Author: Ganesh Tumkuru

ಬೀದರ್:  ಪ್ರಸಕ್ತ ಸಾಲಿನಲ್ಲಿ ಸಮರ್ಪಕ ಮಳೆಯಾಗದೆ ತೀವ್ರ ಸಂಕಷ್ಟ ಎದುರಿಸುತ್ತಿರುವ ಬೀದರ್ ಜಿಲ್ಲೆಯ ಔರಾದ್ ತಾಲೂಕನ್ನು ಮುಂಬರುವ ಸೆಪ್ಟೆಂಬರ್ 30ರೊಳಗೆ ‘ಬರಪೀಡಿತ ಪ್ರದೇಶ’ ಎಂದು ಸರ್ಕಾರಿ ಮಟ್ಟದಲ್ಲಿ ಅಧಿಕೃತವಾಗಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿಯವರ ಮಾಜಿ ಅಪರ ಕಾರ್ಯದರ್ಶಿ ಹಾಗೂ ಕಳೆದ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಭೀಮಸೇನರಾವ ಶಿಂಧೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸಕ್ತ ವರ್ಷ ಸಮರ್ಪಕ ಮಳೆಯಾಗದೆ ಕ್ಷೇತ್ರದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರೈತರು ಆತಂಕಪಡುವ ಅಗತ್ಯವಿಲ್ಲ, ಬರ ಘೋಷಣೆ ಸೇರಿದಂತೆ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಔರಾದ್ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಈಗಾಗಲೇ ಮನವಿಪತ್ರ ಸಲ್ಲಿಸಲಾಗಿದೆ. ಅಲ್ಲದೇ ಶನಿವಾರ ಕಂದಾಯ ಇಲಾಖೆ ಕಾರ್ಯದರ್ಶಿ ಮನೋಜಕುಮಾರ ಮೀನಾ ಅವರನ್ನು ಭೇಟಿ ಮಾಡಿ ಔರಾದ್ ಕ್ಷೇತ್ರದ ಬರ ಪರಿಸ್ಥಿತಿ, ಮಳೆ…

Read More

ಬೆಂಗಳೂರು: ಮಹಾರಾಷ್ಟ್ರದ ನಾಗಪುರದಲ್ಲಿರುವ ಐತಿಹಾಸಿಕ ದೀಕ್ಷಾಭೂಮಿಗೆ ಭೇಟಿ ನೀಡಲು ಇಚ್ಛಿಸುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಅರ್ಹ ಯಾತ್ರಾರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. 2026–27ನೇ ಸಾಲಿನ ವಿಜಯದಶಮಿಯಂದು, ಅಂದರೆ ದಿನಾಂಕ 21 ಅಕ್ಟೋಬರ್ 2026 ರಂದು ನಾಗಪುರದ ದೀಕ್ಷಾಭೂಮಿಯಲ್ಲಿ ನಡೆಯಲಿರುವ ಧಮ್ಮಚಕ್ರ ಪ್ರವರ್ತನ ದಿನದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹ ಯಾತ್ರಾರ್ಥಿಗಳಿಗೆ ಈ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾಗುವ ಅರ್ಹ ಯಾತ್ರಾರ್ಥಿಗಳಿಗೆ ದಿನಾಂಕ 19—10–2026 ರಿಂದ 22—10–2026 ರವರೆಗೆ ಪ್ರಯಾಣಿಸಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕೆ.ಎಸ್.ಆರ್.ಟಿ.ಸಿ, ಇತರೆ ಸಾರಿಗೆ ಬಸ್ಸುಗಳು ಹಾಗೂ ರೈಲಿನ ಮೂಲಕ ಉಚಿತ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಯಾತ್ರೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣವಾದ swd.karnataka.gov.in ಗೆ ಭೇಟಿ ನೀಡಿ ದಿನಾಂಕ 19—09–2026 ರಿಂದ 09–10–2026 ರವರೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್…

Read More

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿಯನ್ನು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಶಿವಕುಮಾರ ಘಾಟೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಮಗಾರಿ ಸ್ಥಳಕ್ಕೆ ಆಗಮಿಸಿದ ಅವರು, ಪ್ರಮುಖವಾಗಿ ಕೂಲಿಕಾರ್ಮಿಕರ ಹಾಜರಾತಿಯನ್ನು ಪರಿಶೀಲಿಸಿದರು. ನಂತರ ಕಾಮಗಾರಿಯ ಪ್ರಗತಿ ಹಾಗೂ ಸ್ಥಳದಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಚಟುವಟಿಕೆಗಳ ಕುರಿತು ಪಂಚಾಯಿತಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಇದೇ ವೇಳೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳು ಹಾಗೂ ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಸ್ಥಳದಲ್ಲಿದ್ದ ಕಾರ್ಮಿಕರಿಗೆ ಜಾಗೃತಿ ಮೂಡಿಸಲಾಯಿತು. ಈ ಪರಿಶೀಲನೆಯ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗೀತಾ ದೇಶಮುಖ, ತಾಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಂತ್ರಿಕ ಸಹಾಯಕ ಸಂದೀಪ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಡಿಇಒ ಭೀಮಾ ರಾಠೋಡ, ಮೇಟಿ ಶಾಮರಾವ, ಕಾಶಿನಾಥ, ಗ್ರಾಮ ಕಾಯಕ ಮಿತ್ರ ಸಪ್ನಾ ರಮೇಶ್…

Read More

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಕಳೆದ ಎರಡು–ಮೂರು ವರ್ಷಗಳಿಂದ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಅತ್ಯಂತ ಕಳಪೆ ಮಟ್ಟದಲ್ಲಿದ್ದು, ಅರ್ಧಕ್ಕೇ ನಿಂತುಹೋಗಿದೆ. ಯೋಜನೆಯಡಿ ಪ್ರತಿಯೊಂದು ಮನೆಗೂ ನೀರು ತಲುಪಿಸಬೇಕಿದ್ದ ಕೆಲಸ ಅರ್ಧದಲ್ಲೇ ಸ್ಥಗಿತಗೊಂಡಿರುವುದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪ್ರತಿನಿತ್ಯ ಪರದಾಡುವಂತಾಗಿದೆ. ಈ ಕುರಿತು ಆಕ್ರೋಶ ಹೊರಹಾಕಿರುವ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಚಿನ್ನುಮಿ, ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿ ಅರ್ಧದಲ್ಲೇ ಬಿಟ್ಟು ಹೋಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಲೋಪ ಎಸಗಿರುವ ಗುತ್ತಿಗೆದಾರರಿಂದ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವುದರ ಜೊತೆಗೆ, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬರುವ ಒಂದು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಗ್ರಾಮಸ್ಥರೊಂದಿಗೆ ಸೇರಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಚಿನ್ನುಮಿ ಎಚ್ಚರಿಸಿದ್ದಾರೆ. ಇದೇ ವೇಳೆ ಗ್ರಾಮದ…

Read More

ಔರಾದ್: ಮಹಾರಾಷ್ಟ್ರದ ನಾಗಪುರದಲ್ಲಿರುವ ಪವಿತ್ರ ದೀಕ್ಷಾಭೂಮಿಗೆ ಭೇಟಿ ನೀಡಲು ಬಯಸುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಅರ್ಹ ಯಾತ್ರಾರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. 2026–27ನೇ ಸಾಲಿನ ಧಮ್ಮ ಪ್ರವರ್ತನಾ ದಿನದ ಅಂಗವಾಗಿ ಅಕ್ಟೋಬರ್ 21ರಂದು ನಾಗಪುರದ ದೀಕ್ಷಾಭೂಮಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಇದರ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯಿಂದ ಅಕ್ಟೋಬರ್ 19ರಿಂದ 22ರವರೆಗೆ ಯಾತ್ರಾರ್ಥಿಗಳನ್ನು ನಾಗಪುರಕ್ಕೆ ಕರೆದೊಯ್ದು, ಮರಳಿ ಕರೆತರಲು ಬಸ್ ಹಾಗೂ ರೈಲು ಮೂಲಕ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 19 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 9 ಅಧಿಕೃತ ವೆಬ್ಸೈಟ್: swd.karnataka.gov.in ಯಾತ್ರೆಯಲ್ಲಿ ಭಾಗವಹಿಸಲು ಆಸಕ್ತ ಹಾಗೂ ಅರ್ಹರು ನಿಗದಿತ ದಿನಾಂಕದೊಳಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಔರಾದ್ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್–1 ಸಹಾಯಕ ನಿರ್ದೇಶಕರಾದ ಡಾ. ಉತ್ತಮ ಎಸ್. ಸಂಘನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ: ಅರವಿಂದ…

