Subscribe to Updates
Get the latest creative news from FooBar about art, design and business.
- ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
- ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ : ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
- ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ
- ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
- ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
- ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
- ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ?
- ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
Author: Ganesh Tumkuru
ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಸುಂಧಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾಸೆಂಪೂರ ಗ್ರಾಮದಲ್ಲಿ ಶುಕ್ರವಾರ ವಿಬಿ–ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ರಸ್ತೆ ನಿರ್ಮಾಣ ಹಾಗೂ ಸಸಿ ನೆಡುವಿಕೆ ಕಾಮಗಾರಿ ಸ್ಥಳದಲ್ಲಿಯೇ ಕೂಲಿಕಾರ್ಮಿಕರೊಂದಿಗೆ ‘ರೋಜ್ಗಾರ್ ದಿನಾಚರಣೆ’ಯನ್ನು ಆಚರಿಸಲಾಯಿತು. ಕಾಮಗಾರಿ ಸ್ಥಳದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಅವರು ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿ, ವಿಬಿ–ಜಿ ರಾಮ್ ಜಿ ಯೋಜನೆಯ ಉದ್ದೇಶ, ಅನುಷ್ಠಾನ ಹಾಗೂ ಗ್ರಾಮೀಣ ಕುಟುಂಬಗಳಿಗೆ ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದ್ದು, ಕೂಲಿಕಾರ್ಮಿಕರು ತಮ್ಮ ಜಾಬ್ ಕಾರ್ಡ್‌ಗಳನ್ನು ಸಕ್ರಿಯವಾಗಿ ಬಳಸಿಕೊಂಡು ಗ್ರಾಮ ಪಂಚಾಯಿತಿಗೆ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಬೇಕು ಎಂದು ತಿಳಿಸಿದರು. ಅಲ್ಲದೆ, ಯೋಜನೆಯಡಿ ಲಭ್ಯವಿರುವ ವಿವಿಧ ವೈಯಕ್ತಿಕ ಹಾಗೂ ಸಮುದಾಯ ಆಧಾರಿತ ಕಾಮಗಾರಿಗಳ ಸದುಪಯೋಗ ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಪತರಾವ ಚಿಟಗೀರೆ ಮಾತನಾಡಿ, ವೈಯಕ್ತಿಕ ಹಾಗೂ…
ಹೊಳೆನರಸೀಪುರ: ತಾಲ್ಲೂಕಿನ ಚಿಟ್ಟನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ಆವರಣದಲ್ಲಿ, ಟ್ರಸ್ಟ್ ಹಾಗೂ ಬೆಂಗಳೂರಿನ ಡಾ. ಮಜೀದ್ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ 2ನೇ ವರ್ಷದ ‘ಗ್ರಾಮೀಣ ಆರೋಗ್ಯ ಕವಚ’ ಉಚಿತ ಬೃಹತ್ ವೈದ್ಯಕೀಯ ಶಿಬಿರವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಅಂಜು ಮಜೀದ್, ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ಕಳೆದ ಎರಡು ವರ್ಷಗಳಿಂದ ಸಾರ್ವಜನಿಕರಿಗೆ ಉಚಿತವಾಗಿ ಅತ್ಯಂತ ವ್ಯವಸ್ಥಿತವಾಗಿ ಈ ಶಿಬಿರಗಳನ್ನು ಆಯೋಜಿಸುತ್ತ ಬಂದಿದೆ. ಈ ವರ್ಷವೂ ಇದನ್ನು ಮುಂದುವರಿಸಿದ್ದು, ಸಾರ್ವಜನಿಕರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ. ಪಟೇಲ್ ಮಾತನಾಡಿ, ನಿಮ್ಮ ಈ ಆರೋಗ್ಯ ಸೇವೆ ತಾಲ್ಲೂಕಿನ ಪ್ರತಿ ಹಳ್ಳಿಗೂ ತಲುಪಬೇಕು. ಬಡ ರೋಗಿಗಳಿಗೆ ಇದರ ಪ್ರಯೋಜನ ಸಿಗುವಂತೆ ಮಾಡುವ ನಿಟ್ಟಿನಲ್ಲಿ ನಿಮ್ಮೊಂದಿಗೆ ನಾವೂ ಇರುತ್ತೇವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಈ ಶಿಬಿರದಲ್ಲಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ತಪಾಸಣೆ ಹಾಗೂ…
ತುಮಕೂರು: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರಸಾಲ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ಸಾಲ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು-ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ(ಹೊಸದು) ಹಾಗೂ ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. 2024-25 ಮತ್ತು 2025-26ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಮತ್ತೊಮ್ಮೆ ಮರು ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆಸಕ್ತರು https://www.sevasindhu.karnataka.gov.in ಪೋರ್ಟಲ್ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ / ತುಮಕೂರು ಒನ್ ಸೇವಾ ಕೇಂದ್ರದಲ್ಲಿ ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲಸೌಲಭ್ಯಕ್ಕಾಗಿ https://www.koushalkar.com ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kvcdc.karnataka.gov.in ಅಥವಾ ಸಹಾಯವಾಣಿ ಸಂಖ್ಯೆ 080-29904350…
ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕು ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಹಿರಿಯ ಆರೋಗ್ಯ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಪಿಎಂ–ಅಭಿಮ್ ಯೋಜನೆಯಡಿ ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ಕಟ್ಟಡ ಕಾಮಗಾರಿಯ ಭೂಮಿಪೂಜೆ ಸಮಾರಂಭ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವಲ್ಲಿ ಮತ್ತು ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ ಹಾಗೂ ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ ಮೈಲಾರೆ ಅವರು ಕರ್ತವ್ಯ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಗಳು, 1957ರ ನಿಯಮ 10(1)(ಡಿ) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಆರೋಗ್ಯ ಮತ್ತು ಕುಟುಂಬ…
