು: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಬರ ನಿರ್ವಹಣೆ ವೈಫಲ್ಯ, ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ, ಪಡಿತರ ಅಕ್ಕಿ ಕಳ್ಳಸಾಗಣೆ ಹಾಗೂ ಬೆಲೆ ಏರಿಕೆಯಂತಹ ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಜಂಟಿಯಾಗಿ ತೊಳೆಯಲು ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ಕರೆಯಲಾಗುವುದು ಎಂದರು. ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಕಾರಣಕ್ಕೆ ಈವರೆಗೆ ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಸಾಧ್ಯವಾಗಿರಲಿಲ್ಲ. ಶೀಘ್ರದಲ್ಲೇ ಅವರೊಂದಿಗೆ ಚರ್ಚಿಸಿ, ಅಧಿವೇಶನದಲ್ಲಿ ಜಂಟಿಯಾಗಿ ಹೋರಾಟ ನಡೆಸಲು ತಂತ್ರ ರೂಪಿಸಲಾಗುವುದು ಎಂದರು. ಕೆಪಿಎಸ್‌ ಸಿ ಅಕ್ರಮ ಆರೋಪ: ಕೆಪಿಎಸ್‌ ಸಿ ನಡೆಸಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಆಯೋಗದಲ್ಲಿ ಸುಧಾರಣೆ ತರುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಯಾವುದೇ ಕೆಲಸವಾಗಿಲ್ಲ ಎಂದು ವಿಜಯೇಂದ್ರ ಕಿಡಿಕಾರಿದರು. ಕಾಂಗ್ರೆಸ್…

Read More

ತುಮಕೂರು: ನಗರದ ಬೆಳಗುಂಬ ಬಳಿ ಭಾನುವಾರ ರಾತ್ರಿ ನಡುರಸ್ತೆಯಲ್ಲೇ ರೌಡಿಶೀಟರ್‌ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಳಗುಂಬ ನಿವಾಸಿಯಾಗಿದ್ದ ಮಲ್ಲ ಅಲಿಯಾಸ್‌ ವೀರಣ್ಣ (42) ಕೊಲೆಯಾದ ದುರದೃಷ್ಟಕರ. ಈತ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ರಾತ್ರಿ ಸುಮಾರು 8:30ರ ವೇಳೆಗೆ ಬೆಳಗುಂಬ ಸಮೀಪದ ಗರುಡ ಕೆಫೆ ಮುಂಭಾಗ ನಾಲ್ಕೈದು ಮಂದಿ ದುಷ್ಕರ್ಮಿಗಳ ಗ್ಯಾಂಗ್ ಮಲ್ಲನ ಮೇಲೆ ಏಕಾಏಕಿ ಅಟ್ಯಾಕ್ ಮಾಡಿದೆ. ಆತನ ಮನೆ ಸಮೀಪವೇ ವಿಕೃತವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ, ಗುರುತೇ ಸಿಗದಂತೆ ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆಯಾದ ಮಲ್ಲ 2008ರಲ್ಲಿ ವಡ್ಡರಹಳ್ಳಿ ಕ್ರಾಸ್ ಬಳಿ ನಡೆದಿದ್ದ ಗಡ್ಡ ರಾಜು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯಾಗಿದ್ದು, ಆ ಬಳಿಕ ಆತನ ವಿರುದ್ಧ ರೌಡಿಪಟ್ಟಿ ತೆರೆಯಲಾಗಿತ್ತು. ಹಳೆಯ ವೈಷಮ್ಯದ ಹಿನ್ನೆಲೆಯಲ್ಲೇ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ…

Read More