Subscribe to Updates
Get the latest creative news from FooBar about art, design and business.
- ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
- ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ : ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
- ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ
- ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
- ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
- ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
- ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ?
- ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
Author: Ganesh Tumkuru
ಕೊರಟಗೆರೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಸಿ.ಎನ್.ದುರ್ಗ ಹೋಬಳಿಯ ಸಿದ್ಧರಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಹಾಗೂ ಮಾದಕ ದ್ರವ್ಯಗಳ ಅಕ್ರಮ ಮಾರಾಟ ಜೋರಾಗಿ ನಡೆಯುತ್ತಿದ್ದು, ಈ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಕಳವಳ ವ್ಯಕ್ತವಾಗಿದೆ. ಆದರೆ, ಇಂತಹ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿರುವ ಅಬಕಾರಿ ಇಲಾಖೆಯಲ್ಲಿ ತೀವ್ರ ಸಿಬ್ಬಂದಿ ಕೊರತೆ ಇರುವುದು ಈಗ ದೊಡ್ಡ ಸಮಸ್ಯೆಯಾಗಿ ಮುನ್ನೆಲೆಗೆ ಬಂದಿದೆ. ಸಿದ್ಧರಬೆಟ್ಟದ ಸುತ್ತಮುತ್ತ ಶ್ರೀಗಂಧದ ಮರಗಳ ಕಳ್ಳತನ ಹಾಗೂ ಗಾಂಜಾ ಮಾರಾಟದ ಕುರಿತು ಸಾರ್ವಜನಿಕರಿಂದ ಪ್ರಶ್ನೆಗಳು ಎದುರಾದಾಗ, ಕೊರಟಗೆರೆ ಅಬಕಾರಿ ಇಲಾಖೆಯ ಸರ್ಕಲ್ ಇನ್‌ಸ್ಪೆಕ್ಟರ್ ಟಿ.ಆರ್. ಕೀರ್ತನ ಅವರು, ಇಲಾಖೆಯಲ್ಲಿ ಸಿಬ್ಬಂದಿಯೇ ಇಲ್ಲ, ಹೀಗಿರುವಾಗ ಹೇಗೆ ಕೆಲಸ ಮಾಡುವುದು ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಒಟ್ಟು 13 ಸಿಬ್ಬಂದಿ ಇರಬೇಕಾದ ಸ್ಥಳದಲ್ಲಿ ಪ್ರಸ್ತುತ ಕೇವಲ 6 ಮಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟು 5 ಕಾನ್ಸ್ಟೆಬಲ್ ಹುದ್ದೆಗಳ ಪೈಕಿ ಇಬ್ಬರು ಮಾತ್ರ ಕರ್ತವ್ಯದಲ್ಲಿದ್ದು,…
ಪಾವಗಡ: ತಾಲ್ಲೂಕಿನಲ್ಲಿ ಮಳೆಯ ಕೊರತೆಯಿಂದಾಗಿ ಬರದ ಪರಿಸ್ಥಿತಿ ತೀವ್ರಗೊಂಡಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಹಾಗೂ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಕುರಿಮಲ್ಲಪ್ಪ ಒತ್ತಾಯಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಕಳೆದ 25 ವರ್ಷಗಳಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆಯಿಲ್ಲದೆ ಕಡಲೆಕಾಯಿ, ತೊಗರಿ, ರಾಗಿ ಮತ್ತು ಟೊಮ್ಯಾಟೊ ಸೇರಿದಂತೆ ಪ್ರಮುಖ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಕೂಡಲೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಭದ್ರಾ ಮೇಲ್ದಂಡೆ, ಹೇಮಾವತಿ ಹಾಗೂ ಎತ್ತಿನಹೊಳೆ ಯೋಜನೆಗಳ ನೀರನ್ನು ಪಾವಗಡಕ್ಕೆ ಹರಿಸುವ ಕಾಮಗಾರಿಗಳಿಗೆ ವೇಗ ನೀಡಬೇಕು ಮತ್ತು ಸೋಲಾರ್ ಕಂಪನಿಗಳು ಒತ್ತುವರಿ ಮಾಡಿಕೊಂಡಿರುವ ರೈತರ ಜಮೀನುಗಳ ದಾರಿ ಸಮಸ್ಯೆಯನ್ನು ತಕ್ಷಣ ಬಗೆಹರಿಸಬೇಕು ಎಂದು ಅವರು ತಿಳಿಸಿದರು. ಈ ಕುರಿತು ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ…