Read More

ಪಾವಗಡ : ತಾಲೂಕಿನ ಕಸಬಾ ಹೋಬಳಿಯ ಕಿಲಾರ್ಲಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಹಾಗೂ ಉಪಾಧ್ಯಕ್ಷರಾಗಿ ಕೆ.ಬಿ. ನಾಗರಾಜಪ್ಪ ಅವರು ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಸಂಘದ 13 ಸದಸ್ಯರ ಆಡಳಿತ ಮಂಡಳಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ರಾಮಚಂದ್ರ ಹೆಚ್. ಹಾಗೂ ಕೆ.ಬಿ. ನಾಗರಾಜಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಂಘದ ಕಾರ್ಯದರ್ಶಿ ರವಿಚಂದ್ರ ಕೆ.ಎಂ. ಘೋಷಿಸಿದರು. ನೂತನ ಉಪಾಧ್ಯಕ್ಷ ಕೆ.ಬಿ. ನಾಗರಾಜಪ್ಪ ಮಾತನಾಡಿ, “ಅಧ್ಯಕ್ಷರು ಹಾಗೂ ನಿರ್ದೇಶಕರ ಸಹಕಾರದೊಂದಿಗೆ ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಿ, ಹಾಲು ಉತ್ಪಾದಕರಿಗೆ ಉತ್ತಮ ಸೇವೆ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ” ಎಂದರು. ನಿರ್ದೇಶಕರಾದ ಜೆ. ನಾಗರಾಜಪ್ಪ, ತಿಮ್ಮರಾಜು, ನಾಗೇಂದ್ರಪ್ಪ, ಕೆ.ಟಿ. ನಾರಾಯಣಪ್ಪ, ರಂಗನಾಥ, ಚಿಕ್ಕೀರಪ್ಪ, ಬುಡ್ಡಪ್ಪ ಜಿ., ತೋಪಮ್ಮ, ನಾಗಮ್ಮ, ಹನುಮಂತನಾಯ್ಕ ಹಾಗೂ ಕಾಂತರಾಜು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ…

