Subscribe to Updates
Get the latest creative news from FooBar about art, design and business.
- ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
- ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ : ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
- ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ
- ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
- ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
- ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
- ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ?
- ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
Author: Ganesh Tumkuru
ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 17ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ದಸರಾ ವೇದಿಕೆಯಲ್ಲಿ ದಸರಾ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಈ ಕವಿಗೋಷ್ಠಿಗಾಗಿ ಜಿಲ್ಲೆಯ ಆಸಕ್ತ ಕವಿಗಳಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮವನ್ನು ಹಿರಿಯ ಹಾಗೂ ಯುವ ವಿಭಾಗಗಳೆರಡರಲ್ಲೂ ನಡೆಸಲಾಗುತ್ತಿದೆ. ಕವಿಗೋಷ್ಠಿ ವಿಭಾಗಗಳು ಹಾಗೂ ವಯೋಮಿತಿ: ಹಿರಿಯರ ವಿಭಾಗ: 35 ವರ್ಷ ಮೇಲ್ಪಟ್ಟ ಕವಿಗಳಿಗೆ. ಯುವ ವಿಭಾಗ: 18 ರಿಂದ 35 ವರ್ಷದೊಳಗಿನ ಯುವ ಕವಿಗಳಿಗೆ. ಅರ್ಜಿ ಸಲ್ಲಿಕೆಯ ವಿವರಗಳು: ಆಸಕ್ತ ಜಿಲ್ಲೆಯ ಕವಿಗಳು ತಮ್ಮ ಸ್ವರಚಿತ 2 ಉತ್ತಮ ಕವನಗಳನ್ನು ಸ್ವ-ಅರ್ಜಿಯೊಂದಿಗೆ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 29 ಅರ್ಜಿ ಸಲ್ಲಿಸಬೇಕಾದ ವಿಳಾಸ: ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭವನ, ಅಮಾನಿಕೆರೆ ರಸ್ತೆ, ತುಮಕೂರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0816-2275204 ಸಾಹಿತ್ಯಾಸಕ್ತರು ಈ ಅವಕಾಶವನ್ನು ಬಳಸಿಕೊಳ್ಳಬೇಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಈಶ್ವರ…
ತುಮಕೂರು: ರಾಜ್ಯ ಮಟ್ಟದಲ್ಲಿ ಆಚರಿಸಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪರಿಶಿಷ್ಟ ಪಂಗಡದ (ST) ಸಮುದಾಯದ ಏಳಿಗೆಗಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ನೀಡಲಾಗುವ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಾಧಕರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ದೊರೆಯುವ ಸ್ಥಳ: ಸಹಾಯಕ ನಿರ್ದೇಶಕರು (ಗ್ರೇಡ್-1) ಅವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಪಕ್ಕ, ಬಿ.