ಕೊರಟಗೆರೆ: ಪಟ್ಟಣದಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಪಂಚಾಯಿತಿ (ತಾ.ಪಂ.) ಕಟ್ಟಡದ ಕಾಮಗಾರಿ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಅವರು ಕಾಮಗಾರಿಯನ್ನು ವೀಕ್ಷಿಸಿ, ಈ ನೂತನ ಕಟ್ಟಡಕ್ಕೆ ಹೈಟೆಕ್ ಸ್ಪರ್ಶ ನೀಡಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿಯೇ ಅತಿ ಬೃಹತ್ ಆದ ಈ ಕಟ್ಟಡದಲ್ಲಿ ಯಾವುದೇ ಲೋಪದೋಷವಿಲ್ಲದೆ ಅತ್ಯುತ್ತಮ ಗುಣಮಟ್ಟದ ಕೆಲಸವಾಗಬೇಕು ಎಂದ ಅವರು, ಮುಳಬಾಗಿಲು ಮಾದರಿಯಲ್ಲಿ ತಾ.ಪಂ. ಕಟ್ಟಡ ಹಾಗೂ ಒಳಗಿನ ಸಭಾಂಗಣ ಯಾವುದೇ ಕೊರತೆ ಇಲ್ಲದೆ ನಿರ್ಮಾಣವಾಗಬೇಕು ಎಂದು ತಿಳಿಸಿದರು. ಈಗಾಗಲೇ 2 ಕೋಟಿ ಹಣ ಮಂಜೂರಾಗಿದ್ದು, ಉಳಿದ ಅನುದಾನವನ್ನು ಸರ್ಕಾರದಿಂದ ಆದಷ್ಟು ಬೇಗ ಬಿಡುಗಡೆ ಮಾಡಿಸಿ ಜಿಲ್ಲೆಗೆ ಮಾದರಿಯಾಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಊರ್ಡಿಗೆರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ನಂದಿನಿ ಹಾಲಿನ ಕೇಂದ್ರವನ್ನು ಉದ್ಘಾಟಿಸಿ ಬಾದಾಮಿ ಹಾಲನ್ನು ಸವಿದರು. ನಂದಿನಿ ಕರ್ನಾಟಕದಲ್ಲಿ ಉತ್ತಮ ಬ್ರಾಂಡ್ ಆಗಿ ಗುರುತಿಸಿಕೊಂಡಿದ್ದು,…
ಕೊರಟಗೆರೆ: ವಿಶ್ವಕರ್ಮ ಸಮಾಜವು ಕಲೆ, ಶಿಲ್ಪಕಲೆ ಮತ್ತು ಕರಕುಶಲತೆಗೆ ಹೆಸರಾದ ಶ್ರೀಮಂತ ಸಂಸ್ಕೃತಿಯ ಸಮಾಜವಾಗಿದ್ದು, ತನ್ನ ಅದ್ಭುತ ಕೌಶಲ್ಯದಿಂದ ಸಮಾಜದ ಬದುಕನ್ನು ಸುಂದರಗೊಳಿಸಿದೆ ಎಂದು ಮಧುಗಿರಿ ಉಪ ವಿಭಾಗಾಧಿಕಾರಿ ಗೂಟೂರು ಶಿವಪ್ಪ ಅಭಿಪ್ರಾಯಪಟ್ಟಿದ್ದಾರೆ. ಕೊರಟಗೆರೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ವಿಶ್ವಕರ್ಮ ಜಯಂತಿ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶ್ವಕರ್ಮರ ಕಲೆ ಮತ್ತು ಕೌಶಲ್ಯವನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿದೆ ಎಂದ ಅವರು, ಕೇಂದ್ರ ಸರ್ಕಾರದ ಪಿಎಂ ವಿಶ್ವಕರ್ಮ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿಶ್ವಕರ್ಮ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯ ಯೋಜನೆಗಳು ಕುಶಲಕರ್ಮಿಗಳಿಗೆ ಹೊಸ ಭರವಸೆ ಮೂಡಿಸಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ್, ಯಾಂತ್ರೀಕರಣದ ಭರಾಟೆಯಲ್ಲಿ ಸಾಂಪ್ರದಾಯಿಕ ವೃತ್ತಿಗಳು ವೇಗವಾಗಿ ನೇಪಥ್ಯಕ್ಕೆ ಸರಿಯುತ್ತಿದ್ದು, ಕುಶಲಕರ್ಮಿಗಳು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ಕುಲಕಸುಬುಗಳಿಗೆ ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲ್ ಮಾರುಕಟ್ಟೆಯ ಸ್ಪರ್ಶ ನೀಡಿದಾಗ ಮಾತ್ರ ಸ್ಪರ್ಧಿಸಲು…
