Author: Ganesh Tumkuru

ಬೆಂಗಳೂರು: ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ತೂಕ ಮತ್ತು ಅಳತೆಯಲ್ಲಿ ಮೋಸ ಮಾಡುತ್ತಿರುವ ಪ್ರಕರಣಗಳು ದೊಡ್ಡ ಮಟ್ಟದಲ್ಲಿ ಬೆಳಕಿಗೆ ಬಂದಿವೆ. ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಡೆಸಿದ ತಪಾಸಣೆಯ ವೇಳೆ ಬರೋಬ್ಬರಿ ಶೇ. 85ಕ್ಕೂ ಅಧಿಕ ಪೆಟ್ರೋಲ್ ನೊಝಲ್‌ ಗಳಲ್ಲಿ (ಗನ್‌ ಗಳಲ್ಲಿ) ಅಳತೆ ವ್ಯತ್ಯಯ ಇರುವುದು ಪತ್ತೆಯಾಗಿದ್ದು, ಸರ್ಕಾರವು ಇದರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಜ್ವಾನ್ ಅರ್ಷದ್, ರಾಜ್ಯಾದ್ಯಂತ ಪೆಟ್ರೋಲ್ ಬಂಕ್‌ ಗಳ ಮೇಲೆ ಹಠಾತ್ ದಾಳಿ ನಡೆಸಿ ತಪಾಸಣೆ ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಒಟ್ಟು 5,946 ಪೆಟ್ರೋಲ್ ಬಂಕ್‌ ಗಳಿದ್ದು, ಕಳೆದ ಒಂದು ವಾರದಲ್ಲಿ ಅಧಿಕಾರಿಗಳು 805 ಬಂಕ್‌ಗಳಲ್ಲಿ ದಿಢೀರ್ ಪರಿಶೀಲನೆ ನಡೆಸಿದ್ದಾರೆ. ಈ ಪೈಕಿ ಬರೋಬ್ಬರಿ 768 ಬಂಕ್‌ ಗಳಲ್ಲಿ ಅಳತೆಯಲ್ಲಿ ವ್ಯತ್ಯಯ ಕಂಡುಬಂದಿರುವುದು ಆತಂಕಕಾರಿ ವಿಷಯವಾಗಿದೆ. ಪರಿಶೀಲನೆ…

Read More

ಶಿವಮೊಗ್ಗ: ಶಿವಮೊಗ್ಗದಲ್ಲಿ ಗಣೇಶ ಹಬ್ಬದ ಸಂಭ್ರಮಾಚರಣೆ ಅಥವಾ ಮೆರವಣಿಗೆಯ ಸಂದರ್ಭದಲ್ಲಿ ಬಿಜೆಪಿ ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ನೃತ್ಯ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯ ವಿರುದ್ಧ ಮೇಲಾಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಸಕರೊಂದಿಗೆ ಪೊಲೀಸರು ಈ ರೀತಿ ಅತಿರೇಕದ ವರ್ತನೆ ತೋರಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಸಾರ್ವಜನಿಕ ವಲಯದಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ಈ ವಿಡಿಯೋ ವ್ಯಾಪಕ ಚರ್ಚೆಗೆ ಹಾಗೂ ಟೀಕೆಗೆ ಗ್ರಾಸವಾಗಿತ್ತು. ಕರ್ತವ್ಯದಲ್ಲಿದ್ದ ಪೊಲೀಸರು ಈ ರೀತಿಯ ರಾಜಕಾರಣಿಗಳೊಂದಿಗೆ ಮೈಮರೆತು ಕುಣಿದಿರುವುದು ಇಲಾಖೆಯ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಲಾಗಿದ್ದು, ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಇಲಾಖೆಯ ಹಿರಿಯ ಅಧಿಕಾರಿಗಳು ಸಂಬಂಧಪಟ್ಟ ಇಬ್ಬರೂ ಪೊಲೀಸ್ ಸಿಬ್ಬಂದಿಯನ್ನು ತಕ್ಷಣವೇ ಬೇರೆಡೆಗೆ ವರ್ಗಾವಣೆ (ಎತ್ತಂಗಡಿ) ಮಾಡಿ ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