Read More

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಕೆರೆಗಳಿಗೆ ಹೇಮಾವತಿ ನೀರನ್ನು ಹರಿಸದೆ ಜಿಲ್ಲಾಡಳಿತ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿ, ಶಾಸಕ ಸುರೇಶ್ ಗೌಡ ಅವರು ಈ ಬಾರಿಯ ದಸರಾ ಉತ್ಸವವನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ. ಜಿಲ್ಲೆಯಲ್ಲಿ ತೀವ್ರ ಸ್ವರೂಪದ ಅಭಾವ ಮತ್ತು ಬರಗಾಲ ಆವರಿಸಿದ್ದರೂ ಜನರ ಕಷ್ಟಕ್ಕೆ ಸ್ಪಂದಿಸದೆ ಅದ್ಧೂರಿ ದಸರಾ ಆಚರಣೆಗೆ ಹೊರಟಿರುವ ಜಿಲ್ಲಾಡಳಿತದ ನಡೆಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಜಿಲ್ಲೆಯಲ್ಲಿ ತೀವ್ರ ನೀರಾವರಿ ಅಭಾವವಿದ್ದರೂ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ದಸರಾ ಉತ್ಸವಕ್ಕೆ ಹೆಚ್ಚು ಆದ್ಯತೆ ನೀಡುತ್ತಿರುವುದು ಖಂಡನೀಯವಾಗಿದೆ. ರೈತರು ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದರೆ, ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತು ಸಂಭ್ರಮಾಚರಣೆಯಲ್ಲಿ ತೊಡಗಿದೆ. ಆದ್ದರಿಂದ ತಕ್ಷಣವೇ ದಸರಾ ಆಚರಣೆಯನ್ನು ರದ್ದುಗೊಳಿಸಿ, ಕೆರೆಗಳಿಗೆ ನೀರು ಹರಿಸಲು ಮೊದಲ ಆದ್ಯತೆ ನೀಡಬೇಕು ಎಂದು ಸುರೇಶ್ ಗೌಡ ಅವರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ. ತಮ್ಮ ಗ್ರಾಮಾಂತರ ಕ್ಷೇತ್ರಕ್ಕೆ ಸೇರಿದ ಹಳ್ಳಿಗಳ ಕೆರೆಗಳಿಗೆ ಇದುವರೆಗೆ ಒಂದು ಹನಿ ಹೇಮಾವತಿ ನೀರನ್ನೂ ಹರಿಸಲಾಗಿಲ್ಲ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.…

Read More

ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಸುದೀರ್ಘ ಮನವಿಗೆ ತಕ್ಷಣವೇ ಸ್ಪಂದಿಸಿರುವ ಶಾಸಕ ಸಿ.ಬಿ.ಸುರೇಶ್‌ ಬಾಬು, ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ ನಾಗತೀಕೆರೆಗಳಿಗೆ ರಂಗನಾಥಪುರದ ಮಾರ್ಗವಾಗಿ ಎತ್ತಿನಹೊಳೆ ಯೋಜನೆಯ ನೀರನ್ನು ಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದ ಬಳಿ ಭಾವನಹಳ್ಳಿ, ಹೊಸಹಳ್ಳಿ, ಹೊನ್ನೇಬಾಗಿ, ಕೋಡಿಹಳ್ಳಿ ಹಾಗೂ ತಿಮ್ಮನಹಳ್ಳಿ ಭಾಗದ ರೈತರು ಶಾಸಕರನ್ನು ಭೇಟಿಯಾಗಿ ನೀರಿನ ಸಮಸ್ಯೆಯ ಕುರಿತು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕ್ಷೇತ್ರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಸಾವಿರಾರು ಅಡಿ ಆಳಕ್ಕೆ ಕೊಳವೆಬಾವಿ ಕೊರೆಸಿದರೂ ನೀರು ಸಿಗದ ಜಟಿಲ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಈ ಭಾಗದ ಜನರಿಗೆ ಕುಡಿಯುವ ನೀರು ಒದಗಿಸಲು ದುರ್ಗದಕೆರೆ ಹಾಗೂ ನಾಗತೀಕೆರೆಗಳನ್ನು ತುಂಬಿಸುವುದು ಅತ್ಯಗತ್ಯವಾಗಿದೆ. ಈ ಕೆರೆಗಳನ್ನು ತುಂಬಿಸುವುದರಿಂದ ಸುತ್ತಮುತ್ತಲ ಪ್ರದೇಶದ ಅಂತರ್ಜಲ ಮಟ್ಟ ಹೆಚ್ಚುವುದರ ಜೊತೆಗೆ ಕುಡಿಯುವ ನೀರಿನ ಅಭಾವಕ್ಕೂ ಮುಕ್ತಿ ಸಿಗಲಿದೆ ಎಂದು ತಿಳಿಸಿದರು. ಎತ್ತಿನಹೊಳೆ ಯೋಜನೆಯ…