ಬೀದರ್: 79ನೇ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಅಧಿಕೃತ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ತೆರೆದ ಜೀಪಿನಲ್ಲಿ ತೆರಳಿದ ಸಚಿವರು ಗೌರವ ವಂದನೆ ಸ್ವೀಕರಿಸಿದರು. ನಂತರ ಪೊಲೀಸ್, ಅರಣ್ಯ ಹಾಗೂ ಅಗ್ನಿಶಾಮಕ ಇಲಾಖೆ ಸೇರಿದಂತೆ ವಿವಿಧ 10 ಆಕರ್ಷಕ ತುಕಡಿಗಳಿಂದ ಅದ್ಧೂರಿ ಪಥಸಂಚಲನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅನೇಕ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ರಜಾಕಾರರು ಮತ್ತು ಹೈದರಾಬಾದ್ ನಿಜಾಮರ ದಬ್ಬಾಳಿಕೆಯಿಂದ 1948 ಸೆಪ್ಟೆಂಬರ್ 17ರಂದು ಈ ಭಾಗಕ್ಕೆ ಸ್ವಾತಂತ್ರ್ಯ ದೊರೆಯಿತು ಎಂದು ಸ್ಮರಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ ಮತ್ತು ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೀದರ್ ಜಿಲ್ಲೆಯನ್ನು…
ಕೊರಟಗೆರೆ: ಇಂದು ಕೊರಟಗೆರೆ ತಾಲೂಕು ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ಅವರು ನೇರವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಪ್ರಗತಿ ಮತ್ತು ನಿರ್ಮಾಣದಲ್ಲಿ ಅನುಸರಿಸುತ್ತಿರುವ ಗುಣಮಟ್ಟದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಅಲ್ಲದೆ, ಕಾಮಗಾರಿಯನ್ನು ಯಾವುದೇ ವಿಳಂಬವಿಲ್ಲದೆ ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಸಂಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ಮಧುಗಿರಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ 2026–27ನೇ ಸಾಲಿನ ಆತ್ಮ ಯೋಜನೆಯಡಿ ಕೃಷಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಕೃಷಿ ಹೊಂಡದ ಫಲಾನುಭವಿಗಳಿಗೆ ಮೀನು ಮರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಕೃಷಿ ಹೊಂಡಗಳನ್ನು ಕೇವಲ ನೀರು ಸಂಗ್ರಹಣೆಗೆ ಸೀಮಿತಗೊಳಿಸದೆ, ಮೀನುಗಾರಿಕೆಯಂತಹ ಪೂರಕ ಚಟುವಟಿಕೆಗಳ ಮೂಲಕ ರೈತರ ಆದಾಯವನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದರು. ಇದರಿಂದ ರೈತರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಮತ್ತು ಗ್ರಾಮೀಣ ಆರ್ಥಿಕತೆ ಬಲಗೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು. ಇದೇ ವೇಳೆ ಶಾಸಕರು ತಮ್ಮ ಮಹತ್ವಾಕಾಂಕ್ಷೆಯ “ಅಕ್ಷರ ಅಮೃತ ಯೋಜನೆ”ಯಡಿ ಕಾಲೇಜು ವಿದ್ಯಾರ್ಥಿಗಳಿಗೆ ಊಟ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದರು. ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಆಹಾರದ ಶುಚಿತ್ವ, ಪೌಷ್ಟಿಕತೆ ಹಾಗೂ ಗುಣಮಟ್ಟದ ಬಗ್ಗೆ ನೇರವಾಗಿ ಮಾಹಿತಿ ಪಡೆದರು. ಜೊತೆಗೆ, ಕಾಲೇಜಿಗೆ ತೆರಳಲು ಅಗತ್ಯವಿರುವ ಬಸ್ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.…