Read More

ಬೆಂಗಳೂರು/ಕೋಲಾರ: ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುವ ಹಾಗೂ ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ಕಾರಣವಾಗುವ ಸುಮಾರು 10 ಟನ್ ಶಂಕಾಸ್ಪದ ಸಿಂಥೆಟಿಕ್ (ಕೃತಕ) ಅಡಕೆಯನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗಡಿ ಭಾಗದಲ್ಲಿ ಆರೋಗ್ಯ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೋಲ್ಕತಾದಿಂದ ಬೆಂಗಳೂರಿಗೆ ಕಂಟೇನರ್‌ನಲ್ಲಿ (ಕ್ಯಾಂಟರ್) ಸಾಗಿಸುತ್ತಿದ್ದ 96 ಮೂಟೆಗಳಷ್ಟು ನಕಲಿ ಅಡಕೆಯನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಜಪ್ತಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್‌ನ ಚಾಲಕ ಹಾಗೂ ಕ್ಲೀನರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಸಾಂಪ್ರದಾಯಿಕವಾಗಿ ಅಡಕೆಯನ್ನು ಕೊಯ್ದು, ಹಂಡೆಯಲ್ಲಿ ಕುದಿಸಿ ನೈಸರ್ಗಿಕವಾಗಿ ತಯಾರಿಸಲಾಗುತ್ತದೆ. ಆದರೆ ಈ ಸಿಂಥೆಟಿಕ್ ಅಡಕೆಯನ್ನು ತಾಳೆ ಬೀಜಗಳು, ಮರದ ರೆಂಬೆ ಅಥವಾ ಕಾಂಡದ ತಿರುಳುಗಳು ಹಾಗೂ ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿ ತಯಾರಿಸಲಾಗುತ್ತದೆ. ಇದಕ್ಕೆ ಆಕರ್ಷಕ ಬಣ್ಣ ಬರಲು ನೀಲಿ, ಕೆಂಪು ಮತ್ತು ಹಳದಿ ಬಣ್ಣಗಳಂತಹ ಕೃತಕ ಹಾಗೂ ಹಾನಿಕಾರಕ ರಾಸಾಯನಿಕಗಳನ್ನು ಬೆರೆಸಲಾಗುತ್ತದೆ. ಇಂತಹ ನಕಲಿ ಅಡಕೆಯ ಸೇವನೆಯಿಂದ ಜನರ…

Read More

ತುಮಕೂರು: ಕೇಂದ್ರ ಸರ್ಕಾರದ ಜಾತಿ ಗಣತಿ ಜಾರಿಗೊಳಿಸುವಿಕೆಯ ವಿಧಾನದ ವಿರುದ್ಧ ಉಪಮುಖ್ಯಮಂತ್ರಿ ಡಿಸಿಎಂ ಜಿ. ಪರಮೇಶ್ವರ ಅವರು ಕಟುವಾದ ಟೀಕೆ ವ್ಯಕ್ತಪಡಿಸಿದ್ದು, ಇದರ ದೋಷಪೂರಿತ ವಿಧಾನಗಳು ಸಾಮಾಜಿಕ ನ್ಯಾಯದ ಮೂಲ ಉದ್ದೇಶವನ್ನು ದುರ್ಬಲಗೊಳಿಸುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ. ಸಮಾಜದ ನಿರ್ಲಕ್ಷಿತ ಮತ್ತು ಅಂಚಿನಲ್ಲಿರುವ ಸ್ತರಗಳಿಗೆ ಸಮಾನ ಅವಕಾಶಗಳು ಹಾಗೂ ನ್ಯಾಯವನ್ನು ಖಚಿತಪಡಿಸುವುದು ಜಾತಿ ಗಣತಿಯಂತಹ ಕಾರ್ಯದ ಪ್ರಾಥಮಿಕ ಗುರಿಯಾಗಿರಬೇಕು ಎಂದು ಅವರು ಒತ್ತಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರ ಜಾತಿ ಗಣತಿಯನ್ನು ಅನುಷ್ಠಾನಗೊಳಿಸುತ್ತಿರುವ ರೀತಿ ಪ್ರಶ್ನಾರ್ಹವಾಗಿದೆ. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ಮುಖ್ಯ ಉದ್ದೇಶ. ಅದು ಸಿಗದಿದ್ದಾಗ ನಾವು ಧ್ವನಿ ಎತ್ತಬೇಕು. ನಿರ್ಲಕ್ಷಿತ ಸಮುದಾಯಗಳಿಗೆ ಅವಕಾಶಗಳನ್ನು ಒದಗಿಸುವುದು ನಮ್ಮ ಕರ್ತವ್ಯ. ಸಮಾಜದಲ್ಲಿ ಹಲವು ಅಂತರಗಳಿವೆ” ಎಂದು ತಿಳಿಸಿದರು. ಮುಂದುವರಿದು ಮಾತನಾಡಿದ ಅವರು, “21ನೇ ಶತಮಾನದಲ್ಲೂ ವ್ಯವಸ್ಥಿತ ಅಸಮಾನತೆಗಳು ಮುಂದುವರಿದರೆ ಸ್ವಾತಂತ್ರ್ಯದ ಉದ್ದೇಶ ಈಡೇರುವುದಿಲ್ಲ. ಅವರು (ಕೇಂದ್ರ ಸರ್ಕಾರ) ಮಾಡುತ್ತಿರುವ ರೀತಿ ಸರಿಯಾಗಿದ್ದರೆ, ಅನುಮಾನಗಳು ಏಕೆ ಉದ್ಭವಿಸುತ್ತವೆ? ಅವರು…