ಎಚ್. ರಸ್ತೆ, ತುಮಕೂರು ತಾಲ್ಲೂಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 3 ಅರ್ಜಿ ಸಲ್ಲಿಸಬೇಕಾದ ವಿಳಾಸ: ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ತುಮಕೂರು ತಾಲ್ಲೂಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ: 0816-2006305 ಆಸಕ್ತ ಹಾಗೂ ಅರ್ಹ ಸಾಧಕರು ನಿಗದಿತ ಕೊನೆಯ ದಿನಾಂಕದೊಳಗಾಗಿ ಸಂಪೂರ್ಣ ಮಾಹಿತಿಯೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವಂತೆ ಇಲಾಖೆ ಕೋರಿದೆ. ನಮ್ಮತುಮಕೂರಿನ…
ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
ಸಿರಾ / ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬುಕ್ಕಾಪಟ್ಟಣ ಗ್ರಾಮದ ಶ್ರೀ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ‘ಪ್ರಜಾಸೇವಾ ಆಂದೋಲನ’ ಸಭೆಯಲ್ಲಿ ಬ್ಯಾನರ್ ವಿವಾದ ಉಂಟಾಗಿದ್ದು, ತಾಲೂಕು ದಂಡಾಧಿಕಾರಿ (ತಹಶೀಲ್ದಾರ್) ಆನಂದ್ ಕುಮಾರ್ ವಿರುದ್ಧ ವಿಧಾನ ಪರಿಷತ್ ಸದಸ್ಯ (ಎಂಎಲ್ಸಿ) ರಾಜೇಂದ್ರ ರಾಜಣ್ಣ ಅವರ ಅಭಿಮಾನಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಶಾಸಕ ಸಿ.ಬಿ. ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದ್ದ ವೇಳೆ ದಿಢೀರ್ ವೇದಿಕೆಗೆ ಆಗಮಿಸಿದ ರಾಜೇಂದ್ರ ರಾಜಣ್ಣ ಅವರ ಅಭಿಮಾನಿಗಳು, ಕಾರ್ಯಕ್ರಮದ ಬ್ಯಾನರ್ ಗಳಲ್ಲಿ ಇತರ ಎಲ್ಲಾ ಜನಪ್ರತಿನಿಧಿಗಳ ಭಾವಚಿತ್ರವನ್ನು ಮುದ್ರಿಸಿ, ಎಂಎಲ್ಸಿ ರಾಜೇಂದ್ರ ಅವರ ಭಾವಚಿತ್ರವನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸಭೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸಿರಾ ತಾಲೂಕು ದಂಡಾಧಿಕಾರಿ ಆನಂದ್ ಕುಮಾರ್ ಅವರ ಕಾರ್ಯವೈಖರಿ ಹಾಗೂ ಕರ್ತವ್ಯದ ಬಗ್ಗೆ ಇತ್ತೀಚೆಗೆ ಜನಸಾಮಾನ್ಯರಲ್ಲಿ ಬೇಸರ ಮೂಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಒಂದಲ್ಲಾ ಒಂದು ಯಡವಟ್ಟುಗಳನ್ನು ಮಾಡುತ್ತಾ ಸಾರ್ವಜನಿಕರ…
ಬೀದರ್: ತಾಲ್ಲೂಕಿನ ಜನವಾಡಾ ಬಳಿ ಇರುವ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯ (ಎನ್‌ಎಸ್‌ಎಸ್‌ಕೆ) ಬಡ್ಡಿ ಮನ್ನಾ ಮಾಡಿ, ಮೂಲ ಸಾಲದ ಮೊತ್ತವನ್ನು ಮರುಪಾವತಿಸಲು ಏಕಕಾಲಿಕ ಸಾಲ ತಿರುವಳಿ (OTS) ಯೋಜನೆಯಡಿ ಅವಕಾಶ ಕಲ್ಪಿಸುವಂತೆ ಕಾರ್ಖಾನೆಯ ಅಧ್ಯಕ್ಷ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಸಹಕಾರ ಸಂಘಗಳ ಜಂಟಿ ನಿಬಂಧಕರಿಗೆ ಮನವಿ ಸಲ್ಲಿಸಿದ್ದಾರೆ. ಅಪೆಕ್ಸ್ ಬ್ಯಾಂಕಿನ ಸುಸ್ತಿ ಸಾಲದ ಬಡ್ಡಿ ದರ ಪುನರ್ ನಿಗದಿ ಯೋಜನೆಯಡಿ ಬೀದರ್ ತಾಲ್ಲೂಕಿನ ಬರೂರು ಗ್ರಾಮದ ಭವಾನಿ ಸಕ್ಕರೆ ಕಾರ್ಖಾನೆಯ ಬಡ್ಡಿ ಮನ್ನಾ ಮಾಡಿರುವುದನ್ನು ಅವರು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಇದೇ ಮಾದರಿಯಲ್ಲಿ ನಾರಂಜಾ ಕಾರ್ಖಾನೆಯನ್ನೂ ಪರಿಗಣಿಸಿ, ಸಂಪೂರ್ಣ ಬಡ್ಡಿ ಮನ್ನಾ ಮಾಡಿ ಸಾಲದ ಹೊರೆಯಿಂದ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೆಟ್ಟ ಸಾಲ, ಅನುಮಾನಾಸ್ಪದ ಸಾಲ ಹಾಗೂ ಕಾನೂನು ತೊಡಕುಗಳಿಂದ ವಸೂಲಾಗದ ಪ್ರಕರಣಗಳಿಗೂ ಈ ಯೋಜನೆ ಅನ್ವಯವಾಗುವುದರಿಂದ, ಒಟಿಎಸ್ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಾರ್ಖಾನೆ ಸಂಪೂರ್ಣ ಸಿದ್ಧವಿದೆ ಎಂದು ತಿಳಿಸಿದ್ದಾರೆ. ಆರಂಭಿಕ ಹಂತದಲ್ಲಿ ಡಿಸಿಸಿ ಬ್ಯಾಂಕಿನಿಂದ ಪಡೆದಿದ್ದ…
ಬೀದರ್: ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಗಡಿ ಜಿಲ್ಲೆ ಬೀದರ್ ನ ಎಲ್ಲ ತಾಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಕಲಬುರಗಿ ನಗರದಲ್ಲಿ ನಡೆದ ಈ ಭೇಟಿಯ ವೇಳೆ, ಜಿಲ್ಲೆಯ ರೈತರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ನಿಯೋಗದ ಮುಖಂಡರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದು, ಬಿತ್ತನೆ ಮಾಡಿದ್ದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಹಾಗೂ ಮಳೆಯಿಲ್ಲದೆ ಬೆಳೆಗಳು ಕಣ್ಣೆದುರೇ ಒಣಗಿ ಹೋಗುತ್ತಿವೆ ಎಂದು ವಿವರಿಸಿದರು. ಅಲ್ಲದೆ, ಕೃಷಿಗಾಗಿ ಸಾಲಸೋಲ ಮಾಡಿದ್ದ ರೈತರು ಬೆಳೆ ನಷ್ಟದಿಂದಾಗಿ ಆರ್ಥಿಕವಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಉಳಿದ ಎಲ್ಲ ತಾಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು ಹಾಗೂ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು…
ಬೀದರ್: ಜಿಲ್ಲೆಯ ಔರಾದ್ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಶಾಸಕ ಪ್ರಭು ಬಿ. ಚವ್ಹಾಣ್ ನೇತೃತ್ವದಲ್ಲಿ ಬಿಜೆಪಿ ಮಂಡಲ ವತಿಯಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ವೃತ್ತಗಳ ಮೂಲಕ ಸಾಗಿ ಎಪಿಎಂಸಿ ವೃತ್ತದಲ್ಲಿ ಸಮಾವೇಶಗೊಂಡಿತು. ಪ್ರತಿಭಟನೆಯಲ್ಲಿ ಎತ್ತಿನ ಬಂಡಿಯಲ್ಲಿ ತಲೆಯ ಮೇಲೆ ನಾಶವಾದ ಬೆಳೆ ಹೊತ್ತು ವಿನೂತನವಾಗಿ ಭಾಗವಹಿಸಿದ್ದ ಶಾಸಕ ಪ್ರಭು ಚವ್ಹಾಣ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಸೇರಿದಂತೆ ಮುಖಂಡರು ಒಣಗಿದ ಸೋಯಾಬೀನ್, ಉದ್ದು ಮತ್ತು ಹೆಸರು ಕಾಳುಗಳನ್ನು ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಔರಾದ್ ತಾಲ್ಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ನಾಶವಾದ ಬೆಳೆಗಳಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು, ರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಬೇಕು ಹಾಗೂ ಕಮಲನಗರ ತಾಲ್ಲೂಕಿನೊಂದಿಗೆ ಔರಾದ್ ತಾಲ್ಲೂಕಿನ…