Read More

ಕೊರಟಗೆರೆ: ತುಮಕೂರು ಜಿಲ್ಲೆಯ ಮಧುಗಿರಿಯನ್ನು ಇತ್ತೀಚೆಗೆ ಕೆಎಸ್‌ ಆರ್‌ ಟಿಸಿ ಉಪವಿಭಾಗವನ್ನಾಗಿ ಘೋಷಣೆ ಮಾಡಿದ ಬೆನ್ನಲ್ಲೇ, ಇದೀಗ ಕೊರಟಗೆರೆ ತಾಲೂಕಿಗೂ ಹೊಸ ಕೆಎಸ್‌ ಆರ್‌ ಟಿಸಿ ಉಪವಿಭಾಗ ಮಂಜೂರಾಗುವ ಮೂಲಕ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ಅವರ ವಿಶೇಷ ಮುತುವರ್ಜಿ ಮತ್ತು ಆದೇಶದ ಮೇರೆಗೆ ಕೊರಟಗೆರೆಯಲ್ಲಿ ನೂತನ ಉಪವಿಭಾಗ ಸ್ಥಾಪನೆಗೆ ಅಧಿಕೃತ ಪ್ರಕ್ರಿಯೆ ಭರದಿಂದ ಆರಂಭವಾಗಿದೆ. ಈ ಯೋಜನೆಯ ಸ್ಥಳ ಪರಿಶೀಲನೆಗಾಗಿ ಕೊರಟಗೆರೆ ತಾಲೂಕು ಆಡಳಿತ ಕಾರ್ಯಪ್ರವೃತ್ತರಾಗಿದ್ದು, ಕಸಬಾ ಹೋಬಳಿಯ ಹುಲಿಕುಂಟೆ ಗ್ರಾಮದ ಸರ್ವೆ ನಂಬರ್ 60 ರಲ್ಲಿ ಸುಮಾರು 6 ಎಕರೆ ಸರ್ಕಾರಿ ಜಮೀನನ್ನು ಕೆಎಸ್‌ಆರ್‌ಟಿಸಿ ಉಪವಿಭಾಗ ಹಾಗೂ ಬಸ್ ಡಿಪೋ ನಿರ್ಮಾಣಕ್ಕಾಗಿ ಕಾಯ್ದಿರಿಸಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ಖಚಿತಪಡಿಸಿದ್ದಾರೆ. ಈ ಜಾಗವು ಕೊರಟಗೆರೆ – ಮಧುಗಿರಿ ಮುಖ್ಯ ರಸ್ತೆಗೆ ಹೊಂದಿಕೊಂಡಿದ್ದು, ಡಿಪೋ ನಿರ್ಮಾಣಕ್ಕೆ ಅತ್ಯಂತ ಸೂಕ್ತವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಶೀಘ್ರದಲ್ಲೇ ಜಾಗದ ಪಹಣಿ ಹಾಗೂ ಹಸ್ತಾಂತರ…

Read More

ಮಂಗಳೂರು: ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ಸಾಂಸ್ಕೃತಿಕ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸಚಿವ ಸಂಪುಟವು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅನ್ವಯವಾಗುವಂತೆ ‘ತುಳು’ ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಲು ಮಹತ್ವದ ತೀರ್ಮಾನ ಕೈಗೊಂಡಿದೆ. ಇದರೊಂದಿಗೆ ‘ದಕ್ಷಿಣ ಕನ್ನಡ’ ಜಿಲ್ಲೆಯ ಹೆಸರನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಆಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿ ಕರಡು ಅಧಿಸೂಚನೆ (Draft Notification) ಹೊರಡಿಸಲು ನಿರ್ಧರಿಸಲಾಗಿದೆ. ಪಡೀಲ್ ನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆದ ಐತಿಹಾಸಿಕ ಸಂಪುಟ ಸಭೆಯ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದರು. ಕರಾವಳಿ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹32,611 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಅವಿಭಜಿತ ಜಿಲ್ಲೆಯ ಜನರ ದೀರ್ಘಕಾಲದ ಕನಸಾಗಿದ್ದ ತುಳು ಭಾಷೆಗೆ…

Read More