Read More

ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR)–2026 ಸಂಬಂಧ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಕಾಲಾವಕಾಶ ನೀಡಲಾಗಿದ್ದು, ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಂಡು ಯಾವುದಾದರೂ ತಪ್ಪುಗಳಲ್ಲಿ/ಹೆಸರು ಕೈಬಿಟ್ಟಿದ್ದಲ್ಲಿ/ಹೊಸ ಸೇರ್ಪಡೆಗಳಲ್ಲಿ ನಿಗದಿತ ನಮೂನೆ 6, 7, 8ರಲ್ಲಿ ಭರ್ತಿ ಮಾಡಿ ERO/AERO/Additional AERO/ಗಳಿಗೆ ನೀಡಬಹುದಾಗಿದೆ ಅಥವಾ ಆನ್‌ ಲೈನ್ ಮೂಲಕವೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಎಸ್‌.ಐ.ಆರ್. ಪ್ರಕ್ರಿಯೆಯು ಸಂದರ್ಭದಲ್ಲಿ ಸೆಪ್ಟೆಂಬರ್ 11ರವರೆಗೆ ಜಿಲ್ಲೆಯಲ್ಲಿ ಒಟ್ಟು 1,11,875 ನೋಟೀಸುಗಳನ್ನು ಜನರೇಟ್ ಮಾಡಲಾಗಿದ್ದು, ಈ ಪೈಕಿ ಇಲ್ಲಿಯವರೆಗೂ 77,955 ನೋಟೀಸುಗಳನ್ನು ಮತದಾರರು/ಅವರ ಕುಟುಂಬದವರಿಗೆ ಜಾರಿ ಮಾಡಲಾಗಿದೆ. ಉಳಿದ 33,920 ನೋಟೀಸುಗಳನ್ನು ಜಾರಿ ಮಾಡಲು ಬಾಕಿಯಿದ್ದು, ಸಂಬಂಧಿಸಿದವರಿಗೆ ಸಕಾಲದಲ್ಲಿ ಜಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ ಸೆಪ್ಟೆಂಬರ್ 5 ರಿಂದ ಆರಂಭವಾಗಿರುವ ವಿಚಾರಣೆ ಪ್ರಕ್ರಿಯೆಯಲ್ಲಿ ಸೆ.11ರವರೆಗೆ ಒಟ್ಟು 25,392 ನೋಟೀಸುಗಳನ್ನು 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ERO/AERO/Additional AERO ಗsಂದ ಆಯಾ ವಿಧಾನಸಭಾ…