ತಿಪಟೂರು: ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ‘ಫ್ರೆಶರ್ಸ್ ಫಿಯೆಸ್ತ 2026’ ಅತ್ಯಂತ ಸಡಗರದಿಂದ ಜರುಗಿತು. ಕಾಲೇಜಿನ ಗ್ರಂಥಾಲಯದಲ್ಲಿರುವ ಸುಮಾರು 50,000 ಪುಸ್ತಕಗಳ ಜ್ಞಾನ ಸಂಪನ್ಮೂಲವನ್ನು ಮತ್ತು ಬೋಧಕ ವರ್ಗದ ಜ್ಞಾನವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಪದವಿ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧತೆ ನಡೆಸುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಶಿಕುಮಾರ್ ಎಚ್.ಸಿ. ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಬಿಎ ಕೋರ್ಸ್ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಭವಿಷ್ಯದ ಉತ್ತಮ ರೂಪಣೆಗಾಗಿ ಕಾಲೇಜಿನ ಸಂಪೂರ್ಣ ಸಂಪನ್ಮೂಲಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಡಾ. ರೇಣುಕಾ, ವಿದ್ಯಾರ್ಥಿಗಳು ಉದ್ಯೋಗಕ್ಕೆ ಸಿದ್ಧರಾಗುವುದರ ಜೊತೆಗೆ ಇಂಗ್ಲಿಷ್ ಕಲಿಕೆಗೆ ಸಮಾನ ಆದ್ಯತೆ ನೀಡಬೇಕು ಎಂದರು. ಹಿರಿಯ ವಿದ್ಯಾರ್ಥಿಗಳು ಕಿರಿಯರನ್ನು ಆತ್ಮೀಯವಾಗಿ ಬರಮಾಡಿಕೊಂಡಿರುವುದು ಶ್ಲಾಘನೀಯ ಎಂದು ತಿಳಿಸಿದ…
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಗ್ರಾಮದ ಪೇಟೆ ಬೀದಿಯಲ್ಲಿ ‘ಶ್ರೀ ವಿದ್ಯಾ ಗಣಪತಿ ಗೆಳೆಯರ ಬಳಗ’ದ ವತಿಯಿಂದ ಆಯೋಜಿಸಲಾಗಿದ್ದ 29ನೇ ವರ್ಷದ ಗಣೇಶೋತ್ಸವವು ಅತ್ಯಂತ ವಿಶಿಷ್ಟ ಹಾಗೂ ಅದ್ದೂರಿಯಾಗಿ ಸಂಪನ್ನಗೊಂಡಿದೆ. ಸತತ 29 ವರ್ಷಗಳಿಂದ ಪೇಟೆ ಬೀದಿಯ ಯುವಕರು ವಿಶಿಷ್ಟವಾಗಿ ಗಣಪತಿಯನ್ನು ಪ್ರತಿಷ್ಠಾಪಿಸುತ್ತಾ ಬಂದಿದ್ದಾರೆ. ಈ ಬಾರಿ ರಾಜ್ಯದಲ್ಲಿ ತಲೆದೋರಿರುವ ಬರಗಾಲದ ಪರಿಸ್ಥಿತಿಯನ್ನು ಬಿಂಬಿಸುವಂತೆ ‘ಹೊಲ ಹೂಳುವ ಗಣಪತಿ’ ಮಾದರಿಯಲ್ಲಿ ಗಣೇಶನನ್ನು ಕೂರಿಸಿದ್ದು ಈ ಬಾರಿಯ ವಿಶೇಷ ಆಕರ್ಷಣೆಯಾಗಿತ್ತು. ಇದರೊಂದಿಗೆ ಜಪ್ಪರದ ಮನೆ, ದೀಪದ ಲಾಟಿನ್, ಒಲೆ, ನೇಗಿಲು, ಹಸು, ಬಾವಿ ಮತ್ತು ಜಪ್ಪರದ ಕೆಳಗೆ ಬೆಳೆದ ರಾಗಿ ಪೈರು ಸೇರಿದಂತೆ ಅಪ್ಪಟ ಹಳ್ಳಿಯ ಸೊಗಡನ್ನು ಕಣ್ಣಿಗೆ ಕಟ್ಟುವಂತೆ ಪ್ರದರ್ಶಿಸಲಾಯಿತು. ವಿಶೇಷವೆಂದರೆ, ಗ್ರಾಮದಲ್ಲಿ ಯಾರ ಹತ್ತಿರವೂ ಒಂದು ರೂಪಾಯಿಯನ್ನೂ ದೇಣಿಗೆ ಪಡೆಯದೆ, ಯುವಕರೇ ಸ್ವಂತ ಹಣದಿಂದ ಗಣೇಶೋತ್ಸವವನ್ನು ಆಚರಿಸುತ್ತಿರುವುದು ಈ ತಂಡದ ಹೆಮ್ಮೆಯ ಸಂಗತಿಯಾಗಿದೆ. ಶನಿವಾರದಂದು ಹೊಳವನಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಗೋಷ್ಠಿಗಳೊಂದಿಗೆ ವಿಜೃಂಭಣೆಯ ಮೆರವಣಿಗೆ ನಡೆಸಿ ಗಣಪತಿಯನ್ನು ವಿಸರ್ಜನೆ ಮಾಡಲಾಯಿತು.…