ಮಧುಗಿರಿ: ನೀವು ನನಗೆ ನೀಡಿರುವ ಅಧಿಕಾರವನ್ನು ನಿಮ್ಮ ಅಭಿವೃದ್ಧಿಗೆ ಬಳಸುತ್ತಿದ್ದೇನೆ, ಎಲ್ಲ ಸಮುದಾಯದಲ್ಲೂ ಬಡವರಿದ್ದು, ಅವರಗಳು ಸಹ ಅಭಿವೃದ್ಧಿಯಾಗಬೇಕು ಎಂದು ಕೆ.ಎನ್.ರಾಜಣ್ಣ ತಿಳಿಸಿದರು. ಅವರು ಪಟ್ಟಣದ 8ನೇ ವಾರ್ಡ್‌ನ ಬೆಂಕಿಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಿ.ಸಿ ರಸ್ತೆ ಉದ್ಘಾಟಿಸಿ ಮಾತನಾಡಿದರು. 8ನೇ ವಾರ್ಡ್‌ನಲ್ಲಿ ಹೆಚ್ಚು ಶ್ರಮಜೀವಿಗಳಿದ್ದಾರೆ. ಈ ಹಿಂದೆ ಇಲ್ಲಿನ ಜನರಿಗೆ ಓಡಾಡಲು ಸರಿಯಾದ ರಸ್ತೆ ಇರಲಿಲ್ಲ. ಆದರೆ ಈಗ ನೂತನವಾಗಿ ಸಿ.ಸಿ.ರಸ್ತೆಯನ್ನು ನಿರ್ಮಿಸಲಾಗಿದೆ. ವಾರ್ಡ್‌ನ ಅಭಿವೃದ್ಧಿಗೆ ಮತ್ತು ಜನರ ಅಗತ್ಯ ಸೌಲಭ್ಯಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ಕಲ್ಪಿಸಿಕೊಡಲಾಗುವುದು ಎಂದರು. ನಿಮ್ಮ ಕಷ್ಟ ಕಾರ್ಪಣ್ಯಗಳು ನಿಮ್ಮ ತಲೆಮಾರಿಗೆ ಅಂತ್ಯವಾಗಬೇಕು. ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಬೇಕು. ನಮ್ಮ ಸರ್ಕಾರ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ನಿಮ್ಮ ಮಕ್ಕಳು ವಿದ್ಯಾವಂತರಾದಾಗ ಮಾತ್ರ ನಿಮ್ಮ ಕಷ್ಟಗಳು ನಿವಾರಣೆಯಾಗುತ್ತವೆ. ವಿದ್ಯೆಗೆ ಸರ್ವಸ್ವವನ್ನು ಗಳಿಸಿಕೊಡುವ ಶಕ್ತಿ ಇದೆ. ನಾನು ಸದಾ ಜನಪರವಾಗಿರುವಂತಹ ಯೋಜನೆಗಳನ್ನು ಜಾರಿ ಮಾಡಿದ್ದು, ನಿಮ್ಮ ಗಳ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಬದ್ಧನಾಗಿದ್ದೇನೆ. — ಕೆ.ಎನ್.ರಾಜಣ್ಣ, ಶಾಸಕರು.…
ತುಮಕೂರು: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಬೆಸ್ತ ಜನಾಂಗದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಸಾಲ ಸೌಲಭ್ಯಕ್ಕಾಗಿ ಅರಿವು-ಶೈಕ್ಷಣಿಕ ಹಾಗೂ ಅರಿವು-ಶೈಕ್ಷಣಿಕ/ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಯೋಜನೆ(ನವೀಕರಣ) ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ / ತುಮಕೂರು ಒನ್ / ಬೆಂಗಳೂರು ಒನ್ ಸೇವಾ ಕೇಂದ್ರದಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://ambigaradevelopment.karnataka.gov.in ಅಥವಾ ದೂ.ಸಂ: 080-22864099 ಅಥವಾ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ವಿವಿಧ ಸಂಘಟನೆಗಳ ಹೆಸರಿನಲ್ಲಿ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ಕುಖ್ಯಾತ ಶಂಕಿತ ನಕ್ಸಲ್ ಕಣಿಕಲಬಂಡೆ ವೆಂಕಟೇಶನನ್ನು ಪಾವಗಡ ಪೊಲೀಸರು ಸೆ. 15ರ ರಾತ್ರಿ ಕಡಮಲಕುಂಟೆ ಗ್ರಾಮದ ಹೊರವಲಯದ ಬೆಟ್ಟದಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಗಂಗಾಸಾಗರ ಗ್ರಾಮದ ವಾಸಿ ನಾಗಭೂಷಣ್ ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ಸೆ. 9ರಂದು ಗಂಗಾಸಾಗರ ಸರ್ವೆ ನಂ. 31/1ರ ಜಮೀನಿನ ಶೆಡ್‌ಗೇಟ್‌ಗೆ ಐದು ಲಕ್ಷ ರೂಪಾಯಿ ಹಣವನ್ನು ನೀಡುವಂತೆ ಬೆದರಿಕೆ ಹಾಕಿ, ಸಿ.ಪಿ.ಐ (ಎಂಎಲ್), ಸಿ.ಪಿ.ಎಂ ಪೀಪಲ್ ವಾರ್, ಜನಶಕ್ತಿ ಪಕ್ಷ ಹಾಗೂ ದೇವಣ್ಣ ದಳಂ ಹೆಸರಿನಲ್ಲಿ ಆರೋಪಿಯು ಬೆದರಿಕೆ ಪತ್ರವನ್ನು ಕಟ್ಟಿ ಹೋಗಿದ್ದನು. ಈ ದೂರಿನ ಅನ್ವಯ ಪಾವಗಡ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್-2023 ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಸೂಡೋ ನಕ್ಸಲ್ ಆಗಿರುವ ಈತನಿಗೆ ಬೆಟ್ಟಗುಡ್ಡಗಳು ಮತ್ತು ಕಾಡುಗಳಲ್ಲಿ ವಾಸಿಸುವ ಕಲೆ ಗೊತ್ತಿದ್ದು, ಕಳೆದ ಒಂದು ವರ್ಷದಿಂದ ಆಂಧ್ರ ಹಾಗೂ ಕರ್ನಾಟಕ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದನು. ಸೆ.…