Read More

ತುಮಕೂರು: ದೇಶದ, ಸಮಾಜದ ಬೆಳವಣಿಗೆಗೆ ನಿರ್ಮಾತೃಗಳಾಗಿ ಎಂಜಿನಿಯರ್‌ ಗಳು ಇಂಜಿನಿಯರ್‌ಗಳು ತಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಬೇಕು. ಸರ್ಕಾರಗಳು ಬದಲಾಗುವ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗುವ ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆದ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ, ತುಮಕೂರು ಜಿಲ್ಲಾ ಸರ್ಕಾರಿ ಇಂಜಿನಿಯರ್‌ ಗಳ ಸಂಘದ ಉದ್ಘಾಟನೆ ಹಾಗೂ ಸಂಘದ ಲಾಂಛನ ಅನಾವರಣ ಮಾಡಿ ಮಾತನಾಡಿದರು. ಉತ್ತರ ಕರ್ನಾಟಕ ಭಾಗರ್ಭಿ ಮೈಸೂರು ಕರ್ನಾಟಕ ಅಭಿವೃದ್ಧಿಯಾಗಿರುವುದಕ್ಕೆ ಮೈಸೂರು ಸಂಸ್ಥಾನದ ಗಾಲಿಗೆ ಕೃಷ್ಣರಾಜ ಒಡೆಯರ್ ಹಾಗೂ ಅವರ ಆಡಳಿತದಲ್ಲಿ ಇಂಜಿನಿಯರ್, ದಿವಾನರಾಗಿದ್ದ ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯ ಅಭಿವೃದ್ಧಿ ಚಿಂತನೆ, ಅವರು ಮಾಡಿದ ಕೆಲಸ ಕಾರಣ. ವಿಶ್ವೇಶ್ವರಯ್ಯನವರು ನಾಡಿನ ಅಭಿವೃದ್ಧಿ ಆಗಬೇಕು ಎಂದುಕೊಂಡು ಕಾರ್ಯನಿರ್ವಹಿಸಿದರು, ಕಾರ್ಯ ವ್ಯಾಪ್ತಿಯಲ್ಲಿ ಸ್ವಾರ್ಥಬರಬಾರದು ಎಂಬ ತತ್ವ, ಆದರ್ಶಗಳನ್ನು ಇಟ್ಟುಕೊಂಡಿದ್ದರು. ತಮ್ಮ ಜೀವನಪೂರ್ತಿ ಅದೇ ತತ್ವಡಡಿಯಲ್ಲಿ ಕಾರ್ಯನಿರ್ವಹಿಸಿದರು ಎಂದು ನುಡಿದರು.…

Read More

ಕುಣಿಗಲ್: ಅಧಿಕಾರಿಗಳ ಎಡವಟ್ಟಿನಿಂದಾಗಿ ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಾಗೂ ಗ್ರೇಡ್–2 ತಹಶೀಲ್ದಾರ್ ಕೋರ್ಟ್ ಕಲಾಪ ಏಕ ಕಾಲದಲ್ಲಿ ನಡೆದು ತಹಶೀಲ್ದಾರ್ ನ್ಯಾಯಾಲಯದ ಸಭಾಂಗಣದಲ್ಲಿ ಗೊಂದಲಕ್ಕೆ ಕಾರಣವಾದ ಪ್ರಸಂಗ ಮಂಗಳವಾರ ನಡೆಯಿತು. ರಾಜ್ಯದ ಪ್ರತಿ ಜಿಲ್ಲಾ ಮತ್ತು ತಾಲೂಕುಗಳಲ್ಲಿ ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಆಯೋಜಿಸುವಂತೆ ಸರ್ಕಾರದ ಸ್ಪಷ್ಟ ಆದೇಶದ ಹಿನ್ನೆಲೆಯಲ್ಲಿ ಇಲ್ಲಿನ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆಯು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಮಂಗಳವಾರ ಇಲ್ಲಿನ ತಹಶೀಲ್ದಾರ್ ನ್ಯಾಯಾಲಯದ ಸಭಾಂಗಣದಲ್ಲಿ ಆಯೋಜಿಸಿತ್ತು. ಸಭಾಂಗಣದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ, ಭಾರತದ ಸಂವಿಧಾನ ಪೀಠಿಕೆಯನ್ನು ಇಡಲಾಗಿತ್ತು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಹೊರತು ಪಡಿಸಿ ಬೇರೆ ಯಾವ ಅಧಿಕಾರಿಯೂ ಭಾಗವಹಿಸಿರಲಿಲ್ಲ. ಇದೇ ನ್ಯಾಯಾಲಯದ ಸಭಾಂಗಣದಲ್ಲಿ ಗ್ರೇಡ್–2 ತಹಶೀಲ್ದಾರ್ ಲೀಲಾವತಿ ಅವರು ನ್ಯಾಯಾಲಯದ ಕಲಾಪ ತೆಗೆದುಕೊಂಡಿದ್ದರು. ಹಲವಾರು ವಕೀಲರು, ಕಕ್ಷಿದಾರರು ಕೋರ್ಟ್‌ನಲ್ಲಿ ಭಾಗವಹಿಸಿದ್ದರು. ಆದರೆ ನ್ಯಾಯಾಲಯ ಸಭಾಂಗಣದಲ್ಲಿ ಪ್ರಜಾಪ್ರಭುತ್ವ ದಿನ…