ತುಮಕೂರು: ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರ ಹಾಗೂ ಚಿಕಿತ್ಸಾ ವಿಧಾನಗಳು ದಿನದಿಂದ ದಿನಕ್ಕೆ ಬದಲಾವಣೆ ಹೊಂದುತ್ತಿದ್ದು, ಈ ಪ್ರಗತಿಗೆ ಆಧುನಿಕ ಯಂತ್ರೋಪಕರಣಗಳೇ ಪ್ರಮುಖ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತುಮಕೂರಿನ ಶೆಟ್ಟಿಹಳ್ಳಿ ಮುಖ್ಯರಸ್ತೆಯ ರಾಘವೇಂದ್ರ ನಗರದಲ್ಲಿ (ಕೈಲಾಸ ಆಶ್ರಮದ ಪಕ್ಕದಲ್ಲಿ) ನೂತನವಾಗಿ ತಲೆಎತ್ತಿರುವ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆಯನ್ನು ಸೆಪ್ಟೆಂಬರ್ 18 ರಂದು ಅವರು ಅಧಿಕೃತವಾಗಿ ಉದ್ಘಾಟಿಸಿ ಮಾತನಾಡಿದರು. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆಗಳನ್ನು ಸುಲಭವಾಗಿ ಒದಗಿಸುವ ನಿಟ್ಟಿನಲ್ಲಿ ಈ ಆಸ್ಪತ್ರೆಯನ್ನು ಸಜ್ಜುಗೊಳಿಸಲಾಗಿದೆ. ಮೂತ್ರಪಿಂಡ ಸಂಬಂಧಿತ ಕಾಯಿಲೆಗಳ ತಪಾಸಣೆ, ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಸೇರಿದಂತೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ಇಲ್ಲಿ ಲಭ್ಯವಿವೆ ಎಂದು ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಯಶವಂತ್ ಗಂಗಯ್ಯ ಮಾತನಾಡಿ, ಈ ಅತ್ಯಾಧುನಿಕ ಚಿಕಿತ್ಸೆಯು ತುಮಕೂರು ಜಿಲ್ಲೆಯ, ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ವರದಾನವಾಗಿದೆ ಎಂದರು. ಕಿಡ್ನಿ ಕಾಯಿಲೆಗಳಿಗೆ ಆರಂಭಿಕ ಹಂತದಲ್ಲೇ ಸೂಕ್ತ ತಪಾಸಣೆ…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: 35ಕ್ಕೂ ಅಧಿಕ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ನೇರವಾಗಿ ನಿಮ್ಮ ಗ್ರಾಮಕ್ಕೇ ಆಗಮಿಸಿ, ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಬಗೆಹರಿಸುವ ವಿನೂತನ ಕಾರ್ಯಕ್ರಮವೇ ‘ಪ್ರಜಾಸೇವಾ ಅಭಿಯಾನ’ ಎಂದು ಕೊರಟಗೆರೆ ತಹಶೀಲ್ದಾರ್ ಕೆ. ಮಂಜುನಾಥ್ ತಿಳಿಸಿದರು. ತಾಲೂಕಿನ ಚನ್ನರಾಯನದುರ್ಗ ಹೋಬಳಿ ತೋವಿನಕೆರೆಯ ಖಾಸಗಿ ಸಮುದಾಯ ಭವನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ಪ್ರಜಾಸೇವಾ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತುಮಕೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಪ್ರೇಮಾ ಮಹಾಲಿಂಗಪ್ಪ ಮಾತನಾಡಿ, “ಪ್ರಜಾಸೇವಾ ಅಭಿಯಾನವು ರಾಜ್ಯ ಸರ್ಕಾರದ ಉತ್ತಮ ಯೋಜನೆಯಾಗಿದೆ. ಸರ್ಕಾರದ ಸೌಲಭ್ಯಗಳು ಜನರ ಮನೆಬಾಗಿಲಿಗೆ ಬಂದು ತಲುಪಿದಾಗ, ಸಾರ್ವಜನಿಕರು ಅದರ ಸದುಪಯೋಗ ಪಡೆದುಕೊಂಡರೆ ಮಾತ್ರ ಈ ಅಭಿಯಾನಕ್ಕೆ ನಿಜವಾದ ಯಶಸ್ಸು ಸಿಗುತ್ತದೆ” ಎಂದರು. ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, “ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಗ್ರಾಮೀಣ ಜನರಿಗೆ ವರದಾನವಾಗಿವೆ. ಆದರೆ ತೋವಿನಕೆರೆ ಭಾಗದ ರೈತರಿಗೆ ವಿದ್ಯುತ್ ಅಭಾವ ಹೆಚ್ಚಾಗಿದೆ. ಜೊತೆಗೆ ಸಾಗುವಳಿ…