ಗುಬ್ಬಿ: ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯ ಸ್ವಾಮಿ ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಶತಾಯ ಗತಾಯ ಪ್ರಯತ್ನಿಸುತ್ತಿರುವ ಬೆನ್ನಲ್ಲೇ, ಇದೀಗ ನವೆಂಬರ್ ಅಂತ್ಯದೊಳಗೆ ಎತ್ತಿನಹೊಳೆ ಯೋಜನೆಯ ಮೂಲಕ ತುಮಕೂರಿಗೆ ನೀರು ಹರಿಸಲು ಸಚಿವರು ಪಣತೊಟ್ಟಿದ್ದಾರೆ. ಇದರ ಭಾಗವಾಗಿ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ‘ಪ್ಯಾಕೇಜ್ 11’ರ ಕಾಮಗಾರಿ ಸ್ಥಳಕ್ಕೆ ಗುರುವಾರ ಮುದ್ದು ಭೇಟಿ ನೀಡಿ, ಸಮಗ್ರ ಪರಿಶೀಲನೆ ನಡೆಸಿದರು. ಕಾಮಗಾರಿ ಸ್ಥಳದಲ್ಲಿ ಎದುರಾಗಿರುವ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಸಚಿವರು ತುರ್ತು ಹೆಜ್ಜೆ ಇಟ್ಟಿದ್ದಾರೆ. ಕಂಚಿಗಾನಹಳ್ಳಿಯ ಅರಣ್ಯ ಇಲಾಖೆಗೆ ಸೇರಿದ 1.9 ಕಿ.ಮೀ ಜಾಗವನ್ನು ಪರಿಶೀಲಿಸಿದ ಅವರು, ಯೋಜನೆಗೆ ಅಗತ್ಯವಿರುವ ಅರಣ್ಯ ಇಲಾಖೆಯ 2ನೇ ಹಂತದ ಅನುಮತಿಗೆ ಸಂಬಂಧಿಸಿದ ಕಡತಗಳು ಈಗಾಗಲೇ ನವದೆಹಲಿಗೆ ತಲುಪಿವೆ ಎಂದು ಸ್ಪಷ್ಟಪಡಿಸಿದ ಅವರು, ದೆಹಲಿಯ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಅರ್ಜಿ ಸಲ್ಲಿಸಿದ್ದು, ಸತತ ಪ್ರಯತ್ನದ ಫಲವಾಗಿ ಇನ್ನೊಂದು ವಾರದಲ್ಲಿ ಕೇಂದ್ರದಿಂದ ಅಂತಿಮ…
ಬೆಂಗಳೂರು: ರೂ. 2,000ಕ್ಕಿಂತ ಹೆಚ್ಚಿನ ಯುಪಿಐ (UPI) ವ್ಯಾಪಾರ ವಹಿವಾಟುಗಳ ಮೇಲೆ ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರವು ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯ ಪ್ರಗತಿಯಲ್ಲಿ ಒಂದು ಹೆಜ್ಜೆ ಹಿಂದಕ್ಕೆ ಇಟ್ಟಂತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಯುಪಿಐ ಯಶಸ್ವಿಯಾಗಲು ಪ್ರಮುಖ ಕಾರಣವೆಂದರೆ ಅದರ ಬಳಕೆಯಲ್ಲಿನ ಸರಳ ವಿಧಾನ, ಸುಲಭ ಮತ್ತು ಉಚಿತ ಲಭ್ಯತೆ. ಸಾಮಾನ್ಯ ನಾಗರಿಕರಿಂದ ಹಿಡಿದು ಸಣ್ಣ ವ್ಯಾಪಾರಿಗಳವರೆಗೆ ಎಲ್ಲರನ್ನೂ ನಗದು ವಹಿವಾಟಿನಿಂದ ಡಿಜಿಟಲ್ ಆರ್ಥಿಕತೆಯತ್ತ ಕರೆದೊಯ್ಯುವಲ್ಲಿ ಇದು ಪ್ರಮುಖ ಪಾತ್ರ ವಹಿಸಿತ್ತು. ರೂ. 2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ ವಹಿವಾಟುಗಳ ಮೇಲೆ ಶೇ. 0.4ರ ವ್ಯಾಪಾರ ರಿಯಾಯಿತಿ ದರ (ಎಂಡಿಆರ್) ವಿಧಿಸುವ ಈಗಿನ ನಿರ್ಧಾರವು ಈ ಮೂಲಭೂತ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಗ್ರಾಹಕರಿಗೆ ನೇರವಾಗಿ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಪಾವತಿ ಸ್ವೀಕರಿಸುವುದಕ್ಕಾಗಿ ವ್ಯಾಪಾರಿಗೆ ಹೆಚ್ಚುವರಿ ವೆಚ್ಚವನ್ನು ವಿಧಿಸಿದಾಗ, ಅಂತಿಮವಾಗಿ ಆ ವೆಚ್ಚವನ್ನು ಯಾರು ಭರಿಸುತ್ತಾರೆ…