Read More

ತುಮಕೂರು: ಸೇವಾ ವಿಷಯಗಳು, ಆಡಳಿತ ಮತ್ತು ಆರ್ಥಿಕ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸಹ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಸೆ.21 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ  ಅಸಹಕಾರ ಚಳುವಳಿ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕ್ಷೇಮಾಭಿವೃದ್ಧಿ ಸಂಘ ಸಚಿವರಿಗೆ ಪತ್ರ ಬರೆದಿದೆ. ಪಿಡಿಒ ಹುದ್ದೆಗಳನ್ನು ಬಿ ಹುದ್ದೆಗಳಾಗಿ ಉನ್ನತೀಕರಿಸಬೇಕು. ವಿಳಂಬವಿಲ್ಲದೆ ಭಡ್ತಿ ನೀಡಬೇಕು. ಗ್ರಾ.ಪಂ.ಗಳಿಗೆ ಬಾಕಿ ಇರುವ 15ನೇ ಹಣಕಾಸು ಆಯೋಗದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು, ಮೂಲ ಸೌಕರ್ಯ ನಿರ್ವಹಣೆಗೆ ಅಗತ್ಯ ಆರ್ಥಿಕ ನೆರವು ಒದಗಿಸಬೇಕು, ಕುಡಿಯುವ ನೀರು ನೈರ್ಮಲ್ಯ ಸೇವೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂಬ ಹಲವು ಬೇಡಿಕೆಗಳಿಗಾಗಿ ಒತ್ತಾಯಿಸಿ ಪತ್ರ ಬರೆಯಲಾಗಿದೆ. ವಿಬಿಜಿ ರಾಮ್ ಜೀ ಯೋಜನೆಯನ್ನು ನಿಯಮಬಾಹಿರವಾಗಿ ಹಾಗೂ ಒತ್ತಾಯಪೂರ್ವಕವಾಗಿ ಅನುಷ್ಠಾನಗೊಳಿಸುವುದನ್ನು ನಿಲ್ಲಿಸಬೇಕು. ಯೋಜನೆಯ ಅನುಷ್ಠಾನಕ್ಕೆ ಸ್ಪಷ್ಟ ಮಾರ್ಗಸೂಚಿ ಕಾರ್ಯವಿಧಾನ, ಮಾದರಿ ಅಂದಾಜು ಪಟ್ಟಿ, ಅಧಿಕಾರಿಗಳ ಜವಾಬ್ದಾರಿಗಳನ್ನು ನಿಗದಿಪಡಿಸಬೇಕು. ಇ-ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ…

Read More

ತುಮಕೂರು: ಕಳೆದೆರೆಡು ವರ್ಷಗಳಿಂದ ಸರ್ಕಾರದ ನೇತೃತ್ವದಲ್ಲಿ ನಡೆಸುತ್ತಿರುವ ತುಮಕೂರು ದಸರಾ ಎಲ್ಲರನ್ನೂ ಒಳಗೊಂಡು ಆಚರಿಸುತ್ತಿರುವ ದಸರಾ ಆಗಿದ್ದು, ವರ್ಷದಿಂದ ವರ್ಷಕ್ಕೆ ತುಮಕೂರು ದಸರಾ ಕೀರ್ತಿ ವಿಸ್ತರಿಸುತ್ತಿದೆ. ಈ ಬಾರಿಯೂ ತುಮಕೂರು ಕೀರ್ತಿಯನ್ನು ಹೆಚ್ಚಿಸುವಂತೆ ದಸರಾವನ್ನು ವೈಭವಪೂರ್ಣವಾಗಿ ಆಚರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ಅವರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಮಕೂರು ದಸರಾ ಉತ್ಸವ ವದ ಲಾಂಛನ ಅನಾವರಣಗೊಳಿಸಿ ಮಾತನಾಡಿ, ಮೈಸೂರು ಒಡೆಯರು ನಾಡಹಬ್ಬವಾಗಿ ಆರಂಭಿಸಿದ ದಸರಾ ಪರಂಪರೆ ಇಡೀ ಜಗತ್ತಿನಲ್ಲಿ ಮಾದರಿಯಿನಿಸಿದೆ. ಲಾಂಛನ ಅನಾವರಣ ಕಾರ್ಯಕ್ರಮದ ಬಳಿಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪ್ರಸ್ತಾವನೆ ಓದಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಪ್ರಜಾಪ್ರಭುತ್ವದ ಎಲ್ಲ ಆಡಳಿತದ ಎಲ್ಲ ರಂಗಗಳಲ್ಲಿ ಜಾತಿ, ಧರ್ಮ, ವರ್ಗ, ವಂಶ, ಲಿಂಗ ತಾರತಮ್ಯ ರಹಿತವಾಗಿ ಪಾಲ್ಗೊಳ್ಳುವ ಮಹತ್ವದ ಪ್ರಕ್ರಿಯೆಯಿನಿಸಿದೆ. ಬಸವಣ್ಣನವರ ಅನುಭವಮಂಟಪ ಪ್ರಜಾಪ್ರಭುತ್ವ ಮಾದರಿಯ ತಳಪಾಯಿಯಿದೆ. ಬ್ರೀಟಿಷ್ ವಸಾಹತುಶಾಹಿ…

Read More

ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಸರಿಯಾಗಿ ಮಳೆಯಾಗದೆ ಹಾಗೂ ಜಲಾಶಯಗಳಲ್ಲಿ ನೀರಿನ ಪ್ರಮಾಣ ತಗ್ಗಿರುವ ಕಾರಣ ಭತ್ತದ ಬೆಳೆ ಉತ್ಪಾದನೆ ಗಣನೀಯವಾಗಿ ಕುಸಿದಿದೆ. ಇದರ ನೇರ ಪರಿಣಾಮವಾಗಿ ರಾಜ್ಯದಲ್ಲಿ ಅಕ್ಕಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಕಳೆದ ಮೂರು ತಿಂಗಳಲ್ಲಿ ಮೂರನೇ ಬಾರಿಗೆ ಅಕ್ಕಿ ಬೆಲೆಯಲ್ಲಿ ಏರಿಕೆಯಾಗಿದ್ದು, ಪ್ರಸ್ತುತ ಕೆಜಿಯೊಂದಕ್ಕೆ ಸಾಮಾನ್ಯ ಅಕ್ಕಿಯ ಮೇಲೆ 5 ರಿಂದ 10 ರೂ. ಹಾಗೂ ಕ್ವಾಲಿಟಿ ಅಕ್ಕಿಯ ಮೇ 10 ರಿಂದ 20 ರೂ. ವರೆಗೆ ಹೆಚ್ಚಳವಾಗಿದೆ. ಒಟ್ಟಾರೆಯಾಗಿ ಒಂದು ಕ್ವಿಂಟಾಲ್ ಅಕ್ಕಿಯ ಬೆಲೆಯಲ್ಲಿ ಸುಮಾರು 1,000 ರೂಪಾಯಿಯವರೆಗೆ ಏರಿಕೆಯಾಗಿದೆ. ಹೋಲ್‌ಸೇಲ್ ಮಾರುಕಟ್ಟೆಯಲ್ಲಿ ಚೀಲವೊಂದರ ಮೇಲೆ 200 ರಿಂದ 300 ರೂ.ವರೆಗೆ ಬೆಲೆ ಹೆಚ್ಚಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಇದರ ಬಿಸಿ ಗ್ರಾಹಕರಿಗೆ ತಟ್ಟುತ್ತಿದೆ. ಮಳೆ ಕೊರತೆಯಿಂದ ಕಚ್ಚಾ ವಸ್ತುಗಳ ಲಭ್ಯತೆ ಕಡಿಮೆಯಾಗಿರುವುದು ಮತ್ತು ಹೊರರಾಜ್ಯ ಹಾಗೂ ವಿದೇಶಗಳಿಗೆ ಅಕ್ಕಿ ಪೂರೈಕೆ ಹೆಚ್ಚಾಗಿರುವುದು ರಾಜ್ಯದಲ್ಲಿ ಅಕ್ಕಿ ಕೊರತೆಗೆ ಪ್ರಮುಖ ಕಾರಣವೆಂದು ವ್ಯಾಪಾರಿಗಳು…

Read More