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ನಿರಂತರವಾಗಿ ಮೌಲ್ಯಮಾಪನ ಮಾಡಲಾಗುತ್ತಿದ್ದು, ಎರಡನೇ ಹಂತದ ಗ್ರೌಂಡ್ ಟ್ರೂಥಿಂಗ್ ವರದಿ ಆಧರಿಸಿ ಹೆಚ್ಚುವರಿ 23 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಬರಪೀಡಿತ ತಾಲೂಕುಗಳ ಸಂಖ್ಯೆ 124ಕ್ಕೆ ಏರಿಕೆಯಾಗಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಳೆ ಹಾನಿಯ ನೈಜ ಸ್ಥಿತಿಯನ್ನು ನಿಖರವಾಗಿ ಮತ್ತು ಪಾರದರ್ಶಕವಾಗಿ ದಾಖಲಿಸಲು ‘Crop Loss GT’ ಮೊಬೈಲ್ ಆ್ಯಪ್ ಅನ್ನು ಬಳಸಲಾಗುತ್ತಿದೆ. ಇದರ ಮೂಲಕ ಜಿಯೋ-ಟ್ಯಾಗ್ ಮಾಡಲಾದ ಛಾಯಾಚಿತ್ರಗಳು, ಜಿಪಿಎಸ್ ಮಾಹಿತಿ, ಜಮೀನಿನ ವಿವರ ಹಾಗೂ ಬೆಳೆ ಹಾನಿಯ ಪ್ರಮಾಣವನ್ನು ಸ್ಥಳದಲ್ಲಿಯೇ ದಾಖಲಿಸಲಾಗುತ್ತಿದೆ. ಅಲ್ಲದೆ, 3ನೇ ಹಂತದ ಗ್ರೌಂಡ್ ಟ್ರೂಥಿಂಗ್ಗಾಗಿ 17 ಜಿಲ್ಲೆಗಳ 53 ತಾಲೂಕುಗಳನ್ನು ಆಯ್ಕೆ ಮಾಡಲಾಗಿದೆ. ರೈತರ ಹಿತ ಕಾಪಾಡುವುದು ಮತ್ತು ಸಂಕಷ್ಟದ ಸಮಯದಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ರೈತರ ನೈಜ ಬೆಳೆ ಹಾನಿಯನ್ನು ಸಮರ್ಪಕವಾಗಿ ದಾಖಲಿಸಿ ಅರ್ಹ ರೈತರಿಗೆ ನಿಯಮಾನುಸಾರ ಪರಿಹಾರ ತಲುಪಿಸಲು ಅಗತ್ಯವಿರುವ ಎಲ್ಲಾ…
ಬೀದರ್: ಔರಾದ್ ಹಾಗೂ ಕಮಲನಗರ ತಾಲೂಕಿನ ನೂತನ ಕಾರ್ಮಿಕ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿ ಕರ್ತವ್ಯಕ್ಕೆ ಹಾಜರಾದ ಕೆ. ಸುವರ್ಣ ಅವರನ್ನು ಔರಾದ್ (ಬಿ) ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘ (ರಿ) ಬೀದರ್ ವತಿಯಿಂದ ಗುರುವಾರ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ. ಕೆ. ಶಿಂದೆ, ಡಾಟಾ ಎಂಟ್ರಿ ಆಪರೇಟರ್ ಶಿವಕುಮಾರ್, ರಘುನಾಥ, ನೀಲೇಶ್ ಬಾದಲಗಾಂವ, ಸರ್ಜರಾವ ಮೋರೆ, ಯಶವಂತ್ ಕಾಂಬಳೆ, ಚಂದ್ರಕಾಂತ ಕಾಂಬಳೆ, ಬಸವರಾಜ ಕೊಂಡೆ ಸೇರಿದಂತೆ ಸಂಘದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು. ನೂತನವಾಗಿ ಅಧಿಕಾರಕ್ಕೆ ಬಂದ ಕಾರ್ಮಿಕ ನಿರೀಕ್ಷಕರಿಗೆ ಹೂಗುಚ್ಛ ನೀಡಿ ಅಭಿನಂದಿಸಿದ ಸಂಘದ ಪದಾಧಿಕಾರಿಗಳು, ಕಾರ್ಮಿಕ ವರ್ಗದ ಕಷ್ಟ–ನಷ್ಟಗಳಿಗೆ ಸ್ಪಂದಿಸಿ, ಅವರ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. ವರದಿ: ಅರವಿಂದ ಮಲ್ಲೀಗೆ,…
ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿಗಳು ಪದವಿ ಹಂತದ ಶಿಕ್ಷಣವನ್ನು ಅತಿ ಶಿಸ್ತು ಹಾಗೂ ಅರ್ಥಪೂರ್ಣವಾಗಿ ಕಲಿತರೆ, ಅದು ಅವರ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗುತ್ತದೆ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಕರೆ ನೀಡಿದ್ದಾರೆ. ಪಟ್ಟಣದ ನವೋದಯ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2026-27ನೇ ಸಾಲಿನ ಸಹ-ಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಬಿ.ಎ. ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಗಾಧ ಶಕ್ತಿಯಿರುತ್ತದೆ. ಅದನ್ನು ಅರಿತುಕೊಂಡು ಶ್ರದ್ಧೆ ಹಾಗೂ ಏಕಾಗ್ರತೆಯಿಂದ ಓದಿನಲ್ಲಿ ತೊಡಗಿಸಿಕೊಂಡರೆ ಸುಂದರ ಬದುಕನ್ನು ರೂಪಿಸಿಕೊಳ್ಳಬಹುದು ಎಂದ ಅವರು, ಕಲಾ ಮಾಧ್ಯಮದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೀಳರಿಮೆ ಬೆಳೆಸಿಕೊಳ್ಳದೆ, ಭಾಷಾ ಸಂಪತ್ತನ್ನು ವೃದ್ಧಿಸಿಕೊಂಡರೆ ವಿದ್ಯಾಭ್ಯಾಸ ಅತ್ಯಂತ ಸುಲಭವಾಗುತ್ತದೆ ಎಂದು ಸಲಹೆ ನೀಡಿದರು. ಇಂದಿನ ಯುವ ಸಮುದಾಯ ನಿರುಪಯುಕ್ತ ಫ್ಯಾಷನ್‌ಗೆ ಮರುಳಾಗದೆ, ಬದುಕನ್ನು ಗೆಲ್ಲುವ ಕಡೆಗೆ ತಮ್ಮ ಹೆಜ್ಜೆಗಳನ್ನು ಇಡಬೇಕು ಎಂದು ಎಚ್ಚರಿಸಿದ ಅವರು, ಪದವಿಯಲ್ಲಿ ಮಾನವೀಯ ಮೌಲ್ಯಗಳ ವಿಷಯಗಳು ಬದುಕಿನ ಪಾಠ ಕಲಿಸುತ್ತವೆ ಎಂದರು. ಆದ್ದರಿಂದ ವಿದ್ಯಾರ್ಥಿಗಳು…
ಕೊರಟಗೆರೆ: ಮಳೆಯಿಲ್ಲದೆ ಕಂಗೆಟ್ಟಿರುವ ಜನ-ಜಾನುವಾರುಗಳು ಹಾಗೂ ಮೂಕಪ್ರಾಣಿಗಳಿಗೆ ಕುಡಿಯುವ ನೀರಿಗೂ ತೀವ್ರ ತೊಂದರೆ ಉಂಟಾಗಿರುವಂತೆಯೇ, ರಾತ್ರಿ ವೇಳೆಯಲ್ಲಿ ಕೆರೆಯ ನೀರನ್ನು ಖಾಸಗಿ ತೋಟಗಳಿಗೆ ಅಕ್ರಮವಾಗಿ ಹರಿಸಿಕೊಳ್ಳಲಾಗುತ್ತಿದೆ ಎಂದು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ನವಿಲುಕುರಿಕೆ ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಸಿ.ಎನ್.ದುರ್ಗ ಹೋಬಳಿಯ ನವಿಲುಕುರಿಕೆ ಗ್ರಾಮದ ವ್ಯಕ್ತಿಯೊಬ್ಬರು ಕಳೆದ 20 ದಿನಗಳಿಂದ ಪಂಪ್ ಮೂಲಕ ನಿರಂತರವಾಗಿ ಕೆರೆ ನೀರನ್ನು ತಮ್ಮ ಖಾಸಗಿ ತೋಟಕ್ಕೆ ಹರಿಸಿಕೊಳ್ಳುತ್ತಿದ್ದಾರೆ. ಬೇಸಿಗೆಯ ಈ ಸಂದರ್ಭದಲ್ಲಿ ಮೂಕಪ್ರಾಣಿಗಳು, ಪಕ್ಷಿಗಳು ಮತ್ತು ಜಾನುವಾರುಗಳಿಗೆ ಕೆರೆಯ ನೀರೇ ಏಕೈಕ ಆಧಾರವಾಗಿದ್ದು, ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. ಅಷ್ಟೇ ಅಲ್ಲದೆ, ಕೆರೆಯ ತೂಬನ್ನು ಹಾಳು ಮಾಡಿರುವುದರಿಂದ ನೀರು ಕೂಡ ಪೋಲಾಗುತ್ತಿದೆ ಎಂದು ಸ್ಥಳೀಯ ರೈತ ಮರಿಯಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ನೀರು ಬಳಸುತ್ತಿರುವುದನ್ನು ಪ್ರಶ್ನಿಸಲು ಹೋದ ರೈತರ ಮೇಲೆಯೇ ಸದರಿ ವ್ಯಕ್ತಿಯು ತನ್ನ ತಪ್ಪು ಮುಚ್ಚಿಕೊಳ್ಳಲು ಕೊರಟಗೆರೆ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆರೆಯನ್ನು ಮೀನು ಸಾಕಾಣಿಕೆಗಾಗಿ…